Tag: ದಾದಾಸಾಹೇಬ್ ಫಾಲ್ಕೆ

  • ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

    ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಘೋಷಣೆ

    ಮುಂಬೈ: ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ (Mithun Chakraborty) ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು (Dadasaheb Phalke Award) ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು (70th National Film Awards) ಸ್ವೀಕರಿಸಲಿದ್ದಾರೆ.

    ಈ ಕುರಿತು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮಿಥುನ್ ಅವರ ಗಮನಾರ್ಹ ಸಿನಿಮೀಯ ಪ್ರಯಾಣವು ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆಗಾಗಿ ಪೌರಾಣಿಕ ನಟರಾದ ಶಾ.ಮಿಥುನ್ ಚಕ್ರವರ್ತಿಯವರನ್ನು ದಾದಾಸಾಹೇಬ್ ಫಾಲ್ಕೆ ತೀರ್ಪುಗಾರರ ಸಮಿತಿಯು ಆಯ್ಕೆ ಮಾಡಿದೆ. ಅ.8 ರಂದು 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಬರೆದುಕೊಂಡಿದ್ದು, ಪೋಸ್ಟ್ ಹಂಚಿಕೊಂಡಿದ್ದಾರೆ.ಇದನ್ನೂ ಓದಿ: ಬಾಹ್ಯಾಕಾಶ ನಿಲ್ದಾಣ ತಲುಪಿತು ಕ್ರ್ಯೂ-9 ಮಿಷನ್ – ಅಪ್ಪಿಕೊಂಡು ಸ್ವಾಗತಿಸಿದ ಗಗನಯಾನಿಗಳು

    ದಾದಾಸಾಹೇಬ್ ಫಾಲ್ಕೆ ಆಯ್ಕೆ ಸಮಿತಿಯು ಭಾರತೀಯ ಚಿತ್ರರಂಗಕ್ಕೆ ಅಪ್ರತಿಮ ಕೊಡುಗೆಗಾಗಿ ಖ್ಯಾತ ನಟ, ಶಾ. ಮಿಥುನ್ ಚಕ್ರವರ್ತಿ ಅವರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ ಎಂದು ಘೋಷಿಸಲು ಸಂತೋಷವಾಗುತ್ತದೆ ಎಂದಿದ್ದಾರೆ. ಜೊತೆಗೆ ಈ ವರ್ಷದ ಆರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಪದ್ಮಭೂಷಣವನ್ನು ಘೋಷಿಸಲಾಗಿತ್ತು.

    ಮಿಥುನ್ ಚಕ್ರವರ್ತಿ ಹಿನ್ನೆಲೆ:
    ಕಲ್ಕತ್ತಾದಲ್ಲಿ ಜನಿಸಿದ ಇವರು, 1976ರ ಮೃಗಯಾ (Mrigayaa) ಸಿನಿಮಾದ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದರು. ಈ ಸಿನಿಮಾದ ಅತ್ಯುತ್ತಮ ನಟನೆಯಿಂದಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ತಂದುಕೊಟ್ಟಿತು. ಬಳಿಕ 1992 ರಲ್ಲಿ ತೆರೆ ಕಂಡ ತಹದರ್ ಕಥಾ ಹಾಗೂ 1998ರಲ್ಲಿ ತೆರೆ ಕಂಡಿದ್ದ ಸ್ವಾಮಿ ವಿವೇಕಾನಂದ ಸಿನಿಮಾದ ಪಾತ್ರಗಳಿಗಾಗಿ ಎರಡು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೊತೆಗೆ ಇತ್ತೀಚಿಗೆ ತೆರೆ ಕಂಡಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್‌ನಲ್ಲಿ (The Kashmiri Files) ಕಾಣಿಸಿಕೊಂಡಿದ್ದರು.ಇದನ್ನೂ ಓದಿ: ಮುಡಾದಲ್ಲಿ ಸಿಎಂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ಸಿದ್ದರಾಮಯ್ಯರ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ

  • ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ಸ್ನೇಹಿತ ಬಿಎಂಟಿಸಿ ಬಸ್ ಡ್ರೈವರ್​​​ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಅರ್ಪಿಸಿದ ರಜನಿಕಾಂತ್

    ನವದೆಹಲಿ: ತಮಿಳು ಸ್ಟಾರ್ ನಟ ರಜನಿಕಾಂತ್ ಸೋಮವಾರ ತಾನು ಸ್ವೀಕರಿಸಿದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು, ಸಿನಿಮಾ ಕ್ಷೇತ್ರಕ್ಕೆ ಬರಲು ತನ್ನನ್ನು ಪ್ರೇರೇಪಿಸಿದ್ದ ಸ್ನೇಹಿತ ಬಸ್  ಡ್ರೈವರ್​​​ಗೆ ಅರ್ಪಿಸುವ ಮೂಲಕ ಗಮನ ಸೆಳೆದಿದ್ದಾರೆ.

    ತನ್ನ ಮೊದಲ ಸಿನಿಮಾ `ಅಪೂರ್ವ ರಾಗಂಗಳ್’ ನಿರ್ದೇಶಕ ದಿವಂಗತ ಕೆ.ಬಾಲಚಂದರ್, ಸಿನಿಮಾರಂಗಕ್ಕೆ ಪ್ರವೇಶಿಸಲು ನೆರವಾದ ಸಹೋದರ ಸತ್ಯನಾರಾಯಣರಾವ್ ಹಾಗೂ ಎಲ್ಲ ನಿರ್ದೇಶಕರು, ನಿರ್ಮಾಕರು, ಥಿಯೇಟರ್ ಮಾಲೀಕರು, ತಂತ್ರಜ್ಞರು, ಅಭಿಮಾನಿಗಳಿಗೂ ಪ್ರಶಸ್ತಿ ಅರ್ಪಿಸಿ ರಜನಿಕಾಂತ್ ಕೃತಜ್ಞತೆ ಮೆರೆದಿದ್ದಾರೆ. ಇದನ್ನೂ ಓದಿ: ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ರಜನಿಕಾಂತ್ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಕಥೆಯೇ ಒಂದು ರೋಚಕ. ಒಬ್ಬ ಸಾಮಾನ್ಯ ಬಸ್ ಕಂಡಕ್ಟರ್ ಆಗಿದ್ದ ಅವರು ಮುಂದಿನ ಚಿತ್ರರಂಗದಲ್ಲಿ ಕೋಟಿ ಕೋಟಿ ಸಂಭಾವನೆಯೊಂದಿಗೆ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆಯುವ ಮಟ್ಟಕ್ಕೆ ಬೆಳೆದಿದ್ದು ಸಾಧನೆಯೇ ಸರಿ. ತಾನು ಆ ಮಟ್ಟಕ್ಕೆ ಬೆಳೆಯಲು ಕಾರಣರಾದ ವ್ಯಕ್ತಿಗೆ ರಜನಿಕಾಂತ್ ತಮ್ಮ ಜೀವನದ ಅತ್ಯುತ್ತಮ ಸಾಧನೆ ಪ್ರಶಸ್ತಿಯನ್ನು ಅರ್ಪಿಸಿ ಧನ್ಯತೆ ಮೆರೆದಿದ್ದಾರೆ.

    1950ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ರಜನಿಕಾಂತ್ ಮೂಲ ಹೆಸರು ಶಿವಾಜಿರಾವ್ ಗಾಯಕ್‍ವಾಡ್. ಬಾಲ್ಯದಲ್ಲಿ ತಾಯಿಯನ್ನು ಕಳೆದುಕೊಂಡ ರಜನಿಕಾಂತ್ ಬೆಂಗಳೂರಿನ ಆಚಾರ್ಯ ಪಾಠಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿದರು. ನಂತರ ರಾಮಕೃಷ್ಣ ಮಿಷನ್ ಶಾಖೆಯಾದ ವಿವೇಕಾನಂದ ಬಾಲಕ ಸಂಘದಲ್ಲಿ ವ್ಯಾಸಾಂಗ ಮಾಡಿದರು. ಇಲ್ಲಿ ವೇದಗಳು, ಭಾರತೀಯ ಸಂಸ್ಕøತಿ ಇತಿಹಾಸವನ್ನು ಅಧ್ಯಯನ ಮಾಡುತ್ತ ನಾಟಕಗಳಲ್ಲಿ ಅಭಿನಯ ಮಾಡುತ್ತಿದ್ದರು.

    ಒಮ್ಮೆ ಏಕಲವ್ಯ ನಾಟಕದಲ್ಲಿ ಏಕಲವ್ಯನ ಸ್ನೇಹಿತನ ಪಾತ್ರದ ಅಭಿನಯಕ್ಕೆ ರಜನಿಕಾಂತ್ ಅಭಿನಯಕ್ಕೆ ವರಕವಿ ದ.ರಾ.ಬೇಂದ್ರೆ ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಇದರಿಂದ ಪುಳಕಿತರಾಗಿ ಅಭಿನಯದ ಕಡೆ ಹೆಚ್ಚಿನ ಆಸಕ್ತಿ ಬೆಳೆಸಿಕೊಳ್ಳುತ್ತಾರೆ. ನಂತರ ಅವರು ಬಸ್ ಕಂಡಕ್ಟರ್ ಆಗಿ ಬೆಂಗಳೂರಿನಲ್ಲಿ ಕೆಲಸ ಆರಂಭಿಸುತ್ತಾರೆ.

    ಅಭಿನಯದಲ್ಲಿ ರಜನಿಕಾಂತ್‍ಗೆ ಇರುವ ಪ್ರತಿಭೆಯನ್ನು ಗುರುತಿಸಿದ ಸ್ನೇಹಿತನೂ ಆದ ಬಸ್ ಚಾಲಕ ರಾಜ್ ಬಹದ್ದೂರ್, ‘ನೀನು ಸಿನಿಮಾ ಕ್ಷೇತ್ರಕ್ಕೆ ಹೋಗು. ಉತ್ತಮ ಸಾಧನೆ ಮಾಡಬಹುದು’ ಎಂದು ಸಲಹೆ ನೀಡುತ್ತಾರೆ. ಸ್ನೇಹಿತನ ಸಲಹೆಯಂತೆ ರಜನಿಕಾಂತ್ ಸಿನಿಮಾ ರಂಗಕ್ಕೆ ಬರಲು ಆಸಕ್ತಿ ತೋರುತ್ತಾರೆ. ಇವರಿಗೆ ಬೆನ್ನೆಲುಬಾಗಿ ಅಣ್ಣ ಸತ್ಯನಾರಾಯಣ ರಾವ್ ಗಾಯಕ್‍ವಾಡ್ ಕೂಡ ನಿಲ್ಲುತ್ತಾರೆ. ಇದನ್ನೂ ಓದಿ: ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    RAJINIKANTH medium

    ಆಕಸ್ಮಿಕವಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಜನಿಕಾಂತ್ ಈಗ ಕೋಟಿ ಕೋಟಿ ಸಂಭಾವನೆ ಪಡೆಯುತ್ತಾ ಕೋಟ್ಯಂತರ ಅಭಿಮಾನಿಗಳ ಹೃದಯದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಅಷ್ಟೆ ಅಲ್ಲದೇ ಭಾರತೀಯ ಚಿತ್ರರಂಗದ ಜೀವಮಾನ ಸಾಧನೆಗಾಗಿ ನೀಡುವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನೂ ಪಡೆದುಕೊಂಡಿದ್ದಾರೆ.

  • ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ನಟ ರಜನಿಕಾಂತ್

    ನವದೆಹಲಿ: ಭಾರತೀಯ ಚಿತ್ರರಂಗದ ಪ್ರತಿಷ್ಠಿತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ತಮಿಳು ಸೂಪರ್ ಸ್ಟಾರ್, ನಟ ರಜನಿಕಾಂತ್ ಸೋಮವಾರ ಸ್ವೀಕರಿಸಿದರು.

    ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ರಜನಿಕಾಂತ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

    ಸಮಾರಂಭದಲ್ಲಿ ರಜನಿಕಾಂತ್ ಅಳಿಯ ಧನುಷ್ ಕೂಡ ಹಾಜರಿದ್ದರು. ‘ಅಸುರನ್’ ಸಿನಿಮಾದಲ್ಲಿ ಉತ್ತಮ ನಟನೆಗಾಗಿ ಧನುಷ್, ನ್ಯಾಷನಲ್ ಫಿಲ್ಮ್ ಅವಾರ್ಡ್‍ಗೆ ಭಾಜನರಾಗಿದ್ದಾರೆ. ಹೀಗಾಗಿ ಅವರು ಸಹ ಕಾರ್ಯಕ್ರಮದಲ್ಲಿ ಹಾಜರಿದ್ದರು. ಇದೇ ವೇಳೆ ರಜನಿಕಾಂತ್ ಪತ್ನಿ ಲತಾ ಹಾಗೂ ಪುತ್ರಿ ಐಶ್ವರ್ಯ (ಧನುಷ್ ಪತ್ನಿ) ಕೂಡ ಇದ್ದರು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಕೇಸ್ – ಪತ್ನಿ ರೇಖಾ, ಪುತ್ರ ಸ್ನೇಹಿತ್‍ಗೆ ಪೊಲೀಸರಿಂದ ನೋಟಿಸ್

    ಗಾಯಕರಾದ ಆಶಾ ಬೋಸ್ಲೆ, ಶಂಕರ್ ಮಹದೇವನ್, ನಟರಾದ ಮೋಹನಲಾಲ್ ಮತ್ತು ಬಿಸ್ವಜಿತ್ ಚಟರ್ಜಿ, ಚಲನಚಿತ್ರ ನಿರ್ಮಾಪಕ ಸುಭಾಷ್ ಘಾಯ್ ಅವರನ್ನೊಳಗೊಂಡ ತಂಡವು ಈ ವರ್ಷದ ಬಾಬಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ರಜನಿಕಾಂತ್ ಅವರನ್ನು ಆಯ್ಕೆ ಮಾಡಿತ್ತು. ಇದನ್ನೂ ಓದಿ: ಮೂರು ವರ್ಷಗಳ ನಂತರ ಮತ್ತೆ ಬಣ್ಣ ಹಚ್ಚಲಿರುವ ಪ್ರೇಮಾ

    ‘ಎರಡು ವಿಶೇಷ ಹೆಗ್ಗುರುತುಗಳೊಂದಿಗೆ ನಾಳೆ ನನಗೆ ಮಹತ್ವದ ಸಂದರ್ಭವಾಗಿದೆ. ಜನರ ಪ್ರೀತಿ ಮತ್ತು ಬೆಂಬಲದಿಂದಾಗಿ ಭಾರತ ಸರ್ಕಾರ ನನಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡುತ್ತಿದೆ. ಮತ್ತೊಂದು ಪ್ರಮುಖ ವಿಚಾರವೆಂದರೆ ಜನರು ಈಗ ತಮ್ಮ ಧ್ವನಿಯ ಮೂಲಕ ತಮ್ಮ ಶುಭಾಶಯಗಳು ಮತ್ತು ಆಲೋಚನೆಗಳನ್ನು ಯಾವುದೇ ಭಾಷೆಯಲ್ಲಿ ಬರೆಯಲು ಮತ್ತು ವ್ಯಕ್ತಪಡಿಸಲು ಸಹಕಾರಿಯಾಗಿ ನನ್ನ ಪುತ್ರಿ ಸೌಂದರ್ಯ ಅವರು ಆ್ಯಪ್‍ವೊಂದನ್ನು ಬಿಡುಗಡೆ ಮಾಡಲಿದ್ದಾರೆ’ ಎಂದು ಭಾನುವಾರ ರಜನಿಕಾಂತ್ ಟ್ವೀಟ್ ಮಾಡಿ ಸಂತಸ ವ್ಯಕ್ತಪಡಿಸಿದ್ದರು.

  • ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    ಈ ಸೋಮವಾರ ತಲೈವಾಗೆ ಡಬ್ಬಲ್ ಖುಷಿ

    ಚೆನ್ನೈ: ದಕ್ಷಿಣ ಭಾರತದ ತಲೈವಾ ರಜನಿಕಾಂತ್ ಗೆ ಈ ಸೋಮವಾರ ವಿಶೇಷ ದಿನವಾಗಿದ್ದು, ಡಬ್ಬಲ್ ಖುಷಿಯಲ್ಲಿದ್ದಾರೆ.

    ರಜನಿಕಾಂತ್ ಅವರಿಗೆ ನಾಳೆ 51ನೇ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು. ಭಾರತೀಯ ಚಲನಚಿತ್ರ ಜಗತ್ತಿಗೆ ಅವರು ನೀಡಿದ ಅದ್ಭುತ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆಯುತ್ತಿದ್ದಾರೆ.

    soundarya rajinikanth

    ಈ ವಿಷಯವನ್ನು ಇದೇ ವರ್ಷದ ಏಪ್ರಿಲ್‍ನಲ್ಲಿ ಬಿಜೆಪಿ ರಾಜ್ಯಸಭಾ ಸಂಸದ ಪ್ರಕಾಶ್ ಜಾವಡೇಕರ್ ಅವರು ಮೊದಲು ಘೋಷಿಸಿದ್ದರು. ರಜನಿ 1975 ರಲ್ಲಿ ಕೆ.ಬಾಲಚಂದರ್ ಅವರ ‘ಅಪೂರ್ವ ರಾಗಂಗಳ್’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ತಮಿಳು ಚಿತ್ರರಂಗದಲ್ಲಿ 45 ವರ್ಷಗಳಿಗಿಂತಲೂ ಹೆಚ್ಚಿನ ಸಮಯ ಜನರನ್ನು ರಂಜಿಸಿದ್ದಾರೆ ಮತ್ತು ರಂಜಿಸುತ್ತಿದ್ದಾರೆ. ಇದನ್ನೂ ಓದಿ:  ಮಹಿಳೆಯರ ಸುರಕ್ಷಣೆಗಾಗಿ ಹೈದರಾಬಾದ್ ಪೊಲೀಸರ ವಿನೂತನ ಘಟಕ ಆರಂಭ

    ತಮಿಳು ಸೂಪರ್‌ಸ್ಟಾರ್ ನಾಳೆಯ ಈವೆಂಟ್‍ಗೆ ಮುಂಚಿತವಾಗಿ ಟ್ವಿಟ್ಟರ್ ನಲ್ಲಿ ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಇದು ಮಾತ್ರವಲ್ಲದೇ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ಅವರು ಧ್ವನಿ ಆಧಾರಿತ ಸಾಮಾಜಿಕ ಮಾಧ್ಯಮ ವೇದಿಕೆಯನ್ನು ನಾಳೆ ಪ್ರಾರಂಭಿಸಲಿದ್ದು, ಇದು ಜನರಿಗೆ ‘ಉಪಯುಕ್ತ ಅಪ್ಲಿಕೇಶನ್’ ಆಗಿರುತ್ತದೆ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಟ್ವೀಟ್ ನಲ್ಲಿ ಅವರು, ಎರಡು ವಿಶೇಷ ಹೆಗ್ಗುರುತುಗಳೊಂದಿಗೆ ನಾಳೆ ನನಗೆ ಒಂದು ಮಹತ್ವದ ಸಂದರ್ಭವಾಗಿದೆ. ಮೊದಲನೆಯದು, ಜನರ ಪ್ರೀತಿ ಮತ್ತು ಬೆಂಬಲದಿಂದಾಗಿ ಭಾರತ ಸರ್ಕಾರವು ನನಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ. ಇನ್ನೊಂದು, ಜನರು ಈಗ ತಮ್ಮ ಧ್ವನಿಯ ಮೂಲಕ ತಮ್ಮ ಶುಭಾಶಯಗಳು ಮತ್ತು ಆಲೋಚನೆಗಳನ್ನು ತಮ್ಮ ಆಯ್ಕೆಯ ಯಾವುದೇ ಭಾಷೆಯಲ್ಲಿ ಬರೆಯಬಹುದು ಮತ್ತು ವ್ಯಕ್ತಪಡಿಸಬಹುದು ಎಂದು ಅವರ ಪುತ್ರಿ ಸೌಂದರ್ಯ ಅವರು ಪ್ರಾರಂಭಿಸುತ್ತಿರುವ ಅಪ್ಲಿಕೇಶನ್ ಬಗ್ಗೆ ಹೇಳಿ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.

    2019ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಳೆದ ವರ್ಷ ಘೋಷಿಸಬೇಕಾಗಿತ್ತು ಆದರೆ ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ 2019ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಂತೆ ಇದನ್ನು ಮುಂದೂಡಲಾಯಿತು. 2018ರಲ್ಲಿ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ದಾದಾಸಾಹೇಬ್ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

    rajinikanth

    ದಾದಾಸಾಹೇಬ್ ಫಾಲ್ಕೆಯು ಸಿನಿಮಾದಲ್ಲಿ ಮಾಡಿದ ಸಾಧನೆಯ ಶ್ರೇಷ್ಠತೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತೆ. ಈ ಪ್ರಶಸ್ತಿ ಚಲನಚಿತ್ರಗಳಲ್ಲಿ ನೀಡುವ ಅತ್ಯುನ್ನತ ಗೌರವವಾಗಿದೆ. ಈ ಗೌರವವನ್ನು ಸರ್ಕಾರದಿಂದ ನೀಡಲಾಗುತ್ತದೆ. ಭಾರತೀದಲ್ಲಿ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಸಹ ಪಡೆದಿರುವ ರಜನಿಕಾಂತ್ ದಕ್ಷಿಣ ಭಾರತದ ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ ಮತ್ತು ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಇದನ್ನೂ ಓದಿ:  ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

    ಎಆರ್ ಮುರುಗದಾಸ್ ಅವರ ‘ದರ್ಬಾರ್’ ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ರಜನಿ, ಶೀಘ್ರದಲ್ಲೇ ಅವರ ಬಹು ನಿರೀಕ್ಷಿತ ಚಿತ್ರ ‘ಅಣ್ಣತ್ತೆ’ ಯಲ್ಲಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಇದೇ ದೀಪಾವಳಿಯಂದು ಈ ಚಿತ್ರ ರಿಲೀಸ್ ಮಾಡಲಾಗುತ್ತೆ ಎಂದು ಚಿತ್ರತಂಡ ತಿಳಿಸಿದೆ.