Tag: ಜಮೀರ್ ಅಹ್ಮದ್ ಖಾನ್

  • ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು – ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ಜನಾಕ್ರೋಶ

    ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು – ಜಿಲ್ಲಾ ಉಸ್ತುವಾರಿ ಸಚಿವರು ನಾಪತ್ತೆ: ಜನಾಕ್ರೋಶ

    ಬಳ್ಳಾರಿ: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಇಡೀ ಜಿಲ್ಲೆಯ ಜನರ ನಿದ್ದೆಗೆಡಿಸಿದೆ. ಅಲ್ಲದೇ ಸರ್ಕಾರಿ ಆಸ್ಪತ್ರೆಗಳ ಮೇಲಿನ ನಂಬಿಕೆ ಕಳೆದುಕೊಳ್ಳುವಂತೆ ಮಾಡಿದೆ. ಇತ್ತ 15 ದಿನಗಳ ಅಂತರದಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ರೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ನಾಪತ್ತೆಯಾಗಿದ್ದಾರೆ. ಇದರಿಂದ ಸಚಿವರ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ.

    ಬಳ್ಳಾರಿಯ (Ballary) ಜಿಲ್ಲಾ ಆಸ್ಪತ್ರೆಯಲ್ಲಿ ಇಲ್ಲಿಯವರೆಗೂ ಐವರು ಬಾಣಂತಿಯರು ಸಾವನ್ನಪ್ಪಿದ್ದು, ಅನಾರೋಗ್ಯದ ಕಾರಣದಿಂದಲೇ ಬಾಣಂತಿಯರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಕೈತೊಳೆದುಕೊಂಡಿದ್ದಾರೆ. ಇನ್ನೊಂದು ಕಡೆ ಜಿಲ್ಲೆಯ ಜನಪ್ರತಿನಿಧಿಗಳು ಆರೋಗ್ಯ ಇಲಾಖೆ ಅಧಿಕಾರಿಗಳನ್ನು ಕೂಡ ಎಚ್ಚರಿಸಿಲ್ಲ. ಇಷೆಲ್ಲಾ ಆದರೂ ಕೂಡ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತವಾಗಿದೆ.ಇದನ್ನೂ ಓದಿ: ಬಾರ್ ಲೈಸೆನ್ಸ್ ನೀಡಲು 20 ಲಕ್ಷಕ್ಕೆ ಬೇಡಿಕೆ ಆರೋಪ – ಅಬಕಾರಿ ಡಿಸಿ ವಿರುದ್ಧ ಲೋಕಾಯುಕ್ತಕ್ಕೆ ದೂರು

    ನ.9 ರಂದು ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಿಸರೀನ್ ಹೆರಿಗೆ ಬಳಿಕ ನಂದಿನಿ, ಲಲಿತಮ್ಮ, ರೋಜಾ ಹಾಗೂ ಮುಸ್ಕಾನ್ ಎನ್ನುವ ನಾಲ್ವರು ಬಾಣಂತಿಯರ ಸಾವಾಗಿತ್ತು. ಒಂದೇ ಬಾರಿಗೆ ಸಿಜೇರಿಯನ್‌ಗೆ ಒಳಗಾಗಿದ್ದ ಬಾಣಂತಿಯರ ಮರಣದ ಬಳಿಕವೂ ಆರೋಗ್ಯ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ. ಇದೀಗ ಮತ್ತೋರ್ವ ಬಾಣಂತಿಯ ಸಾವಾಗಿದೆ.

    Death after giving birth in ballary

    15 ದಿನಗಳ ಅಂತರದಲ್ಲಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೇ ನಿನ್ನೆ (ನ.27) ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಸಿಎಸ್‌ಪುರ ಗ್ರಾಮದ 20 ವರ್ಷದ ಮಹಾಲಕ್ಷ್ಮಿಗೆ ನಾರ್ಮಲ್ ಹೆರಿಗೆ ಮಾಡಲಾಗಿತ್ತು. ಆದರೆ ಹೆರಿಗೆ ಬಳಿಕ ತೀವ್ರ ರಕ್ತಸ್ರಾವ ಹಾಗೂ ನಂಜಾಗಿ ಬಾಣಂತಿ ಸಾವನ್ನಪ್ಪಿದ್ದಾಳೆ. ಇದು ವೈದ್ಯರ ನಿರ್ಲಕ್ಷ್ಯದಿಂದ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದಾರೆ.

    ಇದಕ್ಕೆಲ್ಲಾ ಅಧಿಕಾರಿಗಳ ನಿರ್ಲಕ್ಷ್ಯವಲ್ಲದೇ ಬೇರೇನೂ ಅಲ್ಲ. ಇನ್ನೂ ಜಿಲ್ಲೆಯಲ್ಲಿ ಸರಣಿ ಬಾಣಂತಿಯರ ಸಾವು ಸಂಭವಿಸುತ್ತಿದ್ದರೂ ಉಸ್ತುವಾರಿ ಸಚಿವ ಜಮೀರ್ ಮಾತ್ರ ಜಿಲ್ಲೆ ಕಡೆ ಮುಖ ಮಾಡಿಲ್ಲ. ಕೇವಲ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ ಎನ್ನುವ ಸಂದೇಶವನ್ನ ಕಳಿಸಿದ್ದು ಬಿಟ್ಟರೆ ಏನನ್ನೂ ಮಾಡಿಲ್ಲ. ಒಟ್ಟಿನಲ್ಲಿ ಬಾಣಂತಿಯರ ಸಾವಿಗೆ ಅಸಲೀ ಕಾರಣ ಬಟಾಬಯಲಾಗಬೇಕಿದೆ.ಇದನ್ನೂ ಓದಿ: 4ನೇ ಬಾರಿಗೆ ಜಾರ್ಖಂಡ್‌ ಸಿಎಂ ಆಗಿ ಇಂದು ಹೇಮಂತ್‌ ಸೊರೆನ್‌ ಪ್ರಮಾಣ ವಚನ ಸ್ವೀಕಾರ

  • ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ

    ಐತಿಹಾಸಿಕ ಸೋಮೇಶ್ವರ ದೇವಸ್ಥಾನ ವಕ್ಫ್‌ಗೆ ಪರಭಾರೆ ಆರೋಪ; ವಕ್ಫ್ ಬೋರ್ಡ್, ಸರ್ಕಾರದ ವಿರುದ್ಧ ಪ್ರತಿಭಟನೆ

    ಗದಗ: ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ (Waqf Board) ಭೂ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ವಕ್ಫ್ ಬೋರ್ಡ್ ವಿರುದ್ಧ ತಾಲೂಕಿನ ಕೋಟುಮಚಗಿ ಗ್ರಾಮದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿಶ್ವ ಹಿಂದೂ ಪರಿಷತ್, ಭಜರಂಗದಳ ಹಾಗೂ ರೈತರು ಸೇರಿಕೊಂಡು ಗದಗ-ಬಾಗಲಕೋಟೆ ರಾಜ್ಯ ಹೆದ್ದಾರಿ ತಡೆದು, ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟಿಸಿದರು.

    6ನೇ ವಿಕ್ರಮಾದಿತ್ಯನ ಕಾಲದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದ (Someshwara Temple) ಜಮೀನು ವಕ್ಫ್‌ಗೆ ಸೇರಿಸುವ ಹುನ್ನಾರ ನಡೆಸಿದ್ದಾರೆ. ಇದು ಸಂಸ್ಕೃತ ವಿಶ್ವವಿದ್ಯಾಲಯ ಕೇಂದ್ರವಾಗಿತ್ತು. ಕವಿ ಚಾಮರಸಾ ಬರೆದ ಪ್ರಭುಲಿಂಗಲೀಲೆ ಪುರಾಣ ಇದೇ ದೇವಸ್ಥಾನದಲ್ಲಿ ಬರೆದಿರುವ ಇತಿಹಾಸವಿದೆ. ಅಂತಹ ಐತಿಹಾಸಿಕ ದೇವಸ್ಥಾನದ ಭೂಮಿಯನ್ನು ವಕ್ಫ್‌ಗೆ ಪರಭಾರೆ ಮಾಡಲು ಹೊರಟಿರುವುದು ಖಂಡನೀಯ. ಇದನ್ನೂ ಓದಿ: ಮಹಿಳೆಯರಿಗೆ ಫ್ರೀ ಬಸ್‌ ಕೊಟ್ಟರು, ಪಾಪ ಪುರುಷರಿಗೆ ಏನ್‌ ಮಾಡಿದ್ರು? – ಸರ್ಕಾರಕ್ಕೆ ನಟಿ ತಾರಾ ಪ್ರಶ್ನೆ

    vlcsnap 2024 11 11 16h07m39s477

    ಗೆಜೆಟ್‌ನಲ್ಲಿ ಸೋಮೇಶ್ವರ ದೇವಸ್ಥಾನಕ್ಕೆ ಸೇರಿದ ಸರ್ವೆ ನಂ.562 ರ 12 ಎಕರೆ 22 ಗುಂಟೆ ಜಮೀನು ವಕ್ಫ್ ಆಸ್ತಿ ಎಂದು ನಮೂದಾಗಿದೆ. ಈ ಎಲ್ಲದರಿಂದ ಆಕ್ರೋಶಕ್ಕೆ ಒಳಗಾದ ಜನರು ರಾಜ್ಯ ಹೆದ್ದಾರಿ ತಡೆದು ವಕ್ಫ್ ಬೋರ್ಡ್, ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹಾಗೂ ರಾಜ್ಯ ಸರ್ಕಾರದ ವಿರುಧ್ಧ ಧಿಕ್ಕಾರ ಕೂಗಿದರು. ನಡು ರಸ್ತೆಯಲ್ಲೇ ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್‌ಗೆ ಖಾಸಗಿ ಬಸ್ ಡಿಕ್ಕಿ – ತಾಯಿ, ಮಗಳಿಗೆ ಗಂಭೀರ ಗಾಯ

    ಗಂಟೆ ಗಟ್ಟಲೆ ರಸ್ತೆ ತಡೆ ನಡೆಸಿದ್ದರಿಂದ ವಾಹನಗಳು ಸಾಲುಗಟ್ಟಿ ನಿಂತವು. ಕೆಲಕಾಲ ವಾಹನ ಸವಾರರು ಪರದಾಡಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಈ ವೇಳೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು. ನಂತರ ಸ್ಥಳಕ್ಕೆ ಬಂದ ಗದಗ ತಹಶೀಲ್ದಾರ್‌ಗೆ ಸ್ಥಳಿಯರು ತರಾಟೆಗೆ ತೆಗೆದುಕೊಂಡರು. ಸೋಮೇಶ್ವರ ದೇವಸ್ಥಾನದ ಜಾಗ ವಕ್ಫ್ ಹೇಗೆ ಆಯಿತು? ಶೀಘ್ರದಲ್ಲೇ ಇದನ್ನು ರದ್ದು ಮಾಡದಿದ್ದರೆ ಉಗ್ರವಾದ ಹೋರಾಟ ಮಾಡುವುದಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬೀದಿ ನಾಯಿ ಜೊತೆ ಅಸಭ್ಯ ವರ್ತನೆ – ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

    ಈ ವೇಳೆ ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಶ್ರೀಧರ್ ಕುಲಕರ್ಣಿ ಸೇರಿದಂತೆ ಅನೇಕ ಸಂಘಟಿಕರು, ಸೋಮೇಶ್ವರ ದೇವಸ್ಥಾನ ಆಡಳಿತ ಮಂಡಳಿಯವರು, ರೈತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸೆಟ್ಟೇರಿತು ರಾಘು ಶಿವಮೊಗ್ಗ ನಿರ್ದೇಶನದ ಹೊಸ ಸಿನಿಮಾ-‘ದಿ ಟಾಸ್ಕ್’ನಲ್ಲಿ ನವಪ್ರತಿಭೆಗಳ ಸಂಗಮ

  • ಶಿಗ್ಗಾಂವಿಯ ಕಾಂಗ್ರೆಸ್ ಬಂಡಾಯ ಶಮನ- ಕೊನೆಗೂ ನಾಮಪತ್ರ ವಾಪಸ್ ಪಡೆದ ಅಜ್ಜಂಪೀರ್ ಖಾದ್ರಿ

    ಶಿಗ್ಗಾಂವಿಯ ಕಾಂಗ್ರೆಸ್ ಬಂಡಾಯ ಶಮನ- ಕೊನೆಗೂ ನಾಮಪತ್ರ ವಾಪಸ್ ಪಡೆದ ಅಜ್ಜಂಪೀರ್ ಖಾದ್ರಿ

    ಹಾವೇರಿ: ಶಿಗ್ಗಾಂವಿ ಉಪಚುನಾವಣೆ (Shiggaon By Election) ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಇವತ್ತು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದ್ದು, ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಅಜ್ಜಂಪೀರ್ ಖಾದ್ರಿ (Ajjappir Khadri) ನಾಮಪತ್ರ ವಾಪಸ್ ಪಡೆದುಕೊಂಡಿದ್ದಾರೆ.

    ಹುಬ್ಬಳ್ಳಿಯಿಂದ (Hubballi) ಸಚಿವ ಜಮೀರ್ ಅಹ್ಮದ್ ಖಾನ್ ಜೊತೆ ಆಗಮಿಸಿ ಖಾದ್ರಿ, ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಖಾದ್ರಿ ಸೂಕ್ತವಾದ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

    ಜಮೀರ್ ಜೊತೆಗೆ ತಹಶೀಲ್ದಾರ್ ಕಚೇರಿಗೆ ಆಗಮಿಸಿ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್ ಪಕ್ಷದ ಯಾಸಿರ್‌ಖಾನ್ ಪಠಾಣ್‌ಗೆ ಬೆಂಬಲ ಸೂಚಿಸಿದರು. ನನಗೆ ಟಿಕೆಟ್ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ. ಸಿದ್ದರಾಮಯ್ಯ (Siddaramaiah), ಡಿಕೆಶಿ ಸೇರಿದಂತೆ ಪ್ರಮುಖ ನಾಯಕರು ಮಾತನಾಡಿದ್ದು, ಸಿಎಂಗೆ ಬೆಂಬಲ ಸೂಚಿಸಿದ್ದೇನೆ. ಪಕ್ಷದ ಪರವಾಗಿ ಕೆಲಸ ಮಾಡುತ್ತೇನೆ ಎಂದರು. ಇದನ್ನೂ ಓದಿ: ಉಪಚುನಾವಣೆಗೆ ಸಮಸ್ಯೆ ಮಾಡೋಕೆ ಬಿಜೆಪಿಯಿಂದ ಪ್ರತಿಭಟನೆ: ಸಿಎಂ

    ಕೊನೆಗೆ ಸಚಿವ ಶಿವಾನಂದ ಪಾಟೀಲ್, ಜಮೀರ್ ಅಹ್ಮದ್ ಖಾನ್ ಮತ್ತು ಯಾಸಿರ್ ಖಾನ್ ಪಠಾಣ್ ಖಾದ್ರಿ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದು, ಚುನಾವಣಾ ಪ್ರಚಾರಕ್ಕೆ ತೆರಳಿದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ
    ಬಂಡಾಯ ಶಮನದ ನಂತರ ಅಜ್ಜಂಪೀರ್ ಖಾದ್ರಿ ಮಾತನಾಡಿ, ಕಾಂಗ್ರೆಸ್ (Congress) ಪಕ್ಷದ ಪ್ರಮುಖ ಮುಖಂಡರು ಮಾತನಾಡಿದ್ದಾರೆ. ಪಕ್ಷ ಮುಖ್ಯ, ಅಲ್ಲಿ ಕಾಂಗ್ರೆಸ್ ಗೆಲ್ಲವುದು ಮುಖ್ಯ. ಬಿಜೆಪಿ (BJP) ಸೋಲಿಸೋದು ಮುಖ್ಯ. ಪಠಾಣ್ ಗೆಲ್ಲಿಸಲು ಮಾತುಕೊಟ್ಟು ಬಂದಿದ್ದೇನೆ. ಶಕ್ತಿ ತುಂಬುವ ಕೆಲಸ ಮಾಡುತ್ತೇವೆ. ಭಿನ್ನಾಭಿಪ್ರಾಯ ಏನಿದ್ದರೂ ಒಟ್ಟಿಗೆ ಕೆಲಸ ಮಾಡುತ್ತೇವೆ. ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. ನಮ್ಮ ಮನೆಯಲ್ಲಿ ಕೆಲವು ಭಿನ್ನಾಭಿಪ್ರಾಯ ಇದ್ದವು. ಅವರಿಗೆ ಟಿಕೆಟ್ ತಪ್ಪಿಸಬೇಕು ಅಂತಾ ರೌಡಿಶೀಟರ್ ಎಂದು ಹೇಳಿದ್ದು ನಿಜ. ನನಗೆ ಟಿಕೆಟ್ ಸಿಗಬೇಕು ಅಂತಾ ಹಾಗೆ ಹೇಳಿದ್ದೆ, ನನ್ನ ಸಂಸ್ಕೃತಿ ಅದಲ್ಲ ಎಂದು ಹೇಳಿದರು. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್

  • ಜಮೀರ್ ಅಹ್ಮದ್ ಎರಡನೇ ಟಿಪ್ಪು, ಔರಂಗಜೇಬ್ ಥರ ಮೆರೆಯುತ್ತಿದ್ದಾರೆ: ಮುತಾಲಿಕ್

    ಜಮೀರ್ ಅಹ್ಮದ್ ಎರಡನೇ ಟಿಪ್ಪು, ಔರಂಗಜೇಬ್ ಥರ ಮೆರೆಯುತ್ತಿದ್ದಾರೆ: ಮುತಾಲಿಕ್

    ಧಾರವಾಡ: ಜಮೀರ್ ಅಹ್ಮದ್ (Zameer Ahmed Khan ) ಎರಡನೇ ಟಿಪ್ಪು, ಔರಂಗಜೇಬ್ ಥರ ಮೆರೆಯುತ್ತಿದ್ದಾರೆ. ತಾಕತ್ ಇದ್ದರೆ ರೈತರ ಜಮೀನು ವಕ್ಫ್ ಬೋರ್ಡ್‌ಗೆ ರಿಜಿಸ್ಟರ್ ಮಾಡಲಿ ನೋಡೋಣ. ಇದು ಜಮೀರ್‌ಗೆ ನಮ್ಮ ಸವಾಲು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿದ್ದಾರೆ.

    ರೈತರ ಪಹಣಿಯಲ್ಲಿ ವಕ್ಫ್ ಹೆಸರು ವಿಚಾರವಾಗಿ ಧಾರವಾಡದಲ್ಲಿ ರೈತರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪ್ರಮೋದ್ ಮುತಾಲಿಕ್ ಕೂಡಾ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಅವರು, ತಾಕತ್ ಇದ್ದರೆ ರೈತರ ಜಮೀನು ವಕ್ಫ್ ಬೋರ್ಡ್‌ಗೆ ರಿಜಿಸ್ಟರ್ ಮಾಡಲಿ ನೋಡೋಣ. ಇದು ಜಮೀರ್‌ಗೆ ನಮ್ಮ ಸವಾಲು. ಮುತವಲ್ಲಿಯಿಂದ ಪತ್ರ ಕೇಳಿದ್ದಾರೆ. ಆತ ಮುಸ್ಲಿಂ ಸಮಾಜ, ಮಸೀದಿಗೆ ಸಂಬಂಧಿಸಿದಾತ. ಈ ಎಲ್ಲದರ ಬಗ್ಗೆ ತನಿಖೆ ಆಗಿ ಕ್ರಮ ಆಗಬೇಕು. ರೈತರಿಗೆ ಮುಕ್ತ ಅವಕಾಶ ಸಿಗಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಒಳಮೀಸಲಾತಿ ಜಾರಿಗೆ ನಾವು ವಿರುದ್ಧವಾಗಿಲ್ಲ, ಸೋಷಿಯಲ್ ಮೀಡಿಯಾದಲ್ಲಿ ಕಿಡಿಗೇಡಿಗಳ ಮಾತು ಸತ್ಯಕ್ಕೆ ದೂರ: ಪರಮೇಶ್ವರ್

    ಈ ವೇಳೆ ಅಧಿಕಾರಿಗಳ ಮೇಲೆ ಕಿಡಿಕಾರಿದ ಅವರು, ರಾಜ್ಯ ಸರ್ಕಾರಕ್ಕೆ ಕೂಡಾ ಎಚ್ಚರಿಕೆ ನೀಡಿದರು. ಇವತ್ತು ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ಮಾಡಿದ್ದೇವೆ. ರೈತ ಸಂಘ, ಭಾರತೀಯ ಕಿಸಾನ್ ಸಂಘ, ದಲಿತ ಸಂಘಟನೆಗಳು ಬೆಂಬಲ ಕೊಟ್ಟಿವೆ. ಹಿಂದೂ ಸಂಘಟನೆಗಳು, ಬಿಜೆಪಿಯ ಮಾಜಿ ಶಾಸಕರು ಭಾಗವಹಿಸಿದ್ದರು. ತಹಸೀಲ್ದಾರ್ ಮಾಡಿದ ತಪ್ಪು ತಿದ್ದುಪಡಿಗೆ ಆಗ್ರಹಿಸಿದ್ದೇವೆ. ರೈತರನ್ನು ನಾಲ್ಕು ವರ್ಷದಿಂದ ಓಡಾಡಿಸಿದ್ದಾರೆ. ತಹಸೀಲ್ದಾರ್ ಕಚೇರಿ-ವಕ್ಫ್ ಬೋರ್ಡ್ ಕಚೇರಿ ಮಧ್ಯೆ ಓಡಾಡಿಸಿದ್ದಾರೆ ಎಂದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ

    ನೆಲದ ಮೇಲೆ ಕುಳಿತು ಪ್ರತಿಭಟಿಸುವವರೆಗೂ ಇವರು ಎಚ್ಚರಗೊಳ್ಳುವುದಿಲ್ಲವಾ? ಯಾರಿಗೆ ಅನ್ಯಾಯವಾಗಿದೆ ಇವರಿಗೆ ಗೊತ್ತಾಗುವುದಿಲ್ಲವಾ? ಎಸಿ, ಡಿಸಿ, ತಹಸೀಲ್ದಾರ್ ಇರೋದು ಏತಕ್ಕೆ ಎಂದ ಅವರು, ಧಾರವಾಡದ (Dharawada) ಎಸಿ ರೈತರ ಜೊತೆ ಉದ್ಧಟತನದಿಂದ ಮಾತನಾಡಿದ್ದಾರೆ. ರೈತರ ಬಗ್ಗೆ ಮಾತನಾಡುವಷ್ಟು ಧೈರ್ಯ ಬಂತಾ? ರೈತರನ್ನು ಓಡಾಡಿಸುವಷ್ಟು ಧೈರ್ಯ ಬಂತಾ? ಎಂದು ಕಿಡಿಕಾರಿದರು. ಇದನ್ನೂ ಓದಿ: ಜಯನಗರ ಕ್ಷೇತ್ರಕ್ಕೆ ಅನುದಾನ ನೀಡದ್ದನ್ನ ಮತ್ತೆ ಸಮರ್ಥಿಸಿಕೊಂಡ ಡಿಸಿಎಂ

  • ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಮುಸ್ಲಿಂ: ಜಮೀರ್ ಅಹ್ಮದ್

    ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಮುಸ್ಲಿಂ: ಜಮೀರ್ ಅಹ್ಮದ್

    – ನಾವು ಅನ್ನದಾತರ ಆಸ್ತಿ ಮುಟ್ಟೋಕೆ ಸಾಧ್ಯನಾ?

    ಹುಬ್ಬಳ್ಳಿ: ಮುಜರಾಯಿ ವಕ್ಫ್ ಎರಡೂ ಒಂದೇ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ. ಅಲ್ಲಾ ನಮ್ಮ ನಂಬಿಕೆ, ಜೋಶಿ ಏನಾದರೂ ಹೇಳಲಿ. ನಾನು ಮೊದಲು ಹಿಂದೂಸ್ತಾನಿ. ಆಮೇಲೆ ಮುಸ್ಲಿಂ ಎಂದು ಹುಬ್ಬಳ್ಳಿಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಹೇಳಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಆಸ್ತಿಗೆ ನಾವು ನೋಟಿಸ್ ಕೊಟ್ಟಿದ್ದೇವೆ. ಬೇರೆಯವರ ಆಸ್ತಿ ತೆಗೆದುಕೊಳ್ಳಲು ನಾವು ಯಾರು? ರೈತರು ಅನ್ನದಾತರು, ನಾವು ಅವರ ಆಸ್ತಿ ಮುಟ್ಟೋದಕ್ಕೆ ಸಾಧ್ಯನಾ? ವಕ್ಫ್ ಆಸ್ತಿ 1.12 ಲಕ್ಷ ಎಕರೆ ಇದೆ. ನಮ್ಮ ಬಳಿ ದಾಖಲೆ ಇದೆ. ಮುಜರಾಯಿ ವಕ್ಫ್ ಎರಡೂ ಒಂದೇ ಆಗಿದೆ. ನಾವು ಅಲ್ಲಾ ಅಂತೀವಿ, ನೀವು ದೇವರು ಅಂತೀರಿ ಎಂದು ಹೇಳಿದರು. ಇದನ್ನೂ ಓದಿ: ಮೀಸಲು ಪಡೆಯ ಹೆಡ್‌ಕಾನ್‌ಸ್ಟೇಬಲ್ ಹೃದಯಾಘಾತದಿಂದ ಸಾವು

    ಬಿಜೆಪಿಯವರು (BJP) ಈ ತರಹ ರಾಜಕಾರಣ ಮಾಡಬಾರದು. ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ ಅವರು ನಾಲಾಯಕ್. ನಾವು ಜಾತಿ ನೋಡಿದ್ರೆ ನಿರ್ನಾಮ ಆಗುತ್ತೇವೆ. ಬಿಜೆಪಿಯವರ ಕಾಲದಲ್ಲಿ ನೋಟಿಸ್ ಕೊಟ್ಟಿದ್ದಾರೆ. ನಾನು ಅದಕ್ಕೆ ದಾಖಲೆ ಕೊಡುತ್ತೇನೆ. ಇದಕ್ಕೆ ಮಾನ್ಯ ಯತ್ನಾಳ್ ಏನು ಹೇಳುತ್ತಾರೆ? ಮುಜರಾಯಿ ಇಲಾಖೆ ಆಸ್ತಿ ಕೂಡಾ ಒತ್ತುವರಿ ಆಗಿದೆ. ಅದನ್ನು ಉಳಿಸೋಣ ನಡೀರಿ. ನನಗೆ ಹಿಂದೂ ಬ್ರದರ್ಸ್ ಮತ ಕೊಟ್ಟಿದ್ದಾರೆ. ನನಗೆ ಎಲ್ಲ ಸಮಾಜ ಒಂದೇ. ಎಲ್ಲ ಸಮಾಜವನ್ನು ಜೊತೆಗೆ ತೆಗೆದುಕೊಂಡು ಹೋಗುವವರೇ ರಾಜಕಾರಣಿ ಎಂದರು. ಇದನ್ನೂ ಓದಿ: ತುಮಕೂರು| ಅಂತಾರಾಜ್ಯ ಕಳ್ಳನ ಬಂಧನ – 42 ಬೈಕ್ ಜಪ್ತಿ
    ವಿಜಯಪುರ ಜಿಲ್ಲೆಯಲ್ಲಿ 1200 ಎಕರೆ ಇಲ್ಲವೇ ಇಲ್ಲ. ಇರೋದು ಕೇವಲ 12 ಎಕರೆ. ಅಲ್ಲಿ 11 ಎಕರೆ ಸ್ಮಶಾನ ಇದೆ. ನಾವು ಒಂದಿಂಚೂ ಜಾಗ ತೆಗೆದುಕೊಂಡಿಲ್ಲ. ನಮಗೆ 1.12 ಲಕ್ಷ ಎಕರೆ ದಾನ ಮಾಡಿದ್ದಾರೆ. ನಾನು 11 ಜಿಲ್ಲೆಯಲ್ಲಿ ವಕ್ಫ್ ಅದಾಲತ್ ಮಾಡಿದ್ದೇನೆ. ಅಧಿಕಾರಿಗಳ ಸಭೆ ಮಾಡಿದ್ದೇನೆ. ವಿಜಯಪುರ ಜಿಲ್ಲೆಯಲ್ಲಿ ಸಭೆ ಮಾಡಿದಾಗ ಯತ್ನಾಳ್‌ಗೆ ಆಹ್ವಾನ ಕೊಟ್ಟಿದ್ದೆವು. ರೈತರಿಗೆ ಅನ್ಯಾಯ ಆದ್ರೆ ಯತ್ನಾಳ್ ಯಾಕೆ ಸಭೆಗೆ ಬರಲಿಲ್ಲ? ರೈತರ ಆಸ್ತಿ ತೆಗೆದುಕೊಳ್ಳಲು ಸಾಧ್ಯನಾ? ಅಧಿಕಾರಿಗಳು ಅಷ್ಟು ಸುಲಭವಾಗಿ ಮಾಡ್ತಾರಾ? ರೈತರ ಆಸ್ತಿಯನ್ನು ಮುಟ್ಟೋಕೆ ಆಗಿಲ್ಲ. ಇದೊಂದು ರಾಜಕೀಯ ಪಿತೂರಿ ಎಂದು ಹರಿಹಾಯ್ದರು. ಇದನ್ನೂ ಓದಿ: ಬೆಂಗಳೂರಿನ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲೂ ರಾಜಕೀಯ – ಜಯನಗರಕ್ಕಿಲ್ಲ ಫಂಡ್; ಆಕ್ರೋಶ

  • ವಕ್ಫ್ ಆಸ್ತಿ ದೇವರ ಆಸ್ತಿ, ಕಬಳಿಕೆ ಆಗಬಾರದು ರಕ್ಷಣೆ ಮಾಡಬೇಕು; ಸಚಿವ ಜಮೀರ್‌ ಕರೆ

    ವಕ್ಫ್ ಆಸ್ತಿ ದೇವರ ಆಸ್ತಿ, ಕಬಳಿಕೆ ಆಗಬಾರದು ರಕ್ಷಣೆ ಮಾಡಬೇಕು; ಸಚಿವ ಜಮೀರ್‌ ಕರೆ

    -ರಾಜ್ಯದ 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿದೆ
    – ರಾಜ್ಯದಲ್ಲೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಇದೆ ಎಂದ ಸಚಿವ

    ವಿಜಯಪುರ: ವಕ್ಫ್ ಆಸ್ತಿ (Waqf Property) ದೇವರ ಆಸ್ತಿ, ಅದರ ಕಬಳಿಕೆ ಅಥವಾ ಹಗರಣ ಆಗಬಾರದು, ರಕ್ಷಿಸುವ ಕೆಲಸವಾಗಬೇಕು. ಸದ್ಯ ರಾಜ್ಯದಲ್ಲಿರುವ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. ಆದ್ದರಿಂದ ಪ್ರತಿಯೊಬ್ಬರೂ ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಸಚಿವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ಕರೆ ನೀಡಿದರು.

    Zameer 2

    ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ವಕ್ಫ್ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಸಹಯೋಗದಲ್ಲಿ ಜಿಲ್ಲೆಯ ಮುತ್ತವಲ್ಲಿಗಳ ಸಮ್ಮೇಳನ ಹಾಗೂ ವಕ್ಫ್ ಅದಾಲತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ವಕ್ಫ್‌ ಆಸ್ತಿ ಸಂರಕ್ಷಣೆ ಹಾಗೂ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಈವರೆಗೆ ರಾಜ್ಯದಾದ್ಯಂತೆ 10 ಜಿಲ್ಲೆಗಳಲ್ಲಿ ವಕ್ಫ್ ಅದಾಲತ್ ಹಮ್ಮಿಕೊಳ್ಳಲಾಗಿದ್ದು, ಅದರಂತೆ ಸೋಮವಾರ ವಿಜಯಪುರದಲ್ಲಿ 11ನೇ ಅದಾಲತ್ ನಡೆಯಿತು. ಕಳೆದ 10-15 ವರ್ಷಗಳಿಂದ ಬಾಕಿ ಉಳಿದ ವಕ್ಫ್ ಖಾತೆ ಬದಲಾವಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾನು ಸಚಿವನಾದ ಮೇಲೆ 727 ಖಾತೆ ಬದಲಾವಣೆಗೆ ಕ್ರಮ ವಹಿಸಲಾಗಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ವಿನೇಶ್‌ ಫೋಗಟ್‌ಗೆ ಆರಂಭಿಕ ಮುನ್ನಡೆ – ಜಮ್ಮು-ಕಾಶ್ಮೀರ, ಹರಿಯಾಣದಲ್ಲಿ ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ

    Zameer

    ಅದಾಲತ್‍ನಲ್ಲಿ ವಕ್ಫ್ ಆಸ್ತಿಗಳ ಅತಿಕ್ರಮಣದ 17 ಅರ್ಜಿಗಳು, ಖಬರಸ್ಥಾನ (ಸ್ಮಶಾನ)ಕ್ಕೆ ಸಂಬಂಧಿಸಿದ್ದು, ಖಾತೆ ಬದಲಾವಣೆಯ 81 ಅರ್ಜಿಗಳು, ಸರ್ವೇ ಕಾರ್ಯಕ್ಕಾಗಿ 25 ಅರ್ಜಿಗಳು ಸೇರಿದಂತೆ ಒಟ್ಟು 330 ಅರ್ಜಿಗಳು ಸಲ್ಲಿಕೆಯಾಗಿವೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳು ಯಾವುದೇ ಕಾರಣಕ್ಕೂ ವ್ಯರ್ಥವಾಗುವುದಿಲ್ಲ, ಪ್ರತಿಯೊಂದು ಅರ್ಜಿಗಳಿಗೂ ಸ್ಪಂದಿಸಲಾಗುವುದು. ಸ್ವೀಕರಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಸಭೆ ನಡೆಸಿ, ಅಧಿಕಾರಿಗಳಿಗೆ ಒಂದು ತಿಂಗಳ ಕಾಲಾವಕಾಶ ಒದಗಿಸಿ ನಿಗದಿತ ಅವಧಿಯಲ್ಲಿಯೇ ಈ ಅರ್ಜಿಗಳ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು. ಇದನ್ನೂ ಓದಿ: ರಾಜಕೀಯ ಕೈದಿಗಳಿಗೆ ಕ್ಷಮಾದಾನ, ಆರ್ಟಿಕಲ್‌ 370 ಮರುಸ್ಥಾಪನೆ – J&K ನಲ್ಲಿ ಪಕ್ಷಗಳ ಪ್ರಣಾಳಿಕೆ ಬಲ ನೀಡುತ್ತಾ?

    ರಾಜ್ಯದಲ್ಲಿಯೇ ವಿಜಯಪುರದಲ್ಲಿ ಅತಿ ಹೆಚ್ಚು ವಕ್ಫ್ ಆಸ್ತಿ ಹೊಂದಿದೆ. ವಕ್ಫ್ ಆಸ್ತಿಯ ಸದ್ಭಳಕೆ ಮಾಡಿಕೊಂಡು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸೂರು ಕಲ್ಪಿಸುವ ಸದುದ್ದೇಶ ಹೊಂದಲಾಗಿದೆ. ರಾಜ್ಯದಲ್ಲಿ ಒಟ್ಟು 1.12 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85 ಸಾವಿರ ಎಕರೆ ಅತಿಕ್ರಮಣವಾಗಿ ಕೇವಲ 23,000 ಎಕರೆ ಮಾತ್ರ ಉಳಿದಿದೆ. ವಕ್ಫ್ ಆಸ್ತಿ ಕಬಳಿಕೆ- ಹಗರಣಕ್ಕೆ ಮುಂದಾಗಬಾರದು. ವಕ್ಫ್ ಆಸ್ತಿ ದೇವರ ಆಸ್ತಿ, ಇದರ ಸಂರಕ್ಷಣೆ ನಮ್ಮ ಜವಾಬ್ದಾರಿಯಾಗಿದ್ದು, ಪ್ರತಿಯೊಬ್ಬರು ವಕ್ಫ್ ಆಸ್ತಿ ಸಂರಕ್ಷಣೆಗೆ ಮುಂದಾಗಬೇಕು ಎಂದು ಅವರು ಕರೆ ನೀಡಿದರು.

    Zameer 3

    ವಕ್ಫ್ ಅನುದಾನ ಮರಳಿ ಪಡೆಯಲಾಗಿದೆ
    ಹಣಕಾಸು ಇಲಾಖೆಗೆ ಮರಳಿ ಹೋದ ವಕ್ಫ್ ಅನುದಾನವನ್ನು ನಾನು ಸಚಿವನಾದ ಮೇಲೆ ಮತ್ತೆ ಮರಳಿ ಪಡೆಯಲಾಗಿದೆ. ಯಾವುದೇ ಸಮಾಜದ ಅಭಿವೃದ್ದಿಯಾಗಬೇಕಾದರೆ ಶಿಕ್ಷಣ ಅತ್ಯಂತ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಈ ಅನುದಾನ ಬಳಸಿಕೊಂಡು ಅಲ್ಪಸಂಖ್ಯಾತ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ರಾಜ್ಯದ 15 ಜಿಲ್ಲೆಗಳಲ್ಲಿ ವಕ್ಫ್ ಮಂಡಳಿಯಿಂದ ಪಿಯು ಕಾಲೇಜು ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಗಳಲ್ಲಿ ಕಾಲೇಜ್ ನಿರ್ಮಾಣದ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತುಳು ನಾಡಿದ ದೈವ ನರ್ತನ – ಕಾನೂನು ಸಮರಕ್ಕೆ ಮುಂದಾಗಿರುವ ಕೊಡಗು ದೈವ ನರ್ತಕರ ಸಂಘ 

    ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅತಿ ಹೆಚ್ಚು ಶಿಕ್ಷಣಕ್ಕಾಗಿ ಒತ್ತು ನೀಡಲಾಗುತ್ತಿದೆ. ಕೇಂದ್ರ ಸರ್ಕಾರದಿಂದ ಸ್ಥಗಿತಗೊಂಡಿದ್ದ ವಿದ್ಯಾರ್ಥಿವೇತನ ಪುನ ಒದಗಿಸಲಾಗುತ್ತಿದೆ. ಇಡೀ ದೇಶದಲ್ಲಿಯೇ ಮಾದರಿಯಾದ ಹಜ್ ಭವನ ಕರ್ನಾಟಕದಲ್ಲಿ ನಿರ್ಮಿಸಲಾಗಿದೆ. ಸಮಾಜದ ಮಕ್ಕಳು ಉನ್ನತ ಶಿಕ್ಷಣ ಪಡೆದು, ಉನ್ನತ ಹುದ್ದೆ ಪಡೆಯಲು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ದಿ ನಿಗಮದಿಂದ 1,300 ವಿದ್ಯಾರ್ಥಿಗಳಿಗೆ ನೆರವು ಒದಗಿಸಲಾಗಿದೆ. ವಿದೇಶದಲ್ಲಿ ವ್ಯಾಸಂಗಕ್ಕಾಗಿ ನೆರವು ಒದಗಿಸಲಾಗುತ್ತಿದೆ. ನಿರುದ್ಯೋಗಿ ಯುವಕರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ವಾಹನ ಖರೀದಿಗೆ ಸಬ್ಸಿಡಿ ಒದಗಿಸಲಾಗುತ್ತಿದೆ. ಮದರಸಾಗಳಲ್ಲಿ ಶಿಕ್ಷಕರನ್ನು ನೇಮಕ ಮಾಡಿ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತಿದೆ. ಹಜ್ ಭವನದಲ್ಲಿ 400 ವಿದ್ಯಾರ್ಥಿಗಳಿಗೆ ಐಎಎಸ್, ಐಪಿಎಸ್, ಕೆಎಎಸ್ ತರಬೇತಿ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

    ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ ಜಬ್ಬಾರ, ಸಿಂದಗಿ ಶಾಸಕ ಅಶೋಕ ಮನಗೂಳಿ, ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಅನ್ವರಬಾಶಾ ಅವರು ಮಾತನಾಡಿದರು. ಮೌಲಾನಾ ತನ್ವೀರ ಪೀರಾ ಹಾಸ್ಮೀ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದರು. ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಮುಶ್ರೀಫ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಒಂದೇ ಗಂಟೆಯೊಳಗೆ 120ಕ್ಕೂ ಹೆಚ್ಚು ಹಿಜ್ಬುಲ್ಲಾ ಉಗ್ರರ ತಾಣಗಳನ್ನು ಧ್ವಂಸ ಮಾಡಿದ ಇಸ್ರೇಲ್

  • ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನಿಲ್ಲ: ಜಮೀರ್

    ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನಿಲ್ಲ: ಜಮೀರ್

    ಕಲಬುರಗಿ: ಪ್ಯಾಲೆಸ್ತೀನ್ ಧ್ವಜ (Palestine Flag) ಹಿಡಿದು ಮೆರವಣಿಗೆ ಮಾಡಿದರೆ ತಪ್ಪೇನಿಲ್ಲ ಎನ್ನುವ ಮೂಲಕ ಸಚಿವ ಜಮೀರ್ ಅಹ್ಮದ್ (Zameer Ahmed Khan) ಪ್ಯಾಲೆಸ್ತೀನ್ ಧ್ವಜ ಮೆರವಣಿಗೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹೇಳಿಕೆ ಇದೀಗ ಚರ್ಚೆಗೆ ಗ್ರಾಸವಾಗಿದೆ.

    ರಾಜ್ಯದಲ್ಲಿ ಹಲವಡೆ ಕಿಡಗೇಡಿಗಳಿಂದ ಪ್ಯಾಲೆಸ್ತೀನ್ ಧ್ವಜ ಹಾರಾಟ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ಯಾಲೆಸ್ತೀನ್‌ಗೆ ಕೇಂದ್ರ ಸರ್ಕಾರವೇ ಬೆಂಬಲ ಕೊಟ್ಟಿದೆ. ಕೇಂದ್ರವೇ ‘ವಿ ಆರ್ ವಿತ್ ಪ್ಯಾಲೆಸ್ತೀನ್’ ಅಂದಿದೆ. ಕೇಂದ್ರ ಸರ್ಕಾರ ಹೇಳಿದ ಮೇಲೆ ತಾನೇ ಯಾರೋ ಧ್ವಜ ಹಿಡಿದು ಮೆರವಣಿಗೆ ಮಾಡಿದ್ದು. ಧ್ವಜ ಹಿಡಿದಿದರೆ ತಪ್ಪೇನು ಇಲ್ಲ ಅನ್ನಿಸುತ್ತೆ ಎಂದರು. ಇದನ್ನೂ ಓದಿ: ಖಲಿಸ್ತಾನಿ ಉಗ್ರನ ಹತ್ಯೆ ಸಂಚು | ಅಮೆರಿಕ ನ್ಯಾಯಾಲಯದ ಸಮನ್ಸ್‌ಗೆ ಅನಗತ್ಯ ಆರೋಪ ಎಂದ ಭಾರತ

    ಬೇರೆ ದೇಶದ ಪರ ಘೋಷಣೆ ಕೂಗಬಾರದು. ಘೋಷಣೆ ಕೂಗಿದರೆ ಅಂಥವರು ದೇಶದ್ರೋಹಿ ಕೆಲಸ ಮಾಡಿದಂತೆ ಆಗುತ್ತದೆ. ಘೋಷಣೆ ಕೂಗಿದವರು ಯಾರೇ ಇರಲಿ ಗಲ್ಲು ಶಿಕ್ಷೆಯಾಗಬೇಕು. ನಾನು ಮೊದಲು ಹಿಂದೂಸ್ತಾನಿ, ಆಮೇಲೆ ಕನ್ನಡಿಗ. ಅದಾದಮೇಲೆ ಮುಸ್ಲಿಂ. ಯಾರೇ ಆದರೂ ಬೇರೆ ದೇಶದ ಪರ ಘೋಷಣೆ ಕೂಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ದ್ವೇಷದಿಂದ ನನ್ನ ಮೇಲೆ ಎಫ್‌ಐಆರ್ ಮಾಡಿದ್ದಾರೆ: ಆರ್ ಆಶೋಕ್

  • 1 ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಮುಗಿಸಬೇಕು – ಸಚಿವ ಜಮೀರ್‌ ಗಡುವು

    1 ತಿಂಗಳಲ್ಲಿ ವಕ್ಫ್ ಆಸ್ತಿ ಖಾತಾ ಅಪ್ಡೇಟ್ ಕೆಲಸ ಮುಗಿಸಬೇಕು – ಸಚಿವ ಜಮೀರ್‌ ಗಡುವು

    – 1.08 ಲಕ್ಷ ಎಕರೆ ವಕ್ಫ್ ಆಸ್ತಿಯಲ್ಲಿ 85,000 ಎಕರೆ ಪ್ರದೇಶ ಒತ್ತುವರಿಯಾಗಿದೆ
    – ಖಬರಸ್ತಾನ್ ಬೇಡಿಕೆ ಪರಿಶೀಲಿಸಿ ಎಂದು ಸೂಚನೆ

    ಕಲಬುರಗಿ: ಯಾದಗಿರಿ ಮತ್ತು ಕಲಬುರಗಿ (Kalaburagi) ಜಿಲ್ಲೆಗಳಲ್ಲಿನ ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಖಾತಾ ಅಪ್ಡೇಟ್‌ ಮಾಡುವ ಕಾರ್ಯ ಮುಂದಿನ 1 ತಿಂಗಳೊಳಗೆ ಮುಗಿಸುವಂತೆ ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಹಾಗೂ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಅಧಿಕಾರಿಗಳಿಗೆ ಗಡುವು ನೀಡಿದರು.

    Zameer Ahmed Khan 2

    ಗುರುವಾರ ಕಲಬುರಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ವಕ್ಫ್ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು. ಕಲಬುರಗಿ ಜಿಲ್ಲೆಯಲ್ಲಿ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ 2,566, ನಗರ ಸ್ಥಳೀಯ ಸಂಸ್ಥೆಗಳಲ್ಲಿ 572 ಹಾಗೂ ಆರ್‌ಡಿಪಿಆರ್‌ (RDPR) ಕಚೇರಿಯಲ್ಲಿ ನೂರಾರು ಸಂಖ್ಯೆಯಲ್ಲಿ ಬಾಕಿ ಇವೆ. ಬಹಳ ವರ್ಷಗಳಿಂದ ಈ ಕಾರ್ಯ ನಾನಾ ಕಾರಣಕ್ಕೆ ನೆನೆಗುದ್ದಿಗೆ ಬಿದ್ದಿದ್ದು, ಇದನ್ನು ಆದ್ಯತೆ ಮೇಲೆ ಮುಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: J&K ಚುನಾವಣೆಯಲ್ಲಿ ಕಾಂಗ್ರೆಸ್‌-ಎನ್‌ಸಿ ಮೈತ್ರಿಕೂಟ ಗೆಲ್ಲುವ ಸಾಧ್ಯತೆ ಹೆಚ್ಚಿದೆ: ಪಾಕ್‌ ರಕ್ಷಣಾ ಸಚಿವ

    Zameer Ahmed Khan 1

    85 ಸಾವಿರ ಎಕರೆ ಪ್ರದೇಶ ಒತ್ತುವರಿ:
    ರಾಜ್ಯದಲ್ಲಿ 1.08 ಲಕ್ಷ ಎಕರೆ ವಕ್ಫ್ ಆಸ್ತಿ (Waqf Property) ಇದ್ದು, ಇದರಲ್ಲಿ 85 ಸಾವಿರ ಎಕರೆ ಪ್ರದೇಶ ಒತ್ತುವರಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 21,440 ಎಕರೆ ಆಸ್ತಿ ಪೈಕಿ 3,610 ಮತ್ತು ಯಾದಗಿರಿ ಜಿಲ್ಲೆಯಲ್ಲಿ 6,194 ಪೈಕಿ 123 ಎಕರೆ ಆಸ್ತಿ ಒತ್ತುವರಿಯಾಗಿದ್ದು, ಇದನ್ನು ತೆರವುಗೊಳಿಸಲು ಆಯಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಎಸ್ಪಿ ಸಹಕಾರ ಅತ್ಯಗತ್ಯವಾಗಿದೆ. ವಕ್ಫ್ ಆಸ್ತಿ ಸಾರ್ವಜನಿಕರು ಮುಸ್ಲಿಂ ಸಮಾಜಕ್ಕೆ ನೀಡಿದ ದೇಣಿಗೆ ಆಸ್ತಿಯಾಗಿದೆ. ಈ ಆಸ್ತಿ ಸಂರಕ್ಷಿಸುವುದು ಪುಣ್ಯದ ಕೆಲಸವಾಗಿದ್ದು, ಈ ಕುರಿತು ಸಮನ್ವಯತೆ ಸಾಧಿಸಬೇಕು ಎಂದು ವಕ್ಫ್ ಅಧಿಕಾರಿಗಳಾದ ಕಲಬುರಗಿಯ ಹಜರತ್ ಅಲಿ ಮತ್ತು ಯಾದಗಿರಿಯ ಜರೀನಾ ಬೇಗಂ ಅವರಿಗೆ ಸಚಿವರು ಖಡಕ್ ಸೂಚನೆ ನೀಡಿದರು.

    ಬುಧವಾರ ಕಲಬುರಗಿಯಲ್ಲಿ ವಕ್ಫ್ ಅದಾಲತ್ ನಡೆಸಿದ್ದು, ಕಲಬುರಗಿ ಜಿಲ್ಲೆಯಿಂದ 368 ಅರ್ಜಿ ಸ್ವೀಕರಿಸಲಾಗಿದೆ. ಇದರಲ್ಲಿ 100 ಒತ್ತುವರಿ, 55 ಖಬರಸ್ತಾನ್ ಬೇಡಿಕೆ ಹಾಗೂ ಇತರೆ ವಿಷಯಕ್ಕೆ 213 ಸೇರಿವೆ. ಅದೇ ರೀತಿ ಯಾದಗಿರಿ ಜಿಲ್ಲೆಯಿಂದ ಸಲ್ಲಿಕೆಯಾದ 82 ಅರ್ಜಿಯಲ್ಲಿ 38 ಅರ್ಜಿ ಒತ್ತುವರಿ, 33 ಖಬರಸ್ತಾನ್ ಬೇಡಿಕೆ ಹಾಗೂ ಉಳಿದ 11 ಅರ್ಜಿಗಳು ಭೂಮಿ ಮಂಜೂರಾತಿ, ಖಾತಾ ಅಪ್ಡೇಡ್‌, ಸರ್ವೇ ಸಮಸ್ಯೆಗಳಿಗೆ ಸಂಬಂಧಿಸಿವೆ. ಇವುಗಳನ್ನು ಸಹ ಆದ್ಯತೆ ಮೇಲೆ ಜಿಲ್ಲಾಧಿಕಾರಿಗಳು ಗಮನಹರಿಸಬೇಕು ಎಂದರು. ಇದನ್ನೂ ಓದಿ: ಮೋದಿಯನ್ನ ಹಾವು, ಚೇಳು, ರಾಕ್ಷಸ ಎಂದೆಲ್ಲ ಕರೆದಿದ್ದಾರೆ – ಕೈ ನಾಯಕರ ಆಕ್ಷೇಪಾರ್ಹ ಹೇಳಿಕೆ ಪಟ್ಟಿ ರಿಲೀಸ್

    ಖಬರಸ್ತಾನ್ ಬೇಡಿಕೆ ಪರಿಶೀಲಿಸಿ:
    ಮುಸ್ಲಿಂ ಸಮುದಾಯದ ಜನರ ಅಂತ್ಯ ಸಂಸ್ಕಾರಕ್ಕೆ ಸರ್ಕಾರಿ ಜಮೀನು ಇಲ್ಲದಿದ್ದಲ್ಲಿ ಖಾಸಗಿ ಜಮೀನು ಖರೀದಿಸಿ ಖಬರಸ್ತಾನಕ್ಕೆ ಜಮೀನು ಮಂಜೂರು ಮಾಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಡಿಸಿಗಳಿಗೆ ಸೂಚಿಸಿದರು. ಕಲಬುರಗಿ ಡಿಸಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಜಿಲ್ಲೆಯಲ್ಲಿ ಖಬರಸ್ತಾನ್ ಮಂಜೂರಾತಿಗೆ ಸಲ್ಲಿಕೆಯಾದ 23ರಲ್ಲಿ ಈಗಾಗಲೇ ಎರಡು ಮಂಜೂರು ಮಾಡಿದ್ದು, ಉಳಿದವು ಇಲಾಖಾ ಹಂತದಲ್ಲಿ ಪರಿಶೀಲನೆಯಲ್ಲಿವೆ ಎಂದರು. ಇದನ್ನೂ ಓದಿ: ಜಮ್ಮು & ಕಾಶ್ಮೀರದಲ್ಲಿ ಮತ್ತೊಂದು ಪೀಳಿಗೆಯನ್ನು ನಾಶ ಮಾಡಲು ಬಿಡುವುದಿಲ್ಲ: ಮೋದಿ ಪ್ರತಿಜ್ಞೆ

    ಸಭೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಕೆ.ಅನ್ವರ್ ಭಾಷಾ, ಯಾದಗಿರಿ ಜಿಲ್ಲಾಧಿಕಾರಿ ಬಿ.ಸುಶೀಲಾ, ಕಲಬುರಗಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿಸಿಪಿ ಕನಿಕಾ ಸಿಕ್ರಿವಾಲ್, ಯಾದಗಿರಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್.ಪಿ ಧರಣೇಶ, ಕಲಬುರಗಿ ಜಿಲ್ಲಾ ಪಂಚಾಯತ್ ಸಿಇಒ ಭಂವರ್ ಸಿಂಗ್ ಮೀನಾ, ಯಾದಗಿರಿ ಸಿಇಒ ಲವೀಶ್ ಓರ್ಡಿಯಾ, ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ವಕ್ಫ್ ಬೋರ್ಡ್ ಸಿಇಒ ಜಿಲಾನಿ ಮೊಕಾಶಿ, ಕಲಬುರಗಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಸೈಯದ್ ಹಬೀಬ್ ಸರ್ಮಸ್ತ್, ಯಾದಗಿರಿ ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಜಹಿರುದ್ದಿನ್ ಸವೆರಾ ಸೇರಿದಂತೆ ಎರಡು ಜಿಲ್ಲೆಗಳ ಅಲ್ಪಸಂಖ್ಯಾತ, ವಕ್ಫ್ ಇಲಾಖೆಗಳ ಅಧಿಕಾರಿಗಳು, ತಾಲೂಕಿನ ತಹಶೀಲ್ದಾರರು, ಎಡಿಎಲ್‌ಆರ್, ಡಿಡಿಎಲ್‌ಆರ್, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

  • ನನಗೂ ಸಿಎಂ ಆಗೋ ಆಸೆ ಇದೆ : ಜಮೀರ್ ಅಹ್ಮದ್

    ನನಗೂ ಸಿಎಂ ಆಗೋ ಆಸೆ ಇದೆ : ಜಮೀರ್ ಅಹ್ಮದ್

    – 1935 ರಲ್ಲೇ ಜಮೀನು ತೆಗೆದುಕೊಳ್ಳಲಾಗಿದೆ
    – ಸಿಎಂ ಪರ ಜಮೀರ್‌ ಬ್ಯಾಟಿಂಗ್‌

    ಧಾರವಾಡ: ಮುಖ್ಯಮಂತ್ರಿ (Chief Minister) ಆಗಲು ಯಾರಿಗೆ ಆಸೆ ಇರೋದಿಲ್ಲ ಹೇಳಿ? ಎಲ್ಲರಿಗೂ ಆ ಆಸೆ ಇದ್ದೇ ಇರುತ್ತದೆ. ನನಗೂ ಕೂಡ ಆ ಆಸೆ ಇದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಖಾತೆಯ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed) ಹೇಳಿದ್ದಾರೆ.

    ಧಾರವಾಡದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ (RV Deshpande) ಅವರು ಹಿರಿಯರು, 8-9 ಬಾರಿ ಶಾಸಕರಾದವರು, ಅವರೂ ಒಮ್ಮೆ ಸಿಎಂ ಆಗಬೇಕು ಎಂಬ ಆಸೆ ಇಟ್ಟುಕೊಂಡಿದ್ದಾರೆ. ಆ ರೀತಿ ಆಸೆ ಇಟ್ಟುಕೊಳ್ಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

    ನನಗೂ ಕೂಡ ಸಿಎಂ ಆಗಬೇಕೆಂಬ ಆಸೆ ಇದೆ. ಎಲ್ಲರಿಗೂ ಆ ಆಸೆ ಇದ್ದೇ ಇರುತ್ತದೆ‌. ದೇಶಪಾಂಡೆ ಅವರು ತಮ್ಮ ಅಭಿಪ್ರಾಯ ಹೇಳಿಕೊಂಡಿದ್ದಾರೆ. ಆದರೆ ನಮ್ಮಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಜಮೀರ್ ಹೇಳಿದರು. ಇದನ್ನೂ ಓದಿ: ಸಂಸ್ಕೃತ ಬರದಿದ್ರೆ ದೇವಲೋಕಕ್ಕೆ ವೀಸಾ ಇಲ್ಲ: ಚರ್ಚೆಗೆ ಗ್ರಾಸವಾದ ಪುತ್ತಿಗೆ ಶ್ರೀ ಹೇಳಿಕೆ

     

    ಸಿಎಂ ಅವರು ಪದೇ ಪದೇ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಜಮೀರ್, ನಾನೂ ಸಹ ಅನೇಕ ಬಾರಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗಿದ್ದೇನೆ. ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುತ್ತಾರೆ. ಅಲ್ಲಿಗೂ ನಾನು ಹೋಗಿದ್ದೇನೆ ಏನಾದರೂ ಆಗಿದೆಯಾ ಎಂದು ಪ್ರಶ್ನಿಸಿದರು.

    ಮುಡಾ (MUDA Scam) ವಿಚಾರದಲ್ಲಿ ಸಿಎಂ ಪಾತ್ರ ಏನೂ ಇಲ್ಲ, ಅದು ಎಚ್‌ಡಿ ಕುಮಾರಸ್ವಾಮಿಗೂ (HD Kumaraswamy) ಗೊತ್ತು. ಹೀಗಾಗಿ ಅವರು ಮೊದಲು ಬಿಜೆಪಿ (BJP) ಪಾದಯಾತ್ರೆಗೆ ಹೋಗುವುದಿಲ್ಲ ಎಂದಿದ್ದರು. ಬಿಜೆಪಿ ಹೈಕಮಾಂಡ್ ಹೇಳಿದ್ದಕ್ಕೆ ಪಾದಯಾತ್ರೆಗೆ ಹೋಗಿದ್ದರು, ಪ್ರಾಸಿಕ್ಯೂಷನ್ ಕೇಸ್‌ನಲ್ಲಿ ಏನೂ ಆಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: 2 ತಿಂಗಳ ಒಳಗಡೆ ಕೆಪಿಎಸ್‌ಸಿ ಮರು ಪರೀಕ್ಷೆ – ಅಧಿಕಾರಿಗಳು ಅಮಾನತು: ಸಿಎಂ ಘೋಷಣೆ

     

    ರಾಜ್ಯಪಾಲರ ವಕೀಲರು ಸಿದ್ದರಾಮಯ್ಯ (Siddaramaiah) ಬೇನಾಮಿ ಆಸ್ತಿ ಮಾಡಿದ್ದಾರೆ ಎನ್ನುವಂತೆ ವಾದ ಮಾಡಿದ್ದಾರೆ, ಅದರಲ್ಲಿ ಸಿದ್ದರಾಮಯ್ಯನವರ ಪಾತ್ರವೇ ಇಲ್ಲ. 1935ರಲ್ಲೇ ಈ ಜಮೀನು ತೆಗೆದುಕೊಳ್ಳಲಾಗಿದೆ, ಲಿಂಗ ಎನ್ನುವವರು ಜಮೀನು ತೆಗೆದುಕೊಂಡಿದ್ದರು. ಆ ನಂತರ ದೇವರಾಜ್ ಎಂಬುವವರ ಪಾಲು ಬರುತ್ತದೆ. 2004 ರಲ್ಲಿ ಸಿದ್ದರಾಮಯ್ಯ ಅವರ ಬಾಮೈದುನನಿಗೆ ಕೊಡಲಾಗುತ್ತದೆ. ಆ ಬಳಿಕ ಅವರು ತಮ್ಮ ಅಕ್ಕನಿಗೆ ಗಿಫ್ಟ್ ಕೊಟ್ಟಿದ್ದಾರೆ. ಅದನ್ನು ಸೈಟ್ ಮಾಡಿದ್ದಾರೆ. ಆದರೆ ಸಿಎಂ ಅವರು ಎಲ್ಲೂ ಸೈಟ್ ಕೊಡಿ ಎಂದು ಪತ್ರ ಬರೆದಿಲ್ಲ ಎಂದರು.

    ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ಇಲ್ಲ. ಈಗ ಸಿಎಂ ಖುರ್ಚಿ ಖಾಲಿ ಇಲ್ಲ. ಎಲ್ಲೂ ಸಿಎಂ ಬದಲಾವಣೆ ಮಾಡುವ ವಿಷಯವೇ ಪ್ರಸ್ತಾಪ ಆಗಿಲ್ಲ. ಬಿಜೆಪಿ ಅವಧಿಯಲ್ಲಿನ ಕೇವಲ ಕೋವಿಡ್ ಹಗರಣ ಮಾತ್ರವಲ್ಲ. ಬಹಳಷ್ಟು ಹಗರಣಗಳಿವೆ. ನಾವು ಸುಮ್ಮನೆ ಕುಳಿತದ್ದೇ ತಪ್ಪು. ಅವುಗಳನ್ನೆಲ್ಲ ತೆಗೆಯುತ್ತೇವೆ. ದ್ವೇಷದ ರಾಜಕಾರಣ ಮಾಡಿದವರು ಯಾರು? ಸಿದ್ದರಾಮಯ್ಯ ಎಂದೂ ಭಯ ಬೀಳುವುದಿಲ್ಲ. ಅವರು ಟಗರು ಇದ್ದಂತೆ ಎಂದರು.

  • ಸಿಎಂ ಯಾವತ್ತಿಗೂ ಟಗರೇ, ಭಯ ಬೀಳೋ ಪ್ರಶ್ನೆನೇ ಬರಲ್ಲ: ಜಮೀರ್

    ಸಿಎಂ ಯಾವತ್ತಿಗೂ ಟಗರೇ, ಭಯ ಬೀಳೋ ಪ್ರಶ್ನೆನೇ ಬರಲ್ಲ: ಜಮೀರ್

    ಹುಬ್ಬಳ್ಳಿ: ಸಿಎಂ ಟಗರು. ಟಗರು ಯಾವತ್ತಿಗೂ ಟಗರೇ. ಭಯ ಬೀಳೋ ಪ್ರಶ್ನೆನೇ ಬರಲ್ಲ ಎಂದು ಸಚಿವ ಜಮೀರ್ ಅಹ್ಮದ್ (Zameer Ahmed Khan) ಸಿಎಂ ಸಿದ್ದರಾಮಯ್ಯ (Siddaramaiah) ಪರ ಬ್ಯಾಟ್ ಬೀಸಿದ್ದಾರೆ.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಹುಲಿ ಇದ್ದಂತೆ. ಸಿದ್ದರಾಮಯ್ಯ ಜೊತೆ ಹೈಕಮಾಂಡ್, ಶಾಸಕರು, ರಾಜ್ಯದ ಜನ ಇದ್ದಾರೆ. ಸಿದ್ದರಾಮಯ್ಯ ಬಂದು ನಿಂತರೆ ಸಾಕು, ಸಾವಿರಾರು ಜನ ಬಂದು ಕೂರುತ್ತಾರೆ. ಬಿಜೆಪಿ ಅವರು ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ದರ್ಶನ್ ವಿಚಾರದಲ್ಲಿ ನಾನು ಯಾವುದೇ ಪ್ರಭಾವ ಬೀರಿಲ್ಲ: ಜಮೀರ್

    siddaramaiah

    ಕಾಂಗ್ರೆಸ್ ಮುಡಾ ಚಲೋ ಮಾಡಲಿ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ. ಅವರ ಬಗ್ಗೆ ಜುಲೈನಲ್ಲಿ ಖಾಸಗಿ ವ್ಯಕ್ತಿ ದೂರು ನೀಡುತ್ತಾರೆ. ಅದೇ ದಿನ ಪ್ರಾಸಿಕ್ಯೂಷನ್‌ಗೆ ಕೊಡುತ್ತಾರೆ. ಅದಕ್ಕಿಂತ ಮುಂಚೆ 8 ತಿಂಗಳ ಹಿಂದೆಯೇ ಕುಮಾರಸ್ವಾಮಿಗೆ ಪ್ರಾಸಿಕ್ಯೂಷನ್ ಕೇಳುತ್ತಾರೆ, ಆದ್ರೆ ಕೊಡಲ್ಲ. ಕುಮಾರಸ್ವಾಮಿ, ಜೊಲ್ಲೆ, ನಿರಾಣಿ, ಜನಾರ್ದನ ರೆಡ್ಡಿಗೆ ಕೊಟ್ಟಿಲ್ಲ. ಇದು ಯಾವ ನ್ಯಾಯ ಸರ್ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಗೌರಿ ಹಬ್ಬದಂದು ಮುಖ್ಯಮಂತ್ರಿಗಳಿಂದ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿ ಉದ್ಘಾಟನೆ – ಡಿಕೆಶಿ

    ಶನಿವಾರ ವಕೀಲರು ವಾದ ಮಾಡೋದನ್ನು ನೋಡಿದೆ. ಅದರಲ್ಲಿ ಸಿದ್ದರಾಮಯ್ಯನವರದು ಬೇನಾಮಿ ಆಸ್ತಿ ಅನ್ನೋ ಥರ ಮಾತನಾಡುತ್ತಾರೆ. ಲಿಂಗ ಅವರು 1930ರಲ್ಲಿ ಹರಾಜಲ್ಲಿ ಸೈಟ್ ತೆಗೆದುಕೊಂಡಿದ್ದರು. ಅವಾಗ ಸಿದ್ದರಾಮಯ್ಯ ಹುಟ್ಟೇ ಇರಲಿಲ್ಲ. ಮಲ್ಲಿಕಾರ್ಜುನ ಅವರ ಅಕ್ಕನಿಗೆ ಸೈಟ್ ಗಿಫ್ಟ್ ಕೊಡುತ್ತಾರೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ ಸೈಟ್ ಕೊಟ್ಟಿದ್ದು. 125 ಸೈಟ್‌ನಲ್ಲಿ 14 ಸೈಟ್ ಇವರಿಗೆ ಕೊಡುತ್ತಾರೆ. ಇದರಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನಿದೆ? ಮುಡಾ ಹಗರಣ ಮುಖ್ಯಮಂತ್ರಿಗಳಿಗೆ ಯಾಕೆ ಮುಳ್ಳಾಗುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇಂಡಿಗೋ ವಿಮಾನದ ವಾಶ್‍ರೂಮ್‍ನಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ – ತುರ್ತು ಭೂಸ್ಪರ್ಶ

    ಬಿಜೆಪಿಗೆ ಹಿಂದುಳಿದ ನಾಯಕನನ್ನು ಸಹಿಸೋಕೆ ಆಗುತ್ತಿಲ್ಲ. ದೇವರಾಜ ಅರಸು ನಂತರ ಹಿಂದುಳಿದವರು ಯಾರೂ ಮುಖ್ಯಮಂತ್ರಿ ಆಗಿಲ್ಲ. ಇವರು ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಇವರ ಜನಪ್ರಿಯತೆ ಬಿಜೆಪಿ ಅವರಿಗೆ ಸಹಿಸೋಕೆ ಆಗುತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ತೊಂದರೆ ಕೊಟ್ಟರೆ ಕಾಂಗ್ರೆಸ್ ತೆಗಿಬಹುದು ಅಂದುಕೊಂಡಿದ್ದಾರೆ. ಬಿಜೆಪಿ ಅವರಿಗೆ ಹೊಟ್ಟೆಕಿಚ್ಚು ಇದೆ. ಬೇರೆ ಅವರು ದುಡ್ಡು ಖರ್ಚು ಮಾಡಿ ಜನರನ್ನು ಕರಿಸಬೇಕು. ಆದರೆ ಸಿದ್ದರಾಮಯ್ಯ ಬಂದು ನಿಂತರೆ ಸಾವಿರಾರು ಜನ ಬರುತ್ತಾರೆ. ನಮ್ಮ ನಾಯಕ ಸಿದ್ದರಾಮಯ್ಯ ಅವರು ಎಂದರು. ಇದನ್ನೂ ಓದಿ: ಕೊಲ್ಲೂರು ಮೂಕಾಂಬಿಕೆ ದೇಗುಲದಲ್ಲಿ ಜೂ.ಎನ್‌ಟಿಆರ್

    ದಾಖಲೆ ಬಿಡುಗಡೆ ಮಾಡಿದ್ದೇ ಕಾಂಗ್ರೆಸ್‌ನವರು ಎಂಬ ವಿಚಾರದ ಕುರಿತು ಮಾತನಾಡಿ, ಮುಡಾ ಹಗರಣದಲ್ಲಿ ಏನಿಲ್ಲ ಅಂದಕೂಡಲೇ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ. ಹೈಕೋರ್ಟ್‌ನಲ್ಲಿ ಏನು ನಡೆಯುತ್ತಿದೆ ಎಂದು ಬಿಜೆಪಿ ಅವರಿಗೆ ಗೊತ್ತಾಗಿದೆ. ಏನು ಸಿಗಲ್ಲ ಅಂತ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌