Thursday, 17th October 2019

Recent News

11 months ago

ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ವೈಭವ : ಇಂದು ಸರ್ವಧರ್ಮ, ನಾಳೆ ಸಾಹಿತ್ಯ ಸಮ್ಮೇಳನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿವರ್ಷ ನಡೆಯುವ ಲಕ್ಷ ದೀಪೋತ್ಸವವು ಈ ಬಾರಿಯೂ ಅದ್ಧೂರಿಯಾಗಿ ನಡೆಯುತ್ತಿದೆ. ಶ್ರೀ ಮಂಜುನಾಥ ಸ್ವಾಮಿಗೆ ದೀಪೋತ್ಸವ ಅತ್ಯಂತ ಪ್ರಿಯವಾದದ್ದು. ಆದರಿಂದ ಹಿಂದಿನ ಕಾಲದಿಂದಲೂ ಮಂಜುನಾಥನ ಸನ್ನಿಧಿಯ ಸುತ್ತಲೂ ಒಂದು ಲಕ್ಷ ದೀಪಗಳನ್ನು (ಹಣತೆಗಳನ್ನು) ಬೆಳಗುವ ಮೂಲಕ ಲಕ್ಷದೀಪೋತ್ಸವವನ್ನು ಆಚರಿಸುವುದು ಇಲ್ಲಿನ ಸಂಪ್ರದಾಯ. ಆದರೆ ಇತ್ತೀಚಿನ ದಿನಗಳಲ್ಲಿ ವಿದ್ಯುತ್ ದೀಪಗಳಿಂದಲೇ ದೇವಾಲಯವನ್ನು ಶೃಂಗರಿಸಲಾಗುತ್ತದೆ. ಹೀಗಾಗಿ ಧರ್ಮಸ್ಥಳ ಮಂಜುನಾಥನ ಸನ್ನಿಧಿ ವಿದ್ಯುತ್ ದೀಪಾಲಂಕಾರದಿಂದ ವೈಭವದಿಂದ ಕಂಗೊಳಿಸುತ್ತಿತ್ತು. ಕ್ಷೇತ್ರದಲ್ಲಿ ಎಲ್ಲಾ ಧಾರ್ಮಿಕ ವಿಧಿವಿಧಾನಗಳೂ ಶಾಸ್ತ್ರಬದ್ದವಾಗಿ ನೆರೆವೇರಿದ್ದು […]

2 years ago

ಇದು ಎಳನೀರಲ್ಲ ಅಮೃತ ಎಂದು ಕರಾವಳಿಯ ಎಳನೀರಿನ ಸವಿಗೆ ಮನಸೋತ ಮೋದಿ!

ಧರ್ಮಸ್ಥಳ: ಪ್ರಧಾನಿ ನರೇಂದ್ರ ಮೋದಿ ಸಂಪೂರ್ಣ ಉಪವಾಸವಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಬೆಳಗ್ಗೆ ಎದ್ದವರು ಒಂದು ಹನಿ ನೀರೂ ಕುಡಿಯದೆ ಕರ್ನಾಟಕಕ್ಕೆ ಆಗಮಿಸಿದ್ದರು. 11 ಗಂಟೆ ಸುಮಾರಿಗೆ ಧರ್ಮಸ್ಥಳ ಕ್ಷೇತ್ರಕ್ಕೆ ಬಂದಿಳಿದರು. ಬಿರು ಬೇಸಿಗೆಯಂತಿದ್ದ ವಾತಾವರಣ- ನೆತ್ತಿ ಸುಡುತ್ತಿದ್ದ ಸೂರ್ಯ ಎಲ್ಲರನ್ನೂ ಹೈರಾಣಾಗಿಸಿತ್ತು. ಆದ್ರೆ ಪ್ರಧಾನಿ ಮೋದಿ ಮಾತ್ರ ಗುಟುಕು ನೀರನ್ನೂ ಕುಡಿದಿರಲಿಲ್ಲ....