Tag: ಪೋಕ್ಸೊ ಕೇಸ್

  • ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

    ಸಂತ್ರಸ್ತೆ ಜೊತೆ ವಿವಾಹ; ಪೋಕ್ಸೊ ಕೇಸ್‌ ಅಪರಾಧಿಯನ್ನು ಜೈಲು ಶಿಕ್ಷೆಯಿಂದ ಪಾರು ಮಾಡಿದ ಸುಪ್ರೀಂ

    ನವದೆಹಲಿ: ಪೋಕ್ಸೊ ಪ್ರಕರಣವೊಂದರಲ್ಲಿ ಸುಪ್ರೀಂ ಕೋರ್ಟ್‌ (Supreme Court) ಮಹತ್ವದ ತೀರ್ಪೊಂದನ್ನು ನೀಡಿದೆ. ಪೋಕ್ಸೊ (POCSO) ಕಾಯ್ದೆಯಡಿ ದೋಷಿಯಾಗಿದ್ದ ವ್ಯಕ್ತಿಯೊಬ್ಬನಿಗೆ ಸುಪ್ರೀಂ ಕೋರ್ಟ್ ಜೈಲು ಶಿಕ್ಷೆಯಿಂದ ರಕ್ಷಣೆ ನೀಡಿದೆ.

    ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿ ಸದಸ್ಯ ಪೀಠವು, ಆರೋಪಿಯ ಶಿಕ್ಷೆಯನ್ನು ತಗ್ಗಿಸಿ, ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿತು. ಆರೋಪಿಯು ಸಂತ್ರಸ್ತೆಯನ್ನು ಮದುವೆಯಾಗಿರುವ ಕಾರಣವನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ. ಕಾನೂನು ಪ್ರಕ್ರಿಯೆಯು ಘಟನೆಗಿಂತ ಸಂತ್ರಸ್ತೆಗೆ ಹೆಚ್ಚಿನ ಸಮಸ್ಯೆಯನ್ನುಂಟುಮಾಡಿದೆ ಎಂದು ನ್ಯಾಯಾಲಯ ತಿಳಿಸಿತು. ಇದನ್ನೂ ಓದಿ: ಭದ್ರಾವತಿ ವಿಶ್ವೇಶ್ವರಯ್ಯ ಕಬ್ಬಿಣ & ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಕೇಂದ್ರ ಅಸ್ತು

    POCSO Special Court

    ಕಾನೂನಿನ ಕಟ್ಟುನಿಟ್ಟಾದ ಅನುಷ್ಠಾನದ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಂತ್ರಸ್ತೆಯ ಒಳಿತಿಗಾಗಿ ಈ ತೀರ್ಪನ್ನು ನೀಡಲಾಗಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ಆದರೆ, ಈ ತೀರ್ಪು ಪೋಕ್ಸೊ ಕಾಯ್ದೆಯ ಗಂಭೀರತೆಯನ್ನು ಕಡಿಮೆಗೊಳಿಸುವುದಿಲ್ಲ ಎಂದು ಒತ್ತಿ ಹೇಳಿದೆ.

    ಪ್ರಕರಣದಲ್ಲಿ ಆರೋಪಿಯು POCSO ಕಾಯ್ದೆಯಡಿ ಲೈಂಗಿಕ ಅಪರಾಧಕ್ಕೆ ಸಂಬಂಧಿಸಿದ ಆರೋಪದಲ್ಲಿ ದೋಷಿಯಾಗಿದ್ದ. ಆದರೆ, ಆರೋಪಿಯು ಸಂತ್ರಸ್ತೆಯೊಂದಿಗೆ ಮದುವೆಯಾಗಿದ್ದಾನೆ ಎಂಬ ಅಂಶವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿತು. ಈ ಮದುವೆಯು ಒಪ್ಪಿಗೆಯಿಂದ ನಡೆದಿದ್ದು, ಇದು ಸಂತ್ರಸ್ತೆಯ ಜೀವನ ಮತ್ತು ಭವಿಷ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿದೆ ಎಂದು ಕೋರ್ಟ್ ತಿಳಿಸಿದೆ. ಇದನ್ನೂ ಓದಿ: Delhi Election| ಆಪ್‌ಗಿಂತ ಮೂರು ಪಟ್ಟು ಹೆಚ್ಚು ಖರ್ಚು ಮಾಡಿತ್ತು ಕಾಂಗ್ರೆಸ್‌ – 68 ಮಂದಿಗೆ ಬಿಜೆಪಿಯಿಂದ ತಲಾ 25 ಲಕ್ಷ

  • ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ

    ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಶುರುವಾಯ್ತು ಸಂಕಷ್ಟ – ಕೋರ್ಟ್‌ನಿಂದ ಸಮನ್ಸ್ ಜಾರಿ

    ಬೆಂಗಳೂರು: ಪೋಕ್ಸೊ ಕೇಸ್‌ನಲ್ಲಿ (POCSO Case) ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ (B.S.Yediyurappa) ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಕಾಗ್ನಿಜೆನ್ಸ್‌ ಆರಂಭಿಸಿದ ಕೋರ್ಟ್‌ನಿಂದ ಸಮನ್ಸ್‌ ಜಾರಿಯಾಗಿದೆ.

    ನಿನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡ ಖುಷಿಯಲ್ಲಿದ್ದ ಮಾಜಿ ಸಿಎಂ ಬಿಎಸ್‌ವೈಗೆ ಸಂಕಷ್ಟ ಶುರುವಾಗಿದೆ. ಪೋಕ್ಸೊ ಕೇಸ್‌ನಲ್ಲಿ ಬಿಎಸ್‌ವೈಗೆ ಫಾಸ್ಟ್‌ಟ್ರ್ಯಾಕ್ ಕೋರ್ಟ್ 1 ರಿಂದ ಸಮನ್ಸ್ ಜಾರಿಯಾಗಿದ್ದು, ಮಾ.15 ಕ್ಕೆ ಖುದ್ದು ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಇದನ್ನೂ ಓದಿ: ನಟ ದರ್ಶನ್‌ಗೆ ಇನ್ಮುಂದೆ ದೇಶಾದ್ಯಂತ ಸಂಚಾರಕ್ಕೆ ಅವಕಾಶ – ಹೈಕೋರ್ಟ್ ಆದೇಶ

    BS Yediyurappa

    ಪೋಕ್ಸೊ‌ ಕೇಸ್‌ನಲ್ಲಿ ಕೋರ್ಟ್ ಕಾಗ್ನಿಜೆನ್ಸ್ ತೆಗೆದುಕೊಂಡಿದ್ದು, ಕಾಗ್ನಿಜೆನ್ಸ್ ತೆಗೆದುಕೊಂಡ ಬೆನ್ನಲ್ಲೇ ಸಮನ್ಸ್ ಜಾರಿಯಾಗಿದೆ. ಹೈಕೋರ್ಟ್‌ನಲ್ಲಿ ಪ್ರಕರಣ ರದ್ದು ಮಾಡುವಂತೆ ಬಿಎಸ್‌ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಳೆಯ ಕಾಗ್ನಿಜೆನ್ಸ್ ರದ್ದು ಮಾಡಿದ್ದ ಹೈಕೋರ್ಟ್, ಹೊಸದಾಗಿ ಕಾಗ್ನಿಜೆನ್ಸ್ ತೆಗೆದುಕೊಳ್ಳಬಹುದು ಅಂತ ಆದೇಶ ಮಾಡಿತ್ತು.

    ಅಲ್ಲದೇ, ನಿರೀಕ್ಷಣಾ ಜಾಮೀನು ಮುಂದುವರೆಸಿತ್ತು. ಇದೀಗ ಸಿಐಡಿ ಸಲ್ಲಿಸಿರುವ ಚಾರ್ಜ್‌ಶೀಟ್ ಮೇಲೆ ಕೋರ್ಟ್‌ನಲ್ಲಿ ವಿಚಾರಣೆ ಆರಂಭವಾಗಿದೆ. ಇದನ್ನೂ ಓದಿ: ಮತ್ತೆರಡು ವಿಧೇಯಕ ವಾಪಸ್ – ರಾಜ್ಯಪಾಲರು vs ರಾಜ್ಯ ಸರ್ಕಾರದ ನಡುವೆ ಮುಂದುವರಿದ ಜಟಾಪಟಿ

  • ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ

    ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ

    ಚಿತ್ರದುರ್ಗ: ಪೋಕ್ಸೊ ಕೇಸ್‌ನಲ್ಲಿ (POCSO Case) ನ್ಯಾಯಾಂಗ ಬಂಧನದಲ್ಲಿದ್ದ ಚಿತ್ರದುರ್ಗದ ಮುರುಘಾಶ್ರೀ (Muruga Shree) ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಈ ಹಿನ್ನೆಲೆ ಜೈಲು ಆವರಣದಲ್ಲಿ ಮುರುಘಾಶ್ರೀ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ.

    ಜೈಲಿನಿಂದ ಬಿಡುಗಡೆಯಾದ ಮುರುಘಾಶ್ರೀ ಸ್ವಾಗತಿಸಲು ಮುರುಘಾ ಮಠದ ಉಸ್ತುವಾರಿಯಾಗಿದ್ದ ಬಸವ ಪ್ರಭು ಶ್ರೀ ಮತ್ತು ಉತ್ತರಾಧಿಕಾರಿ ಬಸವಾದಿತ್ಯ ಜೈಲಿಗೆ ಧಾವಿಸಿದ್ದರು. ಬಿಡುಗಡೆಯಾದ ಮುರುಘಾಶ್ರೀ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಅಲ್ಲದೇ ಅವರ ಬೆಂಬಲಿಗರು ಹೂವಿನಹಾರ ಹಾಕುವ ಮೂಲಕ ಜಯಘೋಷ ಕೂಗಿದರು. ಜೊತೆಗೆ ಸಿಹಿ ಹಂಚಿ ಸಂಭ್ರಮಿಸಿದರು. ಬಳಿಕ ಪೊಲೀಸ್ ಬಿಗಿ ಭದ್ರತೆಯಲ್ಲಿ ನಗುನಗುತ್ತಾ ಮುರುಘಾಶ್ರೀ ನಗುನಗುತ್ತಾ ತೆರಳಿದರು. ಮುರುಘಾ ಮಠದ ಮುಂದೆ ಸಾಗುತ್ತಾ ರಸ್ತೆ ಬದಿ ನಿಂತಿದ್ದ ಜನರತ್ತ ಮುರುಘಾಶ್ರೀ ಕೈ ಬೀಸಿದರು.ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

    ಈ ವೇಳೆ ಮಾದ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಮುರುಘಾಶ್ರೀ, ಕಾನೂನು ಹೋರಾಟದಲ್ಲಿ ಸತ್ಯಕ್ಕೆ ಜಯ ಸಿಗುವ ನಿರೀಕ್ಷೆಯಿದೆ. ಶರಣಸಂಸ್ಕ್ರತಿ ಉತ್ಸವದ ಸಂಭ್ರಮಾಚರಣೆ ವೇಳೆ ಬಿಡುಗಡೆಯಾಗಿರುವ ಕುರಿತು ನಾವು ಯೋಚಿಸಿ ಹೆಜ್ಜೆಇಡುತ್ತೇವೆ. ಈಗ ಮಾತನಾಡಲು ಸಕಾಲವಲ್ಲ. ಮೌನವಹಿಸುವ ಕಾಲ ಎಂದಷ್ಟೇ ಹೇಳುತ್ತೇವೆ ಎಂದರು.

    ಏನಿದು ಪ್ರಕರಣ:
    ಚಿತ್ರದುರ್ಗದ (Chitradurga) ಮುರುಘಾಶ್ರೀ ವಿರುದ್ಧ 2022ರ ಆ.26 ರಂದು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದ್ದು, ಮುರುಘಾ ಮಠದ ಹಾಸ್ಟೆಲ್‌ನ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರಿಂದ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು.ಇದನ್ನೂ ಓದಿ: ಬಸ್‌ಗೆ ಬೈಕ್ ಅಡ್ಡಬಂದಿದ್ದಕ್ಕೆ ಡ್ರೈವರ್, ನಿರ್ವಾಹಕನ ಜೊತೆ ಬೈಕ್ ಸವಾರನ ಹೊಡೆದಾಟ

    ಅದೇ ವರ್ಷ ಆ.27ರಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, 2022ರ ಸೆ.01 ರಂದು ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ ಬಂಧನಕ್ಕೊಳಗಾಗಿದ್ದರು. ಬಳಿಕ ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಮುರುಘಾಶ್ರೀ ವಿರುದ್ಧ 2022ರ ಅ.13 ರಂದು ಮಠದ ಅಡುಗೆ ಸಹಾಯಕಿಯಿಂದ ಮತ್ತೊಂದು ದೂರು ದಾಖಲಾಗಿತ್ತು. ಆ ಕೇಸಲ್ಲಿ ತನ್ನಿಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆಯೂ ಲೈಂಗಿಕ ಕಿರುಕುಳ ನೀಡಿರುವುದಾಗಿಯೂ ಎಂದು ಕೂಡ ಉಲ್ಲೇಖಿಸಿದ್ದರು

    ಈ ವೇಳೆ ಎ1 ಮುರುಘಾಶ್ರೀ, ಎ2 ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ, ಎ6 ಮುರುಘಾಶ್ರೀ ಸಹಾಯಕ ಮಹಾಲಿಂಗ, ಎ7 ಅಡುಗೆಭಟ್ಟ ಕರಿಬಸಪ್ಪ ವಿರುದ್ದ ಕೇಸ್ ದಾಖಲಾಗಿದ್ದು, ಸಂಪೂರ್ಣ ತನಿಖೆ ನಡೆಸಿದ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ಹಾಗೂ ಚಿತ್ರದುರ್ಗ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದ ತಂಡವು 2022ರ ಅ.27 ರಂದು 694 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಲ್ಲಿ 347 ಪುಟಗಳ ಎ ಮತ್ತು ಬಿ ಎಂದು ಎರಡು ಸೆಟ್ ಚಾರ್ಜ್ ಶೀಟ್ ಸಲ್ಲಿಸಿದ್ದರು.

    ಇನ್ನೂ 2023ರ ಜ.10ಕ್ಕೆ ದಾಖಲಾದ 2ನೇ ಪೋಕ್ಸೊ ಪ್ರಕರಣದಲ್ಲಿ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು 761 ಪುಟಗಳ ಚಾರ್ಜ್‌ಶೀಟ್‌ನ್ನು ಸಲ್ಲಿಸಿದ್ದರು. ಇಷ್ಟೆಲ್ಲ ಸಾಕ್ಷ್ಯಾಧಾರ ಹಾಗೂ ಚಾರ್ಜ್‌ಶೀಟ್‌ ಮೇಲೆ ಚಿತ್ರದುರ್ಗ ನ್ಯಾಯಾಲಯ ವಿಚಾರಣೆ ನಡೆಸಿತ್ತು. ವಿಚಾರಣೆ ನಡಯುವಾಗಲೇ 2023ರ ನ.8 ರಂದು ಹೈಕೋರ್ಟ್ ನಿಂದ ಮುರುಘಾಶ್ರೀಗೆ ಷರತ್ತುಬದ್ಧ ಜಾಮೀನು ಮಂಜೂರಾಗಿತ್ತು. ನ.16ರಿಂದು ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದರು.ಇದನ್ನೂ ಓದಿ: ಫೇಕ್ ಷೇರು ಮಾರ್ಕೆಟ್ ವೆಬ್‌ಸೈಟ್‌ ಮಾಡಿ ಕೊಟ್ಯಂತರ ರೂ. ವಂಚನೆ – 8 ಸೈಬರ್ ವಂಚಕರು ಅರೆಸ್ಟ್‌

    2ನೇ ಪೋಕ್ಸೋ ಕೇಸಿನಲ್ಲಿ ಜಾಮೀನು ಪಡೆಯದ ಹಿನ್ನೆಲೆಯಲ್ಲಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹಿನ್ನೆಲೆ ಪುನಃ ನ.20ರಂದು ಮಧ್ಯಾಹ್ನ ಮುರುಘಾಶ್ರೀ ಮತ್ತೆ ಬಂಧನಕ್ಕೊಳಗಾದರು. ಬಳಿಕ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಆಗ ನ.20 ಸಂಜೆ ವೇಳೆಗೆ ಹೈಕೋರ್ಟ್ ಸೂಚನೆ ಮೇರೆಗೆ ಅಂದು ಬಿಡುಗಡೆ ಭಾಗ್ಯ ಸಿಕ್ಕಿತ್ತು.

    ಆಗ ಸಂತ್ರಸ್ತೆಯರು ಮುರುಘಾಶ್ರೀಗಳ ಜಾಮೀನು ರದ್ದತಿ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋದ ಹಿನ್ನೆಲೆಯಲ್ಲಿ ಮುಖ್ಯ ಸಾಕ್ಷ ವಿಚಾರಣೆ ಪೂರ್ಣ ಆಗುವವರೆಗೆ ಮುರುಘಾಶ್ರೀ ಬಂಧನದಲ್ಲಿಡುವಂತೆ ಸುಪ್ರಿಂ ಕೋರ್ಟ್ ಆದೇಶ ಮಾಡಿತ್ತು. ಹೀಗಾಗಿ 2024ರ ಮೇ.27 ರಂದು ಕೋರ್ಟ್ ಎದುರು ಶರಣಾದ ಮುರುಘಾಶ್ರೀಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶಿಸಿತ್ತು.

    ಇಂದಿಗೆ ಸಂತ್ರಸ್ತೆಯರಿಬ್ಬರು ಸೇರಿದಂತೆ 13 ಜನರ ಸಾಕ್ಷ ವಿಚಾರಣೆ ಅಂತ್ಯವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಆದೇಶದಂತೆ ಮುರುಘಾಶ್ರೀಗೆ ಇಂದು ಬಿಡುಗಡೆ ಭಾಗ್ಯ ಸಿಕ್ಕಿದೆ. ಇನ್ನು ಕೋರ್ಟ್ ಆದೇಶದಂತೆ ಬಿಡುಗಡೆಯಾದ ಮುರುಘಾಶ್ರೀ ಹೈಕೋರ್ಟ್ ಷರತ್ತಿನ ಅನ್ವಯ ಚಿತ್ರದುರ್ಗ ನಗರದಲ್ಲಿ ನೆಲೆಸದೇ ದಾವಣಗೆರೆಯ (Davanagere) ಶಿವಯೋಗ ಮಂದಿರಕ್ಕೆ ತೆರಳಿದರು.

    ಇನ್ನು ಮುರುಘಾಶ್ರೀ ಪರ ಹೈಕೋರ್ಟ್ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದ್ದರು. ಇವರಿಗೆ ಚಿತ್ರದುರ್ಗದ ಮುರುಘಾ ಮಠದ ವಕೀಲರಾದ ಕೆನ್ ವಿಶ್ವನಾಥಯ್ಯ, ಉಮೇಶ್ ಹಾಗೂ ಪ್ರತಾಪ್ ಜೋಗಿ ಸಾಥ್ ನೀಡಿದ್ದರು. ಈ ವೇಳೆ ಮುರುಘಾಶ್ರೀ ಬೆಂಬಲಿಗರಾದ ಜಿತೇಂದ್ರ, ವಕೀಲ ಪ್ರತಾಪ್, ಶಿಷ್ಯರಾದ ಬಸವಪ್ರಭು ಶ್ರೀ ಸೇರಿದಂತೆ ಮುರುಘಾಶ್ರೀ ಬೆಂಬಲಿಗರು ಇದ್ದರು.ಇದನ್ನೂ ಓದಿ: ಮೈಕ್ರೋRNA ಆವಿಷ್ಕಾರ – ವಿಕ್ಟರ್‌, ಗ್ಯಾರಿಗೆ ನೊಬೆಲ್‌ ಪುರಸ್ಕಾರ

  • ಬಿಎಸ್‌ವೈ ವಿರುದ್ಧ ಪೋಕ್ಸೊ ಕೇಸ್- ಪ್ರಕರಣದ ತನಿಖಾಧಿಕಾರಿಯಾಗಿ ಪುನೀತ್ ನೇಮಕ

    ಬಿಎಸ್‌ವೈ ವಿರುದ್ಧ ಪೋಕ್ಸೊ ಕೇಸ್- ಪ್ರಕರಣದ ತನಿಖಾಧಿಕಾರಿಯಾಗಿ ಪುನೀತ್ ನೇಮಕ

    ಬೆಂಗಳೂರು: ಯಡಿಯೂರಪ್ಪ (BS Yediyurappa) ವಿರುದ್ಧದ ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಯಾಗಿ ಪುನೀತ್ ಅವರನ್ನು ನೇಮಕ ಮಾಡಲಾಗಿದೆ.

    ಸಿಐಡಿ ವರ್ಗಾವಣೆ ಬಳಿಕ ಡಿವೈಎಸ್ಪಿ ಪೃಥ್ವಿ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದರು. ಈಗ ಪೃಥ್ವಿ ಸಿಐಡಿಯಿಂದ (CID) ವರ್ಗಾವಣೆ ಹಿನ್ನೆಲೆ ಪ್ರಕರಣದ ತನಿಖಾಧಿಕಾರಿಯಾಗಿ ಡಿವೈಎಸ್‌ಪಿ ಪುನೀತ್ ನೇಮಕಗೊಂಡಿದ್ದಾರೆ. ಸಿಐಡಿ ಡಿವೈಎಸ್‌ಪಿ ಪುನೀತ್ ಅವರು ಬಿಎಸ್ ಯಡಿಯೂರಪ್ಪ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: ಟಿಡಿಪಿಯ ಸೂಪರ್‌ ಸಿಕ್ಸ್‌ ಗ್ಯಾರಂಟಿ ಘೋಷಣೆ ಜಾರಿಗೆ ಬೇಕು 60 ಸಾವಿರ ಕೋಟಿ!

    ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪವನ್ನು ಬಿಎಸ್ ಯಡಿಯೂರಪ್ಪ ಎದುರಿಸುತ್ತಿದ್ದು, ಪ್ರಕರಣ ದಾಖಲಾಗಿ ಮೂರು ತಿಂಗಳ ಬಳಿಕ ಇಂದು ಸಿಐಡಿ ಮುಂದೆ ಹಾಜರಾಗಿದ್ದಾರೆ. ಮಾರ್ಚ್ 14 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಹಿಂದಿನಿಂದ ಎಕ್ಸ್‌ಪ್ರೆಸ್ ರೈಲಿಗೆ ಗುದ್ದಿದ ಗೂಡ್ಸ್ ರೈಲು – ಐವರು ದುರ್ಮರಣ, 25 ಮಂದಿಗೆ ಗಾಯ

  • ಮುರುಘಾ ಶ್ರೀಗೆ ಮೇ 27ರವರೆಗೆ ನ್ಯಾಯಾಂಗ ಬಂಧನ

    ಮುರುಘಾ ಶ್ರೀಗೆ ಮೇ 27ರವರೆಗೆ ನ್ಯಾಯಾಂಗ ಬಂಧನ

    ಚಿತ್ರದುರ್ಗ: ಸುಪ್ರೀಂ ಕೋರ್ಟ್ (Supreme Court) ಆದೇಶದಂತೆ ಇಂದು ಒಂದನೇ ಅಪರ ಮತ್ತು ಜಿಲ್ಲಾ ಸೆಷನ್ಸ್ ನ್ಯಾಯಾಧೀಶರ ಮುಂದೆ ಶರಣಾಗಿದ್ದ ಮುರುಘಾ ಶ್ರೀಗೆ (Murugha Shri) ಮೇ 27ರವರೆಗೆ ಕೋರ್ಟ್ ನ್ಯಾಯಾಂಗ ಬಂಧನ (Judicial Custody) ವಿಧಿಸಿದೆ.

    ಪೋಕ್ಸೊ ಕೇಸಲ್ಲಿ (POCSO Case) ಸತತ ಒಂದು ವರ್ಷ ಜೈಲು ಸೇರಿದ್ದ ಮುರುಘಾ ಶ್ರೀಗೆ 7 ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಅದನ್ನು ಪ್ರಶ್ನಿಸಿ ಮಠದ ಭಕ್ತ ಹಾಗೂ ಮಾಜಿ ಸಚಿವ ಹೆಚ್ ಏಕಾಂತಯ್ಯ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ – ಆರೋಪಿ ಕಾಲಿಗೆ ಗುಂಡೇಟು

    ಇನ್ನು ಈ ಕೇಸ್‌ನ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುರುಘಾ ಶ್ರೀಗೆ ಮಂಜೂರಾಗಿದ್ದ ಜಾಮೀನನ್ನು ರದ್ದುಗೊಳಿಸಿ ಆದೇಶಿಸಿದ್ದು, ಒಂದು ವಾರದೊಳಗೆ ಕೋರ್ಟ್ ಮುಂದೆ ಹಾಜಾರಾಗುವಂತೆ ಸೂಚಿಸಿತ್ತು. ಹೀಗಾಗಿ ಇಂದು ದಾವಣಗೆರೆಯಿಂದ ನೇರವಾಗಿ ಚಿತ್ರದುರ್ಗದ ಒಂದನೇ ಅಪರ ನ್ಯಾಯಾಲಯಕ್ಕೆ ಮುರುಘಾ ಶ್ರೀ ಹಾಜರಾಗಿದ್ದು, ಸತತ ಒಂದು ಗಂಟೆ ಕಾಲ ಕೋರ್ಟ್ ಆವರಣದಲ್ಲೇ ಕಾದು ಕುಳಿತಿದ್ದರು. ಬಳಿಕ ನ್ಯಾಯಾಧೀಶರ ಮುಂದೆ ಹಾಜರಾದ ಮುರುಘಾ ಶ್ರೀ ಕೇಸ್‌ನ ವಿಚಾರಣೆಯನ್ನು ಮೇ 27ಕ್ಕೆ ನಿಗದಿಪಡಿಸಿರುವ ಒಂದನೇ ಅಪರ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಅಲ್ಲಿಯವರೆಗೆ ಮುರುಘಾ ಶ್ರೀ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಇದನ್ನೂ ಓದಿ: ಅಮಿತ್‌ ಶಾ ಫೇಕ್‌ ವಿಡಿಯೋ ಕೇಸ್‌ – ರೇವಂತ್‌ ರೆಡ್ಡಿಗೆ ಸಮನ್ಸ್‌, ಓರ್ವ ಕಾಂಗ್ರೆಸ್‌ ಕಾರ್ಯಕರ್ತ ಅರೆಸ್ಟ್‌

    ಈ ವೇಳೆ ಕೋರ್ಟ್ ಆವರಣದಲ್ಲಿ ಭಾರೀ ಬಿಗಿ ಭದ್ರತೆ ಕೈಗೊಂಡಿದ್ದ ಪೊಲೀಸರು ಮುರುಘಾ ಶ್ರೀಯನ್ನು ವಶಕ್ಕೆ ಪಡೆದು, ಜಿಲ್ಲಾಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಸಿದರು. ಇಸಿಜಿ ಹಾಗು ಬಿಪಿ ಪರೀಕ್ಷೆ ನಡೆಸಿ ವೈದ್ಯರ ವರದಿ ಬಳಿಕ, ಮುರುಘಾ ಶ್ರೀಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಈ ವೇಳೆ ಮುರುಘಾ ಮಠದ ಉಸ್ತುವಾರಿ ಬಸವಪ್ರಭು ಶ್ರೀ, ಹಾವೇರಿಯ ಶಾಂತಲಿಂಗ ಶ್ರೀ, ಮುರುಘಾಶ್ರೀ ಆಪ್ತ ಜಿತೇಂದ್ರ, ವಕೀಲ ಪ್ರತಾಪ್ ಜೋಗಿ ಹಾಜರಿದ್ದರು. ಇದನ್ನೂ ಓದಿ: ಯಾದಗಿರಿಯಲ್ಲಿ ವಿಪರೀತ ಬಿಸಿಲಿಗೆ ವೃದ್ಧೆ ಸಾವು

  • ಹೆಂಡ್ತಿ ಸಹಾಯದಿಂದ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

    ಹೆಂಡ್ತಿ ಸಹಾಯದಿಂದ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

    ಧಾರವಾಡ: ತನ್ನ ಹೆಂಡತಿ ಸಹಾಯದಿಂದಲೇ ಪಕ್ಕದ ಮನೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನ ಬಾವಿ ಗ್ರಾಮದಲ್ಲಿ ನಡೆದಿದೆ.

    ಕಾಮುಕ ಮೈಲಾರಪ್ಪ ಚಿಕ್ಕುಂಬಿ ಅದೇ ಗ್ರಾಮದ ತನ್ನ ಪಕ್ಕದ ಮನೆಯ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ಕೃತ್ಯಕ್ಕೆ ಅವನ ಹೆಂಡತಿ ಲಕ್ಷ್ಮೀ ಕೂಡ ಸಹಾಯ ಮಾಡಿದ್ದಾಳೆ ಎಂದು ಆರೋಪಿಸಿ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ (Dharwad Rural Police) ಪೋಕ್ಸೊ ಕಾಯ್ದೆಯಡಿ (POCSO Act) ಕೇಸ್ ದಾಖಲಾಗಿದೆ. ಇದನ್ನೂ ಓದಿ: ಸಾಹಿತ್ಯ ಸಮ್ಮೇಳನ ವಿರೋಧಿಸಿ ಬೆಂಗಳೂರಲ್ಲಿ ಜನಸಾಹಿತ್ಯ ಸಮ್ಮೇಳನ: ಪ್ರೊ.ಪುರುಷೋತ್ತಮ್‌ ಬಿಳಿಮಲೆ

    Crime

    ಮೈಲಾರಪ್ಪ ಚಿಕ್ಕುಂಬಿ ತನ್ನ ಪಕ್ಕದ ಮನೆಯಲ್ಲಿದ್ದ 17ರ ಬಾಲಕಿ ಮೇಲೆ ಲೈಂಗಿಕ ತೃಷೆ ತೀರಿಸಿಕೊಳ್ಳಲು ತನ್ನ ಮನೆಗೆ ಕರೆದುಕೊಂಡು ಬರುವಂತೆ ಪತ್ನಿ ಲಕ್ಷ್ಮೀಗೆ ಹೇಳಿದ್ದಾನೆ. ನಂತರ ಲಕ್ಷ್ಮೀ ಆ ಬಾಲಕಿಯನ್ನ ಪುಸಲಾಯಿಸಿ ತನ್ನ ಮನೆಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಲು ಸಹಾಯ ಮಾಡಿದ್ದಾಳೆ. ಇದನ್ನೂ ಓದಿ: ಶೀಘ್ರವೇ ಸಂಪುಟ ವಿಸ್ತರಣೆ – ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಚಿವ ಸ್ಥಾನದ ಬಗ್ಗೆ ಸಿಎಂ ಸ್ಪಷ್ಟನೆ

    Stop Rape Crime

    ಈ ವಿಷಯ ತಿಳಿದ ಸಂತ್ರಸ್ತ ಬಾಲಕಿಯ ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ಹೇಳಿಕೆ ಆಧರಿಸಿ ಆರೋಪಿಗಳ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಸದ್ಯ ಪತಿ-ಪತ್ನಿ ಇಬ್ಬರೂ ಪರಾರಿಯಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k