Tag: ಬಿಎಂಟಿಸಿ ಬಸ್ ನಿಲ್ದಾಣ

  • ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಮೆಜೆಸ್ಟಿಕ್ ಮುಖ್ಯರಸ್ತೆಗೆ ವೈಟ್ ಟಾಪಿಂಗ್ ಭಾಗ್ಯ – ಮುಂದಿನ ತಿಂಗಳಿಂದ ಟ್ರಾಫಿಕ್ ಜಾಮ್ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿಯ (Silicon City) ಹೃದಯ ಭಾಗದಲ್ಲಿರುವ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ (BMTC Bus Stand) ಮುಖ್ಯರಸ್ತೆಗೆ ವೈಟ್ ಟಾಪಿಂಗ್ (White Topping) ಭಾಗ್ಯ ಒದಗಿ ಬಂದಿದೆ.

    ಇತ್ತೀಚಿಗೆ ಬೆಂಗಳೂರಿನಲ್ಲಿ ಗುಂಡಿಗಳ ಸಮಸ್ಯೆ ಕೇಳಿ ಬರುತ್ತಿರುವುದು ಸಾಮಾನ್ಯವಾಗಿದೆ. ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್ ನಿಲ್ದಾಣದ ಮುಖ್ಯರಸ್ತೆ ಗುಂಡಿಮಯ ಆಗಿದೆ. ಇದರಿಂದ ಜನರಿಗೆ ಓಡಾಡಲು ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ. ಬೃಹತ್ ಗಾತ್ರದ ಗುಂಡಿಗಳಿಂದ ವಾಹನಗಳು ಓಡಾಡುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ವೈಟ್ ಟಾಪಿಂಗ್ ಕಾಮಗಾರಿ ಮಾಡಲು ಬಿಬಿಎಂಪಿ (BBMP) ಪ್ಲ್ಯಾನ್ ಮಾಡಿದೆ.ಇದನ್ನೂ ಓದಿ: ಜಾತಿ ವ್ಯವಸ್ಥೆ ಅನಿಷ್ಟಗಳಿಗೆ ಮೂಲ ಎನ್ನುವವರೇ ಅದನ್ನು ಪೋಷಿಸುತ್ತಾ ಇದ್ದಾರೆ: ಪೇಜಾವರ ಶ್ರೀ

    ಸದ್ಯ ವೈಟ್ ಟಾಪಿಂಗ್ ಮಾಡಲು ಸಿದ್ಧವಾಗಿದ್ದು, ವೈಟ್ ಟಾಪಿಂಗ್ ಕಾಮಗಾರಿ ಮುಂದಿನ ತಿಂಗಳ ಮೊದಲ ವಾರದಲ್ಲಿ ಆರಂಭ ಆಗಲಿದೆ. ರಸ್ತೆಯ ಒಂದು ಭಾಗವನ್ನು ಬಂದ್ ಮಾಡಿ ಕಾಮಗಾರಿ ಆರಂಭ ಮಾಡಲಿದ್ದು, ಮತ್ತೊಂದು ಭಾಗದಲ್ಲಿ ರಸ್ತೆ ಸಂಚಾರ ಇರಲಿದೆ. ವೈಟ್ ಟ್ಯಾಪಿಂಗ್ ಕೆಲಸದಿಂದ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆಯಿದೆ.

    Majestic

    ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಓಡಾಟಕ್ಕೆ ಸಮಸ್ಯೆ ಆಗಲಿದೆ. ರೈಲ್ವೆ ಸ್ಟೇಷನ್, ಆನಂದ್ ರಾವ್ ಸರ್ಕಲ್, ಚಿಕ್ಕಪೇಟೆ, ಉಪ್ಪಾರಪೇಟೆ ಸೇರಿದಂತೆ ಮೆಜೆಸ್ಟಿಕ್ ಸುತ್ತಮುತ್ತ ಟ್ರಾಫಿಕ್ ಜಾಮ್ ಆಗಲಿದೆ. ಕಾಮಗಾರಿ ಆರಂಭವಾದ ನಾಲ್ಕು ತಿಂಗಳುಗಳ ಕಾಲ ಈ ಸಮಸ್ಯೆ ಇರಲಿದೆ.

    ಮೆಜೆಸ್ಟಿಕ್‌ನಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಮಾಡುವುದು ಒಳ್ಳೆಯ ವಿಚಾರವಾದರೆ ಕಾಮಗಾರಿ ಆರಂಭ ಮಾಡಿ ಬೇಗ ಕೆಲಸ ಮುಗಿಸುತ್ತಾರಾ ಎನ್ನುವುದೇ ಸದ್ಯದ ಕುತೂಹಲ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ: 28-10-2024

  • ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜನ ಜಾತ್ರೆ- ಸಾಮಾಜಿಕ ಅಂತರ ಮರೆತ ಜನ

    ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಜನ ಜಾತ್ರೆ- ಸಾಮಾಜಿಕ ಅಂತರ ಮರೆತ ಜನ

    ಬೆಂಗಳೂರು: ಇಕ್ಕಟಿನಲ್ಲಿ ಸಿಲುಕಿದ್ದ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳನ್ನು ತವರು ಜಿಲ್ಲೆಗಳಿಗೆ ಕಳಿಸಲು ರಾಜ್ಯ ಸರ್ಕಾರ ಸಾರಿಗೆ ವ್ಯವಸ್ಥೆಯನ್ನ ಮಾಡಿದೆ. ಆದರೆ ಪ್ರಯಾಣಿಕರು ಮಾತ್ರ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.

    ಮೆಜೆಸ್ಟಿಕ್‍ನ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಸಾವಿರಾರು ಜನ ಗುಂಪು ಗುಂಪಾಗಿ ಓಡಾಡುವುದು, ನಿಂತುಕೊಂಡಿರುವ ದೃಶ್ಯಗಳು ಸಾಮಾನ್ಯವಾಗಿ ಕಂಡು ಬಂದವು. ಅನೇಕರು ಮಾಸ್ಕ್ ಧರಿಸದೇ ಬಸ್ ನಿಲ್ದಾಣದಲ್ಲಿ ಕುಳಿತಿದ್ದರು ಹಾಗೂ ಓಡಾಡುತ್ತಿದ್ದರು.

    BUS 2

    ಸರ್ಕಾರ ಇಷ್ಟೇಲ್ಲ ಅನುಕೂಲ ಒದಗಿಸಿದರೂ ಸಾರ್ವಜನಿಕರು ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಮರೆತಿದ್ದು ಬೇಸರದ ಸಂಗತಿಯಾಗಿದೆ. ನೂರಾರು ಜನರು ರಾತ್ರಿಯೇ ಬಸ್ ನಿಲ್ದಾಣಕ್ಕೆ ಬಂದಿದ್ದರಿಂದ ಜನದಟ್ಟನೆ ಹೆಚ್ಚಾಗಿತ್ತು. ಹೀಗಾಗಿ ಜನರು ಎಲ್ಲಂದರಲ್ಲಿ ಕುಳಿತು, ಮಲಗಿ ಕಾಲ ಕಳೆದರು. ಅಷ್ಟೇ ಅಲ್ಲದೆ ಬೆಳಗ್ಗೆಯೂ ಸಾಮಾಜಿಕ ಅಂತರ ಕಂಡು ಬರಲಿಲ್ಲ.

    ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ವರಿಷ್ಠಾಧಿಕಾರಿಗಳಿಂದ ಅನುಮತಿ ಪಡೆದು ಖಾಸಗಿ ವಾಹನಗಳಲ್ಲಿಯೂ ಸಂಚರಿಸಬಹುದಾಗಿದೆ. ರೆಡ್‍ಝೋನ್‍ಗಳಿಗೆ ಬಸ್ ಸಂಚಾರ ಇರುವುದಿಲ್ಲ. ರಾಜ್ಯ ಸಾರಿಗೆ ರಸ್ತೆ ಇಲಾಖೆಯು ಪ್ರತಿ ಡಿಪೋದಿಂದ ಒಟ್ಟು 150 ಕೆಎಸ್‌ಆರ್‌ಟಿಸಿ ಬಸ್‍ಗಳನ್ನ ಕರೆಸಿಕೊಂಡಿದೆ. ಈ ಎಲ್ಲಾ ಬಸ್‍ಗಳು ರಾಜ್ಯದ ವಿವಿಧ ಜಿಲ್ಲೆಗಳಿಗೆ ಪ್ರಯಾಣ ಬೆಳೆಸಲಿವೆ.

  • BMTC ಬಸ್ ನಿಲ್ದಾಣದ ಉದ್ಘಾಟನೆಯ ಕಿತ್ತಾಟ-ಸಂಸದರಿಗೆ ಆಹ್ವಾನಿಸದಕ್ಕೆ ಬಿಜೆಪಿ ಕಾರ್ಯಕರ್ತರ ಕಿಡಿ

    BMTC ಬಸ್ ನಿಲ್ದಾಣದ ಉದ್ಘಾಟನೆಯ ಕಿತ್ತಾಟ-ಸಂಸದರಿಗೆ ಆಹ್ವಾನಿಸದಕ್ಕೆ ಬಿಜೆಪಿ ಕಾರ್ಯಕರ್ತರ ಕಿಡಿ

    ಬೆಂಗಳೂರು/ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ಬಿಎಂಟಿಸಿ ಬಸ್ ನಿಲ್ದಾಣದ ಉದ್ಘಾಟನಾ ಕಾರ್ಯಕ್ರಮಕ್ಕೆ ಸಂಸದ ಬಿ.ಎನ್.ಬಚ್ಚೇಗೌಡ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಕಾರ್ಯಕ್ರಮ ತಡೆದು ಪ್ರತಿಭಟನೆ ನಡೆಸಿದ್ದಾರೆ.

    ಕಾರ್ಯಕ್ರಮಕ್ಕೆ ಸಂಸದ ಬಿ.ಎನ್. ಬಚ್ಚೇಗೌಡರ ಅವರನ್ನು ಗಣನೆಗೆ ತೆಗೆದುಕೊಳ್ಳದೆ, ಸಚಿವ ಎಂಟಿಬಿ ನಾಗರಾಜ್ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಕಾಟಾಚಾರಕ್ಕೆ ಹೆಸರು ಮುದ್ರಿಸಿ ಸಂಸದರಿಗೆ ಆಹ್ವಾನ ನೀಡದೆ ಅವಮಾನಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ANE BJP PROTECT2

    ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಯತ್ನಿಸಿದರೂ, ಬ್ಯಾರಿಕೇಡ್‍ಗಳನ್ನು ತಳ್ಳಿಕೊಂಡು ಕಾರ್ಯಕ್ರಮ ಪ್ರವೇಶಿಸಿ ಆಕ್ರೋಶ ಹೊರಹಾಕಿದರು. ಸಮಾರಂಭದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿದೆ. ಕಾರ್ಯಕರ್ತರನ್ನು ಸಂಧಾನಗೊಳಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.