Tag: ಅಲಿಗಢ ಮುಸ್ಲಿಂ ವಿಶ್ವವಿದ್ಯಾಲ

  • ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ಐಸಿಸ್ ಉಗ್ರರೊಂದಿಗೆ ನಂಟು- ವಿದ್ಯಾರ್ಥಿ ಅರೆಸ್ಟ್

    ನವದೆಹಲಿ: ನಿಷೇಧಿತ ಭಯೋತ್ಪಾದಕ ಐಎಸ್‍ಐಎಸ್‍ನೊಂದಿಗೆ (ISIS) ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ (Uttar Pradesh) ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (Aligarh Muslim University) ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.

    ಬಂಧಿತನನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ (19) ಎಂದು ಗುರುತಿಸಲಾಗಿದೆ. ಈತನ ಮನೆಯನ್ನು ಶೋಧಿಸಿ ಸರಿಯಾದ ಪುರಾವೆಗಳು ಸಿಕ್ಕಿದ ನಂತರ ಬಂಧಿಸಲಾಗಿದೆ. ಫೈಜ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ

    ಎರಡು ದಿನಗಳಿಂದ ಜಾಖರ್ಂಡ್‍ನ (Jharkhand) ಲೋಹರ್ಡಗಾ ಜಿಲ್ಲೆಯ ಫೈಜ್ ಮನೆ ಮತ್ತು ಉತ್ತರ ಪ್ರದೇಶದ ಅಲಿಗಢದಲ್ಲಿ ಬಾಡಿಗೆ ಕೊಠಡಿಯಲ್ಲಿ ಶೋಧ ನಡೆಸಲಾಗಿತ್ತು. ಈ ವೇಳೆ ಹಲವಾರು ಎಲೆಕ್ಟ್ರಾನಿಕ್ ಉಪಕರಣಗಳು, ಅನುಮಾನಾಸ್ಪದ ವಸ್ತುಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ರಚಿಸಿ ಮಾಹಿತಿ ಹಂಚುತ್ತಿದ್ದ. ಅಲ್ಲದೇ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಯೋಜಿಸಿದ್ದ. ತನಿಖೆ ವೇಳೆ ಆತನ ಜೊತೆ ಹಲವು ಸಹಚರರು ಐಸಿಸ್ ಜೊತೆ ಕೈ ಜೊಡಿಸಿರುವುದು ಬೆಳಕಿಗೆ ಬಂದಿದೆ.

    ಫೈಜ್ ವಿದೇಶಿ ಮೂಲದ ಐಸಿಸ್ ಉಗ್ರರ ಸಂಪರ್ಕದಲ್ಲಿದ್ದಾನೆ. ಉಗ್ರರ ಸೂಚನೆಯಂತೆ ಸಂಘಟನೆಗೆ ಯುವಕರನ್ನು ಸೆಳೆಯವ ಕಾರ್ಯದಲ್ಲಿ ಆರೋಪಿಯ ಪಾತ್ರವಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮದರಸಾಗಳನ್ನು ಧ್ವಂಸಗೊಳಿಸುವಂತೆ ಕರೆ ನೀಡಿದ್ದ ಯತಿ ನರಸಿಂಹಾನಂದ ವಿರುದ್ಧ FIR

    ಮದರಸಾಗಳನ್ನು ಧ್ವಂಸಗೊಳಿಸುವಂತೆ ಕರೆ ನೀಡಿದ್ದ ಯತಿ ನರಸಿಂಹಾನಂದ ವಿರುದ್ಧ FIR

    ಲಕ್ನೋ: ಮದರಸಾಗಳು ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯವನ್ನು ಧ್ವಂಸಗೊಳಿಸುವಂತೆ ಕರೆ ನೀಡಿ ವಿವಾದ ಸೃಷ್ಟಿಸಿದ್ದ ಧರ್ಮಪ್ರಚಾರಕ ಯತಿ ನರಸಿಂಹಾನಂದ ಸರಸ್ವತಿ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

    ಭಾನುವಾರ ನಡೆದ ಮಹಾಸಭೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಲಿಗಡಕ್ಕೆ ಯತಿ ನರಸಿಂಹಾನಂದ ಅವರು ಆಗಮಿಸಿದ್ದರು. ಈ ವೇಳೆ ಉತ್ತರ ಪ್ರದೇಶ ಸರ್ಕಾರದಿಂದ ಮಾನ್ಯತೆ ಪಡೆಯದ ಮದರಸಾಗಳ ಕುರಿತಂತೆ ನಡೆಯುತ್ತಿರುವ ಸಮೀಕ್ಷೆಯ ಬಗ್ಗೆ ಮಾತನಾಡಿದ ಅವರು, ಮದರಸಾದಂತಹ ಸಂಸ್ಥೆ ಇರಬಾರದು. ಚೀನಾ ಮಾಡುವಂತೆ ಎಲ್ಲಾ ಮದರಸಾಗಳನ್ನು ಗನ್‍ಪೌಡರ್‌ನಿಂದ ಸ್ಫೋಟಿಸಬೇಕು. ಎಲ್ಲಾ ಮದರಸಾಗಳ ವಿದ್ಯಾರ್ಥಿಗಳನ್ನು ಶಿಬಿರಗಳಿಗೆ ಕಳುಹಿಸಬೇಕು. ಇದರಿಂದ ಅವರ ಮೆದುಳಿನಿಂದ ಕುರಾನ್ ಎಂಬ ವೈರಸ್ ಅನ್ನು ತೆಗೆದುಹಾಕಬಹುದು ಎಂದು ಹೇಳಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.  ಇದನ್ನೂ ಓದಿ: ರಷ್ಯಾದಿಂದ ಡಿಸ್ಕೌಂಟ್‌ ಬೆಲೆಯಲ್ಲಿ ತೈಲ – 35 ಸಾವಿರ ಕೋಟಿ ಗಳಿಸಿದ ಭಾರತ

    Yati Narsinghanand 1

    ನಂತರ ಮದರಸಾಗಳಂತೆ ಅಲಿಗಢ ಮುಸ್ಲಿಂ ವಿಶ್ವವಿದ್ಯಾನಿಲಯವನ್ನು (ಎಎಂಯು) ಸ್ಫೋಟಗೊಳಿಸಬೇಕು. ಅಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬಂಧನ ಕೇಂದ್ರಗಳಿಗೆ ಕಳುಹಿಸಬೇಕು ಮತ್ತು ಅವರ ಮೆದುಳಿಗೆ ಚಿಕಿತ್ಸೆ ಕೊಡಿಸಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಸ್ನಾನದ ವೀಡಿಯೋ ಲೀಕ್‌ ಬೆನ್ನಲ್ಲೇ ಹಾಸ್ಟೆಲ್‌ ತೊರೆಯುತ್ತಿರುವ ವಿದ್ಯಾರ್ಥಿನಿಯರು – 5 ದಿನ ವಿವಿ ಬಂದ್‌

    ಯತಿ ನರಸಿಂಹಾನಂದ ಅವರು ದ್ವೇಷಪೂರಿತ ಭಾಷಣ ಮಾಡುತ್ತಿರುವುದು ಇದೇ ಮೊದಲಲ್ಲ. ಕಳೆದ ವರ್ಷ ಹರಿದ್ವಾರದಲ್ಲೂ ದ್ವೇಷಪೂರಿತ ಭಾಷಣ ಮಾಡಿದ ಆರೋಪದಡಿ ಅವರನ್ನು ಬಂಧಿಸಲಾಗಿತ್ತು. ನಂತರದ ದಿನಗಳಲ್ಲಿ ಬಿಡುಗಡೆ ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]