Sunday, 18th November 2018

Recent News

1 month ago

ನಾವು ತಪ್ಪು ಮಾಡಿದ್ದೇವೆ, ನನ್ನ ಹೇಳಿಕೆಗೆ ಈಗಲೂ ಬದ್ಧ: ಡಿಕೆ ಶಿವಕುಮಾರ್

ಬೆಂಗಳೂರು: ಪ್ರತ್ಯೇಕ ಲಿಂಗಾಯಿತ ಧರ್ಮ ವಿಚಾರಕ್ಕೆ ಕೈ ಹಾಕಿ ತಪ್ಪು ಮಾಡಿದ್ದೇವೆ ಎನ್ನುವ ಹೇಳಿಕೆಗೆ ನಾನು ಬದ್ಧನಾಗಿದ್ದು, ಪ್ರಜ್ಞಾ ಪೂರ್ವಕವಾಗಿಯೇ ಆತ್ಮಲೋಕನ ಮಾಡಿಕೊಂಡು ನಾನು ಹೇಳಿಕೆ ನೀಡಿದ್ದೇನೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸಮರ್ಥನೆ ನೀಡಿದ್ದಾರೆ. ಪತ್ಯೇಕ ಲಿಂಗಾಯತ ಧರ್ಮಕ್ಕೆ ವಿಚಾರಕ್ಕೆ ಕೈ ಹಾಕಿ ತಪ್ಪು ಮಾಡಿದ್ವಿ ಎನ್ನುವ ಹೇಳಿಕೆಗೆ ತಮ್ಮ ನಿವಾಸದಲ್ಲಿ ಪ್ರತಿಕ್ರಿಯಿಸಿದ ಅವರು, ನನ್ನ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಪ್ರಜ್ಞಾ ಪೂರ್ವಕವಾಯೇ ಆತ್ಮಾವಲೋಕನ ಮಾಡಿಕೊಂಡು ನಾನು ಹೇಳಿಕೆ ನೀಡಿದ್ದೇನೆ. ಯಾವತ್ತು ಧರ್ಮ, ಜಾತಿ […]

1 month ago

ಕಸಾಯಿಖಾನೆಗೆ ಹಣ ಕೊಟ್ಟಿದ್ದು ಯಾಕೆ: ಕಟೀಲ್‍ಗೆ ಸವಾಲು ಎಸೆದು ಸಮರ್ಥನೆ ಕೊಟ್ಟ ಖಾದರ್

ಮಂಗಳೂರು: ಸ್ಮಾರ್ಟ್ ಸಿಟಿ ಯೋಜನೆಯ 15 ಕೋಟಿ ರೂಪಾಯಿ ಅನುದಾನವನ್ನು ಮಂಗಳೂರಿನ ಕಸಾಯಿಖಾನೆಗೆ ನೀಡಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಸಮರ್ಥನೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕುದ್ರೋಳಿಯಲ್ಲಿರುವ ಕಸಾಯಿಖಾನೆ ಬಹಳ ಹಳೆಯದ್ದಾಗಿದೆ. ಕಸಾಯಿಖಾನೆ ಅಭಿವೃದ್ಧಿಗೆ ಜನ ಬೇಡಿಕೆಯನ್ನಿಟ್ಟಿದ್ದರು. ಈ ವಿಚಾರ ಬಿಜೆಪಿಯವರಿಗೂ ಗೊತ್ತಿದೆ. ಸ್ಮಾರ್ಟ್ ಸಿಟಿಯಿಂದ ಹಣ ಬರೋದು ಸ್ವಚ್ಛತೆಗಾಗಿ....