Thursday, 19th September 2019

Recent News

2 weeks ago

ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಮತ್ತೆ ಬಿರುಕು

ಮಡಿಕೇರಿ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಸತತ ಮಳೆ ಭಾರೀ ಅವಾಂತರ ಸೃಷ್ಟಿ ಮಾಡಿದ್ದು, ಪರಿಣಾಮ ಕಾವೇರಿ ತಾಯಿ ಉಗಮಸ್ಥಾನ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬೃಹತ್ ಬಿರುಕು ಕಾಣಿಸಿಕೊಂಡಿದೆ. ಕೊಡವರ ಕುಲ ದೈವ ಕಾವೇರಿಯ ತವರು ತಲಕಾವೇರಿಯ ಬ್ರಹ್ಮಗಿರಿ ಬೆಟ್ಟದಲ್ಲಿ ಬೃಹತ್ ಬಿರುಕು ಕಾಣಿಸಿಕೊಂಡಿದ್ದು, ಇಲ್ಲಿ ಕಳೆದ 15 ದಿನಗಳ ಹಿಂದೆ ಸಣ್ಣ ಪ್ರಮಾಣದಲ್ಲಿ ಬಿರುಕು ಮೂಡಿತ್ತು. ಇದೀಗ ಮತ್ತೆ ಪವಿತ್ರ ಕ್ಷೇತ್ರ ತಲಕಾವೇರಿಯ ಜಲಮೂಲದ ನೆಲೆಯಾಗಿರುವ ಬ್ರಹ್ಮಗಿರಿ ಬೆಟ್ಟದಲ್ಲೂ ಬೃಹತ್ ಬಿರುಕು ಕಾಣಿಸಿಕೊಂಡಿದೆ. ದೇಶದ ಜೀವನದಿಯ ಉಗಮ […]

2 months ago

ರಸ್ತೆಯಲ್ಲಿ ನೀರು ನಿಂತು ಟ್ರಾಫಿಕ್ ಜಾಮ್- ಹಳ್ಳದಂತಾದ ಬಡಾವಣೆಗಳು

– ಶಾಸಕರ ವಿರುದ್ಧ ಜನತೆ ಆಕ್ರೋಶ ಧಾರವಾಡ: ಜಿಲ್ಲೆಯಲ್ಲಿ ಮಳೆ ಬಂದರೆ ಸಾಕು ಕೆಲ ಬಡಾವಣೆಗಳಲ್ಲಿ ನೀರು ತುಂಬಿ ಹರಿಯುತ್ತದೆ. ಆದರೆ ಧಾರವಾಡ ನಗರದ ಜನ್ನತ್ ನಗರದ ಜನರಿಗೆ ಇದೊಂದು ದೊಡ್ಡ ಸಮಸ್ಯೆಯಾಗಿದೆ. ಇದಕ್ಕೆ ಕಾರಣ ಸರ್ಕಾರ ಹಾಗೂ ಜನಪ್ರತಿನಿಧಿಗಳು ಎಂದು ಜನರು ಹಿಡಿಶಾಪ ಹಾಕುತ್ತಿದ್ದಾರೆ. ಮಳೆಗಾಲದ ಮೊದಲೇ ಈ ನೀರು ಹರಿಯುವ ಸಮಸ್ಯೆಗೆ ಪರಿಹಾರ...

ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ?

2 months ago

ಬೆಂಗಳೂರು: ಕಾಂಗ್ರೆಸ್ ಶಾಸಕರಿದ್ದ ರೆಸಾರ್ಟಿನಿಂದ ಹೊರಬಂದು ಆಸ್ಪತ್ರೆಯಲ್ಲಿ ದಾಖಲಾಗಿರುವ ಶಾಸಕ ಶ್ರೀಮಂತ್ ಪಾಟೀಲ್ ಎಸ್ಕೇಪ್ ಆಗಿದ್ದು ಹೇಗೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಪಾಟೀಲ್ ರೆಸಾರ್ಟಿನಿಂದ ಹೊರಹೋಗುತ್ತಿರುವ ದೃಶ್ಯ ಇದೀಗ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೌದು. ಶ್ರೀಮಂತ್ ಪಾಟೀಲ್ ಅವರು...

ಕೈ ಶಾಸಕರ ರೆಸಾರ್ಟ್ ವಾಸ್ತವ್ಯ ಬದಲಾವಣೆ

2 months ago

ರಾಮನಗರ: ಒಂದು ಕಡೆ ಸದನದಲ್ಲಿ ವಿಶ್ವಾಸ ಮತಯಾಚನೆ ಬಗ್ಗೆ ವಾದ ಪ್ರತಿವಾದ ನಡೆಯುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಶಾಸಕರು ತಮ್ಮ ರೆಸಾರ್ಟ್ ವಾಸ್ತವ್ಯವನ್ನು ಬದಲಾವಣೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ. ವಿಂಡ್ ಪ್ಲವರ್ ಪ್ರಕೃತಿ ರೆಸಾರ್ಟಿನಿಂದ ಈಗಲ್ ಟನ್ ರೆಸಾರ್ಟಿಗೆ ಕಾಂಗ್ರೆಸ್ ನಾಯಕರು ಶಿಫ್ಟ್...

ರಾತ್ರಿ ನಾಪತ್ತೆಯಾಗಿ ಬೆಳಗ್ಗೆ ಆಸ್ಪತ್ರೆ ಸೇರಿದ ಶ್ರೀಮಂತ ಪಾಟೀಲ್

2 months ago

ಬೆಂಗಳೂರು: ರಾತ್ರೋ ರಾತ್ರಿ ಕಾಂಗ್ರೆಸ್ ಶಾಸಕರು ತಂಗಿದ್ದ ದೇವನಹಳ್ಳಿ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ್ ಅನಾರೋಗ್ಯದ ಸಮಸ್ಯೆಯಿಂದ ಮುಂಬೈ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾತ್ರೋ ರಾತ್ರಿ ಬೆಂಗಳೂರು ಬಿಟ್ಟು ಮುಂಬೈ ಸೇರಿದ್ದ ಶ್ರೀಮಂತ ಪಾಟೀಲ್ ಹೃದಯ ಬಡಿತ, ಬ್ಲಡ್...

ರಾತ್ರಿ ದಿಢೀರ್ ಹೈಡ್ರಾಮಾ – ರೆಸಾರ್ಟಿನಲ್ಲಿದ್ದ ಕೈ ಶಾಸಕ ಶ್ರೀಮಂತ ಪಾಟೀಲ್ ನಾಪತ್ತೆ

2 months ago

ಬೆಂಗಳೂರು: ಇಂದು ವಿಶ್ವಾಸಮತದ ಹಿನ್ನೆಲೆಯಲ್ಲಿ ರಾತ್ರಿಯೂ ಭಾರೀ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಸೈಲೆಂಟಾಗಿದ್ದ ರಮೇಶ್ ಜಾರಕಿಹೊಳಿ ಆಪ್ತ, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಕಳೆದ ರಾತ್ರಿ ದಿಢೀರ್ ಕಾಂಗ್ರೆಸ್ ಶಾಸಕರು ತಂಗಿರುವ ದೇವನಹಳ್ಳಿಯ ಪ್ರಕೃತಿ ರೆಸಾರ್ಟಿನಿಂದ ನಾಪತ್ತೆಯಾಗಿದ್ದಾರೆ. ಬಂಗಾರಪೇಟೆ ಶಾಸಕ...

ರೆಸಾರ್ಟಿನಲ್ಲಿ ಬಿಜೆಪಿ ಶಾಸಕರೊಂದಿಗೆ ಭಜನೆ ಮಾಡಿದ ಬಿಎಸ್‍ವೈ

2 months ago

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಶಾಸಕರ ಜೊತೆಗೆ ರಾತ್ರಿ ಭಜನೆ ಮಾಡಿದ್ದಾರೆ. ಬಿಜೆಪಿ ಶಾಸಕರು ಕಳೆದ ಕೆಲವು ದಿನಗಳಿಂದ ರಮಡ ರೆಸಾರ್ಟಿನಲ್ಲಿ ವಾಸ್ತವ್ಯ ಮಾಡಿದ್ದಾರೆ. ಸೋಮವಾರ ರಾತ್ರಿ ಆರ್ಕೆಸ್ಟ್ರಾ ಆಯೋಜಿಸಿದ್ದ ಶಾಸಕರು ರಾತ್ರಿ ವಿಶ್ರಾಂತಿ ಪಡೆದು ಅಲ್ಲಿಂದ ನೇರವಾಗಿ...

ಅಭಿಮಾನಿಯಿಂದ ಕಿಸ್ – ಈಶ್ವರಪ್ಪ ಫುಲ್ ಖುಷ್

2 months ago

ಬೆಂಗಳೂರು: ಶಾಸಕರ ರಾಜೀನಾಮೆ ಪರ್ವದಿಂದ ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಮಡಾ ರೆಸಾರ್ಟ್‍ನಲ್ಲಿ ತಂಗಿರುವ ಬಿಜೆಪಿ ಶಾಸಕರನ್ನು ನೋಡಲು ಬಂದಿದ್ದ ಅಭಿಮಾನಿಯೊಬ್ಬ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪನವರಿಗೆ ಕಿಸ್ ಕೊಟ್ಟಿದ್ದಾನೆ. ಇಂದು ತಮ್ಮ ನೆಚ್ಚಿನ ನಾಯಕರನ್ನು ಭೇಟಿ...