ಚಿಕ್ಕೋಡಿ: `ಪರಮಾತ್ಮ ಬರ್ತಾನೆ ಜೀವ ಒಯ್ಯುತ್ತಾನೆ’ ಅಂತ ಸೆಪ್ಟೆಂಬರ್ 8 ರಂದು ದೇವರನ್ನ ನೋಡಲು 21 ಭಕ್ತರು ದೇಹತ್ಯಾಗ ಮಾಡಲು ಹೊರಟಿದ್ದ ಭಕ್ತಿಯ ಪರಕಾಷ್ಠೆಯ ಘಟನೆ ಬೆಳಗಾವಿ (Belagavi) ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದಲ್ಲಿ ನಡೆದಿದೆ.
ಸೆಪ್ಟೆಂಬರ್ 08 ರಂದು ಪ್ರಾಣತ್ಯಾಗ ಮಾಡೋದಕ್ಕೆ 10ಕ್ಕೂ ಹೆಚ್ಚು ಭಕ್ತರು (Devotees) ಮುಂದಾಗಿದ್ದದ್ದು ಆಧುನಿಕ ಯುಗದಲ್ಲಿ ಮೂಢನಂಬಿಕೆ ಪದ್ಧತಿ ಇನ್ನು ಜೀವಂತವಾಗಿದಿಯಾ ಎನ್ನುವ ಪ್ರಶ್ನೆ ಕಾಡುತ್ತಿದೆ. ಅನಂತಪುರ ಗ್ರಾಮದ ಇರಕರ ಕುಟುಂಬದ 4 ಜನ ಸೇರಿದಂತೆ 10ಕ್ಕೂ ಹೆಚ್ಚು ಭಕ್ತರು ಪ್ರಾಣ ತ್ಯಾಗಕ್ಕೆ ನಿರ್ಧಾರ ಮಾಡಿದ್ದರು. ಹರಿಯಾಣದ ವಿವಾದತ್ಮಕ ಸಂತ ರಾಮಪಾಲ ಅನುಯಾಯಿಗಳು ದೇಹತ್ಯಾಗ ಮಾಡಲು ಮುಂದಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣದಲ್ಲಿ ಅಮಾಯಕ ಮಾಸ್ಕ್ ಮ್ಯಾನ್‌ನನ್ನು ಬಲಿ ಕೊಡ್ತಿದ್ದಾರೆ: ಪಿ.ರಾಜೀವ್
2014ರ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸಂತ ರಾಮಪಾಲ ಅವರ ಪುಸ್ತಕ ಓದಿ ಹಾಗೂ ಪ್ರವಚನ ಕೇಳಿ ಅನಂತಪುರ ಗ್ರಾಮದ ಇರಕರ ಕುಟುಂಬದ, ತುಕಾರಾಮ, ಸಾವಿತ್ರಿ, ರಮೇಶ್, ವೈಷ್ಣವಿ ಪ್ರಾಣತ್ಯಾಗಕ್ಕೆ ಮುಂದಾಗಿದ್ದರು. ಇದನ್ನೂ ಓದಿ: ಕೂಲಿಂಗ್ ಗ್ಲಾಸ್ ಧರಿಸಿ ವಿಚಾರಣೆಗೆ ಹಾಜರಾದ ʻಬುರುಡೆʼ ಸಮೀರ್ – ವಿಚಾರಣೆ ಶುರು
ಇರಕರ ಕುಟುಂಬ ಹಾಗೂ ಉತ್ತರ ಪ್ರದೇಶದ 17 ಭಕ್ತರು ಪ್ರಾಣ ತ್ಯಾಗಕ್ಕೆ ನಿರ್ಧಾರ ಮಾಡಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚಿಕ್ಕೋಡಿ ಉಪ ವಿಬಾಗಾಧಿಕಾರಿ ಸುಭಾಷ ಸಂಪಗಾಂವಿ ಹಾಗೂ ಪೊಲೀಸರು ಮತ್ತು ಮಠಾಧೀಶರಿಂದ ಭಕ್ತರ ಮನವೊಲಿಕೆ ಮಾಡಿದ ಬಳಿಕ ಸಧ್ಯ ದೇಹತ್ಯಾಗ ನಿರ್ಧಾರದಿಂದ ಭಕ್ತರು ಹಿಂದೆ ಸರಿದಿದ್ದಾರೆ.