Tag: ಕೆಂಪೇಗೌಡ ಏರ್‌ಪೋರ್ಟ್‍

  • ಬೆಂಗಳೂರಿನಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಸೀಜ್

    ಬೆಂಗಳೂರಿನಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಸೀಜ್

    – ವಿದೇಶದಿಂದ ಬೆಂಗಳೂರಿಗೆ ಸರಬರಾಜು ಮಾಡುತ್ತಿದ್ದ ಪ್ರಯಾಣಿಕ ಅರೆಸ್ಟ್

    ಬೆಂಗಳೂರು: ವಿದೇಶದಿಂದ ಬೆಂಗಳೂರಿಗೆ (Bengaluru) ಸರಬರಾಜು ಮಾಡುತ್ತಿದ್ದ 40 ಕೋಟಿ ಮೌಲ್ಯದ ಕೊಕೇನ್ ಡ್ರಗ್ಸ್ (Cocaine Drugs) ಅನ್ನು ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ (Kempegowda Airport) ಸೀಜ್ ಮಾಡಲಾಗಿದೆ.

    40 ಕೋಟಿ ಮೌಲ್ಯದ 4 ಕೆಜಿ ಕೊಕೇನ್ ಅನ್ನು ಡಿಆರ್‌ಐ ಅಧಿಕಾರಿಗಳು (DRI Officials) ಸೀಜ್ ಮಾಡಿದ್ದಾರೆ. ಭಾರತ ಮೂಲದ ಪ್ರಯಾಣಿಕನೋರ್ವ ದೋಹಾದಿಂದ ಬೆಂಗಳೂರಿಗೆ ಬಂದಿದ್ದ. ಪ್ರಯಾಣಿಕನ ಬ್ಯಾಗೇಜ್ ಅನ್ನು ಡಿಆರ್‌ಐ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಬಳಕೆ ಮಾಡದ ಎರಡು ಸೂಪರ್ ಹೀರೋ ಕಾಮಿಕ್ಸ್/ಮ್ಯಾಗಜೀನ್ಸ್ ಪತ್ತೆಯಾಗಿದೆ. ಇದನ್ನೂ ಓದಿ: ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

    ಮ್ಯಾಗಜೀನ್ ಕವರ್ ಮೇಲೆ ಸೀಲ್ ಮಾಡಿದ ರೀತಿಯಲ್ಲಿದ್ದ ಕೊಕೇನ್ ಪೌಡರ್ ಪತ್ತೆಯಾಗಿದೆ. ಈ ಹಿನ್ನೆಲೆ ಡಿಆರ್‌ಐ ಅಧಿಕಾರಿಗಳು ಬಿಳಿ ಬಣ್ಣದ ಪೌಡರ್ ಅನ್ನು ಪರೀಕ್ಷೆಗೆ ಒಳಪಡಿಸಿದ್ದಾರೆ. ಪರೀಕ್ಷೆ ವೇಳೆ ಕೊಕೇನ್ ಎಂದು ಪಾಸಿಟಿವ್ ರಿಪೋರ್ಟ್ ಬಂದಿದೆ. ಬಳಿಕ ಡಿಆರ್‌ಐ ಅಧಿಕಾರಿಗಳು ಮ್ಯಾಗಜೀನ್ ಕವರ್ ಮೇಲಿದ್ದ ಕೊಕೇನ್ ಸಂಗ್ರಹಿಸಿ ಸುಮಾರು 4 ಕೆಜಿಯಷ್ಟು ಕೊಕೇನ್ ಜಪ್ತಿ ಮಾಡಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 40 ಕೋಟಿ ಮೌಲ್ಯದ ಕೊಕೇನ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಕೊಕೇನ್ ಸಾಗಾಟ ಮಾಡಿದ್ದ ಪ್ರಯಾಣಿಕನನ್ನು ಬಂಧಿಸಿದ್ದಾರೆ. ಎನ್‌ಡಿಪಿಎಸ್ ಆಕ್ಟ್ ಅಡಿಯಲ್ಲಿ ಪ್ರಯಾಣಿಕನನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಇದನ್ನೂ ಓದಿ: ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

  • ಸೆಪ್ಟೆಂಬರ್‌ನಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ: ಎಂ.ಬಿ ಪಾಟೀಲ್

    ಸೆಪ್ಟೆಂಬರ್‌ನಲ್ಲಿ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ `ಕಲಾಲೋಕ’ ಮಳಿಗೆ ಉದ್ಘಾಟನೆ: ಎಂ.ಬಿ ಪಾಟೀಲ್

    – ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು 28 ಜಿ.ಐ. ಉತ್ಪನ್ನಗಳ ಪ್ರದರ್ಶನ, ಮಾರಾಟ

    ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಕರ್ನಾಟಕದ ಅಸ್ಮಿತೆ ಸಾರುವ 6 ಮತ್ತು ಜಿ.ಐ. ಟ್ಯಾಗ್ ಹೊಂದಿರುವ 28 ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನ ವ್ಯವಸ್ಥೆ ಇರುವ ಆಕರ್ಷಕ ಕಲಾಲೋಕ ಮಳಿಗೆ ಸಿದ್ಧವಾಗುತ್ತಿದೆ. ಇದನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ಸಿಎಂ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ತಿಳಿಸಿದ್ದಾರೆ.

    M B Patil Meeting 1

    ಸರ್ಕಾರಿ ಸ್ವಾಮ್ಯದ ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್ (ವಿಟಿಪಿಸಿ) ಸೇರಿದಂತೆ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಪ್ರಮುಖ ಅಧಿಕಾರಿಗಳೊಂದಿಗೆ ಈ ಯೋಜನೆಯ ಪ್ರಗತಿಯ ಸಂಬಂಧ ಪರಿಶೀಲನಾ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಚಾಣಕ್ಯ ವಿವಿಗೆ ಹಂಚಿಕೆಯಾಗಿದ್ದ ಭೂಮಿಗೆ ಲ್ಯಾಂಡ್ ಆಡಿಟ್ – ಜಮೀನು ವಾಪಸ್ ಪಡೆಯುತ್ತಾ ಸರ್ಕಾರ?

    M B Patil Meeting

    ಬಳಿಕ ಮಾತನಾಡಿದ ಅವರು, ಕಲಾಲೋಕ ಮಳಿಗೆಯಲ್ಲಿ ರಾಜ್ಯದ ಅಸ್ಮಿತೆ ಸಾರುವ ಕಾಫಿ, ಮೈಸೂರು ಸಿಲ್ಕ್ಸ್, ಕೆಎಸ್‌ಡಿಎಲ್ ಉತ್ಪನ್ನಗಳಾದ ಗಂಧದ ಸಾಬೂನು ಇತ್ಯಾದಿ, ಲಿಡ್ಕರ್ ಉತ್ಪನ್ನಗಳು, ಕರಕುಶಲ ನಿಗಮದ ವಸ್ತುಗಳು ಮತ್ತು ಕೈಮಗ್ಗ ನಿಗಮದ ಉತ್ಪನ್ನಗಳು ಇರಲಿವೆ. ಇವುಗಳ ಜೊತೆಗೆ ಚನ್ನಪಟ್ಟಣದ ಬೊಂಬೆಯಂಥ 28 ಜಿ.ಐ. ಉತ್ಪನ್ನಗಳನ್ನೂ ಇಡಲಾಗುವುದು. ಇವುಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ಯಾಕಿಂಗ್ ವಿನ್ಯಾಸ ಮತ್ತು ಬ್ರ‍್ಯಾಂಡಿಂಗ್ ಮಾಡಿ, ಪ್ರದರ್ಶನ ಮತ್ತು ಮಾರಾಟ ನಡೆಸಲಾಗುವುದು. ಜಾಗತಿಕ ಮಟ್ಟದ ಗ್ರಾಹಕರನ್ನು ಸೆಳೆಯುವುದು ಇದರ ಉದ್ದೇಶವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳನ್ನ ಅವಹೇಳನ ಮಾಡೋದೇ ಬಿಜೆಪಿ ಸಂಸ್ಕೃತಿ: ಹರಿಪ್ರಸಾದ್ ಕಿಡಿ

    ಮುಂದಿನ ದಿನಗಳಲ್ಲಿ ಇಂಟರ್‌ನ್ಯಾಷನಲ್ ಲಾಂಜ್‌ನಲ್ಲಿ ಕೂಡ ಕಲಾಲೋಕ ಮಳಿಗೆ ತೆರೆಯಲಾಗುವುದು. ಇದಕ್ಕಾಗಿ ಟೆಂಡರ್ ಆಹ್ವಾನಿಸಲಾಗುವುದು. ಈಗ ಸಿದ್ಧವಾಗುತ್ತಿರುವ ಮೊದಲ ಮಳಿಗೆಯು 130 ಚದರ ಮೀಟರ್ ವಿಸ್ತೀರ್ಣ ಹೊಂದಿದ್ದು, ಆಗಸ್ಟ್ ಕೊನೆಯ ಹೊತ್ತಿಗೆ ಸಂಪೂರ್ಣವಾಗಿ ಇದರ ಕೆಲಸಗಳು ಮುಗಿಯಲಿವೆ. ಕೆಂಪೇಗೌಡ ವಿಮಾನ ನಿಲ್ದಾಣವು ಇದಕ್ಕೆ ನಿಗದಿತ ಬಾಡಿಗೆಯಲ್ಲಿ 50%ರಷ್ಟು ರಿಯಾಯಿತಿ ಕೊಟ್ಟಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಮೌಳಿ ಸಿನಿಮಾ ರಿಜೆಕ್ಟ್ ಮಾಡಿದ ನಟ ವಿಕ್ರಂ – ಕಾರಣ ಏನ್ ಗೊತ್ತಾ?

    ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ವಿಶ್ವೇಶ್ವರಯ್ಯ ಟ್ರೇಡ್ ಪ್ರೊಮೋಶನ್ ಸೆಂಟರ್‌ನ ವ್ಯವಸ್ಥಾಪಕ ನಿರ್ದೇಶಕ ಶಿವಕುಮಾರ್ ಸೇರಿ ಎಲ್ಲಾ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

  • ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

    ಕೆಂಪೇಗೌಡ ಏರ್‌ಪೋರ್ಟ್ ಬಳಿ ಕೇಂದ್ರ ಸರ್ಕಾರದಿಂದ NIMHANS ಪಾಲಿಟ್ರೌಮಾ ಘಟಕಕ್ಕೆ ಅನುಮೋದನೆ

    -300 ಹಾಸಿಗೆಗಳ ಪಾಲಿಟ್ರೌಮಾ ಕೇಂದ್ರಕ್ಕೆ ಹಣಕಾಸು ಸಚಿವಾಲಯದ ತಾತ್ವಿಕ ಅನುಮೋದನೆ

    ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಕ್ಯಾಲಸನಹಳ್ಳಿಯಲ್ಲಿ NIMHANS ಸ್ನಾತಕೋತ್ತರ ಮತ್ತು 300 ಹಾಸಿಗೆಗಳ ಪಾಲಿಟ್ರೌಮಾ ಕೇಂದ್ರದ ನಿರ್ಮಾಣಕ್ಕೆ 498 ಕೋಟಿ ರೂ. ವೆಚ್ಚಕ್ಕೆ ತಾತ್ವಿಕ ಅನುಮೋದನೆ ನೀಡಿದೆ.

    ಅಪಘಾತಕ್ಕೀಡಾದವರಿಗೆ `ನಿರ್ಣಾಯಕ’ ಸಮಯದಲ್ಲಿ ಆರೈಕೆ ದೊರೆಯುವುದು ಅತ್ಯಗತ್ಯ. NIMHANSನ ಪಾಲಿಟ್ರೌಮಾ ಕೇಂದ್ರವು ಈ ತುರ್ತು ಆರೈಕೆಯನ್ನು ಒದಗಿಸುವುದರ ಜೊತೆಗೆ, ಎತ್ತರದಿಂದ ಬಿದ್ದ, ಹಲ್ಲೆಗೊಳಗಾದ ಅಥವಾ ಯಾವುದೇ ಗಂಭೀರ ಗಾಯದಿಂದ, ಬಹು ಅಂಗಾAಗ ವೈಫಲ್ಯದಿಂದ ಬಳಲುತ್ತಿರುವವರಿಗೂ ಸೇವೆ ಸಲ್ಲಿಸಲಿದೆ. ಇದು ಸಾವಿನ ಪ್ರಮಾಣವನ್ನು ಕಡಿಮೆ ಮಾಡಲು ಮತ್ತು ಸಾವಿರಾರು ರೋಗಿಗಳ ಜೀವಗಳನ್ನು ಉಳಿಸಲು ಒಂದು ಪ್ರಮುಖ ಹೆಜ್ಜೆಯಾಗಿದೆ.

    ವಿಶ್ವ ಆರೋಗ್ಯ ಸಂಸ್ಥೆಯ ಪ್ರಕಾರ, ರಸ್ತೆ ಸಂಚಾರ ಅಪಘಾತಗಳು 2030ರ ವೇಳೆಗೆ ಸಾವಿಗೆ ಐದನೇ ಪ್ರಮುಖ ಕಾರಣವಾಗುವ ಸಾಧ್ಯತೆಯಿದೆ. ಭಾರತದಲ್ಲಿ, 2022ರಲ್ಲಿ 4,61,312 ರಸ್ತೆ ಅಪಘಾತಗಳು ಸಂಭವಿಸಿದ್ದು, 1,68,491 ಜೀವಗಳನ್ನು ಬಲಿತೆಗೆದುಕೊಂಡಿವೆ ಮತ್ತು 4,43,366 ಜನರಿಗೆ ಗಾಯಗಳಾಗಿವೆ. ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಅಪಘಾತಗಳಲ್ಲಿ 11.9% ಮತ್ತು ಸಾವುಗಳಲ್ಲಿ 9.4% ಹೆಚ್ಚಳವನ್ನು ಪ್ರತಿನಿಧಿಸುತ್ತದೆ.

    ಪಾಲಿಟ್ರೌಮಾ ಕೇಂದ್ರವು ಕಾರ್ಯಾರಂಭ ಮಾಡಿದ ನಂತರ, ರೋಗಿಗಳಿಗೆ ಬಹು ಆಯಾಮದ ತುರ್ತು ಆರೈಕೆ ನೀಡಲು ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ. ಅದಲ್ಲದೆ, ರಾಷ್ಟ್ರೀಯ ಹೆದ್ದಾರಿ ಮತ್ತು ಕೆಐಎಗೆ ಹತ್ತಿರವಿರುವುದರಿಂದ, ಇತರ ನಗರಗಳಿಂದಲೂ ರೋಗಿಗಳು ಈ ಕೇಂದ್ರಕ್ಕೆ ಬರಲು ಅವಕಾಶವಿರುತ್ತದೆ.

    ಕ್ಯಾಲಸನಹಳ್ಳಿಯಲ್ಲಿನ 39 ಎಕರೆ ಜಾಗವನ್ನು 2012-13ರಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ NIMHANSಗೆ ಹಂಚಿಕೆ ಮಾಡಲಾಗಿತ್ತು. ನಂತರ ಸಂಸ್ಥೆಯು 498 ಕೋಟಿ ರೂ. ಯೋಜನಾ ವೆಚ್ಚದಲ್ಲಿ 300 ಹಾಸಿಗೆಗಳ ಅತ್ಯಾಧುನಿಕ ಪಾಲಿಟ್ರೌಮಾ ಸೌಲಭ್ಯವನ್ನು ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿತ್ತು. ಭಾರತ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯಿಂದ ತಾತ್ವಿಕ ಅನುಮೋದನೆ ದೊರೆತಿದ್ದು, ಕೇಂದ್ರ ಆರೋಗ್ಯ ಸಚಿವಾಲಯದಿಂದ ಅಂತಿಮ ಅನುಮೋದನೆ ಶೀಘ್ರದಲ್ಲೇ ನಿರೀಕ್ಷಿಸಲಾಗಿದೆ.

    ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ NIMHANSನ 300 ಹಾಸಿಗೆಗಳ ಪಾಲಿಟ್ರೌಮಾ ಘಟಕಕ್ಕೆ ಕೇಂದ್ರ ಸರ್ಕಾರದ ಅನುಮೋದನೆ ನೀಡಿರುವ ಸರ್ಕಾರದ ಈ ನಿರ್ಧಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಸ್ವಾಗತಿಸಿದ್ದು, ಬೆಂಗಳೂರು ಸುತ್ತಮುತ್ತಲಿನ ಅಪಘಾತಕ್ಕೀಡಾದವರಿಗೆ ಜೀವ ಉಳಿಸುವ ಮತ್ತು ತುರ್ತು ಆರೈಕೆಯನ್ನು ಒದಗಿಸುವಲ್ಲಿ ಇದು ಮಹತ್ವದ ಹೆಜ್ಜೆ ಎಂದು ಬಣ್ಣಿಸಿದ್ದಾರೆ.

    ಬೆಂಗಳೂರಿನಲ್ಲಿ ಕೆಂಪೇಗೌಡ ಜಯಂತಿ ಆಚರಣೆಯೊಂದಿಗೆ ದೊರೆತಿರುವುದು ವಿಶೇಷ. ಇದೊಂದು ಸ್ವಾಗತಾರ್ಹ ಕ್ರಮ ಎಂದು ಕರೆದಿರುವ ಸಂಸದ ಸೂರ್ಯರವರು, ವಿಮಾನ ನಿಲ್ದಾಣದ ಸಮೀಪ ಪಾಲಿಟ್ರೌಮಾ ಕೇಂದ್ರದ ಸ್ಥಾಪನೆಯು ಅಪಘಾತಕ್ಕೀಡಾದವರಿಗೆ ತುರ್ತು ಪರಿಹಾರ ನೀಡಲು ಸಹಾಯ ಮಾಡುತ್ತದೆ. ಪ್ರಸ್ತುತ, ಈ ಪ್ರದೇಶದಲ್ಲಿ ಅಂತಹ ಆಘಾತ ಪ್ರಕರಣಗಳಿಗೆ ಸ್ಪಂದಿಸುವ ಯಾವುದೇ ಸಾರ್ವಜನಿಕ ಸೌಲಭ್ಯವಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಈ ಪಾಲಿಟ್ರೌಮಾ ಕೇಂದ್ರವನ್ನು 498 ಕೋಟಿ ರೂ. ವೆಚ್ಚದಲ್ಲಿ ಮಂಜೂರು ಮಾಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ತಿಳಿಸಿದರು.

  • ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

    ಏರೋ ಇಂಡಿಯಾ 2025 – ನಾಳೆಯಿಂದ ಬೆಂಗಳೂರು ವಿಮಾನಯಾನದಲ್ಲಿ ವ್ಯತ್ಯಯ

    ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏರೋ ಇಂಡಿಯಾ 2025ರ (Aero India 2025) ಹಿನ್ನೆಲೆ ಫೆ.5ರಿಂದ ಫೆ.14ರವರೆಗೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರತಿದಿನ ಕೆಲವು ಗಂಟೆಗಳ ಕಾಲ ವಿಮಾನ ಹಾರಾಟ ಬಂದ್ ಆಗಲಿದೆ.

    ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಾಯುಯಾನ ಪ್ರದೇಶ ಮುಚ್ಚಲ್ಪಡಲಿದ್ದು, ಪ್ರಯಾಣಿಕರು ವಿಮಾನ ವೇಳಾಪಟ್ಟಿಗಳ ಪರಿಷ್ಕೃತ ಅಥವಾ ನವೀಕರಿಸಿದ ವಿವರಗಳಿಗಾಗಿ ಆಯಾ ವಿಮಾನಯಾನ ಸಂಸ್ಥೆಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. ಇದನ್ನೂ ಓದಿ: ಮೈಸೂರು ಮಹಾರಾಜರು ಕಟ್ಟಿಸಿದ್ದ ಶಿವನ ದೇವಾಲಯವಾಯ್ತು ಬಾರ್ & ರೆಸ್ಟೋರೆಂಟ್!

    WhatsApp Image 2025 02 04 at 2.17.52 PM

    ವಿಮಾನ ವೇಳಾಪಟ್ಟಿಯ ನವೀಕೃತ ಮಾಹಿತಿಗೆ ಅನುಸಾರವಾಗಿ ತಮ್ಮ ಆಗಮನ ಮತ್ತು ನಿರ್ಗಮನವನ್ನು ಯೋಜಿಸಲು ನಾವು ವಿನಂತಿ ಮಾಡುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು ಪ್ರಕಟಣೆ ಹೊರಡಿಸಿದೆ. ಇದನ್ನೂ ಓದಿ: 3 ದಶಕಗಳ ಬಳಿಕ ಮಂಗಳೂರು ಕಡಲ ಕಿನಾರೆಗೆ ಬಂದ ಕಡಲಾಮೆಗಳು

    ಬೆಂಗಳೂರು ಏರ್‌ಪೋರ್ಟ್ ಕಾರ್ಯಾಚರಣೆಯು ಫೆ.5ರಿಂದ ಫೆ.15ರವರೆಗೆ 10 ದಿನಗಳಲ್ಲಿ ಬೇರೆಬೇರೆ ಸಮಯದಲ್ಲಿ ಬಂದ್ ಆಗಿರಲಿದೆ. ಆ ವೇಳಾಪಟ್ಟಿ ವಿವರ ಈ ಕೆಳಗೆ ನೀಡಲಾಗಿದೆ. ಇದನ್ನೂ ಓದಿ: ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚನೆ – ಫೈನಾನ್ಸ್ ಮ್ಯಾನೇಜರ್ ಅರೆಸ್ಟ್‌

    ಫೆಬ್ರವರಿ 5: ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ, ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 6: ಬೆಳಗ್ಗೆ 9 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:39ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 7: ಬೆಳಗ್ಗೆ 09ರಿಂದ 11 ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 8:  ಬೆಳಗ್ಗೆ 9ರಿಂದ ಮಧ್ಯಾಹ್ನ 12ರವರೆಗೆ ಮತ್ತು ಅಪರಾಹ್ನ 3 ರಿಂದ ಸಂಜೆ 4:30ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 9: ಬೆಳಿಗ್ಗೆ 9 ರಿಂದ 11 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 10: ಬೆಳಿಗ್ಗೆ 9 ರಿಂದ 11:30 ರವರೆಗೆ ಮತ್ತು ಅಪರಾಹ್ನ 2:30 ರಿಂದ 3:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 11-12: ಮಧ್ಯಾಹ್ನ 12:00 ರಿಂದ ಅಪರಾಹ್ನ 2:30 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.
    ಫೆಬ್ರವರಿ 13-14: ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 12 ರವರೆಗೆ ಮತ್ತು ಅಪರಾಹ್ನ 2:30 ರಿಂದ ಸಂಜೆ 5:00 ರವರೆಗೆ ಕಾರ್ಯಾಚರಣೆ ಸ್ಥಗಿತವಾಗಿರಲಿದೆ.

  • ಬುಲೆಟ್ ಬೈಕ್‌ ಡಿವೈಡರ್‌ಗೆ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಬುಲೆಟ್ ಬೈಕ್‌ ಡಿವೈಡರ್‌ಗೆ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು

    ಚಿಕ್ಕಬಳ್ಳಾಪುರ: ಬುಲೆಟ್ ಬೈಕ್ (Bullet bike) ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೇವನಹಳ್ಳಿ ಬಳಿಯ ಚಿಕ್ಕಸಣ್ಣೆ ಗೇಟ್ ಬಳಿ ನಡೆದಿದೆ.

    ದೇವನಹಳ್ಳಿ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಏರ್‌ಪೋರ್ಟ್‌ ರಸ್ತೆಯಲ್ಲಿ ಘಟನೆ ನಡೆದಿದ್ದು, ಚಿಕ್ಕಬಳ್ಳಾಪುರ (Chikkaballapura) ನಗರದ ರಾಹುಲ್ (18) ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಒಂದೇ ಗ್ರಾಮದ 350 ರೈತರ 960 ಎಕರೆ ಜಮೀನು ಏಕಾಏಕಿ ವಕ್ಫ್ ಬೋರ್ಡ್‌ಗೆ ಸೇರ್ಪಡೆ

    Chikkaballapura Accident

    ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್‌ ಟಚ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್‌ಪೋರ್ಟ್‌ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Hyderabad | ಮಗನ ಮೃತದೇಹದೊಂದಿಗೆ ನಾಲ್ಕು ದಿನ ಕಳೆದ ಅಂಧ ದಂಪತಿ

  • ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ- ಏರ್‌ಪೋರ್ಟ್‌ನಲ್ಲಿ ಹೈಅಲರ್ಟ್

    ಬೆಂಗಳೂರಿನತ್ತ ಪ್ರಜ್ವಲ್ ರೇವಣ್ಣ- ಏರ್‌ಪೋರ್ಟ್‌ನಲ್ಲಿ ಹೈಅಲರ್ಟ್

    ಬೆಂಗಳೂರು: ಪೆನ್‌ಡ್ರೈವ್ ಪ್ರಕರಣದ (Pendrive Case) ಆರೋಪಿ ಪ್ರಜ್ವಲ್ ರೇವಣ್ಣ (Prajwal Revanna) ಜರ್ಮನಿಯ (Germany) ಮ್ಯೂನಿಕ್‌ನಿಂದ (Munich) ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಏರ್‌ಪೋರ್ಟ್‌ನಲ್ಲಿ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ.

    ಅಶ್ಲೀಲ ವೀಡಿಯೋ ಹಾಗೂ ಪೆನ್‌ಡ್ರೈವ್ ಪ್ರಕರಣ ಹೊರಬರುತ್ತಿದ್ದಂತೆಯೇ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಇಂದು ಭಾರತಕ್ಕೆ ಮರಳಲಿದ್ದಾರೆ. ಈಗಾಗಲೇ ಜರ್ಮನಿಯ ಮ್ಯೂನಿಕ್‌ನಿಂದ ಹೊರಟಿರುವ ಲುಫ್ತಾನ್ಸಾ ಏರ್‌ಲೈನ್ಸ್‌ನಲ್ಲಿ ಪ್ರಜ್ವಲ್ ರೇವಣ್ಣ ಆಗಮಿಸುತ್ತಿದ್ದು, ಇಂದು ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಬೆಂಗಳೂರಿಗೆ (Bengaluru) ತಲುಪಲಿದ್ದಾರೆ. ಈ ಹಿನ್ನೆಲೆ ಪೊಲೀಸರು ಅಲರ್ಟ್ ಆಗಿದ್ದಾರೆ. ಇದನ್ನೂ ಓದಿ: ಮುಸ್ಲಿಂ-ಹಿಂದೂ ವಿವಾಹ ಮುಸ್ಲಿಂ ವೈಯಕ್ತಿಕ ಕಾನೂನಿನ ಅಡಿಯಲ್ಲಿ ಮಾನ್ಯವಲ್ಲ: ಮಧ್ಯಪ್ರದೇಶ ಹೈಕೋರ್ಟ್

    vlcsnap 2024 05 30 19h45m18s917

     

    ಪ್ರಜ್ವಲ್ ಆಗಮನದ ವೇಳೆ ಜನ ಸೇರುವ ಸಾಧ್ಯತೆ ಹೆಚ್ಚಾಗಿದ್ದು, ಜನ ಸೇರಿದರೆ ಸಂಚಾರಕ್ಕೆ ತೊಂದರೆ ಆಗಬಹುದು. ಆದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸಂಚಾರಿ ಪೊಲೀಸರು ಅಲರ್ಟ್ ಆಗಿದ್ದಾರೆ. ಪ್ರಜ್ವಲ್ ಬಂಧನ ಮಾಡಿ ಕರೆದುಕೊಂಡು ಹೋಗುವ ವೇಳೆಗೆ ಯಾವುದೇ ತೊಂದರೆ ಆಗಬಾರದು ಎಂದು ಮುನ್ನೆಚ್ಚರಿಕೆ ವಹಿಸಲಾಗಿದೆ. ಅಲ್ಲದೇ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನಗಳನ್ನು ನಿಲುಗಡೆ ಮಾಡದಂತೆ ಸೂಚಿಸಿದ್ದು, ಜನಸಂದಣಿ ಸೇರದಂತೆ ಟ್ರಾಫಿಕ್ ಕ್ಲಿಯರ್ ಮಾಡಲಾಗುತ್ತಿದೆ. ಇದನ್ನೂ ಓದಿ: ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡುವ ಯೋಜನೆ – ಏನು ಷರತ್ತುಗಳು ಹಾಕ್ತಾರೋ ಗೊತ್ತಿಲ್ಲ ಎಂದ ಡಿಕೆಶಿ

    ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ (Kempegowda Airport) ಟ್ರಾಫಿಕ್ ಪೊಲೀಸರು ಮತ್ತು ಲಾ ಆ್ಯಂಡ್ ಆರ್ಡರ್ ಪೊಲೀಸರು ಭೇಟಿ ನೀಡಿದ್ದು, ಪ್ರಜ್ವಲ್ ಕರೆದೊಯ್ಯುವ ಮಾರ್ಗವನ್ನು ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಟ್ರಾಫಿಕ್ ಆಗದಂತೆ ಜೊತೆಗೆ ಯಾರಾದರೂ ಪ್ರತಿಭಟನೆ ಮಾಡಲು ಮುಂದಾದರೆ ಮುಂಜಾಗ್ರತಾ ಕ್ರಮವಹಿಸಲು ಪರಿಶೀಲನೆ ನಡೆಸಲಾಗಿದೆ. ಟರ್ಮಿನಲ್ 2ರ ಬಳಿ ಮಾರ್ಗ ಪರಿಶೀಲನೆ ಮಾಡಿ ಪೊಲೀಸರು ತೆರಳಿದ್ದಾರೆ. ಇದನ್ನೂ ಓದಿ: ಜೂನ್‌ 6ರ ಒಳಗಡೆ ನಾಗೇಂದ್ರ ರಾಜೀನಾಮೆ ನೀಡದೇ ಇದ್ರೆ ರಾಜ್ಯಾದ್ಯಂತ ಉಗ್ರ ಹೋರಾಟ: ರವಿಕುಮಾರ್‌ ಎಚ್ಚರಿಕೆ

  • ಶ್ರೀಲಂಕಾದಿಂದ ತಂದು ಅಕ್ರಮ ಸಾಗಾಟ – ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1 ಕೆಜಿ ಚಿನ್ನ ಸೀಜ್‌

    ಶ್ರೀಲಂಕಾದಿಂದ ತಂದು ಅಕ್ರಮ ಸಾಗಾಟ – ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1 ಕೆಜಿ ಚಿನ್ನ ಸೀಜ್‌

    ಚಿಕ್ಕಬಳ್ಳಾಪುರ: ಬೆಂಗಳೂರಿನ ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು, 1 ಕೆಜಿಗೂ ಅಧಿಕ ಪ್ರಮಾಣದ ಚಿನ್ನವನ್ನು ಸೀಜ್‌ ಮಾಡಿದ್ದಾರೆ.

    ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬರೋಬ್ಬರಿ 72.76 ಲಕ್ಷ ರೂ. ಮೌಲ್ಯದ 1 ಕೆಜಿ 166 ಗ್ರಾಂ ಚಿನ್ನವನ್ನ (Gold) ವಶಪಡಿಸಿಕೊಂಡಿದ್ದಾರೆ.

    Gold Seized 2

    ಪ್ರಕರಣಗಳಲ್ಲಿ ಶ್ರೀಲಂಕಾದ ಓರ್ವ ಹಾಗೂ ಮೂವರು ದೇಶಿಯ ಪ್ರಯಾಣಿಕರನ್ನ ಬಂಧಿಸಲಾಗಿದೆ. ಕೊಲಂಬೋದಿಂದ ಆಗಮಿಸಿ ಏರ್‌ಪೋರ್ಟ್‌ನಲ್ಲಿ ಬೇರೊಬ್ಬ ವ್ಯಕ್ತಿಗೆ ಚಿನ್ನ ಹಸ್ತಾಂತರಿಸುತ್ತಿದ್ದ ವೇಳೆ ಅಸಾಮಿ ಅರೆಸ್ಟ್ ಆಗಿದ್ದಾನೆ. ಇದನ್ನೂ ಓದಿ: ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್‌ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

    ಉಳಿದ ಎರಡು ಪ್ರಕರಣಗಳಲ್ಲಿ ಚೈನ್ ಹಾಗೂ ಬಿಸ್ಕೆಟ್ ರೂಪದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುವಾಗ ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಿಂದ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಡೆಗಣನೆ: ಕೋಟ ಶ್ರೀನಿವಾಸ ಪೂಜಾರಿ

  • ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

    ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

    ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರೋದಾಗಿ ಅಪರಿಚಿತನಿಂದ ಬೆದರಿಕೆ ಕರೆ ಬಂದಿದೆ. ಪರಿಣಾಮ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

    Kempegowda International Airport

    ಬೆಳಗಿನ ಜಾವ 3.30 ಸಮಯದಲ್ಲಿ ಅಪರಿಚಿತನೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕೆಂಪೇಗೌಡ ಏರ್‌ಪೋರ್ಟ್‍ನಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಿದ್ದಾನೆ. ಈ ಹಿನ್ನೆಲೆ ಏರ್‌ಲೈನ್ಸ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ. ಇದನ್ನೂ ಓದಿ: ಭಾರತದ ಮೊದಲ 5ಜಿ ಕರೆ ಯಶಸ್ವೀ ಪರೀಕ್ಷೆ

    kempegowda airport bengaluru 1

    ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಅವರು, ಬಾಂಬ್ ನಿಷ್ಟ್ರಿಯ ದಳ, ಶ್ವಾನ ದಳ ಸ್ಥಳಕ್ಕೆ ಆಗಮಿಸಿದೆ. ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ಮಾಡಲಾಗ್ತಿದೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.

    ಶ್ವಾನ ದಳ ಹಾಗೂ ಬಾಂಬ್ ನಿಷ್ಕ್ರಿಯ ದಳದ ಅಧಿಕಾರಿಗಳು ಏರ್‌ಪೋರ್ಟ್ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಆದ್ರೆ ಯಾವುದೇ ಅನುಮಾನಸ್ಫದವಾದ ವಸ್ತು ಕಂಡುಬಂದಿಲ್ಲ. ಈ ಹಿನ್ನೆಲೆ ಇದೊಂದು ಹುಸಿಬಾಂಬ್ ಕರೆ ಅಂತ ತೀರ್ಮಾನಕ್ಕೆ ಬಂದಿದ್ದಾರೆ. ಸದ್ಯ ಕರೆ ಮಾಡಿದವನ ಜಾಡು ಬೆನ್ನತ್ತಿರೋ ಪೊಲೀಸರು ಅಪರಿಚಿತನ ಹುಡುಕಾಟದಲ್ಲಿ ತೊಡಗಿದ್ದು, ಹುಸಿಬಾಂಬ್ ಕರೆಯ ಉದ್ದೇಶ ತಿಳಿಯಬೇಕಿದೆ.