Friday, 20th July 2018

Recent News

12 hours ago

ಶಾಲೆಯಲ್ಲೇ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಮಂಡ್ಯ: ಶಿಕ್ಷಕರ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಕೋಡಿಮರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚೈತನ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಈಕೆ ವಿದ್ಯಾನಿಕೇತನ್ ಶಾಲೆಯಲ್ಲಿ ಓದುತ್ತಿದ್ದು, ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸಿದ್ದಕ್ಕೆ ಶಿಕ್ಷಕರು ಆಕೆಗೆ ಕಿರುಕುಳವನ್ನು ನೀಡಿದ್ದಾರೆ. ಹಾಗಾಗಿ ಅವರ ಕಿರುಕುಳವನ್ನು ಸಹಿಸಿಕೊಳ್ಳಲಾರದೇ ಚೈತನ್ಯ ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಕಿಕ್ಕೆರಿ ಪೊಲೀಸ್ ಠಾಣೆಯಲ್ಲಿ […]

6 days ago

ಆಟವಾಡುವ ವೇಳೆ ಕಾರಿಗೆ ಹಾನಿಯಾಗಿದ್ದಕ್ಕೆ ವಿದ್ಯಾರ್ಥಿಗಳನ್ನು ಕೋಲು, ಬೆಲ್ಟ್ ನಿಂದ ಹೊಡೆದು, ರೂಮ್‍ನಲ್ಲಿ ಕೂಡಿ ಹಾಕಿದ ಶಿಕ್ಷಕರು!

ಛತ್ತೀಸ್‍ಗಢ್: ಶಾಲೆಯ ಆವರಣದಲ್ಲಿ ನಿಲ್ಲಿಸಿದ್ದ ಶಿಕ್ಷಕರ ಕಾರಿನ ಮೇಲೆ ಸಣ್ಣ ಗೀಟು ಹಾಗೂ ನಂಬರ್ ಪ್ಲೇಟ್ ಗೆ ಹಾನಿ ಮಾಡಿದ್ದಕ್ಕೆ ಇಬ್ಬರು ಶಿಕ್ಷಕರು ಮೂವರು ವಿದ್ಯಾರ್ಥಿಗಳನ್ನು ಕೊಣೆಯಲ್ಲಿ ಕೂಡಿಹಾಕಿ ಥಳಿಸಿದ ಘಟನೆ ಛತ್ತೀಸ್‍ಗಢದ ಕೊರಿಯ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಬೈಕುಂಥಪುರ ಪಟ್ಟಣದಲ್ಲಿರುವ ಜವಾಹರ್ ಸರ್ಕಾರಿ ವಸತಿ ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಆಟವಾಡುತ್ತಿದ್ದರು. ಈ ವೇಳೆ ಅಲ್ಲಿಯೇ...

ಶಾಲಾ ಮಕ್ಕಳಿಗೆ ಪಿಎಸ್‍ಐ ರಿಂದ ವಿಶೇಷ ಕ್ಲಾಸ್ – ಮಕ್ಕಳೊಂದಿಗೆ ಪ್ರಮಾಣ ಸ್ವೀಕರಿಸಿದ ಪೊಲೀಸರು

3 weeks ago

ಬೆಂಗಳೂರು: ಅಂತರರಾಷ್ಟ್ರೀಯ ಮಾದಕದ್ರವ್ಯ ವಿರೋಧಿ ದಿನಾಚರಣೆಯಲ್ಲಿ ಶಾಲಾ ಮಕ್ಕಳಿಗೆ, ನೀತಿ ಪಾಠ, ಕಾನೂನು ಸಲಹೆ, ಸಂಚಾರಿ ನಿಯಮಗಳ ಬಗ್ಗೆ ಶಾಲಾ ಮಕ್ಕಳಿಗೆ ವಿಶೇಷ ತರಗತಿ ತೆಗೆದುಕೊಂಡಿದ್ದಾರೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಥಾಮಸ್ ಮೆಮೋರಿಯಲ್ ಶಾಲೆಯಲ್ಲಿ, ಪಟ್ಟಣ ಪಿಎಸ್‍ಐ ಮಂಜುನಾಥ್ ಜಾಗೃತಿ...

ಮಕ್ಕಳಿಗೆ ಅನಧಿಕೃತ ರಜೆ ನೀಡಿ ಶಾಲೆಯ ಪಕ್ಕದಲ್ಲೇ ಮದ್ಯದ ಅಮಲಿನಲ್ಲಿ ತೇಲಾಡಿದ ಶಿಕ್ಷಕರು!

5 months ago

ವಿಜಯಪುರ: ಶಾಲಾ ಅವಧಿಯಲ್ಲಿಯೇ ಮಕ್ಕಳಿಗೆ ರಜೆ ನೀಡಿ ಮುಖ್ಯೋಪಾಧ್ಯಾಯ ಹಾಗೂ ಸಹ ಶಿಕ್ಷಕರು ಗುಂಡು-ತುಂಡು ಪಾರ್ಟಿ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ರಕ್ಕಸಗಿ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ. ಹೆಚ್ ಬಿರಾದಾರ್ ಹಾಗೂ 4...

ಗ್ರಾಮಸ್ಥರ, ಶಿಕ್ಷಕರ ಪರಿಶ್ರಮದಿಂದ ಸರ್ಕಾರಿ ಶಾಲೆಗೆ ಸಿಕ್ತು ಹೈಟಕ್ ಟಚ್

6 months ago

ಹಾವೇರಿ: ಖಾಸಗಿ ಶಾಲೆಗಳ ಪ್ರಭಾವದಿಂದ ವರ್ಷದಿಂದ ವರ್ಷಕ್ಕೆ  ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಶಾಲೆಯ ದಾಖಲಾತಿ ಹೆಚ್ಚಳ ಹಾಗೂ ಉತ್ತಮ ಶಿಕ್ಷಣ ನೀಡಲು ಶಿಕ್ಷಕರ ಬಳಗ ಹೊಸ ಪ್ಲಾನ್ ಮಾಡಿದ್ದಾರೆ. ಗ್ರಾಮದ ದಾನಿಗಳ ಸಹಾಯ ಪಡೆದು ಕಂಪ್ಯೂಟರ್, ಸ್ಮಾರ್ಟ ಕ್ಲಾಸ್,...

ಶಾಲಾ ಪ್ರವಾಸದ ವೇಳೆ ಮಲ್ಪೆ ಬೀಚ್‍ನಲ್ಲಿ ಫಿಟ್ಸ್ ಬಂದು ಬಾಲಕ ಸಾವು- ಮುಗಿಲುಮುಟ್ಟಿದ ಪೋಷಕರ ಆಕ್ರಂದನ

7 months ago

ಉಡುಪಿ: ಪ್ರವಾಸಕ್ಕೆಂದು ಮಲ್ಪೆ ಬೀಚ್ ಗೆ ಬಂದು ಬಾಲಕನೊಬ್ಬ ಮೃತಪಟ್ಟ ಆಘಾತಕಾರಿ ಘಟನೆಯೊಂದು ನಡೆದಿದೆ. ಮೃತ ದುರ್ದೈವಿ ಬಾಲಕನನ್ನು ಮಂಜುನಾಥ್(14) ಎಂದು ಗುರುತಿಸಲಾಗಿದೆ. ಈತ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಲಿವಣ ಗ್ರಾಮದ ನಿವಾಸಿ ಎಂಬುದಾಗಿ ತಿಳಿದುಬಂದಿದೆ. ಜಿಲ್ಲೆಯ ಶಾಲೆಯೊಂದರಿಂದ ಉಡಪಿಯ...

ನಕಲಿಗೆ ಅವಕಾಶ ಕೊಟ್ಟ 7 ದಾವಣಗೆರೆ ಶಿಕ್ಷಕರು ಅಮಾನತು

8 months ago

ದಾವಣಗೆರೆ: ಪ್ರಾಥಮಿಕ ಶಾಲೆಯ ಸಿಎಸ್‍ಎಎಸ್ ಪರೀಕ್ಷೆಯಲ್ಲಿ ಸಾಮೂಹಿಕವಾಗಿ ನಕಲು ಮಾಡಿಸಿದ್ದ 7 ಮಂದಿ ಶಿಕ್ಷಕರನ್ನು ದಾವಣಗೆರೆ ಡಿಡಿಪಿಐ ಅಮಾನತು ಮಾಡಿ ಖಡಕ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆಯ ಹರಪನಹಳ್ಳಿ ತಾಲೂಕಿನ ಸೇವಾನಗರ ಶಾಲೆಯಲ್ಲಿ ಶಿಕ್ಷಕರು ಸಾಮೂಹಿಕ ನಕಲು ಮಾಡಿಸಿದ್ದರು. ನಕಲು ಮಾಡಿಸುತ್ತಿದ್ದ ವೀಡಿಯೋ...

ತಡವಾಗಿ ಸ್ಕೂಲ್ ಫೀಸ್ ಕಟ್ಟಿ ಫೈನ್ ಕಟ್ಟಿಲ್ಲವೆಂದು ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗೆ ಕೂರಿಸಿದ ಶಿಕ್ಷಕರು

9 months ago

ಹೈದರಾಬಾದ್: ಶಾಲೆಯ ಫೀಸ್ ಕಟ್ಟಲು ಪೋಷಕರು ಲೇಟ್ ಮಾಡಿದ ಕಾರಣ ಮಕ್ಕಳನ್ನು ಕ್ಲಾಸ್ ರೂಮಿನಿಂದ ಹೊರಗಡೆ ಕೂರಿಸಿರುವ ಅಮಾನವೀಯ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಸಿರಿಲಿಂಗಮ್‍ಪಲ್ಲಿಯ ಎಂಎನ್‍ಆರ್ ಎಂಬ ಖಾಸಗಿ ಶಾಲೆಯಲ್ಲಿ ನಡೆದಿದೆ. ಶಿಕ್ಷಕರು ಇಬ್ಬರು ವಿದ್ಯಾರ್ಥಿನಿಯರು ಮತ್ತು ಓರ್ವ ವಿದ್ಯಾರ್ಥಿಯನ್ನು...