Thursday, 21st November 2019

Recent News

2 months ago

100 ಕೋಟಿ ನೀಡಿದ್ರೆ ಬಿಜೆಪಿಯಲ್ಲಿ ಮಂತ್ರಿ ಸ್ಥಾನ – ಉಗ್ರಪ್ಪ ಆರೋಪ

ಬಳ್ಳಾರಿ: ನೂರು ಕೋಟಿ ಕೊಟ್ಟರೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಬಹುದು. ಬಿಜೆಪಿಯಲ್ಲಿ ಮಂತ್ರಿ ಸ್ಥಾನ, ಉಪಮುಖ್ಯಮಂತ್ರಿ ಸ್ಥಾನ ವ್ಯಾಪಾರಕ್ಕಿದೆ ಎಂದು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೂರು ಕೋಟಿ ಕೊಟ್ಟರೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಬಹುದು ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ರಾಷ್ಟ್ರದಲ್ಲಿ ಸೇಡಿನ ರಾಜಕಾರಣ ನಡಿಯುತ್ತಿದ್ದು, ಡಿ.ಕೆ.ಶಿವಕುಮಾರ್ ಅವರ ಸಂಪತ್ತನ್ನು ಮೊದಲು 8 ಕೋಟಿ ರೂ. ಅಂದರು. ಇದೀಗ 800 ಕೋಟಿ ರೂ. […]

3 months ago

ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಬೇಕೇ ಬೇಕು: ರಾಜನಹಳ್ಳಿ ಶ್ರೀ ಆಗ್ರಹ

ದಾವಣಗೆರೆ: ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ವಾಲ್ಮೀಕಿ ಸಮುದಾಯಕ್ಕೆ ಉಪಮುಖ್ಯಮಂತ್ರಿ ಸ್ಥಾನ ಕೊಡಬೇಕು ಎಂದು ಪ್ರಸನ್ನಾನಂದ ಪುರಿ ರಾಜನಹಳ್ಳಿ ವಾಲ್ಮೀಕಿ ಶ್ರೀ ಆಗ್ರಹಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಸಮುದಾಯಕ್ಕೆ ಸೂಕ್ತ ರಾಜಕೀಯ ಸ್ಥಾನಮಾನ ಸಿಕ್ಕಿಲ್ಲ. ಬೇರೆ ಸಮುದಾಯಕ್ಕೆ ಸಿಕ್ಕ ಸ್ಥಾನಮಾನ ನಮಗೆ ಸಿಕ್ಕಿಲ್ಲ. ಬಿಜೆಪಿಯಲ್ಲಿ ವಾಲ್ಮೀಕಿ ಸಮುದಾಯದ 9 ಮಂದಿ...

ಸಿಟಿ ರವಿ ರಾಜೀನಾಮೆಗೆ ನಿರ್ಧಾರ?

3 months ago

ಬೆಂಗಳೂರು: ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರದ ಖಾತೆ ಹಂಚಿಕೆ ಹಾಗೂ ಡಿಸಿಎಂ ಸ್ಥಾನಗಳು ಘೋಷಣೆಯಾಗುತ್ತಿದಂತೆ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಸಚಿವ ಸಿಟಿ ರವಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭಿಸಿದೆ....

ಹೈಕಮಾಂಡ್‍ನಿಂದ ಸಚಿವ ಸ್ಥಾನದ ಭರವಸೆ: ಉಮೇಶ್ ಕತ್ತಿ

3 months ago

– ಬಾಲಚಂದ್ರ ಜಾರಕಿಹೊಳಿಗೂ ಸಿಗುತ್ತೆ ಮಂತ್ರಿಗಿರಿ – ಒಂದೇ ವಿಮಾನದಲ್ಲಿ ಬೆಳಗಾವಿಗೆ ಬಂದ ‘ಕೈ’- ಕಮಲ ಶಾಸಕರು ಬೆಳಗಾವಿ: ಮುಂದಿನ ವಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆ ಆಗುತ್ತೆ. ನಿಮಗೆ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಮಂತ್ರಿಗಿರಿ ಸಿಗುತ್ತೆ. ಸ್ವಲ್ಪ...

ನಾನು ಹೊನ್ನಾಳಿ ಹುಲಿ, ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡಲ್ಲ: ರೇಣುಕಾಚಾರ್ಯ

3 months ago

ಚಿತ್ರದುರ್ಗ: ನಾನು ಹೊನ್ನಾಳಿ ಹುಲಿ, ಯಾವುದಕ್ಕೂ ಜಗ್ಗುವುದಿಲ್ಲ. ಸಚಿವ ಸ್ಥಾನಕ್ಕಾಗಿ ಭಿಕ್ಷೆ ಬೇಡುವುದಿಲ್ಲ ಎಂದು ಬಿಜೆಪಿ ಶಾಸಕ ರೇಣುಕಾಚಾರ್ಯ ಗುಡುಗಿದ್ದಾರೆ. ಇಂದು ಚಿತ್ರದುರ್ಗದ ಸಿರಿಗೆರೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಬೇಕು ಎಂದರೆ ಸಿಎಂ ಬಿಎಸ್‍ವೈ ಬಳಿ ಪಟ್ಟು...

ಕಮಲ ಬಿಟ್ಟು ಕೈ ಸೇರಲಿದ್ದಾರಾ ಕತ್ತಿ? – ಸಿದ್ದರಾಮಯ್ಯ ಜೊತೆ ಚರ್ಚೆ

3 months ago

ಬೆಂಗಳೂರು: ಸಚಿವ ಸ್ಥಾನ ಕೈತಪ್ಪಿದ್ದ ಬೆನ್ನಲ್ಲೇ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರು ಬುಧವಾರ ರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಕರೆ ಮಾಡಿ ಮಾತನಾಡಿದ್ದಾರೆ. ಕತ್ತಿಯವರ ಈ ನಡೆ ಸದ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ...

ಬಿಜೆಪಿ ವಿರುದ್ಧ ತಿರುಗಿ ಬಿದ್ದ ಶಾಸಕ ಹಾಲಾಡಿ ಅಭಿಮಾನಿಗಳು

3 months ago

ಉಡುಪಿ: ಜಿಲ್ಲೆಯ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಸಚಿವ ಸ್ಥಾನ ನೀಡದ್ದಕ್ಕೆ ಹಾಲಾಡಿ ಬೆಂಬಲಿಗರ ಆಕ್ರೋಶ ಜೋರಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹೈಕಮಾಂಡ್ ಮತ್ತು ಪಕ್ಷದ ವರಿಷ್ಟರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾಭಿಮಾನಕ್ಕೆ ಬೆಲೆ ಇಲ್ಲದಂತಾಗಿದೆ. ಐದು ಬಾರಿ ಜನರಿಂದ ಗೆದ್ದವರಿಗೆ...

ಕತ್ತಿ ಅಥವಾ ಬಾಲಚಂದ್ರರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು: ಸತೀಶ್ ಜಾರಕಿಹೊಳಿ

3 months ago

ಬೆಳಗಾವಿ(ಚಿಕ್ಕೋಡಿ): ಶಾಸಕ ಉಮೇಶ್ ಕತ್ತಿ ಅಥವಾ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇತ್ತು. ಆದರೆ ಅವರಿಬ್ಬರಿಗೂ ಸಿಕ್ಕಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಪಾಶ್ಚಪೂರ ಗ್ರಾಮದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...