Tag: ಭಾರತ ಟೆಸ್ಟ್‌ ಕ್ರಿಕೆಟ್‌

  • Justice For Rinku Singh – ಟೀಂ ಇಂಡಿಯಾದಲ್ಲಿ ಸ್ಥಾನ ನೀಡುವಂತೆ ಫ್ಯಾನ್ಸ್ ಆಗ್ರಹ

    Justice For Rinku Singh – ಟೀಂ ಇಂಡಿಯಾದಲ್ಲಿ ಸ್ಥಾನ ನೀಡುವಂತೆ ಫ್ಯಾನ್ಸ್ ಆಗ್ರಹ

    – ಯಶಸ್ವಿ ಜೈಸ್ವಾಲ್‌ಗೆ ಡಬಲ್ ಧಮಾಕ

    ಮುಂಬೈ: ಆಗಸ್ಟ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯಲಿರುವ 5 ಪಂದ್ಯಗಳ ಟಿ20 ಸರಣಿಗೆ ಭಾರತ ತಂಡದಲ್ಲಿ (Team India) ಸ್ಥಾನ ಪಡೆಯುವ ಅವಕಾಶವನ್ನು KKR ತಂಡದ ಫಿನಿಷರ್ ಖ್ಯಾತಿಯ ರಿಂಕು ಸಿಂಗ್ ಕಳೆದುಕೊಂಡಿದ್ದಾರೆ. ಹಾಗಾಗಿ ರಿಂಕು ಸಿಂಗ್ ಪರ ಧ್ವನಿ ಎತ್ತಿರುವ ಫ್ಯಾನ್ಸ್ ಟೀಂ ಇಂಡಿಯಾದ T20 ತಂಡದಲ್ಲಿ ಸ್ಥಾನ ನೀಡುವಂತೆ ಒತ್ತಾಯಿಸಿ #ಜಸ್ಟೀಸ್ ಫಾರ್ ರಿಂಕು ಸಿಂಗ್ (#JusticeForRinkuSingh) ಕ್ಯಾಂಪೇನ್ ಆರಂಭಿಸಿದ್ದಾರೆ.

    ಹೌದು. ಆಗಸ್ಟ್ 3 ರಿಂದ ಆಗಸ್ಟ್ 13ರ ವರೆಗೆ 5 ಪಂದ್ಯಗಳ T20 ಸರಣಿ ನಡೆಯಲಿದೆ. ವೆಸ್ಟ್ ಇಂಡೀಸ್ ಪ್ರವಾಸದ 5 ಪಂದ್ಯಗಳ ಟಿ20ಐ ಕ್ರಿಕೆಟ್ ಸರಣಿಗೆ 15 ಸದಸ್ಯರ ಭಾರತ ತಂಡವನ್ನು BCCI ಪ್ರಕಟಿಸಿದೆ. ಈ ತಂಡದಲ್ಲಿ 2023ರ ಐಪಿಎಲ್ ಟೂರ್ನಿಯಲ್ಲಿ ಮಿಂಚಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್ (Yashasvi Jaiswal) ಹಾಗೂ ತಿಲಕ್ ವರ್ಮಾ ಚೊಚ್ಚಲ ಅವಕಾಶ ಪಡೆದುಕೊಂಡಿದ್ದಾರೆ. ಆದ್ರೆ ಕೆಕೆಆರ್‌ನಲ್ಲಿ ಫಿನಿಷರ್ ಎಂದೇ ಗುರುತಿಸಿಕೊಂಡಿದ್ದ ರಿಂಕು ಸಿಂಗ್ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

    ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿರುವ ಉಮೇಶ್ ಯಾದವ್ ಅವರನ್ನು T20 ತಂಡದಿಂದ ಕೈಬಿಡಲಾಗಿದ್ದರೂ ರಿಂಕು ಸಿಂಗ್ ಸಿಂಗ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಆದ್ರೆ ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಅವಕಾಶ ಪಡೆದುಕೊಂಡಿದ್ದ ಯಶಸ್ವಿ ಜೈಸ್ವಾಲ್, ಇದೀಗ T20 ತಂಡದಲ್ಲೂ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

    Rinku Singh 3

    ವೆಸ್ಟ್ ಇಂಡೀಸ್ ವಿರುದ್ಧ ಟೆಸ್ಟ್ ಹಾಗೂ ಏಕದಿನ ಸರಣಿಗಳಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಟಿ20 ಸರಣಿಯಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅನುಭವಿ ಆಟಗಾರರಿಗೆ ಕೊಕ್ ನೀಡಲಾಗಿದ್ದು, ಹಾರ್ದಿಕ್ ಪಾಂಡ್ಯ (Hardik Pandya) ಟಿ20 ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಸೂರ್ಯಕುಮಾರ್ ಯಾದವ್ ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಇದನ್ನೂ ಓದಿಪೂಜಾರ ಔಟ್‌, ಯಶಸ್ವಿ ಇನ್‌ – ವಿಂಡೀಸ್‌ ಸರಣಿಗೆ ಭಾರತ ಟೆಸ್ಟ್‌, ಏಕದಿನ ತಂಡ ಪ್ರಕಟ

    Cheteshwar Pujara

    2023ರ ಐಪಿಎಲ್ ಟೂರ್ನಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರಿಂಕು ಸಿಂಗ್ 14 ಪಂದ್ಯಗಳಲ್ಲಿ 59.25ರ ಸರಾಸರಿಯಲ್ಲಿ 474 ರನ್‌ಗಳನ್ನು ಗಳಿಸಿದ್ದರು. ಅಷ್ಟೇ ಅಲ್ಲದೆ 149.52ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದು ಎಲ್ಲರ ಗಮನ ಸೆಳೆದಿತ್ತು. ಮುಖ್ಯವಾಗಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರೋಚಕ ಘಟ್ಟದಲ್ಲಿದ್ದಾಗ ಯಶ್ ದಯಾಳ್ ಬೌಲಿಂಗ್‌ಗೆ ಒಂದೇ ಓವರ್‌ನಲ್ಲಿ 5 ಭರ್ಜರಿ ಸಿಕ್ಸರ್ ಸಿಡಿಸಿ ರಿಂಕು ಎಲ್ಲರ ಗಮನ ಸೆಳೆದಿದ್ದರು.

    Yashasvi Jaiswal Sanju Samson

    ಭಾರತ ಟಿ20 ತಂಡ:

    ಇಶಾನ್ ಕಿಶನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ಸೂರ್ಯ ಕುಮಾರ್ ಯಾದವ್ (ಉಪನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ರವಿ ಬಿಷ್ಣೋಯಿ, ಅರ್ಷ್ದೀಪ್ ಸಿಂಗ್, ಉಮ್ರಾನ್ ಮಲಿಕ್, ಅವೇಶ್ ಖಾನ್, ಮುಖೇಶ್ ಕುಮಾರ್.

    Hardik Pandya 1

    ಭಾರತ ಟೆಸ್ಟ್ ತಂಡ:

    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.

    ಭಾರತ ಏಕದಿನ ತಂಡ:

    ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.

    ಟಿ20 ಪಂದ್ಯಗಳು ಎಲ್ಲಿ ಯಾವಾಗ..?

    ಮೊದಲನೇ ಟಿ20: ಆಗಸ್ಟ್ 3, ಬ್ರಿಯಾನ್ ಲಾರಾ ಸ್ಟೇಡಿಯಂ, ಟ್ರಿನಿಡಾಡ್
    2ನೇ ಟಿ20: ಆಗಸ್ಟ್ 6, ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನ
    2ನೇ ಟಿ20: ಆಗಸ್ಟ್ 8, ಪ್ರಾವಿಡೆನ್ಸ್ ಸ್ಟೇಡಿಯಂ, ಗಯಾನ
    4ನೇ ಟಿ20: ಆಗಸ್ಟ್ 12, ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ, ಲಾಡರ್ಹಿಲ್, ಫ್ಲೋರಿಡಾ
    4ನೇ ಟಿ20: ಆಗಸ್ಟ್ 13, ಸೆಂಟ್ರಲ್ ಬ್ರೋವರ್ಡ್ ಪಾರ್ಕ್ ಸ್ಟೇಡಿಯಂ, ಲಾಡರ್ಹಿಲ್, ಫ್ಲೋರಿಡಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]