Wednesday, 13th November 2019

Recent News

11 months ago

ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ಮೋದಿಗೆ ಎಚ್ಚರಿಕೆಯ ಗಂಟೆ- ಅಣ್ಣಾ ಹಜಾರೆ

ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಇನ್ನಾದರೂ ಮೋದಿ ಸರ್ಕಾರ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಬೇಕೆಂದು ಹಿರಿಯ ಸಾಮಾಜಿಕ ಹೋರಾಟಗಾರ ಹಾಗೂ ಗಾಂಧಿವಾದಿ ಅಣ್ಣಾ ಹಜಾರೆ ಹೇಳಿದ್ದಾರೆ. ಪಂಚರಾಜ್ಯಗಳ ಫಲಿತಾಂಶದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸರ್ಕಾರ ಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಜನ ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಚುನವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಪ್ರಧಾನಿ ಮೋದಿಯೂ ಸೇರಿದಂತೆ ಬಿಜೆಪಿ ನಾಯಕರು ಮರೆತಿದ್ದಾರೆ. […]

2 years ago

`ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ- ಎಸ್‍ಆರ್ ಹಿರೇಮಠ ಕಿಡಿ

ಹಾವೇರಿ: ರಾಜ್ಯದಲ್ಲಿ ಮೂರು ಪಕ್ಷಗಳು ಲೂಟಿಕೋರರ ಪಕ್ಷಗಳಾಗಿವೆ. ಕಳೆದ ಹಲವಾರು ವರ್ಷಗಳಿಂದ `ಜೆಸಿಬಿ’ ಎಂಬ ಭ್ರಷ್ಟ ಪಕ್ಷಗಳು ರಾಜ್ಯವನ್ನು ಲೂಟಿ ಹೊಡೆದಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಎಸ್‍ಆರ್ ಹಿರೇಮಠ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯವರು ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದರು. ರೆಡ್ಡಿಯಂತಹ ಕಳ್ಳರ ತಾಳಕ್ಕೆ ಕುಣಿದು ಜೈಲು ಸೇರಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈ ರಾಜ್ಯಕ್ಕೆ...