Tag: ಕೊರೊನಾವೈರಸ್

  • ದೇಶದಲ್ಲಿ ನೀಡಿದ ಲಸಿಕೆಗಳ ಪೈಕಿ ಶೇ.11 ರಷ್ಟು ಪಾಲು ರಾಜ್ಯದ್ದು: ಡಾ.ಕೆ.ಸುಧಾಕರ್

    ದೇಶದಲ್ಲಿ ನೀಡಿದ ಲಸಿಕೆಗಳ ಪೈಕಿ ಶೇ.11 ರಷ್ಟು ಪಾಲು ರಾಜ್ಯದ್ದು: ಡಾ.ಕೆ.ಸುಧಾಕರ್

    -ಲಸಿಕೆ ನೀಡುವುದರಲ್ಲಿ ಕರ್ನಾಟಕ ನಂ.1
    -ರಾಜ್ಯದಲ್ಲಿ 29 ಲಕ್ಷ ಲಸಿಕೆ

    ಬೆಂಗಳೂರು: ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ. ಈ ಮೂಲಕ ಕರ್ನಾಟಕ ಹೊಸ ಸಾಧನೆ ಮಾಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

    SUDAKAR 2

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 29 ಲಕ್ಷ ಲಸಿಕೆ ನೀಡಿದ್ದು, ಇನ್ನೂ 1.68 ಲಕ್ಷ ದಾಖಲು ಮಾಡಬೇಕಿದೆ. ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು ಲಸಿಕೆ ನೀಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರೋತ್ಸಾಹ ನೀಡಿದರು. ಒಂದು ದಿನದಲ್ಲಿ 30 ಲಕ್ಷ ಲಸಿಕೆ ನೀಡುವ ಗುರಿ ಹಾಕಿಕೊಂಡಿದ್ದು, ಶನಿವಾರ ಬೆಳಗ್ಗೆ 8.30 ಗಂಟೆಗೆ 29,50,093 ಲಸಿಕೆ ನೀಡಿರುವುದು ದಾಖಲಾಗಿದೆ. ಉಳಿದಂತೆ 1.68 ಲಕ್ಷ ಡೋಸ್ ಲಸಿಕೆ ನೀಡಿರುವುದನ್ನು ದಾಖಲು ಮಾಡಬೇಕಿದೆ. ಇದರಿಂದಾಗಿ 31 ಲಕ್ಷ ಲಸಿಕೆ ನೀಡಿದಂತಾಗುತ್ತದೆ. ದೇಶದಲ್ಲಿ ನೀಡಿದ ಒಟ್ಟು ಲಸಿಕೆಯಲ್ಲಿ ಶೇ.11 ರಷ್ಟು ರಾಜ್ಯದಲ್ಲಿ ನೀಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಲಸಿಕೆಯಲ್ಲಿ ಭಾರತದ ವಿಶ್ವ ದಾಖಲೆ ನೋಡಿ ರಾಜಕೀಯ ಪಕ್ಷವೊಂದಕ್ಕೆ ಜ್ವರ ಬಂದಿದೆ: ಮೋದಿ

    NARENDRA MODI medium

    ಪ್ರತಿ ಅರ್ಹ, ಹತ್ತು ಲಕ್ಷ ಜನಸಂಖ್ಯೆಗೆ ಹೆಚ್ಚು ಲಸಿಕೆ ನೀಡಿದ ರಾಜ್ಯಗಳ ಪೈಕಿ ಕರ್ನಾಟಕವು 62,003 ಲಸಿಕೆ ನೀಡುವ ಮೂಲಕ ಮೊದಲ ಸ್ಥಾನದಲ್ಲಿದೆ. 14,401 ಲಸಿಕೆ ಕೇಂದ್ರಗಳನ್ನು ಸಿದ್ಧಪಡಿಸಲಾಗಿದ್ದು, ಒಂದು ಕಡೆ ಸರಾಸರಿ 205 ಲಸಿಕೆ ನೀಡಲಾಗಿದೆ. 14 ಜಿಲ್ಲೆಗಳು ಗುರಿಗಿಂತ ಅಧಿಕ ಸಾಧನೆ ಮಾಡಿವೆ. 4 ಜಿಲ್ಲೆಗಳು ಮಾತ್ರ ಗುರಿಗಿಂತ 75% ನಷ್ಟು ಸಾಧನೆ ಮಾಡಿದೆ. ಇಡೀ ದೇಶದಲ್ಲಿ ಅತೀ ಹೆಚ್ಚು ಲಸಿಕೆಯನ್ನು ಬಿಬಿಎಂಪಿ ವ್ಯಾಪ್ತಿಯಲ್ಲಿ (4.09 ಲಕ್ಷ) ನೀಡಲಾಗಿದೆ. ಬೆಳಗಾವಿಯಲ್ಲಿ 2.57 ಲಕ್ಷ ಲಸಿಕೆ ನೀಡಲಾಗಿದೆ. ಜಿಲ್ಲಾಮಟ್ಟದ ಸಾಧನೆಯಲ್ಲಿ ಎರಡು ಸ್ಥಾನಗಳು ರಾಜ್ಯಕ್ಕೆ ಬಂದಿವೆ. ರಾಜ್ಯದಲ್ಲಿ ಒಟ್ಟು 14.96 ಲಕ್ಷ ಲಸಿಕೆಗಳನ್ನು ಮಹಿಳೆಯರು ಪಡೆದಿದ್ದು, ಪುರುಷರಿಗಿಂತ (14.53 ಲಕ್ಷ) ಮುಂದೆ ಇದ್ದಾರೆ. ಇವೆಲ್ಲ ಸೇರಿ ಈವರೆಗೆ ಒಟ್ಟು 5 ಕೋಟಿ ಲಸಿಕೆ ನೀಡಿದ್ದು, ಕಳೆದ 20 ದಿನಗಳಲ್ಲಿ 1 ಕೋಟಿ ಲಸಿಕೆ ನೀಡಲಾಗಿದೆ. 1 ಕೋಟಿ ಜನರಿಗೆ ಎರಡೂ ಡೋಸ್ ನೀಡಲಾಗಿದೆ ಎಂಬ ಹೆಗ್ಗಳಿಕೆ ಬಂದಿದೆ. ಕಲಬುರ್ಗಿಯಲ್ಲಿ ಗುರಿಗಿಂತ ಕೇವಲ 41%, ಕೊಪ್ಪಳದಲ್ಲಿ 62%, ಉಡುಪಿಯಲ್ಲಿ 63% ಆಗಿದೆ. ಬೆಂಗಳೂರು ನಗರದಲ್ಲಿ 143%, ಶಿವಮೊಗ್ಗದಲ್ಲಿ 134%, ಧಾರವಾಡ, ಹಾಸನ, ಚಿಕ್ಕಬಳ್ಳಾಪುರ, ರಾಮನಗರ, ದಾವಣಗೆರೆ ಜಿಲ್ಲೆಗಳಲ್ಲಿ 120% ಸಾಧನೆ ಮಾಡಿವೆ ಎಂದರು.

    Vaccine

    ರಕ್ತ ಸಂಗ್ರಹ, ಅಂಗಾಂಗ ದಾನ:
    ಇದೇ ದಿನ ರಾಜ್ಯದಲ್ಲಿ ರಕ್ತದಾನ ಶಿಬಿರ ನಡೆದಿದ್ದು, ಒಟ್ಟು 5,201 ಯುನಿಟ್ ರಕ್ತ ಸಂಗ್ರಹವಾಗಿದೆ. ಬಿಬಿಎಂಪಿಯಲ್ಲಿ 1,240 ಯುನಿಟ್, ಬಳ್ಳಾರಿಯಲ್ಲಿ 298, ದಕ್ಷಿಣ ಕನ್ನಡದಲ್ಲಿ 295 ಯುನಿಟ್ ಸಂಗ್ರಹವಾಗಿದೆ. ಎರಡು ವಾರಗಳಲ್ಲಿ ಒಂದು ಲಕ್ಷ ಯುನಿಟ್ ರಕ್ತ ಸಂಗ್ರಹಿಸಬೇಕೆಂಬ ಗುರಿ ಇದ್ದು, ಇದಕ್ಕಾಗಿ ಸೂಚನೆ ನೀಡಲಾಗಿದೆ. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.1 ಜನರಿಗೆ ರಕ್ತ ಬೇಕಿದೆ ಎಂದರು. ಇದನ್ನೂ ಓದಿ: ಜನವರಿ ವೇಳೆಗೆ ಮಕ್ಕಳ ಲಸಿಕೆ ಲಭ್ಯವಾಗಬಹುದು: ಆದಾರ್ ಪೂನಾವಾಲಾ

    Koppala Vaccine 2

    ಅಂಗಾಂಗ ಕಸಿಗೂ ದಾನ ಹೆಚ್ಚಬೇಕಿದೆ. ಇದಕ್ಕಾಗಿ ಮೆಡಿಕಲ್ ಕಾಲೇಜು, ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ದಾನ ವಿಭಾಗ ಆರಂಭಿಸಲು ತೀರ್ಮಾನಿಸಲಾಗಿದೆ. ಜೊತೆಗೆ ಮುಖ್ಯಮಂತ್ರಿಗಳಿಂದ ದೊಡ್ಡ ಅಭಿಯಾನಕ್ಕೆ ಚಾಲನೆ ನೀಡಿ ಜಾಗೃತಿ ಮೂಡಿಸಿ ಇಡೀ ದೇಶಕ್ಕೆ ಸಂದೇಶ ರವಾನಿಸಲಾಗುವುದು. ಜೊತೆಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಅನ್ನು ಪ್ರತಿ ಕುಟುಂಬಕ್ಕೆ ನೀಡಲು ಮೂರು ತಿಂಗಳ ಗುರಿ ನೀಡಲಾಗುವುದು. ಎರಡೂವರೆ ಕೋಟಿ ಕುಟುಂಬಕ್ಕೆ ನೀಡುವ ಗುರಿ ಇದೆ ಎಂದರು. ಇದನ್ನೂ ಓದಿ: ಲಸಿಕೆ ವಿತರಣೆ- ದೇಶದಲ್ಲಿ ಬೆಂಗಳೂರು ನಂಬರ್ 1

     

    ವಿಷನ್ ವರದಿ:
    250 ತಜ್ಞರು ಸೇರಿ ರೂಪಿಸಿದ ಆರೋಗ್ಯ ವಲಯದ ವಿಷನ್ ವರದಿಯನ್ನು ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿಗಳಿಗೆ ನೀಡಿ ಅವರಿಂದ ಚಾಲನೆ ನೀಡಲಾಗುವುದು ಎಂದರು. ಓರ್ವ ವ್ಯಕ್ತಿ ನಿಫಾ ಪರೀಕ್ಷೆ ಮಾಡಿಸಿಕೊಂಡಿದ್ದು, ಅವರನ್ನು ಐಸೋಲೇಟ್ ಮಾಡಲಾಗಿದೆ. ಇನ್ನೂ ವರದಿ ಬಂದಿಲ್ಲ. ಹಿಂದೂ ಧರ್ಮ ರಕ್ಷಣೆ ಬಗ್ಗೆ ಕಾಂಗ್ರೆಸ್ ನಿಂದ ಪಾಠ ಕಲಿಯಬೇಕಿಲ್ಲ. ಹಿಂದುತ್ವದ ರಕ್ಷಣೆ ಬಿಜೆಪಿಗೆ ಸ್ವಾಭಾವಿಕವಾಗಿಯೇ ಬಂದಿದೆ. ಈ ವಿಚಾರದಲ್ಲಿ ಅಚಾತುರ್ಯವಾಗಿದ್ದರೆ ಸರಿಪಡಿಸಲಾಗುತ್ತದೆ ಎಂದರು.

  • ಕೋವಿಡ್ ಬರೋಕೆ ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ: ಸಿದ್ದರಾಮಯ್ಯ

    ಕೋವಿಡ್ ಬರೋಕೆ ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ: ಸಿದ್ದರಾಮಯ್ಯ

    – ಯಡಿಯೂರಪ್ಪ ಮಾಡಿದ್ದು ತಿಥಿ ಊಟ, ಮದ್ವೆಯದ್ದು ಅಲ್ಲ
    – ಬಿಎಸ್‍ವೈಗೆ ಮುಂಬಾಗಿಲಿನಿಂದ ಬಂದು ಗೊತ್ತಿಲ್ಲ

    ಬೆಂಗಳೂರು: ಕೋವಿಡ್ ಸಾಂಕ್ರಾಮಿಕ ರೋಗ ನಾವು ಕಂಡು, ಕೇಳಿರಲಿಲ್ಲ. ಚೀನಾದಿಂದ ನಮ್ಮ ದೇಶಕ್ಕೆ ಬಂದಿದೆ. ಕೋವಿಡ್ ಬರೋಕೆ ನಾವು ಕಾರಣನಾ? ಯಾರು ಸರ್ಕಾರ ನಡೆಸುತ್ತಾರೋ ಅವರೇ ಕಾರಣ ಎಂದು ಬಿಜೆಪಿ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.

    corona 1 medium

    ಪದ್ಮನಾಭ ನಗರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಈ ಕ್ಷೇತ್ರದಲ್ಲಿ ಕೋವಿಡ್ ಬರೋಕೆ ಆರ್. ಅಶೋಕ್ ಕಾರಣ. ಅವರು ಸಿಎಂ ಆಗದೆ ಇರಬಹುದು. ಆದರೆ ಈ ಹಿಂದೆ ಕಂದಾಯ ಸಚಿವರಾಗಿದ್ದರು. ಅಶೋಕ್ ಅವರನ್ನು ಅನೇಕ ಬಾರಿ ಗೆಲ್ಲಿಸಿದ್ದೀರಿ. ಜನರಿಗೆ ಆಹಾರ, ಔಷಧಿ, ಬೆಡ್ ಗಳು ಕೊಡುವುದು ಅಶೋಕ್ ಜವಾಬ್ದಾರಿ ಆದರೆ ಅವರು ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

    R Ashok 1

    ಇಲ್ಲಿ ಕಾರ್ಯಕ್ರಮ ನಡೆಸಲು ಅಶೋಕ್ ಅನುಮತಿ ಪಡೆಯಬೇಕಂತೆ. ಈ ಮೈದಾನ ಏನೂ ಅಶೋಕ್ ಅವರ ಅಪ್ಪನ ಮನೆ ಆಸ್ತಿನಾ. ಇದು ಪಬ್ಲಿಕ್ ಪ್ರಾಪರ್ಟಿ. ಅಧಿಕಾರಿಗಳು ಇದಕ್ಕೆ ಮಣೆ ಹಾಕಬಾರದು. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಅಧಿಕಾರಗಳು ಎಚ್ಚರಿಯಿಂದ ಇರಬೇಕು. ಅಶೋಕ್ ಒಬ್ಬ ಶಾಸಕ ಅಷ್ಟೇ ಎಂದು ಕಿಡಿಕಾರಿದರು. ಇದನ್ನೂ ಓದಿ: ಬೆಂಗಳೂರಿನ 32 ಕಡೆ ಕೊರೊನಾ ಸ್ಫೋಟ

    BSY CRY 1

    ತಿಥಿ ಊಟ ಮಾಡಿದವರು:
    ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ತೆಗೆದು ಹಾಕಿದ್ದಾರೆ. ವಯಸ್ಸು ಆಗಿದೆ ಎಂದು ತೆಗೆದಿಲ್ಲ. ಬದಲಾಗಿ ದುಡ್ಡು ಹೊಡೆದ್ರು ಅಂತಾ ತೆಗೆದಿದ್ದು. ಅಪ್ಪ – ಮಗ ಸೇರಿ ಲೂಟಿ ಮಾಡಿದ್ರು ಅಂತ ತೆಗೆದ್ರು ಐಟಿ, ಇಡಿ ಕೇಸ್ ಇದೆ ಎಂದು ಹೇಳಿ ಕೆಳಗಿಳಿಸಿದ್ದಾರೆ. ಆರ್.ಟಿ.ಜಿಎಸ್ ಮೂಲಕ ಹಣ ತೆಗೆದುಕೊಂಡಿದ್ದಾರೆ. ಯಡಿಯೂರಪ್ಪ ಮದುವೆ ಊಟ ಮಾಡೇ ಇಲ್ಲ. ಬರೀ ತಿಥಿ ಊಟ ಮಾಡಿದವರು ಅವರು. ಅವರಿಗೆ ಮುಂಬಾಗಿಲಿಂದ ಬಂದು ಗೊತ್ತೇ ಇಲ್ಲ. ಹಿಂಬಾಗಿಲಿಂದ ಬಂದವರು ಅವರು. ನಮ್ಮ ಎಂಎಲ್‍ಎಗಳನ್ನು ಕರೆಕೊಂಡು ಸರ್ಕಾರ ಮಾಡಿದ್ದಾರೆ. ಬೊಮ್ಮಾಯಿ ಬಗ್ಗೆ ಈಗ ಮಾತಾಡಲ್ಲ. ಹೋಗಲಿ ಮೂರ್ನಾಲ್ಕು ತಿಂಗಳು ಆಮೇಲೆ ಅವರ ಬಗ್ಗೆ ಮಾತಾಡುತ್ತೇನೆ. ಬೊಮ್ಮಾಯಿಯನ್ನು ಸಿಎಂ ಮಾಡಿದ್ದು ಯಡಿಯೂರಪ್ಪ ಹಾಗಾಗಿ ಸ್ಟ್ಯಾಂಪ್ ಆಗವುದು ಬಿಟ್ಟು ಅವರು ಏನು ಮಾಡುತ್ತಾರೆ. ಬೊಮ್ಮಾಯಿ ಸಿಎಂ ಆದರು ಏನು ಬದಲಾವಣೆ ಆಗಲ್ಲ. ಭ್ರಷ್ಟ ಸರ್ಕಾರವಿದು ಎಂದು ಟೀಕೆ ವ್ಯಕ್ತಪಡಿಸಿದರು.

    BOMMAI 1

    ಈ ಬದಲಾವಣೆ ಮಾಡಿ:
    ಪದ್ಮನಾಭ ನಗರದಲ್ಲಿ ನಮ್ಮನ್ನು ಸೋಲಿಸಿದ್ದೀರಿ. ಅಶೋಕ್ ಅವರನ್ನು ಗೆಲ್ಲಿಸಿದ್ದೀರಿ. ಆರು ಬಾರಿ ಗೆಲ್ಲಿಸಿದ್ದೀರಿ. ನಿಮ್ಮ ದಮ್ಮಯ್ಯ ಅಂತಿನಿ ಈ ಬಾರಿ ಬದಲಾವಣೆ ಮಾಡಿ. ಈ ವೇಳೆ ಒಳ್ಳೆಯ ಕ್ಯಾಂಡಿಡೇಟ್ ಬೇಕು ಎಂದು ಕಾರ್ಯಕರ್ತರು ಕಿರುಚಿದರು. ಒಳ್ಳೆಯ ಕ್ಯಾಂಡಿಡೇಟ್ ಕೊಡುತ್ತೇವೆ ಈ ಸಾರಿ ಎಂದರು. ಇದಕ್ಕೆ ನೀವೇ ಸ್ಪರ್ಧೆ ಮಾಡಿ ಎಂದು ಕಾರ್ಯಕರ್ತರು ಕೂಗಿದರು. 224 ಕ್ಷೇತ್ರದಲ್ಲೂ ನಾನೇ ನಿಲ್ಲೋಕೆ ಆಗಲ್ಲ. ನಾನು ಈಗ ಬಾದಾಮಿ ಶಾಸಕ. ಬಾದಾಮಿಯಿಂದ ನಿಲ್ಲುತ್ತೇನೆ. ಚುನಾವಣೆಗೆ ಹೋಗೋಕೆ ನಾವು ಸಿದ್ಧರಾಗಿದ್ದೇವೆ.

  • ಡೆಲ್ಟಾ ಪ್ಲಸ್ ವಿರುದ್ಧ ಕೊವ್ಯಾಕ್ಸಿನ್ ಪರಿಣಾಮಕಾರಿ: ಐಸಿಎಂಆರ್

    ಡೆಲ್ಟಾ ಪ್ಲಸ್ ವಿರುದ್ಧ ಕೊವ್ಯಾಕ್ಸಿನ್ ಪರಿಣಾಮಕಾರಿ: ಐಸಿಎಂಆರ್

    ನವದೆಹಲಿ: ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ, ಡೆಲ್ಟಾ ಪ್ಲಸ್ ರೂಪಾಂತರಿ ವೈರಾಣು ವಿರುದ್ಧ ಪರಿಣಾಮಕಾರಿ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ(ಐಸಿಎಂಆರ್)ಯ ಇತ್ತೀಚಿನ ಅಧ್ಯಯನ ತಿಳಿಸಿದೆ.

    DELTA 1 medium

    ಕೊವ್ಯಾಕ್ಸಿನ್ ಲಸಿಕೆಯನ್ನು ಐಸಿಎಂಆರ್ ಮತ್ತು ರಾಷ್ಟ್ರೀಯ ವೈರಾಲಜಿ ಇನ್‍ಸ್ಟಿಟ್ಯೂಟ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದ್ದು, ಇದು ಕೋವಿಡ್-19 ವೈರಸ್ ವಿರುದ್ಧ ಶೇ.77.8ರಷ್ಟು ಮತ್ತು ಡೆಲ್ಟಾ ವೈರಾಣು ವಿರುದ್ಧ ಶೇ.65.2ರಷ್ಟು ಪರಿಣಾಮಕಾರಿ ಎಂದು ಹೇಳಲಾಗಿತ್ತು. ಆದರೆ ಕೊವೀಡ್-19 ರೂಪಾಂತರಿ ತಳಿಯಾದ, ಹೆಚ್ಚು ಅಪಾಯಕಾರಿ ಎಂದು ಪರಿಗಣಿಸಲ್ಪಟ್ಟಿರುವ ಡೆಲ್ಟಾ ಪ್ಲಸ್ ವೈರಾಣು ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು ಎಂದು ಐಸಿಎಂಆರ್‍ ನ ಸದ್ಯದ ಅಧ್ಯಯನದಿಂದ ತಿಳಿದುಬಂದಿದೆ. ಇದನ್ನೂ ಓದಿ: ವುಹಾನ್‌ ಲ್ಯಾಬ್‌ನಿಂದ ಕೊರೊನಾ ವೈರಸ್‌ ಸೋರಿಕೆಯಾಗಿಲ್ಲ – ಡಬ್ಲ್ಯುಎಚ್‌ಒ ನಿಯೋಗ

    ಕೊವ್ಯಾಕ್ಸಿನ್ ಮೂರು ಹಂತದ ಕ್ಲಿನಿಕಲ್ ಪ್ರಯೋಗ ಆಗದಿದ್ದರೂ ಭಾರತದಲ್ಲಿ ತುರ್ತು ಬಳಕೆಗೆ ಅವಕಾಶ ನೀಡಲಾಗಿತ್ತು. ಇತ್ತೀಚೆಗಷ್ಟೇ ಭಾರತ್ ಬಯೋಟೆಕ್ ಸಂಸ್ಥೆ, ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗದ ಫಲಿತಾಂಶ ಘೋಷಿಸಿತ್ತು. ಅದರ ಅನ್ವಯ ಈ ಲಸಿಕೆ ಲಕ್ಷಣ ಸಹಿತ ಕೊವೀಡ್-19 ಸೋಂಕಿನ ವಿರುದ್ಧ ಶೇ.77.8ರಷ್ಟು ಪರಿಣಾಮಕಾರಿ ಎಂದು ತಿಳಿಸಿತ್ತು. ಇದೀಗ ಡೆಲ್ಟಾ ಪ್ಲಸ್ ವಿರುದ್ಧವು ಪರಿಣಾಮಕಾರಿ ಎಂದು ವರದಿಯಾಗಿದೆ.

  • ಎರಡ್ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್

    ಎರಡ್ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ: ಡಾ.ಕೆ.ಸುಧಾಕರ್

    – ಲಸಿಕೆಯ ಮಹತ್ವ ಜನರಿಗೆ ಅರ್ಥವಾಗಿದೆ

    ಚಿಕ್ಕಬಳ್ಳಾಪುರ: ಇಡೀ ರಾಜ್ಯದಲ್ಲಿ ಎರಡು, ಮೂರು ತಿಂಗಳಲ್ಲಿ 6 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

    sudakar 4

    ಎಂಪಿಎಲ್ ಸಂಸ್ಥೆಯಿಂದ ಉಚಿತ ಕೋವಿಡ್ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸುಧಾಕರ್ ಅವರು, ದೇಶದಲ್ಲಿ ಕೋವಿಡ್ ಲಸಿಕೆ ಬಗ್ಗೆ ಕೆಲವು ಪಕ್ಷಗಳು ಭಯ ಉಂಟುಮಾಡಿದವು. ಭೀತಿ ಉಂಟುಮಾಡುವ ಹೇಳಿಕೆಗಳನ್ನು ನೀಡಿ ಜನರ ದಿಕ್ಕು ತಪ್ಪಿಸಲಾಯಿತು. ಆದರೆ ಜನರಿಗೆ ಇತ್ತೀಚಿನ ದಿನಗಳಲ್ಲಿ ಅರ್ಥವಾಗಿದೆ. ಲಸಿಕೆ ಪಡೆದುಕೊಂಡವರಿಗೆ ಕೊರೊನಾ ಬಂದಿಲ್ಲ ಎಂಬುದು ಎಲ್ಲರಿಗೂ ಗೊತ್ತಾಗಿದೆ. ಇಡೀ ರಾಜ್ಯದಲ್ಲಿ ಎರಡು ಮೂರು ತಿಂಗಳಲ್ಲಿ 5-6 ಕೋಟಿ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ ಎಂದರು.

    SUDAKAR

    ಎಂಪಿಎಲ್ ಸಂಸ್ಥೆ ಮೊದಲ ಕಂತಿನಲ್ಲಿ 2,500 ಲಸಿಕೆ ನೀಡಿದೆ. ನಗರಕ್ಕೆ 2,000 ಹಾಗೂ 500 ಮಂಚೇನಹಳ್ಳಿ ಭಾಗಕ್ಕೆ ನೀಡಿದೆ. ರಾಜ್ಯಕ್ಕೆ ಈವರೆಗೆ 1 ಲಕ್ಷ ಲಸಿಕೆಯನ್ನು ಸಂಸ್ಥೆ ನೀಡಿದೆ. ಶೇ.25 ರಷ್ಟು ಲಸಿಕೆಯನ್ನು ಖಾಸಗಿ ವಲಯಕ್ಕೆ ಮೀಸಲಿಡಲಾಗಿದೆ. ಇದನ್ನು ಸಂಸ್ಥೆಗಳು ಮುಂದೆ ಬಂದು ಖರೀದಿ ಮಾಡಿ ಜನರಿಗೆ ಉಚಿತವಾಗಿ ನೀಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಸಂದೇಶ ಬಂದಿಲ್ಲ, ಕಡೆ ಕ್ಷಣದವರೆಗೂ ಕೆಲಸ ಮಾಡ್ತೇನೆ: ಸಿಎಂ ಯಡಿಯೂರಪ್ಪ

    SUDAKAR 1 2

    ಕಾಳಜಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ಬಳಕೆಗೆ ಆದ್ಯತೆ ನೀಡಲಾಗಿದೆ. ಮೊಬೈಲ್ ಕ್ಲಿನಿಕ್ ಗಳನ್ನೂ ಕಳುಹಿಸಲಾಗಿದೆ. ಮಳೆಗಾಲದಲ್ಲಿ ನೀರಿನಿಂದ ಬರುವ ರೋಗಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಕಡಿಮೆಯಾದಂತೆ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಲಾಗಿದೆ. ನಂದಿ ಭಾಗದಲ್ಲಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುವುದು. ಕೆ.ಸಿ.ವ್ಯಾಲಿ, ಎಚ್.ಎನ್.ವ್ಯಾಲಿ ಬಳಿ ವೃಷಭಾವತಿಯಿಂದ ನೀರು ತರುವ ಯೋಜನೆ ರೂಪಿಸಲಾಗಿದೆ. ಇದರಿಂದ 50 ಕೆರೆಗಳಿಗೆ ನೀರು ತುಂಬಿಸಲಾಗುವುದು. ಎತ್ತಿನಹೊಳೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಕೋರಲಾಗಿದೆ. ಕೃಷಿಗೆ ಹೊಂದಿಕೊಂಡ ಕೈಗಾರಿಕೆ ಸ್ಥಾಪಿಸಲು ಕೇಂದ್ರ ಸಚಿವರಿಗೆ ಮನವಿ ಮಾಡಲಾಗಿದೆ. ಇದಕ್ಕೆ ಬೇಕಾದ ಜಮೀನು ಗುರುತಿಸಲಾಗುವುದು ಎಂದು ಮಾಹಿತಿ ನೀಡಿದರು.

    sudakar 6

    ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ಒಳ್ಳೆಯ ಬೆಳೆ ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿಯವರು ಶೇ.150 ರಷ್ಟು ರಸಗೊಬ್ಬರ ಸಬ್ಸಿಡಿ ನೀಡಿದ್ದಾರೆ. ಆದರೆ ವಿರೋಧಿಗಳು ಏನೂ ಮಾಡಿಲ್ಲವೆಂದು ಟೀಕಿಸುತ್ತಾರೆ. ಈ ಮಟ್ಟಿಗೆ ಸಬ್ಸಿಡಿ ಹೆಚ್ಚಳವನ್ನು ಇತಿಹಾಸದಲ್ಲಿ ಯಾವುದೇ ಸರ್ಕಾರ ಮಾಡಿಲ್ಲ. ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರ ಪರಿಹಾರ ನೀಡುತ್ತಿದೆ. ಪ್ರತಿ ಕೋವಿಡ್ ರೋಗಿಗೆ ಉಚಿತ ಚಿಕಿತ್ಸೆ ನೀಡಲಾಗಿದೆ. ಪರೀಕ್ಷೆ, ಆಂಬ್ಯುಲೆನ್ಸ್, ಕೋವಿಡ್ ಕೇರ್ ಸೆಂಟರ್ ಎಲ್ಲವನ್ನೂ ಉಚಿತವಾಗಿ ನೀಡಲಾಗಿದೆ. ಎಲ್ಲರೂ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಿದರೆ ಮೂರನೇ ಅಲೆ ಬರಲು ಸಾಧ್ಯವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
    ಇದನ್ನೂ ಓದಿ: ಸೈಕಲ್ ಏರಿ ತೇಜಸ್ವಿಸೂರ್ಯ ಸಿಟಿ ರೌಂಡ್ಸ್- ಮಾಸ್ಕ್ ಎಲ್ಲಿ ಎಂದ ನೆಟ್ಟಿಗರು

  • ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಸೆಣಸಾಟ

    ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ಮೊದಲ ಪಂದ್ಯದಲ್ಲಿ ಚೆನ್ನೈ- ಮುಂಬೈ ಸೆಣಸಾಟ

    ಮುಂಬೈ: ಕೊರೊನಾದಿಂದಾಗಿ ಮುಂದೂಡಲ್ಪಟ್ಟ 2021ರ ಐಪಿಎಲ್ ಟೂರ್ನಿಯನ್ನು ಸೆಪ್ಟೆಂಬರ್‍ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ)ನಲ್ಲಿ ನಡೆಸಲು ಈಗಾಗಲೇ ಬಿಸಿಸಿಐ ನಿರ್ಧರಿಸಿದೆ. ಇದರಂತೆ ಇದೀಗ ಸೆಪ್ಟೆಂಬರ್ 19ರಂದು ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಸೆಣಸಾಡಲಿದೆ ಎಂದು ವರದಿಯಾಗಿದೆ.

    ipl e1600532910608

    14ನೇ ಆವೃತ್ತಿಯ ಐಪಿಎಲ್‍ನ 29 ಪಂದ್ಯಗಳು ನಡೆದ ಬಳಿಕ ಕೆಲ ಆಟಗಾರರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಮೇ 4ರಂದು ಐಪಿಎಲ್-2021 ಮುಂದೂಡಲಾಗಿತ್ತು. ಬಳಿಕ ಬಿಸಿಸಿಐ ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಇನ್ನುಳಿದ 31 ಪಂದ್ಯಗಳನ್ನು ದುಬೈ, ಅಬುದಾಬಿ ಮತ್ತು ಶಾರ್ಜಾ ಕ್ರೀಡಾಂಗಣದಲ್ಲಿ ನಡೆಸಲು ತೀರ್ಮಾನಿಸಿದೆ. ಈಗಿನ ವೇಳಾಪಟ್ಟಿಯ ಪ್ರಕಾರ ಸೆಪ್ಟೆಂಬರ್ 19ಕ್ಕೆ ಪ್ರಾರಂಭಗೊಂಡು ಅಕ್ಟೋಬರ್ 15ಕ್ಕೆ ಫೈನಲ್ ಪಂದ್ಯ ನಡೆಸಲು ಪ್ಲಾನ್ ಮಾಡಿಕೊಂಡಿದೆ. ಇದನ್ನೂ ಓದಿ: ಸೆಪ್ಟೆಂಬರ್‌ನಿಂದ ನಡೆಯಲಿವೆ ಮುಂದೂಡಲ್ಪಟ್ಟ ಐಪಿಎಲ್ ಪಂದ್ಯಗಳು- ಬಿಸಿಸಿಐ ಘೋಷಣೆ

    ipl 2020 a

    ಈಗಾಗಲೇ ಬಿಸಿಸಿಐ ಮೂಲಗಳು ತಿಳಿಸಿರುವ ಪ್ರಕಾರ ಐಪಿಎಲ್ ಸೆಕೆಂಡ್ ಇನ್ನಿಂಗ್ಸ್ ನ ಮೊದಲ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಸಾರಥ್ಯದ ಸಿಎಸ್‍ಕೆ ಮತ್ತು ರೋಹಿತ್ ಶರ್ಮಾ ಮುಂದಾಳತ್ವದ ಮುಂಬೈ ತಂಡಗಳು ಸೆಣಸಾಡಲಿದೆ ಎಂದು ವರದಿಯಾಗಿದೆ. ಈ ಸುದ್ದಿ ಹೊರ ಬರುತ್ತಿದ್ದಂತೆ ಕ್ರಿಕೆಟ್ ಪ್ರಿಯರು ಸಂತಸಗೊಂಡಿದ್ದಾರೆ.

  • ನಮ್ಮ ಕೆರೆ ನಮ್ಮ ಹಕ್ಕು ಅಭಿಯಾನಕ್ಕೆ ವ್ಯಾಪಕ ಬೆಂಬಲ

    ನಮ್ಮ ಕೆರೆ ನಮ್ಮ ಹಕ್ಕು ಅಭಿಯಾನಕ್ಕೆ ವ್ಯಾಪಕ ಬೆಂಬಲ

    – ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

    ಬೆಂಗಳೂರು: ದಿನೇ ದಿನೇ ಬದಲಾಗುತ್ತಿರುವ ಕಾಲಘಟ್ಟದಲ್ಲಿ, ನಮ್ಮ ಭೂಮಿ ಕಸದ ತೊಟ್ಟಿಯಾಗುತ್ತಿದೆ. ಪರಿಸರ ಮಾಲಿನ್ಯ ಎಲ್ಲೆ ಮೀರಿದೆ ಇದರ ಪರಿಣಾಮ, ಕೊರೊನಾದಂತಹ ಹೊಸ ಬಗೆಯ ರೋಗಾಣುಗಳ ಸೃಷ್ಟಿಯಾಗಿದೆ. ಹಾಗಾಗಿ ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಸಲುವಾಗಿ ಸಂಪೂರ್ಣ ಕಲುಷಿತಗೊಂಡಿರುವ ನೆಲಮಂಗಲ ಮತ್ತು ಬಿನ್ನಮಂಗಲ ಕೆರೆಗಳನ್ನು ಉಳಿಸಿ ಎಂಬ ಅಭಿಯಾನವನ್ನು ಸಾರ್ವಜನಿಕರು ಹಮ್ಮಿಕೊಂಡಿದ್ದಾರೆ.

    NELAMNGALA LAKE 2

    ಕೊರೊನಾದಿಂದ ಆದಂತಹ ಅವಾಂತರಗಳು, ದುರಂತಗಳು ನಮ್ಮ ಕಣ್ಣ ಮುಂದಿದೆ. ಮುಂದಿನ ದಿನಗಳಲ್ಲಿ ಇಂತಹ ಕಾಯಿಲೆಗಳಿಂದ ನಮ್ಮನ್ನು ಮತ್ತು ಮುಂದಿನ ತಲೆಮಾರನ್ನು ರಕ್ಷಿಸಲು ನಮಗಿರುವ ಮಾರ್ಗ, ನಗರದ ಹೆಮ್ಮೆಯಾಗಿದ್ದ ಐತಿಹಾಸಿಕ ಹಿನ್ನೆಲೆಯಿರುವ ಈ ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಆದ್ಯತೆಯಾಗಿದೆ. ಅದಕ್ಕಾಗಿ ಎಲ್ಲರೂ ಕೈಜೋಡಿಸಿ ಅಭಿಯಾನವೊಂದನ್ನು ಆರಂಭಿಸೋಣ ಎಂದು ಕೆರೆ ಅಭಿವೃದ್ಧಿ ಉತ್ಸಾಹಿಗಳ ತಂಡ ನೆಲಮಂಗಲ ತಾಲೂಕಿನಲ್ಲಿ ರಚನೆಯಾಗಿದೆ. ಇದನ್ನೂ ಓದಿ: ನೀರಾವರಿ ಇಲಾಖೆಗೆ 12 ಸಾವಿರ ಕೋಟಿ ನೀಡಿರುವುದು ದುಡ್ಡು ಲೂಟಿ ಮಾಡೋಕೆ: ಹೆಚ್‍ಡಿಕೆ

    NELAMNGALA LAKE 3

    ನಾಳೆ ತಾಲೂಕಿನ ಪೂಜ್ಯ ಸ್ವಾಮೀಜಿಗಳು, ಸರ್ವ ಪಕ್ಷಗಳ ಜನ ಪ್ರತಿನಿಧಿಗಳು ಮತ್ತು ಮುಖಂಡರು, ಸಾಹಿತಿಗಳು, ಕಲಾವಿದರು, ಹಿರಿಯರು, ಚಿಂತಕರು, ಕೊರೊನಾ ಮುಕ್ತ ನೆಲಮಂಗಲ ತಂಡದವರು, ಪರಿಸರ ಪ್ರೇಮಿಗಳು, ರೈತಪರ ಹೋರಾಟಗಾರರು, ವರ್ತಕರು, ಸಾರ್ವಜನಿಕ ಹಿತಾಸಕ್ತಿಯ ಕಟ್ಟಾಳುಗಳು, ಮಹಿಳೆಯರು, ಪ್ರಜ್ಞಾವಂತ ನಾಗರಿಕರು ಹಾಗೂ ಯುವಕರು ಈ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕರೆ ನೀಡಲಾಗಿದೆ. ಶುಕ್ರವಾರ ಬೆಳಗ್ಗೆ 10 ಗಂಟೆಗೆ ಬಿನ್ನಮಂಗಲ ಕೆರೆಯಿಂದ ಪ್ರವಾಸಿ ಮಂದಿರದವರೆಗೆ ಬೈಕ್ ರ್ಯಾಲಿ ನಡೆಯಲಿದ್ದು, ನಂತರ ಪ್ರವಾಸಿ ಮಂದಿರದಿಂದ ನೆಲಮಂಗಲ ಕೆರೆಯವರೆಗೆ ಪಾದಯಾತ್ರೆ ನಡೆಯಲಿದೆ. ನೂರಾರು ಜನರು ಸೇರುವ ನಿರೀಕ್ಷೆ ಇದ್ದು, ಈ ಅಭಿಯಾನಕ್ಕೆ ವ್ಯಾಪಕವಾಗಿ ಬೆಂಬಲ ಸಿಕ್ಕಿದೆ.

  • ಶಾಲೆಗಳ ಆರಂಭ ಸೋಮವಾರದ ನಂತರ ನಿರ್ಧಾರ: ಸುರೇಶ್ ಕುಮಾರ್

    ಶಾಲೆಗಳ ಆರಂಭ ಸೋಮವಾರದ ನಂತರ ನಿರ್ಧಾರ: ಸುರೇಶ್ ಕುಮಾರ್

    ಬೆಂಗಳೂರು: ಶಾಲೆಗಳು ಪುನರಾರಂಭಕ್ಕೆ ಇನ್ನೂ ಆಲೋಚನೆ ಮಾಡಿಲ್ಲ, ಶಿಕ್ಷಣ ಆಯುಕ್ತರ ನೇತೃತ್ವದಲ್ಲಿ ಕಾರ್ಯಪಡೆ ರಚನೆ ಮಾಡಲಾಗಿದ್ದು ಸೋಮವಾರ ಆಯುಕ್ತರು ವರದಿ ನೀಡಿದ ಬಳಿಕ ಶಾಲೆಗಳ ಆರಂಭಿಸುವ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

    SURESHKUMAR 2 2

    ಬೆಂಗಳೂರು ಪೂರ್ವ ತಾಲೂಕು ವ್ಯಾಪ್ತಿಯ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುರೇಶ್ ಕುಮಾರ್, ಕೆಆರ್ ಪುರದ ಐಟಿಐ ವಿದ್ಯಾಮಂದಿರ, ಸರ್ಕಾರಿ ಪಬ್ಲಿಕ್ ಶಾಲೆ, ಎಸ್‍ಜೆಇಎಸ್, ಬಿವಿಎನ್ ಹೆಚ್.ಎಸ್ ಶಾಲೆ ಸೇರಿದಂತೆ ಹಲವು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ, ರಾಜ್ಯಾದ್ಯಂತ 99.6% ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.

    SCHOOL 768x430 1

    ರಾಜ್ಯಾದ್ಯಂತ ಶಾಲೆಗಳನ್ನು ಆರಂಭಿಸುವ ಬಗ್ಗೆ ಮಾತನಾಡಿ, ಐಸಿಎಂಆರ್ ನಿಂದಲೂ ಶಾಲೆಗಳನ್ನು ಪ್ರಾರಂಭಿಸಬಹುದು ಎಂದು ವರದಿ ಬಂದಿದೆ. ಇದರೊಂದಿಗೆ ದೇವಿ ಶೆಟ್ಟಿ ಅವರು ಕೊಟ್ಟಿರುವ ವರದಿಯನ್ನು ಅಧ್ಯಯನ ಮಾಡಿ ತದನಂತರ ಶಾಲೆಗಳನ್ನು ಅರಂಭಿಸುವ ಕುರಿತು ನಿರ್ಧಾರ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು. ಇದನ್ನೂ ಓದಿ: ಬಿಎಸ್‍ವೈ ಸಿಎಂ ಸ್ಥಾನದಿಂದ ಕೆಳಗಿಳಿದರೆ ದೇವೇಗೌಡರ ಜೊತೆ ಸೇರಿ ಪ್ರಾದೇಶಿಕ ಪಕ್ಷ ಕಟ್ಟಲಿ: ಜೆಡಿಎಸ್ ಶಾಸಕ

  • ಮೋದಿ ಚಪ್ಪಾಳೆ, ತಟ್ಟೆ ಹೊಡೆಯೋದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿಕೆಶಿ

    ಮೋದಿ ಚಪ್ಪಾಳೆ, ತಟ್ಟೆ ಹೊಡೆಯೋದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿಲ್ಲ: ಡಿಕೆಶಿ

    – ಲಂಬಾಣಿ ಸಮುದಾಯದ ಜೊತೆ ಸಂವಾದ

    ವಿಜಯಪುರ: ಕೋವಿಡ್ ಸಂದರ್ಭದಲ್ಲಿ ಮೋದಿ ಚಪ್ಪಾಳೆ, ತಟ್ಟೆ ಹೊಡೆಯೊದು ಬಿಟ್ಟು ಅಭಿವೃದ್ಧಿ ಕೆಲಸ ಮಾಡಿಲ್ಲ. ಅಲ್ಲದೆ ನಾನು ಕೋವಿಡ್ ಸಂದರ್ಭದಲ್ಲಿ ವಲಸೆ ಕಾರ್ಮಿಕ ಸಹಾಯ ಮಾಡಲು ಸಿಎಂ ಬಿಎಸ್‍ವೈ ಗೆ ಚೆಕ್ ಕೊಟ್ಟೆ ಅದನ್ನು ಅವರು ಉಪಯೋಗ ಮಾಡಿಕೊಂಡಿಲ್ಲ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

    DK SHIVAKUMAR 3 medium

    ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ತಾಂಡಾದಲ್ಲಿ ಸಂವಾದ ಕಾರ್ಯಕ್ರಮ ನಡೆಸಿದ ಬಳಿಕ ಮಾತನಾಡಿದ ಡಿಕೆಶಿ, ನಾನು ಕೋವಿಡ್ ಸಂದರ್ಭ ಸಿಎಂ ಜೊತೆ ವಲಸೆ ಕಾರ್ಮಿಕರ ಸಹಾಯಕ್ಕಾಗಿ ವೀಡಿಯೋ ಮೂಲಕ ಕೇಳಿಕೊಂಡಿದ್ದೆ. ಕೊರೊನಾದಿಂದಾಗಿ ಲಕ್ಷಾಂತರ ಮಂದಿ ವ್ಯಾಪಾರ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಅವರಿಗೂ ಸರ್ಕಾರ ಸೂಕ್ತ ಪರಿಹಾರ ನೀಡಿಲ್ಲ. ನಾನು ಮೀನುಗಾರರನ್ನು ಭೇಟಿಯಾಗಿದ್ದೇನೆ. ಒಬ್ಬ ಮೀನುಗಾರನ ಹಿಂದೆ ಇಡಿ ಕುಟುಂಬ ಇರುತ್ತದೆ. ಅಲ್ಲದೇ ತಾಂಡಾಗಳಿಗೆ ಹೆಚ್ಚಿನ ಆದ್ಯತೆ ನೀಡಿ ಎಂದು ಕೇಳಿಕೊಂಡರು ಏನು ಕ್ರಮ ಕೈಗೊಂಡಿಲ್ಲ ಎಂದು ಯಡಿಯೂರಪ್ಪ ಸರ್ಕಾರದ ವಿರುದ್ಧ ಕಿಡಿಕಾರಿದರು.

    DK SHIVAKUMAR 1 3 medium

    ಈ ಮೊದಲು ಲಂಬಾಣಿ ಸಮುದಾಯದ ಜೊತೆ ಡಿ.ಕೆ ಶಿವಕುಮಾರ್ ಸಂವಾದ ನಡೆಸಿದರು. ತಾಂಡಾದ ಜನರೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆ ಆಲಿಸಿದರು. ವೇದಿಕೆಯ ಕೆಳ ಭಾಗದಲ್ಲೇ ಕುಳಿತು ಡಿಕೆಶಿ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು. ಇದನ್ನೂ ಓದಿ: ಬಿಜೆಪಿಯವರು ಲಿಂಗಾಯತ ಸಮುದಾಯವನ್ನು ತಮ್ಮ ಆಸ್ತಿ ಅಂತ ತಿಳಿದುಕೊಂಡಿದ್ದಾರೆ: ಡಿಕೆಶಿ

    DK SHIVAKUMAR 5 medium

    ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ಯಶವಂತ ರಾಯಗೌಡಾ ಪಾಟೀಲ್ ಸೇರಿದಂತೆ ಕಾಂಗ್ರೆಸ್ ನಾಯಕರು ಡಿಕೆಶಿ ಅವರಿಗೆ ಸಾಥ್ ನೀಡಿದರು. ಕಾರ್ಯಕ್ರಮದಲ್ಲಿ ಭಾಗಿಯಾದ ಬಹುತೇಕರು ಮಾಸ್ಕ್ ಇಲ್ಲದೆ ಪಾಲ್ಗೊಂಡಿದ್ದರು.

  • ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ: ಡಿಕೆಶಿ ಪ್ರಶ್ನೆ

    ಗುಜರಾತಿಗೆ ಸಿಕ್ಕಷ್ಟು ಲಸಿಕೆ ರಾಜ್ಯಕ್ಕೆ ಸಿಕ್ಕಿದೆಯಾ: ಡಿಕೆಶಿ ಪ್ರಶ್ನೆ

    – ಎಲ್ಲಿದೆ ಗುಜರಾತ್ ಮಾಡೆಲ್?

    ಬೆಂಗಳೂರು: ಎಲ್ಲದಕ್ಕೂ ಗುಜರಾತ್ ಮಾಡೆಲ್ ಎನ್ನುವ ಬಿಜೆಪಿ ಸರ್ಕಾರ, ಕೋವಿಡ್ ಲಸಿಕೆ ವಿಚಾರದಲ್ಲಿ ತಾರತಮ್ಯ ಮಾಡಿರುವುದು ಏಕೆ? ಗುಜರಾತಿಗೆಷ್ಟು ಲಸಿಕೆ ಪೂರೈಸಿದೆ? ಕರ್ನಾಟಕಕ್ಕೆಷ್ಟು ಪೂರೈಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ.

    VACCINE 4

    ಸದಾಶಿವನಗರ ನಿವಾಸದಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು, ಗುಜರಾತ್ ಮಾಡೆಲ್ ಎಲ್ಲಿದೆ? ರಾಜ್ಯದಲ್ಲಿ ಲಾಕ್ ಡೌನ್, ಸೀಲ್ ಡೌನ್ ಎಲ್ಲ ಮಾಡಲಾಯ್ತು. ವ್ಯಾಪಾರಿಗಳು ಉದ್ಯಮಿಗಳ ಪರ ಅಂತಾ ಬಿಂಬಿಸಿಕೊಂಡ ಬಿಜೆಪಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ತೆರಿಗೆ ಮನ್ನಾ ಮಾಡಲಿಲ್ಲಾ ಯಾಕೆ? ನಿರುದ್ಯೋಗ ಸೃಷ್ಟಿಸಿದ್ದೇ ಗುಜರಾತ್ ಮಾಡೆಲ್ಲಾ? ಸರ್ಕಾರದವರು ಅಧ್ಯಯನ ಮಾಡಲು ಗುಜರಾತಿಗೆ ಹೋಗಲಿ, ನಮ್ಮ ಅಭ್ಯಂತರವಿಲ್ಲ. ಅವರು ಯಾವ ಮಾಡೆಲ್ ಆದರೂ ನೀಡಲಿ. ಆದರೆ ನಮ್ಮ ಜನರಿಗೆ ನ್ಯಾಯ ಒದಗಿಸಲಿ, ಸರಿಯಾಗಿ ಕಾನೂನು ಸುವ್ಯವಸ್ಥೆ ಕಾಪಾಡಲಿ ಎಂದು ವಾಗ್ದಾಳಿ ನಡೆಸಿದರು.

    yediyurappa corona 1 1

    ಗುಜರಾತಿಗೆ ಎಷ್ಟು ಲಸಿಕೆ ನೀಡಿದ್ದಾರೆ? ಗುಜರಾತಿಗೆ ನೀಡಿರುವುದರಲ್ಲಿ ಶೇ.50 ರಷ್ಟಾದರೂ ನಮ್ಮ ರಾಜ್ಯಕ್ಕೆ ನೀಡಲಿಲ್ಲ. ಬಿಜೆಪಿಗೆ ಗುಜರಾತ್ ಮಾತ್ರ ಆದ್ಯತೆ. ಅವರು ಗುಜರಾತ್ ಉದ್ಧಾರ ಮಾಡಲಿ ಬೇಡ ಅನ್ನುವುದಿಲ್ಲ. ಆದರೆ ಲಸಿಕೆ ವಿಚಾರದಲ್ಲಿ ಗುಜರಾತಿಗೆ ಎಷ್ಟು ಲಸಿಕೆ ನೀಡಿದ್ದಾರೋ ಅಷ್ಟನ್ನೇ ರಾಜ್ಯಕ್ಕೂ ನೀಡಲಿ ಎಂದು ಮುಖ್ಯಮಂತ್ರಿಗಳು ಧ್ವನಿ ಎತ್ತಬೇಕು. ಈ ಬಗ್ಗೆ ಎಲ್ಲ ಸಂಸದರು ಮಾತನಾಡಬೇಕು ಎಂದರು. ಇದನ್ನೂ ಓದಿ:ವಿಶೇಷ ಹೂಡಿಕೆ ವಲಯ ಚರ್ಚೆಗೆ ಗುಜರಾತ್ ಭೇಟಿ: ಜಗದೀಶ್ ಶೆಟ್ಟರ್

    ಸರ್ಕಾರದಿಂದ ಶ್ರಮಿಕರಿಗೆ ಸಿಗಲಿ ಪರಿಹಾರ:
    ಕೋವಿಡ್ ನಿಂದ ಮೃತಪಟ್ಟವರಿಗೆ ಸಹಜ ಸಾವು ಎಂದು ಮರಣ ಪ್ರಮಾಣ ಪತ್ರ ನೀಡಲಾಗಿದೆ. ಇವರ ಮರಣ ಪ್ರಮಾಣ ಪತ್ರವನ್ನು ಹೇಗೆ ಮಾರ್ಪಾಡು ಮಾಡಲು ಆಗುತ್ತದೆ? ಕೋವಿಡ್ ನಿಂದ ತೊಂದರೆಗೆ ಒಳಗಾದವರಿಗೆ, ಸಾಂಪ್ರಾದಾಯಿಕ ವೃತ್ತಿ ಉಳಿಸಿಕೊಂಡು ಬಂದವರಿಗೆ, ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಘೋಷಿಸಿದ ಪರಿಹಾರ ಸಿಗುವ ಬಗ್ಗೆ ಯಾವುದೇ ಸ್ಪಷ್ಟತೆ, ಭರವಸೆ ಇಲ್ಲ. ಆನ್‍ಲೈನ್ ನೋಂದಣಿ ಮಾಡಲು ಅವರಿಗೆ ಗೊತ್ತಿದ್ದರೆ, ಅವರು ಯಾಕೆ ಇವರ ಮುಂದೆ ಕೈಚಾಚುತ್ತಿದ್ದರು? ಒಬ್ಬನೇ ಒಬ್ಬ ರೈತ, ಕಾರ್ಮಿಕ, ವೃತ್ತಿದಾರ ನೋಂದಣಿ ಮಾಡಿಸಿಕೊಳ್ಳಲು ಆಗುತ್ತಿಲ್ಲ. ಆರಂಭದಲ್ಲಿ 25 ಲಕ್ಷ ಚಾಲಕರಿಗೆ ಪರಿಹಾರ ಕೊಡುತ್ತೇವೆ ಅಂದರು. ನಂತರ ಅದನ್ನು ಏಳೂವರೇ ಲಕ್ಷಕ್ಕೆ ಇಳಿಸಿದರು. ಈಗ ನೋಂದಣಿ ಸಮಸ್ಯೆಯಿಂದ ಕೇವಲ ಎರಡೂವರೆ ಲಕ್ಷ ಚಾಲಕರಿಗೆ ಮಾತ್ರ ಪರಿಹಾರ ನೀಡಿದ್ದಾರೆ ಎಂದು ಕಿಡಿಕಾರಿದರು.

    corona test 1 medium

    ಎಲ್ಲ ಶ್ರಮಿಕ ವರ್ಗದವರಿಗೂ ಸರ್ಕಾರ ಘೋಷಿಸಿರುವ ಪರಿಹಾರ ತಲುಪಿಸಬೇಕು. ಅನ್ಯಾಯ ಆಗಿರುವವರಿಗೆ ನ್ಯಾಯ ಒದಗಿಸಬೇಕಿದೆ. ಬೆಂಗಳೂರು ನಗರದಲ್ಲಿ ಒಂದೂವರೇ ಕೋಟಿ ಜನಸಂಖ್ಯೆ ಇದೆ. ಗ್ರಾಮೀಣ ಪ್ರದೇಶದಲ್ಲಿ ಹಾಗೂ ನಗರದಲ್ಲಿ ಈ ವರ್ಗದವರ ಲೆಕ್ಕ ಬೇರೆ ಇದೆ. ಹೀಗಾಗಿ ಇವರಿಗೆ ನ್ಯಾಯ ಒದಗಿಸಲು ಏನು ಮಾಡಬೇಕು ಎಂದು ನಮ್ಮ ನಾಯಕರ ಸಲಹೆ ಪಡೆಯಲು ಸಭೆ ಕರೆದಿದ್ದೆ. ಪ್ರತಿ ಕ್ಷೇತ್ರದ ನಾಯಕರ ಅಭಿಪ್ರಾಯ ಪಡೆದು, ನಮ್ಮ ಕಾರ್ಯಕ್ರಮ ರೂಪಿಸಲು ತೀರ್ಮಾನಿಸಿದ್ದೇವೆ ಎಂದು ನುಡಿದರು.

  • ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್‍ಗೆ ಬಲಿ – ಡಿಕೆಶಿ ಸಾಂತ್ವನ

    ನೂರಾರು ಕೋವಿಡ್ ಸೋಂಕಿತರನ್ನು ಉಳಿಸಿದವನ ಪತ್ನಿಯೇ ಕೋವಿಡ್‍ಗೆ ಬಲಿ – ಡಿಕೆಶಿ ಸಾಂತ್ವನ

    ತುಮಕೂರು: ಕೋವಿಡ್ ನಿಂದ ಅನೇಕರ ಕುಟುಂಬಗಳು ಬೀದಿಗೆ ಬಿದ್ದಿವೆ. ಆತ್ಮೀಯರ ಅಗಲಿಕೆಯಿಂದ ಅನೇಕರು ಕಂಗಾಲಾಗಿದ್ದಾರೆ. ಕುಣಿಗಲ್ ತಾಲೂಕಿನಲ್ಲಿ ಹೀಗೆ ನೋವಿನ ಕಡಲಿಗೆ ಸಿಕ್ಕಿರುವ ಕೆಲವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುರುವಾರ ಭೇಟಿ ಮಾಡಿ ಸಾಂತ್ವನ ಹೇಳಿದರು.

    DK SHIVAKUMAR medium

    ಕುಣಿಗಲ್‍ನ ಕೊತ್ತಗೆರೆಪಾಳ್ಯದ ಶಿವರಾಮ್ ವೃತ್ತಿಯಿಂದ ಅಂಬುಲೆನ್ಸ್ ಚಾಲಕರು. ಕೋವಿಡ್ ಸಮಯದಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು, ನೂರಾರು ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಸೋಂಕಿನಿಂದ ಸತ್ತ ಕೆಲವರ ಶವಗಳತ್ತ ವಾರಸುದಾರರು ತಿರುಗಿ ನೋಡದೇ ಹೋದಾಗ ಆ ಶವಗಳ ಅಂತ್ಯ ಸಂಸ್ಕಾರವನ್ನೂ ಇವರೇ ನೆರವೇರಿಸಿದರು. ಆದರೆ ವಿಧಿ ಇವರ ಬದುಕಿನಲ್ಲೇ ಆಟವಾಡಿಬಿಟ್ಟಿತು. ಗುರುತು ಪರಿಚಯ ಇಲ್ಲದ ಯಾರು, ಯಾರನ್ನೋ ಸಕಾಲಕ್ಕೆ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ್ದ ಶಿವರಾಮ್ ಅವರಿಗೆ ಕೊರೊನಾ ಸೋಂಕಿಗೆ ಒಳಗಾದ ತಮ್ಮ ಪತ್ನಿ ಲಕ್ಷ್ಮಿದೇವಿ ಅವರನ್ನೇ ಉಳಿಸಿಕೊಳ್ಳಲು ಆಗಲಿಲ್ಲ. ಒಂದಷ್ಟು ದಿನ ಸೋಂಕಿನಿಂದ ನರಳಿದ ಅವರು ಕೊನೆಗೊಮ್ಮೆ ಕಣ್ಮುಚ್ಚಿದರು. ಇದನ್ನೂ ಓದಿ: ಅಪಘಾತವಾಗಿ ನರಳಾಡುತ್ತಿದ್ದ ಗಾಯಾಳು- ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಡಿಕೆಶಿ

    DK SHIVAKUMAR 2 medium

    ಡಿ.ಕೆ. ಶಿವಕುಮಾರ್ ಅವರು ಶಿವರಾಮ್ ಮನೆಗೆ ಭೇಟಿ ನೀಡಿದಾಗ ಶಿವರಾಮ್ ಕುಟುಂಬ ಸದಸ್ಯರ ದುಃಖದ ಕಟ್ಟೆಯೊಡೆಯಿತು. ಅವರೆಲ್ಲ ತಮ್ಮ ಅಳಲು ಹೇಳಿಕೊಂಡು ಗದ್ಗದಿತರಾದರು. ಅವರಿಗೆ ಸಾಂತ್ವನ ಹೇಳಿದ ಡಿ.ಕೆ. ಶಿವಕುಮಾರ್ ಧೈರ್ಯ ತುಂಬುವ ಪ್ರಯತ್ನ ಮಾಡಿದರು. ಸಾಂಕೇತಿಕವಾಗಿ 10 ಸಾವಿರ ಸಹಾಯ ಧನವನ್ನೂ ನೀಡಿದರು. ಅವರ ನೋವಿನಲ್ಲಿ ಭಾಗಿಯಾದ ಶಿವಕುಮಾರ್ ಭಾರವಾದ ಹೆಜ್ಜೆಯೊಡನೆ ಅಲ್ಲಿಂದ ತೆರಳಿದರು.