Monday, 17th June 2019

3 months ago

ಶಿವಕುಮಾರ ಶ್ರೀಗಳ 112ನೇ ಜಯಂತಿ-ಸಂತನಿಲ್ಲದ ಸಿದ್ದಗಂಗೆಯಲ್ಲಿ ಶಿವಯೋಗಿ ಸ್ಮರಣೆ

ತುಮಕೂರು: ಸಿದ್ದಗಂಗಾ ಮಠದ ಲಿಂಗೈಕ್ಯ ಜಗದ್ಗುರು ಡಾ.ಶಿವಕುಮಾರ ಶ್ರೀಗಳ 112 ನೇ ಜಯಂತೋತ್ಸವ ಇಂದು ನಡೆಯಲಿದೆ. ಶ್ರೀಗಳ ಜಯಂತಿಯ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಬೆಳಗ್ಗೆಯಿಂದಲೇ ಗದ್ದುಗೆ ಪೂಜೆ ಸೇರಿದಂತೆ ನಾನಾ ಪೂಜಾ ಕೈಂಕರ್ಯಗಳು ನೆರವೇರುತ್ತಿವೆ. 11 ಗಂಟೆಯ ಬಳಿಕ ವೇದಿಕೆ ಕಾರ್ಯಕ್ರಮ ನಡೆಯುಲಿದ್ದು, ಮೈಸೂರು ಮಹಾರಾಜ ಯದುವೀರ್ ಸೇರಿದಂತೆ ಹಲವು ಗಣ್ಯರು, ಸ್ವಾಮೀಜಿಗಳು ಭಾಗಿಯಾಗಲಿದ್ದಾರೆ. ಸ್ವಾಮೀಜಿಯಾಗಿದ್ದು ಹೇಗೆ?: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಬಾಲ್ಯದ ಹೆಸರು ಶಿವಣ್ಣ. 1922ರಲ್ಲಿ ತುಮಕೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿತ […]

3 months ago

ಏ.1ರಂದು ಶಿವೈಕ್ಯ ಸಿದ್ದಗಂಗಾ ಶ್ರೀಗಳ 112ನೇ ಜಯಂತಿ- 112 ಕಂದಮ್ಮಗಳಿಗೆ ನಾಮಕರಣ

ತುಮಕೂರು: ಏಪ್ರಿಲ್ 1ರಂದು ಶ್ರೀ ಸಿದ್ದಗಂಗಾ ಸ್ವಾಮೀಜಿಗಳ 112ನೇ ಜಯಂತಿ. ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಸ್ವಾಮೀಜಿಗಳ ಜಯಂತಿ ಹಾಗೂ ಗುರುವಂದನೆ ಕಾರ್ಯಕ್ರಮಕ್ಕೆ ವಿವಿಧ ಸಿದ್ಧತೆಗಳು ನಡೆಯುತ್ತಿವೆ. ಸ್ವಾಮೀಜಿಗಳು ಇಲ್ಲ ಎನ್ನುವ ನೋವಿನಲ್ಲೂ ಅವರ ನೆನಪನ್ನು ಮರುಕಳಿಸುವ ಹಲವು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷ ಅಂದರೆ “ದೇವರ” ಹುಟ್ಟುಹಬ್ಬದಂದು 112 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರನಿಟ್ಟು ನಾಮಕರಣ ಮಾಡಲಾಗುತ್ತಿದೆ....

1 ಸಾವಿರ ವಿದ್ಯಾರ್ಥಿಗಳಿಂದ ಗುಲಾಬಿ ಹೂವನ್ನಿಟ್ಟು ಶ್ರೀಗಳಿಗೆ ಶ್ರದ್ಧಾಂಜಲಿ

5 months ago

ತುಮಕೂರು: ಇಲ್ಲಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಸಾವಿರಾರು ವಿದ್ಯಾರ್ಥಿಗಳು ಗುಲಾಬಿ ಹೂ ಸಮರ್ಪಿಸಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ತುಮಕೂರು ನಗರದ ವರಿ ಇಂಟರ್ ನ್ಯಾಷನಲ್ ಶಾಲೆಯ 1 ಸಾವಿರ ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ಬಂದು ಶ್ರೀಗಳ ಗದ್ದುಗೆಗೆ ಗುಲಾಬಿ ಹೂವನ್ನಿಟ್ಟು...

ಮನ್‍ಕೀ ಬಾತ್ ಆರಂಭದಲ್ಲೇ ಸಿದ್ದಗಂಗಾ ಶ್ರೀಗಳನ್ನು ಸ್ಮರಿಸಿ ಗೌರವ ಸಲ್ಲಿಸಿದ ಮೋದಿ

5 months ago

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿಯ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಲಿಂಗೈಕ್ಯರಾದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ನೆನಪಿಸಿಕೊಂಡಿದ್ದಾರೆ. ಮನ್‍ಕೀ ಬಾತ್ ಆರಂಭದಲ್ಲೇ ಶ್ರೀಗಳನ್ನು ನೆನೆದ ಮೋದಿ, ಜನವರಿ 21ರಂದು ದೇಶಕ್ಕೆ ಶಾಕಿಂಗ್ ನ್ಯೂಸ್ ಎಂಬಂತೆ...

ಸಿದ್ದಗಂಗಾ ಶ್ರೀಗಳ ಹುಟ್ಟೂರನ್ನು ದತ್ತು ಪಡೆಯುತ್ತೇವೆ: ಡಿಕೆಶಿ

5 months ago

ರಾಮನಗರ: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಹುಟ್ಟೂರು ವೀರಾಪುರ ಗ್ರಾಮವನ್ನು ದತ್ತು ಪಡೆಯುವುದಾಗಿ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಶಿವಕುಮಾರ ಸ್ವಾಮೀಜಿಗಳ ಹುಟ್ಟೂರಾದ ವೀರಾಪುರವನ್ನ ದತ್ತು ಪಡೆಯುತ್ತೇವೆ. ಈ ಹಿಂದೆ ಆ...

ನಡೆದಾಡುವ ದೇವರ ವಿಚಾರದಲ್ಲಿ ಸುಳ್ಳು ಹೇಳಿದ್ರಾ ಮೋದಿ..?

5 months ago

ಬೆಂಗಳೂರು: ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಬಾರದ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಭಾರೀ ಆಕ್ಷೇಪ ವ್ಯಕ್ತವಾಗಿದ್ದು, ಇದೀಗ ಪ್ರಧಾನಿಯವರು ಸುಳ್ಳು ಹೇಳಿದ್ರಾ ಎಂಬ ಅನುಮಾನವೊಂದು ಮೂಡಿದೆ. ಹೌದು. ಸ್ವಾಮೀಜಿಗಳ ಅಂತಿಮ ದರ್ಶನಕ್ಕೆ ಬರಲು ಭದ್ರತೆ ಇಲ್ಲ....

ಕಾಣೆಯಾಗಿದೆ ಸದಾ ಶ್ರೀಗಳ ಜೊತೆ ಓಡಾಡುತ್ತಿದ್ದ ನಾಯಿ!

5 months ago

ತುಮಕೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಮನುಷ್ಯ ಕುಲ ಮಾತ್ರವಲ್ಲದೇ ಮೂಕ ಪ್ರಾಣಿಗಳು ಕೂಡ ಹಚ್ಚಿಕೊಂಡಿತ್ತು. ಭೈರ ಹೆಸರಿನ ಶ್ವಾನ ಮಠದಲ್ಲಿ ಸದಾ ಶ್ರೀಗಳೊಂದಿಗೆ ಓಡಾಡುತ್ತಿತ್ತು. ಸಿದ್ದಗಂಗಾ ಸ್ವಾಮೀಜಿಗಳು ಲಿಂಗೈಕ್ಯರಾದ ಬಳಿಕ ಭೈರ ಕಾಣೆಯಾಗಿದ್ದಾನೆ. ಇತ್ತೀಚಿಗೆ ಸ್ವಾಮೀಜಿ ಆಸ್ಪತ್ರೆಗೆ ದಾಖಲಾದಾಗ...

ಕಾಫಿನಾಡಲ್ಲಿ ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತು

5 months ago

ಚಿಕ್ಕಮಗಳೂರು: ಬದುಕೇ ಒಂದು ಸಂದೇಶದಂತೆ 111 ವರ್ಷ ಸಾರ್ಥಕ ಬದುಕು ನಡೆಸಿದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತುಗಳು ಕಾಫಿನಾಡಲ್ಲೂ ಸಾಕಷ್ಟಿವೆ. ಶೃಂಗೇರಿ ಮಠದ 35ನೇ ಗುರುಗಳಾದ ಅಭಿನವ ವಿದ್ಯಾತೀರ್ಥರ ವರ್ಧಂತ್ಯುತ್ಸವ ಅಂಗವಾಗಿ 1973ರಲ್ಲಿ ನಡೆದ ಧರ್ಮ ಸಮ್ಮೇಳನ ಹಾಗೂ...