Tag: ರಣಬೀರ್ ಕಪೂರ್

  • ರಾಮಾಯಣ ಫಸ್ಟ್ ಟೈಟಲ್ ಟೀಸರ್ ರಿಲೀಸ್: ರಾಮ-ರಾವಣನ ಆರ್ಭಟ ಶುರು

    ರಾಮಾಯಣ ಫಸ್ಟ್ ಟೈಟಲ್ ಟೀಸರ್ ರಿಲೀಸ್: ರಾಮ-ರಾವಣನ ಆರ್ಭಟ ಶುರು

    ಶ್ (Yash) ನಟಿಸಿ ನಿರ್ಮಿಸುತ್ತಿರುವ ಮಹಾತ್ವಾಕಾಂಕ್ಷೆಯ ಪ್ರಾಜೆಕ್ಟ್ ರಾಮಾಯಣ (Ramayana) ಚಿತ್ರದ ಅಫಿಷಿಯಲ್ ಫಸ್ಟ್‌ ಟೈಟಲ್‌ ಟೀಸರ್‌ ರಿಲೀಸ್‌ ಆಗಿದೆ. ರಾಮಾಯಣ ಫಸ್ಟ್‌ ಟೈಟಲ್‌ ಟೀಸರ್‌ ಕೊನೆಗೂ ರಿಲೀಸ್‌ ಆಗಿದೆ. ಟೀಸರ್‌ನಲ್ಲಿ ರಾಮ-ರಾವಣ ಆರ್ಭಟ ಶುರುವಾಗಿದೆ.

    ರಾಮಾಯಣ ಫಸ್ಟ್‌ ಟೈಟಲ್‌ ಟೀಸರ್‌ ಅನ್ನು ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಹತ್ತು ವರ್ಷಗಳ ಆಕಾಂಕ್ಷೆ. ಸಾರ್ವಕಾಲಿಕ ಶ್ರೇಷ್ಠ ಮಹಾಕಾವ್ಯವನ್ನು ಜಗತ್ತಿಗೆ ತರುವ ನಿರಂತರ ದೃಢನಿಶ್ಚಯ. ರಾಮಾಯಣವನ್ನು ಅತ್ಯಂತ ಗೌರವದಿಂದ ಪ್ರಸ್ತುತಪಡಿಸಲು ವಿಶ್ವದ ಕೆಲವು ಅತ್ಯುತ್ತಮ ವ್ಯಕ್ತಿಗಳು ಒಟ್ಟಾಗಿ ಶ್ರಮಿಸಿದ್ದಾರೆ. ಅದರ ಫಲಿತಾಂಶ ಇದು ಎಂದು ಯಶ್‌ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: 5 ದಿನಕ್ಕೆ 10 ಕೋಟಿ – ಇದು ಅಕ್ಷಯ್‌ ಕುಮಾರ್‌ ಕಾಲ್‌ ಶೀಟ್!

    ಆರಂಭಕ್ಕೆ ಸ್ವಾಗತ. ರಾಮ v/s ರಾವಣನ ಅಮರ ಕಥೆಯನ್ನು ಆಚರಿಸೋಣ. ನಮ್ಮ ಸತ್ಯ. ನಮ್ಮ ಇತಿಹಾಸ ಎಂದು ಯಶ್‌ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

    ಟಾಕ್ಸಿಕ್ ಹಾಗೂ ರಾಮಾಯಣ, ಎರಡೂ ಚಿತ್ರಗಳ ನಿರ್ಮಾಣ ಹಾಗೂ ನಟನೆಯಲ್ಲಿ ಯಶ್ ಬ್ಯುಸಿ ಇದ್ದಾರೆ. ಹೀಗಾಗಿ ಟೈಟ್ ಶೆಡ್ಯೂಲ್ ಶೂಟಿಂಗ್ ಮುಗಿಸಿ ಇದೀಗ ಅಲ್ಪ ಸಮಯದಲ್ಲಿ ಪ್ರವಾಸಕ್ಕೆಂದು ಯಶ್‌ ಹೋಗಿದ್ದಾರೆ. ಇದನ್ನೂ ಓದಿ: ರಾಮಾಯಣ ಫಸ್ಟ್ ಗ್ಲಿಮ್ಸ್ ನೋಡಲು ತಯಾರಾಗಿ ಎಂದ ಯಶ್

    ರಾಮಾಯಣ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್‌ ಕಪೂರ್‌, ಸೀತೆ ಪಾತ್ರದಲ್ಲಿ ಸಾಯಿಪಲ್ಲವಿ ಹಾಗೂ ರಾವಣನ ಪಾತ್ರದಲ್ಲಿ ಕೆಜಿಎಫ್‌ ಸ್ಟಾರ್‌ ಯಶ್‌ ಕಾಣಿಸಿಕೊಂಡಿದ್ದಾರೆ.

  • ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!

    ಆಲಿಯಾ ಭಟ್‌ ಮತ್ತೆ ಪ್ರೆಗ್ನೆಂಟ್..? ವೈರಲ್‌ ಆಯ್ತು ವಿಡಿಯೋ..!

    ಬಾಲಿವುಡ್‌ ಬೆಡಗಿ ಆಲಿಯಾ ಭಟ್‌ (Alia Bhatt) ಅವರ ಹೊಟ್ಟೆ ಕೊಂಚ ಉಬ್ಬಿದಂತೆ ಕಾಣಿಸಿಕೊಂಡ ವಿಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಈ ಬೆನ್ನಲ್ಲೇ ನಟಿ ಮತ್ತೆ ಗರ್ಭಿಣಿಯಾಗಿದ್ದಾರೆ (Pregnant) ಎಂಬ ವದಂತಿ ಹಬ್ಬಿದ್ದು, ಪರ ವಿರೋಧ ಚರ್ಚೆಯನ್ನೂ ಹುಟ್ಟುಹಾಕಿದೆ.

    Alia Bhatt at the L’Oreal Lights On Women Awards at Cannes
    byu/Big-Criticism-8926 inBollyBlindsNGossip

    ಹೌದು.. ಶುಕ್ರವಾರ ಕಾನ್‌ ಫಿಲಂ ಫೆಸ್ಟಿವಲ್‌ನಲ್ಲಿ (Cannes Film Festival) ನಟಿ ಆಲಿಯಾ ಭಟ್‌ ಕಾಣಿಸಿಕೊಂಡ ರೀತಿ ಈ ವದಂತಿಗೆ ಕಾರಣವಾಗಿದೆ. ಇದನ್ನೂ ಓದಿ: ‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!

    ಖಾನ್‌ ಫೆಸ್ಟಿವಲ್‌ಗೆ ನಟಿ ಶಿಯಾಪರೆಲ್ಲಿ ಗೌನ್‌ನಲ್ಲಿ ಎಂಟ್ರಿ ಕೊಟ್ಟಿದ್ದಾಗ ಫ್ಯಾಷನ್‌ ಪೋಸ್‌ ಕೊಟ್ಟರು.ಈ ವೇಳೆ ಅವರ ಹೊಟ್ಟೆಯ ಭಾಗ ಸ್ವಲ್ಪ ಉಬ್ಬಿದಂತೆ ಕಂಡುಬಂದಿತ್ತು. ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಲಿತಾ ಮತ್ತೆ ಪ್ರೆಗ್ನೆಂಟ್‌ ಆಗಿದ್ದಾರಾ? ಅಂತ ಪ್ರಶ್ನೆ ಮಾಡತೊಡಗಿದ್ರು. ಇದಕ್ಕೆ ಕೆಲವರು ಯೆಸ್‌… ಯೆಸ್‌… ಅಂತಾ ಕಾಮೆಂಟ್‌ ಮಾಡಿದ್ದಾರೆ. ಆದ್ರೆ ಆಲಿಯಾ ಭಟ್‌- ರಣಬೀರ್‌ ಕಪೂರ್‌ ದಂಪತಿಯಿಂದ ಯಾವುದೇ ಅಧಿಕೃತ ಹೇಳಿಕೆಗಳು ಬಂದಿಲ್ಲ.

    Alia Bhatt 2

    ಇನ್ನೂ 2022ರಲ್ಲಿ ರಣಬೀರ್ ಕಪೂರ್ (Ranbir Kapoor) ಜೊತೆ ಆಲಿಯಾ ಮದುವೆ ನಡೆಯಿತು. ಇವರ ಸುಂದರ ದಾಂಪತ್ಯಕ್ಕೆ 2 ವರ್ಷದ ಮಗಳು ರಾಹಾ ಸಾಕ್ಷಿಯಾಗಿದ್ದಾಳೆ. ಇದನ್ನೂ ಓದಿ: ತಮನ್ನಾ ರಾಯಭಾರಿ | ತೆರಿಗೆ ಪಾವತಿದಾರರ ಹಣವನ್ನು ವ್ಯರ್ಥ ಮಾಡಿದಂತೆ: ರಮ್ಯಾ ಬೇಸರ

    ಮದುವೆ ಬಳಿಕ ಸಿನಿಮಾಗಳಿಗೆ ಬ್ರೇಕ್‌ ನೀಡಿದ್ದ ಆಲಿಯಾ ಭಟ್‌ ಇದೀಗ ʻಬ್ರಹ್ಮಾಸ್ತ್ರ-2ʼ ಚಿತ್ರಕ್ಕಾಗಿ ಕೆಲಸ ಮಾಡ್ತಿದ್ದಾರೆ ಎಂದು ತಿಳಿದುಬಂದಿದೆ. 2022ರಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ-1’ ಸಿನಿಮಾ ರಿಲೀಸ್ ಆಗಿತ್ತು. ಚಿತ್ರದಲ್ಲಿ ಬಿಗ್ ಬಿ, ನಾಗಾರ್ಜುನ, ಮೌನಿ ರಾಯ್ ಸೇರಿದಂತೆ ಅನೇಕರು ನಟಿಸಿದ್ದರು. ಈ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಇದನ್ನೂ ಓದಿ: ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!

  • ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

    ಯಶ್‌ ನಟನೆಯ ರಾಮಾಯಣ ಚಿತ್ರದ ಫಸ್ಟ್‌ ಗ್ಲಿಂಪ್ಸ್ WAVES ಶೃಂಗಸಭೆಯಲ್ಲಿ ರಿಲೀಸ್‌

    – ರಾವಣನ ಅವತಾರದಲ್ಲಿ ರಾಕಿಂಗ್‌ ಸ್ಟಾರ್‌ನ ಲುಕ್‌

    ‘ರಾಕಿಂಗ್ ಸ್ಟಾರ್’ ಯಶ್ ಅಭಿಮಾನಿಗಳು (Yash Fans) ಕಳೆದ 3 ವರ್ಷಗಳಿಂದ ಕಾಯುತ್ತಿದ್ದು, ಮುಂದಿನ ವರ್ಷ ʻಟಾಕ್ಸಿಕ್ʼ ಮತ್ತು ʻರಾಮಾಯಣʼ ಸಿನಿಮಾಗಳ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ. ʻಟಾಕ್ಸಿಕ್ʼ 2026ರ ಮಾರ್ಚ್ 19ಕ್ಕೆ ಬಿಡುಗಡೆಯಾಗಲಿದ್ದು, ʻರಾಮಾಯಣʼ ಪಾರ್ಟ್‌-1 ದೀಪಾವಳಿಯ ಹೊತ್ತಿಗೆ ತೆರೆಯ ಮೇಲೆ ಬರಲಿದೆ. ಯಶ್‌ ನಟನೆಯ ಈ ಎರಡೂ ದಿನಿಮಾಗಳು ಭರ್ಜರಿ ಹಿಟ್‌ ಆಗಲಿದೆ, ಜೊತೆಗೆ ಯಶ್ ಅವರ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲಿವೆ ಎಂದು ನಿರೀಕ್ಷಿಸಲಾಗಿದೆ.

    ramayana

    ಈ ನಡುವೆ ಚಿತ್ರತಂಡದಿಂದ ರಾಮಾಯಣ ಪಾರ್ಟ್‌-1 (Ramayana Part-1) ಚಿತ್ರದ ಫಸ್ಟ್‌ ಗ್ಲಿಂಪ್ಸ್‌ ಮುಂದಿನ ಮೇ 1 ರಿಂದ 4ರ ವರೆಗೆ ನಡೆಯಲಿರುವ ವಿಶ್ವ ಆಡಿಯೋ ವಿಷುಯಲ್ & ಎಂಟರ್ಟೈನ್ಮೆಂಟ್ ಶೃಂಗಸಭೆ (ಅಕಾ WAVES ಶೃಂಗಸಭೆ)ಯಲ್ಲಿ ರಿಲೀಸ್‌ ಆಗಲಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ತಮನ್ನಾಗೆ ಬಿಗ್ ಚಾನ್ಸ್- ಬಾಲಿವುಡ್‌ನ ಹೊಸ ಚಿತ್ರಕ್ಕೆ ಮಿಲ್ಕಿ ಬ್ಯೂಟಿ ನಾಯಕಿ

    Ramayana 2

    ಬಾಲಿವುಡ್‌ ಸ್ಟಾರ್ ರಣಬೀರ್ ಕಪೂರ್‌ ರಾಮನ ಪಾತ್ರದಲ್ಲಿ ನಟಿಸಿದ್ದು, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ, ಸ್ಯಾಂಡಲ್‌ವುಡ್‌ನ ರಾಕಿಂಗ್‌ಸ್ಟಾರ್‌ ಯಶ್‌ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಲಾರಾ ದತ್ತ, ಸನ್ನಿ ಡಿಯೋಲ್ ಮತ್ತು ಇಂದಿರಾ ಕೃಷ್ಣ ಕೂಡ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರಕ್ಕಾಗಿ ರಣಬೀರ್‌ ಕಪೂರ್‌ ಅಭಿಮಾನಿಗಳೂ ಸಹ ಕಾತುರದಿಂದ ಕಾಯ್ತಿದ್ದಾರೆ. ಇದನ್ನೂ ಓದಿ: ಮೊದಲ ಬಾರಿಗೆ ಬೆಳ್ಳಿ ತೆರೆಯಲ್ಲಿ ಯಕ್ಷಗಾನ ‘ವೀರ ಚಂದ್ರಹಾಸ’ ಚಿತ್ರದ ಮೂಲಕ ಹೊಸ ಪ್ರಯೋಗ: ರವಿ ಬಸ್ರೂರು

    Ramayana 3

    ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾವು 2026ರ ಮಾರ್ಚ್ 19ರಂದು ತೆರೆಗೆ ಬರಲಿದೆ. ಇದು ಬಹುನಿರೀಕ್ಷಿತ ಬಿಗ್ ಬಜೆಟ್ ಸಿನಿಮಾವಾಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಏಕಕಾಲಕ್ಕೆ ತಯಾರಾಗುತ್ತಿದೆ. ಕೆವಿಎನ್ ಸಂಸ್ಥೆ ಮತ್ತು ಯಶ್ ಜಂಟಿಯಾಗಿ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ. ಇದರ ಜೊತೆಗೆ ನಿತೇಶ್ ತಿವಾರಿ ಅವರ ‘ರಾಮಾಯಣ: ಪಾರ್ಟ್ 1’ ಸಿನಿಮಾದಲ್ಲೂ ಯಶ್ ನಟಿಸಲಿದ್ದು, ಅದರಲ್ಲಿನ ರಾವಣನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರ ಕೂಡ 2026ರ ದೀಪಾವಳಿ ಹಬ್ಬದ ಸಮಯದಲ್ಲಿ ತೆರೆಗೆ ಬರಲಿದೆ. ಇದನ್ನೂ ಓದಿ: ಉಗ್ರರ ದಾಳಿ ಸ್ಥಳದಲ್ಲೇ ಮಾರ್ಟಿನ್ ಸಿನಿಮಾ ಶೂಟಿಂಗ್ ನಡೆದಿತ್ತು, ಆಗ ಸೆಕ್ಯೂರಿಟಿ ಚೆನ್ನಾಗಿತ್ತು: ಧ್ರುವ ಸರ್ಜಾ

  • ಮಗಳ ಫೋಟೋ ತೆಗೆದರೆ ಕಾನೂನು ಕ್ರಮ: ಆಲಿಯಾ ಭಟ್ ವಾರ್ನಿಂಗ್

    ಮಗಳ ಫೋಟೋ ತೆಗೆದರೆ ಕಾನೂನು ಕ್ರಮ: ಆಲಿಯಾ ಭಟ್ ವಾರ್ನಿಂಗ್

    ಬಾಲಿವುಡ್ ನಟ ರಣಬೀರ್ ಕಪೂರ್‌ ‌(Ranbir Kapoor) ಮತ್ತು ಆಲಿಯಾ ಭಟ್ (Alia Bhatt) ದಂಪತಿ ಮಗಳು ರಾಹಾ (Raha Kapoor) ಸುರಕ್ಷತೆಗಾಗಿ ದಿಟ್ಟ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಮಗಳ ಫೋಟೋವನ್ನು ಕ್ಲಿಕ್ಕಿಸಬೇಡಿ, ಒಂದು ವೇಳೆ ತೆಗೆದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆಲಿಯಾ ಪಾಪರಾಜಿಗಳಿಗೆ ಖಡಕ್ ಸೂಚನೆಯನ್ನು ಕೊಟ್ಟಿದ್ದಾರೆ. ಇದನ್ನೂ ಓದಿ:ಫ್ಯಾಮಿಲಿ ಜೊತೆ ಹೋಳಿ ಹಬ್ಬ ಆಚರಿಸಿದ ಕತ್ರಿನಾ ಕೈಫ್

    alia bhatt 1

    ಮಾ.15ರಂದು ಆಲಿಯಾ ಭಟ್ 32ನೇ ವಸಂತಕ್ಕೆ ಕಾಲಿಡಲಿದ್ದಾರೆ. ಈ ಹಿನ್ನೆಲೆ 2 ದಿನ ಮುಂಚಿತವಾಗಿ ನಿನ್ನೆ (ಮಾ.13) ಮಾಧ್ಯಮಗಳ ಜೊತೆ ಹುಟ್ಟುಹಬ್ಬವನ್ನು ನಟಿ ಆಚರಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ಆಲಿಯಾ, ಯಾರೂ ಕೂಡ ತಮ್ಮ ಮಗಳ ಫೋಟೋ ತೆಗೆಯಬಾರದು ಮತ್ತು ಅನಧಿಕೃತವಾಗಿ ಬಳಸಬಾರದು ಎಂದು ಮನವಿ ಮಾಡಿದ್ದಾರೆ.

    alia bhatt

    ಒಂದು ವೇಳೆ ಕೆಲವರು ಮಾತು ಕೇಳದೇ ಇದ್ದರೆ ಅಂಥವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳದೇ ಬೇರೆ ಯಾವುದೇ ಆಯ್ಕೆ ಇಲ್ಲ ಎಂದಿದ್ದಾರೆ. ಕೇರ್ ಮಾಡದೇ ಇರುವವರಿಗೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಟಿ ಎಚ್ಚರಿಕೆ ನೀಡಿದ್ದಾರೆ. ನಟಿಯ ಈ ನಿರ್ಧಾರಕ್ಕೆ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    ಇನ್ನೂ 2022ರಲ್ಲಿ ರಣಬೀರ್ ಕಪೂರ್ ಜೊತೆ ಆಲಿಯಾ ಮದುವೆ ನಡೆಯಿತು. ಇವರ ಸುಂದರ ದಾಂಪತ್ಯಕ್ಕೆ 2 ವರ್ಷದ ಮಗಳು ರಾಹಾ ಸಾಕ್ಷಿಯಾಗಿದ್ದಾಳೆ.

  • ಫ್ಯಾನ್ಸ್‌ಗೆ ಸಿಹಿಸುದ್ದಿ- ‘ಬ್ರಹ್ಮಾಸ್ತ್ರ 2’ ಬಗ್ಗೆ ಅಪ್‌ಡೇಟ್ ಕೊಟ್ಟ ರಣಬೀರ್ ಕಪೂರ್

    ಫ್ಯಾನ್ಸ್‌ಗೆ ಸಿಹಿಸುದ್ದಿ- ‘ಬ್ರಹ್ಮಾಸ್ತ್ರ 2’ ಬಗ್ಗೆ ಅಪ್‌ಡೇಟ್ ಕೊಟ್ಟ ರಣಬೀರ್ ಕಪೂರ್

    ಬಾಲಿವುಡ್ ನಟ ರಣಬೀರ್ ಕಪೂರ್ (Ranbir Kapoor) ಹಾಗೂ ಆಲಿಯಾ ಭಟ್‌ (Alia Bhatt) ನಟನೆಯ ‘ಬ್ರಹ್ಮಾಸ್ತ್ರ’ ಚಿತ್ರದ ಸೀಕ್ವೆಲ್‌ ಯಾವಾಗ ಬರಲಿದೆ ಎಂಬುದಕ್ಕೆ ಇದೀಗ ಉತ್ತರ ಸಿಕ್ಕಿದೆ.  ‘ಬ್ರಹ್ಮಾಸ್ತ್ರ’ ಸೀಕ್ವೆಲ್ ಬರೋದಾಗಿ ರಣಬೀರ್‌ ಖಚಿತಪಡಿಸಿದ್ದಾರೆ. ಈ ಮೂಲಕ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಇದನ್ನೂ ಓದಿ:ಬೆಂಗಳೂರಿನ ಬೆಡಗಿ ಜೊತೆ ಡೇಟಿಂಗ್ ಮಾಡ್ತಿದ್ದೀನಿ: ಪಾರ್ಟಿಯಲ್ಲಿ ಗೆಳತಿ ಬಗ್ಗೆ ಆಮೀರ್ ಮಾತು

    ranbir kapoor

    ಅಂತೂ ಇಂತೂ ಅಭಿಮಾನಿಗಳ ಕಾತರಕ್ಕೆ ಬ್ರೇಕ್‌ ಬಿದ್ದಿದೆ. ‘ಬ್ರಹ್ಮಾಸ್ತ್ರ 2’ ಬಗ್ಗೆ ಇಂಟರೆಸ್ಟಿಂಗ್‌ ಸುದ್ದಿಯನ್ನ ರಣಬೀರ್‌ ಹಂಚಿಕೊಂಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ರಣಬೀರ್ ಕಪೂರ್ ಮಾತನಾಡಿ, ‘ಬ್ರಹ್ಮಾಸ್ತ್ರ 2’ (Brahmastra 2) ಬರುವ ಬಗ್ಗೆ ಖಚಿತಪಡಿಸಿದ್ದಾರೆ. ಚಿತ್ರದ ನಿರ್ದೇಶಕ ಅಯಾನ್ ‘ವಾರ್ 2’ ಚಿತ್ರೀಕರಣದಲ್ಲಿ ಬ್ಯುಸಿಯಿದ್ದು, ಸಿನಿಮಾ ರಿಲೀಸ್ ಆದ್ಮೇಲೆ ‘ಬ್ರಹ್ಮಾಸ್ತ್ರ 2’ಗೆ ಚಾಲನೆ ಸಿಗಲಿದೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಳ್ಳುತ್ತೇವೆ ಎಂದಿದ್ದಾರೆ.

    Ranbir Kapoor

    ಇನ್ನೂ 2022ರಲ್ಲಿ ರಣಬೀರ್ ಕಪೂರ್ ಮತ್ತು ಆಲಿಯಾ ಭಟ್ ನಟನೆಯ ‘ಬ್ರಹ್ಮಾಸ್ತ್ರ’ ಸಿನಿಮಾ ರಿಲೀಸ್ ಆಗಿತ್ತು. ಚಿತ್ರದಲ್ಲಿ ಬಿಗ್ ಬಿ, ನಾಗಾರ್ಜುನ, ಮೌನಿ ರಾಯ್ ಸೇರಿದಂತೆ ಅನೇಕರು ನಟಿಸಿದ್ದರು. ಈ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು.

  • ರಣಬೀರ್ ಕಪೂರ್-ದೀಪಿಕಾ ಪಡುಕೋಣೆಯ ‘ಯೇ ಜವಾನಿ ಹೈ ದೀವಾನಿ’ ಜ.3ಕ್ಕೆ ರೀ-ರಿಲೀಸ್

    ರಣಬೀರ್ ಕಪೂರ್-ದೀಪಿಕಾ ಪಡುಕೋಣೆಯ ‘ಯೇ ಜವಾನಿ ಹೈ ದೀವಾನಿ’ ಜ.3ಕ್ಕೆ ರೀ-ರಿಲೀಸ್

    ಚೆಗೆ ಕರಣ್‌ ಜೋಹರ್‌ ಅವರ ಧರ್ಮ ಪ್ರೊಡಕ್ಷನ್ಸ್‌ ‘ಯೇ ಜವಾನಿ ಹೈ ದೀವಾನಿ’ (Yeh Jawaani Hai Deewani) ಸಿನಿಮಾ ಬಗ್ಗೆ ಪೋಸ್ಟ್‌ವೊಂದನ್ನು ಹಂಚಿಕೊಂಡಿದೆ. ಬಾಲಿವುಡ್‌ ನಟ ರಣಬೀರ್‌ ಕಪೂರ್‌ (Ranbir Kapoor) ಮತ್ತು ದೀಪಿಕಾ ಪಡುಕೋಣೆ (Deepika Padukone) ಅಭಿನಯದ ಈ ಚಿತ್ರ ಜ.3 ಕ್ಕೆ ರೀ-ರಿಲೀಸ್‌ ಆಗಲಿದೆ.

    ಬಾಲಿವುಡ್‌ನ ಅತ್ಯಂತ ಪ್ರೀತಿಪಾತ್ರ ಚಲನಚಿತ್ರಗಳಲ್ಲಿ ಒಂದಾದ ಯೇ ಜವಾನಿ ಹೈ ದೀವಾನಿ 2025 ರ ಜನವರಿ 3 ರಂದು 46 ನಗರಗಳಲ್ಲಿ 140 PVR INOX ಚಿತ್ರಮಂದಿರಗಳಲ್ಲಿ ಥಿಯೇಟರ್‌ಗಳಲ್ಲಿ ರೀ ರಿಲೀಸ್‌ ಆಗಲಿದೆ. 2024 ರಲ್ಲಿ, ತುಂಬದ್, ವೀರ್ ಜರಾ, ಮತ್ತು ರೆಹನಾ ಹೈ ತೇರ್ರೆ ದಿಲ್ ಮೇ ಮುಂತಾದ ಹಲವಾರು ಚಲನಚಿತ್ರಗಳು ಥಿಯೇಟರ್‌ಗಳಲ್ಲಿ ರೀ-ರಿಲೀಸ್‌ ಆಗಿದ್ದವು. ರಣಬೀರ್‌ ಮತ್ತು ದೀಪಿಕಾ ಜೋಡಿ ಸಿನಿಮಾವನ್ನು ದೊಡ್ಡ ಪರದೆಯಲ್ಲಿ ಕಣ್ತುಂಬಿಕೊಳ್ಳಲು ಫ್ಯಾನ್ಸ್‌ ಕಾಯ್ತಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಆರೋಪ – `ಮುದ್ದುಲಕ್ಷ್ಮಿ’ ಸೀರಿಯಲ್ ನಟ ಚರಿತ್ ಬಾಳಪ್ಪ ಬಂಧನ

    karan johar with davan 1

    ಯೇ ಜವಾನಿ ಹೈ ದೀವಾನಿ ಮರು-ಬಿಡುಗಡೆಯ ಬಗ್ಗೆ ಖುಷಿ ವ್ಯಕ್ತಪಡಿಸಿದ ನಿರ್ಮಾಪಕ ಕರಣ್ ಜೋಹರ್, ‘ಯೇ ಜವಾನಿ ಹೈ ದೀವಾನಿ’ ಧರ್ಮ ಪ್ರೊಡಕ್ಷನ್ಸ್ ಹೃದಯದಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ. ಈ ಸಿನಿಮಾದಲ್ಲಿ ಉತ್ತಮ ಸಂಗೀತವಿದೆ. ನಮ್ಮ ಅತ್ಯಂತ ಪ್ರೀತಿಯ ಕೆಲವು ನಟರು ಮತ್ತು ಎಲ್ಲಾ ತಲೆಮಾರುಗಳನ್ನು ಪ್ರತಿಧ್ವನಿಸುವ ಕಥೆಯನ್ನು ಹೊಂದಿದೆ. ಹೊಸ ವರ್ಷವನ್ನು ಖುಷಿಯಾಗಿ ಸ್ವಾಗತಿಸಲು ಸಿನಿಮಾ ಪೂರಕವಾಗಿದೆ ಎಂದು ತಿಳಿಸಿದ್ದಾರೆ.

    ಯೇ ಜವಾನಿ ಹೈ ದೀವಾನಿಯು ರೊಮ್ಯಾಂಟಿಕ್ ಹಾಸ್ಯ-ಡ್ರಾಮಾ ಮೂವಿಯಾಗಿದೆ. ರಣಬೀರ್ ಕಪೂರ್, ದೀಪಿಕಾ ಪಡುಕೋಣೆ, ಕಲ್ಕಿ ಕೋಚ್ಲಿನ್ ಮತ್ತು ಆದಿತ್ಯ ರಾಯ್ ಕಪೂರ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಅದರ ಕಥಾಹಂದರ ಮತ್ತು ಪಾತ್ರವರ್ಗದ ಪ್ರದರ್ಶನಗಳ ಹೊರತಾಗಿ, ಚಿತ್ರವು ಅದರ ಚಾರ್ಟ್‌ಬಸ್ಟರ್ ಹಾಡುಗಳಾದ ಬಡ್ತಮೀಜ್ ದಿಲ್, ಬಲಮ್ ಪಿಚ್ಕರಿ ಮತ್ತು ದಿಲ್ಲಿವಾಲಿ ಗರ್ಲ್‌ಫ್ರೆಂಡ್‌ಗಳಿಗೆ ಜನಪ್ರಿಯವಾಗಿದೆ. ಇದನ್ನೂ ಓದಿ: BBK 11: ಸ್ಪರ್ಧಿಗಳಿಗೆ ಮಿಡ್ ವೀಕ್ ಎಲಿಮಿನೇಷನ್ ಶಾಕ್?- ದೊಡ್ಮನೆಯಿಂದ ಔಟ್ ಆಗಿದ್ಯಾರು?

  • ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಣಬೀರ್ ಕಪೂರ್- ‘ಧೂಮ್ 4’ ಬಗ್ಗೆ ಚರ್ಚೆ ಶುರು

    ಸ್ಟೈಲೀಶ್ ಆಗಿ ಕಾಣಿಸಿಕೊಂಡ ರಣಬೀರ್ ಕಪೂರ್- ‘ಧೂಮ್ 4’ ಬಗ್ಗೆ ಚರ್ಚೆ ಶುರು

    ‘ಅನಿಮಲ್’ (Animal) ಸಿನಿಮಾದ ಸಕ್ಸಸ್ ನಂತರ ರಣಬೀರ್ ಕಪೂರ್ ಬೇಡಿಕೆ ಹೆಚ್ಚಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ ರಾಮನಾಗಿ ನಟಿಸುವುದರ ಜೊತೆಗೆ ಹಲವು ಪ್ರಾಜೆಕ್ಟ್‌ಗಳಲ್ಲಿ ನಟಿಸಲು ಅವಕಾಶಗಳು ಅರಸಿ ಬರುತ್ತಿದೆ. ಈ ನಡುವೆ ಅವರ ಹೊಸ ಲುಕ್‌ವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಸಿಕ್ಕಾಪಟ್ಟೆ ಸ್ಟೈಲೀಶ್ ಆಗಿ ರಣಬೀರ್ ಕಪೂರ್ (Ranbir Kapoor) ಕಾಣಿಸಿಕೊಂಡಿದ್ದಾರೆ.

    ranbir kapoor

    ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಆಲಿಮ್ ಹಕಿಮ್ ಅವರು ರಣಬೀರ್ ಹೊಸ ಲುಕ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಈ ಬೆನ್ನಲ್ಲೇ, ನಟ ‘ಧೂಮ್ 4’ (Dhoom 4) ಚಿತ್ರಕ್ಕಾಗಿ ಹೇರ್ ಸ್ಟೈಲ್ ಬದಲಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

     

    View this post on Instagram

     

    A post shared by Aalim Hakim (@aalimhakim)


    ಇನ್ನೂ ‘ಧೂಮ್’ ಚಿತ್ರದ ಈ ಹಿಂದಿನ ಮೂರು ಸರಣಿಗಳು ಸೂಪರ್ ಹಿಟ್ ಆಗಿದೆ. ಹಾಗಾಗಿ ‘ಧೂಮ್ 4’ ಚಿತ್ರದ ಬಗ್ಗೆ ಫ್ಯಾನ್ಸ್‌ಗೆ ಭಾರೀ ನಿರೀಕ್ಷೆಯಿದೆ. ಇನ್ನೂ ಈ ಚಿತ್ರದಲ್ಲಿ ರಣಬೀರ್ ನೆಗೆಟಿವ್ ಶೇಡ್‌ನಲ್ಲಿ ನಟಿಸಲಿದ್ದಾರೆ ಎನ್ನಲಾಗಿದೆ.

    ಅಂದಹಾಗೆ, ರಾಮಾಯಣ, ಧೂಮ್ 4, ಅನಿಮಲ್ ಪಾರ್ಕ್, ಕರಣ್ ಜೋಹರ್ ಜೊತೆಗಿನ ಸಿನಿಮಾ ಸೇರಿದಂತೆ ಹಲವು ಸಿನಿಮಾಗಳು ರಣಬೀರ್ ಕೈಯಲ್ಲಿವೆ.

  • ‘ರಾಮಾಯಣ’ ಚಿತ್ರದ ಲೆಕ್ಕಾಚಾರ ಕೇಳಿದರೆ ತಲೆ ತಿರುಗೋದು ಗ್ಯಾರಂಟಿ

    ‘ರಾಮಾಯಣ’ ಚಿತ್ರದ ಲೆಕ್ಕಾಚಾರ ಕೇಳಿದರೆ ತಲೆ ತಿರುಗೋದು ಗ್ಯಾರಂಟಿ

    ಬಾಲಿವುಡ್ ಸಿನಿಮಾ ರಂಗದಲ್ಲಿ ರಾಮಾಯಣ ಸಿನಿಮಾದ ಬಜೆಟ್, ಸಂಭಾವನೆಯದ್ದೇ ಸುದ್ದಿ. ಮೂರು ಪಾರ್ಟ್ ನಲ್ಲಿ ಈ ರಾಮಾಯಣ ಸಿನಿಮಾ ಮೂಡಿ ಬರಲಿದ್ದು, ಒಟ್ಟು ಬಜೆಟ್ ಎಷ್ಟು, ಯಾರಿಗೆ ಎಷ್ಟು ಸಂಭಾವನೆ (Remuneration) ನೀಡಲಾಗಿದೆ, ಅತೀ ಹೆಚ್ಚು ಸಂಭಾವನೆ ಪಡೆದ ನಟ ಯಾರು ಹೀಗೆ ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದಾರೆ. ಅಧಿಕೃತವಾಗಿ ಚಿತ್ರತಂಡ ಹೇಳಿಕೊಳ್ಳದೇ ಇದ್ದರೂ, ನಟ, ನಟಿಯರು ಭರ್ಜರಿ ಸಂಭಾವನೆಯನ್ನೇ ಪಡೆದಿದ್ದಾರೆ.

    Ramayana 2

    ರಾಮನ ಪಾತ್ರದಲ್ಲಿ ಮಿಂಚಲಿರುವ ಬಾಲಿವುಡ್ ನಟ ರಣಬೀರ್ ಕಪೂರ್ ಬರೋಬ್ಬರಿ 75 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಮೂರು ಪಾರ್ಟ್ ಸೇರಿ ಇವರಿಗೆ 225 ಕೋಟಿ ರೂಪಾಯಿ ಸಂದಾಯವಾಗಲಿದೆಯಂತೆ. ರಾವಣನ ಪಾತ್ರಧಾರಿ ಯಶ್ (Yash) ಮೂರೂ ಪಾರ್ಟ್ ಸೇರಿ 150 ಕೋಟಿ ರೂಪಾಯಿ ಸಂಭಾವನೆ ಪಡೆಯಲಿದ್ದಾರಂತೆ. ನಟಿ ಸಾಯಿ ಪಲ್ಲವಿ 18 ಕೋಟಿ ರೂಪಾಯಿ ನೀಡಲಾಗುತ್ತಿದೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದಾವುದೂ ಖಚಿತ ಮಾಹಿತಿ ಅಲ್ಲ ಎನ್ನುವುದು ನೆನಪಿನಲ್ಲಿಡಬೇಕಾದ ಸಂಗತಿ.

    ranbir kapoor

    ಈ ನಡುವೆ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

    sai pallavi 1

    ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದರೆ ಫಿಟ್ ಆಗಿರಬೇಕು. ಅಲ್ಲದೇ ಗೆಟಪ್ ಸಹ ಬದಲಾಯಿಸಿಕೊಳ್ಳಬೇಕು. ಅದಕ್ಕಾಗಿ ರಣಬೀರ್ ಕಪೂರ್ ಅವರು ತಮ್ಮ ಟ್ರೇನರ್ ಜೊತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

     

    ‘ಅನಿಮಲ್’ ಚಿತ್ರದ ಸಕ್ಸಸ್ ನಂತರ ರಾಮನಾಗಿ ಬರುತ್ತಿರುವ ರಣ್‌ಬೀರ್ ಕಪೂರ್ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ಕೂಡ ಆಲಿಯಾ ಪತಿ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.

  • ‘ರಾಮಾಯಣ’ ಸಿನಿಮಾಗಾಗಿ ರಣ್‌ಬೀರ್ ಕಪೂರ್ ಕಸರತ್ತು

    ‘ರಾಮಾಯಣ’ ಸಿನಿಮಾಗಾಗಿ ರಣ್‌ಬೀರ್ ಕಪೂರ್ ಕಸರತ್ತು

    ಬಾಲಿವುಡ್‌ನಲ್ಲಿ ಬಿಗ್ ಬಜೆಟ್‌ನಲ್ಲಿ ಮೂಡಿ ಬರುತ್ತಿರುವ ಸಿನಿಮಾ ಅಂದರೆ ರಾಮಾಯಣ. ಈ ಸಿನಿಮಾಗಾಗಿ ರಣ್‌ಬೀರ್ (Ranbir Kapoor) ಹಳ್ಳಿಯಲ್ಲಿ ಸಿಕ್ಕಾಪಟ್ಟೆ ವರ್ಕೌಟ್ ಮಾಡುತ್ತಿದ್ದಾರೆ. ರಾಮನ ಅವತಾರದಲ್ಲಿ ಬರಲು ‘ಅನಿಮಲ್‌’ ಹೀರೋ ಭಾರೀ ತಯಾರಿ ಮಾಡಿಕೊಳ್ತಿದ್ದಾರೆ. ಇದನ್ನೂ ಓದಿ:ನಯನತಾರಾ ಜೊತೆ ಮದುವೆ ಆಗಲು ‘ನಾನುಂ ರೌಡಿ ದಾನ್’ ಕಾರಣ ಎಂದ ವಿಘ್ನೇಶ್

    ranbir kapoor 1‘ದಂಗಲ್’ ಸಿನಿಮಾ ನಂತರ ರಾಮಾಯಣ (Ramayana) ಚಿತ್ರಕ್ಕಾಗಿ ಡೈರೆಕ್ಟರ್ ಹ್ಯಾಟ್ ತೊಟ್ಟಿದ್ದಾರೆ ನಿತೇಶ್ ತಿವಾರಿ. ಚಿತ್ರತಂಡ ಕೂಡ ಪಾತ್ರಕ್ಕಾಗಿ ಏನೆಲ್ಲಾ ತಯಾರಿ ಮಾಡಲು ತಿಳಿಸಿದ್ದಾರೋ ಅದನ್ನು ಪ್ರಾಮಾಣಿಕವಾಗಿ ರಣ್‌ಬೀರ್ ಕಪೂರ್ ಮಾಡುತ್ತಿದ್ದಾರೆ. ‘ಆದಿಪುರುಷ್’ (Adipurush Film) ಸಿನಿಮಾದಂತೆ ತಮ್ಮ ಸಿನಿಮಾ ಆಗಬಾರದು ಎಂದು ಎಚ್ಚರಿಕೆಯಿಂದ ರಣ್‌ಬೀರ್ ಹೆಜ್ಜೆ ಇಡುತ್ತಿದ್ದಾರೆ.

    ranbirರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕು ಎಂದರೆ ಫಿಟ್ ಆಗಿರಬೇಕು. ಅಲ್ಲದೇ ಗೆಟಪ್ ಸಹ ಬದಲಾಯಿಸಿಕೊಳ್ಳಬೇಕು. ಅದಕ್ಕಾಗಿ ರಣಬೀರ್ ಕಪೂರ್ ಅವರು ತಮ್ಮ ಟ್ರೇನರ್ ಜೊತೆ ಹಳ್ಳಿಗೆ ಹೋಗಿ ತರಬೇತಿ ಪಡೆದುಕೊಳ್ಳುತ್ತಿದ್ದಾರೆ. ವಿವಿಧ ಬಗೆಯ ವ್ಯಾಯಾಮ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ.

    ‘ಅನಿಮಲ್’ ಚಿತ್ರದ ಸಕ್ಸಸ್ ನಂತರ ರಾಮನಾಗಿ ಬರುತ್ತಿರುವ ರಣ್‌ಬೀರ್ ಕಪೂರ್ ಮೇಲೆ ಅಭಿಮಾನಿಗಳಿಗೆ ಭಾರೀ ನಿರೀಕ್ಷೆಯಿದೆ. ರಾಮನಾಗಿ ಕೂಡ ಆಲಿಯಾ ಪತಿ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.

  • ರಾಮನ ಪಾತ್ರಕ್ಕಾಗಿ ರಣಬೀರ್ ಕಪೂರ್ ತರಬೇತಿ

    ರಾಮನ ಪಾತ್ರಕ್ಕಾಗಿ ರಣಬೀರ್ ಕಪೂರ್ ತರಬೇತಿ

    ಬಾಲಿವುಡ್ ಖ್ಯಾತ ನಟ ರಣಬೀರ್ ಕಪೂರ್ ಇದೇ ಮೊದಲ ಬಾರಿಗೆ ಪಾತ್ರವೊಂದಕ್ಕಾಗಿ ತರಬೇತಿ ಪಡೆಯುತ್ತಿದ್ದಾರಂತೆ. ರಾಮಯಾಣ (Ramayana) ಸಿನಿಮಾದಲ್ಲಿ ಇವರು ರಾಮನ ಪಾತ್ರ ನಿರ್ವಹಿಸುತ್ತಿದ್ದು, ಈ ಪಾತ್ರಕ್ಕಾಗಿ ಹಲವು ಬಗೆಯ ತರಬೇತಿಯನ್ನು ರಣಬೀರ್ ಪಡೆದುಕೊಳ್ಳುತ್ತಿದ್ದಾರಂತೆ. ರಾಮನ ಪಾತ್ರವೆಂದರೆ, ಅದು ಸಾಮಾನ್ಯವಾದದ್ದಲ್ಲ. ಹಾಗಾಗಿ ಈ ತರಬೇತಿ ಅಗತ್ಯವಿದೆಯಂತೆ.

    ranbir kapoor

    ಈ ರಾಮಾಯಣ ಸಿನಿಮಾ ಬಗ್ಗೆ ದಿನಕ್ಕೊಂದು ಮಾಹಿತಿ ಹೊರ ಬೀಳುತ್ತಿದೆ. ನಿರ್ದೇಶಕ ನಿತಿಶ್ ತಿವಾರಿ ದಕ್ಷಿಣದ ಹೀರೋಗಳ ಬಗ್ಗೆ ಒಲವು ತೋರಿ, ಇಲ್ಲಿನ ಕಲಾವಿದರನ್ನು ತಮ್ಮ ಚಿತ್ರಕ್ಕಾಗಿ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ತಮಿಳಿನ ಹೆಸರಾಂತ ನಟ ವಿಜಯ್ ಸೇತುಪತಿ (Vijay Sethupathi) ಕೂಡ ಈ ಸಿನಿಮಾದಲ್ಲಿ ರಾವಣನ ಸಹೋದರನಾಗಿ ನಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

    vijay sethupathi 3

    ರಾವಣನ ಸಹೋದರನಾಗಿ ವಿಜಯ್ ಸೇತುಪತಿ ನಟಿಸಿದರೆ, ಈ ಹಿಂದೆ ರಾವಣನಾಗಿ (Raavan) ಕನ್ನಡದ ನಟ ಯಶ್ (Yash) ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು ದೊಡ್ಡ ಸುದ್ದಿ ಆಗಿತ್ತು. ಸಾಕಷ್ಟು ಬಾರಿ ಈ ವಿಚಾರ ಮುನ್ನೆಲೆಗೆ ಬಂದರೂ, ಯಶ್ ಮಾತ್ರ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೂ, ಈ ಸುದ್ದಿ ಹರಿದಾಡುವುದು ತಪ್ಪಿಲ್ಲ.

    Yash 1

    ಯಶ್ ಏನೂ ಹೇಳದೇ ಇದ್ದರೂ, ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ಮಧು ಮಾಂಟೇನ್ ಅವರು ಯಶ್ ಈ ಸಿನಿಮಾದಲ್ಲಿ ಇರಲಿದ್ದಾರೆ ಎಂದು ಈ ಹಿಂದೆಯೇ ಹೇಳಿದ್ದರು. ಅವರೊಂದಿಗೆ ಮಾತುಕತೆ ನಡೆಯುತ್ತಿದೆ ಎಂದೂ ಮಾತನಾಡಿದ್ದರು. ಅದು ಈಗ ನಿಜವಾದಂತೆ ಕಾಣುತ್ತಿದೆ. ಈಗಾಗಲೇ ಯಶ್ ಲುಕ್ ಟೆಸ್ಟ್ ಕೊಟ್ಟಿದ್ದಾರೆ ಎನ್ನುವ ಮಾಹಿತಿ ಸಿಗುತ್ತಿದೆ. ಈ ಸಿನಿಮಾಗಾಗಿ ಅವರು 15 ದಿನಗಳ ಕಾಲ ಕಾಲ್ ಶೀಟ್ ಕೂಡ ನೀಡಿದ್ದಾರೆ ಎನ್ನುವುದು ತಾಜಾ ಮಾಹಿತಿ.

    Yash

    ನಿತಿಶ್ ತಿವಾರಿ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಸತತ ಮೂರ್ನಾಲ್ಕು ವರ್ಷಗಳಿಂದ ಈ ಚಿತ್ರಕ್ಕಾಗಿ ತಿವಾರಿ ಕೆಲಸ ಮಾಡುತ್ತಿದ್ದಾರೆ. ಮಾರ್ಚ್ 2024ರಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂದು ಅಂದಾಜಿಸಲಾಗಿದೆ. ರಾವಣನಾಗಿ ಯಶ್ ನಟಿಸಿದರೆ, ಶ್ರೀರಾಮನ ಪಾತ್ರವನ್ನು ರಣಬೀರ್ ಕಪೂರ್  (Ranbir Kapoor) ನಿರ್ವಹಿಸಲಿದ್ದಾರೆ. ಸೀತೆ ಪಾತ್ರವು ಸಾಯಿ ಪಲ್ಲವಿ (Sai Pallavi)ಅವರ ಪಾಲಾಗಿದೆ.

     

    ಸದ್ಯ ಯಶ್ ಹೊಸ ಸಿನಿಮಾದ ಕೆಲಸದಲ್ಲಿ ಬ್ಯೂಸಿಯಾಗಿದ್ದಾರೆ. ಅಲ್ಲದೇ ದೇಶ ವಿದೇಶ ಸುತ್ತುತ್ತಿದ್ದಾರೆ. ಸದ್ಯದಲ್ಲೇ ಹೊಸ ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ. ರಾಮಾಯಣ ಸಿನಿಮಾ ಶುರುವಾಗುವ ಹೊತ್ತಿಗೆ ಹೊಸ ಸಿನಿಮಾದ ಬಹುತೇಕ ಕೆಲಸ ಮುಗಿಯುವ ಸಾಧ್ಯತೆ ಇದ್ದು, ಅದಕ್ಕಾಗಿ ಈ ಸಿನಿಮಾವನ್ನು ಯಶ್ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.