Tag: ಆಸ್ಪತ್ರೆ

  • ದಕ್ಷಿಣ ದೆಹಲಿಯ 3 ಮಾಲ್, ಒಂದು ಆಸ್ಪತ್ರೆಗೆ ಬಾಂಬ್ ಬೆದರಿಕೆ

    ದಕ್ಷಿಣ ದೆಹಲಿಯ 3 ಮಾಲ್, ಒಂದು ಆಸ್ಪತ್ರೆಗೆ ಬಾಂಬ್ ಬೆದರಿಕೆ

    ನವದೆಹಲಿ: ಗುರುಗ್ರಾಮ್‌ನ (Gurugram) ಆಂಬಿಯೆನ್ಸ್ ಮಾಲ್‌ನಲ್ಲಿ ಹುಸಿ ಬಾಂಬ್ ಬೆದರಿಕೆ (Bomb Threat) ಬೆನ್ನಲ್ಲೇ ದಕ್ಷಿಣ ದೆಹಲಿಯ ಮೂರು ಮಾಲ್‌ಗಳು ಮತ್ತು ಒಂದು ಆಸ್ಪತ್ರೆಗೆ ಸೋಮವಾರ ಇ-ಮೇಲ್ (E-mail) ಮೂಲಕ ಬಾಂಬ್ ಬೆದರಿಕೆ ಬಂದಿದೆ. ಬಾಂಬ್ ಬೆದರಿಕೆ ಬೆನ್ನಲ್ಲೇ ಜನರನ್ನು ಸ್ಥಳಾಂತರಿಸಿ, ಸ್ಥಳ ಪರಿಶೀಲನೆ ನಡೆಸಲಾಯಿತು.

    ಚಾಣಕ್ಯಪುರಿಯ ಚಾಣಕ್ಯ ಮಾಲ್, ಸಾಕೇತ್‌ನಲ್ಲಿರುವ ಸೆಲೆಕ್ಟ್ ಸಿಟಿ ವಾಕ್, ವಸಂತ್ ಕುಂಜ್‌ನಲ್ಲಿರುವ ಆಂಬಿಯೆನ್ಸ್ ಮಾಲ್ ಮತ್ತು ಚಾಣಕ್ಯಪುರಿಯಲ್ಲಿರುವ ಪ್ರೈಮಸ್ ಆಸ್ಪತ್ರೆ ಸೇರಿ ಇತರ ಕೆಲವು ಸ್ಥಳಗಳಲ್ಲಿ ಬಾಂಬ್ ಬೆದರಿಕೆಯ ಕುರಿತು ಮಾಹಿತಿ ಪಡೆದಿರುವುದಾಗಿ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲು SIT ಪತ್ರ ಬರೆದಿದೆ: ಸಿದ್ದರಾಮಯ್ಯ

    Bomb Threat Call

    ಇ-ಮೇಲ್‌ನಲ್ಲಿ ಬರೆಯಲಾದ ಬೆದರಿಕೆಯು ಕೆಲವೇ ಗಂಟೆಗಳಲ್ಲಿ ಬಾಂಬ್ ಸ್ಫೋಟಗೊಳ್ಳುತ್ತದೆ ಎಂದು ಉಲ್ಲೇಖಿಸಿತ್ತು. ಈ ಹಿನ್ನೆಲೆ ಭದ್ರತಾ ಸಿಬ್ಬಂದಿ ಅಲ್ಲಿರುವ ಜನರನ್ನು ಸ್ಥಳಾಂತರಿಸಿದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿದರು. ಈ ವೇಳೆ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಇದನ್ನು ಹುಸಿ ಬಾಂಬ್ ಬೆದರಿಕೆ ಎಂದು ನಿರ್ಧರಿಸಲಾಯಿತು. ಇದನ್ನೂ ಓದಿ: ರಾಜ್ಯಪಾಲರನ್ನು ನಮ್ಮ ನಾಯಕರು ನಿಂದನೆ ಮಾಡಿಲ್ಲ, ಇರೋದನ್ನೆ ಹೇಳಿದ್ದಾರೆ: ಸಿದ್ದರಾಮಯ್ಯ

    ಆ.17 ರಂದು ಗುರುಗ್ರಾಮ್‌ನಲ್ಲಿರುವ ಆಂಬಿಯೆನ್ಸ್ ಮಾಲ್ ಮ್ಯಾನೇಜ್‌ಮೆಂಟ್‌ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಇಮೇಲ್ ಕಳುಹಿಸಿದವರು ಕಟ್ಟಡದಲ್ಲಿರುವ ಪ್ರತಿಯೊಬ್ಬರನ್ನು ಕೊಲ್ಲಲು ಬಾಂಬ್‌ಗಳನ್ನು ಇಡಲಾಗಿದೆ ಎಂದು ಹೇಳಿದ್ದರು. ಮಾಲ್‌ನಲ್ಲಿ ಶೋಧ ನಡೆಸಿದ ಬಳಿಕ ಯಾವುದೇ ಸ್ಫೋಟಕ, ಬಾಂಬ್ ಪತ್ತೆಯಾಗಿರಲಿಲ್ಲ. ಇದನ್ನೂ ಓದಿ: ದೇವರಾಜ್ ಅರಸ್ ಅವರಿಗೆ ಮರಣೋತ್ತರ ಭಾರತ ರತ್ನ ನೀಡಲು ಕೇಂದ್ರಕ್ಕೆ ಶಿಫಾರಸು- ಸಿದ್ದರಾಮಯ್ಯ

    ಅದೇ ದಿನ ನೋಯ್ಡಾದ ಡಿಎಲ್‌ಎಫ್ ಮಾಲ್ ಆಫ್ ಇಂಡಿಯಾದ ಅಧಿಕಾರಿಗಳು ಕಟ್ಟಡದಿಂದ ಜನರನ್ನು ಸ್ಥಳಾಂತರಿಸಿದರು. ಇದು ಭಯದ ವಾತಾವರಣವನ್ನು ಸೃಷ್ಟಿಸಿತ್ತು. ಬಳಿಕ ಮಾಲ್‌ನ ಭದ್ರತೆಯನ್ನು ಪರಿಶೀಲಿಸಲು ಅಣಕು ಡ್ರಿಲ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಆ.2ರಂದು ಗ್ರೇಟರ್ ಕೈಲಾಶ್‌ನ ಶಾಲೆಗೆ ಇ-ಮೇಲ್ ಬಾಂಬ್ ಬೆದರಿಕೆ ಬಂದಿತ್ತು. ಅದರಲ್ಲಿ ಕಟ್ಟಡವನ್ನು ಸ್ಫೋಟಿಸಲಾಗುವುದು ಎಂದು ಬೆದರಿಸಲಾಗಿತ್ತು. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಹುಮತ ಬಂದ್ರೆ ಬಿಜೆಪಿ ತಂದಿದ್ದ ಭೂ ಕಂದಾಯ ಕಾಯ್ದೆ ರದ್ದು ಮಾಡ್ತೀನಿ: ಸಿದ್ದರಾಮಯ್ಯ

  • ಆಸ್ಪತ್ರೆಯಿಂದ ಹೆಚ್‌ಡಿಕೆ ಡಿಸ್ಚಾರ್ಜ್; ನಾನು ಕ್ಷೇಮವಾಗಿದ್ದೇನೆ, ಆತಂಕ ಬೇಡ ಎಂದ ಕೇಂದ್ರ ಸಚಿವ

    ಆಸ್ಪತ್ರೆಯಿಂದ ಹೆಚ್‌ಡಿಕೆ ಡಿಸ್ಚಾರ್ಜ್; ನಾನು ಕ್ಷೇಮವಾಗಿದ್ದೇನೆ, ಆತಂಕ ಬೇಡ ಎಂದ ಕೇಂದ್ರ ಸಚಿವ

    – ಆತಂಕ ಬೇಡ, ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ: ಹೆಚ್‌ಡಿಕೆ

    ಬೆಂಗಳೂರು: ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಇದೀಗ ಚಿಕಿತ್ಸೆ ಪಡೆದು ಜಯನಗರದ ಅಪೋಲೋ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು.

    HDK 1

    ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರೂ ಆತಂಕಕ್ಕೆ ಒಳಗಾಗೋದು ಬೇಡ. ಭಗವಂತ, ನಿಮ್ಮ ಆಶೀರ್ವಾದ ಇರುವವರೆಗೆ ಯಾವುದೇ ಅಪಾಯವಿಲ್ಲ. ಮೂರು ಬಾರಿ ವಾಲ್ ರಿಪ್ಲೇಸ್‌ಮೆಂಟ್ ಆಗಿದೆ. ಬ್ಲಡ್ ಥಿನ್ನರ್ ತೆಗೆದುಕೊಳ್ಳುತ್ತೇನೆ. ಒತ್ತಡಗಳು ಜಾಸ್ತಿಯಾದಾಗ ಮೂಗಿನಿಂದ ರಕ್ತಸ್ರಾವ ಆಗೋದು ಸಹಜ. ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಿ ಎಂದು ವೈದ್ಯರು ಸಲಹೆ ನೀಡಿದ್ದಾರೆ. ವಿಶ್ರಾಂತಿ ತೆಗೆದುಕೊಳ್ಳುವುದು ಸೂಕ್ತ ಎಂದು ಡಾಕ್ಟರ್ ಹೇಳಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

    BJP JDS 2

    ಕೇಂದ್ರದಿಂದ ರಾಜ್ಯಕ್ಕೆ, ಜನರಿಗೆ ಕೊಡುಗೆ ಕೊಡಬೇಕು. ನನ್ನ ಆರೋಗ್ಯ ಸಂಪೂರ್ಣ ಕೆಟ್ಟಿಲ್ಲ. ಪಾದಯಾತ್ರೆಗೆ ಇನ್ನೂ ಒಂದು ವಾರ ಇದೆ. ಆಮೇಲೆ ನೋಡೋಣ. ಅಂತಹ ಸಂದರ್ಭ ಬಂದರೆ ನಿಖಿಲ್ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತಾರೆ. ಸೋಮವಾರ ರಾಜ್ಯಸಭೆಯಲ್ಲಿ ಕಾವೇರಿ ನೀರಿನ ಪ್ರಸ್ತಾಪ ಬಂದೇ ಬರುತ್ತದೆ. ತಮಿಳುನಾಡಿನ ಬೇರೆ ಬೇರೆ ಪಕ್ಷದ ನಾಯಕರು ದೇವೇಗೌಡರ ಭಾಷಣಕ್ಕೆ ಹಲವು ವರ್ಷಗಳಿಂದ ಅಡ್ಡಿಪಡಿಸುತ್ತಾ ಬರುತ್ತಿದ್ದಾರೆ. ನಾನು ಈ ಸಂದರ್ಭ ಅವರ ಜೊತೆ ಇರಬೇಕು ಅನ್ನೋದು ನನ್ನ ಆಸೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಹೆಚ್‌ಡಿಕೆಗೆ ಏನಾಗಿತ್ತು?
    ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಕೂಡಲೇ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

  • ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡ್ತಿದ್ದಾರೆ – ನಿಖಿಲ್‌ ಭಾವುಕ

    ನನ್ನ ತಂದೆ ಆರೋಗ್ಯ ಲೆಕ್ಕಿಸದೇ ಜನರಿಗಾಗಿ ಕೆಲಸ ಮಾಡ್ತಿದ್ದಾರೆ – ನಿಖಿಲ್‌ ಭಾವುಕ

    ಬೆಂಗಳೂರು: ನನ್ನ ತಂದೆ ಆರೋಗ್ಯವಾಗಿದ್ದಾರೆ. ಆರೋಗ್ಯ (Health) ಲೆಕ್ಕಿಸದೇ ಸಂಸತ್‌ನಲ್ಲಿ ಮಾತಾಡಿದ್ದಾರೆ. ರಾಜ್ಯದ ಜನರಿಗೆ ಏನಾದರೂ ಮಾಡಬೇಕು ಅಂತ ಕೆಲಸ ಮಾಡ್ತಿದ್ದಾರೆ. ಕಳೆದ 15 ದಿನಗಳಿಂದ ನಿರಂತರ ಓಡಾಟ ಇತ್ತು. ಕೆಲಸದ ಒತ್ತಡದಿಂದ ಮೂಗಿನಲ್ಲಿ ರಕ್ತಸ್ರಾವ ಆಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿಕೆ ಪುತ್ರ ನಿಖಿಲ್‌ ಕುಮಾರಸ್ವಾಮಿ (Nikhil KumaraSwamy)ಹೇಳಿದ್ದಾರೆ.

    ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್‌ ನಾಯಕರ ಸಭೆಯಲ್ಲಿ (BJP JDS Meet) ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರಿಗೆ ದಿಢೀರನೆ ಮೂಗಿನಿಂದ ರಕ್ತಸ್ರಾವ ಉಂಟಾಗಿತ್ತು. ಈ ಕುರಿತು ಮಾಧ್ಯಮಗಳೊಂದಿಗೆ ನಿಖಿಲ್‌ ಮಾತನಾಡಿದ್ದಾರೆ. ಇದನ್ನೂ ಓದಿ: Women’s Asia Cup 2024: ಲಂಕಾ ಚಾಂಪಿಯನ್‌ – 20 ವರ್ಷಗಳ ಬಳಿಕ ಟ್ರೋಫಿ ಗೆದ್ದ ಸಿಂಹಳಿಯರು

    HDK 1

    ಬಿಜೆಪಿ-ಜೆಡಿಎಸ್‌ ನಾಯಕರೊಟ್ಟಿಗಿನ ಸಭೆಯ ಬಳಿಕ ಸುದ್ದಿಗೋಷ್ಠಿ ವೇಳೆ ತಂದೆಗೆ ಮೂಗಿನಿಂದ ರಕ್ತ ಬಂದಿದೆ. ಜನ ಆತಂಕಪಡೋದು ಬೇಡ. ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಕೆಲಸದ ಒತ್ತಡಗಳು ಇದ್ದವು. ಕಳೆದ 15 ದಿನಗಳಿಂದ ನಿರಂತರ ಓಡಾಟ ಇತ್ತು. ಬೆಳಗ್ಗೆ 4.30ಕ್ಕೆ ಎದ್ದೇಳುತ್ತಿದ್ರು, ಮಲಗೋದು ರಾತ್ರಿ 1 ಗಂಟೆ ಆಗುತ್ತಿತ್ತು. ಡಾಕ್ಟರ್ ಕೂಡ ಆತಂಕ ಬೇಡ ಅಂತ ಹೇಳಿದ್ದಾರೆ. ಯಾವ ರೀತಿ ಚಿಕಿತ್ಸೆ ಕೊಡಬೇಕು ಅಂತ ಪರೀಕ್ಷೆ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಕುಮಾರಣ್ಣ ಆರೋಗ್ಯವಾಗಿದ್ದಾರೆ. ಸಣ್ಣ ಪುಟ್ಟ ಏರುಪೇರು ಸಾಮಾನ್ಯ. ಆರೋಗ್ಯ ಲೆಕ್ಕಿಸದೇ ಸಂಸತ್‌ನಲ್ಲಿ ಮಾತಾಡಿದ್ದಾರೆ. ರಾತ್ರಿ ಪುಸ್ತಕಗಳನ್ನ ಓದುತ್ತಾರೆ. ರಾಜ್ಯದ ಜನರಿಗೆ ಏನಾದರೂ ಮಾಡಬೇಕು ಅಂತ ಕೆಲಸ ಮಾಡ್ತಿದ್ದಾರೆ. ಈಶ್ವರನ ನಂಬಿಕೊಂಡಿದ್ದೇವೆ, ಜನ, ರೈತರ ಆಶೀರ್ವಾದ ಇದೆ. ಇಂದು (ಭಾನುವಾರ) ರಾತ್ರಿಯೇ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    BJP JDS 2

    ವೈದ್ಯರು ಹೇಳಿದ್ದೇನು?
    ಕುಮಾರಸ್ವಾಮಿ ಅವರಿಗೆ ಮೂರು ಸಲ ಹೃದಯದ ಚಿಕಿತ್ಸೆ ನೀಡಲಾಗಿದೆ. ಬ್ಲಡ್ ಥಿನ್ನರ್‌ ಮಾತ್ರೆ ತೆಗೆದುಕೊಳ್ಳುತ್ತಾ ಇದ್ದರು. ಏನೂ ಆತಂಕ ಪಡುವ ಅಗತ್ಯವಿಲ್ಲ. ರೊಟಿನ್‌ ಚೆಕಪ್‌ ಮಾಡಿದ್ದೇವೆ. ಅಡ್ಮಿಷನ್‌ ಆಗಿಲ್ಲ. ತಪಾಸಣೆ ಮುಗಿಸಿ ಹೊರಡುತ್ತಾರೆ ಅಂತಾ ಜಯನಗರ ಆಪೋಲೋ ಆಸ್ಪತ್ರೆ ವೈದ್ಯ ಯತೀಶ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ | ಸಿಎಂ ರಾಜೀನಾಮೆಗೆ ಆಗ್ರಹಿಸಿ ಆ.3ರಿಂದ ಬಿಜೆಪಿ-ಜೆಡಿಎಸ್ ಪಾದಯಾತ್ರೆ

    ಹೆಚ್‌ಡಿಕೆ ಏನಾಯ್ತು?
    ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಕೂಡಲೇ ಅವರನ್ನು ನಗರದ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಯಿತು.

  • ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಹೆಚ್‌ಡಿಕೆಗೆ ದಿಢೀರ್‌ ರಕ್ತಸ್ರಾವವಾಗಲು ಕಾರಣವೇನು? – ಬ್ಲಡ್‌ ಥಿನ್ನರ್‌ ಔಷಧಿ ತೆಗೆದುಕೊಳ್ಳುತ್ತಿದ್ದದ್ದು ಏಕೆ?

    ಬೆಂಗಳೂರು: ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿದ್ದ ಬಿಜೆಪಿ-ಜೆಡಿಎಸ್‌ ನಾಯಕರ ಸಭೆಯಲ್ಲಿ (BJP-JDS Meet) ಮಾತನಾಡುತ್ತಿದ್ದ ವೇಳೆ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ದಿಢೀರನೆ ಮೂಗಿನಿಂದ ರಕ್ತಸ್ರಾವ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೆಚ್‌ಡಿಕೆಗೆ ರಕ್ತಸ್ರಾವ (Bleeding) ಉಂಟಾಗಲು ಕಾರಣ ಏನೂ ಎಂಬುದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

    ಹೌದು. ಕುಮಾರಸ್ವಾಮಿ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇರುವುದರಿಂದ ಅವರು ಬ್ಲಡ್‌ ಥಿನ್ನರ್‌ (blood thinner) ಔಷಧಿ ತೆಗೆದುಕೊಳ್ಳುತ್ತಿದ್ದರು. ಬ್ಲಡ್‌ ಥಿನ್ನರ್‌ನಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಿದೆಯಾ? ಅಥವಾ ನಿಖರ ಕಾರಣ ಏನು ಎಂಬುದನ್ನು ವೈದ್ಯರು ಸದ್ಯದಲ್ಲೇ ತಿಳಿಸಲಿದ್ದಾರೆ ಎಂದು ಹೆಚ್‌ಡಿಕೆ ಆಪ್ತರು ತಿಳಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ನಿರ್ಮಲಾ ಸೀತಾರಾಮನ್

    HDK 1

    ಸದ್ಯ ಹೆಚ್‌ಡಿಕೆ ಅವರನ್ನ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

    ಏನಿದು ಬ್ಲಡ್‌ ಥಿನ್ನರ್‌? ‌
    ಬ್ಲಡ್‌ ಥಿನ್ನರ್‌ ಎಂಬುದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯುವ ಔಷಧಿಯಾಗಿದೆ. ಮನುಷ್ಯನ ದೇಹದಲ್ಲಿ ರಕ್ತವನ್ನು ತೆಳುವಾಗಿಸುವುದಕ್ಕೆ ಈ ಔಷಧವನ್ನು ಬಳಸುತ್ತಾರೆ. ಬ್ಲಡ್‌ ಥಿನ್ನರ್‌ ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆದು ಹೃದಯಾಘಾತ, ಪಾರ್ಶ್ವವಾಯು ಮೊದಲಾದ ಅಪಾಯವನ್ನುಂಟುಮಾಡದಂತೆ ತಡೆಯುತ್ತದೆ. ವೈದ್ಯರ ಸಲಹೆ ಮೇರೆಗೆ ಮಾತ್ರವೇ ಇದನ್ನು ಬಳಸಬಹುದಾಗಿದೆ. ವೈದ್ಯರ ಸಲಹೆ ಇಲ್ಲದೆಯೇ ಈ ಔಷಧ ಸೇವಿಸಿದರೆ, ರಕ್ತಸ್ರಾವದಂತಗ ಅಡ್ಡಪರಿಣಾಮಗಳು ಉಂಟಾಗುತ್ತವೆ ಎಂದು ಸಂಬಂಧಪಟ್ಟ ವೈದ್ಯರು ಹೇಳಿದ್ದಾರೆ.

    HDK 4

    ಕುಮಾರಸ್ವಾಮಿ ಅವರು 2024ರ ಲೋಕಸಭಾ ಚುನಾವಣೆಗೂ ಮುನ್ನ ಮಾರ್ಚ್‌ನಲ್ಲಿ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಕಾಲಿನ ರಕ್ತನಾಳದ ಮೂಲಕ ಹೃದಯ ಕವಾಟ ಬದಲಾವಣೆ ಎಂದು ಡಾ.ಸಿ.ಎನ್‌ ಮಂಜುನಾಥ್‌ ತಿಳಿಸಿದ್ದರು. ಅದಕ್ಕೂ ಮುನ್ನ ಅವರಿಗೆ ಅನಾರೋಗ್ಯ ಕಾಣಿಸಿಕೊಂಡಿತ್ತು. ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

  • ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

    ಕೇಂದ್ರ ಸಚಿವ ಹೆಚ್‌ಡಿಕೆಗೆ ಮೂಗಿನಿಂದ ‌ದಿಢೀರ್‌ ರಕ್ತಸ್ರಾವ – ಆಸ್ಪತ್ರೆಗೆ ಕರೆದೊಯ್ದ ಸಿಬ್ಬಂದಿ

    ಬೆಂಗಳೂರು: ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ (HD Kumaraswamy) ಅವರು ಸಭೆಯಲ್ಲಿ ಮಾತನಾಡುತ್ತಿದ್ದ ವೇಳೆ ಮೂಗಿನಿಂದ ದಿಢೀರ್‌ ರಕ್ತಸ್ರಾವ ಉಂಟಾಗಿದೆ. ಇದರಿಂದ ಆತಂಕಗೊಂಡ ಸಿಬ್ಬಂದಿ ತಕ್ಷಣವೇ ಆಸ್ಪತ್ರೆಗೆ (Hospital) ಕರೆದೊಯ್ದಿದ್ದಾರೆ.

    HDK 4

    ಮುಡಾ ಅಕ್ರಮವನ್ನು ಖಂಡಿಸಿ ರಾಜ್ಯ ಸರ್ಕಾರದ (Karnataka Govt) ವಿರುದ್ಧ ಮೈಸೂರಿನಿಂದ ಪಾದಯಾತ್ರೆ ಹಮ್ಮಿಕೊಳ್ಳಲು ಬೆಂಗಳೂರಿನ ಖಾಸಗಿ ಹೋಟೆಲ್‌ (Private Hotel) ಒಂದರಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರು (BJP JDS Leader) ಜಂಟಿಯಾಗಿ ಸಭೆ ನಡೆಸಿದ್ದರು. ಸಭೆಯಲ್ಲಿ ಹೆಚ್‌.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್‌. ಅಶೋಕ್‌ ಸೇರಿದಂತೆ ಅನೇಕ ನಾಯಕರು ಪಾಲ್ಗೊಂಡಿದ್ದರು. ಸಭೆಯನ್ನುದ್ದೇಶಿಸಿ ಹೆಚ್‌ಡಿಕೆ ಮಾತನಾಡುತ್ತಿದ್ದಂತೆ ದಿಢೀರ್‌ ಅಂತ ಮೂಗಿನಿಂದ ರಕ್ತಸ್ರಾವ ಉಂಟಾಯಿತು. ಇದನ್ನೂ ಓದಿ: ಕೋಚಿಂಗ್ ಸೆಂಟರ್‌ಗೆ ಮಳೆ ನೀರು ನುಗ್ಗಿ ಮೂವರು UPSC ಆಕಾಂಕ್ಷಿಗಳು ಸಾವು – ಮಾಲೀಕ ಸೇರಿ ಇಬ್ಬರು ಅರೆಸ್ಟ್‌

    ರಕ್ತಸ್ರಾವದ ಪ್ರಮಾಣ ಇದ್ದಕ್ಕಿದ್ದಂತೆ ಹೆಚ್ಚಾಗತೊಡಗಿತು. ಇದರಿಂದ ಆತಂಕಗೊಂಡ ಕಾರ್ಯಕರ್ತರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ಮೂಗಿಗೆ ಕರ್ಚೀಫ್‌ ಹಿಡಿದುಕೊಂಡೇ ಕಾರಿನಲ್ಲಿ ಹೆಚ್‌ಡಿಕೆ ಜಯನಗರ ಅಪೋಲೋ ಆಸ್ಪತ್ರೆಗೆ ಹೊರಟರು. ಕಾರು ತೆರಳುವಷ್ಟರಲ್ಲಿ ಬಟ್ಟೆಯೆಲ್ಲಾ ರಕ್ತದ ಕಲೆಯಾಗಿತ್ತು. ಇದನ್ನೂ ಓದಿ: ವಾಲ್ಮೀಕಿ ನಿಗಮ ಅಕ್ರಮದಲ್ಲಿ ಬ್ಯಾಂಕ್ ಅಧಿಕಾರಿಗಳ ತಪ್ಪು ಸಾಬೀತಾದ್ರೆ ಕ್ರಮ ಖಚಿತ: ನಿರ್ಮಲಾ ಸೀತಾರಾಮನ್

  • ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

    ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

    ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ (Fake Doctor) ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ (Bagalkot District) 384 ಜನರು ನಕಲಿ ವೈದ್ಯರು ಇರುವುದು ಪತ್ತೆಯಾಗಿದೆ.

    ಅಚ್ಚರಿ ಅಂದರೆ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಬಿಎ, ಬಿಕಾಂ ಓದಿದವರು ವೈದ್ಯರಾಗಿದ್ದಾರೆ. ಇದು ಜಿಲ್ಲೆಯಲ್ಲಿನ ಆರೋಗ್ಯ ಇಲಾಖೆ ಎಷ್ಟು ನಿರ್ಲಕ್ಷ್ಯ ವಹಿಸಿದೆ ಎಂಬುದಕ್ಕೆ ಹಿಡಿದ ಕನ್ನಡಿಯಾಗಿದೆ.

     
    ಎಲ್ಲೆಲ್ಲಿ ಎಷ್ಟೆಷ್ಟು ನಕಲಿ ವೈದ್ಯರು?
    ಜಮಖಂಡಿ – 60
    ಬೀಳಗಿ – 39
    ಮುಧೋಳ – 37
    ಕಲಾದಗಿ – 29 ಇದನ್ನೂ ಓದಿ: ಮೆದುಳು ತಿನ್ನುವ ಅಮೀಬಾ ಸೋಂಕು – ಕೇರಳದಲ್ಲಿ 4ನೇ ಪ್ರಕರಣ ಪತ್ತೆ

    50ಕ್ಕೂ ಹೆಚ್ಚು ಜನ ಬಿಎಎಂಎಸ್ ಓದಿದವರು ಅಲೋಪಥಿ ಚಿಕಿತ್ಸೆ ನೀಡುತ್ತಿದ್ದಾರೆ. ಒಟ್ಟಾರೆ 384 ಜನ ನಕಲಿ ವೈದ್ಯರ ಪಟ್ಟಿ ಕೈ ಸೇರಿದೆ. ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ಕವಿತಾ ಎಂಬುವರು ಪಿಯುಸಿ ಓದಿದ್ದು ಗರ್ಭಪಾತ ದಂಧೆ ಮಾಡುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

    ಜೂನ್ 18ರಂದು ಜಮಖಂಡಿಯಲ್ಲಿ ಸುರೇಖಾ ಚರಕಿ ಎಂಬ ನಕಲಿ ವೈದ್ಯೆ ಸಿಕ್ಕಿಬಿದ್ದಿದ್ದಾಳೆ. ಈಕೆಯ ಆಸ್ಪತ್ರೆಯಲ್ಲಿ ಗರ್ಭಪಾತ ದಂಧೆಗೆ ಬಳಸುವ ವಸ್ತುಗಳು ಸಿಕ್ಕಿವೆ. ಈಕೆ ಓದಿದ್ದು ಎಸ್‌ಎಸ್‌ಎಲ್‌ಸಿ ಮಾತ್ರ. ಆದರೆ ಮಾಡುತ್ತಿದ್ದನ್ನು ವೈದ್ಯ ವೃತ್ತಿ. ಗರ್ಭಪಾತ ಮಹಿಳೆ ಸಾವಿನ ನಂತರ ನಕಲಿ ವೈದ್ಯರ ಬಣ್ಣ ಬಯಲಾಗುತ್ತಿದೆ. ಪೊಲೀಸರು ಕೊಟ್ಟ ವರದಿ ಪ್ರಕಾರ ಆರೋಗ್ಯ ಇಲಾಖೆ ನಕಲಿ ವೈದ್ಯರನ್ನು ಗುರುತಿಸಿ ಕಠಿಣ ಕ್ರಮ ಕೈಗೊಳ್ಳಬೇಕಿದೆ.

  • ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ

    ಆಸ್ಪತ್ರೆಯಲ್ಲಿ ಒಂದು ವರ್ಷದ ಮಗುವನ್ನು ಬಿಟ್ಟು ಹೋದ ಮಹಿಳೆ

    ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ನಗರದ ಸರ್ಕಾರಿ ತಾಯಿ ಹಾಗೂ ಮಕ್ಕಳ ಆಸ್ಪತ್ರೆಯಲ್ಲಿ ಸರಿಸುಮಾರು ಒಂದೂವರೆ ವರ್ಷದ ಗಂಡು ಮಗುವನ್ನು ಮಹಿಳೆಯೊಬ್ಬಳು ಬಿಟ್ಟು ಹೋಗಿರುವ ಘಟನೆ ನಡೆದಿದೆ.

    ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಆಸ್ಪತ್ರೆಯೊಳಗೆ ಮಗುವಿನ ಸಮೇತ ಬಂದ ಮಹಿಳೆ, ಮಲಗಿದ್ದ ಮಗುವನ್ನ ಆಸ್ಪತ್ರೆಯಲ್ಲಿನ ದೇವರು ತೊಟ್ಟಿಲಲ್ಲಿ ಇಟ್ಟು ಪರಾರಿಯಾಗಿದ್ದಾಳೆ. ಈ ದೃಶ್ಯ ಆಸ್ಪತ್ರೆಯಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    ಸ್ವಲ್ಪ ಸಮಯದ ನಂತರ ಮಗು ನಿದ್ದೆಯಿಂದ ಎದ್ದು ಆಳುತ್ತಿರುವುದನ್ನ ಗಮನಿಸಿದ ಆಸ್ಪತ್ರೆಯ ದಾದಿಯರು ಮಗುವನ್ನ ಎತ್ತಿಕೊಂಡು ಸಮಾಧಾನ ಮಾಡಿ ತಾಯಿಗಾಗಿ ಹುಡುಕಾಟ ನಡೆಸಿದ್ದಾರೆ. ಮಗುವಿನ ಪೋಷಕರು ಪತ್ತೆಯಾಗದಿದ್ದಾಗ ಸಿಸಿಟಿವಿ ಪರಿಶೀಲನೆ ನಡೆಸಿದಾಗ ಮಹಿಳೆ ಮಗು ಇಟ್ಟು ಆತುರಾತುರವಾಗಿ ಪರಾರಿಯಾಗಿರುವುದು ಬೆಳಕಿಗೆ ಬಂದಿದೆ.

    ಸದ್ಯ ಆಸ್ಪತ್ರೆಯಲ್ಲಿ ಬಿಟ್ಟು ಹೋಗಿರುವ ಮಗು ತಂದೆ-ತಾಯಿ ಯಾರಿರಬಹುದು ಪತ್ತೆ ಹಚ್ಚಲು ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ.ಸಂತೋಷ್ ಚಿಂತಾಮಣಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದುವರೆಗೂ ಮಗುವಿನ ಪೋಷಕರು ಪತ್ತೆಯಾಗಿಲ್ಲ ಅಂತ ತಿಳಿದುಬಂದಿದೆ.

  • ಬಾಲಿವುಡ್‌ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

    ಬಾಲಿವುಡ್‌ ಹಿರಿಯ ನಟ ಶತ್ರುಘ್ನ ಸಿನ್ಹಾ ಆಸ್ಪತ್ರೆಗೆ ದಾಖಲು

    ಮುಂಬೈ: ಬಾಲಿವುಡ್‌ನ ಹಿರಿಯ ನಟ ಮತ್ತು ಅಸನ್ಸೋಲ್ ಕ್ಷೇತ್ರದ ಲೋಕಸಭಾ ಸದಸ್ಯ ಶತ್ರುಘ್ನ ಸಿನ್ಹಾ (Shatrughan Sinha) ಅವರು ಮುಂಬೈನ ಕೋಕಿಲಾಬೆನ್‌ (Kokilaben) ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಕಳೆದ ಎರಡು ದಿನಗಳಿಂದ ವೈರಲ್ ಜ್ವರ ಮತ್ತು ಆಯಾಸದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಭಾನುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬುದಾಗಿ ಪುತ್ರ ಲವ್ ಸಿನ್ಹಾ ಖಚಿತಪಡಿಸಿದ್ದಾರೆ. ಇದನ್ನೂ ಓದಿ: ಸಂಸದ ಕೋಟ ಶ್ರೀನಿವಾಸ ಪೂಜಾರಿಗೆ ಮಾತೃವಿಯೋಗ

    ಶತ್ರುಘ್ನ ಸಿನ್ಹಾ ಆಸ್ಪತ್ರೆಯಿಂದ ಯಾವಾಗ ಬಿಡುಗಡೆಯಾಗುತ್ತಾರೆ ಎಂಬುದರ ಕುರಿತು ಯಾವುದೇ ಮಾಹಿತಿಯಿಲ್ಲ. ಪ್ರಸ್ತುತ ನಟನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ವೈದ್ಯರ ನಿಗಾದಲ್ಲಿ ಇರಿಸಲಾಗಿದೆ ಎಂದು ಹೇಳಲಾಗಿದೆ.

    SONAKSHI SINHA 2 1

    ಕೆಲ ತಿಂಗಳುಗಳಿಂದ ನಟ, ಚುನಾವಣಾ ಪ್ರಚಾರ ಮತ್ತು ಅವರ ಪುತ್ರಿಯ ಮದುವೆಯಿಂದಾಗಿ ಬ್ಯುಸಿಯಾಗಿದ್ದರು. ಜೂನ್‌ 23 ರಂದು ತಮ್ಮ ಮಗಳು ಮತ್ತು ನಟಿ ಸೋನಾಕ್ಷಿ ಸಿನ್ಹಾ ಹಾಗೂ ದೀರ್ಘಕಾಲದ ಗೆಳೆಯ ಜಹೀರ್ ಇಕ್ಬಾಲ್ ಮದುವೆ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಶತ್ರುಘ್ನ ಸಿನ್ಹಾ ಭಾಗಿಯಾಗಿದ್ದರು.

  • ಚಿಕ್ಕಮಗಳೂರಿನಲ್ಲಿ ಡೆಂಗ್ಯೂಗೆ 6 ವರ್ಷದ ಬಾಲಕಿ ಸಾವು

    ಚಿಕ್ಕಮಗಳೂರಿನಲ್ಲಿ ಡೆಂಗ್ಯೂಗೆ 6 ವರ್ಷದ ಬಾಲಕಿ ಸಾವು

    ಚಿಕ್ಕಮಗಳೂರು: ಕಡೂರು (Kaduru) ತಾಲೂಕಿನ ಸಖರಾಯಪಟ್ಟಣದಲ್ಲಿ ಮಹಾಮಾರಿ ಡೆಂಗ್ಯೂವಿಗೆ (Dengue) 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.

    ಮೃತ ಬಾಲಕಿಯನ್ನು 6 ವರ್ಷದ ಸಾನಿಯಾ ಎಂದು ಗುರುತಿಸಲಾಗಿದೆ. ಕಳೆದ 4 ದಿನಗಳ ಹಿಂದೆ ಸೋಂಕಿಗೆ ತುತ್ತಾಗಿದ್ದ ಬಾಲಕಿಯನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಾಲಕಿ ಚೇತರಿಸಿಕೊಳ್ಳದ ಕಾರಣ ಶಿವಮೊಗ್ಗ (Shivamogga) ನಗರದ ಖಾಸಗಿ ಆಸ್ಪತ್ರೆಗೆ ಬಾಲಕಿಯನ್ನ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.

    ಡೆಂಗ್ಯೂ ಸೋಂಕಿಗೆ ಸರಕಾರಿ ಆಸ್ಪತ್ರೆಗಳಲ್ಲಿ(Government Hospital) ಸರಿಯಾದ ಚಿಕಿತ್ಸೆ ಸಿಗದ ಕಾರಣದಿಂದ ತನ್ನ ಮಗಳು ಸಾವಿಗೀಡಾಗಿದ್ದಾಳೆಂದು ಬಾಲಕಿ ಪೋಷಕರು ಆರೋಪಿಸಿದ್ದಾರೆ. ಮಗಳ ಚಿಕಿತ್ಸೆಗಾಗಿ ಬಾಲಕಿ ಪೋಷಕರು 4 ಲಕ್ಷ ರೂ. ಖರ್ಚು ಮಾಡಿದ್ದರು. ಆದರೂ ಬಾಲಕಿಯನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ತಂದೆ ಕಣ್ಣೀರಿಟ್ಟಿದ್ದಾರೆ. ಇದನ್ನೂ ಓದಿ: ಗೋಬಿ, ಕಾಟನ್‌ ಕ್ಯಾಂಡಿ ಆಯ್ತು.. ಈಗ ಚಿಕನ್‌, ಫಿಶ್‌ ಕಬಾಬ್‌ಗೆ ಕರ್ನಾಟಕ ಶಾಕ್‌! (more…)

  • ಮಂಡ್ಯ | ಅಕ್ರಮ ಗರ್ಭಪಾತದ ನಂತರ ಮಹಿಳೆ ಸಾವು

    ಮಂಡ್ಯ | ಅಕ್ರಮ ಗರ್ಭಪಾತದ ನಂತರ ಮಹಿಳೆ ಸಾವು

    ಮಂಡ್ಯ: ಪಾಂಡವಪುರ (Pandavapura) ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು ಬಂದಿದೆ.

    ಕೆಆರ್‌ನಗರ ಮೂಲದ ಇಬ್ಬರು ಮಹಿಳೆಯರು ಗರ್ಭಪಾತ (Illegal Abortion) ಬಳಿಕ ತೀವ್ರ ಅಸ್ವಸ್ಥಗೊಂಡಿದ್ದಾರೆ. ಬೇರೆ ಆಸ್ಪತ್ರೆಯಲ್ಲಿ (Hospital) ಚಿಕಿತ್ಸೆ ಪಡೆಯಲು ಭಯಪಟ್ಟು ಗರ್ಭಪಾತ ಮಾಡಿಸಿಕೊಂಡಿದ್ದ ಪಾಂಡವಪುರಕ್ಕೆ ಮಹಿಳೆಯರು ಬಂದಿದ್ದಾರೆ. ಗರ್ಭಪಾತ ಮಾಡಿದ್ದ ಶುಶ್ರೂಷಕಿ ಪಾಂಡವಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಮಹಿಳೆಯರು ತೀವ್ರ ಅಸ್ವಸ್ಥ ಕಾರಣ ಮೈಸೂರಿನ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ ಮಹಿಳೆ ಸಾವನ್ನಪಿದ್ದು, ಮತ್ತೊಬ್ಬರು ಗುಣಮುಖರಾಗಿದ್ದಾರೆ. ಇದನ್ನೂ ಓದಿ: ವಾಲ್ಮಿಕಿ ನಿಗಮದ ಹಣ ಐಟಿ ಕಂಪನಿ ಖಾತೆಗೆ ಅಕ್ರಮ ವರ್ಗಾವಣೆ!

    ಗರ್ಭಪಾತ ಬಳಿಕ ಸರಿಯಾದ ಆರೈಕೆ ಇಲ್ಲದೆ ಮಹಿಳೆಯರು ಅನಾರೋಗ್ಯಕ್ಕೆ ಒಳಗಾಗಿದ್ದರು. ನಂತರ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಸಿಗದೆ ಮಹಿಳೆಯರು ತೀವ್ರ ಅಸ್ವಸ್ಥಗೊಂಡಿದ್ದರು. ಈಕಾರಣಕ್ಕೆ ಮಹಿಳೆ ಸಾವನ್ನಪ್ಪಿದ್ದಾರೆ ಎಂದು‌ ಹೇಳಲಾಗುತ್ತಿದೆ.