Recent News

2 months ago

ಅಣ್ಣನ ವಿರುದ್ಧ ಡ್ಯಾನ್ಸ್ ವಿಡಿಯೋ ಬಿಟ್ಟ ಸತೀಶ್

ಬೆಳಗಾವಿ: ಡಿಸೆಂಬರ್ 5ರಂದು ನಡೆಯಲಿರುವ ಗೋಕಾಕ್ ಕ್ಷೇತ್ರದ ಉಪಚುನಾವಣೆಯಲ್ಲಿ ಅಣ್ಣ-ತಮ್ಮಂದಿರ ಕಾಳಗ ಜೋರಾಗಿದೆ. ಅಣ್ಣನ ವಿರುದ್ಧ `ವಿಡಿಯೋ’ ಬಿಟ್ಟು ತಮ್ಮ ಚಮಕ್ ಕೊಟ್ಟಿದ್ದಾರೆ. ಡ್ಯಾನ್ಸ್ ವೀಡಿಯೋ ಮೂಲಕ ರಮೇಶ್ ಜಾರಕಿಹೊಳಿಗೆ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ರಮೇಶ್ ಜಾರಕಿಹೊಳಿ ಸ್ಪರ್ಧಿಸಿದ್ರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಕಣದಲ್ಲಿದ್ದಾರೆ. ಹೀಗಾಗಿ ಅಣ್ಣ-ತಮ್ಮಂದಿರು ಮಾತಿನ ಏಟು-ಎದರೇಟು ನೀಡುತ್ತಿದ್ದರು. ಈ ಮಧ್ಯೆ ಸತೀಶ್, ರಮೇಶ್ ಜಾರಕಿಹೊಳಿ ವಿರುದ್ಧ ವಾಗ್ದಾಳಿ ನಡೆಸಿ ವಿಭಿನ್ನವಾಗಿ ಅಣಕಿಸುವ ಕೆಲಸಕ್ಕೆ ಮುಂದಾಗಿದ್ದಾರೆ. `ಬಾಲಾ ಬಾಲಾ’ […]

2 months ago

ನಾಮಪತ್ರ ಸಲ್ಲಿಸಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಇಂದು ಗೋಕಾಕ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸೋದರರಿಬ್ಬರು ಕಣಕ್ಕೆ ಇಳಿದಿರೋದರಿಂದ ಗೋಕಾಕ್ ಕ್ಷೇತ್ರ ಹೈವೋಲ್ಟೇಜ್ ಕಣವಾಗಿದೆ. ಇಂದು ಬಿಜೆಪಿಯಿಂದ ರಮೇಶ್ ಜಾರಕಿಹೊಳಿ, ಕಾಂಗ್ರೆಸ್‍ನಿಂದ ಲಖನ್ ಜಾರಕಿಹೊಳಿ ಮತ್ತು ಜೆಡಿಎಸ್ ನಿಂದ ಅಶೋಕ್ ಪೂಜಾರಿ ನಾಮಪತ್ರ ಸಲ್ಲಿಸಿದ್ದಾರೆ. ಸೋದರ ಲಖನ್ ಜಾರಕಿಹೊಳಿ...