Tag: ಪೋಕ್ಸೋ

  • ಜೈಲಿನಲ್ಲಿ ರಾತ್ರಿ ಕಳೆದ ಮುರುಘಾ ಶ್ರೀಗಳು

    ಜೈಲಿನಲ್ಲಿ ರಾತ್ರಿ ಕಳೆದ ಮುರುಘಾ ಶ್ರೀಗಳು

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳು ರಾತ್ರಿಯಿಡೀ ನಿದ್ರೆ ಇಲ್ಲದೇ ಜೈಲಿನಲ್ಲಿ ಕಳೆದರು.

    muruga shree

    ಗುರುವಾರ ರಾತ್ರಿ ಶ್ರೀಗಳು ನ್ಯಾಯಾಂಗ ಬಂಧನಕ್ಕೊಳಗಾದರು. ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆ ತಡರಾತ್ರಿ ಜೈಲಿಗೆ ಸೇರಿದರು. ಇದೀಗ ತಡರಾತ್ರಿಯಿಂದ ಜೈಲಿನಲ್ಲಿರುವ ಶ್ರೀಗಳು ರಾತ್ರಿಯಿಡೀ ನಿದ್ದೆ ಇಲ್ಲದೇ, ಚಿಂತಾಕ್ರಾಂತರಾಗಿದ್ದರು. ಬೆಳಗ್ಗೆಯಾದ ಕೂಡಲೇ ವಿಶ್ರಾಂತಿ ಮುಗಿಸಿ ಎದ್ದು, ನಂತರ ಧ್ಯಾನದಲ್ಲಿ ಸ್ವಾಮೀಜಿ ನಿರತರಾಗಿದ್ದರು. ಬಳಿಕ ಇತರ ಕೈದಿಗಳಿಗೆ ನೀಡುವಂತೆ ಜೈಲು ಸಿಬ್ಬಂದಿ ಶ್ರೀಗಳಿಗೂ ಸಹ ಚಹಾ ನೀಡಿದರು. ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

    muruga shree 1

    ತಡರಾತ್ರಿ 2:50ರ ಸುಮಾರಿಗೆ ಬಂಧಿತರಾದ ಶ್ರೀಗಳು ಬೆಳಗ್ಗೆ 6 ಗಂಟೆಗೆ ಎದ್ದರು. ನಂತರ ಮುರುಘಾಶ್ರೀಗೆ ಮೆಡಿಸಿನ್ ಮತ್ತು ಟೂತ್ ಪೇಸ್ಟ್, ಬ್ರಶ್ ಅನ್ನು ವಕೀಲರು ನೀಡಿ ಬಂದರು. ಈ ಹಿಂದೆ ಕಾರಾಗೃಹದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದ ಮುರುಘಾಶ್ರೀ ಮಧ್ಯರಾತ್ರಿಯೇ ಬಂಧಿಯಾಗಿರುವ ವಿಚಾರ ತಿಳಿದು ಕಾರಾಗೃಹ ಸಿಬ್ಬಂದಿಯೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಪೋಕ್ಸೊ ಪ್ರಕರಣ – ಮುರುಘಾ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

    ನ್ಯಾಯಾಂಗ ಬಂಧನ
    ಗುರುವಾರ ತಡರಾತ್ರಿ ಮಠದಿಂದ ಕಾವಿ ಕಳಚಿ ಬಿಳಿ ವಸ್ತ್ರ ಧರಿಸಿ ಶ್ರೀಗಳು ಹೊರಬಂದಿದ್ದರು. ನಂತರ ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ನಸುಕಿನ 2.25ಕ್ಕೆ ಆಸ್ಪತ್ರೆಯಿಂದ ಹೊರಟ ಪೊಲೀಸರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಶರಣರ ಪರ ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿ, ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜೈಲಿಗಟ್ಟಿದ್ದ ಮಹಿಳೆಗೆ ಚಾಕು ಇರಿದು, ಅಪ್ರಾಪ್ತ ಮಗಳೊಂದಿಗೆ ಆರೋಪಿ ಪರಾರಿ

    ಜೈಲಿಗಟ್ಟಿದ್ದ ಮಹಿಳೆಗೆ ಚಾಕು ಇರಿದು, ಅಪ್ರಾಪ್ತ ಮಗಳೊಂದಿಗೆ ಆರೋಪಿ ಪರಾರಿ

    ಧಾರವಾಡ: ಪೋಕ್ಸೋ ಕೇಸ್‌ನಲ್ಲಿ ಕಳೆದ ವರ್ಷ ಜೈಲು ಸೇರಿದ್ದ ಆರೋಪಿ ಜಾಮೀನಿನ ಮೇಲೆ ಹೊರ ಬಂದು, ಕೇಸ್ ದಾಖಲಿಸಿದ್ದ ಮಹಿಳೆಗೆ ಚಾಕು ಇರಿದಿದ್ದಾನೆ. ಮಾತ್ರವಲ್ಲದೇ ಮಹಿಳೆಯ ಅಪ್ರಾಪ್ತ ಮಗಳನ್ನೂ ಆತ ಹೊತ್ತೊಯ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

    ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಪರಶುರಾಮ್ ಲಮಾಣಿ ಕಳೆದ ವರ್ಷ ಪೋಕ್ಸೋ ಕೇಸ್‌ನಲ್ಲಿ ಜೈಲು ಸೇರಿದ್ದ. ಈ ವರ್ಷ ಏಪ್ರಿಲ್‌ನಲ್ಲಿ ಜಾಮೀನಿನ ಮೇಲೆ ಆತ ಹೊರ ಬಂದಿದ್ದ. ಶುಕ್ರವಾರ ರಾತ್ರಿ ಪರಶುರಾಮ್ ತನ್ನ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದ ಮಹಿಳೆ ಜೀಜಾಬಾಯಿಗೆ ಚಾಕು ಇರಿದಿದ್ದಾನೆ.

    ಕಳೆದ ವರ್ಷ ಪರಶುರಾಮ್ ಜೀಜಾಬಾಯಿಯ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ್ದ. ಹೀಗಾಗಿ ಜೀಜಾಬಾಯಿ ಪರಶುರಾಮ್ ಮೇಲೆ ಪೋಕ್ಸೋ ಕೇಸ್ ದಾಖಲಿಸಿದ್ದರು. ಈ ಸೇಡನ್ನು ತೀರಿಸಿಕೊಳ್ಳಲು ಪರಶುರಾಮ್ ಮಹಿಳೆ ಮನೆಗೆ ಹೋಗಿದ್ದು, ಕೃತ್ಯ ಎಸಗಿ ಮಗಳನ್ನೂ ಕರೆದುಕೊಂಡು ಪರಾರಿಯಾಗಿದ್ದಾನೆ. ಇದನ್ನೂ ಓದಿ: ಉತ್ತರ ಪ್ರದೇಶದ ಜೈಲು ನಿಯಮಗಳಲ್ಲಿ ಬದಲಾವಣೆ – ಏನಿದೆ ಹೊಸ ರೂಲ್ಸ್?

    police jeep

    ಪರಶುರಾಮ್ ಹಾಗೂ ಜೀಜಾಬಾಯಿ ಮಗಳ ನಡುವೆ ಪ್ರೇಮವಿತ್ತು. ಮಗಳು ಅಪ್ರಾಪ್ತೆ ಇದ್ದ ಕಾರಣ ಆಕೆಯ ರಕ್ಷಣೆಗೆ ಜೀಜಾಬಾಯಿ ನಿಂತಿದ್ದರು. ಆದರೆ ಜೀಜಾಬಾಯಿಗೆ ಚಾಕು ಇರಿಯಲು ಪರಶುರಾಮ್‌ಗೆ ಮಗಳೂ ಸಾತ್ ನೀಡಿದ್ದಳು ಎಂಬುದು ತಿಳಿದುಬಂದಿದೆ. ಇದನ್ನೂ ಓದಿ: ಎಲ್ಲ ಶಾಸಕರಿಗೆ 50 ಲಕ್ಷ, ಅಡ್ಡ ಮತಕ್ಕೆ ಕಾರಣವೇನು? – ಹಳೇ ಕಥೆ ಬಿಚ್ಚಿಟ್ಟ ಶ್ರೀನಿವಾಸ್ ಗೌಡ

    ಈ ಸಂಬಂಧ ಜೀಜಾಬಾಯಿ ಧಾರವಾಡ ಉಪನಗರ ಠಾಣೆಯಲ್ಲಿ ಪರಶುರಾಮ್ ಮೇಲೆ ದೂರನ್ನು ನೀಡಿದ್ದಾರೆ. ಕೊಲೆ ಪ್ರಯತ್ನ ಹಾಗೂ ಮಗಳನ್ನು ಅಪಹರಣ ಮಾಡಿರುವುದಾಗಿ ದೂರು ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2 ತಂಡಗಳನ್ನು ರಚಿಸಿ, ಆರೋಪಿಯನ್ನು ಶೀಘ್ರವೇ ಪತ್ತೆ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತ ಲಾಬುರಾಮ್ ತಿಳಿಸಿದ್ದಾರೆ.

  • ಅಪ್ರಾಪ್ತ ಹುಡುಗಿಯ ಕೈ ಹಿಡಿದು ಸುಂದರವಾಗಿವೆ ಅನ್ನೋದು ಲೈಂಗಿಕ ಅಪರಾಧವಲ್ಲ – ಹೈಕೋರ್ಟ್

    ಅಪ್ರಾಪ್ತ ಹುಡುಗಿಯ ಕೈ ಹಿಡಿದು ಸುಂದರವಾಗಿವೆ ಅನ್ನೋದು ಲೈಂಗಿಕ ಅಪರಾಧವಲ್ಲ – ಹೈಕೋರ್ಟ್

    ನವದೆಹಲಿ: ಅಪ್ರಾಪ್ತ ಹುಡುಗಿಯ ಕೈ ಹಿಡಿದುಕೊಂಡು ಸುಂದರವಾಗಿವೆ ಎಂದು ಹೇಳಿದರೆ, ಅದು ಯಾವುದೇ ಲೈಂಗಿಕ ಉದ್ದೇಶದಿಂದ ಕೂಡಿಲ್ಲದೇ ಇದ್ದರೆ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯನ್ವಯ ಅದು ಲೈಂಗಿಕ ದೌರ್ಜನ್ಯವಾಗುವುದಿಲ್ಲ ಎಂದು ಮೇಘಾಲಯ ಹೈಕೋರ್ಟ್ ಹೇಳಿದೆ.

    crime

    ಕಳೆದ ಮೇ 26ರಂದು ಘಟನೆಗೆ ಸಂಬಂಧಿಸಿದ ಅರ್ಜಿಯೊಂದನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಬ್ಲ್ಯೂ. ದಿಯೆಂಗ್ಡೋಹ್, ಅಂತಹ ಪ್ರಕರಣಗಳಲ್ಲಿ ಆರೋಪಿ ಲೈಂಗಿಕ ಉದ್ದೇಶ ಹೊಂದಿಲ್ಲದೆ ಇದ್ದರೆ ಲೈಂಗಿಕ ದೌರ್ಜನ್ಯ ಎಂದು ಹೇಳಲಾಗುವುದಿಲ್ಲ ಎಂದು ತೀರ್ಪು ನೀಡಿದ್ದಾರೆ. ಇದನ್ನೂ ಓದಿ: ಗಂಗಾ ನದಿಯಲ್ಲಿ ಮೀನಿನ ವೈವಿಧ್ಯತೆ ಶೇ.36 ರಷ್ಟು ಹೆಚ್ಚಳ

    ಏನಿದು ಘಟನೆ?: ಒಂಬತ್ತು ವರ್ಷದ ಸಂತ್ರಸ್ತ ಬಾಲಕಿಯ ಬಳಿ 55 ವರ್ಷದ ಅಂಗಡಿ ಮಾಲೀಕನೊಬ್ಬ ನೀರು ತರಲು ಕೇಳಿದ್ದಾನೆ. ಹುಡುಗಿ ನೀರು ತಂದುಕೊಟ್ಟಾಗ ಆರೋಪಿಯು ಆಕೆಯ ಕೈ ಹಿಡಿದುಕೊಂಡು ನೇವರಿಸಿದ್ದಾನೆ. ನಂತರ ಆಕೆಯ ಕೈಗಳು ಸುಂದರವಾಗಿವೆ ಎಂದು ಹೇಳಿದ್ದಾನೆ. ಇದರಿಂದ ಸಂತ್ರಸ್ತೆ ತಕ್ಷಣವೇ ಸ್ಥಳದಿಂದ ತೆರಳಿದ್ದು ತನ್ನ ತಾಯಿಗೆ ಘಟನೆ ಬಗ್ಗೆ ತಿಳಿಸಿದ್ದಾಳೆ. ನಂತರ ತಾಯಿಯೊಂದಿಗೆ ತೆರಳಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ರಜೆ ಬೇಕೆಂದ್ರೆ ಲಾಡ್ಜ್‌ಗೆ ಬನ್ನಿ – ಮಹಿಳಾ ನೌಕರರಿಗೆ ಎಸ್‌ಪಿ ಕಚೇರಿ ಅಧಿಕಾರಿಯಿಂದ ಕಿರುಕುಳ

    crime

    ಆರೋಪಿ ವಿರುದ್ಧ IPC ಸೆಕ್ಷನ್ 354 (ಮಹಿಳೆಯರ ಮೇಲಿನ ದೌರ್ಜನ್ಯ), 354 A (ಲೈಂಗಿಕ ಕಿರುಕುಳ), ಪೋಕ್ಸೋ ಕಾಯ್ದೆ ಸೆಕ್ಷನ್- 7 (ಲೈಂಗಿಕ ದೌರ್ಜನ್ಯ) ಮತ್ತು ಸೆಕ್ಷನ್ 9 (ಉಲ್ಭಣಗೊಂಡ ಲೈಂಗಿಕ ದೌರ್ಜನ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದನ್ನೂ ಓದಿ; 7 ಬಾರಿ ಗುಂಡೇಟು ತಿಂದಿದ್ದ ಅಧಿಕಾರಿ UPSCಯಲ್ಲಿ ಪಾಸ್

    ಈ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ದಿಯೆಂಗ್ಡೋಹ್, ಘಟನೆ ಹಗಲು ಹೊತ್ತಿನಲ್ಲೇ ನಡೆದಿದೆ. ಅರ್ಜಿದಾರರು ಸಹ ಬಾಲಕಿಯ ಕೈಗಳನ್ನು ಕೆಲ ಸೆಕೆಂಡುಗಳ ಕಾಲ ಹಿಡಿದಿಟ್ಟುಕೊಂಡಿದ್ದಾರೆ. ಆದರೆ ಆ ಭಾಗವು ಲೈಂಗಿಕ ಉದ್ದೇಶದಿಂದ ಕೂಡಿದೆ ಎಂದು ಹೇಳಲಾಗುವುದಿಲ್ಲ. ಇದರಲ್ಲಿ ಲೈಂಗಿಕವಲ್ಲದ ಉದ್ದೇಶವನ್ನೂ ಊಹಿಸಬಹುದು ಎಂದು ಹೇಳಿದೆ. ಆದ್ದರಿಂದ ಆರೋಪಿ ವಿರುದ್ಧ ಪೋಕ್ಸೊ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ ಎಂದು ತೀರ್ಪು ನೀಡಿದ್ದಾರೆ.

    CRIME

    ಆರೋಪಿಗಳ ಪರವಾಗಿ ಹಿರಿಯ ವಕೀಲರಾದ ಎಸ್.ಸಿ.ಚಕ್ರವರ್ತಿ, ಎ.ಬರುವಾ ವಾದ ಮಂಡಿಸಿದರೆ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಬಿ.ಭಟ್ಟಾಚಾರ್ಯ ಮತ್ತು ಸರ್ಕಾರಿ ವಕೀಲ ಆರ್.ಕಾಲ್ನಿ ಪ್ರತಿವಾದಿಯಾಗಿದ್ದರು.

  • ಪ್ರೇಮ ನಿವೇದನೆಯನ್ನ ಒಪ್ಪದ್ದಕ್ಕೆ 14 ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

    ಪ್ರೇಮ ನಿವೇದನೆಯನ್ನ ಒಪ್ಪದ್ದಕ್ಕೆ 14 ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

    ಚೆನ್ನೈ: ಪ್ರೇಮ ನಿವೇದನೆಯನ್ನು ಒಪ್ಪಲಿಲ್ಲವೆಂದು ಯುವಕನೊಬ್ಬ ವಿದ್ಯಾರ್ಥಿನಿಯನ್ನು 14 ಬಾರಿ ಇರಿದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

    ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಚಾಕುವಿನಿಂದ 14 ಬಾರಿ ಇರಿದಿದ್ದಾನೆ. ಆರೋಪಿಯನ್ನು ಕೇಶವನ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ಹುಡುಕಲು ಮೂರು ವಿಶೇಷ ತಂಡಗಳನ್ನು ರಚಿಸಿಕೊಂಡಿದ್ದರು. ಆದರೆ ಅವನು ಶವವಾಗಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಪಠ್ಯದಲ್ಲಿರುವ ತಮ್ಮ ಕವಿತೆ ವಾಪಸ್ ಪಡೆದ ಮತ್ತೊಬ್ಬ ಸಾಹಿತಿ 

    couple

    ನಡೆದಿದ್ದೇನು?
    ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ವಿದ್ಯಾರ್ಥಿನಿ 11ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ಆಕೆಯನ್ನು ಹಿಂಬಾಲಿಸಿಕೊಂಡು ರೈಲ್ವೇ ಮೇಲ್ಸೇತುವೆ ಬಳಿ ತಡೆದಿದ್ದಾನೆ.

    ಈ ವೇಳೆ ಕೇಶವನ್ ಸಂತ್ರಸ್ತೆಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. ಆದರೆ ಆಕೆ ನಿರಕರಿಸಿದ್ದು, ತಕ್ಷಣ ಅವಳನ್ನು 14 ಬಾರಿ ಚುಚ್ಚಿದ್ದಾನೆ. ಸಹಾಯಕ್ಕಾಗಿ ಸಂತ್ರಸ್ತೆ ಕಿರುಚಿಕೊಂಡಿದ್ದು, ಆರೋಪಿ ಚಾಕನ್ನು ಅಲ್ಲೇ ಎಸೆದು ಓಡಿ ಹೋಗಿದ್ದಾನೆ.

    CRIME 2

    ಸ್ಥಳೀಯರು ಸಂತ್ರಸ್ತೆಯ ದೇಹದಿಂದ ರಕ್ತ ಸುರಿಯುತ್ತಿರುವುದನ್ನು ಗಮನಿಸಿದ್ದು, ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಆಕೆಯನ್ನು ತುರ್ತು ಚಿಕಿತ್ಸೆಗೆ ದಾಖಲಿಸಿಕೊಂಡಿದ್ದಾರೆ. ನಂತರ ಪೊಲೀಸರಿಗೆ ಘಟನೆ ಕುರಿತು ತಿಳಿಸಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಇದು ತಿರುಚ್ಚಿಯ ಪೊತಮೆಟ್ಟುಪಟ್ಟಿ ನಿವಾಸಿ ಕೇಶವನ್ ಮಾಡಿರುವ ಕೃತ್ಯ ಎಂದು ಪತ್ತೆ ಮಾಡಿದ್ದಾರೆ. ಆರೋಪಿಗಾಗಿ ಹುಡುಕಾಟ ನಡೆಸಲು ಪ್ರಾರಂಭಿಸಿದ್ದರು.

    ಘಟನೆ ಕುರಿತು ಟ್ವೀಟ್ ಮಾಡಿದ ಕರೂರಿನ ಕಾಂಗ್ರೆಸ್ ಸಂಸದೆ ಜೋತಿಮಣಿ, ಶಾಲಾ ವಿದ್ಯಾರ್ಥಿನಿಯೊಬ್ಬಳನ್ನು 14 ಬಾರಿ ಇರಿದಿರುವ ಸುದ್ದಿ ಕೇಳಿ ಆಘಾತವಾಯಿತು. ಕೇಶವನ್‍ನನ್ನು ಬಂಧಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ(ಎಸ್‍ಪಿ) ಅವರೊಂದಿಗೆ ಮಾತನಾಡಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: ಭಾರತ, ಪಾಕಿಸ್ತಾನ ಪರಸ್ಪರ ವ್ಯಾಪಾರದಿಂದ ಬಹಳಷ್ಟು ಲಾಭ ಹೊಂದಿದೆ: ಪಾಕ್ ಪ್ರಧಾನಿ 

    ಶವವಾಗಿ ಪತ್ತೆ
    ಮಂಗಳವಾರ ರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಕೇಶವನ್ ಶವವಾಗಿ ಪತ್ತೆಯಾಗಿದ್ದಾನೆ. ಕೇಶವನ್‍ನನ್ನು ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿದಾಗ, ಮನಪ್ಪರೈ ಬಳಿಯ ರೈಲ್ವೆ ಹಳಿಗಳ ಮೇಲೆ ಶವವೊಂದು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಹೋಗಿ ಶವದ ಪಕ್ಕದಲ್ಲಿದ್ದ ಫೋನ್‍ನಲ್ಲಿ ಅವರ ಅಪ್ಪನಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ತಂದೆಯೂ ಅದು ಕೇಶವನ್ ಎಂದು ಗುರುತಿಸಿದ್ದಾರೆ.

    True Love 1024x626 1 e1609323060998

    ಜೈಲು ಸೇರಿದ್ದ ಪ್ರೇಮಿ
    ಜೂನ್ 2021 ರಲ್ಲಿ ಅದೇ ಹುಡುಗಿಯನ್ನು ಕೇಶವನ್ ಅಪಹರಿಸಿದ್ದನು. ಈ ಹಿನ್ನೆಲೆ ಈಗಾಗಲೇ ಅವನ ವಿರುದ್ಧ ಮಕ್ಕಳ ಸಂರಕ್ಷಣಾ ಕಾಯ್ದೆ 2012(ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು. ಕೇಶವನ್ ಇತ್ತೀಚೆಗೆ ಜೈಲಿನಿಂದ ಬಿಡುಗಡೆಗೊಂಡಿದ್ದನು.

  • ಶೌಚಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ 4 ಮಕ್ಕಳ ತಂದೆಯಿಂದ ಅತ್ಯಾಚಾರ

    ಶೌಚಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿ ಮೇಲೆ 4 ಮಕ್ಕಳ ತಂದೆಯಿಂದ ಅತ್ಯಾಚಾರ

    ಜೈಪುರ: ರಾತ್ರಿ ವೇಳೆ ಶೌಚಕ್ಕೆ ತೆರಳಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ನಾಲ್ಕುಮಕ್ಕಳ ತಂದೆಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ಇಲ್ಲಿನ ರಾಜಾಸ್ಥಾನದ ಭರತ್‌ಪುರದಲ್ಲಿ ನಡೆದಿದೆ.

    ರಾತ್ರಿ ವೇಳೆ ಆಕೆ ಮನೆಯಿಂದ ಆಚೆ ಬಂದಂತಹ ಸಂದರ್ಭದಲ್ಲಿ ನೆರೆಯವನೇ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ. ಸಂತ್ರಸ್ತ ಬಾಲಕಿ ತನ್ನ ಪೋಷಕರೊಂದಿಗೆ ಠಾಣೆಗೆ ತೆರಳಿ ದೂರು ದಾಖಲಿಸುವ ವೇಳೆ ಪೊಲೀಸರು ನಿರಾಕರಿಸಿದ್ದಾರೆ. ಇದರಿಂದ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ವರ ಧೋತಿ-ಕುರ್ತಾ ಬದಲು ಶೇರ್ವಾನಿ ಧರಿಸಿದ್ದಕ್ಕೆ ಮದುವೆ ಮನೆಯಾಯ್ತು ರಣರಂಗ

    crime

    ನಂತರ ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಯಲ್ಲಿ ನೆರೆಯವರ ವಿರುದ್ಧ ಅತ್ಯಾಚಾರದ ಆರೋಪದ ಮೇಲೆ ದೂರು ದಾಖಲಿಸಿದ್ದಾರೆ. ರಾತ್ರಿ ವೇಳೆ ನನ್ನ ಅಪ್ರಾಪ್ತ ಮಗಳು ಮಲವಿಸರ್ಜನೆಗೆಂದು ಹೊರ ಹೋಗಿದ್ದಳು, ಈ ವೇಳೆ ನೆರೆಯವರು ಆಕೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಂಗವಿಕಲ ಮಗುವಿಗೆ ಬೋರ್ಡಿಂಗ್ ನಿರಾಕರಿಸಿದ ವಿಮಾನ ನಿಲ್ದಾಣ ಸಿಬ್ಬಂದಿ – ವೀಡಿಯೋ ವೈರಲ್‌

    ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಪಿಗಾಗಿ ಶೋಧ ಆರಂಭಿಸಲಾಗಿದೆ ಎಂದು ತನಿಖಾಧಿಕಾರಿ ಅಜಯ್ ಶರ್ಮಾ ಹೇಳಿದ್ದಾರೆ. 

  • SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡ್ತೀನೆಂದು ವಿದ್ಯಾರ್ಥಿನಿ ಕೆನ್ನೆಗೆ ಮುತ್ತು ಕೊಟ್ಟ ಶಿಕ್ಷಕ!

    SSLC ಪರೀಕ್ಷೆಯಲ್ಲಿ ಹೆಚ್ಚು ಅಂಕ ಬರುವಂತೆ ಮಾಡ್ತೀನೆಂದು ವಿದ್ಯಾರ್ಥಿನಿ ಕೆನ್ನೆಗೆ ಮುತ್ತು ಕೊಟ್ಟ ಶಿಕ್ಷಕ!

    ಹಾವೇರಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಶಿಕ್ಷಕ ಮುತ್ತು ಕೊಟ್ಟು ಅಸಭ್ಯವಾಗಿ ವರ್ತಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಪರಮೇಶ್ ಐರಣಿ (45) ಆರೋಪಿ. ಶಿಕ್ಷಕನಾಗಿ ಕೆಲಸ ಮಾಡುತ್ತಿದ್ದನು. ಈತ 16 ವರ್ಷದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹಾವೇರಿ ಜಿಲ್ಲೆ ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಓಲೈಕೆ ರಾಜಕಾರಣ ಗೊತ್ತಿಲ್ಲ: ಇಬ್ಬರು ಮಾಜಿ ಸಿಎಂಗಳಿಗೆ ಕುಟುಕಿದ  ಬೊಮ್ಮಾಯಿ

    police

    ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾದಾಗಿನಿಂದ ವಿದ್ಯಾರ್ಥಿನಿ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಶಿಕ್ಷಕ. ವಿದ್ಯಾರ್ಥಿನಿ ಪರೀಕ್ಷೆ ಬರೆಯುತ್ತಿದ್ದ ಪರೀಕ್ಷಾ ಕೇಂದ್ರದ ಸುಪರ್ ವೈಸರ್ ಆಗಿದ್ದ ಶಿಕ್ಷಕ ಪರಮೇಶ್. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಹೆಚ್ಚಿಗೆ ಅಂಕಗಳು ಬರುವಂತೆ ಮಾಡುತ್ತೇನೆಂದು, ವಿದ್ಯಾರ್ಥಿನಿ ಕೆನ್ನೆಗೆ ಮುತ್ತುಕೊಟ್ಟು ಅಸಭ್ಯವಾಗಿ ವರ್ತಿಸಿದ್ದನು. ಏಪ್ರೀಲ್ 8ರಂದು ನಡೆದಿದ್ದ‌ ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ:  ಕೊನೆಗೂ ಮದುವೆಯ ವಿಚಾರ ಖಚಿತಪಡಿಸಿದ ಆಲಿಯಾ!

    ಪರಮೇಶ್, ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕನಾಗಿದ್ದನು. ಶಿಕ್ಷಕನ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ತಾಯಿ ಗರ್ಭದಷ್ಟೇ ಭೂಗರ್ಭಕ್ಕೆ ಮಹತ್ವವಿದೆ- ಮಣ್ಣು ಉಳಿಸಿ ಅಭಿಯಾನಕ್ಕೆ ಬೊಮ್ಮಾಯಿ ಚಾಲನೆ

  • ದೊಡ್ಡಪ್ಪನಿಂದ್ಲೇ ಕಂದಮ್ಮನ ಮೇಲೆ ಅತ್ಯಾಚಾರ- ತೀವ್ರ ರಕ್ತಸ್ರಾವದಿಂದ 2 ವರ್ಷದ ಬಾಲೆ ಸಾವು

    ದೊಡ್ಡಪ್ಪನಿಂದ್ಲೇ ಕಂದಮ್ಮನ ಮೇಲೆ ಅತ್ಯಾಚಾರ- ತೀವ್ರ ರಕ್ತಸ್ರಾವದಿಂದ 2 ವರ್ಷದ ಬಾಲೆ ಸಾವು

    ಬೆಂಗಳೂರು: 2 ವರ್ಷದ ಹೆಣ್ಣು ಮಗುವಿನ ಮೇಲೆ ತನ್ನ ದೊಡ್ಡಪ್ಪನೇ ಅತ್ಯಾಚಾರ ಎಸಗಿದ್ದು, ತೀವ್ರ ರಕ್ತಸ್ರಾವದಿಂದ ಮಗು ಮೃತಪಟ್ಟಿರುವ ಘಟನೆ ಆನೆಕಲ್ ತಾಲೂಕಿನಲ್ಲಿ ನಡೆದಿದೆ. ಆರೋಪಿಯನ್ನು ದೀಪು ಎಂದು ಗುರುತಿಸಲಾಗಿದ್ದು, ಸದ್ಯ ಈತನನ್ನು ಪೊಲೀಸರು ಬಂಧಿಸಿದ್ದಾರೆ.

    RAPE STOP

    ಏನಿದು ಘಟನೆ?
    ದೀಪು ಕಳೆದ 10 ದಿನಗಳ ಹಿಂದೆ ದೊಡ್ಡಬಳ್ಳಾಪುರದಿಂದ ತನ್ನ ತಮ್ಮನ 2 ವರ್ಷದ ಹೆಣ್ಣುಮಗಳನ್ನು ಊರಿನಿಂದ ಅತ್ತಿಬೆಲೆಗೆ ಕರೆತಂದಿದ್ದ.  ಅಂತೆಯೇ ಒಂದು ದಿನ ನೆರಳೂರು ಗೇಟ್ ಬಳಿ ಚಿಕನ್ ತರಲು ಸ್ನೇಹಿತನ ಜೊತೆಗೂಡಿ ಮಗುವನ್ನೂ ಕರೆದೊಯ್ದಿದ್ದ. ಮಾರ್ಗಮಧ್ಯದಲ್ಲಿ ಸ್ನೇಹಿತನನ್ನು ಮದ್ಯ ತರಲು ಕಳುಹಿಸಿದ್ದಾನೆ. ಇದೇ ವೇಳೆ ಕಾರಿನಲ್ಲೇ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಈ ಪೈಶಾಚಿಕ ಕೃತ್ಯದಿಂದ ನಲುಗಿದ್ದ ಮಗುವಿನ ಗುಪ್ತಾಂಗದಿಂದ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದೆ. ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್ ಸ್ಫೋಟ- ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ ಸುನೀಲ್ ಕುಮಾರ್

    Attibele police station

    ಅತ್ಯಾಚಾರ ಎಸಗಿದ ಬಳಿಕ ಮಗು ಸ್ತಬ್ಧವಾಗಿದ್ದನ್ನು ಕಂಡು ಆತಂಕಗೊಂಡ ದೀಪು, ಅತ್ತಿಬೆಲೆಯ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಮಗುವಿನ ತಲೆಗೆ ಗಾಯ ಆಗಿದೆ ಎಂದು ಸುಳ್ಳು ಹೇಳಿ ಚಿಕಿತ್ಸೆ ಕೊಡಿಸಲು ಯತ್ನಿಸಿದ್ದಾನೆ. ಆದರೆ ಮಗು ಮೃತಪಟ್ಟಿತ್ತು. ನಂತರ ಸ್ಥಳೀಯ ಪೊಲೀಸ್ ಠಾಣೆಗೆ ತಾನೇ ಹೋಗಿ, ಹಠಾತ್ತನೆ ಕಾರಿನ ಬ್ರೇಕ್ ಹಾಕಿದ್ದರಿಂದ ಬಿದ್ದು ಮಗುವಿನ ತಲೆಗೆ ಪೆಟ್ಟಾಗಿ ಮೃತಪಟ್ಟಿದೆ ಎಂದು ದೂರು ದಾಖಲಿಸಿದ್ದ.

    police 2

    ಇತ್ತ ಈತನ ನಡವಳಿಕೆ ಬಗ್ಗೆ ಪೊಲೀಸರು ಅನುಮಾನಗೊಂಡಿದ್ದು, ಮಗುವಿನ ಮರಣೋತ್ತರ ಪರೀಕ್ಷೆಗೆ ಶಿಫಾರಸು ಮಾಡಿದ್ದರು. ಈಗ ಮಗುವಿನ ಮರಣೋತ್ತರ ಪರೀಕ್ಷೆ ವರದಿ ಬಂದಿದ್ದು, ಮಗುವನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಲಾಗಿದೆ ಎಂಬುದು ಸ್ಪಷ್ಟವಾಗಿದೆ. ಆರೋಪಿ ದೀಪು ಎಂಬಾತನನ್ನು ಪೊಲೀಸರು ಪೋಕ್ಸೋ ಕಾಯ್ದೆಯಡಿ ಬಂಧಿಸಿದ್ದಾರೆ.

  • ಡ್ಯಾನ್ಸ್ ಕಲಿಸುವುದಾಗಿ ಹೇಳಿ ಕ್ಲಾಸ್‍ಗೆ ಕರೆಸಿ ಪ್ರೀತಿಸುಂತೆ ಪಿಡಿಸಿದ ಯುವಕ

    ಡ್ಯಾನ್ಸ್ ಕಲಿಸುವುದಾಗಿ ಹೇಳಿ ಕ್ಲಾಸ್‍ಗೆ ಕರೆಸಿ ಪ್ರೀತಿಸುಂತೆ ಪಿಡಿಸಿದ ಯುವಕ

    ಮಡಿಕೇರಿ: ಡ್ಯಾನ್ಸ್ ಕಲಿಸುವುದಾಗಿ ಹೇಳಿ ಕ್ಲಾಸ್‍ಗೆ ಬಂದ ಯುವತಿಯನ್ನೆ ಪ್ರೀತಿಸುಂತೆ ಪಿಡಿಸಿದ ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

    ಡ್ಯಾನ್ಸ್ ಕಲಿಯಲು ಹೋದ ವಿದ್ಯಾರ್ಥಿನಿ ಯುವಕನೊಬ್ಬ ನನ್ನ ಪೀಡಿಸುತ್ತಿದ್ದಾನೆ ಎಂದು ಪೋಷಕರಿಗೆ ಮಾಹಿತಿ ನೀಡಿದ್ದಾಳೆ. ಈ ಹಿನ್ನೆಲೆ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದ ಮೇಲೆ ಡ್ಯಾನ್ಸ್ ಕ್ಲಾಸ್ ಯುವಕನನ್ನು ಪೆÇೀಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ‘ಒಂದು ಮಾತನಾಡದೆ ಮೌನ ಪ್ರೀತಿ ಮಾಡಿದೆ ‘- ಹಾಡಿನ ಮೂಲಕ ಅಪ್ಪುಗೆ ನಮನ ಸಲ್ಲಿಸಿದ ಪೊಲೀಸ್

    madukeri case

    ನಡೆದಿದ್ದೇನು?
    ಶನಿವಾರಸಂತೆ ವ್ಯಾಪ್ತಿಯಲ್ಲಿ ಇರುವ ಡ್ಯಾನ್ಸ್ ಕ್ಲಾಸ್ ನಡೆಸುತ್ತಿದ್ದ ಯುವಕನೋರ್ವ ಡ್ಯಾನ್ಸ್ ಕ್ಲಾಸ್‍ಗೆ ಹೋಗುತ್ತಿದ್ದ. ಯುವತಿಯನ್ನು ಸೋಶಿಯಲಲ್ ಮೀಡಿಯಾ ಮೂಲಕ ಸಂರ್ಪಕಿಸಿದ್ದನು. ಯುವತಿಗೆ ಡ್ಯಾನ್ಸ್ ನಲ್ಲಿ ಆಸಕ್ತಿ ಇರುವುದು ತಿಳಿಸುಬಂದಿದೆ. ಇದನ್ನೆ ಬಳಸಿಕೊಂಡ ಯುವಕ, ಯುವತಿಗೆ ನಿಮಗೆ ಡ್ಯಾನ್ಸ್ ಕಲಿಸುತ್ತೇನೆ ಅದಕ್ಕೆ ನೀವು ನಮ್ಮ ಕ್ಲಾಸ್ ಬಳಿ ಬರಬೇಕು ಎಂದು ಹೇಳಿದ್ದಾನೆ.

    crime

    ಕಾಲೇಜು ಹೋಗುತ್ತಿದ್ದ ಯುವತಿ ಆತ ಹೇಳಿದ್ದನ್ನು ನಂಬಿ ಕಾಲೇಜ್ ಬಿಟ್ಟು ಡ್ಯಾನ್ಸ್ ಕಲಿಯಲು ಕ್ಲಾಸ್‍ಗೆ ಹೋಗಿದ್ದಾಳೆ. ಈ ವೇಳೆ ನೃತ್ಯ ಕಲಿಯುವ ಆಸಕ್ತಿಯಿಂದ ಬಂದ ಯುವತಿಯನ್ನು ನನ್ನನ್ನು ಪ್ರೀತಿಸಬೇಕು. ಪ್ರೀತಿಸಲು ಒಪ್ಪದಿದ್ದರೆ ನಿನ್ನನ್ನು ಕೊಲೆಮಾಡುವುದಾಗಿ ಯುವಕ ಬೆದರಿಕೆ ಹಾಕಿದ್ದಾನೆ. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್ – ಎಲ್ಲ ಮುಸಲ್ಮಾನರು ಕೆಟ್ಟವರಲ್ಲ, ಎಲ್ಲ ಹಿಂದೂಗಳು ಒಳ್ಳೆಯವರಲ್ಲ: ಸೋಮಣ್ಣ

    ಈ ಹಿನ್ನೆಲೆ ಯುವತಿ ಪೋಷಕರಿಗೆ ಹೋಗಿ ನಡೆದಿದ್ದನು ತಿಳಿಸಿದ್ದಾಳೆ. ಪರಿಣಾಮ ಅವರು ಯುವಕನ ವಿರುದ್ಧ ದೂರು ನೀಡಿದ್ದಾರೆ. ಯುವತಿಯ ಪೋಷಕರು ದೂರು ನೀಡಿದ ಬೆನ್ನಲ್ಲೇ ವಿಚಾರಣೆ ನಡೆಸಿದ ಪೊಲೀಸರು ಯುವಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಯುವಕನನ್ನ ಪೊಲೀಸರು ಬಂಧಿಸಿದ್ದಾರೆ.

  • 12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್

    12 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ – ಆರೋಪಿ ಅರೆಸ್ಟ್

    ಚಿಕ್ಕಮಗಳೂರು: 12 ವರ್ಷದ ಬಾಲಕಿ ಮೇಲೆ 48 ವರ್ಷದ ವ್ಯಕ್ತಿ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಏರಿಯಾವೊಂದರಲ್ಲಿ ನಡೆದಿದೆ.

    rape 1

    ಅತ್ಯಾಚಾರಕ್ಕೆ ಯತ್ನಿಸಿದ 48 ವರ್ಷದ ಬಾಷಾ ಕೂಡ ಅದೇ ಏರಿಯಾದವನು. ಮನೆ ಬಳಿಯ ಅಂಗಡಿಗೆ ಹೋಗಿ ಮನೆಗೆ ಬರುತ್ತಿದ್ದ ಬಾಲಕಿಯನ್ನು ತಿಂಡಿ ಕೊಡುತ್ತೇನೆ ಬಾ ಎಂದು ಬಾಷಾ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಖವೇ ಇಲ್ಲದೆ ಹುಟ್ಟಿದ ಕುರಿಮರಿ!

    ಅಂಗಡಿಗೆ ಹೋಗಿದ್ದ ಬಾಲಕಿ ಮನೆಗೆ ಬರದಿದ್ದಾಗ, ಬಾಲಕಿಯನ್ನ ಆಕೆಯ ಚಿಕ್ಕಮ್ಮ ಹುಡುಕಿಕೊಂಡು ಹೊರಟಿದ್ದರು. ಈ ವೇಳೆ, ಮನೆಯೊಂದರಲ್ಲಿ ಬಾಲಕಿ ಕೂಗಾಡುವ ಶಬ್ಧ ಕೇಳಿಬಂದಿದೆ. ಶಬ್ಧ ಕೇಳಿ ಬಾಲಕಿಯ ಚಿಕ್ಕಮ್ಮ ಹೋಗಿ ಆಕೆಯನ್ನು ರಕ್ಷಿಸಿದ್ದಾರೆ. ಈ ವೇಳೆ ಬಾಲಕಿಯ ಚಿಕ್ಕಮ್ಮ ಆತನ ಮೇಲೆ ಕೂಗಾಡಿದ್ದರಿಂದ ಅಕ್ಕಪಕ್ಕದವರು ಸೇರಿ ಆತನ ಮೇಲೆ ಆಕ್ರೋಶ ಹೊರಹಾಕಿದ್ದಾರೆ.

    ಮೊಮ್ಮಗಳ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದರಿಂದ ಸ್ಥಳಿಯರು ಆತನಿಗೆ ಥಳಿಸಿದ್ದಾರೆ ಎಂದು ಹೇಳಲಾಗಿದೆ. ಬಳಿಕ ಆತನನ್ನ ಸ್ಥಳಿಯರೇ ಪೊಲೀಸರಿಗೆ ಒಪ್ಪಿಸಿದ್ದಾರೆ. ತರೀಕೆರೆ ಠಾಣೆಯಲ್ಲಿ ಆರೋಪಿ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿದೆ. ಇದನ್ನೂ ಓದಿ: 8 ಲಕ್ಷ ಮೌಲ್ಯದ ಚಿನ್ನಾಭರಣ ವಶ – ಕಳ್ಳರು ಅರೆಸ್ಟ್

  • 5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ- ಶಿಕ್ಷಕ ಅರೆಸ್ಟ್

    5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ- ಶಿಕ್ಷಕ ಅರೆಸ್ಟ್

    ಮುಂಬೈ: 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಕಿರುಕುಳ ನೀಡಿದ ಆರೋಪದ ಮೇಲೆ ಶಿಕ್ಷಕರೊಬ್ಬರನ್ನು ಬಂಧಿಸಲಾಗಿದೆ. ಈ ಪ್ರಕರಣ ಮಹಾರಾಷ್ಟ್ರದ ಚಂದ್ರಾಪುರದಲ್ಲಿ ನಡೆದಿದೆ.

    school class college

    ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯ ಹಳ್ಳಿಯೊಂದರಲ್ಲಿರುವ ಜಿಲ್ಲಾ ಪರಿಷತ್ ಶಾಲೆಯ ಶಿಕ್ಷಕ ಶಾಲೆ ರೀ ಓಪನ್ ಆದ ದಿನವೇ 5ನೇ ತರಗತಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ವಸತಿ ಸಂಕೀರ್ಣಕ್ಕೆ ಬೀಗ – ಬೀದಿಗೆ ಬಿದ್ದ 32 ಕುಟುಂಬಗಳು

    ಶಾಲೆ ಸೋಮವಾರ ರೀ ಓಪನ್ ಆಗಿದ್ದು, ಆ ದಿನವೇ ಶಿಕ್ಷಕ ಎಲ್ಲ ವಿದ್ಯಾರ್ಥಿಗಳನ್ನು ಹೊರಗೆ ಕಳುಹಿಸಿ ಸಂತ್ರಸ್ತ ಬಾಲಕಿಯನ್ನು ಮಾತ್ರ ಇರಿಸಿಕೊಂಡಿದ್ದಾರೆ. ಈ ವೇಳೆ ಬಾಲಕಿಗೆ ಕಿರುಕುಳ ಕೊಟ್ಟಿದ್ದಾರೆ ಎಂದು ಆರೋಪಗಳಿವೆ. ಅದು ಅಲ್ಲದೇ ಅಲ್ಲಿ ಪ್ರತ್ಯಕ್ಷ ಸಾಕ್ಷಿಯಾಗಿ ಕೆಲವು ವಿದ್ಯಾರ್ಥಿಗಳು ಇದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

    vijayapur bijapur police jeep 2

    ಈ ಕುರಿತು ಸಂತ್ರಸ್ತ ಬಾಲಕಿ ಮನೆಗೆ ಹೋಗಿ ತನ್ನ ಕುಟುಂಬದ ಸದಸ್ಯರಿಗೆ ಘಟನೆ ಬಗ್ಗೆ ಹೇಳಿದಾಗ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿಸಿದ ಸ್ಥಳೀಯರು ಗುಂಪು ಗುಂಪಾಗಿ ಶಿಕ್ಷಕರನ್ನು ಎದುರಿಸಲು ಶಾಲೆಯ ಬಳಿ ಸೇರಿಕೊಂಡಿದ್ದು, ನಂತರ ಆ ಗುಂಪನ್ನು ಪೆÇಲೀಸರು ತಡೆದು ಆರೋಪಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ‘ಟೇಕ್ ಕೇರ್ ಕಿಂಗ್’ ಎಂದ ಶಾರೂಖ್ ಅಭಿಮಾನಿಗಳು

    ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆಯ ವಿವಿಧ ವಿಭಾಗಗಳ ಅಡಿಯಲ್ಲಿ ಆರೋಪಿ ಶಿಕ್ಷಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.