Tag: ಅಪ್ಪಚ್ಚು ರಂಜನ್

  • ಈ ಬಾರಿ ಲೋಕಸಭಾ ಚುನಾವಣೆಗೆ ನಾನು ಬಿಜೆಪಿಯಿಂದ ಪ್ರಬಲ ಆಕಾಂಕ್ಷಿ: ಅಪ್ಪಚ್ಚು ರಂಜನ್

    ಈ ಬಾರಿ ಲೋಕಸಭಾ ಚುನಾವಣೆಗೆ ನಾನು ಬಿಜೆಪಿಯಿಂದ ಪ್ರಬಲ ಆಕಾಂಕ್ಷಿ: ಅಪ್ಪಚ್ಚು ರಂಜನ್

    ಮಡಿಕೇರಿ: ಕೊಡಗು (Kodagu) ಲೋಕಸಭಾ ಕ್ಷೇತ್ರವಾದರೆ ತಾನು ಬಿಜೆಪಿಯಿಂದ (BJP) ಆಕಾಂಕ್ಷಿಯಾಗಿದ್ದೇನೆ ಎಂದು ಮಾಜಿ ಶಾಸಕ ಅಪ್ಪಚ್ಚು ರಂಜನ್(Appachu Ranjan) ಹೇಳಿದ್ದಾರೆ.

    ಮೈಸೂರು ಕೊಡಗು ಲೋಕಸಭಾ ಚುನಾವಣೆಗೆ ಕೆಲ ತಿಂಗಳುಗಳಷ್ಟೇ ಬಾಕಿ ಇದೆ. ಈಗಾಗಲೇ ಮೈಸೂರು (Mysuru) ಕೊಡಗು ಸಂಸದ ಪ್ರತಾಪ್ ಸಿಂಹ (Pratap Simha)  ಲೋಕಸಭಾ ಚುನಾವಣೆಗೆ ತಯಾರಿ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ತಾನು ಕೂಡ ಈ ಬಾರಿ ಲೋಕಸಭಾ ಚುನಾವಣೆ ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಈ ಕುರಿತು ರಾಜ್ಯ ರಾಷ್ಟ್ರ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ ಎಂದು ಅಪ್ಪಚ್ಚು ರಂಜನ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ, ಸೋನಿಯಾ ಗಾಂಧಿಯವರಿಗೂ ಹೀಗೆ ಮಾತಾಡಿದ್ದಾರಾ?: ಛಲವಾದಿ ನಾರಾಯಣಸ್ವಾಮಿ

    ಕೊಡಗು ಜಿಲ್ಲೆಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಕೂಗು ಇದೆ. ಕೊಡಗಿನವರಿಗೆ ಲೋಕಸಭಾ ಅಭ್ಯರ್ಥಿ ಮಾಡಬೇಕು ಎಂಬ ಮಾತುಗಳು ಇವೆ. ಇವರೆಗೂ ಕೊಡಗು ಜಿಲ್ಲೆ, ಮಂಗಳೂರು-ಕೊಡಗೂ ಲೋಕಸಭಾ ಕ್ಷೇತ್ರವಾಗಿತ್ತು. ಬಳಿಕ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರವಾಗಿತ್ತು. ಈ ಬಾರಿ ಕೊಡಗಿಗೆ ಪ್ರತ್ಯೇಕವಾಗಿ ಲೋಕಸಭಾ ಕ್ಷೇತ್ರ ಬೇಕು ಎಂಬುವುದು ಜಿಲ್ಲೆಯ ಜನರ ಅಭಿಪ್ರಾಯವಾಗಿದೆ. ಒಂದು ವೇಳೆ ಕೊಡಗು ಲೋಕಸಭಾ ಕ್ಷೇತ್ರವಾದರೆ ತಾನು ಆಕಾಂಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿಗಳಿಗೆ  ಅಗೌರವ ತೋರುವುದು ಸಿಎಂಗೆ ಶೋಭೆ ತರಲ್ಲ:  ಭೋಜೇಗೌಡ

    APPACHU RANJAN

    ಬಿಜೆಪಿಯಿಂದ ಹಲವಾರು ಆಕಾಂಕ್ಷಿಗಳು ಇದ್ದಾರೆ. ಅದರೆ ಈ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅದಕ್ಕೆ ನಾವು ಬದ್ಧವಾಗಿ ಇರುತ್ತೇವೆ. ಅದರಿಂದ ಚುನಾವಣೆಗೆ ತಯಾರಿ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ರಾಜ್ಯ ಹಾಗೂ ರಾಷ್ಟçನಾಯಕರ ಹೆಸರುಗಳನ್ನು ಸದ್ಯದ ಪರಿಸ್ಥಿತಿಯಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ರಾಜಕೀಯ ಮಾಡೋದು ಬಿಟ್ಟು ಜನರ ಭಾವನೆಗಳಿಗೆ ಬೆಲೆ ಕೊಡಲಿ: ಅಶ್ವಥ್ ನಾರಾಯಣ್

    ಕೊಡಗಿನವರಿಗೆ ಆದ್ಯತೆ ನೀಡಬೇಕು ಎಂದು ರಂಜನ್ ಪರವಾಗಿ ಮಾಜಿ ಜಿಲ್ಲಾಧ್ಯಕ್ಷರು ಹಾಗೂ ಹಾಲಿ ಜಿಲ್ಲಾಧ್ಯಕ್ಷರು ಮನವಿ ಮಾಡಿದ್ದಾರೆ. ಅಲ್ಲದೇ ಅವರಿಗೆ ಈ ಬಾರಿ ಟಿಕೆಟ್ ನೀಡಿದರೆ 100ಕ್ಕೆ 100 ರಷ್ಟು ಗೆಲುವು ಸಾಧಿಸುವುದಾಗಿ ಹೇಳಿದ್ದಾರೆ. ಜನರು ಮತಗಳನ್ನ ಮೋದಿಯವರಿಗೆ ಹಾಕುವುದು, ಅಪ್ಪಚ್ಚು ರಂಜನ್‌ಗಲ್ಲ. ಮೋದಿ ಅವರು ಇನ್ನೊಂದು ಬಾರಿ ಪ್ರಧಾನಿ ಅಗಬೇಕು ಎಂಬುದು ಇಡೀ ದೇಶದ ಜನರ ಅಸೆಯಾಗಿದೆ. ಅದು ಈಡೆರುತ್ತದೆ ಎಂದು ಇಚ್ಛಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಶಿಷ್ಟಾಚಾರಗೆಟ್ಟ ಮುಖ್ಯಮಂತ್ರಿ: ಹೆಚ್‌ಡಿಕೆ ವಾಗ್ದಾಳಿ

  • ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ

    ಬಜರಂಗದಳ ಅಲ್-ಖೈದಾ ಅಲ್ಲ: ಸಿದ್ದರಾಮಯ್ಯ ವಿರುದ್ಧ ಅಪ್ಪಚ್ಚು ರಂಜನ್ ಕಿಡಿ

    ಮಡಿಕೇರಿ: ಬಜರಂಗದಳ ಭಯೋತ್ಪಾದಕ ಸಂಘಟನೆಯಲ್ಲ. ಅದು ಅಲ್-ಖೈದಾವೂ ಅಲ್ಲ ಎಂದು ಮಡಿಕೇರಿ ಕ್ಷೇತ್ರ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಅಪ್ಪಚ್ಚು ರಂಜನ್ (Appachu Ranjan) ಸಿದ್ದರಾಮಯ್ಯ (Siddaramaiah) ವಿರುದ್ಧ ಕಿಡಿಕಾರಿದ್ದಾರೆ.

    ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (Somwarpet) ತಾಲೂಕಿನ ಶಿರಂಗಾಲದಲ್ಲಿ ಆಯೋಜಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜರಂಗದಳ ಒಂದು ದೇಶಭಕ್ತ ಸಂಘಟನೆ. ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ಬಜರಂಗದಳವನ್ನು (Bhajarang Dal) ನಿಷೇಧ ಮಾಡುವುದಾಗಿ ಹೇಳಿದ್ದಾರೆ. ಅವರು ಅವಸಾನ ಹೊಂದುವುದು ಖಚಿತ ಎಂದು ಹರಿಹಾಯ್ದರು. ಇದನ್ನೂ ಓದಿ: ಪತ್ನಿ, ಸಹೋದರನಿಗಾಗಿ ಒಂದು ದಿನ ಆಸ್ಪತ್ರೆಗೆ ಭೇಟಿ – ಮತ್ತೊಂದು ದಿನ ಕ್ಷೇತ್ರದಲ್ಲಿ ಪ್ರಿಯಾಂಕ್ ಪ್ರಚಾರ

    ಬಜರಂಗದಳ ದೇಶಾಭಿಮಾನವನ್ನು ಪಸರಿಸುತ್ತಿರುವ ದೇಶಭಕ್ತರ ಸಂಘಟನೆ. ಅದು ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿಲ್ಲ. ಇಂತಹ ಸಂಘಟನೆಯನ್ನು ನಿಷೇಧಿಸುತ್ತೇವೆ ಎಂದಿರುವ ಸಿದ್ದರಾಮಯ್ಯ ಈ ಬಾರಿ ವರುಣಾದಲ್ಲಿ (Varuna) ಸೋಲುವುದು ಖಚಿತ. ಅಲ್ಲದೇ ಕಾಂಗ್ರೆಸ್ (Congress) 40ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ ಎಂದರು. ಇದನ್ನೂ ಓದಿ: ಯತ್ನಾಳ್‌, ಪ್ರಿಯಾಂಕ್‌ ಖರ್ಗೆಗೆ ಶೋಕಾಸ್‌ ನೋಟಿಸ್‌ ಜಾರಿ

    ಇಂಗ್ಲೆಂಡ್‌ನಿಂದ ಟಿಪ್ಪುವಿನ ಖಡ್ಗ ತಂದ ವಿಜಯ್ ಮಲ್ಯ ಮಣ್ಣು ಮುಕ್ಕಿದರು. ಟಿಪ್ಪು ಧಾರವಾಹಿ ಮಾಡಿದ ಸಂಜಯ್ ಖಾನ್ ಸಹ ಮಣ್ಣು ಮುಕ್ಕಿದರು. ಇದೀಗ ಟಿಪ್ಪು ಜಯಂತಿ ಮತ್ತೆ ಮಾಡುತ್ತೇವೆ ಎನ್ನುತ್ತಿರುವ ಸಿದ್ದರಾಮಯ್ಯನವರ ಸರದಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್‌ ಬಜರಂಗಿ ಸಂಘರ್ಷ – ಬೆಳಗ್ಗೆಯಿಂದಲೇ ದೇವಸ್ಥಾನಗಳಲ್ಲಿ ಮೊಳಗಲಿದೆ ಹನುಮಾನ್ ಚಾಲೀಸಾ

  • ಮಡಿಕೇರಿ ಕ್ಷೇತ್ರಕ್ಕೆ ನನ್ನ ಕೊನೆಯ ಚುನಾವಣೆ – ಅಪ್ಪಚ್ಚು ರಂಜನ್

    ಮಡಿಕೇರಿ ಕ್ಷೇತ್ರಕ್ಕೆ ನನ್ನ ಕೊನೆಯ ಚುನಾವಣೆ – ಅಪ್ಪಚ್ಚು ರಂಜನ್

    ಮಡಿಕೇರಿ: ಇದು ನನ್ನ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ (Election) ಬಿಜೆಪಿ (BJP) ಭದ್ರಕೋಟೆಯನ್ನು ಉಳಿಸಿಕೊಳ್ಳುತ್ತೇವೆ ಎಂದು ಶಾಸಕ ಅಪ್ಪಚ್ಚು ರಂಜನ್ (Appachu Ranjan) ಹೇಳಿದ್ದಾರೆ.

    ಸೋಮವಾರಪೇಟೆಯಲ್ಲಿ ಸುದ್ದಿಗಾರರೊದಿಗೆ ಮಾತಾನಾಡಿದ ಅವರು, ರಾಷ್ಟ್ರ ಹಾಗೂ ರಾಜ್ಯ ನಾಯಕರು ಬಿಜೆಪಿ ಭದ್ರಕೋಟೆ ಕೊಡಗಿನಲ್ಲಿ (Kodagu) ಮತ್ತೊಮ್ಮೆ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಾರೆ ಎಂಬ ವಿಶ್ವಾಸದಿಂದ ಟಿಕೆಟ್ ಘೋಷಣೆ ಮಾಡಿದ್ದಾರೆ. ಆ ವಿಶ್ವಾಸವನ್ನು ಉಳಿಸಿಕೊಂಡು ಹೋಗುತ್ತೇವೆ. ಈ ಬಾರಿ ಮಡಿಕೇರಿ (Madikeri) ಕ್ಷೇತ್ರದ ಜನರು ನಮ್ಮ ಪರವಾಗಿ ಇದ್ದಾರೆ. ನಾವು ಜಿಲ್ಲೆಗೆ ಮಾಡಿರುವ ಅಭಿವೃದ್ಧಿ ಕಾರ್ಯಗಳೆ ನಮಗೆ ಶ್ರೀರಕ್ಷೆಯಾಗುತ್ತದೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬಂಡಾಯದ ಸಿಡಿಲು – ಕೈ ಕಟ್ಟಾಳು ಕಾಗೋಡು ಪುತ್ರಿ ಬಿಜೆಪಿಗೆ ಸೇರ್ಪಡೆ 

    bjp flag

    ಪ್ರಕೃತಿ ವಿಕೋಪದ ಸಂದರ್ಭದಿಂದ ಹಿಡಿದು ಕೋವಿಡ್ ಸಮಯದವರೆಗೂ ನಾವು ಜನರೊಂದಿಗೆ ಇದ್ದೆವು. ಕಳೆದ ಬಾರಿ ಮಡಿಕೇರಿ ಕ್ಷೇತ್ರದ ಬಡ ಜನತೆ ನಮಗೆ ಆಶೀರ್ವಾದ ಮಾಡಿದರು. ಈ ಬಾರಿಯು ಅವರು ನಮಗೆ ಬೆಂಬಲ ಕೊಟ್ಟು ಗೆಲುವಿಗೆ ಕಾರಣರಾಗುತ್ತಾರೆ. ಈಗಿರುವ ಕಾಂಗ್ರೆಸ್ (Congress) ಅಭ್ಯರ್ಥಿ ಹೊರ ಜಿಲ್ಲೆಯವರು. ಅವರಿಗೆ ಕ್ಷೇತ್ರದ ಜನರು ಮಣೆ ಹಾಕುವುದಿಲ್ಲ. ಈ ಬಾರಿ 30 ಸಾವಿರ ಮತಗಳಿಂದ ಜಯಗಳಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಇರಿದಂತಾಗಿದೆ – ಕಾಗೋಡು ತಿಮ್ಮಪ್ಪ 

    ಈಗಾಗಲೇ ಕಾರ್ಯಕರ್ತರು ಹುರುಪಿನಿಂದ ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ನನ್ನ ಕೊನೆಯ ಚುನಾವಣೆಯಾಗಿರುತ್ತದೆ. ಮತದಾರರ ಬಳಿ ಕೊನೆಯ ಬಾರಿ ಆಶೀರ್ವಾದ ಮಾಡಲು ಹೇಳುತ್ತೇವೆ. ಅಲ್ಲದೇ ಮುಂದಿನ ದಿನಗಳಲ್ಲಿ ಕಾರ್ಯಕರ್ತರನ್ನು ಉತ್ತಮ ನಾಯಕರನ್ನಾಗಿ ಮಾಡಿ ಅವರ ಪರವಾಗಿ ಕೆಲಸ ಮಾಡಲು ನಿಶ್ಚಯಿಸಿದ್ದೇನೆ ಎಂದರು. ಇದನ್ನೂ ಓದಿ: ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಆರ್. ಶಂಕರ್

  • ನನಗೆ ವೋಟು ಹಾಕಬೇಡಿ – ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ಅಪ್ಪಚ್ಚು ರಂಜನ್ ತಿರುಗೇಟು

    ನನಗೆ ವೋಟು ಹಾಕಬೇಡಿ – ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ಅಪ್ಪಚ್ಚು ರಂಜನ್ ತಿರುಗೇಟು

    ಮಡಿಕೇರಿ: ರಸ್ತೆ ದುರಸ್ತಿ ಬಗ್ಗೆ ಮಾತನಾಡಲು ಹೋದ ಗ್ರಾಮಸ್ಥರಿಗೆ ನನಗೆ ವೋಟು ಹಾಕಬೇಡಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ (Appachchu Ranjan) ಕಿಡಿಕಾರಿದ್ದಾರೆ.

    Appachchu Ranjan 1

    ಹೌದು, ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ (SomavaraPete) ಮತ್ತು ಕುಶಾಲನಗರ (Kushalnagara) ತಾಲೂಕು ನೇರುಗಳಲೆ ಗ್ರಾಮ ಪಂಚಾಯಿತಿ ಮತ್ತು ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಲೋಕೋಪಯೋಗಿ ಇಲಾಖೆಯ ಮಸಗೂಡು ಕಣಿವೆಯ ರಸ್ತೆಯು ಸುಮಾರು 18 ಕಿ.ಲೋವರೆಗೂ ಕಳೆದ 10 ವರ್ಷಗಳಿಂದ ಇದೇ ಸ್ಥಿತಿಯಲ್ಲಿದೆ. ವಾಹನ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ಈ ಹಿಂದೆ ಈ ಗ್ರಾಮಕ್ಕೆ 5 ಖಾಸಗಿ ಬಸ್ಸುಗಳು ಸಂಚರಿಸುತ್ತಿತ್ತು. ಆದರೆ ರಸ್ತೆ ಹಾಳಾಗಿರುವುದರಿಂದ ಬಸ್ಸುಗಳ ವ್ಯವಸ್ಥೆ ನಿಲ್ಲಿಸಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಸೋಮವಾರಪೇಟೆ ಕೂಡಿಗೆಗೆ ನಡೆದು ಹೋಗುವ ದುಸ್ಥಿತಿಯಾಗಿದೆ.

    Appachchu Ranjan 2

    ಈ ಗ್ರಾಮಕ್ಕೆ ಈ ಹಿಂದೆ ಆಟೋ ಬಾಡಿಗೆ 50-60 ತೆಗೆದುಕೊಳ್ಳುತ್ತಿದ್ದರು. ಆದರೆ ಈಗ 200 ರಿಂದ 300 ರೂ. ತೆಗೆದುಕೊಳ್ಳುತ್ತಿದ್ದಾರೆ. ಇದರಿಂದ ಗ್ರಾಮಸ್ಥರಿಗೆ ತೊಂದರೆಯಾಗಿದೆ. ಗ್ರಾಮದಲ್ಲಿ ಕೂಲಿ ಕಾರ್ಮಿಕರು ಸೇರಿದಂತೆ ಸುಮಾರು 5,000 ಜನ ಇದ್ದಾರೆ. ಇದು ಸುಮಾರು 10 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜನರಿಗೆ ವಯಸ್ಕರಿಗೆ, ಮಕ್ಕಳಿಗೆ ಓಡಾಡಲು ತುಂಬಾ ಕಷ್ಟಕರವಾಗಿದೆ. ಈ ಗ್ರಾಮದಲ್ಲಿ ಕಲ್ಲು ಗಣಿಗಾರಿಕೆ ಮಾಡುವುದರಿಂದ ಹೆಚ್ಚು ಲಾರಿಗಳ ಓಡಾಟ ಇರುವುದರಿಂದ ರಸ್ತೆ ಹಾಗೂ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಅಪಾಯದಲ್ಲಿದೆ. ಹೀಗಾಗಿ ಇಲ್ಲಿನ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಸಹ ‘ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ನನಗೆ ನೀವು ಕೊಟ್ಟಿರುವ ಪೊಷಿಷನ್‌ ಸಾಕು, ಇನ್ಯಾವುದೂ ಬೇಡ – ಡಿಕೆಶಿ ರಾಜಕೀಯ ನಿವೃತ್ತಿ ಸುಳಿವು!

    ಈ ರಸ್ತೆ ಸಮಸ್ಯೆ ಕಳೆದ ಹತ್ತು ವರ್ಷಗಳಿಂದ ಇದೆ. ಈ ಗ್ರಾಮದಲ್ಲಿ ಕಲ್ಲಿನ ಕೊರೆಗಳು ಇರುವುದರಿಂದ ಸಾಕಷ್ಟು ಲಾರಿಗಳು ಓಡಾಟ ನಡೆಸುತ್ತಿದ್ದು, ಗ್ರಾಮ ಸಂಪೂರ್ಣ ಧೂಳು ಮಯವಾಗಿದೆ. ಸರಿಯಾದ ರಸ್ತೆ ಮಾಡಿ ಶಾಲಾ ಕಾಲೇಜು ಮಕ್ಕಳ ಭವಿಷ್ಯಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಪ್ರಧಾನಿ ಮೋದಿ (Prime Minister Narendra Modi) ಅವರ ಕಚೇರಿಗೆ ಪತ್ರ ಮೇಲ್ ಮಾಡಲಾಗಿದೆ. ಅಲ್ಲದೇ ಅಪ್ಪಚ್ಚು ರಂಜನ್ ಅವರಿಗೆ ಪತ್ರ ಕೊಡಲು ಹೋದರೆ, ನಿಮ್ಮ ಗ್ರಾಮಸ್ಥರು ವೋಟು ತನಗೆ ಬೇಡ ಇಲ್ಲಿಂದ ಹೋಗಿ ಎಂದು ಕೊಡಗು ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ (B.C.Nagesh) ಅವರ ಮುಂದೆಯೇ ಬೈದು ಕಳಿಸಿದ್ದಾರೆ. ಇದೀಗಾ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: SC-ST ಮೀಸಲಾತಿ ಹೆಚ್ಚಳಕ್ಕೆ ಒಪ್ಪಿಗೆ – ಹಾಲಿ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    Live Tv
    [brid partner=56869869 player=32851 video=960834 autoplay=true]

  • RSS ಬ್ಯಾನ್ ವಿಚಾರ – ಸಿದ್ದರಾಮಯ್ಯಗೆ ತಲೆಕೆಟ್ಟಿದೆ ಎಂದು ಅಪ್ಪಚ್ಚು ರಂಜನ್ ಕಿಡಿ

    RSS ಬ್ಯಾನ್ ವಿಚಾರ – ಸಿದ್ದರಾಮಯ್ಯಗೆ ತಲೆಕೆಟ್ಟಿದೆ ಎಂದು ಅಪ್ಪಚ್ಚು ರಂಜನ್ ಕಿಡಿ

    ಮಡಿಕೇರಿ: ಪಿಎಫ್‍ಐ (PFI) ಸಂಘಟನೆ ಬ್ಯಾನ್ ಮಾಡಿದ ಹಾಗೆ ಆರ್‌ಎಸ್‍ಎಸ್ (RSS) ಸಂಘಟನೆಯನ್ನು ಬ್ಯಾನ್ ಮಾಡಬೇಕು ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆಗೆ ಅವರಿಗೆ ತಲೆ ಕೆಟ್ಟಿದೆ, ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಹೇಳುವ ಮೂಲಕ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ (Appachhu Ranjan) ತಿರುಗೇಟು ನೀಡಿದ್ದಾರೆ.

    siddaramaiah 10

    ಮಡಿಕೇರಿಯಲ್ಲಿ (Madikeri) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್‌ಎಸ್‍ಎಸ್‍ನಲ್ಲಿ ರಾಷ್ಟ್ರೀಯ ಚಿಂತನೆ ತೊಡಗಿದೆ. ನಾವು ಕೂಡ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಕಲಿಸುವುದು ದೇಶ ಪ್ರೇಮ ಹಾಗೂ ದೇಶ ಭಕ್ತಿಯನ್ನು, ದೇಶ ಒಡೆಯುವ ಕೆಲಸವನ್ನು ಆರ್‌ಎಸ್‍ಎಸ್ ಮಾಡುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ತಾನು ಎರಡನೇ ಪತ್ನಿ ಅಂತಾ ಗೊತ್ತಾಗ್ತಿದ್ದಂತೆಯೇ ಮುಂಜಾನೆ ನೇಣಿಗೆ ಶರಣಾದ ನವವಧು!

    ಆರ್‌ಎಸ್‍ಎಸ್ ಯಾವುದೇ ಬಾಂಬ್ ಹಾಕಲು ಕೂಡ ಕಲಿಸುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ಸಿದ್ದರಾಮಯ್ಯ ಹೀಗೆ ಅರ್ಥವಿಲ್ಲದ ಮಾತುಗಳನ್ನು ಆಡುತ್ತಿದ್ದಾರೆ. ಸಿದ್ದರಾಮಯ್ಯರ ಮಾತನ್ನು ಯಾರು ಕೂಡ ಒಪ್ಪುವುದಿಲ್ಲ. ಈಗಾಗಲೇ ಮಾಧ್ಯಮಗಳಲ್ಲಿ ಸಾಕಷ್ಟು ಜನರು ಪಿಎಫ್‍ಐ ಬ್ಯಾನ್ ಆಗಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಅಭಿನಂದನೆಗಳನ್ನು ಜಿಲ್ಲೆಯ ಪರವಾಗಿ ಹೇಳುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷದಿಂದ ಕಾರುಗಳಲ್ಲಿ 6 ಏರ್‌ಬ್ಯಾಗ್ ನಿಯಮ ಜಾರಿಗೆ – ನಿತಿನ್ ಗಡ್ಕರಿ

    Live Tv
    [brid partner=56869869 player=32851 video=960834 autoplay=true]

  • ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ

    ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ: ಆರಗ ಜ್ಞಾನೇಂದ್ರ

    ಬೆಂಗಳೂರು: ನೆರೆಯ ಕೇರಳ ರಾಜ್ಯದ ಗಡಿ ಪ್ರದೇಶಕ್ಕೆ ಹೊಂದಿಕೊಂಡಿರುವ, ಕೊಡಗು ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು, ಆದ್ಯ ಗಮನ ನೀಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ(Araga Jnanendra) ಇಂದು ವಿಧಾನಸಭೆಗೆ ತಿಳಿಸಿದರು.

    ಸದನದಲ್ಲಿ(Session) ಪ್ರಶ್ನೋತ್ತರ ವೇಳೆಯಲ್ಲಿ, ಬಿಜೆಪಿ ಶಾಸಕ ಅಪ್ಪಚ್ಚು ರಂಜನ್(Appachu Ranjan) ಅವರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಅಪರಾಧಿಗಳ ಮೇಲೆ ಕಣ್ಗಾವಲು ಇಡಲು, ಸೂಕ್ಷ್ಮ ಪ್ರದೇಶಗಳಲ್ಲಿ, ಸಿಸಿ ಕ್ಯಾಮರಾಗಳನ್ನು ಆಳವಡಿಸುವ ಬಗ್ಗೆ ಪರೀಶಿಸಲಾಗುವುದು ಎಂದರು. ಇದನ್ನೂ ಓದಿ: ನಾನೇನು ಸ್ವಂತ ಬೋಟ್‌ನಲ್ಲಿ ಹೋಗಿದ್ನಾ; ಬೇಕಿದ್ರೆ ಲಿಂಬಾವಳಿ ಕೇಳಿ?: ಸಿದ್ದು ಬೋಟ್‌ ಪ್ರಸಂಗ

    SESSION 1

    ಕೊಡಗು(Kodagu) ಜಿಲ್ಲೆಯಲ್ಲಿ 2021ರಲ್ಲಿ ಒಟ್ಟು 1,684 ಅಪರಾಧ ಪ್ರಕರಣಗಳು ದಾಖಲಾಗಿದ್ದು, 1,617 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 2022ರ ಆಗಸ್ಟ್ ತಿಂಗಳ ಅಂತ್ಯದ ವರೆಗೆ ಒಟ್ಟು 1,122 ಪ್ರಕರಣಗಳು ವರದಿಯಾಗಿವೆ ಹಾಗೂ 80 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಸದನಕ್ಕೆ ತಿಳಿಸಿದರು. ಇದನ್ನೂ ಓದಿ: ಯಾವುದೇ ಮುಲಾಜಿಲ್ಲದೆ ರಾಜಕಾಲುವೆ ತೆರವು: ಬೊಮ್ಮಾಯಿ‌

    Live Tv
    [brid partner=56869869 player=32851 video=960834 autoplay=true]

  • ಮಡಿಕೇರಿಯಲ್ಲಿ ನಡೆದ ಮೊಟ್ಟೆ ಎಸೆತ ಪ್ರಕರಣ ನನಗೆ ಗೊತ್ತಿಲ್ಲ: ಅಪ್ಪಚ್ಚು ರಂಜನ್

    ಮಡಿಕೇರಿಯಲ್ಲಿ ನಡೆದ ಮೊಟ್ಟೆ ಎಸೆತ ಪ್ರಕರಣ ನನಗೆ ಗೊತ್ತಿಲ್ಲ: ಅಪ್ಪಚ್ಚು ರಂಜನ್

    ಮಡಿಕೇರಿ: ಮಡಿಕೇರಿಯಲ್ಲಿ ನಡೆದ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆತ ಪ್ರಕರಣದ ಬಗ್ಗೆ ನನಗೆ ಗೊತ್ತಿಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ತಿಳಿಸಿದರು.

    ಸೋಮವಾರಪೇಟೆಯಲ್ಲಿ ಮಾತನಾಡಿದ ಅವರು, ಮಡಿಕೇರಿಯಲ್ಲಿ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಅವರೇ ಮಡಿಕೇರಿಯಲ್ಲಿ ನನ್ನ ಕಾರಿಗೆ ಯಾವುದೇ ಮೊಟ್ಟೆ ಎಸೆದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯನವರೇ ಹೇಳಿದ ಮೇಲೆ ಮೊಟ್ಟೆಯ ಪ್ರಶ್ನೆ ಮತ್ತೆ ಬರುವುದಿಲ್ಲ. ಸಿದ್ದರಾಮಯ್ಯ ಅವರೆ ಮಡಿಕೇರಿಯಲ್ಲಿ ಮೊಟ್ಟೆ ಬಿಸಾಡಿಲ್ಲ ಅಂದ ಮೇಲೆ ನಾನ್ಯಾಕೆ ಬಿಸಾಡಿದ್ದಾರೆ ಅನ್ನಬೇಕು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಕಾರಿನ ಮೇಲೆ ಕೊಡಗಿನ 2 ಕಡೆ ಮೊಟ್ಟೆ ದಾಳಿ

    EGG 1 1

    ಇದೀಗ ವೈರಲ್ ಆಗುತ್ತಿರುವ ವೀಡಿಯೋ ಕುರಿತು ಯಾವುದೇ ಮಾಹಿತಿ ನನಗೆ ಇಲ್ಲ. ಗುಡ್ಡೆಹೋಸೂರಿನಲ್ಲಿನ ಘಟನೆ ಮಾತ್ರ ನನಗೆ ಗೊತ್ತಿದೆ. ಈಗಾಗಲೇ ಗುಡ್ಡೆಹೋಸೂರಿನ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತ ನಾನು ಕಾಂಗ್ರೆಸ್ಸಿನವನು ಎಂದೇ ಹೇಳಿದ್ದಾನೆ. ಇದಕ್ಕೆ ಮಾಜಿ ಸಚಿವ ಜೀವಿಜಯ ಪ್ರತಿಕ್ರಿಯಿಸಿ, ಸಂಪತ್ ನಮ್ಮವನಲ್ಲ ಎಂದು ಹೇಳಿದ್ದರು. ಆದರೆ ಜೀವಿಜಯ ಅವರೊಂದಿಗೆ ಸಂಪತ್ ಇರುವ ಫೋಟೋ ಕೂಡ ವೈರಲ್ ಆಗಿದೆ. ಕಾಂಗ್ರೆಸ್ಸಿನವನು ಅಂತ ಅವನೇ ಹೇಳಿದ ಮೇಲೆ ಸಂಪತ್ ಕಾಂಗ್ರೆಸ್ಸಿಗನಲ್ಲ ಎಂದು ಅವರು ಹೇಳಲು ಆಗುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಕೊಡಗಿನಲ್ಲಿ 3 ದಿನ ನಿಷೇಧಾಜ್ಞೆ- ಮದ್ಯ ಮಾರಾಟ ನಿಷೇಧ

    Live Tv
    [brid partner=56869869 player=32851 video=960834 autoplay=true]

  • ಮೊಟ್ಟೆ ಎಸೆದ ಪ್ರಕರಣ : ಸಂಪತ್ ಯಾರು ಅಂತ ನಮಗೆ ಗೊತ್ತಿಲ್ಲ: ಕೆ.ಜಿ. ಬೋಪಯ್ಯ

    ಮೊಟ್ಟೆ ಎಸೆದ ಪ್ರಕರಣ : ಸಂಪತ್ ಯಾರು ಅಂತ ನಮಗೆ ಗೊತ್ತಿಲ್ಲ: ಕೆ.ಜಿ. ಬೋಪಯ್ಯ

    ಮಡಿಕೇರಿ: ಸಂಪತ್ ಬಿಜೆಪಿ ಕಾರ್ಯಕರ್ತನಲ್ಲ. ಬಿಜೆಪಿ ಕಾರ್ಯಕರ್ತರಿಗೂ ಮೊಟ್ಟೆ ಎಸೆದಿದ್ದಕ್ಕೂ ಸಂಬಂಧವಿಲ್ಲ ಎಂದು ಶಾಸಕ ಕೆ.ಜಿ. ಬೋಪಯ್ಯ ಹೇಳಿದ್ದಾರೆ.

    sampath

    ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಇಷ್ಟು ಕೀಳು ಮಟ್ಟಕ್ಕೆ ಇಳಿಯುವುದಿಲ್ಲ. ಸಿದ್ದರಾಮಯ್ಯನವರ ಸ್ಥಾನ ಮಾನ ನಮಗೂ ತಿಳಿದಿದೆ. ಅವರು ವಿರೋಧ ಪಕ್ಷದ ನಾಯಕರು, ಅವರನ್ನು ಶ್ಯಾಡೋ ಚೀಫ್ ಮಿನಿಸ್ಟರ್ ಅಂತ ಕೂಡ ಕರೆಯುತ್ತೇವೆ. ಅವರಿಗೆ ಪ್ರೋಟೋಕಾಲ್ ಇದೆ. ಅಂತಹ ದೊಡ್ಡ ವ್ಯಕ್ತಿ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಬಿಜೆಪಿ ಕಾರ್ಯಕರ್ತರಲ್ಲ ಎಂದು ಹತ್ತು ಬಾರಿ ಬೇಕಾದರೂ ಹೇಳುತ್ತೇನೆ ಎಂದಿದ್ದಾರೆ.

    EGG 1 1

    ಶಾಸಕ ಅಪ್ಪಚ್ಚು ರಂಜನ್ ಜೊತೆಗಿರುವ ಸಂಪತ್ ಫೋಟೋ ವೈರಲ್ ಆಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯ ಎಲ್ಲಾ ಮೆಂಬರ್ ಶಿಪ್ ಡಿಜಿಟಲ್ ಆಗಿದೆ. ಅದರಲ್ಲಿ ಸಂಪತ್ ಹೆಸರಿಲ್ಲ ಎಂದು ನಮ್ಮ ಜಿಲ್ಲಾಧ್ಯಕ್ಷರು ಪರಿಶೀಲನೆ ನಡೆಸಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣ – ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

    ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ತೋರಿಸಿ ಪ್ರತಿಭಟನೆ ನಡೆಸಿದ್ದು, ಬಿಜೆಪಿ ಕಾರ್ಯಕರ್ತರೇ, ಆದರೆ ಅದರ ಮಧ್ಯೆ ಯಾರೋ ಬಂದು ಮೊಟ್ಟೆ ಎಸೆದಿರುವುದಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ. ಯಾವ ಬಿಜೆಪಿ ಕಾರ್ಯಕರ್ತರು ಹಾಗೇ ಮಾಡುವುದಿಲ್ಲ ಎಂದು ಸ್ಪಷ್ಟನೇ ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದಿದ್ದು ಅಪ್ಪಚ್ಚು ರಂಜನ್ ಆಪ್ತ!

    ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಶಾಸಕ ಅಪ್ಪಚ್ಚು ರಂಜನ್ ಆಪ್ತ ಹಾಗೂ ಬಿಜೆಪಿ ಕಾರ್ಯಕರ್ತ ಸಂಪತ್ ಮೊಟ್ಟೆ ಎಸೆದಿದ್ದನು. ಈ ಪ್ರಕರಣ ಎಕ್ಸ್‍ಕ್ಲೂಸಿವ್ ದೃಶ್ಯ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸೋಮವಾರಪೇಟೆಯ ಲೋಡರ್ಸ್ ಕಾಲೋನಿಯ ಸಂಪತ್ ಕಳೆದ ಎರಡು ವರ್ಷಗಳಿಂದ ಬಿಜೆಪಿಯಲ್ಲಿದ್ದಾನಂತೆ. ಸಣ್ಣಪುಟ್ಟ ಕಾಮಗಾರಿಗಳ ಗುತ್ತಿಗೆ ಕೆಲಸ ಮಾಡುತ್ತಿದ್ದ ಸಂಪತ್ ಅನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

     

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರೇ – ಅಪ್ಪಚ್ಚು ರಂಜನ್

    ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ಸಿಗರೇ – ಅಪ್ಪಚ್ಚು ರಂಜನ್

    ಮಡಿಕೇರಿ: ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದು ಕಾಂಗ್ರೆಸ್ ಪಕ್ಷದವರೇ ಹೊರತು ಬಿಜೆಪಿಯವರಲ್ಲ ಎಂದು ಶಾಸಕ ಅಪ್ಪಚ್ಚು ರಂಜನ್ ಆರೋಪಿಸಿದ್ದಾರೆ.

    Appachu Ranjan 1

    ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅನಗತ್ಯವಾಗಿ ಬಿಜೆಪಿ ವಿರುದ್ಧ ಆರೋಪ ಹೊರಿಸಿ ಪ್ರಚಾರ ಗಿಟ್ಟಿಸಲು ಮುಂದಾಗಿದೆ. ಮೊಟ್ಟೆ ಎಸೆದವನು ಕಾಂಗ್ರೆಸ್ ಪಕ್ಷದವನೇ ಎಂದು ಈಗಾಗಲೇ ಪೊಲೀಸ್ ತನಿಖೆಯಲ್ಲಿ ಗೊತ್ತಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇಂದು 1,573 ಕೇಸ್, 3 ಸಾವು – ಏಕೈಕ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ

    DWD 4

    ಟಿಪ್ಪು ಜಯಂತಿ ಮೂಲಕ ಹಿಂದೂಗಳ ಭಾವನೆ ಕೆರಳಿಸಿದ ಕುಖ್ಯಾತಿ ಸಿದ್ದರಾಮಯ್ಯ ಅವರದ್ದು. ಸಿದ್ದರಾಮಯ್ಯ ವಿರುದ್ಧ ಕೊಡಗಿನ ಜನರ ಮನೆಮನೆಯಲ್ಲೂ ಆಕ್ರೋಶ ಇದೆ. ಆದ್ದರಿಂದಲೇ ಅವರ ಕೊಡಗು ಭೇಟಿ ಸಂದರ್ಭ ಬಿಜೆಪಿ ಕಾರ್ಯಕರ್ತರು ಪ್ರಜಾಪ್ರಭುತ್ವದ ಹಕ್ಕಿನ ರೀತಿಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ. ಮೊಟ್ಟೆ ಎಸೆಯುವ ಕಾರ್ಯಕ್ಕೆ ಬಿಜೆಪಿ ಕಾರ್ಯಕರ್ತರು ಮುಂದಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮಡಿಕೇರಿಗೆ ತೆರಳುತ್ತಿದ್ದ KSRTC ಬಸ್ ಅಪಘಾತ – ಜನರ ರಕ್ಷಣೆಗೆ ಮುಂದಾದ ಅಪ್ಪಚ್ಚು ರಂಜನ್

    ಮಡಿಕೇರಿಗೆ ತೆರಳುತ್ತಿದ್ದ KSRTC ಬಸ್ ಅಪಘಾತ – ಜನರ ರಕ್ಷಣೆಗೆ ಮುಂದಾದ ಅಪ್ಪಚ್ಚು ರಂಜನ್

    ಮಡಿಕೇರಿ: ಹಾಸನದಿಂದ ಮಡಿಕೇರಿಗೆ ಬರುತ್ತಿದ್ದ ಕೆಎಸ್‍ಆರ್‌ಟಿಸಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದ್ದು, ಬಸ್‍ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಆನೆಕಾಡು ತೊಂಡೂರು ಬಳಿ ನಡೆದಿದೆ.

    madikeri

    ಇಂದು ಬೆಳಗ್ಗೆ ಹಾಸನದಿಂದ ಮಡಿಕೇರಿ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ಕುಶಾಲನಗರದ ಆನೆಕಾಡು ತೊಂಡೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಒಂದು ಬದಿಗೆ ಬಸ್ಸು ವಾಲಿದೆ. ಇದರಿಂದಾಗಿ ಬಸ್ಸಿನೊಳಗಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ. ಇದನ್ನೂ ಓದಿ: ಕೈ ನಾಯಕರ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆ, ಸಿಡಿಗಳೂ ಇದೆ – ಪ್ರಿಯಾಂಕ್‍ಗೆ ಬಿಜೆಪಿ ತಿರುಗೇಟು

    ಇದೇ ವೇಳೆ ಕುಶಾಲನಗರ ಮಾರ್ಗವಾಗಿ ಬರುತ್ತಿದ್ದ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಅವರು ಬಸ್ಸು ಅವಘಡವನ್ನು ಕಂಡು ಸಾರ್ವಜನಿಕರೊಂದಿಗೆ ಸೇರಿ ಜನರ ರಕ್ಷಣೆಗೆ ಮುಂದಾದರು. ಬಸ್ಸು ಒಂದು ಕಡೆ ವಾಲಿದ್ದರಿಂದ ಬಸ್ಸಿನ ತುರ್ತು ಬಾಗಿಲು ತೆರೆದು ಪೊಲೀಸರು ಜನರ ರಕ್ಷಣೆಯನ್ನು ಮಾಡಿದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ಕುಶಾಲನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಮಡಿಕೇರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಬಸ್ಸು ಅಪಘಾತಕ್ಕೆ ಸಂಬಂಧಿಸಿದಂತೆ ಕುಶಾಲನಗರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ರಾಖಿ ಕಟ್ಟಿಸಿಕೊಳ್ಳಲು ಸಹೋದರಿ ಮನೆಗೆ ಹೊರಟ್ಟಿದ್ದವನ ಜೀವ ತೆಗೆದ ಗಾಳಿಪಟ ದಾರ

    Live Tv
    [brid partner=56869869 player=32851 video=960834 autoplay=true]