Tag: ಪ್ರಭು ಚವ್ಹಾಣ್

  • ವರಿಷ್ಠರು ಅನುಮತಿ ನೀಡಿದರೆ ಪ್ರಭು ಚವ್ಹಾಣ್ ವಿರುದ್ಧ ನೂರು ಕೋಟಿ ಮಾನಹಾನಿ ಕೇಸ್ ದಾಖಲಿಸುವೆ: ಖೂಬಾ ಎಚ್ಚರಿಕೆ

    ವರಿಷ್ಠರು ಅನುಮತಿ ನೀಡಿದರೆ ಪ್ರಭು ಚವ್ಹಾಣ್ ವಿರುದ್ಧ ನೂರು ಕೋಟಿ ಮಾನಹಾನಿ ಕೇಸ್ ದಾಖಲಿಸುವೆ: ಖೂಬಾ ಎಚ್ಚರಿಕೆ

    ನವದೆಹಲಿ: ಮಾಜಿ ಸಚಿವ ಪ್ರಭು ಚವ್ಹಾಣ್ (Prabhu Chauhan) ವಿರುದ್ಧ ನೂರು ಕೋಟಿ ಮಾನಹಾನಿ (Defamation) ಪ್ರಕರಣ ದಾಖಲಿಸಲು ಚಿಂತಿಸಿದ್ದು, ಈ ಬಗ್ಗೆ ಹೈಕಮಾಂಡ್ ನಾಯಕರ ಅನುಮತಿ ಕೇಳಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ಕಾನೂನು ಹೋರಾಟ ಮಾಡಲಿದ್ದೇನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ (Bhagwanth Khuba) ಹೇಳಿದ್ದಾರೆ.

    ನನ್ನ ಹತ್ಯೆಗೆ ಸಂಚು ನಡೆದಿದೆ ಎಂದು ಆರೋಪಿಸಿರುವ ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಪಕ್ಕೆ ನವದೆಹಲಿಯಲ್ಲಿ (New Delhi) ಪ್ರತಿಕ್ರಿಯಿಸಿದ ಅವರು, ಈ ಗಂಭೀರ ಆರೋಪದಿಂದಾಗಿ ನಾನು ಆಘಾತಕ್ಕೆ ಒಳಗಾಗಿದ್ದೇನೆ. ಇದರಿಂದ ನನ್ನ ಕುಟುಂಬ ವಿಚಲಿತವಾಗಿದೆ. ಹೇಳಿಕೊಳ್ಳಲಾಗದಷ್ಟು ಮನಸ್ಸಿಗೆ ನೋವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಪ್ರಾಪ್ತೆಯರ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ, ಗ್ಯಾಂಗ್‌ ರೇಪ್‌ಗೆ 20 ವರ್ಷ ಜೈಲು – ಲೋಕಸಭೆಯಲ್ಲಿ 3 ಮಸೂದೆ ಮಂಡಿಸಿದ ಅಮಿತ್‌ ಶಾ

    prabhu chauhan

    ಮಂಡಲದ ಕಾರ್ಯಕಾರಣಿಯಲ್ಲಿ ಮಾತನಾಡುವ ಮಾತು ಬಿಟ್ಟು ನನ್ನ ಮೇಲೆ ಸಾರ್ವಜನಿಕವಾಗಿ ಆರೋಪ ಮಾಡಿದ್ದಾರೆ. ಪಕ್ಷದ ಕಾರ್ಯಕರ್ತರು, ಹಿತೈಷಿಗಳು ನಿರಂತರವಾಗಿ ಸಂಪರ್ಕ ಮಾಡಿ ಧೈರ್ಯ ತುಂಬುತ್ತಿದ್ದಾರೆ. ಪ್ರಭು ಚವ್ಹಾಣ್ ಆರೋಪ ಮೋಸ ಮತ್ತು ಕಪಟದಿಂದ ಕೂಡಿದೆ. ಕಳೆದ 9 ವರ್ಷದ ಹಿಂದೆ ಇದೇ ರೀತಿ ಆರೋಪ ಮಾಡಿದ್ದರು ಎಂದರು. ಇದನ್ನೂ ಓದಿ: ವಿಪಕ್ಷಗಳ ಮೈತ್ರಿಯಲ್ಲಿರುವ INDIA ಹೆಸರನ್ನು ನಿರ್ಬಂಧಿಸಿ – ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ

    ನನ್ನ ಮತ್ತು ಅವರ ಸಮಸ್ಯೆ ಪಕ್ಷದ ವೇದಿಕೆಯಲ್ಲಿ ಬಗೆಹರಿಯುತ್ತವೆ. ತಪ್ಪು ತಿಳುವಳಿಕೆ ಸರಿಯಾಗಬಹುದು ಎಂದು ಭಾವಿಸಿದ್ದೆ. ಆದರೆ ಇದರ ಹಿಂದೆ ತಂತ್ರ, ಕುತಂತ್ರ, ಮೋಸ, ಕಪಟತನವಿದೆ ಎಂದು ಈಗ ಅರ್ಥವಾಗಿದೆ. ನನ್ನ ಚರಿತ್ರೆ, ಪಕ್ಷದ ಸೇವೆ ನೋಡಿ ಮೋದಿ ಅವರು ಮಂತ್ರಿ ಮಂಡಲದಲ್ಲಿ ಅವಕಾಶ ನೀಡಿದ್ದಾರೆ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದರು. ಇದನ್ನೂ ಓದಿ: 50ರ ಅಜ್ಜಿಗೆ ಫ್ಲೈಯಿಂಗ್ ಕಿಸ್ ಕೊಡಲು ರಾಹುಲ್‌ಗೇನು ಹುಡುಗಿಯರ ಕೊರತೆ ಇಲ್ಲ: ಕಾಂಗ್ರೆಸ್ ಶಾಸಕಿ ಹೇಳಿಕೆ

    ಬೀದರ್ (Bidar) ಜಿಲ್ಲೆಯಲ್ಲಿ ಒಬ್ಬ ಶಾಸಕನಿಂದ ನಾಲ್ಕಕ್ಕೆ ಶಾಸಕರ ಸಂಖ್ಯೆ ಹೆಚ್ಚಿಸಿದೆ. ಇಂತಹ ಸಮಯದಲ್ಲಿ ಪ್ರಭು ಚವ್ಹಾಣ್ ಎಲ್ಲರ ಜೊತೆಗೆ ಸಂಭ್ರಮಿಸಬೇಕಿತ್ತು. ಆದರೆ ಅತ್ತು ಕರೆದು ದೂಷಣೆ ಮಾಡುತ್ತಿದ್ದಾರೆ. ಇದು ಅವರ ತಂತ್ರ ಕುತಂತ್ರದ ಆಟ. ಈ ಬಗ್ಗೆ ನಮ್ಮ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ನಾನು ನನ್ನ ಭಾವನೆ ಹೇಳಿಕೊಂಡಿದ್ದೇನೆ. ಪಕ್ಷದ ವೇದಿಕೆಯಲ್ಲಿ ಸತ್ಯಾಸತ್ಯತೆಯನ್ನು ವರಿಷ್ಠರು ಹೊರ ಹಾಕಲಿದ್ದಾರೆ ಎಂದರು. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ

    ನೂರು ಕೋಟಿ ಮಾನಹಾನಿ ಕೇಸ್ ಹಾಕಲು ನಿರ್ಧರಿಸಿದ್ದೇನೆ. ವರಿಷ್ಠರು ಅನುಮತಿ ನೀಡಿದರೆ ದೂರು ದಾಖಲಿಸುತ್ತೇನೆ. ಯಾವ್ಯಾವ ಆರೋಪ ಮಾಡಿದ್ದಾರೆ ಎಲ್ಲದಕ್ಕೂ ಮಾಧ್ಯಮದ ಮುಂದೆ ಮಾತನಾಡುವುದಿಲ್ಲ. ನಾನು ಪಕ್ಷಕ್ಕೆ ಮುಜುಗರ ಮಾಡುವುದಿಲ್ಲ. ಪಕ್ಷದಲ್ಲಿ ಅಥವಾ ಕೋರ್ಟ್‌ನಲ್ಲಿ ಅವರಿಗೆ ಉತ್ತರ ಸಿಗಲಿದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಎರಡನೇ ಬಾರಿ ವಿಶ್ವಾಸ ಪರೀಕ್ಷೆಯಲ್ಲಿ ಗೆದ್ದ ಮೋದಿ – ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು

    ಪ್ರಚಾರಕ್ಕೆ ಬಂದಿಲ್ಲ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿ, ಚುನಾವಣೆ ಪೂರ್ವ ಕಾರ್ಯಕರ್ತರ ಅಸಮಾಧಾನ ಅವರ ಗಮನಕ್ಕೆ ತಂದಿದ್ದೆ. ಸಿಟಿ ರವಿ ಸಮ್ಮುಖದಲ್ಲಿ ಪ್ರಸ್ತಾಪ ಮಾಡಿದ್ದೆ. ಅವರ ಕ್ಷೇತ್ರದಲ್ಲಿ ಪ್ರವಾಸ ಮಾಡುವುದಾಗಿ ಹೇಳಿದ್ದೆ. ನಾನು ಮಂತ್ರಿಯಾಗಿದ್ದೇನೆ, ನಾನು ಗೆಲ್ಲುತ್ತೇನೆ. ನನ್ನ ಕ್ಷೇತ್ರಕ್ಕೆ ಬರುವ ಅಗತ್ಯ ಇಲ್ಲ ಎಂದು ಹೇಳಿದ್ದರು ಎಂದು ಹೇಳಿದರು. ಇದನ್ನೂ ಓದಿ: ಚಂದ್ರನ ಮೇಲ್ಮೈ ಹೇಗಿದೆ ನೋಡಿ – Chandrayaan-3 ಲ್ಯಾಂಡರ್ ಸೆರೆಹಿಡಿದ ಫೋಟೋ ಹಂಚಿಕೊಂಡ ಇಸ್ರೋ

    9 ವರ್ಷಗಳಿಂದ ಸಾರ್ವಜನಿಕವಾಗಿ ಆರೋಪಗಳನ್ನು ಎದುರಿಸಿದ್ದೇನೆ. ಪಕ್ಷ ಕಟ್ಟುವುದು ನನ್ನ ಕೆಲಸ. ಬಿಜೆಪಿ (BJP) ಮೇಲೆ ನಂಬಿಕೆ ಇದೆ. ಸಂಬಂಧ ಕಡಿದು ಹೋಯಿತು ಎಂದು ಭಾವಿಸುವುದಿಲ್ಲ. ಅವರು ಅಹಂಕಾರದ ಸ್ವಭಾವ ಮುಂದುವರಿಸಿದರೆ ಮಾನಹಾನಿ ಕೇಸ್ ಹಾಕುತ್ತೇನೆ. ಚುನಾವಣೆ ಹತ್ತಿರ ಬಂದಾಗ ಮನಸ್ಸು ಬದಲಾಗಬಹುದು. ಚುನಾವಣೆಯಲ್ಲಿ ನನ್ನ ವಿಜಯಕ್ಕೆ ಅವರು ದುಡಿಯುತ್ತಾರೆ ಎನ್ನುವ ವಿಶ್ವಾಸ ಇದೆ ಎಂದರು. ಇದನ್ನೂ ಓದಿ: ಮಣಿಪುರ ಶೀಘ್ರದಲ್ಲೇ ಶಾಂತಿಯ ಬೆಳಕನ್ನು ಕಾಣಲಿದೆ: ಮೋದಿ ಭರವಸೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು: ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ

    ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು: ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ

    ಬೀದರ್: ಭಗವಂತ ಖೂಬಾ (Bhagwanth Khuba) ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ಮಾಜಿ ಸಚಿವ ಪ್ರಭು ಚವ್ಹಾಣ್ (Prabhu Chauhan) ಗಂಭೀರ ಆರೋಪ ಮಾಡಿದ್ದಾರೆ.

    Prabhu Chauhan

    ಔರಾದ್ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಗವಂತ ಖೂಬಾ ವಿರುದ್ಧ ಪ್ರಭು ಚವ್ಹಾಣ್ ಗಂಭೀರ ಆರೋಪ ಮಾಡಿದ್ದು ಬಿಜೆಪಿ ಮಾಜಿ ಸಚಿವ, ಔರಾದ ಶಾಸಕ ಮತ್ತು ಕೇಂದ್ರ ಸಚಿವ ಖೂಬಾ ಮಧ್ಯೆ ಬಹಿರಂಗ ವಾಗ್ಯುದ್ಧ ಮುಂದುವರಿದಿದೆ. ಇದನ್ನೂ ಓದಿ: ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

    ಇತ್ತೀಚೆಗೆ ಸರ್ಕಾರಿ ಕಾರ್ಯಕ್ರಮದಲ್ಲಿ ಚವ್ಹಾಣ್ ವಿರುದ್ಧ ವಾಕ್ಸಮರ ನಡೆಸಿದ ಖೂಬಾಗೆ ಔರಾದ್‌ನಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿಯಲ್ಲಿ ಖೂಬಾ ವಿರುದ್ಧ ಚವ್ಹಾಣ್ ಕಿಡಿಕಾರಿ ಇಡೀ ಭಾಷಣದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನನಗೆ ಕೊಲೆ ಮಾಡಿ 6 ತಿಂಗಳಲ್ಲಿ ಉಪಚುನಾವಣೆಗೆ ಕುತಂತ್ರ ನಡೆಸಲಾಗುತ್ತಿದೆ. ರಸ್ತೆ ಮಧ್ಯೆ ನನಗೆ ಗುಂಡು ಹಾರಿಸಿ ಕೊಲೆ ಮಾಡಿಸಲು ಸಂಚು ರೂಪಿಸಲಾಗಿದೆ. ಕೇಂದ್ರ ಸಚಿವ ಭಗವಂತ ಖೂಬಾ ಬೆಂಬಲಿಗರಿಂದ ಇದು ಗೊತ್ತಾಗಿದೆ ಎಂದು ಚವ್ಹಾಣ್ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಮೋದಿ ಸರ್ಕಾರದ ನೀತಿಗಳಿಂದಲೇ ಭಾರತ ವಿಶ್ವದ ಐದನೇ ಬಲಿಷ್ಠ ಆರ್ಥಿಕತೆಯಾಗಿದೆ: ನಿರ್ಮಲಾ ಸೀತಾರಾಮನ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನನ್ನ ಬೆನ್ನಿಗೆ ಚೂರಿ ಹಾಕ್ತೀರಿ, ಎಷ್ಟು ಕಿರುಕುಳ ಕೊಡ್ತೀರಿ: ಖೂಬಾ ವಿರುದ್ಧ ಪ್ರಭು ಚವ್ಹಾಣ್ ಕೆಂಡಾಮಂಡಲ

    ನನ್ನ ಬೆನ್ನಿಗೆ ಚೂರಿ ಹಾಕ್ತೀರಿ, ಎಷ್ಟು ಕಿರುಕುಳ ಕೊಡ್ತೀರಿ: ಖೂಬಾ ವಿರುದ್ಧ ಪ್ರಭು ಚವ್ಹಾಣ್ ಕೆಂಡಾಮಂಡಲ

    ಬೀದರ್: ನಮ್ಮ ಪಕ್ಷದ ಕೇಂದ್ರ ಸಚಿವರಾಗಿ ನನ್ನ ಬೆನ್ನಿಗೆ ಚೂರಿ ಹಾಕುತ್ತೀರಿ, ನನಗೆ ಎಷ್ಟು ಕಿರುಕುಳ ಕೊಡುತ್ತೀರಿ ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ವಿರುದ್ಧ ಕೆಂಡ ಕಾರಿದ್ದಾರೆ.

    ಬೀದರ್‌ನಲ್ಲಿ (Bidar) ಸುದ್ದಿಗೋಷ್ಠಿ ಮಾಡಿದ ಚವ್ಹಾಣ್, ನಮ್ಮ ಚುನಾವಣೆ ಬಂದಾಗ ವಿರೋಧ ಮಾಡುತ್ತೀರಿ, ನಿಮ್ಮ ಚುನಾವಣೆ ಬಂದಾಗ ಕ್ಷೆಮೆ ಕೇಳುತ್ತೀರಿ. ಇದು ಯಾವ ರಾಜನೀತಿ ಸ್ವಾಮಿ? ಎಂದು ಖೂಬಾಗೆ ಪ್ರಶ್ನೆ ಮಾಡಿದರು.

    Bhagwanth khuba 1

    ನಮ್ಮ ಪಾರ್ಟಿ ಎಂಪಿ, ಸಚಿವನಾಗಿ, ನನ್ನ ಸೋಲಿಸಲು ಕುತಂತ್ರ ಮಾಡುತ್ತಿದ್ದೀರಿ. ಹೀಗಾಗಿ ನಾನು ಪ್ರಧಾನಿ ಮೋದಿಗೆ, ನಡ್ಡಾ, ಅಮಿತ್ ಶಾ, ರಾಜ್ಯಾಧ್ಯಕ್ಷರು ಸೇರಿದಂತೆ ಎಲ್ಲರಿಗೂ ನಿಮ್ಮ ವಿರುದ್ಧ ದೂರು ಕೊಡುತ್ತೇನೆ. ನನ್ನನ್ನು ಸೋಲಿಸಲು ಪ್ರಯತ್ನ ಮಾಡುತ್ತೀರಿ, ನಾನೇನು ತಪ್ಪು ಮಾಡಿದ್ದೇನೆ ಸ್ವಾಮಿ? ನೀವು ಪ್ರಭು ಚವ್ಹಾಣ್‌ಗೆ ದ್ರೋಹ ಮಾಡಿಲ್ಲಾ, ಪ್ರಧಾನಿ ಮೋದಿಗೆ, ಬೊಮ್ಮಾಯಿಗೆ, ಪಕ್ಷಕ್ಕೆ ದ್ರೋಹ ಮಾಡಿದ್ದೀರಿ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಸಿಎಂ ಆಯ್ಕೆ ಇನ್ನೂ ಅಂತಿಮವಾಗಿಲ್ಲ; ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ – ಸುರ್ಜೇವಾಲ ಸ್ಪಷ್ಟನೆ

    ನಿಮ್ಮ ಮೇಲೆ ಭರವಸೆ ಇಲ್ಲ. ಹೀಗಾಗಿ ನನಗೆ ಜೀವ ಬೆದರಿಕೆ ಇದ್ದು ನಾನು ನಿಮ್ಮ ವಿರುದ್ಧ ಎಸ್‌ಪಿಗೆ, ಐಜಿಗೆ ದೂರು ನೀಡುತ್ತೇನೆ ಎಂದು ಬೀದರ್‌ನಲ್ಲಿ ಸಚಿವ ಪ್ರಭು ಚವ್ಹಾಣ್ ಕೇಂದ್ರ ಸಚಿವ ಭಗವಂತ್ ಖೂಬಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನೀವೇ ಸಿಎಂ ಆಗಿ – ಡಿಕೆಶಿ ಪಟ್ಟು, ಧರ್ಮ ಸಂಕಟದಲ್ಲಿ ಖರ್ಗೆ

  • ಭಗವಂತ್ ಖೂಬಾ ವಿರುದ್ಧ ಕಿರುಕುಳ ಆರೋಪ ಮಾಡಿ ಗಳಗಳನೆ ಅತ್ತ ಪ್ರಭು ಚವ್ಹಾಣ್

    ಭಗವಂತ್ ಖೂಬಾ ವಿರುದ್ಧ ಕಿರುಕುಳ ಆರೋಪ ಮಾಡಿ ಗಳಗಳನೆ ಅತ್ತ ಪ್ರಭು ಚವ್ಹಾಣ್

    ಬೀದರ್: ಕೇಂದ್ರದ ಮಂತ್ರಿಯಾಗಿ ತಾಯಿಗೆ ಮೋಸ ಮಾಡಿದ್ದಾರೆ. ತಾಯಿಗೆ ಮೋಸ ಮಾಡಿದವರನ್ನು ಆ ದೇವರೇ ನೋಡಿಕೊಳ್ಳುತ್ತಾನೆ ಎಂದು ಕೇಂದ್ರ ಸಚಿವ ಭಗವಂತ್ ಖೂಬಾ (Bhagwanth Khuba) ವಿರುದ್ಧ ಕಿರುಕುಳ ಆರೋಪ ಮಾಡಿ ಸಚಿವ ಪ್ರಭು ಚವ್ಹಾಣ್ (Prabhu Chauhan) ಕಣ್ಣೀರು ಹಾಕಿದ್ದಾರೆ.

    Prabhu Chauhan 1

    ಬೀದರ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರಭು ಚವ್ಹಾಣ್, ನಮ್ಮಗೆ ಬಹಳ ನೋವಾಗಿದೆ. ಅವರ ಚುನಾವಣೆಯಲ್ಲಿ ಸಂಸದರ ಎಲ್ಲಾ ಕ್ಷೇತ್ರದಲ್ಲಿ ಓಡಾಡಿದ್ದೇನೆ. ಅವರಿಗೆ ಟಿಕೆಟ್ ನೀಡಲು ಸೇರಿದಂತೆ ತನುಮನ ಧನ ನೀಡಿ ಖೂಬಾಗೆ ಸಹಾಯ ಮಾಡಿದ್ದೇನೆ. ಆದರೆ ನಮ್ಮನ್ನು ಸೋಲಿಸಲು ನಮ್ಮ ಕಾರ್ಯಕರ್ತರಿಗೆ ರಾಜೀನಾಮೆ ಕೊಡಿಸಿದ್ದಾರೆ. ಕೇಂದ್ರ ಮಂತ್ರಿಯಾಗಿ ಈ ರೀತಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದ ಚುನಾವಣಾ ಫಲಿತಾಂಶ ಲೋಕಸಭೆಗೆ ದಿಕ್ಸೂಚಿ ಅಲ್ಲ: ಬಿಎಸ್‍ವೈ

    ಎಲ್ಲರಿಗೂ ಕೇಂದ್ರ ಸಚಿವ ಖೂಬಾ ವಿರುದ್ಧ ದೂರು ನೀಡುತ್ತೇನೆ. 30 ಸಾವಿರ ಲೀಡ್ ಬರುತ್ತಿತ್ತು ಆ ರೀತಿ ಕೆಲಸ ಮಾಡಿದ್ದೇನೆ. ನಮ್ಮ ಕಾರ್ಯಕರ್ತರಿಗೆ ಪೋನ್ ಮಾಡಿ ಪ್ರಭು ಚವ್ಹಾಣ್‌ಗೆ ವೋಟ್ ಮಾಡಬೇಡ ಎಂದು ಅವಾಜ್ ಹಾಕುತ್ತಾರೆ ಎಂದು ಪ್ರಭು ಚವ್ಹಾಣ್ ಆರೋಪಿಸಿದ್ದಾರೆ. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ 135, ಬಿಜೆಪಿ 65, ಜೆಡಿಎಸ್‌ 20 ಮುನ್ನಡೆ LIVE Updates

  • ಜೆಡಿಎಸ್ ಪಕ್ಷದ ಶಾಲು ಸುಟ್ಟು ಹಾಕಿದ್ದು ಬಿಜೆಪಿ ಕಾರ್ಯಕರ್ತರು- ಜೈಸಿಂಗ್ ರಾಠೋಡ್ ಆರೋಪ

    ಜೆಡಿಎಸ್ ಪಕ್ಷದ ಶಾಲು ಸುಟ್ಟು ಹಾಕಿದ್ದು ಬಿಜೆಪಿ ಕಾರ್ಯಕರ್ತರು- ಜೈಸಿಂಗ್ ರಾಠೋಡ್ ಆರೋಪ

    ಬೀದರ್: ಔರಾದ್ (Aurad) ಕ್ಷೇತ್ರದಲ್ಲಿ ಜೆಡಿಎಸ್ (JDS) ಕಾರ್ಯಕರ್ತರು ಪ್ರಚಾರಕ್ಕೆ ತೆರಳಿದ್ದಾಗ ಪ್ರಭು ಚವ್ಹಾಣ್ (Prabhu Chauhan) ಬೆಂಬಲಿಗರು ಜೆಡಿಎಸ್ ಪಕ್ಷದ ಶಾಲು ಸುಟ್ಟು ಹಾಕಿ ಹಲ್ಲೆಗೆ ಮುಂದಾಗಿದ್ದಾರೆ ಎಂದು ಔರಾದ್ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈಸಿಂಗ್ ರಾಠೋಡ್ (Jaisingh Rathod) ಗಂಭೀರ ಆರೋಪ ಮಾಡಿದ್ದಾರೆ.

    ಇಂದು ಬೀದರ್‌ನಲ್ಲಿ (Bidar) ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔರಾದ್ ಕ್ಷೇತ್ರದಲ್ಲಿ ಪಂಚರತ್ನ ಯೋಜನೆ ಜಾಗೃತಿ ಮೂಡಿಸುತ್ತಿದ್ದು, ಈ ವೇಳೆ ಮಾಳೆಗಾಂವ್ ತಾಂಡಕ್ಕೆ ಹೋದಾಗ ಪ್ರಭು ಚವ್ಹಾಣ್ ಬೆಂಬಲಿಗರು ಮೋದಿ ಮೋದಿ (Narendra Modi) ಎಂದು ಕೂಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಯಾರದ್ದೋ ಮೀಸಲಾತಿ ಕಿತ್ತು ಒಕ್ಕಲಿಗರಿಗೆ ಹಂಚಿದ್ದಾರೆ: ನಂಜಾವಧೂತ ಶ್ರೀ ಕಿಡಿ 

    JDS FLAG FIRE 1

    ಇದು ಪೂರ್ವ ನಿಯೋಜಿತ ಕೃತ್ಯವಾಗಿದ್ದು, ಹಲ್ಲೆ ಮಾಡಲು ಮುಂದಾದಾಗ ನಾವು ಅಲ್ಲಿಂದ ಬೇರೆ ಗ್ರಾಮಕ್ಕೆ ಹೋದೆವು. ನಾವು ಗ್ರಾಮದಿಂದ ಹೋದ ಬಳಿಕ ಬಿಜೆಪಿ (BJP) ಕಾರ್ಯಕರ್ತರು ಜೆಡಿಎಸ್ ಪಕ್ಷದ ಶಾಲುಗಳನ್ನು ಸುಟ್ಟು ಹಾಕಿದ್ದಾರೆ. ಅಲ್ಲದೇ ಜೆಡಿಎಸ್ ಶಾಲುಗಳನ್ನು ಸುಡುತ್ತಿರುವ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಬಿಜೆಪಿ ಸರ್ಕಾರ ಬರಲು ಕಾರಣನಾಗಿದ್ದಕ್ಕೆ ನನಗೆ ತುಂಬಾ ನೋವಿದೆ : ಹೆಚ್. ವಿಶ್ವನಾಥ್ 

    ಈ ವೀಡಿಯೋಗಳನ್ನು ಚವ್ಹಾಣ್ ಬೆಂಬಲಿಗರು ನಮಗೂ ಕಳಿಸಿದ್ದಾರೆ. ಆದರೆ ಈ ಬಗ್ಗೆ ಕೇಸ್ ಮಾಡಲು ಹೋದರೆ ನಾಳೆ, ನಾಡಿದ್ದು ಎಂದು ಪೊಲೀಸರು ತಿರುಗಿಸಿದ್ದಾರೆ ಎಂದು ಪ್ರಭು ಚವ್ಹಾಣ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಸಿಟ್ಟು, ಸೆಡವಿನ ವ್ಯಕ್ತಿ ಅಂದೊಮ್ಮೆ ಕಣ್ಣೀರು ಹಾಕಿದ್ರು – ಸಿದ್ದರಾಮಯ್ಯ ಲೈಫ್‌ನ ಇಂಟರೆಸ್ಟಿಂಗ್ ಸಂಗತಿಗಳು!

  • ಮಾರ್ಚ್ 3ರಂದು ಅಮಿತ್ ಶಾ ಬಸವಕಲ್ಯಾಣ ಪ್ರವಾಸ

    ಮಾರ್ಚ್ 3ರಂದು ಅಮಿತ್ ಶಾ ಬಸವಕಲ್ಯಾಣ ಪ್ರವಾಸ

    ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ವಿಜಯ ಸಂಕಲ್ಪ ರಥಯಾತ್ರೆಗೆ (Vijay Sankalpa Rath Yatra) ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಚಾಲನೆ ನೀಡಲಿದ್ದು, ಮಾರ್ಚ್ 3 ರಂದು ಅವರು ಬಸವಕಲ್ಯಾಣಕ್ಕೆ (Basavakalyan) ಬರಲಿದ್ದಾರೆ. ಭಾನುವಾರ ಪಕ್ಷದ ಕಚೇರಿಯ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan), ಮಾರ್ಚ್ 3 ರಂದು 11 ಗಂಟೆಗೆ ಅಮಿತ್ ಶಾ ವಿಶೇಷ ವಿಮಾನದ ಮೂಲಕ ಬಸವಕಲ್ಯಾಣಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

    prabhu chauhan

    ಅಮಿತ್ ಶಾ 11 ಗಂಟೆಗೆ ಬಸವಕಲ್ಯಾಣ ಭೇಟಿ ನೀಡಿದ ಬಳಿಕ 11:30ಕ್ಕೆ ಅನುಭವ ಮಂಟಪಕ್ಕೆ ಭೇಟಿ ನೀಡಿ, ಅಲ್ಲಿಂದಲ್ಲೇ ವಿಜಯ ಸಂಕಲ್ಪ ಯಾತ್ರೆ ರಥಕ್ಕೆ ಚಾಲನೆ ನೀಡಲಿದ್ದಾರೆ. ನಂತರ ಬಸವಕಲ್ಯಾಣ ಪಟ್ಟಣದಲ್ಲಿ ಅದ್ದೂರಿ ರೋಡ್ ಶೋ ಮಾಡಿ ಸಮಾವೇಶದಲ್ಲಿ ಭಾಗಿಯಾಗುತ್ತಾರೆ ಎಂದರು. ಇದನ್ನೂ ಓದಿ: ಆಶಾ ಕಾರ್ಯಕರ್ತರಿಗೆ ವಿದೇಶಿ ಹಣ ಹಂಚಿದ ಶಾಸಕ ಜಮೀರ್

    ಬಸವಕಲ್ಯಾಣ ಪಟ್ಟಣದ ಥೇರು ಮೈದಾನದಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶ್ರೀರಾಮುಲು, ಜಗದೀಶ್ ಶೆಟ್ಟರ್ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಈ ಸಮಾವೇಶದಲ್ಲಿ 50 ಸಾವಿರಕ್ಕೂ ಅಧಿಕ ಕಾರ್ಯಕರ್ತರು ಭಾಗಿಯಾಗಲಿದ್ದಾರೆ ಎಂದು ಹೇಳಿದರು.

    Amit Shah

    ಮಧ್ಯಾಹ್ನ 2 ಗಂಟೆಗೆ ಹುಮ್ನಾಬಾದ್, ಸಂಜೆ ಭಾಲ್ಕಿಯಲ್ಲಿ ಬಹಿರಂಗ ಸಮಾವೇಶ ನಡೆಲಿದ್ದು, 4 ಗಂಟೆ ವೇಳೆಗೆ ಔರಾದ್, ಬೀದರ್ ಉತ್ತರ ಹಾಗೂ ಬೀದರ್ ದಕ್ಷಿಣದಲ್ಲಿ ವಿಜಯ ಸಂಕಲ್ಪ ಯಾತ್ರೆ ನಡೆಯಲಿದೆ ಎಂದು ಸಚಿವ ಪ್ರಭು ಚವ್ಹಾಣ್ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ, ಅವರಿಗೆ ಕಿವಿ ಕೇಳಿಸಲ್ಲ, ಕಣ್ಣು‌ ಕಾಣಲ್ಲ : ಪ್ರಭು ಚವ್ಹಾಣ್ ಟಾಂಗ್

  • ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ, ಅವರಿಗೆ ಕಿವಿ ಕೇಳಿಸಲ್ಲ, ಕಣ್ಣು‌ ಕಾಣಲ್ಲ : ಪ್ರಭು ಚವ್ಹಾಣ್ ಟಾಂಗ್

    ಸಿದ್ದರಾಮಯ್ಯ ಒಬ್ಬ ಸುಳ್ಳುಗಾರ, ಅವರಿಗೆ ಕಿವಿ ಕೇಳಿಸಲ್ಲ, ಕಣ್ಣು‌ ಕಾಣಲ್ಲ : ಪ್ರಭು ಚವ್ಹಾಣ್ ಟಾಂಗ್

    ಬೀದರ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಒಬ್ಬ ಸುಳ್ಳುಗಾರ, ಅವರಿಗೆ ಕಿವಿ ಕೇಳಿಸಲ್ಲ ಹಾಗೂ ಕಣ್ಣು‌ ಕಾಣಲ್ಲ ಎಂದು ಮಾಜಿ ಸಿಎಂ‌ ಸಿದ್ದರಾಮಯ್ಯ ವಿರುದ್ಧ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ (Prabhu Chauhan) ತೀವ್ರ ವಾಗ್ದಾಳಿ ನಡೆಸಿದರು.

    ಬೀದರ್‌ನ‌ ಬಿಜೆಪಿ (BJP) ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ (Congress) ಸುಳ್ಳಿನ ಸರ್ದಾರ ಇದ್ದಂತೆ, ಈಗ ಸಿದ್ದರಾಮಯ್ಯನ ಆಟ ಮುಗಿದಿದೆ ಎಂದರು. ಬಿಜೆಪಿ ಸರ್ಕಾರ‌‌ 40% ಸರ್ಕಾರ ಎಂದು ಸಿದ್ದರಾಮಯ್ಯ ಆರೋಪ ಮಾಡಿದ್ದರು, ಆದರೆ ಅವರು ಎಲ್ಲಿ ಇದನ್ನು ಪ್ರೂವ್ ಮಾಡಿದ್ದಾರೆ? ನಂದು ಏನಾದ್ರು ಇದ್ರೆ ಪ್ರೂವ್ ಮಾಡಿ, ನಾನು‌ ತಕ್ಷಣವೇ ರಾಜೀನಾಮೆ ಕೊಡುತ್ತೇನೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಸೋಮವಾರ ನನ್ನ ಜೀವನದಲ್ಲಿ ಮರೆಯಲಾಗದ ಕ್ಷಣ: ಬಿಎಸ್‍ವೈ

    SIDDARAMAIAH 1 4

    ಬರೀ ಗಾಳಿಯಲ್ಲಿ ಸುಳ್ಳು ಹೇಳಿದ್ರೆ ಹೆಂಗೆ? ಔರಾದ್‌ಗೆ ಅರ್ಧ ಗಂಟೆ ಬಂದು ಸಿದ್ದರಾಮಯ್ಯನವರೇ ಸುಮ್ಮನೆ ಆರೋಪ ಮಾಡುತ್ತೀರಿ, ಯಾರೋ‌ ಕಿವಿಯಲ್ಲಿ ಹೇಳಿದ್ರು ಸಿದ್ದರಾಮಯ್ಯ ಅದನ್ನೇ ಹೇಳಿದರು. ಆದರೆ ಕಳೆದ ಪ್ರಜಾಧ್ವನಿ ಯಾತ್ರೆಯ ಸಮಾವೇಶದಲ್ಲಿ ಕ್ಷೇತ್ರದಲ್ಲಿ ಸರಿಯಾದ ರಸ್ತೆ ಮಾಡಲು ಆಗಲಿಲ್ಲ. ಇವರಿಂದ ಇವರು ಒಬ್ಬ ಪೆದ್ದಾ ಎಂದಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದರು. ಇದನ್ನೂ ಓದಿ: ವರದಕ್ಷಿಣೆ ನೀಡದ್ದಕ್ಕೆ ಮಹಿಳೆಗೆ ಆ್ಯಸಿಡ್ ಕುಡಿಸಿದ ಅತ್ತೆ

  • ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

    ಹಾಲು ಉತ್ಪಾದಕರಿಗೆ 5 ರೂ.ಗಿಂತ ಹೆಚ್ಚಿಗೆ ಪ್ರೋತ್ಸಾಹ ಧನ ಏರಿಕೆ ಇಲ್ಲ – ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಸರ್ಕಾರ ಉತ್ತರ

    – ರೈತರಿಗೆ ಕೆಎಂಎಫ್‌ನಿಂದ ಹಾಲಿ ಪ್ರೋತ್ಸಾಹ ಧನ ರೂಪದಲ್ಲಿ ರೂ.339.00 ಕೋಟಿಗಳು ಬಾಕಿ
    – ಮಂಡ್ಯ ಜಿಲ್ಲೆಯ ಹಾಲು ಉತ್ಪಾದಕರಿಗೆ 36.55 ಕೋಟಿ ರೂ. ಬಾಕಿ
    – ಶಾಸಕ ದಿನೇಶ್‌ ಗೂಳಿಗೌಡ ಪ್ರಶ್ನೆಗೆ ಉತ್ತರ ನೀಡಿರುವ ಸಹಕಾರ ಸಚಿವರು

    ಬೆಳಗಾವಿ: ಹಾಲು ಉತ್ಪಾದಕ ರೈತರಿಗೆ ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ (Karnataka Government) ಸ್ಪಷ್ಟಪಡಿಸಿದೆ.

    ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ (Dinesh Guligowda) ಅವರು ಸದನದಲ್ಲಿ ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸರ್ಕಾರ, ಸದ್ಯಕ್ಕೆ ಅಂತಹ ಯಾವುದೇ ಉದ್ದೇಶ ಇಲ್ಲ. ಹಾಲಿ ಎಲ್ಲ ರೈತರಿಗೆ ಈಗ ನಿಗದಿ ಮಾಡಿರುವ ಐದು ರೂಪಾಯಿಯನ್ನು ನೀಡುತ್ತಾ ಬಂದಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಾಜ್ಯಗಳ ಪುನರ್‌ ವಿಂಗಡಣಾ ಕಾಯ್ದೆ: ಭಾಷಾವಾರು ಪ್ರಾಂತ್ಯಗಳ ರಚನೆಯೇ ಅಂತಿಮ – ಸಿಎಂ

    st somshekar

    ಹಾಲು ಉತ್ಪಾದಕರಿಗೆ ಸರ್ಕಾರ 5 ರೂಪಾಯಿಗಳ ಪ್ರೋತ್ಸಾಹ ಧನವನ್ನು ಪ್ರತಿ ತಿಂಗಳು ನೀಡಲಾಗುತ್ತಿದೆಯೇ? ಪ್ರಸ್ತುತ ನೀಡುತ್ತಿರುವ 5 ರೂಪಾಯಿ ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ ಸಂಬಂಧ ಸ್ಥಳೀಯ ಸಂಸ್ಥೆಗಳ ಮಂಡ್ಯ ಕ್ಷೇತ್ರದ ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿದ್ದ ಪ್ರಶ್ನೆಗೆ ಸದನದಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್‌ (S.T.Somshekar) ಉತ್ತರಿಸಿದ್ದಾರೆ.

    339.00 ಕೋಟಿ ರೂ. ಪ್ರೋತ್ಸಾಹಧನ ಬಾಕಿ
    ಜಿಲ್ಲೆಯ ಹಾಲು ಉತ್ಪಾದಕರಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನ ಉಳಿಸಿಕೊಳ್ಳಲಾಗಿದೆಯೇ? ಉಳಿಸಿಕೊಂಡಿದ್ದರೆ ಮೊತ್ತವೆಷ್ಟು ಮತ್ತು ಯಾವಾಗ ಬಾಕಿ ಮೊತ್ತವನ್ನು ನೀಡಲಾಗುವುದು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಪ್ರಶ್ನೆ ಮಾಡಿದ್ದರು. ಇದಕ್ಕೆ ಸಾಮಾನ್ಯ ವರ್ಗದ ಹೈನುಗಾರಿಕೆ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ 2022ರಲ್ಲಿ ಹಾಲಿ ಪ್ರೋತ್ಸಾಹ ಧನ 339.00 ಕೋಟಿ ರೂ. ಬಾಕಿಯಿರುತ್ತದೆ. ನವೆಂಬರ್-2022ರ ತಿಂಗಳಲ್ಲಿ ಪರಿಶಿಷ್ಟ ಜಾತಿ ವರ್ಗದ ಹೈನುಗಾರರಿಗೆ 5.00 ಕೋಟಿ ರೂ. ಮತ್ತು ಪರಿಶಿಷ್ಟ ಪಂಗಡ ವರ್ಗದ ಹೈನುಗಾರರಿಗೆ 3.00 ಕೋಟಿಗಳನ್ನು ಪಾವತಿಸಲು ಬಾಕಿಯಿರುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹೊಸವರ್ಷದ ಮೊದಲ ವಾರದಲ್ಲೇ KPTCL ಎಇ, ಜೆಇ ನೇಮಕ ಪರೀಕ್ಷೆ ಫಲಿತಾಂಶ: ಸುನೀಲ್ ಕುಮಾರ್

    Milk

    ಮಂಡ್ಯ ಜಿಲ್ಲೆಯಲ್ಲಿ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ರೈತರಿಗೆ 36.55 ಕೋಟಿ ರೂಪಾಯಿ ಬಾಕಿ ಪ್ರೋತ್ಸಾಹಧನ ನೀಡಬೇಕಿದೆ. ಮಂಡ್ಯ ಹಾಲು ಒಕ್ಕೂಟದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು ನೌಕರರ ಸಂಖ್ಯೆ ಎಷ್ಟು ಎಂಬ ಪ್ರಶ್ನೆಗೆ, 267 ಮಂದಿ ಕಾಯಂ ನೌಕರರು ಕಾರ್ಯನಿರ್ವಹಣೆ ಮಾಡುತ್ತಿದ್ದು, ಗುತ್ತಿಗೆ ಆಧಾರದಲ್ಲಿ 1,057 ಮಂದಿ ಕಾರ್ಮಿಕರು ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ ಎಂಬ ಮಾಹಿತಿಯನ್ನು ರಾಜ್ಯ ಸರ್ಕಾರ ನೀಡಿದೆ.

    ಈ ಸಹಕಾರ ಸಂಘಗಳು ಸ್ವಂತ ಕಟ್ಟಡಗಳನ್ನು ಹೊಂದಿದೆಯೇ ಅಥವಾ ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದೆಯೇ? ಹಾಗಿದ್ದಲ್ಲಿ, ಅವುಗಳ ಒಟ್ಟು ಸಂಖ್ಯೆ ಎಷ್ಟು ಎಂದು ಶಾಸಕ ದಿನೇಶ್‌ ಗೂಳಿಗೌಡ ಅವರು ಕೇಳಿರುವ ಪ್ರಶ್ನೆಗೆ, ಒಕ್ಕೂಟದ ವ್ಯಾಪ್ತಿಯ ಒಟ್ಟು 1,276 ಹಾಲು ಉತ್ಪಾದಕರ ಸಹಕಾರ ಸಂಘಗಳ ಪೈಕಿ 777 ಹಾಲು ಉತ್ಪಾದಕರ ಸಹಕಾರ ಸಂಘಗಳು ಸ್ವಂತ ಕಟ್ಟಡ ಹೊಂದಿದ್ದು, ಉಳಿದ 499 ಸಂಘಗಳು ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸರ್ಕಾರ ಮಾಹಿತಿ ನೀಡಿದೆ. ಇದನ್ನೂ ಓದಿ: ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಮಂಡ್ಯ ಹಾಲು ಒಕ್ಕೂಟದಿಂದ ಪ್ರತಿ ದಿನ ಬೆಳಗ್ಗೆ ಮತ್ತು ಸಂಜೆ ಎಷ್ಟು ಲೀಟರ್‌ ಹಾಲನ್ನು ಖರೀದಿ ಮಾಡಲಾಗುತ್ತದೆ ಎಂಬ ಶಾಸಕರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಹಾಲು ಒಕ್ಕೂಟವು 2022-23ನೇ ಸಾಲಿನಲ್ಲಿ ನವೆಂಬರ್- 2022ರ ಮಾಹೆಯ ಅಂತ್ಯಕ್ಕೆ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸರಾಸರಿ 8,99,048 ಲೀಟರ್ ಹಾಲನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರ ನೀಡಿದ್ದಾರೆ. ಶೀಘ್ರವಾಗಿ ಪ್ರೋತ್ಸಾಹ ಧನವನ್ನು DBT ಮುಖೇನ ನೇರವಾಗಿ ಹಾಲು ಉತ್ಪಾದಕರ ಆಧಾರ್ ಜೋಡಣೆ ಬ್ಯಾಂಕ್ ಖಾತೆಗೆ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಚರ್ಮಗಂಟು ರೋಗದಿಂದ ಮೃತಪಟ್ಟ ಜಾನುವಾರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಬಿಡುಗಡೆ: ಪ್ರಭು ಚವ್ಹಾಣ್

    ಬೆಂಗಳೂರು: ಚರ್ಮಗಂಟು ರೋಗದಿಂದ (Lumpy Virus) ಜಾನುವಾರುಗಳು ಮೃತಪಟ್ಟ ಪ್ರಕರಣದಲ್ಲಿ ಮಾಲೀಕರುಗಳಿಗೆ ಪರಿಹಾರ ನೀಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ (Prabhu Chauhan) ತಿಳಿಸಿದ್ದಾರೆ.

    ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಚರ್ಮಗಂಟು ರೋಗವು ನೇರವಾಗಿ ಜಾನುವಾರುಗಳ ಉತ್ಪಾದಕತೆಯನ್ನು ಕುಂಠಿತಗೊಳಿಸುವುದರಿಂದ ರೈತರು ಹಾಗೂ ಜಾನುವಾರು ಮಾಲೀಕರ ಆರ್ಥಿಕ ಸ್ಥಿತಿಯ ಮೇಲೆ ಪರಿಣಾಮ ಬೀರುವುದನ್ನು ತಡೆಗಟ್ಟಲು ಪರಿಹಾರ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ : ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು – ಡಿಕೆಶಿ ಕಣ್ಣೀರಿಗೆ ಸಿ.ಟಿ.ರವಿ ವ್ಯಂಗ್ಯ

    Lumpy skin disease

    ಚರ್ಮಗಂಟು ರೋಗದಿಂದ ಉಂಟಾಗುವ ಜಾನುವಾರುಗಳ ಮರಣದಿಂದ ಮಾಲೀಕರಿಗೆ ನಷ್ಟವನ್ನು ಭರಿಸಲು 2022ರ ಆಗಸ್ಟ್ 1ನೇ ತಾರೀಖಿನಿಂದ ಅನ್ವಯ ಆಗುವಂತೆ ಪ್ರತಿ ಹೈನು ರಾಸುಗಳಿಗೆ ಗರಿಷ್ಠ 20,000 ರೂ. ಮತ್ತು ಎತ್ತುಗಳಿಗೆ 30,000 ರೂ. ಹಾಗೂ ಪ್ರತಿ ಕರುವಿಗೆ 5,000 ರೂ. ಪರಿಹಾರ ನೀಡಲಾಗುತ್ತಿದೆ ಎಂದು ವಿವರಿಸಿದ್ದಾರೆ.

    lumpy virus disease 1

    ರಾಜ್ಯದಲ್ಲಿ ಜಾನುವಾರುಗಳ ಚರ್ಮಗಂಟು ರೋಗವನ್ನು ಹತೋಟಿಗೆ ತರಲಾಗುತ್ತಿದೆ. ರಾಜ್ಯಾದ್ಯಂತ 2,65,646 ರಾಸುಗಳಿಗೆ ಲಸಿಕೆ ನೀಡಲಾಗಿದ್ದು, ಲಭ್ಯವಿರುವ 3,42,156 ಡೋಸ್ ಲಸಿಕೆಯನ್ನು ಜಾನುವಾರುಗಳಿಗೆ ನೀಡಲಾಗುತ್ತಿದೆ. ಈ ವಾರ 35,000 ಲಸಿಕೆ ಲಭ್ಯವಾಗಲಿದ್ದು, ಚರ್ಮಗಂಟು ರೋಗವನ್ನು ನಿಯಂತ್ರಣಕ್ಕೆ ತರಲು ಬೇಕಾದ ಔಷಧ, ಚಿಕಿತ್ಸೆ ನೀಡಲಾಗುತ್ತಿದೆ. ರೈತರು ಆತಂಕಕ್ಕೆ ಒಳಗಾಗದೇ ಸರ್ಕಾರದೊಂದಿಗೆ ಸಹಕರಿಸುವಂತೆ ಪ್ರಭು ಚವ್ಹಾಣ್ ಮನವಿ ಮಾಡಿಕೊಂಡಿದ್ದಾರೆ.

    lumpy virus disease 2

    ರಾಜ್ಯದಲ್ಲಿ ಈವರೆಗೆ 23,784 ರಾಸುಗಳು ಚರ್ಮಗಂಟು ರೋಗದಿಂದ ಬಳಲುತ್ತಿದ್ದು, ಈ ಪೈಕಿ 11,494 ರಾಸುಗಳು ಚೇತರಿಕೆಯಾಗಿವೆ. ಇನ್ನುಳಿದ ರಾಸುಗಳಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೆ 680 ಜಾನುವಾರುಗಳು ಮೃತಪಟ್ಟಿರುತ್ತವೆ. ಮೃತಪಟ್ಟ ಜಾನುವಾರುಗಳ ಮಾಲೀಕರಿಗೆ ಪರಿಹಾರ ಧನ ವಿತರಣೆಗೆ ಕ್ರಮ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ- ಸಿದ್ದರಾಮಯ್ಯರನ್ನು ಜೋಡಿಸಲು ರಾಹುಲ್ ಗಾಂಧಿ ಬಂದಿದ್ದಾರೆ: ಭೈರತಿ ಬಸವರಾಜ್

    lumpy virus disease

    ಚರ್ಮಗಂಟು ರೋಗವು ಜಾನುವಾರುಗಳಲ್ಲಿ ಕಂಡು ಬರುವ ಸಾಂಕ್ರಾಮಿಕ ವೈರಸ್ ಕಾಯಿಲೆಯಾಗಿದೆ. ರೋಗಗ್ರಸ್ತ ಪ್ರಾಣಿಗಳಲ್ಲಿ ಪ್ರಾರಂಭಿಕ ಹಂತದಲ್ಲಿ ಜ್ವರ, ತದನಂತರ ಚರ್ಮಗಂಟು ಗಂಟು ಕಾಣಿಸಿ ಕ್ರಮೇಣ ಚರ್ಮ ಗಂಟು, ಹಕ್ಕಳೆ, ತುರಿಗಳಾಗಿ ಜಾನುವಾರುಗಳಲ್ಲಿ ಕಂಡು ಬರುತ್ತದೆ. ರೋಗಗ್ರಸ್ಥ ದನಗಳು ಜ್ವರದಿಂದ ಬಳಲಿ ಮಂಕಾಗಿ ಮೂಗು, ಕಣ್ಣುಗಳಲ್ಲಿ ಸೋರುವಿಕೆ, ಜೊಲ್ಲು ಸೋರುವುದು, ಮೇವು ತಿನ್ನದೇ ಬಡಕಲಾಗುತ್ತವೆ. ರಾಸುಗಳು ಶ್ವಾಸಕೋಶದ ಉರಿಯೂತದಿಂದ ಸಾವನ್ನಪ್ಪುವುದು ಸಾಮಾನ್ಯವಾಗಿದೆ. ರಾಸುಗಳ ಕೊಟ್ಟಿಗೆಯನ್ನು ಸ್ವಚ್ಛವಾಗಿಡಬೇಕು. ರೋಗ ಕಾಣಿಸಿಕೊಂಡ ತಕ್ಷಣ ಸಮೀಪದ ಪಶು ವೈದ್ಯಾಧಿಕಾರಿಗಳನ್ನು ಸಂಪರ್ಕಿಸಿ, ಲಸಿಕೆ ಪಡೆದು ಜಾನುವಾರು ಸಂರಕ್ಷಿಸಿ ಎಂದು ರೈತರಲ್ಲಿ ಮನವಿ ಮಾಡಿದ್ದಾರೆ.

    ಅಭಿನಂದನೆ : ಚರ್ಮಗಂಟು ರೋಗದಿಂದ ಬಳಲಿ ಮೃತಪಟ್ಟ ಜಾನುವಾರುಗಳ ಮಾಲೀಕರು ಮತ್ತು ರೈತರ ಆರ್ಥಿಕ ನಷ್ಟವನ್ನು ತಪ್ಪಿಸಲು ಮೃತ ರಾಸುಗಳಿಗೆ ಪರಿಹಾರ ನೀಡುವುದಕ್ಕೆ ಅನುಮತಿ ನೀಡಿ, ಬಿಜೆಪಿ ನೇತೃತ್ವದ ನಮ್ಮ ಸರ್ಕಾರ ಸದಾ ಜನರ ಶ್ರೇಯೋಭಿವೃದ್ಧಿಗೆ ಶ್ರಮಿಸಲಿದೆ ಎನ್ನುವುದನ್ನು ಸಾರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಭು ಚವ್ಹಾಣ್ ಅಭಿನಂದಿಸಿ, ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

    ಕೂಡಲೇ ಸ್ಪಂದಿಸಿ : ಚರ್ಮಗಂಟು ರೋಗ ಕಾಣಿಸಿಕೊಂಡ ಜಾನುವಾರುಗಳ ಆರೋಗ್ಯ ಸಮಸ್ಯೆ ಹೊತ್ತು ಬರುವ ರೈತರು ಹಾಗೂ ದೂರವಾಣಿ ಕರೆಗಳಿಗೆ ಕೂಡಲೇ ಸ್ಪಂದಿಸಿ, ಸೂಕ್ತ ಚಿಕಿತ್ಸೆ ನೀಡಿ, ರೋಗ ಹರಡದಂತೆ ಪಶು ವೈದ್ಯಾಧಿಕಾರಿಗಳು ಮತ್ತು ಪಶುಸಂಗೋಪನೆ ಇಲಾಖೆ ಅಧಿಕಾರಿಗಳು ಶ್ರಮಿಸುವಂತೆ ಸೂಚನೆ ನೀಡಿದ್ದಾರೆ. ಜನರಿಗೆ ಆರೋಗ್ಯ ಸಮಸ್ಯೆ ಎದುರಾದರೆ ತಮ್ಮ ನೋವನ್ನು ತೋಡಿಕೊಳ್ಳುತ್ತಾರೆ. ಮಾತು ಬಾರದ ಮೂಕ ಪ್ರಾಣಿಗಳು ತಮ್ಮ ನೋವನ್ನು ಹೇಗೆ ವ್ಯಕ್ತಪಡಿಸುತ್ತವೆ ಎನ್ನುವುದನ್ನು ನಿರ್ಲಕ್ಷ್ಯ ಮಾಡದೇ ಕೂಡಲೇ ಜಾನುವಾರುಗಳ ಚಿಕಿತ್ಸೆ ಧಾವಿಸಿ, ಗೋಮಾತೆ ಸಂರಕ್ಷಿಸೋಣ ಎಂದು ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೀದರ್‌ನಲ್ಲಿ ಇಂದು ಸಚಿವ ಆರ್ ಅಶೋಕ್ ಗ್ರಾಮವಾಸ್ತವ್ಯ

    ಬೀದರ್‌ನಲ್ಲಿ ಇಂದು ಸಚಿವ ಆರ್ ಅಶೋಕ್ ಗ್ರಾಮವಾಸ್ತವ್ಯ

    ಬೀದರ್: ಗಡಿ ಜಿಲ್ಲೆಯ ಔರಾದ್ ತಾಲೂಕಿನ ವಡಗಾಂವ್ ಗ್ರಾಮದಲ್ಲಿಂದು ರಾತ್ರಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯದಲ್ಲಿ ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

    vlcsnap 2022 05 27 11h57m45s871

    ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಅವರು ಸಾವಿರಾರು ಜನರ ಅಹವಾಲುಗಳನ್ನು ಸ್ವೀಕಾರ ಮಾಡಲಿದ್ದಾರೆ. ಈಗಾಗಲೇ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಿಕ್ಕೆ ಕಲಾ ತಂಡಗಳು, ಅಲಂಕೃತ ಎತ್ತಿನ ಬಂಡಿ ಸಿದ್ದವಾಗಿವೆ. ಇದನ್ನೂ ಓದಿ: ಬಟದ್ರವ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಮುಖ ಆರೋಪಿ ಅರೆಸ್ಟ್

    vlcsnap 2022 05 27 11h57m10s637

    ಜಿಲ್ಲೆಯಾದ್ಯಂತ 25 ಸಾವಿರ ಜನರು ಈ ಕಾರ್ಯಕ್ರಮದಲ್ಲಿ ಸೇರುವ ನಿರೀಕ್ಷೆಯಿದೆ. ಆರ್ ಅಶೋಕ್ ಅವರ ಅಷ್ಟೇ ಅಲ್ಲದೇ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಸರಿಗಮಪ ಖ್ಯಾತಿಯ ಹನುಮಂತ ಲಂಬಾಣಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಡಲಾಗುತ್ತಿದೆ. ಇದನ್ನೂ ಓದಿ: ತಲೆಗೆ ಕಲರ್ ಹಾಕೋ ರೇಟ್ ವಿಚಾರಕ್ಕೆ ಜಗಳ- ಕತ್ತರಿಯಿಂದ ಇರಿದು ಗ್ರಾಹಕನ ಕೊಲೆ