Recent News

2 weeks ago

ಹಾಳಾದ ರಸ್ತೆಯಲ್ಲಿ ಭತ್ತ ನಾಟಿ

ಕೊಪ್ಪಳ: ಹಾಳಾದ ರಸ್ತೆಯಲ್ಲಿ ಭತ್ತದ ಸಸಿ ನಾಟಿ ಮಾಡುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಕಂಪ್ಲಿಗೆ  ಸಂಪರ್ಕ ಕಲ್ಪಿಸುವ ಪ್ರಮುಖ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಗಂಗಾವತಿಯ ಹೊಸಳ್ಳಿ ರಸ್ತೆ ಹಾಳಾಗಿ ಗದ್ದೆಯಂತಾಗಿದೆ. ರಸ್ತೆ ಹಾಳಾಗಿ ಆರು ತಿಂಗಳಾದ್ರೂ ಅಧಿಕಾರಿಗಳು ಕ್ಯಾರೆ ಎನ್ನುತ್ತಿರಲಿಲ್ಲ. ಹಾಗಾಗಿ ಜನರು ನಮ್ಮೂರಿಗೆ ಸರಿಯಾದ ರಸ್ತೆಯನ್ನು ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದರು. ಅಧಿಕಾರಿಗಳು ಇದಕ್ಕೆ ಸ್ಪಂದಿಸದ ಕಾರಣ ರಸ್ತೆ ಎಷ್ಟರ ಮಟ್ಟಿಗೆ ಹಾಳಾಗಿದೆ ಎಂದು ತೋರಿಸಲು ರಸ್ತೆಯಲ್ಲಿ […]

1 month ago

ಉಡುಪಿಯಲ್ಲಿ ಸಂಚಾರಿ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಜನ

ಉಡುಪಿ: ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಯ ದಂಡ ವಸೂಲಿ ವಿರುದ್ಧ ಸಾರ್ವಜನಿಕರು ಅಲ್ಲಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಲೇ ಇದ್ದಾರೆ. ಈಗ ಉಡುಪಿಯಲ್ಲೂ ಈ ರೀತಿಯ ಘಟನೆ ನಡೆದಿದೆ. ನಗರದ ಪಿಪಿಸಿ ಕಾಲೇಜು ಸಮೀಪ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ನಿಂತಿದ್ದರು. ಸಮೀಪದಲ್ಲಿ ಉಡುಪಿ ನಗರದ ಪಿಪಿಸಿ ಕಾಲೇಜ್ ಬಳಿ ಸಮವಸ್ತ್ರ ಧರಿಸದ, ಮಫ್ತಿಯಲ್ಲಿ ಇರುವ...

ಕಾಲೇಜಿಗೆ ಚಕ್ಕರ್- ಪಾರ್ಕಿನಲ್ಲಿ ವಿದ್ಯಾರ್ಥಿಗಳಿಂದ ಅಸಭ್ಯ ವರ್ತನೆ

1 month ago

-ಪಡ್ಡೆ ಹುಡುಗರ ಗ್ಯಾಂಗ್ ಹಾಜರ್ ದಾವಣಗೆರೆ: ಕಾಲೇಜಿಗೆ ಚಕ್ಕರ್ ಹಾಕಿ ನಗರದ ಕೆಲ ವಿದ್ಯಾರ್ಥಿಗಳು ಪಾರ್ಕಿನಲ್ಲಿ ಕುಳಿತು ಅಸಭ್ಯವಾಗಿ ವರ್ತಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಪಾರ್ಕ್, ವಿದ್ಯಾನಗರ ಪಾರ್ಕ್ ಸೇರಿದಂತೆ ಪ್ರಮುಖ ಪಾರ್ಕ್ ತುಂಬಾ ಪ್ರೇಮ ಪಕ್ಷಿಗಳು ಗರಿ ಬಿಚ್ಚಿ ಹಾರಾಡುತ್ತಿರುತ್ತವೆ. ಅದರಲ್ಲೂ...

ತಲೆಯಲ್ಲಿ ಹುಳುವಾಗಿ ನರಳುತ್ತಿದ್ದ ಅನಾಥ ವೃದ್ಧನನ್ನು ರಕ್ಷಿಸಿದ ಸಾರ್ವಜನಿಕರು

2 months ago

ಬೆಂಗಳೂರು: ತಲೆಗೆ ಆಗಿದ್ದ ಗಾಯಕ್ಕೆ ಹುಳುವಾಗಿ ನರಳುತ್ತಿದ್ದ ಅನಾಥ ವೃದ್ಧರೊಬ್ಬರನ್ನು ನೆಲಮಂಗಲ ತಾಲೂಕಿನ ಡಾಬಸ್ ಪೇಟೆ ನಿವಾಸಿಗಳು ಹಾಗೂ ಸರ್ಕಾರೇತರ ಸಂಸ್ಥೆಯೊಂದು ರಕ್ಷಣೆ ಮಾಡಿ ಮಾನವಿಯತೆ ಮೆರೆದಿದ್ದಾರೆ. ಮಾಗಡಿ ತಾಲೂಕಿನ ಮಾಡಬಾಳ್ ಗ್ರಾಮದ ನಿವಾಸಿ ಸಿದ್ದಲಿಂಗಪ್ಪರನ್ನು ರಕ್ಷಿಸಲಾಗಿದೆ. ಅಪಘಾತವಾಗಿ ಮನೆ ತೊರೆದಿದ್ದ...

ಕಂಡಕಂಡಲ್ಲಿ ಕಸ ಎಸೆದ್ರೆ ಬೀಳುತ್ತೆ ಬಿಬಿಎಂಪಿಯಿಂದ ಭಾರೀ ದಂಡ

2 months ago

ಬೆಂಗಳೂರು: ಕಸ ಸಂಸ್ಕರಣೆ ಹಾಗೂ ವಿಂಗಡಣೆ ಉಲ್ಲಂಘಿಸಿದರೆ ಭಾರೀ ದಂಡ ಹಾಕಲು ಬಿಬಿಎಂಪಿ ಸಜ್ಜಾಗಿದೆ. ಬಿಬಿಎಂಪಿ ಕಸ ನಿರ್ವಹಣೆ ಬೈಲಾ 2019ರ ಕರಡು ಸಿದ್ಧಗೊಂಡಿದೆ. ಇದರ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಮೂತ್ರ ಮಾಡಿದರೆ, ಉಗುಳಿದರೆ 500 ರಿಂದ 1000 ರೂ. ದಂಡ...

ಅಟ್ಟಿಸಿಕೊಂಡು ಬಂದವರಿಂದ ತಪ್ಪಿಸಿಕೊಳ್ಳಲು ಗುಂಡು ಹಾರಿಸಿದ ಪೊಲೀಸ್: ವಿಡಿಯೋ

2 months ago

ನವದೆಹಲಿ: ಗಸ್ತು ತಿರುಗುತ್ತಿದ್ದ ಪೊಲೀಸ್ ಪೇದೆಯನ್ನು ಸ್ಥಳೀಯರು ಥಳಿಸಿ, ಅಟ್ಟಿಸಿಕೊಂಡು ಹೋದ ಘಟನೆ ದೆಹಲಿಯಲ್ಲಿ ನಡೆದಿದೆ. ಕಾಲಿಂದಿ ಕುಂಜ್ ಪ್ರದೇಶದ ಜೆಜೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಘಟನೆ ನಡೆದಿದೆ. ಸಾರ್ವಜನಿಕರಿಂದ ಪೊಲೀಸ್ ಪೇದೆ ರಾಮ್‍ಕಿಶನ್ ತಪ್ಪಿಸಿಕೊಂಡಿದ್ದಾರೆ. ರಾಮ್‍ಕಿಶನ್ ಅವರ ಮೇಲೆ ಹಲ್ಲೆ...

ಪೊಲೀಸರನ್ನೇ ಅಡ್ಡ ಹಾಕಿ ಹೆಲ್ಮೆಟ್ ಎಲ್ಲಿ ಎಂದ ಸಾರ್ವಜನಿಕರು

3 months ago

ಚಿಕ್ಕಬಳ್ಳಾಪುರ: ಹೆಲ್ಮೆಟ್ ಧರಿಸದೆ ಬರುತ್ತಿದ್ದ ಪೊಲೀಸರ ಬೈಕ್‍ನ್ನು ಅಡ್ಡಗಟ್ಟಿದ ಸಾರ್ವಜನಿಕರು ಹೆಲ್ಮೆಟ್ ಎಲ್ಲಿ ಎಂದು ಪ್ರಶ್ನಿಸಿ ಫುಲ್ ಕ್ಲಾಸ್ ತೆಗೆದುಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಪಿಂಡಿಪಾಪನಹಳ್ಳಿ ಬಳಿ ನಡೆದಿದೆ. ಆಂದಹಾಗೆ ಶಿಡ್ಲಘಟ್ಟ-ಚಿಂತಾಮಣಿ ಮಾರ್ಗದ ಪಿಂಡಿಪಾಪನಹಳ್ಳಿ ರಸ್ತೆಯಲ್ಲಿ ಸಂಚಾರಿ ನಿಯಮಗಳನ್ನು...

ತಹಶೀಲ್ದಾರ್ ಕಚೇರಿ ಮೇಲೆ ಎಸಿಬಿ ದಾಳಿ – ನಕಲಿ ಅಧಿಕಾರಿಯನ್ನು ನೋಡಿ ದಂಗಾದ ಅಧಿಕಾರಿಗಳು

3 months ago

ವಿಜಯಪುರ: ದಾಳಿ ವೇಳೆ ನಕಲಿ ಅಧಿಕಾರಿಯೊಬ್ಬ ಸಿಕ್ಕಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ. ಅಧಿಕಾರಿಗಳು ಕೆಲಸ ಮಾಡಿಕೊಡಲು ಲಂಚ ಕೇಳುತ್ತಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಇಂದು ದೇವರ ಹಿಪ್ಪರಗಿ ತಹಶೀಲ್ದಾರ್ ಕಚೇರಿಗೆ ಎಸಿಬಿ ಅಧಿಕಾರಿಗಳಾದ...