3 years ago
ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತಕ್ಕೆ 20 ಮಂದಿ ಬಲಿಯಾಗಿದ್ದಾರೆ. ಏಡುಪೇಡು ರೇಣುಕುಂಟ ಬಳಿ ಅಪಘಾತ ಸಂಭವಿಸಿದ್ದು 20 ಮಂದಿ ಸಾವನ್ನಪ್ಪಿದ್ದರೆ, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬ್ರೇಕ್ ಫೇಲ್ ಆಗಿದ್ದ ಲಾರಿ ರಸ್ತೆ ಬದಿ ಅಂಗಡಿಗಳಿಗೆ ನುಗ್ಗಿದ ಪರಿಣಾಮ ಪೂತಲಪಟ್ಟು ನಾಯುಡು ಪೇಟ ಹೆದ್ದಾರಿಯಲ್ಲಿ ರಕ್ತಪಾತ ಸಂಭವಿಸಿದೆ. ಗಾಯಾಳುಗಳು ತಿರುಪತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು ಬೀದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳು ಎಂದು ವರದಿಯಾಗಿದೆ.
3 years ago
ಮಂಗಳೂರು: ಲಾರಿಯೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಗೋಳಿತ್ತೊಟ್ಟುವಿನಲ್ಲಿ ನಡೆದಿದೆ. ಇಂದು ಮುಂಜಾನೆ ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯುತ್ ತಂತಿಗಳು ಲಾರಿ ಮೇಲೆ ಬಿದ್ದಿದೆ. ತಕ್ಷಣ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಲಾರಿ ಚಾಲಕ...
3 years ago
ಹಾವೇರಿ: ಹಿಂಬದಿಯಿಂದ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆಯ ಶಿಗ್ಗಾವಿ ತಾಲೂಕಿನ ನೀರಲಗಿ ಕ್ರಾಸ್ ಬಳಿ ಇರೋ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಈ ಅಪಘಾತ ಸಂಭವಿಸಿದೆ. 45...
3 years ago
ತುಮಕೂರು: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹಿಂಡಿಸ್ಕೆರೆ ಬಳಿ ನಡೆದಿದೆ. ಮೃತ ಬೈಕ್ ಸವಾರರನ್ನು ಅರುಣ್ (24) ಮತ್ತು ವಿನಯ್ ಪ್ರಸಾದ್ (25) ಎಂದು ಗುರುತಿಸಲಾಗಿದೆ....
3 years ago
ರಾಯಚೂರು: ದಿನಪತ್ರಿಕೆ ಹಾಕಲು ತೆರಳುತ್ತಿದ್ದ ಹುಡುಗನಿಗೆ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನ ಗೋಶಾಲಾ ರಸ್ತೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಜಲಾಲನಗರದ ನಿವಾಸಿಯಾದ 16 ವರ್ಷದ ಉಪೇಂದ್ರ ಮೃತ ದುರ್ದೈವಿ. ಉಪೇಂದ್ರ ಪ್ರತಿದನದಂತೆ ಇಂದು ಕೂಡ ಬೆಳಗ್ಗೆ ತನ್ನ...
3 years ago
ಚಿತ್ರದುರ್ಗ: ಲಾರಿಯೊಂದು ಎರಡು ಆಟೋ ಮತ್ತು ಟಾಟಾ ಏಸ್ಗೆ ಡಿಕ್ಕಿಯಾದ ಪರಿಣಾಮ ಆಟೋದಲ್ಲಿದ್ದ 12 ಜನರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಬಳಿ ನಡೆದಿದೆ. ಉತ್ತರ ಪ್ರದೇಶ ಮೂಲದ ಲಾರಿಯ ಟೈರ್ ಸ್ಫೋಟಗೊಂಡು ಎರಡು ಆಟೋ ಹಾಗೂ...
3 years ago
ಬೆಂಗಳೂರು: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ಆದ್ರೆ ಕ್ಷುಲ್ಲಕ ವಿಚಾರಕ್ಕಾಗಿ ಜಾನುವಾರುಗಳಿಗೆ ತಂದಿದ್ದ ಹುಲ್ಲಿನ ಲಾರಿಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮುದ್ದಲಿಂಗನಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ. ಬರ ನೀಗಿಸಲು ಆಂಧ್ರದಿಂದ...
3 years ago
ಚಿತ್ರದುರ್ಗ: ಅಪಘಾತ ನಡೆದಾಗ ಗಾಯಗೊಂಡವರ ರಕ್ಷಣೆಗೆ ಧಾವಿಸಿ ಎಂದು ಮಾಧ್ಯಮಗಳಲ್ಲಿ ಸಾಕಷ್ಟು ಬಾರಿ ವರದಿಯಾದರೂ ಜನರಿಗೆ ಮಾತ್ರ ಇನ್ನೂ ಸಹಾಯ ಪ್ರಜ್ಞೆ ಬಂದಿಲ್ಲ ಎನ್ನುವುದಕ್ಕೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಅಪಘಾತದಿಂದಾಗಿ ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದರೂ...