Tag: ಡೀಸೆಲ್

  • Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

    Tamil Nadu | ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಭಾರೀ ಅಗ್ನಿ ಅವಘಡ

    – ರೈಲು ಸೇವೆಯಲ್ಲಿ ವ್ಯತ್ಯಯ

    ಚೆನ್ನೈ: ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನ (Goods Train) 4 ವ್ಯಾಗನ್‌ಗಳಲ್ಲಿ ಏಕಾಏಕಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡ ಘಟನೆ ತಮಿಳುನಾಡಿನ (Tamil Nadu) ತಿರುವಲ್ಲೂರು (Tiruvallur) ರೈಲು ನಿಲ್ದಾಣದ ಬಳಿ ನಡೆದಿದೆ.

    ಇಂದು ಮುಂಜಾನೆ 5:30ರ ಸುಮಾರಿಗೆ ಘಟನೆ ನಡೆದಿದೆ. ಬೆಂಕಿ ಅವಘಡದಿಂದ ರೈಲು ಹೊತ್ತಿ ಉರಿದಿದ್ದು, ಆಕಾಶದಲ್ಲಿ ಕಪ್ಪು ದಟ್ಟಹೊಗೆ ಕಾಣಿಸಿಕೊಂಡಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಹಾಗೂ ರಕ್ಷಣಾ ತಂಡಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ರೈಲಿನಲ್ಲಿ ಡೀಸೆಲ್ ಇದ್ದ ಕಾರಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಟ್ಟರು. ಇದನ್ನೂ ಓದಿ: ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ತಡೆಗೋಡೆಗೆ ಕಾರು ಡಿಕ್ಕಿ – ಮೂವರ ದುರ್ಮರಣ

    ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಮನಾಲಿಯಿಂದ ತಿರುಪತಿ ಪ್ರದೇಶಕ್ಕೆ ತೆರಳುತ್ತಿದ್ದ ವೇಳೆ ತಿರುವಲ್ಲೂರು ರೈಲು ನಿಲ್ದಾಣದ ಬಳಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹತ್ತಿರದ ಪ್ರದೇಶಗಳ ಜನರನ್ನು ಸ್ಥಳಾಂತರಿಸಲಾಗಿದೆ. ಘಟನೆಗೆ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯಿಂದಾಗಿ ಚೆನ್ನೈಗೆ ತೆರಳುವ ಮತ್ತು ಅಲ್ಲಿಂದ ಹೊರಡಬೇಕಿದ್ದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಗಳು ತಿಳಿಸಿವೆ. ರೈಲು ಹಳಿ ತಪ್ಪಿ ಪಲ್ಟಿಯಾಗಿ, ಡೀಸೆಲ್‌ ಸೋರಿಕೆಯಿಂದ ಅವಘಡ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

  • ಡೀಸೆಲ್‌ ಬೆಲೆ ಹೆಚ್ಚಳ – ಪ್ರತಿ ವಿದ್ಯಾರ್ಥಿಗೆ 500-600 ರೂ. ಹೆಚ್ಚುವರಿ ಹೊರೆ

    ಡೀಸೆಲ್‌ ಬೆಲೆ ಹೆಚ್ಚಳ – ಪ್ರತಿ ವಿದ್ಯಾರ್ಥಿಗೆ 500-600 ರೂ. ಹೆಚ್ಚುವರಿ ಹೊರೆ

    – ಶುಲ್ಕ ಏರಿಸಲು ಖಾಸಗಿ ಶಾಲಾ ವಾಹನ ಸಂಘದಿಂದ ನಿರ್ಧಾರ

    ಬೆಂಗಳೂರು: ಡೀಸೆಲ್‌ (Diesel) ಬೆಲೆ ಹೆಚ್ಚಳದ (Price Hike) ಹೊರೆಯನ್ನು ಪೋಷಕರ ಹೆಗಲಿಗೆ ಹಾಕಲು ಖಾಸಗಿ ಶಾಲಾ ವಾಹನ ಸಂಘ (Private School Vehicle Association) ನಿರ್ಧಾರ ಕೈಗೊಂಡಿದೆ.

    ಪ್ರತಿ ಲೀಟರ್‌ ಡೀಸೆಲ್‌ ದರ 2 ರೂ. ಏರಿಕೆಯಾದ ಹಿನ್ನೆಲೆಯಲ್ಲಿ ಶಾಲಾ ವಾಹನದ ಶುಲ್ಕವನ್ನು ಹೆಚ್ಚಿಸಲು ಸಂಘ ನಿರ್ಧಾರ ಕೈಗೊಂಡಿದೆ. ಇದನ್ನೂ ಓದಿ: ಸೌದೆ ತಗೊಂಡ್ರೇ ಮಾತ್ರ ಹೆಣ ಸುಡಲು ಸ್ಲಾಟ್ – ಬೆಂಗಳೂರಿನ ಸ್ಮಶಾನದಲ್ಲೂ ಬ್ರೋಕರ್‌ಗಳ ಹಾವಳಿ!

    ಸದ್ಯ ತಿಂಗಳಿಗೆ 2,000 ರೂ – 3,000 ರೂ. ಶುಲ್ಕವಿದೆ. ದರ ಏರಿಕೆಯಿಂದ 2,500 ರೂ- 3,500 ರೂ.ಗೆ ಏರಿಕೆಯಾಗಲಿದೆ. ಇದೇ ಶೈಕ್ಷಣಿಕ ವರ್ಷದಿಂದ ನೂತನ ದರ ಜಾರಿಯಾಗಲಿದೆ.

    ಸದ್ಯ ಬೆಂಗಳೂರಲ್ಲೇ 7 ಸಾವಿರಕ್ಕೂ ಅಧಿಕ ಶಾಲಾ ವಾಹನಗಳು ಇವೆ. ಸಾವಿರಾರು ವಿದ್ಯಾರ್ಥಿಗಳು ಖಾಸಗಿ ವಾಹನದಲ್ಲೇ ನಿತ್ಯ ಶಾಲೆಗೆ ತೆರಳುತ್ತಿದ್ದಾರೆ. ಇದನ್ನೂ ಓದಿ: ಡೀಸೆಲ್ ಬೆಲೆ ಏರಿಕೆ – ಖಾಸಗಿ ಬಸ್ ಪ್ರಯಾಣ ದರ ದುಬಾರಿ!

    ಮಾರ್ಚ್‌ 31 ವರೆಗೆ ಡೀಸೆಲ್‌ ಮಾರಾಟ ತೆರಿಗೆ ದರ 18.44% ಇತ್ತು. ರಾಜ್ಯ ಸರ್ಕಾರ ಏಪ್ರಿಲ್‌ 1 ರಿಂದ ಮಾರಾಟ ತೆರಿಗೆ ದರವನ್ನು 21.17% ಕ್ಕೆ ಹೆಚ್ಚಳ ಮಾಡಿತ್ತು. ಈ ಮೂಲಕ ಪ್ರತಿ ಲೀಟರ್‌ ಡೀಸೆಲ್‌ ದರವು 2 ರೂಪಾಯಿ ಏರಿಕೆಯಾಗಿದೆ.

  • ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ – ಗ್ರಾಹಕರಿಗೆ ಯಾವುದೇ ಹೊರೆ ಇಲ್ಲ

    ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ 2 ರೂ. ಏರಿಕೆ – ಗ್ರಾಹಕರಿಗೆ ಯಾವುದೇ ಹೊರೆ ಇಲ್ಲ

    ನವದೆಹಲಿ: ಕೇಂದ್ರ ಸರ್ಕಾರ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ. ಅಬಕಾರಿ ಸುಂಕ ಏರಿಕೆ ಮಾಡಿದರೂ ಗ್ರಾಹಕರ ಮೇಲೆ ಯಾವುದೇ ಹೊರೆ ಇಲ್ಲ.

    ತೈಲ ಕಂಪನಿಗಳ ಮೇಲೆ ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ 2 ರೂ. ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಇಳಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಏರಿಕೆ ಮಾಡುವ ನಿರ್ಧಾರ ಕೈಗೊಂಡಿದೆ.

    ಡೊನಾಲ್ಡ್‌ ಟ್ರಂಪ್‌ (Donald Trump) ಆರಂಭಿಸಿದ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ (Share Market) ರಕ್ತಪಾತವಾಗುತ್ತಿದ್ದಂತೆ ಇನ್ನೊಂದು ಕಡೆ ಕಚ್ಚಾ ತೈಲ ದರ (Crude Oil Price) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಇಳಿಕೆ ಕಂಡಿದೆ.

    russia india crude oil

    ಟ್ರಂಪ್ ಸರ್ಕಾರ ತೆರಿಗೆ ಸಮರ ಘೋಷಿಸಿದ ಒಂದು ವಾರದಲ್ಲಿ ಕಚ್ಚಾ ತೈಲ ದರ ಒಂದು ಬ್ಯಾರೆಲ್‌ (159 ಲೀಟರ್) ಬೆಲೆ ಸುಮಾರು 10 ಡಾಲರ್(‌ಅಂದಾಜು 850 ರೂ.) ಇಳಿಕೆಯಾಗಿದೆ.

    ತೈಲ ಮತ್ತು ಅನಿಲ ವಲಯವನ್ನು ಈ ಸುಂಕಗಳಿಂದ ವಿನಾಯಿತಿ ನೀಡಲಾಗಿದ್ದರೂ, ಹಣದುಬ್ಬರದ ಕಳವಳ, ಆರ್ಥಿಕ ಹಿಂಜರಿತ ಭೀತಿ, ನಿಧಾನ ಆರ್ಥಿಕ ಬೆಳವಣಿಗೆ ಮತ್ತು ವ್ಯಾಪಾರ ವಿವಾದಗಳು ತೀವ್ರಗೊಂಡಿರುವುದರಿಂದ ಬೆಲೆ ಇಳಿಕೆಯಾಗಿದೆ. ಈ ಮೂಲಕ ಮೂರು ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವನ್ನು ತಲುಪಿವೆ.

    ಬ್ಯಾರೆಲ್‌ಗೆ 72.94 ಡಾಲರ್‌ನಲ್ಲಿ (ಅಂದಾಜು 6,250 ರೂ.) ವಹಿವಾಟು ನಡೆಸುತ್ತಿದ್ದ ಬ್ರೆಂಟ್ ಕಚ್ಚಾ ತೈಲವು ದರ ಈಗ 62.91 ಡಾಲರ್‌ಗೆ (ಅಂದಾಜು 5,390 ರೂ.) ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲವು ಬ್ಯಾರೆಲ್‌ ದರ 7% ಇಳಿಕೆಯಾಗಿ 59.34 ಡಾಲರ್‌ (ಅಂದಾಜು 5,090 ರೂ.)ತಲುಪಿದೆ.

    ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC+) ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದೆ. ಮೇ ತಿಂಗಳಲ್ಲಿ ದಿನಕ್ಕೆ 4,11,000 ಬ್ಯಾರೆಲ್‌ಗಳನ್ನು (bpd) ತೈಲ ಉತ್ಪಾದನೆ ಮಾಡಲು ಮುಂದಾಗಿದೆ. ಈ ಹಿಂದೆ ನಿರ್ಧರಿಸಲಾಗಿದ್ದ 1,35,000 ಬಿಪಿಡಿಯಿಂದ ಹೆಚ್ಚು ಉತ್ಪಾದನೆ ಮಾಡುವ ನಿರ್ಧಾರ ಕೈಗೊಂಡಿದ್ದು ಇದು ತೈಲ ಬೆಲೆ ಕುಸಿಯಲು ಕಾರಣವಾಗಿದೆ.

  • ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌  ದರ ಇಳಿಕೆಯಾಗುತ್ತಾ?

    ಕಚ್ಚಾ ತೈಲ ದರ ಭಾರೀ ಇಳಿಕೆ- ಭಾರತದಲ್ಲೂ ಪೆಟ್ರೋಲ್‌, ಡೀಸೆಲ್‌ ದರ ಇಳಿಕೆಯಾಗುತ್ತಾ?

    ಲಂಡನ್‌/ನವದೆಹಲಿ: ಡೊನಾಲ್ಡ್‌ ಟ್ರಂಪ್‌ (Donald Trump) ಆರಂಭಿಸಿದ ತೆರಿಗೆ ಸಮರದಿಂದ ಷೇರು ಮಾರುಕಟ್ಟೆಯಲ್ಲಿ (Share Market) ರಕ್ತಪಾತವಾಗುತ್ತಿದ್ದಂತೆ ಇನ್ನೊಂದು ಕಡೆ ಕಚ್ಚಾ ತೈಲ ದರ (Crude Oil Price) ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಭಾರೀ ಇಳಿಕೆ ಕಂಡಿದೆ.

    ಟ್ರಂಪ್ ಸರ್ಕಾರ ತೆರಿಗೆ ಸಮರ ಘೋಷಿಸಿದ ಒಂದು ವಾರದಲ್ಲಿ ಕಚ್ಚಾ ತೈಲ ದರ ಒಂದು ಬ್ಯಾರೆಲ್‌ (159 ಲೀಟರ್) ಬೆಲೆ ಸುಮಾರು 10 ಡಾಲರ್(‌ಅಂದಾಜು 850 ರೂ.) ಇಳಿಕೆಯಾಗಿದೆ.

    ತೈಲ ಮತ್ತು ಅನಿಲ ವಲಯವನ್ನು ಈ ಸುಂಕಗಳಿಂದ ವಿನಾಯಿತಿ ನೀಡಲಾಗಿದ್ದರೂ, ಹಣದುಬ್ಬರದ ಕಳವಳ, ಆರ್ಥಿಕ ಹಿಂಜರಿತ ಭೀತಿ, ನಿಧಾನ ಆರ್ಥಿಕ ಬೆಳವಣಿಗೆ ಮತ್ತು ವ್ಯಾಪಾರ ವಿವಾದಗಳು ತೀವ್ರಗೊಂಡಿರುವುದರಿಂದ ಬೆಲೆ ಇಳಿಕೆಯಾಗಿದೆ. ಈ ಮೂಲಕ ಮೂರು ವರ್ಷಗಳಲ್ಲಿ ಅತ್ಯಂತ ಕಡಿಮೆ ಮಟ್ಟವನ್ನು ತಲುಪಿವೆ.

    ಬ್ಯಾರೆಲ್‌ಗೆ 72.94 ಡಾಲರ್‌ನಲ್ಲಿ (ಅಂದಾಜು 6,250) ವಹಿವಾಟು ನಡೆಸುತ್ತಿದ್ದ ಬ್ರೆಂಟ್ ಕಚ್ಚಾ ತೈಲವು ದರ ಈಗ 62.91 ಡಾಲರ್‌ಗೆ (ಅಂದಾಜು 5,390 ರೂ.) ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೇಟ್ (WTI) ಕಚ್ಚಾ ತೈಲವು ಬ್ಯಾರೆಲ್‌ ದರ 7% ಇಳಿಕೆಯಾಗಿ 59.34 ಡಾಲರ್‌ (ಅಂದಾಜು 5,090ರೂ.)ತಲುಪಿದೆ.

    india usa crude oil storage 3

    ಪೆಟ್ರೋಲಿಯಂ ರಫ್ತು ಮಾಡುವ ದೇಶಗಳ ಸಂಘಟನೆ (OPEC+) ಉತ್ಪಾದನೆಯನ್ನು ಹೆಚ್ಚಿಸುವ ಯೋಜನೆಗಳನ್ನು ಘೋಷಿಸಿದೆ. ಮೇ ತಿಂಗಳಲ್ಲಿ ದಿನಕ್ಕೆ 4,11,000 ಬ್ಯಾರೆಲ್‌ಗಳನ್ನು (bpd) ತೈಲ ಉತ್ಪಾದನೆ ಮಾಡಲು ಮುಂದಾಗಿದೆ. ಈ ಹಿಂದೆ ನಿರ್ಧರಿಸಲಾಗಿದ್ದ 1,35,000 ಬಿಪಿಡಿಯಿಂದ ಹೆಚ್ಚು ಉತ್ಪಾದನೆ ಮಾಡುವ ನಿರ್ಧಾರ ಕೈಗೊಂಡಿದ್ದು ಇದು ತೈಲ ಬೆಲೆ ಕುಸಿಯಲು ಕಾರಣವಾಗಿದೆ. ಇದನ್ನೂ ಓದಿ: Black Monday ಷೇರು ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ – ಕರಗಿತು ಹೂಡಿಕೆದಾರರ19 ಲಕ್ಷ ಕೋಟಿ

    ಭಾರತದಲ್ಲೂ ಇಳಿಕೆಯಾಗುತ್ತಾ?
    ಈ ಹಿಂದೆ ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಬದಲಾಗುತ್ತಿತ್ತು. ಆದರೆ ತೈಲ ಬೆಲೆ ಏರಿಕೆಯಾದರೆ ದೇಶದಲ್ಲಿ ವಸ್ತುಗಳ ಬೆಲೆ ಏರಿಕೆಯಾಗುವ ಕಾರಣ ಕೇಂದ್ರ ಸರ್ಕಾರ ಈಗ ನಿತ್ಯ ದರ ಪರಿಷ್ಕರಣೆ ಮಾಡುವುದನ್ನು ನಿಲ್ಲಿಸಿದೆ.‌

    ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನ 2024ರ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು 2 ರೂ. ಇಳಿಕೆ ಮಾಡಿತ್ತು. ಇಳಿಕೆ ಮಾಡಿದ ನಂತರ ಕರ್ನಾಟಕದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 99.83 ರೂ. ಆಗಿದ್ದರೆ ಡೀಸೆಲ್‌ ದರ 85.93 ರೂ. ಇತ್ತು. ಇದನ್ನೂ ಓದಿ: ಸುಂಕ ನೀತಿಗೆ ವ್ಯಾಪಕ ವಿರೋಧ, ಟ್ರಂಪ್‌ ವಿರುದ್ಧ ತಿರುಗಿಬಿದ್ದ ಜನ – ಅಮೆರಿಕದ 1,200 ಸ್ಥಳಗಳಲ್ಲಿ‌ ಬೃಹತ್‌ ಪ್ರತಿಭಟನೆ

    PETROL 1

    2024ರ ಜೂನ್‌ ನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 3.02 ರೂ. ಹಾಗೂ ಡೀಸೆಲ್‌ ಬೆಲೆಯಲ್ಲಿ 3 ರೂ. ಹೆಚ್ಚಳ ಮಾಡಲಾಗಿತ್ತು. ದರ ಹೆಚ್ಚಳದಿಂದ ಪೆಟ್ರೋಲ್‌ ದರ 102.84 ರೂ. ಆಗಿದ್ದರೆ ಡೀಸೆಲ್‌ ದರ 89.79 ರೂ.ಗೆ ಏರಿಕೆಯಾಗಿತ್ತು.

    ಏಪ್ರಿಲ್‌ 1 ರಿಂದ ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು 18.44% ರಿಂದ 21.17% ಗೆ ಸರ್ಕಾರ ಏರಿಕೆ ಮಾಡಿದ್ದರಿಂದ ಪ್ರತಿ ಲೀಟರ್‌ ಡೀಸೆಲ್‌ ಬೆಲೆ 2 ರೂ. ಏರಿಕೆಯಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ನಂತರ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 3.02 ರೂ. ಏರಿಕೆ ಮಾಡಿದ್ದರೆ ಡೀಸೆಲ್‌ ದರ 5 ರೂ. ಏರಿಕೆ ಮಾಡಿದೆ.

    ಈ ಹಿಂದೆ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಕಡಿತ ಮಾಡಿದ ಬೆನ್ನಲ್ಲೇ ಹಲವು ರಾಜ್ಯ ಸರ್ಕಾರಗಳು ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಸೆಸ್‌ ಹಾಕಿದ್ದರಿಂದ ದರ ಕಡಿತದ ಲಾಭ ಜನರಿಗೆ ಸಿಕ್ಕಿರಲಿಲ್ಲ.

     

  • ಗ್ಯಾರಂಟಿ ಸರ್ಕಾರದಿಂದ ಶಾಕ್‌ – ಡೀಸೆಲ್‌ ದರ 2 ರೂ. ಏರಿಕೆ

    ಗ್ಯಾರಂಟಿ ಸರ್ಕಾರದಿಂದ ಶಾಕ್‌ – ಡೀಸೆಲ್‌ ದರ 2 ರೂ. ಏರಿಕೆ

    ಬೆಂಗಳೂರು: ಗ್ಯಾರಂಟಿ ಸರ್ಕಾರ  ಪ್ರತಿ ಲೀಟರ್‌ ಡೀಸೆಲ್‌  ಬೆಲೆಯನ್ನು 2 ರೂ. ಏರಿಕೆ ಮಾಡಿದೆ.  ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಕಾಂಗ್ರೆಸ್‌ ಸರ್ಕಾರ ಮತ್ತೊಂದು ಶಾಕ್‌ ನೀಡಿದ್ದುಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

    ಡೀಸೆಲ್‌ ಮೇಲಿನ ಮಾರಾಟ ತೆರಿಗೆಯನ್ನು 18.44%  ರಿಂದ  21.17% ಗೆ ಏರಿಕೆ ಮಾಡಲಾಗಿದೆ. ಸದ್ಯ ರಾಜ್ಯದಲ್ಲಿ ಪ್ರತಿ ಲೀಟರ್‌ ಡೀಸೆಲ್‌ಗೆ 88.93 ರೂ. ದರವಿದೆ. ತೆರಿಗೆ ಏರಿಕೆಯಿಂದ ದರ  90.93 ರೂ.ಗೆ ಆಗಲಿದೆ.  ಪೆಟ್ರೋಲ್‌ ಮೇಲೆ ಮಾರಾಟ ತೆರಿಗೆಯನ್ನು ಏರಿಸದ ಕಾರಣ  ಪ್ರತಿ ಲೀಟರ್‌ ಪೆಟ್ರೋಲ್‌ ದರ 102. 84  ರೂ.(ನಗರದಿಂದ ನಗರಕ್ಕೆ ದರ ಬದಲಾಗುತ್ತದೆ) ಇರಲಿದೆ.

    ಸರಕು ಸಾಗಾಣಿಕೆ ಮಾಡುವ ವಾಹನಗಳಾದ ಟ್ರಕ್‌, ಲಾರಿಗಳು ಡೀಸೆಲ್‌ ಬಳಸುವ ಕಾರಣ ಮುಂದಿನ ದಿನಗಳಲ್ಲಿ ಇದರ ನೇರ ಪರಿಣಾಮ ದಿನ ಬಳಕೆಯ ವಸ್ತುಗಳ ಮೇಲೆ ತಟ್ಟಲಿದೆ. ಇದರಿಂದಾಗಿ ದಿನ ಬಳಕೆ ತರಕಾರಿ, ಆಹಾರ ವಸ್ತುಗಳ ಬೆಲೆಯೂ ಏರಿಕೆ ಆಗಲಿದೆ.

    Karnataka State Budget 2025 Siddaramaiah

    ಕಳೆದ ಜೂನ್‌ನಲ್ಲಿ ಏರಿಕೆ:
    2024ರ ಜೂನ್‌ ನಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 3.02 ರೂ. ಹಾಗೂ ಡೀಸೆಲ್‌ ಬೆಲೆಯಲ್ಲಿ 3 ರೂ. ಹೆಚ್ಚಳ ಮಾಡಲಾಗಿತ್ತು. ದರ ಹೆಚ್ಚಳದಿಂದ ಪೆಟ್ರೋಲ್‌ ದರ 102.84 ರೂ. ಆಗಿದ್ದರೆ ಡಿಸೇಲ್‌ ದರ 89.79 ರೂ.ಗೆ ಏರಿಕೆಯಾಗಿತ್ತು. ಈ ದರ ಏರಿಕೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗೆ ಹಣವಿಲ್ಲ ಎಂದು ತೈಲ ಬೆಲೆ ಏರಿಸಿಲ್ಲಎಂಬುದಾಗಿ ಸಮರ್ಥಿಸಿಕೊಂಡಿದ್ದರು.

    ಲೋಕಸಭೆ ಚುನಾವಣೆ ಘೋಷಣೆಯಾಗುವ ಮುನ್ನ ಮಾರ್ಚ್ ತಿಂಗಳಲ್ಲಿ ಕೇಂದ್ರ ಸರ್ಕಾರವು ಪ್ರತಿ ಲೀಟರ್‌ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು 2 ರೂ. ಇಳಿಕೆ ಮಾಡಿತ್ತು. ಇಳಿಕೆ ಮಾಡಿದ ನಂತರ ಕರ್ನಾಟಕದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ ದರ 99.83 ರೂ. ಆಗಿದ್ದರೆ ಡೀಸೆಲ್‌ ದರ 85.93 ರೂ. ಇತ್ತು.

    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಆಡಳಿತಕ್ಕೆ ಬಂದ ನಂತರ ಪ್ರತಿ ಲೀಟರ್‌ ಪೆಟ್ರೋಲ್‌ ಬೆಲೆ 3.02 ರೂ. ಏರಿಕೆ ಮಾಡಿದ್ದರೆ ಡೀಸೆಲ್‌ ದರ 5 ರೂ. ಏರಿಕೆ ಮಾಡಿದೆ.

  • ಕರಾವಳಿ ಕಾವಲು ಪೊಲೀಸರಿಗೂ ತಟ್ಟಿದ ಗ್ಯಾರಂಟಿ ಎಫೆಕ್ಟ್ – ಸರ್ಕಾರದಿಂದ ಪೂರೈಕೆಯಾಗುತ್ತಿದ್ದ ಡೀಸೆಲ್ ಕಟ್

    ಕರಾವಳಿ ಕಾವಲು ಪೊಲೀಸರಿಗೂ ತಟ್ಟಿದ ಗ್ಯಾರಂಟಿ ಎಫೆಕ್ಟ್ – ಸರ್ಕಾರದಿಂದ ಪೂರೈಕೆಯಾಗುತ್ತಿದ್ದ ಡೀಸೆಲ್ ಕಟ್

    – ಮೀನುಗಾರರ ಮಾಹಿತಿಯೇ ಫೈನಲ್ ಟಚ್

    ಉಡುಪಿ: ಕರ್ನಾಟಕ ಕರಾವಳಿ ಭದ್ರತೆಗೆ ರಾಜ್ಯ ಸರ್ಕಾರ ಇಂಧನ ಕಡಿತ ಆದೇಶ ಹೊಡೆತ ನೀಡಿದೆ. ರಾಜ್ಯದ ಗಡಿ ಕಾಯುವ ಕರಾವಳಿ ಕಾವಲು ಪೊಲೀಸ್ (Coastal Guard Udupi) ಇಲಾಖೆಗೆ ಪೂರೈಸಲಾಗುತ್ತಿದ್ದ ಇಂಧನ ಪ್ರಮಾಣವನ್ನ ಕಡಿತಗೊಳಿಸಿದೆ. ಅರ್ಧಕ್ಕಿಂತ ಜಾಸ್ತಿ ಇಂಧನ ಪ್ರಮಾಣ ಇಳಿಸಿದ್ದು, ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ ಎಂಬುದು ಸ್ಪಷ್ಟವಾಗುತ್ತಿದೆ.

    ಕರ್ನಾಟಕದ ಭದ್ರತೆಯ ವಿಚಾರದಲ್ಲಿ ಸರ್ಕಾರದ ಜಿಪುಣತನ ಸರಿಯಾ ಎನ್ನುವ ಪ್ರಶ್ನೆ ಎದುರಾಗಿದೆ. ಕರಾವಳಿ ಕಾವಲು ಪೊಲೀಸ್ ಪಡೆ ರಾಜ್ಯ ಕರಾವಳಿ ತೀರದ ಮೂರು ಜಿಲ್ಲೆಯ ಗಡಿಯನ್ನು ಕಾಯುವ ಕೆಲಸ ಮಾಡುತ್ತದೆ. ಸಮುದ್ರದ ಮೂಲಕ ನಡೆಯಬಹುದಾದ ಸಂಭಾವ್ಯ ಅನಾಹುತ ತಡೆಯೋದು ಇಲಾಖೆಯ ಕೆಲಸ. ಅಕ್ರಮ ನಡೆಯದಂತೆ, ಕಾನೂನು ಬಾಹಿರ ಕೃತ್ಯಗಳು ಸಮುದ್ರ ಮುಖೇನ ಘಟಿಸದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಕೇರಳ ಗಡಿಯಿಂದ ಗೋವಾ ಗಡಿವರೆಗೆ ಜವಾಬ್ದಾರಿ ಇದೆ. ಸರ್ಕಾರದ ಹೊಸ ಆದೇಶ ಕರಾವಳಿ ಕಾವಲು ಪಡೆ ಬಳಸೋ ವಾಹನಗಳಿಗೆ ನೀಡಲಾಗುತ್ತಿದ್ದ ಇಂಧನ ಪ್ರಮಾಣವನ್ನ ಕಡಿತಗೊಳಿಸಿದೆ. ಬೋಟ್‌ಗೆ ಮಾಸಿಕ 600 ಲೀಟರ್ ಇಂಧನ ಪೂರೈಕೆ ಮಾಡಲಾಗುತ್ತಿತ್ತು. ಈ ಪ್ರಮಾಣವನ್ನ ಇದೀಗ ಕೇವಲ 250 ಲೀಟರ್ ಮಾತ್ರ ಸೀಮಿತಗೊಳಿಸಲಾಗಿದೆ.

    Coastal Guard Udupi 1

    ಈ ಇಂಧನ ಕಡಿತದಿಂದ ದಿನಕ್ಕೆ 10 ತಾಸಿನವರೆಗೂ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಕರಾವಳಿ ಕಾವಲು ಪೊಲೀಸರು ಈಗ ಕೇವಲ ಒಂದು ಗಂಟೆ ಸಮುದ್ರದಲ್ಲಿ ಗಸ್ತು ತಿರುಗೋ ಪರಿಸ್ಥಿತಿ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕಾರವಾರದಲ್ಲಿ ಕಾರ್ಯಚರಿಸುವ ಎಲ್ಲಾ ಇಲಾಖೆಯ ವಾಹನಗಳಿಗೆ ನೀಡಲಾಗುತ್ತಿದ್ದ ಇಂಧನ ಪ್ರಮಾಣದಲ್ಲಿ ಶೇಕಡ 50 ಲೀಟರ್ ಕಡಿತಗೊಳಿಸಲಾಗಿದೆ. ಮೂರು ಜಿಲ್ಲೆಯಲ್ಲಿ 9 ಸ್ಟೇಷನ್‌ಗಳಿದ್ದು, ಸಮುದ್ರದಲ್ಲಿ 15 ಬೋಟ್‌ಗಳಲ್ಲಿ ಗಸ್ತಿನಲ್ಲಿವೆ. ಹವಾಮಾನ ವೈಪರಿತ್ಯ, ಮಳೆಗಾಲ ನಿಯಮಬಾಹಿರ ಚಟುವಟಿಕೆಯನ್ನು ತಡೆಯುವುದು ಪೊಲೀಸರ ಕೆಲಸ. ಸರ್ಕಾರದ ಹೊಸ ಆದೇಶದಿಂದ ಮೀನುಗಾರರ ಮಾಹಿತಿಯನ್ನು ಪೊಲೀಸರು ಅವಲಂಬಿಸಬೇಕಾಗಿದೆ.

    ರಾಜ್ಯದ ಭದ್ರತೆಯ ದೃಷ್ಟಿಕೋನದಿಂದ ಸರ್ಕಾರ ನಿರ್ಧಾರ ಸರಿಯಲ್ಲ. ಪುನರ್ ಪರಿಶೀಲನೆ ನಡೆಸಬೇಕಾದ ಅಗತ್ಯತೆ ಇದೆ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಏಕೆ ಎದುರಾಗಿದೆ ಎಂಬ ಪ್ರಶ್ನೆ ಕೇಳಿಬರುತ್ತಿದೆ.

  • Kolar| ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ

    Kolar| ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ ಪಲ್ಟಿ

    ಕೋಲಾರ: ಚಾಲಕನ ನಿಯಂತ್ರಣ ತಪ್ಪಿ ಡೀಸೆಲ್ ಟ್ಯಾಂಕರ್ (Diesel Tanker) ಪಲ್ಟಿ ಹೊಡೆದಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

    ಕೋಲಾರ ತಾಲೂಕಿನ ಚುಂಚದೇನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75ರ ಬಳಿ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡೀಸೆಲ್ ಟ್ಯಾಂಕರ್ ರಸ್ತೆಯ ಪಕ್ಕದಲ್ಲಿ ಉರುಳಿ ಬಿದ್ದಿದ್ದು ಕೆಲಕಾಲ ಅತಂಕ ಮನೆ ಮಾಡಿತ್ತು. ಡೀಸೆಲ್ ಟ್ಯಾಂಕರ್ ಉರುಳಿ ಬಿದ್ದ ಪರಿಣಾಮ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಜೊತೆಗೆ ಡಿಸೇಲ್ ಸಹ ಇದ್ದ ಕಾರಣ ಆಗಬೇಕಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಇದನ್ನೂ ಓದಿ: ಧರ್ಮಸ್ಥಳ ಸಂಘ ಮೈಕ್ರೋ ಫೈನಾನ್ಸ್‌ ವ್ಯಾಪ್ತಿಗೆ ಬರಲ್ಲ: ಕೆ.ಎನ್‌ ರಾಜಣ್ಣ

    ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಮುನ್ನಚ್ಚರಿಕೆ ಕ್ರಮವಾಗಿ ಡೀಸೆಲ್ ಟ್ಯಾಂಕರ್‌ಗೆ ನೀರು ಹಾಗೂ ಲಿಕ್ವಿಡ್ ಹರಿಸಿದರು. ಹಾಗಾಗಿ ಪರಿಣಿತರು ಸ್ಥಳಕ್ಕೆ ಆಗಮಿಸಿ ಟ್ಯಾಂಕರ್ ತೆರವುಗೊಳಿಸಲಾಯಿತು. ಇನ್ನೂ ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸುರಕ್ಷಿತ ಮಾನದಂಡಗಳ ಮೂಲಕ ಟ್ಯಾಂಕರ್ ತೆರವುಗೊಳಿಸಲಾಗಿದೆ. ಇದನ್ನೂ ಓದಿ: ಕಿಡ್ನ್ಯಾಪ್‌ ಮಾಡಿದ್ದ ವೈದ್ಯನಿಗೇ ಬಸ್ ಚಾರ್ಜ್‌ಗೆ 300 ರೂ. ಕೊಟ್ಟು ವಾಪಸ್ ಕಳಿಸಿದ ಕಿಡ್ನ್ಯಾಪರ್ಸ್‌

  • ಪೆಟ್ರೋಲ್ – ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ಒಪ್ಪಲ್ಲ: ಹರ್ದೀಪ್ ಸಿಂಗ್ ಪುರಿ

    ಪೆಟ್ರೋಲ್ – ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರಲು ರಾಜ್ಯಗಳು ಒಪ್ಪಲ್ಲ: ಹರ್ದೀಪ್ ಸಿಂಗ್ ಪುರಿ

    ಪುಣೆ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (GST) ವ್ಯಾಪ್ತಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಮ್ಮತ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ (Hardeep Singh Puri) ಶುಕ್ರವಾರ ತಿಳಿಸಿದರು.

    ಇಂಧನದ ಮೇಲಿನ ಜಿಎಸ್‌ಟಿ ಜಾರಿಯಲ್ಲಿನ ಪ್ರಮುಖ ಅಡಚಣೆಯನ್ನು ಕೇಂದ್ರ ಸಚಿವ ಹರ್ದೀಪ್ ಸಿಂಗ್ ಎತ್ತಿ ತೋರಿಸಿದ್ದಾರೆ. ಪುಣೆ ಇಂಟರ್‌ನ್ಯಾಶನಲ್ ಸೆಂಟರ್‌ನ (PIC) 14ನೇ ಸಂಸ್ಥಾಪನಾ ದಿನದ ಉಪನ್ಯಾಸದಲ್ಲಿ ಮಾತನಾಡಿದ ಅವರು, ಮುಂಬರುವ ದಶಕದಲ್ಲಿ ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸುವ ತಂತ್ರ ಮತ್ತು ಕ್ರಮಗಳು ಕುರಿತು ಉಪನ್ಯಾಸ ನೀಡಿದರು. ಇದನ್ನೂ ಓದಿ: Madhya Pradesh | ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದವನ ಪತ್ತೆಗೆ ನೈಟ್ ವಿಷನ್ ಡ್ರೋನ್ ಬಳಕೆ

    Hardeep Singh Puri

    ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರಲು ನಾನು ಸಲಹೆ ಕೇಳಿದ್ದೇನೆ. ಈಗ ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ಅನ್ನು (Petrol, Diesel) ತರಬೇಕು ಎಂದು ನಾನು ಬಹಳ ಸಮಯದಿಂದ ಪ್ರತಿಪಾದಿಸುತ್ತಾ ಬಂದಿದ್ದೇನೆ. ಈಗ ನನ್ನ ಹಿರಿಯ ಸಹೋದ್ಯೋಗಿ, ಹಣಕಾಸು ಸಚಿವರು ಕೂಡ ಹಲವಾರು ಸಂದರ್ಭಗಳಲ್ಲಿ ಇಂಧನವನ್ನು ಜಿಎಸ್‌ಟಿ ಅಡಿಯಲ್ಲಿ ತರುವ ಬಗ್ಗೆ ಮಾತನಾಡಿದ್ದಾರೆ ಎಂದು ನನಗೆ ಖಚಿತವಾಗಿದೆ ಎಂದು ಹೇಳಿದ್ದಾರೆ.

    petrol machine

    ಇಂಧನದ ಮೇಲಿನ ಜಿಎಸ್‌ಟಿಯನ್ನು ಪ್ರತಿಪಾದಿಸುವ ವೇಳೆ ಅದರ ಅನುಷ್ಠಾನದಲ್ಲಿನ ಪ್ರಮುಖ ಅಡಚಣೆಯನ್ನು ಸಹ ಸಚಿವರು ಎತ್ತಿ ತೋರಿಸಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ಅವರಿಗೆ ಗಮನಾರ್ಹ ಆದಾಯವನ್ನು ಉತ್ಪಾದಿಸುವ ಕಾರಣ ಇದು ತುಂಬಾ ಸವಾಲಿನ ಸಂಗತಿಯಾಗಿದೆ. ಆದ್ದರಿಂದ ಇದಕ್ಕೆ ಎಲ್ಲಾ ರಾಜ್ಯಗಳ ಅನುಮೋದನೆಯ ಅಗತ್ಯವಿದೆ ಎಂದರು. ಇದನ್ನೂ ಓದಿ: ಪೇಜರ್‌ ಸ್ಫೋಟ ಬೆನ್ನಲ್ಲೇ ಚೀನಿ ಸಿಸಿಟಿವಿ ಬಳಕೆ ನಿಯಂತ್ರಿಸಲು ಮುಂದಾದ ಕೇಂದ್ರ

    ಮದ್ಯ ಮತ್ತು ಇಂಧನವು ಪ್ರಮುಖ ಆದಾಯದ ಮೂಲಗಳಾಗಿರುವುದರಿಂದ ರಾಜ್ಯಗಳು ಈ ಕ್ರಮವನ್ನು ಒಪ್ಪಿಕೊಳ್ಳುವ ಸಾಧ್ಯತೆಯಿಲ್ಲ. ಜಿಎಸ್‌ಟಿ ಮಂಡಳಿಯಲ್ಲಿ ಈ ವಿಷಯ ಚರ್ಚಿಸಲು ಕೇರಳ ಹೈಕೋರ್ಟ್ ಸೂಚಿಸಿದೆ. ಆದರೆ ಕೇರಳದ ಹಣಕಾಸು ಸಚಿವರು ಒಪ್ಪಲಿಲ್ಲ ಎಂದು ಅವರು ಹೇಳಿದ್ದಾರೆ. ಹೆಚ್ಚುವರಿ ವ್ಯಾಟ್‌ಅನ್ನು ಬಿಟ್ಟುಕೊಡಲು ಬಿಜೆಪಿಯೇತರ ರಾಜ್ಯಗಳು ಸಿದ್ಧರಿಲ್ಲ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಾಶ್ಮೀರವನ್ನ ಪ್ಯಾಲೆಸ್ತೀನ್‌ಗೆ ಹೋಲಿಸಿದ ಪಾಕ್ ಪ್ರಧಾನಿಗೆ ವಿಶ್ವಸಂಸ್ಥೆಯಲ್ಲಿ ಭಾರತ ತಿರುಗೇಟು

  • ಶೀಘ್ರವೇ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ

    ಶೀಘ್ರವೇ ಭಾರತದಲ್ಲಿ ಪೆಟ್ರೋಲ್‌, ಡೀಸೆಲ್‌ ಬೆಲೆ ಇಳಿಕೆ ಸಾಧ್ಯತೆ

    ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ (Crude Oil Prices) ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ (India) ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.

    ಕಚ್ಚಾ ತೈಲ ಬೆಲೆ ಒಂಬತ್ತು ತಿಂಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಕಾರಣ ಇಂಧನ ಬೆಲೆಯನ್ನು ಕಡಿತಗೊಳಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ ಎಂದು ಸರ್ಕಾರದ ಉನ್ನತ ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ಕಚ್ಚಾ ತೈಲ ಬೆಲೆಗಳು ಜನವರಿ 2024 ರಿಂದ ಕಡಿಮೆ ಮಟ್ಟಕ್ಕೆ ಕುಸಿದಿವೆ. ತೈಲ ಬೆಲೆ ಇಳಿಕೆಯಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳಿಗೆ ಲಾಭವಾಗುತ್ತಿರುವ ಕಾರಣ ಬೆಲೆ ಇಳಿಕೆಯಾಗಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಗಾಂಜಾ ಕೃಷಿ ಕಾನೂನುಬದ್ಧ – ಆರ್ಥಿಕತೆಯನ್ನು ಹೆಚ್ಚಿಸಲು ಅನುಕೂಲ ಎಂದ ಸರ್ಕಾರ

    India Resumes Imports of Venezuelas Crude Oil

    ಅಮೆರಿಕದಲ್ಲಿ (USA) ಆರ್ಥಿಕ ಹಿಂಜರಿತದ (Recession Fear) ಭಯದ ನಡುವೆ ಬ್ರೆಂಟ್ ಕಚ್ಚಾ ತೈಲವು ಕುಸಿಯುತ್ತಿದೆ. ಶುಕ್ರವಾರ ಬ್ರೆಂಟ್ ಕಚ್ಚಾ ತೈಲವು ಪ್ರತಿ ಬ್ಯಾರೆಲ್‌ಗೆ 73.17 ಡಾಲರ್‌ (6,143 ರೂ.) ವೆಸ್ಟ್‌ ಟೆಕ್ಸಸ್‌ ಇಂಟರ್‌ಮೀಡಿಯೆಟ್‌ (WTI) ದರ 69.63 ಡಾಲರ್‌ (5,847 ರೂ.) ವ್ಯವಹಾರ ನಡೆಸಿತ್ತು. ಇದನ್ನೂ ಓದಿ: ರಾಜಸ್ಥಾನದಲ್ಲಿ ಎರಡನೇ ಇನ್ನಿಂಗ್ಸ್‌ – ರಾಯಲ್ಸ್‌ ಕೋಚ್‌ ಆಗಿ ದ್ರಾವಿಡ್‌ ನೇಮಕ

    ಅಮೆರಿಕದ (USA) ಸೇವಾ ವಲಯದ ಚಟುವಟಿಕೆಯು ಆಗಸ್ಟ್‌ನಲ್ಲಿ ಸ್ಥಿರವಾಗಿದ್ದರೆ ಖಾಸಗಿ ಉದ್ಯೋಗಗಳ ಬೆಳವಣಿಗೆ ದರ ನಿಧಾನವಾಗುತ್ತಿದ್ದು ಉದ್ಯೋಗ ಕಡಿತ (Job Cut) ಆರಂಭವಾಗಿದೆ. ಇದರ ನೇರ ಪರಿಣಾಮ ತೈಲ ಮಾರುಕಟ್ಟೆ ಮತ್ತು ಸ್ಟಾಕ್‌ ಮಾರುಕಟ್ಟೆಯ ಮೇಲೆ ಬೀಳುತ್ತಿದೆ. ಶುಕ್ರವಾರ ಸೆನ್ಸೆಕ್ಸ್‌ 1,017.23 ಅಂಕ ಪತನಗೊಂಡರೆ ನಿಫ್ಟಿ 292.95 ಅಂಕ ಕುಸಿತ ಕಂಡಿತ್ತು.

    crude oil dollar 1

    ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮಾರ್ಚ್‌ 14 ರಂದು ಪ್ರತಿ ಲೀಟರ್‌ ಪೆಟ್ರೋಲ್‌ (Petrol) ಮತ್ತು ಡೀಸೆಲ್‌ (Diesel) ಬೆಲೆಯಲ್ಲಿ 2 ರೂ. ಕಡಿತಗೊಳಿಸಿದ್ದವು.

    ಹರ್ಯಾಣ ಮತ್ತು ಜಮ್ಮು ಕಾಶ್ಮೀರದಲ್ಲಿ ಚುನಾವಣೆ (Election) ಘೋಷಣೆಯಾಗಿದ್ದರೆ ಮಹಾರಾಷ್ಟ್ರದಲ್ಲಿ ಈ ವರ್ಷದ ಅಂತ್ಯದಲ್ಲಿ ಚುನಾವಣೆ ನಡೆಯಲಿದೆ. ಜೊತೆಗೆ ವಿಧಾನಸಭೆ ಮತ್ತು ಲೋಕಸಭೆಗೆ ಉಪಚುನಾವಣೆ ನಡೆಯಬೇಕಿದೆ. ಈ ಕಾರಣಕ್ಕೆ ಶೀಘ್ರವೇ ತೈಲ ಬೆಲೆ ಇಳಿಕೆಯಾಗುವ ಸಾಧ್ಯತೆಯಿದೆ.

    ಪ್ರಸ್ತುತ ಬೆಂಗಳೂರಿನಲ್ಲಿ ಪ್ರತಿ ಲೀಟರ್‌ಪೆಟ್ರೋಲ್‌ಗೆ 102.86 ರೂ. ಇದ್ದರೆ ಡೀಸೆಲ್‌ಗೆ 88.94 ರೂ. ಇದೆ.

     

  • Punjab Economic Crisis | ವಿದ್ಯುತ್‌ ಸಬ್ಸಿಡಿ ರದ್ದುಗೊಳಿಸಿ ಪೆಟ್ರೋಲ್‌, ಡೀಸೆಲ್‌ ಜೊತೆ ಬಸ್‌ ಟಿಕೆಟ್‌ ದರ ಏರಿಸಿದ ಪಂಜಾಬ್‌

    Punjab Economic Crisis | ವಿದ್ಯುತ್‌ ಸಬ್ಸಿಡಿ ರದ್ದುಗೊಳಿಸಿ ಪೆಟ್ರೋಲ್‌, ಡೀಸೆಲ್‌ ಜೊತೆ ಬಸ್‌ ಟಿಕೆಟ್‌ ದರ ಏರಿಸಿದ ಪಂಜಾಬ್‌

    ಚಂಡೀಗಢ: ಉಚಿತ ಯೋಜನೆಗಳನ್ನು (Free Scheme) ಘೋಷಣೆ ಮಾಡಿ ಆರ್ಥಿಕ ಸಂಕಷ್ಟಕ್ಕೆ (Economic Crisis) ಸಿಲುಕಿರುವ ಪಂಜಾಬ್‌ ಆಪ್‌ ಸರ್ಕಾರ ಪೆಟ್ರೋಲ್‌ (Petrol) ಮತ್ತು ಡಿಸೇಲ್‌ ಮೇಲೆ ವ್ಯಾಟ್‌ ಹೆಚ್ಚಿಸಿ ವಿದ್ಯುತ್‌ ಸಬ್ಸಿಡಿಯನ್ನು (Power Subsidy) ರದ್ದುಗೊಳಿಸಿದೆ.

    ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (VAT) ಹೆಚ್ಚಳಕ್ಕೆ ಪಂಜಾಬ್ ಕ್ಯಾಬಿನೆಟ್ ಗುರುವಾರ ಅನುಮೋದನೆ ನೀಡಿದೆ. ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್ ದರ 61 ಪೈಸೆ ಮತ್ತು ಡೀಸೆಲ್ ದರ 92 ಪೈಸೆ ಏರಿಕೆಯಾಗಲಿದೆ.

    7 ಕಿಲೋವ್ಯಾಟ್ ವರೆಗಿನ ವಿದ್ಯುತ್‌ ಬಳಕೆಗೆ ನೀಡಲಾಗುತ್ತಿದ್ದ ಸಬ್ಸಿಡಿಯನ್ನು ರದ್ದುಗೊಳಿಸಲಾಗಿದೆ. ಇದರ ಜೊತೆ ಬಸ್ ಟಿಕೆಟ್‌ ದರ ಪ್ರತಿ ಕಿ.ಮೀ.ಗೆ 23 ಪೈಸೆ ಏರಿಕೆ ಮಾಡಲಾಗಿದೆ.

    PETROL

    ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಂಪುಟದ ಚರ್ಚೆಯ ನಂತರ, ರಾಜ್ಯ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಅವರು ವ್ಯಾಟ್ ಏರಿಸುವ ಮೂಲಕ ರಾಜ್ಯ ಹೆಚ್ಚುವರಿ ಆದಾಯವನ್ನು ಗಳಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು.

    ವಿದ್ಯುತ್‌ ಸಬ್ಸಿಡಿಯನ್ನು ರದ್ದುಗೊಳಿಸಿದ ನಿರ್ಧಾರಗಳನ್ನು ಸಮರ್ಥಿಸಿಕೊಂಡ ಚೀಮಾ ಇದರಿಂದ 1,500-1700 ಕೋಟಿ ರೂ. ಉಳಿಸಬಹುದು ಎಂದು ತಿಳಿಸಿದರು. ಇದನ್ನೂ ಓದಿ: ಸಾಲವೆಂಬ ಪರ್ವತಗಳ ಸುಳಿಯಲ್ಲಿ ಹಿಮಾಚಲ – ಆರ್ಥಿಕ ಅಪಾಯದಲ್ಲಿರುವ ರಾಜ್ಯಗಳು ಯಾವುವು? ತಜ್ಞರು ಸೂಚಿಸುವ ಪರಿಹಾರವೇನು?

    ವಾರ್ಷಿಕವಾಗಿ ಡೀಸೆಲ್ ಮಾರಾಟದಿಂದ 395 ಕೋಟಿ ರೂ. ಮತ್ತು ಪೆಟ್ರೋಲ್‌ನಿಂದ 150 ಕೋಟಿ ರೂ. ಹೆಚ್ಚುವರಿಯಾಗಿ ಸಂಗ್ರಹಿಸುವ ನಿರೀಕ್ಷೆಯನ್ನು ಸರ್ಕಾರ ಹೊಂದಿದೆ.

    Electricity

    ಕಾಂಗ್ರೆಸ್‌ ಚನ್ನಿ ಸರ್ಕಾರ ಘೋಷಣೆ ಮಾಡಿದ ಉಚಿತ ಭರವಸೆಗಳಿಂದ ರಾಜ್ಯಕ್ಕೆ ಸಂಕಷ್ಟ ಎದುರಾಗಿದೆ ಆಪ್‌ ಸರ್ಕಾರ ತಿಳಿಸಿದೆ. ಚನ್ನಿ ಸರ್ಕಾರ 2021ರಲ್ಲಿ 7 ಕಿಲೋವ್ಯಾಟ್‌ವರೆಗಿನ ಗೃಹ ಬಳಕೆಯ ವಿದ್ಯುತ್‌ ಶುಲ್ಕವನ್ನು ಪ್ರತಿ ಯುನಿಟ್‌ಗೆ 3 ರೂ.ಗೆ ಇಳಿಕೆ ಮಾಡಿತ್ತು. 7 ಕಿಲೋ ವ್ಯಾಟ್‌ವರೆಗೂ ಇದರ ಲಾಭ ಪಡೆಯಲು ಅವಕಾಶವಿತ್ತು.

    ಆಮ್ ಆದ್ಮಿ ಪಕ್ಷದ ನೇತೃತ್ವದ ಪಂಜಾಬ್ ಸರ್ಕಾರವು ಗೃಹ ಬಳಕೆದಾರರಿಗೆ ತಿಂಗಳಿಗೆ 300 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದು ಈ ಯೋಜನೆ ಮುಂದುವರಿಯಲಿದೆ. ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿದ್ದ ಸಬ್ಸಿಡಿ ಮಾತ್ರ ಈಗ ರದ್ದುಗೊಂಡಿದೆ.

     

    ಹಿಮಾಚಲದಂತೆ ಪಂಜಾಬ್‌ ಉಚಿತ ಯೋಜನೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಸೆ.4 ರವರೆಗೆ ಸರ್ಕಾರಿ ನೌಕರರಿಗೆ ಸಂಬಳ ಪಾವತಿಯಾಗಿರಲಿಲ್ಲ. ಮಾರ್ಚ್‌ನಲ್ಲಿ ಮಂಡನೆಯಾದ ಬಜೆಟ್‌ ಭಾಷಣದಲ್ಲಿ ಹರ್ಪಾಲ್ ಚೀಮಾ ಅವರು 2024-25 ರ ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಪಂಜಾಬ್‌ನ ಸಾಲವು 3.74 ಲಕ್ಷ ಕೋಟಿ ರೂ.ಗೆ ಏರಿಕೆಯಾಗಬಹುದು ಎಂದು ತಿಳಿಸಿದ್ದರು.

    ಆಪ್‌ ಸರ್ಕಾರ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದ ನಂತರ ಮೂರನೇ ಬಾರಿ ಪೆಟ್ರೋಲ್‌ ಮತ್ತು ಡೀಸೆಲ್‌ ದರವನ್ನು ಏರಿಕೆ ಮಾಡಿದೆ.