Tag: ಪಾಕಿಸ್ತಾನ-ನ್ಯೂಜಿಲೆಂಡ್‌

  • ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ; ಸೆಮೀಸ್‌ ಆಸೆ ಜೀವಂತ

    ಪಾಕ್‌ಗೆ ವರವಾದ ವರುಣ – ಕಿವೀಸ್‌ ವಿರುದ್ಧ 21 ರನ್‌ಗಳ ಜಯ; ಸೆಮೀಸ್‌ ಆಸೆ ಜೀವಂತ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್‌ ಟೂರ್ನಿಯ 35ನೇ ಪಂದ್ಯದಲ್ಲಿ ಮಳೆ ಕಾರಣದಿಂದಾಗಿ ನ್ಯೂಜಿಲೆಂಡ್‌ ವಿರುದ್ಧ ಪಾಕಿಸ್ತಾನ (PAK vs NZ) 21 ರನ್‌ಗಳ ಜಯಗಳಿಸಿದೆ. ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ್ದರಿಂದ ಡಕ್‌ವರ್ತ್‌ ನಿಯಮದ ಪ್ರಕಾರ ಪಾಕಿಸ್ತಾನ ಗೆಲುವು ದಾಖಲಿಸಿದೆ. ಆ ಮೂಲಕ ಪಾಕ್‌ನ ಸೆಲಿ-ಫೈನಲ್‌ ಕನಸು ಇನ್ನೂ ಜೀವಂತವಾಗಿ ಉಳಿದಿದೆ.

    New Zealand Rain

    ಆರಂಭದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಬಾರಿಸಿತ್ತು. ಆ ಮೂಲಕ ಪಾಕಿಸ್ತಾನಕ್ಕೆ ಸವಾಲಿನ 402 ರನ್‌ಗಳ ಗುರಿ ನೀಡಿತ್ತು. ಗುರಿ ಬೆನ್ನತ್ತಿದ ಪಾಕಿಸ್ತಾನ ಆರಂಭಿಕ ಆಘಾತ ಎದುರಿಸಿತು. ಅಬ್ದುಲ್ಲಾ ಶಫೀಕ್ ಕೇವಲ 4 ರನ್‌ಗಳಿಗೆ ಔಟಾದರು. ನಂತರ ಬಂದ ಫಖರ್ ಜಮಾನ್ (Fakhar Zaman) (81 ಬಾಲ್‌, 126 ರನ್‌, 11 ಸಿಕ್ಸರ್‌, 8 ಫೋರ್) ಹಾಗೂ ಬಾಬರ್‌ ಆಜಾಮ್‌ (Babar) (63 ಬಾಲ್‌, 66 ರನ್‌, 2 ಸಿಕ್ಸರ್‌, 6 ಫೋರ್‌) ಉತ್ತಮ ಜೊತೆಯಾಟವಾಗಿ ಮಿಂಚಿದರು. ಇದನ್ನೂ ಓದಿ: ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

    Fakhar Zaman

    141 ಬಾಲ್‌ಗಳಿಗೆ 194 ರನ್‌ ಬಾರಿಸುವ ಮೂಲಕ ಉತ್ತಮ ಜೊತೆಯಾಟ ನೀಡಿ ಪಾಕ್‌ ಗೆಲುವಿಗೆ ಭರವಸೆ ಮೂಡಿಸಿದ್ದರು. ಪಾಕ್‌ ಬ್ಯಾಟರ್‌ಗಳ ಉತ್ತಮ ಪ್ರದರ್ಶನಕ್ಕೆ ಮಳೆ ಎರಡು ಬಾರಿ ಅಡ್ಡಿಪಡಿಸಿತು. ಮೊದಲ ಬಾರಿಗೆ ಮಳೆ ಬಂದಾಗ, ಡಿಎಲ್‌ಎಸ್‌ ನಿಯಮದ ಪ್ರಕಾರ ಪಾಕ್‌ಗೆ 41 ಓವರ್‌ಗಳಿಗೆ 342 ರನ್‌ ಗುರಿ ನೀಡಲಾಯಿತು. ಇದೀಗ ಎರಡನೇ ಸಲ ಮಳೆ ಬಂದು ಪಂದ್ಯ ನಿಂತ ವೇಳೆಗೆ ಪಾಕಿಸ್ತಾನ ತಂಡ, 25.3 ಓವರ್‌ಗಳಿಗೆ ಒಂದು ವಿಕೆಟ್‌ ನಷ್ಟಕ್ಕೆ 200 ರನ್‌ ಗಳಿಸಿತು. ಪಾಕ್ ಗೆಲ್ಲಲು ಇನ್ನೂ 93 ಎಸೆತಗಳಲ್ಲಿ 143 ರನ್‌ ಗಳಿಸಬೇಕಾಗಿತ್ತು. ಮಳೆ ನಿಲ್ಲದ ಕಾರಣ, ಪಾಕಿಸ್ತಾನ ತಂಡ ಡಿಎಲ್‌ಎಸ್‌ ನಿಯಮದ ಪ್ರಕಾರ ನ್ಯೂಜಿಲೆಂಡ್‌ ತಂಡಕ್ಕಿಂತ 21 ರನ್‌ಗಳ ಮುಂದಿತ್ತು. ಹೀಗಾಗಿ 21 ರನ್‌ಗಳ ಜಯ ಸಾಧಿಸಿದೆ.

    Rachin Ravindra and Kane Williamson

    ಇದಕ್ಕೂ ಮುನ್ನ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಬಾರಿಸಿತ್ತು. 68 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ಕಿವೀಸ್ ಬಳಿಕ 2ನೇ ವಿಕೆಟ್‌ಗೆ ಬೃಹತ್ ಮೊತ್ತ ಪೇರಿಸಿತು. ಸ್ಫೋಟಕ ಇನ್ನಿಂಗ್ಸ್ ಆರಂಭಿಸಿದ ಕೇನ್ ವಿಲಿಯಮ್ಸನ್ ಹಾಗೂ ರಚಿನ್ ರವೀಂದ್ರ ಜೋಡಿ 2ನೇ ವಿಕೆಟ್‌ಗೆ 142 ಎಸೆತಗಳಲ್ಲಿ ಬರೋಬ್ಬರಿ 180 ರನ್ ಬಾರಿಸಿತ್ತು. ಇದನ್ನೂ ಓದಿ: ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    PAK vs NZ 1

    ರಚಿನ್ ರವೀಂದ್ರ (Rachin Ravindra) 108 ರನ್ (94 ಎಸೆತ, 15 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ 23ನೇ ವಯಸ್ಸಿಗೆ ವಿಶ್ವಕಪ್‌ನಲ್ಲಿ 3 ಶತಕ ಸಿಡಿಸಿ, 2 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ದಾಖಲೆ ನುಚ್ಚು ನೂರು ಮಾಡಿದರು. ಇದರೊಂದಿಗೆ ಮೊಣಕಾಲು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ನಂತರ ಮೊದಲ ಪಂದ್ಯವಾಡಿದ ಕೇನ್ ವಿಲಿಯಮ್ಸನ್ 95 ರನ್ (79 ಎಸೆತ, 10 ಬೌಂಡರಿ, 2 ಸಿಕ್ಸರ್) ಸಿಡಿಸಿ ಮಿಂಚಿದರು. ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಡೇರಿಲ್ ಮಿಚೆಲ್ ಹಾಗೂ ಮಾರ್ಕ್ ಚಾಪ್ಮನ್ ಜೋಡಿ 32 ಎಸೆತಗಳಲ್ಲಿ 57 ರನ್, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ಜೋಡಿ 26 ಎಸೆತಗಳಲ್ಲಿ 43 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡದ ಮೊತ್ತ 400 ರನ್ ಗಡಿದಾಟಿಸುವಲ್ಲಿ ಯಶಸ್ವಿಯಾದರು.

    ಡೆವೋನ್ ಕಾನ್ವೆ 35 ರನ್, ಡೇರಿಲ್ ಮಿಚೆಲ್ 29 ರನ್, ಮಾರ್ಕ್ ಚಾಪ್ಮನ್ 39 ರನ್, ಗ್ಲೇನ್ ಫಿಲಿಪ್ಸ್ 41 ರನ್, ಮಿಚೆಲ್ ಸ್ಯಾಂಟ್ನರ್ 26 ರನ್, ಟಾಮ್ ಲಾಥಮ್ 2 ರನ್ ಗಳಿಸಿದರು. ಪಾಕಿಸ್ತಾನ ಪರ ಮೊಹಮ್ಮದ್ ವಸೀಮ್ 3 ವಿಕೆಟ್ ಕಿತ್ತರೆ, ಹಸನ್ ಅಲಿ, ಇಫ್ತಿಕಾರ್ ಅಹ್ಮದ್ ಮತ್ತು ಹ್ಯಾರಿಸ್ ರೌಫ್ ತಲಾ ಒಂದೊಂದು ವಿಕೆಟ್ ಪಡೆದರು. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

  • ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

    ಪಾಕ್‌-ಕಿವೀಸ್‌ ಹೈವೋಲ್ಟೇಜ್‌ ಪಂದ್ಯಕ್ಕೆ ಮಳೆ ಅಡ್ಡಿ – ಅಭಿಮಾನಿಗಳಿಗೆ ನಿರಾಸೆ

    ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ ಮತ್ತು ನ್ಯೂಜಿಲೆಂಡ್‌ (Pakistan vs New Zealand) ನಡುವಿನ ಹೈವೋಲ್ಟೇಜ್‌ ಕದನಕ್ಕೆ ಮಳೆ ಅಡ್ಡಿಯುಂಟು ಮಾಡಿದೆ.

    ಕಿವೀಸ್‌ ನೀಡಿರುವ 400 ರನ್‌ಗಳ ಗುರಿ ಬೆನ್ನತ್ತಿರುವ ಪಾಕ್‌ ತಂಡ ಸ್ಫೋಟಕ ಇನ್ನಿಂಗ್ಸ್‌ ಆರಂಭಿಸಿದೆ. 4 ರನ್‌ಗಳಿಗೆ ಮೊದಲ ವಿಕೆಟ್‌ ಕಳೆಕೊಂಡರೂ ಫಖರ್‌ ಝಮಾನ್‌ ಮತ್ತು ನಾಯಕ ಬಾಬರ್‌ ಆಜಂ ಶತಕದ ಜೊತೆಯಾಟದಿಂದ 21.3 ಓವರ್‌ಗಳಲ್ಲಿ 160 ರನ್‌ ಗಳಿಸಿತ್ತು. ಈ ವೇಳೆ ಮಳೆ ಅಡ್ಡಿಯುಂಟುಮಾಡಿದೆ. ಸದ್ಯ ಮೈದಾನ ನೀರಿನಿಂದ ನೆನೆಯದಂತೆ ಟಾರ್ಪಾಲ್‌ಗಳಿಂದ ಕವರ್‌ ಮಾಡಲಾಗಿದೆ. ನ್ಯೂಜಿಲೆಂಡ್‌ ತಂಡ 21 ಓವರ್‌ಗಳಲ್ಲಿ 1 ವಿಕೆಟ್‌ಗೆ 133 ರನ್‌ ಗಳಿಸಿತ್ತು. ಆದ್ರೆ ಪಾಕಿಸ್ತಾನ 1 ವಿಕೆಟ್‌ಗೆ 159 ರನ್‌ ಬಾರಿಸಿದೆ. ಇದನ್ನೂ ಓದಿ: ಕೊಹ್ಲಿಗೂ ಮುನ್ನವೇ ಸಚಿನ್‌ ಶತಕ ದಾಖಲೆ ಉಡೀಸ್‌ ಮಾಡಿದ ರಚಿನ್‌..!

    Rain 2

    213 ಓವರ್‌ನಲ್ಲಿ ಡಕ್ವರ್ತ್‌ ಲೂಯಿಸ್‌ ನಿಯಮಕ್ಕೆ (ಡಿಎಸ್‌ಎಲ್‌) 150 ರನ್‌ ಸಮಾನ ಸ್ಕೋರ್‌ ಆಗಿದೆ. ಆದ್ರೆ ಪಾಕಿಸ್ತಾನ 10 ರನ್‌ ಮುಂದಿದೆ. ಸದ್ಯ ಓವರ್‌ ಕಡಿತದ ಬಗ್ಗೆ ಇನ್ನೂ ಮಾತುಕತೆ ನಡೆದಿಲ್ಲ. ಒಂದು ವೇಳೆ ಡಕ್ವರ್ತ್‌ ಲೂಯಿಸ್‌ ನಿಯಮ ಅನ್ವಯಿಸಿದರೂ ಅದು ಪಾಕ್‌ ತಂಡಕ್ಕೆ ವರದಾನವಾಗುವ ಸಾಧ್ಯತೆಗಳಿವೆ.

    ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ್ದ ಕಿವೀಸ್‌ ಪಡೆ 50 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 401 ರನ್ ಪೇರಿಸಿದೆ. 68 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿದ್ದ ಕಿವೀಸ್ ಬಳಿಕ 2ನೇ ವಿಕೆಟ್‌ಗೆ ಬೃಹತ್ ಮೊತ್ತ ಪೇರಿಸಿತು. ಸ್ಫೋಟಕ ಇನ್ನಿಂಗ್ಸ್ ಆರಂಭಿಸಿದ ಕೇನ್ ವಿಲಿಯಮ್ಸನ್ ಹಾಗೂ ರಚಿನ್ ರವೀಂದ್ರ ಜೋಡಿ 2ನೇ ವಿಕೆಟ್‌ಗೆ 142 ಎಸೆತಗಳಲ್ಲಿ ಬರೋಬ್ಬರಿ 180 ರನ್ ಬಾರಿಸಿತ್ತು. ರಚಿನ್ ರವೀಂದ್ರ 108 ರನ್ (94 ಎಸೆತ, 15 ಬೌಂಡರಿ, 1 ಸಿಕ್ಸರ್) ಚಚ್ಚುವ ಮೂಲಕ 23ನೇ ವಯಸ್ಸಿಗೆ ವಿಶ್ವಕಪ್‌ನಲ್ಲಿ 3 ಶತಕ ಸಿಡಿಸಿ, 2 ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ದಾಖಲೆ ನುಚ್ಚು ನೂರು ಮಾಡಿದರು. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್‌ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ

    New Zealand

    ಇದರೊಂದಿಗೆ ಮೊಣಕಾಲು ಗಾಯದ ಸಮಸ್ಯೆಯಿಂದ ಚೇತರಿಸಿಕೊಂಡ ನಂತರ ಮೊದಲ ಪಂದ್ಯವಾಡಿದ ಕೇನ್ ವಿಲಿಯಮ್ಸನ್ 95 ರನ್ (79 ಎಸೆತ, 10 ಬೌಂಡರಿ, 2 ಸಿಕ್ಸರ್) ಸಿಡಿಸಿ ಮಿಂಚಿದರು. ಇದರೊಂದಿಗೆ ಮಧ್ಯಮ ಕ್ರಮಾಂಕದಲ್ಲಿ ಡೇರಿಲ್ ಮಿಚೆಲ್ ಹಾಗೂ ಮಾರ್ಕ್ ಚಾಪ್ಮನ್ ಜೋಡಿ 32 ಎಸೆತಗಳಲ್ಲಿ 57 ರನ್, ಮಿಚೆಲ್ ಸ್ಯಾಂಟ್ನರ್ ಮತ್ತು ಗ್ಲೇನ್ ಫಿಲಿಪ್ಸ್ ಜೋಡಿ 26 ಎಸೆತಗಳಲ್ಲಿ 43 ರನ್‌ಗಳ ಜೊತೆಯಾಟ ನೀಡುವ ಮೂಲಕ ತಂಡದ ಮೊತ್ತ 400 ರನ್ ಗಡಿದಾಟಿಸುವಲ್ಲಿ ಯಶಸ್ವಿಯಾದರು.

    ಡೆವೋನ್ ಕಾನ್ವೆ 35 ರನ್, ಡೇರಿಲ್ ಮಿಚೆಲ್ 29 ರನ್, ಮಾರ್ಕ್ ಚಾಪ್ಮನ್ 39 ರನ್, ಗ್ಲೇನ್ ಫಿಲಿಪ್ಸ್ 41 ರನ್, ಮಿಚೆಲ್ ಸ್ಯಾಂಟ್ನರ್ 26 ರನ್, ಟಾಮ್ ಲಾಥಮ್ 2 ರನ್ ಗಳಿಸಿದರು. ಪಾಕಿಸ್ತಾನ ಪರ ಮೊಹಮ್ಮದ್ ವಸೀಮ್ 3 ವಿಕೆಟ್ ಕಿತ್ತರೆ, ಹಸನ್ ಅಲಿ, ಇಫ್ತಿಕಾರ್ ಅಹ್ಮದ್ ಮತ್ತು ಹ್ಯಾರಿಸ್ ರೌಫ್ ತಲಾ ಒಂದೊಂದು ವಿಕೆಟ್ ಪಡೆದರು. ಇದನ್ನೂ ಓದಿ: ವಿಶ್ವಕಪ್‌ನಿಂದ ಹೊರಗುಳಿದ ಪಾಂಡ್ಯ – ಉಪನಾಯಕನಾಗಿ ಕೆಎಲ್ ರಾಹುಲ್ ಆಯ್ಕೆ

    ರನ್ ಏರಿದ್ದು ಹೇಗೆ?
    94 ಎಸೆತ 100 ರನ್
    138 ಎಸೆತ 150 ರನ್
    209 ಎಸೆತ 250 ರನ್
    239 ಎಸೆತ 300 ರನ್
    300 ಎಸೆತ 401 ರನ್