Tag: ಪರೀಕ್ಷೆ

  • Diploma CET Exam- ತಾತ್ಕಾಲಿಕ ಸರಿ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜೂ.26 ಕೊನೆಯ ದಿನ

    Diploma CET Exam- ತಾತ್ಕಾಲಿಕ ಸರಿ ಉತ್ತರ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಜೂ.26 ಕೊನೆಯ ದಿನ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಡಿಸಿಇಟಿ-2024ರ ತಾತ್ಕಾಲಿಕ ಸರಿ ಉತ್ತರಗಳನ್ನು ತನ್ನ ವೆಬ್‌ಸೈಟ್  www.kea.kar.nic.in ನಲ್ಲಿ ಪ್ರಕಟಿಸಿದೆ.

    ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್ ಪ್ರಸನ್ನ ಅವರು ಸೋಮವಾರ ಪತ್ರಿಕಾ ಪ್ರಕಟಣೆ ನೀಡಿ, ಪ್ರಕಟಿಸಿರುವ ತಾತ್ಕಾಲಿಕ ಉತ್ತರಗಳಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆಕ್ಷೇಪಣೆ ಸಲ್ಲಿಸಲು ಬಯಸಿದಲ್ಲಿ, ಪ್ರಾಧಿಕಾರದ ಆನ್‌ಲೈನ್ ಪೋರ್ಟಲ್ ಮೂಲಕ ಮಾತ್ರವೇ ಜೂನ್ 26ರ ಬೆಳಿಗ್ಗೆ 11ರೊಳಗಾಗಿ ಸಲ್ಲಿಸಬಹುದು ಎಂದು ಸೂಚಿಸಿದ್ದಾರೆ.

     

    ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ವರ್ಷನ್ ಕೋಡ್, ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆ ಸಂಖ್ಯೆಯ ವಿವರಗಳನ್ನು ನಮೂದಿಸಿ, ಅದಕ್ಕೆ ಪೂರಕ ಸಮರ್ಥನೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೆ ಅಥವಾ ಆಧಾರ ರಹಿತವಾಗಿ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇದನ್ನೂ ಓದಿ: ಹೆಚ್ಚುವರಿ ಡಿಸಿಎಂ ಬೇಡಿಕೆ ಇದ್ರೆ ಮೂರಲ್ಲ ಐದು ಡಿಸಿಎಂ ಹುದ್ದೆ ಸೃಷ್ಟಿಸಲಿ: ಡಿ.ಕೆ.ಸುರೇಶ್

    ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ. ವಿವರಗಳಿಗಾಗಿ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

     

  • CSIR-UGC-NET ಪರೀಕ್ಷೆ ಮಂದೂಡಿಕೆ

    CSIR-UGC-NET ಪರೀಕ್ಷೆ ಮಂದೂಡಿಕೆ

    ನವದೆಹಲಿ: ನೀಟ್, ನೆಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಶಂಕೆ ಬೆನ್ನಲ್ಲೇ CSIR-UGC-NET ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ಮುಂದೂಡಿದೆ.

    ಜೂನ್ 25 ಮತ್ತು ಜೂನ್ 27 ರಂದು ಪರೀಕ್ಷೆಗಳು ನಡೆಯಬೇಕಿತ್ತು. ಲಾಜಿಸ್ಟಿಕ್ ಸಮಸ್ಯೆಗಳಿಂದ ಪರೀಕ್ಷೆ (Exam) ಮುಂದೂಡಲಾಗುತ್ತಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಅಧಿಕೃತ ವೆಬ್‌ಸೈಟ್ ಮೂಲಕ ತಿಳಿಸಲಾಗುವುದು ಎಂದು ಎನ್‌ಟಿಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

     

    ಯುಜಿಸಿ ನಿಗದಿಪಡಿಸಿದ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಜೂನಿಯರ್ ರಿಸರ್ಚ್ ಫೆಲೋಶಿಪ್ (JRF), ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳು ಮತ್ತು ಪಿಎಚ್‌ಡಿ ಪ್ರವೇಶಗಳಿಗೆ ಳ ಅರ್ಹತೆಯನ್ನು ನಿರ್ಧರಿಸಲು ಈ ಪರೀಕ್ಷೆ ನಡೆಸಲಾಗುತ್ತದೆ. ಇದನ್ನೂ ಓದಿ: 31 ತಿಂಗಳ ನಂತರ ಈಡೇರಿತು ಪ್ರತಿಜ್ಞೆ- ಮುಖ್ಯಮಂತ್ರಿಯಾಗಿ ವಿಧಾನಸಭೆಗೆ ಕಾಲಿಟ್ಟ ಚಂದ್ರಬಾಬು ನಾಯ್ಡು

    CSIR-UGC-NET ಪರೀಕ್ಷೆಯನ್ನು ವರ್ಷಕ್ಕೆ ಎರಡು ಬಾರಿ ಜೂನ್ ಮತ್ತು ಡಿಸೆಂಬರ್‌ನಲ್ಲಿ ನಡೆಸಲಾಗುತ್ತದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಪರೀಕ್ಷೆಯಲ್ಲಿ 1.75 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರೆ ಈ ವರ್ಷ 2 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

     

  • ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ

    ಗುರುವಾರದಿಂದ ಸಿಇಟಿ ಪರೀಕ್ಷೆ ಆರಂಭ- ವಿದ್ಯಾರ್ಥಿಗಳಿಗೆ ಕಡ್ಡಾಯ ಮಾರ್ಗಸೂಚಿ

    ಬೆಂಗಳೂರು: ಎಂಜಿನಿಯರಿಂಗ್‌, ಕೃಷಿ ವಿಜ್ಞಾನ, ವೆಟರಿನರಿ ಸೇರಿದಂತೆ ಹಲವು ವೃತ್ತಿಪರ ಕೋರ್ಸುಗಳ ಪ್ರವೇಶಾತಿಗೆ ನಿರ್ಣಾಯಕವಾದ ಸಾಮಾನ್ಯ ಪ್ರವೇಶ ಪರೀಕ್ಷೆ (CET Exam) ರಾಜ್ಯಾದ್ಯಂತ ಗುರುವಾರದಿಂದ ಪ್ರಾರಂಭವಾಗಲಿದೆ.

    ಒಟ್ಟು 737 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಬಾರಿ 3,49,637 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಈ ಕುರಿತು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಆಯಾ ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್‌ ವರಿಷ್ಠಾಧಿಕಾರಿಗಳು ಬಿಗಿಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಸಿಇಟಿ ಕರ್ತವ್ಯಕ್ಕೆ ಒಟ್ಟಾರೆ 20,300 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದರು.

    ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ 167 ಪರೀಕ್ಷಾ ಕೇಂದ್ರಗಳಿದ್ದು, ಈ ಬಾರಿ 648 ವಿಶೇಷ ಚೇತನ ಅಭ್ಯರ್ಥಿಗಳು ಸಿಇಟಿ ಪರೀಕ್ಷೆ ಬರೆಯುತ್ತಿದ್ದಾರೆ. ಕಳೆದ ವರ್ಷಕ್ಕಿಂತ ಈ ಬಾರಿ ಒಂದು ಲಕ್ಷದಷ್ಟು ಹೆಚ್ಚು ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು,ಇದಕ್ಕೆ ವ್ಯಾಪಕ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಗುರುವಾರ ಜೀವಶಾಸ್ತ್ರ ಮತ್ತು ಗಣಿತ ಹಾಗೂ ಶುಕ್ರವಾರ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10.30ಕ್ಕೆ ಮತ್ತು ಮಧ್ಯಾಹ್ನ 2.30ಕ್ಕೆ ಆರಂಭವಾಗುವ ಪರೀಕ್ಷೆಗಳಿಗೆ ಅಭ್ಯರ್ಥಿಗಳು ಸಾಕಷ್ಟು ಮುಂಚಿತವಾಗಿಯೇ ಹಾಜರಿರಬೇಕು. ಬೆಳಗ್ಗೆ 10.40 ಮತ್ತು ಮಧ್ಯಾಹ್ನ 2.40ಕ್ಕೆ ಮೂರನೇ ಬಾರಿಗೆ ಬೆಲ್‌ ಬಾರಿಸಿದ ಬಳಿಕ ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

    CET

    ಇಂಗ್ಲಿಷ್‌ ಮತ್ತು ಕನ್ನಡ ಎರಡರಲ್ಲೂ ಪ್ರಶ್ನೆಪತ್ರಿಕೆ ಇರಲಿದೆ. ಒಂದು ವೇಳೆ ಅಭ್ಯರ್ಥಿಗಳಿಗೆ ಏನಾದರೂ ಗೊಂದಲ ಉಂಟಾದಲ್ಲಿ ಇಂಗ್ಲಿಷ್‌ ಆವೃತ್ತಿಯನ್ನೇ ಅಂತಿಮವೆಂದು ಪರಿಗಣಿಸಬೇಕು. ಈ ವಿಚಾರದಲ್ಲಿ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪ್ರಶ್ನೆಗಳಿಗೆ ಅವಕಾಶ ಇರುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಧಾರವಾಡದಲ್ಲಿ 18 ಕೋಟಿ ಪತ್ತೆ – ಎಸ್‌ಬಿಐ ಬ್ಯಾಂಕ್‌ಗೆ ಹಣ ರವಾನೆ

    ಕಲಬುರಗಿ ಮುಂತಾದ ಉತ್ತರ ಕರ್ನಾಟಕದ ಭಾಗಗಳ ಕೆಲವು ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಗೊಂದಲವನ್ನು ಬಗೆಹರಿಸಿದ್ದು, ಸಾಧ್ಯವಾದಷ್ಟೂ ವಿದ್ಯಾರ್ಥಿಗಳಿಗೆ ಅವರ ಸಮೀಪದ ಕೇಂದ್ರಗಳಲ್ಲೇ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ. ಬೇಸಿಗೆಯ ಝಳ ಇರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಕುಡಿಯುವ ನೀರಿಗೆ ವ್ಯವಸ್ಥೆ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು, ಎನ್‌ಸಿಸಿ ಮತ್ತು ಎನ್‌ಎಸ್‌ಎಸ್‌ ಕೆಡೆಟ್‌ಗಳು ಪರೀಕ್ಷೆಯು ಸುಗಮವಾಗಿ ನಡೆಯಲು ಸಹಕರಿಸಲಿದ್ದಾರೆ. ಒಂದು ಪರೀಕ್ಷಾ ಕೊಠಡಿಯಲ್ಲಿ 16 ಆವೃತ್ತಿಗಳ ಪ್ರಶ್ನೆ ಪತ್ರಿಕೆಗಳು ಇರಲಿದ್ದು, ನಕಲು ಮಾಡಲು ಅವಕಾಶ ಆಗದಂತೆ ಯೋಜನೆ ರೂಪಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲು ಕೂಡ ಇರಲಿದೆ ಎಂದು ತಿಳಿಸಿದರು.

    ಇದೇ 20ರಂದು ಬೆಳಗಾವಿ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಹೊರನಾಡು ಮತ್ತು ಗಡಿನಾಡು ಕನ್ನಡ ಅಭ್ಯರ್ಥಿಗಳಿಗೆ ಬೆಳಗ್ಗೆ 11.30ರಿಂದ 12.30ರವರೆಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ಸಲ ಒಟ್ಟು 1,545 ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಲಿದ್ದಾರೆ ಅಂತ ಮಾಹಿತಿ ನೀಡಿದ್ರು.

    ಪರೀಕ್ಷೆ ಬರೆಯೋ ವಿದ್ಯಾರ್ಥಿಗಳಿಗೆ ಕೆಲ ಮಾರ್ಗಸೂಚಿಗಳು ಹೀಗಿವೆ.
    * ಪ್ರವೇಶಪತ್ರ ಮತ್ತು ಗುರುತಿನ ಪತ್ರದೊಂದಿಗೆ ಬರುವುದು ಕಡ್ಡಾಯ.
    * ನೀಲಿ ಅಥವಾ ಕಪ್ಪು ಬಣ್ಣದ ಪೆನ್‌ ಮಾತ್ರ ಬಳಸತಕ್ಕದ್ದು.
    * ತುಂಬು ತೋಳಿನ ಅಂಗಿ ಧರಿಸಿಕೊಂಡು ಬರುವಂತಿಲ್ಲ.
    * ಮೊಬೈಲ್‌, ಬ್ಲೂಟೂತ್‌, ಟ್ಯಾಬ್ಲೆಟ್‌, ಕೈಗಡಿಯಾರ, ಕ್ಯಾಲುಕುಲೇಟರ್‌, ನೋಟ್ ಪ್ಯಾಡ್‌, ಐ-ಪಾಡ್‌, ಇಯರ್‌ ಫೋನ್‌ ಇತ್ಯಾದಿಗಳನ್ನು ತರುವಂತಿಲ್ಲ.
    * ಒಮ್ಮೆ ಉತ್ತರವನ್ನು ಗುರುತು ಮಾಡಿದ ಬಳಿಕ ಅದನ್ನು ಅಳಿಸಲು ಅವಕಾಶವಿರುವುದಿಲ್ಲ.
    * ಓಎಂಆರ್‌ ಶೀಟ್‌ನಲ್ಲಿ ಪ್ರವೇಶಪತ್ರ ಸಂಖ್ಯೆ, ಪ್ರಶ್ನೆಪತ್ರಿಕೆಯ ವರ್ಶನ್‌ ಕೋಡ್‌ ನಮೂದಿಸುವುದು ಕಡ್ಡಾಯ.
    * ಓಎಂಆರ್‌ ಶೀಟ್‌ನ ಕೆಳಭಾಗದಲ್ಲಿ ಅಭ್ಯರ್ಥಿಗಳು ಮರೆಯದೆ ಸಹಿ ಮಾಡಬೇಕು.
    * ಓಎಂಆರ್‌ ಶೀಟ್‌ನಲ್ಲಿರುವ ಟೈಮಿಂಗ್‌ ಮಾರ್ಕ್‌ ಮೇಲೆ ಏನನ್ನೂ ಬರೆಯುವುದಾಗಲಿ, ಗೀಚುವುದಾಗಲಿ ಮಾಡಬೇಡಿ.

  • ಅಬ್ದುಲ್ ಕಲಾಂ ವಸತಿ ಪ್ರಾಂಶುಪಾಲರ ಎಡವಟ್ಟು- ಕ್ರೂಸರ್ ಟಾಪ್‍ನಲ್ಲಿ ಮಕ್ಕಳ ಡೇಂಜರ್ ಜರ್ನಿ

    ಅಬ್ದುಲ್ ಕಲಾಂ ವಸತಿ ಪ್ರಾಂಶುಪಾಲರ ಎಡವಟ್ಟು- ಕ್ರೂಸರ್ ಟಾಪ್‍ನಲ್ಲಿ ಮಕ್ಕಳ ಡೇಂಜರ್ ಜರ್ನಿ

    ಯಾದಗಿರಿ: ಜಿಲ್ಲೆಯ ಅದೊಂದು ವಸತಿ ಶಾಲೆಯಲ್ಲಿ ಮೇಲಿಂದ ಮೇಲೆ ಎಡವಟ್ಟುಗಳು ನಡೆಯುತ್ತಲೇ ಇವೆ. ಆದ್ರೆ ಅಧಿಕಾರಿಗಳು ಮಾತ್ರ ಡೋಂಟ್ ಕೇರ್ ಅಂತಿದ್ದಾರೆ. ಇದೀಗ ಮತ್ತದೇ ವಸತಿ ಶಾಲೆ ಮಕ್ಕಳು ಕ್ರೂಸರ್ ಟಾಪ್ ಮೇಲೆ ಕುಂತು ಡೇಂಜರ್ ಮಾಡಿದ್ದಾರೆ.

    ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಬಾಲಚೇಡ್ ಗ್ರಾಮದಲ್ಲಿರುವ ಎಪಿಜೆ ಅಬ್ದುಲ್ ಕಾಲಂ ವಸತಿ ಶಾಲೆಯಲ್ಲಿ (Abdul Kalam Residential School Yadagiri) ಈ ಎಡವಟ್ಟು ನಡೆದಿದೆ. ವಿದ್ಯಾರ್ಥಿಗಳನ್ನ ಪರೀಕ್ಷೆಗೆಂದು ಜಿಲ್ಲೆಯ ಶಹಾಪುರಕ್ಕೆ ಕರೆದುಕೊಂಡು ಹೋಗುವಾಗ ಪ್ರಾಂಶುಪಾಲ ಸಂತೋಷ್ ಮಾಡಿರೋ ಎಡವಟ್ಟಿದು. ವಿದ್ಯಾರ್ಥಿಗಳನ್ನ ಪರೀಕ್ಷೆಗೆ ಕರೆದುಕೊಂಡು ಹೋಗಲು ಎಲ್ಲಾ ಸೌಲಭ್ಯ ಇದೆ. ಆದರೂ ಈ ಪ್ರಾಂಶುಪಾಲರು ಮಾತ್ರ ಕ್ರೂಸರ್ ವಾಹನದ ಟಾಪ್ ಮೇಲೆ ಕುರಿಗಳನ್ನ ತುಂಬಿದಂತೆ ತುಂಬಿ ಪರೀಕ್ಷೆ ಬರೆಯಲು ಕರೆದುಕೊಂಡು ಹೋಗಿದ್ದಾರೆ.

    ಈ ವಸತಿ ಶಾಲೆಯ ಎಡವಟ್ಟು ಇದೇ ಮೊದಲಲ್ಲ. ಕಳೆದ ಎರಡು ತಿಂಗಳ ಹಿಂದೆ ಇದೇ ವಸತಿ ಶಾಲೆಯಲ್ಲಿನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಿಚಿತ್ರ ಚರ್ಮ ರೋಗ ಕಾಣಿಸಿಕೊಂಡಿತ್ತು. ಕಲುಷಿತ ನೀರು ಹಾಗೂ ವಸತಿ ಶಾಲೆಯಲ್ಲಿ ಶುಚಿತ್ವ ಇಲ್ಲದೇ ಇದ್ದಿದ್ರಿಂದ ಶಾಲೆಯ ನೂರಕ್ಕೂ ಹೆಚ್ಚು ಮಕ್ಕಳಿಗೆ ಮೈತುಂಬಾ ಗುಳ್ಳೆಗಳು ಕಾಣಿಸಿಕೊಂಡಿತ್ತು. ಇಲ್ಲೂ ನಿರ್ಲಕ್ಷ್ಯ ಮಾಡಿದ್ದ ಪ್ರಾಂಶುಪಾಲ ಸಂತೋಷ್, ಮಕ್ಕಳ ಪೋಷಕರಿಗೆ ಯಾವುದೇ ಮಾಹಿತಿ ನೀಡಿದೇ ಮಕ್ಕಳ ಆರೋಗ್ಯದ ಬಗ್ಗೆ ಸಂಪೂರ್ಣ ಕಡೆಗಣಿಸಿದ್ದ. ಮಕ್ಕಳ ಆಯೋಗದವರು ಆ ವೇಳೆ ವಸತಿ ಶಾಲೆಗೆ ಭೇಟಿ ನೀಡಿ, ಛೀಮಾರಿ ಹಾಕಿದ್ರು.

    ಮಕ್ಕಳ ಜೀವದ ಬಗ್ಗೆ ಯಾವುದೇ ಕಾಳಜಿ ಇಲ್ಲದೇ ಚೆಲ್ಲಾಟ ಆಡ್ತಿರೋ ಪ್ರಾಂಶುಪಾಲರ ಮೇಲೆ ಅಧಿಕಾರಿಗಳು ಕ್ರಮ ಕೈಗೊಂಡು, ಜಿಲ್ಲೆಯಲ್ಲಿ ಮತ್ತೊಮ್ಮೆ ಈ ರೀತಿಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕಿದೆ.

  • ಈ ಬಾರಿ SSLC, PUC ಪರೀಕ್ಷೆ ವೇಳೆ ಹಿಜಬ್‍ಗೆ ಇರುತ್ತಾ ಅವಕಾಶ?

    ಈ ಬಾರಿ SSLC, PUC ಪರೀಕ್ಷೆ ವೇಳೆ ಹಿಜಬ್‍ಗೆ ಇರುತ್ತಾ ಅವಕಾಶ?

    ಬೆಂಗಳೂರು: ಎಸ್‍ಎಸ್‍ಎಲ್‍ಸಿ (SSLC) ಹಾಗೂ ದ್ವಿತೀಯ ಪಿಯುಸಿ (PUC) ಎಕ್ಸಾಂಗೆ ಇನ್ನೊಂದು ತಿಂಗಳು ಬಾಕಿ ಇದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದೆ. ಈ ವರ್ಷ ಪಬ್ಲಿಕ್ ಪರೀಕ್ಷೆ ವೇಳೆ ಹಿಜಬ್‍ಗೆ ಅವಕಾಶ ಇರುತ್ತಾ..? ಇಲ್ವಾ ಅನ್ನೋ ಪ್ರಶ್ನೆ ಮೂಡಿದೆ.

    ಕಳೆದ ಡಿಸೆಂಬರ್ 22 ರಂದು ಮೈಸೂರಿನಲ್ಲಿ ಹಿಜಬ್ ನಿಷೇಧ ವಾಪಸ್ ತೆಗೆಯೋದಾಗಿ ಸಿಎಂ ಘೋಷಣೆ ಮಾಡಿದ್ದರು. ವಿವಾದದ ಕಿಡಿ ಹೊತ್ತಿಕೊಳ್ಳುತ್ತಿದ್ದಂತೆಯೇ ತಮ್ಮ ಹೇಳಿಕೆ ಬಗ್ಗೆ ಸಿದ್ದರಾಮಯ್ಯ (Siddaramaiah) ಯೂಟರ್ನ್ ಹೊಡೆದಿದ್ದರು. ಸದ್ಯ ಸಿಎಂ ಈ ಹೇಳಿಕೆಯಿಂದ ಶಿಕ್ಷಣ ಇಲಾಖೆ ಗೊಂದಲದಲ್ಲಿದೆ. ಪರೀಕ್ಷೆ ಹತ್ತಿರ ಬರುತ್ತಿರುವುದರಿಂದ ಹಿಜಬ್ ಕುರಿತು ಚರ್ಚೆ ನಡೆಯುತ್ತಿದೆ. ಇದನ್ನೂ ಓದಿ: SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

    ಬಿಜೆಪಿ ಸರ್ಕಾರದಲ್ಲಿ ಶಾಲಾ-ಕಾಲೇಜುಗಳಲ್ಲಿ ಹಿಜಬ್ (Hijab) ನಿಷೇಧ ಮಾಡಲಾಗಿತ್ತು. ತರಗತಿಗಳ ಜೊತೆಗೆ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಎಕ್ಸಾಂಗೆ ಹಿಜಬ್ ನಿಷೇಧ ಮಾಡಲಾಗಿತ್ತು. ಹೈಕೋರ್ಟ್‍ನಲ್ಲಿ ಸರ್ಕಾರದ ಆದೇಶಕ್ಕೆ ಜಯ ಕೂಡ ಸಿಕ್ಕಿತ್ತು. ಇದಾದ ಬಳಿಕ ಹೈಕೋರ್ಟ್ (Highcourt) ಆದೇಶದ ವಿರುದ್ಧ ಸುಪ್ರೀಂಕೋರ್ಟ್‍ನಲ್ಲಿ (Supreme Court) ಮೇಲ್ಮನವಿ ಸಲ್ಲಿಕೆ ಮಾಡಲಾಗಿತ್ತು. ಸದ್ಯ ಸುಪ್ರೀಂಕೋರ್ಟ್ ಅಂಗಳದಲ್ಲಿ ಹಿಜಬ್ ನಿಷೇಧ ಆದೇಶ ಇದೆ. ಇದನ್ನೂ ಓದಿ: ರಾಜ್ಯದಲ್ಲಿ ಹಿಜಬ್‌ ನಿಷೇಧ ವಾಪಸ್‌: ಸಿಎಂ ಸಿದ್ದರಾಮಯ್ಯ ಘೋಷಣೆ

  • ಮಂಗಳವಾರ PSI ಮರು ಪರೀಕ್ಷೆ- ಬೆಂಗ್ಳೂರಿನ 117 ಕೇಂದ್ರಗಳಲ್ಲಿ ಸಿದ್ದತೆ

    ಮಂಗಳವಾರ PSI ಮರು ಪರೀಕ್ಷೆ- ಬೆಂಗ್ಳೂರಿನ 117 ಕೇಂದ್ರಗಳಲ್ಲಿ ಸಿದ್ದತೆ

    ಬೆಂಗಳೂರು: ಮಂಗಳವಾರ ಪಿಎಸ್ಐ ಮರು ಪರೀಕ್ಷೆ (PSI Re Exam) ನಡೆಯಲಿದ್ದು, ಈ ಹಿನ್ನೆಲೆಯಲ್ಲಿ 117 ಕೇಂದ್ರಗಳಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಲಾಗುತ್ತಿದೆ.

    ಮಂಗಳವಾರ ಬೆಳಗ್ಗೆ 10.30ರಿಂದ ಮಧ್ಯಾಹ್ನ 12ರವರೆಗೆ ಮತ್ತು ಮಧ್ಯಾಹ್ನ 1 ಗಂಟೆಯಿಂದ 2.30ರವರೆಗೆ ನಡೆಯಲಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ನಾಲ್ವರು ಸಶಸ್ತ್ರ ಪೇದೆಗಳು ಮತ್ತು ಇಬ್ಬರು ಮಹಿಳಾ ಸಿಬ್ಬಂದಿ ಸೇರಿದಂತೆ 6 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಒಟ್ಟು 40 ಬೆಟಾಲಿಯನ್ ಪೊಲೀಸರನ್ನು ಪರೀಕ್ಷಾ ಕರ್ತವ್ಯಕ್ಕೆ ನೇಮಿಸಲಾಗಿದೆ.

    ಸುಮಾರು 54 ಸಾವಿರ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬೆಂಗಳೂರನ್ನು ಹೊರತುಪಡಿಸಿ ರಾಜ್ಯದ ಬೇರಾವ ಭಾಗದಲ್ಲೂ ಪರೀಕ್ಷಾ ಕೇಂದ್ರ ಇಲ್ಲ. ಪೊಲೀಸರು ಪರೀಕ್ಷಾ ಕೇಂದ್ರಗಳ ಸುತ್ತ ಅನುಮಾನಾಸ್ಪದವಾಗಿ ಓಡಾಡುವವರು, ಗಾಳಿಸುದ್ದಿ ಹಬ್ಬಿಸುವ ಕಿಡಿಗೇಡಿಗಳು ಮತ್ತು ಜೆರಾಕ್ಸ್ ಅಂಗಡಿಗಳ ಮೇಲೆ ಹದ್ದಿನ ಕಣ್ಣಿಡಲಿದ್ದಾರೆ.

    ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬರನ್ನೂ ಲೋಹಶೋಧಕ ಯಂತ್ರದ ಮೂಲಕ ತಪಾಸಣೆ ನಡೆಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ ಭೇಟಿ ನೀಡಲಿದ್ದಾರೆ. ಅಭ್ಯರ್ಥಿಗಳು ವಸ್ತ್ರ ಸಂಹಿತೆಯಲ್ಲಿನ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಎಲೆಕ್ಟ್ರಾನಿಕ್ ಸಾಧನಗಳನ್ನು ತರುವುದನ್ನಾಗಲಿ, ಮೊಬೈಲ್ ಇಟ್ಟುಕೊಂಡು ಬರುವುದನ್ನಾಗಲಿ ನಿಷೇಧಿಸಲಾಗಿದೆ.

  • ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ

    ಸಿಇಟಿ ಪರೀಕ್ಷೆ ದಿನಾಂಕ ಬದಲಾವಣೆ

    – ಏಪ್ರಿಲ್ 18, 19, 20ರಂದು ಪರೀಕ್ಷೆ

    ಬೆಂಗಳೂರು: ಏಪ್ರಿಲ್ 20, 21 ಹಾಗೂ 22ಕ್ಕೆ ನಿಗದಿಯಾಗಿದ್ದ ಸಿಇಟಿ ಪರೀಕ್ಷಾ (CET Exam) ದಿನಾಂಕವನ್ನು ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಬದಲಾವಣೆ ಮಾಡಿದೆ.

    ಏಪ್ರಿಲ್ 20ರಿಂದ 22ರ ವರೆಗೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆಯನ್ನು ಏಪ್ರಿಲ್ 18, 19 ಹಾಗೂ 20ಕ್ಕೆ ನಿಗದಿ ಮಾಡಲಾಗಿದೆ. ಏಪ್ರಿಲ್ 21ರಂದು ಎನ್‌ಡಿಎ (National Defence Academy) ಪರೀಕ್ಷೆ ಇರುವ ಹಿನ್ನೆಲೆ ಸಿಇಟಿ ಪರೀಕ್ಷಾ ದಿನಾಂಕವನ್ನು ಬದಲಾವಣೆ ಮಾಡಲಾಗಿದೆ. ಇದನ್ನೂ ಓದಿ: ಅಂಜನಾದ್ರಿಯಿಂದ ಅಯೋಧ್ಯೆಗೆ ಸೈಕಲ್ ಜಾಥಾ; ಗೋಡೆ ಬರಹ ಮಾಡುತ್ತಾ ಸವಾರಿಯ ಸಾಹಸ

    ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳಿಗೆ 2024-25ರಲ್ಲಿ ಪ್ರವೇಶಾತಿ ಬಯಸುವವರಿಗಾಗಿ ಏಪ್ರಿಲ್ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಸಲಾಗುವುದು ಎಂದು ಈ ಹಿಂದೆ ನಿಗದಿ ಮಾಡಲಾಗಿತ್ತು. ಅಲ್ಲದೇ ಆಸಕ್ತ ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕೆಇಎ ಕಾರ್ಯ ನಿರ್ವಾಹಕಿ ಎಸ್ ರಮ್ಯಾ ತಿಳಿಸಿದ್ದರು. ಇದನ್ನೂ ಓದಿ: 2023ರ ಅರ್ಜುನ ಪ್ರಶಸ್ತಿ ಪಡೆದ ಕೈಗಳಿಲ್ಲದ ಬಿಲ್ಲುಗಾರ್ತಿ ಶೀತಲ್ ದೇವಿ – ಸಾಧನೆಗಳೇನು?

  • ಜ.13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಡೌನ್ಲೋಡ್‌ಗೆ ಸೂಚನೆ, ಕಡ್ಡಾಯ ವಸ್ತ್ರ ಸಂಹಿತೆ

    ಜ.13ರಂದು ಕೆ-ಸೆಟ್ ಪರೀಕ್ಷೆ: ಪ್ರವೇಶಪತ್ರ ಡೌನ್ಲೋಡ್‌ಗೆ ಸೂಚನೆ, ಕಡ್ಡಾಯ ವಸ್ತ್ರ ಸಂಹಿತೆ

    ಬೆಂಗಳೂರು: ಜನವರಿ 13ರಂದು ನಡೆಯುವ ಕೆ-ಸೆಟ್ (KSET) ಪರೀಕ್ಷೆಗೆ (Exam) ಹಾಜರಾಗುವ ಅಭ್ಯರ್ಥಿಗಳು http://kea.kar.nic.in ಜಾಲತಾಣದಲ್ಲಿ ಪ್ರವೇಶ ಪತ್ರವನ್ನು (Admission Letter) ಡೌನ್ಲೋಡ್ ಮಾಡಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ (S Ramya) ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸುವ ಮುನ್ನ ಪ್ರವೇಶಪತ್ರ ಮತ್ತು ಸರ್ಕಾರದಿಂದ ಮಾನ್ಯವಾಗಿರುವ ನಿಗದಿತ ಬಗೆಯ ಗುರುತಿನ ಪತ್ರವನ್ನು ತೋರಿಸುವುದು ಕಡ್ಡಾಯವಾಗಿದೆ. ಜೊತೆಗೆ ಪ್ರವೇಶಪತ್ರದಲ್ಲಿ ನಮೂದಿಸಿರುವ ಪರೀಕ್ಷಾ ಕೇಂದ್ರದಲ್ಲಷ್ಟೇ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬೇಕು. ಅಲ್ಲದೇ ಇತ್ತೀಚಿನ ಎರಡು ಭಾವಚಿತ್ರಗಳನ್ನು ತರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನಮ್ಮ ದೇಶ ಹಿಂದೂ ರಾಷ್ಟ್ರವಾದರೆ ದೇಶಕ್ಕೇ ತೊಂದರೆ: ಯತೀಂದ್ರ ಸಿದ್ದರಾಮಯ್ಯ

    ಪರೀಕ್ಷೆಯು ಜನವರಿ 13ರ ಬೆಳಗ್ಗೆ 10ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಇದರ ನಡುವೆ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಿಂದ ಹೊರಹೋಗಲು ಅವಕಾಶ ಕೊಡಲಾಗುವುದಿಲ್ಲ. ಓಎಂಆರ್ ಶೀಟ್ ಮೇಲೆ ಅಭ್ಯರ್ಥಿಗಳೇನಾದರೂ ತಮ್ಮ ನೋಂದಣಿ ಸಂಖ್ಯೆ, ವಿಷಯದ ಕೋಡ್ ಮತ್ತು ಪರೀಕ್ಷಾ ಕೇಂದ್ರದ ಕೋಡ್ ಅನ್ನು ತಪ್ಪಾಗಿ ನಮೂದಿಸಿದಲ್ಲಿ ಅಂಥವರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆ ನಂತರ ಕೋಟ್ಯಂತರ ಭಕ್ತರಿಗೆ ಅವಕಾಶ: ಪೇಜಾವರ ಶ್ರೀ

    ವಸ್ತ್ರಸಂಹಿತೆ ಕಡ್ಡಾಯ:
    ಕೆ-ಸೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷಾ ಪ್ರಾಧಿಕಾರವು ಕಟ್ಟುನಿಟ್ಟಿನ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸಿದೆ. ಯಾವುದೇ ಅಕ್ರಮಗಳಿಗೆ ಅವಕಾಶ ನೀಡದಿರಲು ಈ ಕ್ರಮ ಅನುಸರಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ತುಘಲಕ್ ಸರ್ಕಾರ ನಡೆಯುತ್ತಿದೆ: ರೇಣುಕಾಚಾರ್ಯ ಕಿಡಿ

    ಇದರಂತೆ, ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್ ಕಡ್ಡಾಯವಾಗಿದೆ. ಇದರ ಭಾಗವಾಗಿ ಜಿಪ್ ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವ ಉಡುಪು ಮತ್ತು ಶೂಗಳನ್ನು ನಿಷೇಧಿಸಲಾಗಿದೆ. ಜೊತೆಗೆ, ಅಭ್ಯರ್ಥಿಗಳು ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕಡಗಗಳನ್ನು ಧರಿಸಿಕೊಂಡು ಬರಬಾರದು ಎಂದು ಪ್ರಾಧಿಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: INDIA ಒಕ್ಕೂಟಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ಸಂಚಾಲಕ?

    ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ದಪ್ಪನೆ ಅಡಿಭಾಗವಿರುವ ಚಪ್ಪಲಿ/ಶೂಗಳನ್ನು ಧರಿಸಿಕೊಂಡು ಬರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ, ಬೇರಾವುದೇ ಆಭರಣಗಳನ್ನು ಹಾಕಿಕೊಂಡು ಪರೀಕ್ಷಾ ಕೇಂದ್ರಕ್ಕೆ ಬರುವಂತಿಲ್ಲ ಎಂದು ರಮ್ಯಾ ತಿಳಿಸಿದ್ದಾರೆ. ಇದನ್ನೂ ಓದಿ: ಬಿ.ಕೆ ಹರಿಪ್ರಸಾದ್ ಹಿಂದೂವೇ ಅಲ್ಲ, ದೇಶದ್ರೋಹಿ: ಯಶ್‌ಪಾಲ್ ಸುವರ್ಣ

    ನಿಷೇಧಿತ ವಸ್ತುಗಳ ಪಟ್ಟಿ:
    ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪಣ ತೊಟ್ಟಿರುವ ಪರೀಕ್ಷಾ ಪ್ರಾಧಿಕಾರವು, ಯಾವುದೇ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬ್ಲೂಟೂತ್, ಮೊಬೈಲ್ ಫೋನ್, ಎಲೆಕ್ಟ್ರಾನಿಕ್ ವಸ್ತುಗಳು, ಪೆನ್‌ಡ್ರೈವ್, ಇಯರ್ ಫೋನ್, ಕೈ ಗಡಿಯಾರ, ಮೈಕ್ರೋಫೋನ್, ಪೆನ್ಸಿಲ್, ಎರೇಸರ್, ಜಾಮೆಟ್ರಿ ಪೆಟ್ಟಿಗೆ ಮತ್ತು ಲಾಗ್ ಟೇಬಲ್ ಇತ್ಯಾದಿಗಳನ್ನು ತರುವಂತಿಲ್ಲ. ಜೊತೆಗೆ ಟೋಪಿ/ಮಾಸ್ಕ್ ಹಾಕಿಕೊಂಡು ಬರುವಂತಿಲ್ಲ ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಜ.6 ರಂದು ಎಕೆಬಿಎಂಎಸ್ ಮಹಿಳಾ ಸಮಾವೇಶ: ನಿರ್ಮಲಾ ಸೀತಾರಾಮನ್ ಉದ್ಘಾಟನೆ

  • ಕೆ-ಸೆಟ್ ಪರೀಕ್ಷೆ ಮಂದೂಡಿಕೆ, ಜ.13ಕ್ಕೆ ನಿಗದಿ

    ಕೆ-ಸೆಟ್ ಪರೀಕ್ಷೆ ಮಂದೂಡಿಕೆ, ಜ.13ಕ್ಕೆ ನಿಗದಿ

    ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಹಾಯಕ ಪ್ರಾಧ್ಯಾಪಕರ (Assistant Professor) ನೇಮಕಾತಿ ಸಲುವಾಗಿ ನಡೆಸುವ ಅರ್ಹತಾ ಪರೀಕ್ಷೆಯನ್ನು ಡಿ.31ರ ಬದಲಿಗೆ ಜನವರಿ‌ 13ರಂದು ನಡೆಸಲಿದೆ.

    ಈ ವಿಷಯವನ್ನು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಯತ್ನಾಳ್ ಆರೋಪದ ಬಗ್ಗೆ ಟೀಕೆ ಮಾಡಲ್ಲ, ಎಲ್ಲಾ ಸರಿಯಾಗತ್ತೆ: ಬಿಎಸ್‍ವೈ

     

    ಇದಲ್ಲದೆ, ಕಲ್ಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳನ್ನು ತಮ್ಮ ಪರೀಕ್ಷಾ ಕೇಂದ್ರಗಳಾಗಿ ಆಯ್ಕೆ‌ ಮಾಡಿಕೊಂಡಿದ್ದ ಅಭ್ಯರ್ಥಿಗಳು ಕ್ರಮವಾಗಿ ಬೆಂಗಳೂರು ಮತ್ತು ತುಮಕೂರು ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಬೇಕಾಗುತ್ತದೆ.

    ಧಾರವಾಡ ಜಿಲ್ಲಾ‌ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿಯಾಗಿ ಹಾವೇರಿ ಮತ್ತು ಮೈಸೂರು ಜಿಲ್ಲಾ ಕೇಂದ್ರಗಳಿಗೆ ಮಂಡ್ಯ ಪರೀಕ್ಷಾ ಕೇಂದ್ರಗಳನ್ನು ಸೇರಿಸಲಾಗಿದೆ. ಇವು ಬಿಟ್ಟು ಉಳಿದ ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

     

  • SSLC, PUCಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ – ಸಚಿವ ಮಧು ಬಂಗಾರಪ್ಪ

    SSLC, PUCಗೆ 3 ಪಬ್ಲಿಕ್ ಪರೀಕ್ಷೆ ಇರುತ್ತೆ – ಸಚಿವ ಮಧು ಬಂಗಾರಪ್ಪ

    ಬೆಂಗಳೂರು: ಎಸ್‌ಎಸ್‌ಎಲ್‌ಸಿ, ಪಿಯುಸಿಗೆ (SSLC, PUC) ಇನ್ಮುಂದೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಹೆಚ್ಚಿನ ರೀತಿಯಲ್ಲಿ ಅನುಕೂಲವಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ತಿಳಿಸಿದರು.

    ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಕಲಾಪದಲ್ಲಿ ಬಿಜೆಪಿ ಶಾಸಕರೊಬ್ಬರ (BJP MLA) ಪ್ರಶ್ನೆಗೆ ಉತ್ತರಿಸುತ್ತಾ, ನಾವು ಮಾತು ಕೊಟ್ಟಂತೆ ಎನ್‌ಇಪಿ (NEP) ರದ್ದು ಮಾಡಿದ್ದೇವೆ. ಹಿಂದಿನ ಪಠ್ಯಕ್ರಮ ಜಾರಿ ಮಾಡಿದ್ದೇವೆ ಬಿಜೆಪಿ ಸರ್ಕಾರ ಮಾಡಿದ ಲೋಪ ಸರಿ ಮಾಡಿದ್ದೇವೆ ಎಂದರು. ಇದನ್ನೂ ಓದಿ: Article370: ಶೇಕ್ ಅಬ್ದುಲ್ಲಾ ಖುಷಿಪಡಿಸಲು ಜಾರಿಗೆ ತಂದಿದ್ದನ್ನು ಮೋದಿ ಧೈರ್ಯದಿಂದ ರದ್ದು ಮಾಡಿದ್ರು: ಯತ್ನಾಳ್

    ಎಸ್‌ಎಸ್‌ಎಲ್‌ಸಿ, ಪಿಯುಸಿಗೆ 3 ಪಬ್ಲಿಕ್ ಪರೀಕ್ಷೆಗಳನ್ನು ಅನುಷ್ಠಾನ ಮಾಡಿದ್ದೇವೆ. ಇದರಿಂದ ಮಕ್ಕಳಿಗೆ ಅನುಕೂಲ ಆಗುತ್ತದೆ. ಈ ವ್ಯವಸ್ಥೆ ಎನ್‌ಇಪಿಯಲ್ಲಿ ಇಲ್ಲ. ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭ ಮಾಡುವ ವ್ಯವಸ್ಥೆ ಮಾಡ್ತಿದ್ದೇವೆ. ಎಸ್‌ಇಪಿಯಲ್ಲಿ ಉತ್ತಮ ಶಿಕ್ಷಣ ಕೊಡ್ತೀವಿ. ಇದಕ್ಕಾಗಿ ಸಮಿತಿ ನೇಮಕ ಮಾಡಲಾಗಿದೆ. ಉತ್ತಮ ವ್ಯಕ್ತಿಗಳನ್ನ ಸೃಷ್ಟಿ ಮಾಡುವ ಪಾಲಿಸಿ ಎಸ್‌ಇಪಿ ಜಾರಿ ಮಾಡ್ತೀವಿ. ಎನ್‌ಇಪಿ ರದ್ದು ನಿರ್ಧಾರ ವಾಪಸ್ ಇಲ್ಲವೇ ಇಲ್ಲ ಎಂದು ಹೇಳಿದರು.

    ಇದಕ್ಕೆ ಬಿಜೆಪಿ ಶಾಸಕರಿಂದ ವಿರೋಧ ವ್ಯಕ್ತವಾಯಿತು. ವೈ.ಎ ನಾರಾಯಣಸ್ವಾಮಿ ಇದಕ್ಕೆ ಪ್ರತಿಕ್ರಿಯಿಸಿ, ಸಿನಿಎಸ್‌ಇ ಬೋರ್ಡ್‌ಗೆ ಎಸ್‌ಇಪಿ ಅನ್ವಯ ಆಗುತ್ತಾ? ಬೇರೆ ಬೇರೆ ರಾಜ್ಯಗಳಲ್ಲಿ ಎನ್‌ಇಪಿ ಇದ್ದು, ನಮ್ಮ ರಾಜ್ಯದಲ್ಲಿ ಎಸ್‌ಇಪಿ ಇದ್ದರೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಮ್ಮ ಮಕ್ಕಳಿಗೆ ಅನ್ಯಾಯ ಆಗುತ್ತದೆ. ದುರುದ್ದೇಶದಿಂದ ಎನ್‌ಇಪಿ ರದ್ದು ಮಾಡೋದು ಸರಿಯಲ್ಲ. ಎನ್‌ಇಪಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ವ್ಯವಸ್ಥೆ ರೂಪಿಸುತ್ತದೆ. ಸಿಬಿಎಸ್‌ಇ ಖಾಸಗಿ ಶಾಲೆಗಳಲ್ಲಿ ಎಸ್‌ಇಪಿ ಅನುಷ್ಠಾನ ಮಾಡೋ ತಾಕತ್ ಸರ್ಕಾರಕ್ಕೆ ಇದೆಯಾ? ಎಂದು ಸವಾಲ್ ಹಾಕಿದರು.

    ಈ ವೇಳೆ ಹಲವು ಸದಸ್ಯರು ಎನ್‌ಇಪಿ ಚರ್ಚೆಯಲ್ಲಿ ಮಾತನಾಡುವ ಉತ್ಸಾಹ ತೋರಿದ್ದರಿಂದ್ದ ಚರ್ಚೆಯನ್ನು ಮಂಗಳವಾರ (ಡಿ.12ಕ್ಕೆ) ಮುಂದೂಡಲಾಯಿತು. ಇದನ್ನೂ ಓದಿ: ನಿನ್ಗೆ ಹುಚ್ಚು ನಾಯಿ ಕಚ್ಚಿದ್ಯಾ? ರೈತರ ಹಣ ತಿಂದ್ರೆ ಪ್ಯಾರಾಲಿಸಿಸ್ ಬರುತ್ತೆ – ಬಿಜೆಪಿ ವಿರುದ್ಧ ಲಕ್ಷ್ಮಣ್‌ ಸವದಿ ಕೆಂಡಾಮಂಡಲ