Friday, 22nd March 2019

Recent News

6 months ago

ಅಪಾಯಕ್ಕೆ ಆಹ್ವಾನ ನೀಡುತ್ತಿದೆ ಚಾರ್ಮಾಡಿ ಘಾಟ್

ಮಂಗಳೂರು: ಮಂಗಳೂರಿನಿಂದ ಬೆಂಗಳೂರಿಗೆ ಸಂಪರ್ಕಿಸುವ ಚಾರ್ಮಾಡಿ ಘಾಟಿ ಸಂಪೂರ್ಣ ಕಿತ್ತುಹೋಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಾಹನ ಚಾಲಕರು ಜೀವ ಕೈಯಲ್ಲಿ ಹಿಡಿದು ಸಂಚಾರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಶಿರಾಡಿ ಘಾಟಿ, ಸಂಪಾಜೆ ಘಾಟಿ ಹೆದ್ದಾರಿ ಬಂದ್ ಆದ ಸಂದರ್ಭದಲ್ಲಿ ಚಾರ್ಮಾಡಿ ಘಾಟಿ ಮಾತ್ರ ಸಂಪರ್ಕ ರಸ್ತೆಯಾಗಿ ಉಳಿದಿತ್ತು. ಇದರಿಂದ ಭಾರೀ ಸಂಖ್ಯೆಯಲ್ಲಿ ವಾಹನಗಳು ಸಂಚರಿಸಿದ ಕಾರಣ ಘಾಟಿ ರಸ್ತೆ ಸಂಪೂರ್ಣ ಹಾಳಾಗಿದೆ. ಅಪಾಯಕಾರಿ ತಿರುವುಗಳಲ್ಲಿ ರಸ್ತೆ ಡಾಂಬರು ಕಿತ್ತು ಹೋಗಿ ಗುಂಡಿಗಳು ಬಿದ್ದಿದೆ. ಸದ್ಯ ಶಿರಾಡಿ ಘಾಟ್ ನಲ್ಲಿ […]

7 months ago

ಶಿರಾಡಿ, ಸಂಪಾಜೆ ಬಂದ್: ಚಾರ್ಮಾಡಿ ಘಾಟಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ಚಿಕ್ಕಮಗಳೂರು: ಸಂಪಾಜೆ, ಶಿರಾಡಿ ಘಾಟಿ ಬಂದ್ ಆಗಿರೋ ಹಿನ್ನೆಲೆ ಸಾವಿರಾರು ವಾಹನಗಳು ಚಾರ್ಮಾಡಿಘಾಟ್‍ನಲ್ಲಿ ಸಂಚರಿಸುತ್ತಿರುವುದರಿಂದ ವಾಹನಗಳ ದಟ್ಟಣೆ ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಸಂಭವಿಸಿದೆ. ವಾಹನಗಳ ಸಂಖ್ಯೆ ಹೆಚ್ಚಾಗಿರುವುದರಿಂದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿಘಾಟ್, ಆರಂಭದಿಂದ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಗಡಿ ಮುಟ್ಟುವವರೆಗೂ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಈ ಮಧ್ಯೆ ದೊಡ್ಡ ಗಾಡಿಗಳ...