Tag: ವಿಧಾನ ಪರಿಷತ್ ಚುನಾವಣೆ

  • ʻಮಹಾʼ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!

    ʻಮಹಾʼ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಗೆಲುವು; 11ರ ಪೈಕಿ 9 ಸ್ಥಾನಗಳಲ್ಲಿ ಜಯ!

    – I.N.D.I.A ಕೂಟಕ್ಕೆ ಮುಖಭಂಗ!

    ಮುಂಬೈ: ಮಹಾರಾಷ್ಟ್ರ ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ (Legislative Council Poll Result) ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿದೆ. ಬಿಜೆಪಿ-ಏಕನಾಥ್‌ ಶಿಂಧೆ (Eknath Shinde) ಬಣದ ಶಿವಸೇನೆ ಹಾಗೂ ಮಿತ್ರಪಕ್ಷಗಳು 11 ಸ್ಥಾನಗಳ ಪೈಕಿ 9 ಸ್ಥಾನಗಳನ್ನು ಗೆದ್ದುಕೊಂಡಿವೆ.

    274 ಸದಸ್ಯರ ಬಲದ ವಿಧಾನಸಭೆಯಿಂದ ಅಭ್ಯರ್ಥಿಗಳು ಮೇಲ್ಮನೆಗೆ ಆಯ್ಕೆಯಾಗಿದ್ದಾರೆ. ಪರಿಷತ್‌ನ 11 ಸ್ಥಾನಗಳಿಗೆ ಶುಕ್ರವಾರ ಮತದಾನ ನಡೆದು, ಸಂಜೆ ವೇಳೆಗೆ ಫಲಿತಾಂಶ ಪ್ರಕಟಗೊಂಡಿದೆ. ಈ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೈತ್ರಿಕೂಟ (BJP Shiv Sena Alliance) ಸ್ಪರ್ಧಿಸಿದ್ದ 9 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಇದನ್ನೂ  ಓದಿ: ಪ್ರತಿವರ್ಷ ಜೂನ್‌ 25ರಂದು ʻಸಂವಿಧಾನ ಹತ್ಯಾ ದಿವಸ್‌ʼ ಆಚರಣೆ – ಅಮಿತ್‌ ಶಾ ಘೋಷಣೆ

    devendra fadnavis eknath shinde

    103 ಶಾಸಕರನ್ನು ಹೊಂದಿರುವ ಬಿಜೆಪಿಯ ಐವರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇವರಲ್ಲಿ ಪಂಕಜಾ ಮುಂಡೆ ಪ್ರಮುಖರಾಗಿದ್ದಾರೆ. ಜೊತೆಗೆ ಶಿವಸೇನೆ ಶಿಂಧೆ ಬಣ ಹಾಗೂ ಎನ್‌ಸಿಪಿ ಅಜಿತ್‌ ಪವಾರ್‌ ನೇತೃತ್ವದ ತಲಾ ಒಬ್ಬರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಳೆದ ಲೋಕಸಭಾ ಚುನಾವಣೆಯ ಹಿನ್ನಡೆಯನ್ನು ಮೆಟ್ಟಿನಿಂತಿದ್ದಾರೆ. ಆದ್ರೆ ಇಂಡಿಯಾ ಕೂಟದ ಕಾಂಗ್ರೆಸ್‌ ಒಂದು ಸ್ಥಾನ ಪಡೆದರೆ, ಯುಬಿಟಿ ಸಹ ಒಂದೇ ಒಂದು ಸ್ಥಾನ ಪಡೆದು ತೀವ್ರ ಮುಖಭಂಗ ಅನುಭವಿಸಿದೆ.

    ಪರಿಷತ್‌ ಚುನಾವಣೆಗೆ ಮುನ್ನ ಕುದುರೆ ವ್ಯಾಪಾರ, ರೆಸಾರ್ಟ್‌ ರಾಜಕಾರಣದ ಭೀತಿ ಉಂಟಾಗಿತ್ತು. ಜೊತೆಗೆ ಪ್ರತಿಪಕ್ಷಗಳಿಂದ ಅಡ್ಡಮತದಾನದ ಭೀತಿಯೂ ಕಾಡಿತ್ತು. ಆದ್ರೆ ಕಾಂಗ್ರೆಸ್‌ನ 6 ಶಾಸಕರು ಅಡ್ಡಮತದಾನ ಮಾಡಿದ್ದಾರೆ. ಅಜಿತ್‌ ಪವಾರ್‌ ಬಣದ ಎನ್‌ಸಿಪಿಗೆ ಮತ ಚಲಾಯಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಇದನ್ನೂ  ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ

  • ಜವರಾಯಿಗೌಡಗೆ ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌

    ಜವರಾಯಿಗೌಡಗೆ ಜೆಡಿಎಸ್‌ ಎಂಎಲ್‌ಸಿ ಟಿಕೆಟ್‌

    ಬೆಂಗಳೂರು: ವಿಧಾನಸಭೆಯಿಂದ (Vidhan Sabha) ವಿಧಾನ ಪರಿಷತ್ (Vidhana Parishad) ಸ್ಥಾನಕ್ಕೆ ನಡೆಯುವ ಚುನಾವಣೆಗೆ ಜೆಡಿಎಸ್ (JDS) ಅಭ್ಯರ್ಥಿಯಾಗಿ 4 ಬಾರಿ ಯಶವಂತಪುರ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋತಿದ್ದ ಜವರಾಯಿಗೌಡ ಅವರಿಗೆ ಜೆಡಿಎಸ್ ಟಿಕೆಟ್ ನೀಡಿದೆ.

    ಇಂದು ನಡೆದ ಶಾಸಕಾಂಗ ಸಭೆಯಲ್ಲಿ ಜವರಾಯಿಗೌಡ (Javarayi Gowda) ಹೆಸರು ಘೋಷಣೆ ಮಾಡಲಾಯಿತು. ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ನೇತೃತ್ವದಲ್ಲಿ ಜವರಾಯಿಗೌಡ ನಾಮಪತ್ರ ಸಲ್ಲಿಕೆ ಮಾಡಿದರು.  ಇದನ್ನೂ ಓದಿ: 64.2 ಕೋಟಿ ಜನರಿಂದ ಮತದಾನ – ಸಾರ್ವತ್ರಿಕ ಚುನಾವಣೆಯಲ್ಲಿ ಭಾರತ ವಿಶ್ವದಾಖಲೆ

     

    ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಕುಮಾರಸ್ವಾಮಿ, 4 ಬಾರಿ ಕಡಿಮೆ ಅಂತರದಿಂದ ಜವರಾಯಿಗೌಡ ಸೋತಿದ್ದರು. ಪಕ್ಷದ ಕಾರ್ಯಕರ್ತರ ಭಾವನೆಗೆ ಬೆಲೆ ಕೊಟ್ಟು ಅವರಿಗೆ ಟಿಕೆಟ್ ನೀಡಿದ್ದೇವೆ. ಫಾರೂಕ್ ಮತ್ತು ಕುಪ್ಪೇಂದ್ರ ರೆಡ್ಡಿ ಅವರ ಹೆಸರು ಚರ್ಚೆ ಆಯಿತು. ಅಂತಿಮವಾಗಿ ಜವರಾಯಿಗೌಡಗೆ ಟಿಕೆಟ್‌ ನೀಡಲು ಇಬ್ಬರು ನಾಯಕರು ಒಪ್ಪಿಕೊಂಡರು ಎಂದು ಕುಮಾರಸ್ವಾಮಿ ತಿಳಿಸಿದರು. ಇದನ್ನೂ ಓದಿ: ಎನ್‌ಡಿಎ ಸರ್ಕಾರ ರಚನೆಯಾದ 15 ದಿನಗಳಲ್ಲಿ ಮೋದಿ ಜೊತೆ ಉದ್ಧವ್‌ ಠಾಕ್ರೆ ಕಾಣಿಸಿಕೊಳ್ಳಲಿದ್ದಾರೆ: ಶಾಸಕ ರವಿ ರಾಣಾ

    ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿದ ಅಭ್ಯರ್ಥಿ ಜವರಾಯಿಗೌಡ ಕಣ್ಣೀರು ಹಾಕುತ್ತಲೇ ಪ್ರತಿಕ್ರಿಯೆ ನೀಡಿದರು. 4 ಬಾರಿ ನಾನು ಚುನಾವಣೆ ಸೋತಿದ್ದೆ. ನನ್ನನ್ನ ಕೈ ಬಿಡಬಾರದು ಅಂತ ಕುಮಾರಸ್ವಾಮಿ, ದೇವೇಗೌಡರು ನನ್ನನ್ನ ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಿದ್ದಾರೆ. ನಾನು ಯಾವತ್ತು ದೇವೇಗೌಡರ ಕುಟುಂಬಕ್ಕೆ ಚಿರೃಣಿ ಆಗಿರುತ್ತೇನೆ. ನನ್ನನ್ನ ಆಯ್ಕೆ ಮಾಡಿದ ಕುಮಾರಸ್ವಾಮಿ, ದೇವೇಗೌಡ, ಪಕ್ಷ 19 ಶಾಸಕರಿಗೂ ನಾನು ಧನ್ಯವಾದ ಹೇಳುತ್ತೇನೆ. ಪಕ್ಷಕ್ಕಾಗಿ, ಪಕ್ಷದ ಸಂಘಟನೆಗಾಗಿ ಕೆಲಸ ಮಾಡುತ್ತೇನೆ ಅಂತ ಕಣ್ಣೀರು ಹಾಕುತ್ತಾ ದೇವೇಗೌಡರ ಕುಟುಂಬಕ್ಕೆ ಧನ್ಯವಾದ ಹೇಳಿದರು.

     

  • ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

    ವಿಧಾನ ಪರಿಷತ್‌ ಚುನಾವಣೆ – ಸಿ.ಟಿ.ರವಿ ಸೇರಿ ಮೂವರಿಗೆ ಬಿಜೆಪಿ ಟಿಕೆಟ್‌

    – ಸುಮಲತಾ ಸೇರಿ ಹಲವು ಪ್ರಮುಖರಿಗೆ ಕೈ ತಪ್ಪಿದ ಟಿಕೆಟ್‌

    ಬೆಂಗಳೂರು: ಕರ್ನಾಟಕ ವಿಧಾನ ಸಭೆಯಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ (Vidhan Parishad Elections) ಹಿನ್ನೆಲೆಯಲ್ಲಿ ಬಿಜೆಪಿ ಸಿ.ಟಿ ರವಿ ಸೇರಿ ಮೂವರು ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಣೆ ಮಾಡಿದೆ.

    ಪರಿಷತ್‌ ಸ್ಥಾನಕ್ಕೆ ಮಾಜಿ ಸಚಿವ ಸಿ.ಟಿ ರವಿ (CT Ravi), ಪರಿಷತ್ ಮುಖ್ಯ ಸಚೇತಕ ಎನ್. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ ಮುಳೆ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಸೋಮವಾರ (ಜೂ. 3) ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾದ ಹಿನ್ನೆಲೆಯಲ್ಲಿ ಇಂದು ಅಭ್ಯರ್ಥಿಗಳ (BJP Candidates) ಪಟ್ಟಿ ಬಿಡುಗಡೆ ಮಾಡಿದೆ.

    ಹೈಕಮಾಂಡ್‌ ಕೋಟಾದಿಂದ ಸಿ.ಟಿ ರವಿ, ರಾಜ್ಯ ಬಿಜೆಪಿ ಕೋಟಾದಿಂದ ಎನ್. ರವಿಕುಮಾರ್ ಹಾಗೂ ಆರ್‌ಎಸ್‌ಎಸ್‌ ಕೋಟಾದ ಅಡಿಯಲ್ಲಿ ಮಾರುತಿರಾವ್ ಗೋವಿಂದರಾವ್ ಮುಳೆ (ಎಂ.ಜಿ ಮುಳೆ) ಅವರಿಗೆ ಟಿಕೆಟ್‌ ನೀಡಲಾಗಿದೆ. ಇದನ್ನೂ ಓದಿ: ವಿಧಾನಸಭೆ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ – 60ರ ಪೈಕಿ 47 ಸ್ಥಾನಗಳಲ್ಲಿ ಮುನ್ನಡೆ

    ಮಾಜಿ ಶಾಸಕರೂ ಆಗಿರುವ ಎಂ.ಜಿ ಮುಳೆ ಮರಾಠ ಸಮುದಾಯದ ಪ್ರಭಾವಿ ನಾಯಕರೂ ಆಗಿದ್ದಾರೆ. ಈ ಮೊದಲು ಜೆಡಿಎಸ್‌ನಲ್ಲಿ ಶಾಸಕರಾಗಿದ್ದ ಮುಳೆ ಕಳೆದ ಬಸವಕಲ್ಯಾಣ ಉಪಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡಿದ್ದರು. ಇದನ್ನೂ ಓದಿ: ಚುನಾವಣೋತ್ತರ ಸಮೀಕ್ಷೆ ಬೆನ್ನಲ್ಲೇ ಸಾದಲಮ್ಮ ದೇವಿಯ ಮೊರೆ ಹೋದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ

    SUMALATHA

    ಸುಮಲತಾಗೆ ಟಿಕೆಟ್‌ ಮಿಸ್‌:
    ಪ್ರಸಕ್ತ ವರ್ಷದ ಲೋಕಸಭಾ ಚುನಾವಣೆ ವೇಳೆ ಬಿಜೆಪಿ ಸೇರ್ಪಡೆಗೊಂಡ ಸಂಸದೆ ಸುಮಲತಾ ಅವರಿಗೆ ಪರಿಷತ್‌ನಲ್ಲಿ ಟಿಕೆಟ್‌ ನೀಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿತ್ತು. ಆದ್ರೆ ಕೊನೇ ಕ್ಷಣದಲ್ಲಿ ಟಿಕೆಟ್‌ ಕೈತಪ್ಪಿದೆ. ಇದರೊಂದಿಗೆ ಮಾಜಿ ಸಚಿವ ಜೆ.ಸಿ ಮಾಧುಸ್ವಾಮಿ, ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಎನ್.ಮಹೇಶ್ ಅವರಿಗೂ ಟಿಕೆಟ್‌ ಕೈತಪ್ಪಿದೆ.

  • ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ

    ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ

    ಬೆಂಗಳೂರು: ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ (BJP) ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ (Legislative Council Elections) ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ (CN Ashwath Narayan) ಮನವಿ ಮಾಡಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಹಲವು ಸುಧಾರಣೆ, ಪ್ರಗತಿ, ನೂತನ ಕಾಯ್ದೆ ಕಾನೂನು ಜಾರಿಗೆ ತಂದಿವೆ. ಇವೆರಡು ಪಕ್ಷಗಳು ಶಿಕ್ಷಕರು, ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿವೆ ಎಂದು ವಿವರಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

    ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮತ್ತು ಆಡಳಿತ ನೀತಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೆ ಕಾಂಗ್ರೆಸ್ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ, ಪದವೀಧರರ ವಿರುದ್ಧವಾಗಿ ನೀತಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಶಿಕ್ಷಕರ ಪರವಾಗಿ ಹಲವಾರು ಸುಧಾರಣೆಗಳನ್ನು, ಅನುದಾನಿತ ಸಂಸ್ಥೆಗಳಲ್ಲಿ ಹುದ್ದೆ ಭರ್ತಿ ಮಾಡುವ ಕಾರ್ಯ ಮಾಡಿದೆ. ಕಾಂಗ್ರೆಸ್ ಪಕ್ಷದ ಆಡಳಿತ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಯಡಿಯೂರಪ್ಪನವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ. ಜ್ಞಾನ ಆಯೋಗ ಆರಂಭ, ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿ (NEP) ತರುವ ಮೂಲಕ ದೊಡ್ಡ ಸುಧಾರಣೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್

    ಕೌಶಲ್ಯಯುಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಮಹತ್ವದ ಕ್ರಮ ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್ ಪಕ್ಷವು ವಿರೋಧಿಸಿದೆ. ವೈಜ್ಞಾನಿಕವಾಗಿ ಯೋಚಿಸದೆ, ಚರ್ಚೆ-ವಿಮರ್ಶೆ ಇಲ್ಲದೆ ಏಕಾಏಕಿಯಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದುಹಾಕುತ್ತೇವೆ ಹಾಗೂ ರಾಜ್ಯ ಶಿಕ್ಷಣ ನೀತಿ ತರುವುದಾಗಿ ಮನಬಂದಂತೆ ನಿಲುವು ತೆಗೆದುಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಬಸ್‌ ಕಮರಿಗೆ ಉರುಳಿ 28 ಮಂದಿ ದುರ್ಮರಣ

    7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡದ ಈ ಕಾಂಗ್ರೆಸ್ ಸರಕಾರವು ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಒಪಿಎಸ್ ಕುರಿತು ಸುಳ್ಳು ಭರವಸೆ ಕೊಟ್ಟಿದ್ದಾರೆ. ಇದೇ ಯುಪಿಎ ಸರಕಾರ ಎನ್‌ಪಿಎಸ್ ಜಾರಿಗೊಳಿಸಿತ್ತು. ಶಿಕ್ಷಣ ಕ್ಷೇತ್ರವನ್ನು ಸದಾ ಹಾಳು ಮಾಡುವ ಕೆಲಸದಲ್ಲಿ ಕಾಂಗ್ರೆಸ್ಸಿನವರು ತೊಡಗಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ; ಪಂಜಾಬ್‌ನ 13 ಸ್ಥಳಗಳಲ್ಲಿ ಇ.ಡಿ ಶೋಧ- 3 ಕೋಟಿ ರೂ. ಜಪ್ತಿ

    ಸಿಇಟಿ ಪರೀಕ್ಷೆ ವಿಚಾರ, ಹೊಸದಾಗಿ ಜಾರಿ ಮಾಡಿದ ಪಬ್ಲಿಕ್ ಎಕ್ಸಾಮ್ ವಿಚಾರದಲ್ಲಿ ಗೊಂದಲ, ಸಮಸ್ಯೆಗಳು ಕಾಡುವಂತಾಗಿದೆ. ಶಿಕ್ಷಣ ವಾತಾವರಣವನ್ನು ಹದಗೆಡಿಸಿದ್ದಾರೆ. ಯುವ ನೀತಿಯಲ್ಲೂ ಡೋಂಗಿ ನೀತಿ ಜಾರಿ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ನಮ್ಮ ಸರ್ಕಾರ ಪಾಲಿಟೆಕ್ನಿಕ್, ಐಟಿಐ ಗುಣಮಟ್ಟ ಹೆಚ್ಚಿಸಿ ಅಡ್ಮಿಶನ್ ಶೇ.100ಕ್ಕೆ ಹೆಚ್ಚಳವಾಗಿದೆ. ಇಲ್ಲಿ ಕಲಿತ ಎಲ್ಲರಿಗೂ ಉದ್ಯೋಗ ಸಿಗುತ್ತಿದೆ. ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ 87%ರಷ್ಟು ಅಕ್ರೆಡಿಷನ್ ಕೊಡಿಸಿದ್ದೇವೆ. ಇದೊಂದು ದೊಡ್ಡ ಸಾಧನೆ. ಶಿಕ್ಷಕರ ನೇಮಕಾತಿ ವೇಳೆ ಪಾರದರ್ಶಕ ಕೌನ್ಸೆಲಿಂಗ್ ನಡೆಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

    ಬಡ್ತಿ ಕಾಣದ ಶಿಕ್ಷಕರಿಗೆ ಬಡ್ತಿ ಕೊಡಿಸಿದ್ದೇವೆ. ಸುಧಾರಣೆ ನಡೆಸಿದ್ದು, ನೇಮಕಾತಿ, ಪಾರದರ್ಶಕತೆ, ಕೆರಿಯರ್ ಪ್ರಮೋಷನ್ ನೀಡಿದ್ದೇವೆ. ನಮ್ಮ ಅವಧಿಯಲ್ಲಿ 25ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಸರಗೋಡಿನಲ್ಲಿ ಲವ್ ಜಿಹಾದ್ ಆರೋಪ- ಹಿಂದೂ ಶಿಕ್ಷಕಿಯ ಮದ್ವೆಯಾದ ಮುಸ್ಲಿಂ ಯುವಕ!

  • ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್

    ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್

    ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ (Assembly Election) ಪರಾಜಿತಗೊಂಡ ಅಭ್ಯರ್ಥಿಗಳಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ (Legislative Council Elections) ಟಿಕೆಟ್ ನೀಡದಿರಲು ಕಾಂಗ್ರೆಸ್ (Congress) ನಿರ್ಧರಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕರಿಗೆ ಈ ಬಾರಿ ಅವಕಾಶ ನೀಡಲು ಸಿಎಂ, ಡಿಸಿಎಂ ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಪ್ರಬಲ ಪೈಪೊಟಿ ನಡುವೆ ಹಿರಿಯ ನಾಯಕರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ವಿಧಾನಸಭೆಯಲ್ಲಿ ಸೋಲನ್ನಪ್ಪಿದ್ದಾರೆ. ಈಗ ಮತ್ತೊಂದು ಅವಕಾಶ ನೀಡುವುದು ಕಷ್ಟ. ರಮನಾಥ್ ರೈ, ವಿನಯ್ ಕುಮಾರ್ ಸೊರಕೆ, ಪಿ.ಟಿ ಪರಮೇಶ್ವರ್ ನಾಯ್ಕ್, ರಮೇಶ್ ಕುಮಾರ್ ಸೇರಿದಂತೆ ಹಲವು ಪರಾರ್ಜಿತ ನಾಯಕರು ಪರಿಷತ್ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ಈ ಹಿನ್ನೆಲೆ ವಿಧಾನಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಕಾಲ ಯಾವುದೇ ಹೊಸ ಅವಕಾಶಗಳನ್ನು ನೀಡದಿರಲು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಬಲ ಪೈಪೊಟಿ ನೀಡಿ ಕಡೆ ಹಂತದಲ್ಲಿ ಟಿಕೆಟ್‌ನಿಂದ ವಂಚಿತರಾದ ನಾಯಕರನ್ನು ಅಭ್ಯರ್ಥಿಗಳನ್ನಾಗಿ ಮಾಡಬಹುದು ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಜೊತೆಗೂ ಈ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರದಲ್ಲಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

  • ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್‌ ಹಣದ ಹೊಳೆಯನ್ನೇ ಹರಿಸುತ್ತಿದೆ: ಹೆಚ್‌ಡಿಕೆ

    ವಿಧಾನ ಪರಿಷತ್ ಚುನಾವಣೆಯಲ್ಲೂ ಕಾಂಗ್ರೆಸ್‌ ಹಣದ ಹೊಳೆಯನ್ನೇ ಹರಿಸುತ್ತಿದೆ: ಹೆಚ್‌ಡಿಕೆ

    ಬೆಂಗಳೂರು: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲೂ (Vidhan Parishad Election) ಕಾಂಗ್ರೆಸ್ ಉಡುಗೊರೆಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ. ಹಣದ ಹೊಳೆಯನ್ನೇ ಹರಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಆರೋಪಿಸಿದರು.

    ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್-ಬಿಜೆಪಿ (BJP JDS Alliance) ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

    ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್ ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್‌ಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

    ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ (Congress Party) ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಈ ಷಡ್ಯಂತ್ರವನ್ನು ಒಗ್ಗಟ್ಟಿನಿಂದ ಎದುರಿಸಬೇಕು ಎಂದು ಕರೆ ಕೊಟ್ಟರು. ಇದನ್ನೂ ಓದಿ: ಚನ್ನಗಿರಿ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ: ಪರಮೇಶ್ವರ್

    ಜೆಡಿಎಸ್ -ಬಿಜೆಪಿ ಮೈತ್ರಿ ಐತಿಹಾಸಿಕ. ಪ್ರಧಾನಿ ನರೇಂದ್ರ ಮೋದಿ (PM Modi) ಹಾಗೂ ದೇವೇಗೌಡರ (HD Devegowda) ನೇತೃತ್ವದಲ್ಲಿ ಆಗಿರುವ ಈ ಮೈತ್ರಿಯನ್ನು ಎರಡೂ ಪಕ್ಷಗಳ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುತ್ತದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್‌ಗೆ ಆಗುತ್ತಿಲ್ಲ ಎಂದು ಆಡಳಿತ ಪಕ್ಷದ ವಿರುದ್ಧ ಕಿರಿ ಕಾರಿದರು.

  • ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ

    ವಿಧಾನಪರಿಷತ್ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಗಳ ಗೆಲುವು ಖಚಿತ: ಬಿ.ವೈ.ವಿಜಯೇಂದ್ರ

    ಬೆಂಗಳೂರು: ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಇಬ್ಬರು ಅಭ್ಯರ್ಥಿಗಳೂ ಇಂದು ನಾಮಪತ್ರ ಸಲ್ಲಿಸಿದ್ದಾರೆ. ನಮ್ಮೆಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.

    ಆಗ್ನೇಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿ ವೈ.ಎ.ನಾರಾಯಣಸ್ವಾಮಿ, ಬೆಂಗಳೂರು ಪದವೀಧರರ ಕ್ಷೇತ್ರದ ಅಭ್ಯರ್ಥಿಯಾಗಿ ಅ.ದೇವೇಗೌಡ ಅವರು ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಜೆಡಿಎಸ್ ಪಕ್ಷದ ಸಮ್ಮುಖದಲ್ಲಿ ನಮ್ಮ ಇಬ್ಬರು ಅಭ್ಯರ್ಥಿಗಳು ಶುಭಗಳಿಗೆಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಿಸಿದರು.

    ವಿಧಾನಪರಿಷತ್‍ನಲ್ಲಿ ಅಪಾರ ಅನುಭವ ಇರುವ ನಮ್ಮ ಇಬ್ಬರು ಅಭ್ಯರ್ಥಿಗಳು ಮತ್ತೊಮ್ಮೆ ದೊಡ್ಡ ಅಂತರದಲ್ಲಿ ವಿಜಯಶಾಲಿಯಾಗಿ ಬರಲಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯನ್ನು ಎದುರಿಸಿದ್ದೆವು. ಈ ಚುನಾವಣೆಯನ್ನೂ ಒಗ್ಗಟ್ಟಾಗಿ ಎದುರಿಸಿ ಎಲ್ಲ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ತಿಳಿಸಿದರು.

    ಕಾಂಗ್ರೆಸ್ಸಿಗೆ ಉಳಿಗಾಲ ಇಲ್ಲ- ಅಶೋಕ್
    ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಸಿದ್ದರಾಮಯ್ಯ ಸೇರಿ ಯಾರೇ ಪ್ರಚಾರ ಮಾಡಿದರೂ ಕಾಂಗ್ರೆಸ್ಸಿಗೆ ಇಲ್ಲಿ ಉಳಿಗಾಲ ಇಲ್ಲ ಎಂದು ಅಭಿಪ್ರಾಯಪಟ್ಟರು. ಎ.ನಾರಾಯಣಸ್ವಾಮಿ ಮತ್ತು ಎ.ದೇವೇಗೌಡರ ಗೆಲುವು ನಿಶ್ಚಿತ. ವೈ.ಎ.ನಾರಾಯಣಸ್ವಾಮಿ ಅವರು ಮಾಡಿರುವ ಕೆಲಸ, ಅವರ ಸಂಪರ್ಕ, ನಿರಂತರ ಸೇವೆ ಗಮನಿಸಿ ಅವರ ಆಶೀರ್ವಾದ ಖಚಿತ. ಬೆಂಗಳೂರಿನಲ್ಲಿ ಎ.ದೇವೇಗೌಡರು ಮತದಾರರ ಉತ್ತಮ ಒಲವನ್ನು ಹೊಂದಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಸುಪ್ರೀಂನಿಂದಲೂ ರಿಲೀಫ್ – ಸಿಎಂ ಸ್ಥಾನದಿಂದ ಕೇಜ್ರಿವಾಲ್ ಪದಚ್ಯುತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ನಾಮಪತ್ರ ಸಲ್ಲಿಕೆ ಸಮಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಡಾ.ಅಶ್ವತ್ಥನಾರಾಯಣ, ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್, ಸಂಸದ ಪಿ.ಸಿ.ಮೋಹನ್, ಶಾಸಕ ಸುರೇಶ್ ಗೌಡ, ಮುಖಂಡ ಲಕ್ಷ್ಮೀನಾರಾಯಣ್, ಮಾಜಿ ಶಾಸಕ ಎಂ.ಕೃಷ್ಣರೆಡ್ಡಿ ಮತ್ತಿತರ ಮುಖಂಡರು ಹಾಜರಿದ್ದರು.

  • ಪರಿಷತ್‌ ಚುನಾವಣೆಯಲ್ಲೂ ಮೈತ್ರಿ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌; ಕಮಲಕ್ಕೆ 5, ಜೆಡಿಎಸ್‌ಗೆ 1 ಸ್ಥಾನ

    ಪರಿಷತ್‌ ಚುನಾವಣೆಯಲ್ಲೂ ಮೈತ್ರಿ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ರಿಲೀಸ್‌; ಕಮಲಕ್ಕೆ 5, ಜೆಡಿಎಸ್‌ಗೆ 1 ಸ್ಥಾನ

    ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲೂ (Karnataka Legislative Council) ಬಿಜೆಪಿ-ಜೆಡಿಎಸ್‌ (BJP-JDS) ಮೈತ್ರಿ ಮುಂದುವರಿದಿದೆ. ಬಿಜೆಪಿ 5 ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ.

    ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಿಂದ ಶನಿವಾರ ಟಿಕೆಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಪದವೀಧರ ಕ್ಷೇತ್ರದಿಂದ ಎ.ದೇವೇಗೌಡಗೆ ಟಿಕೆಟ್‌ ನೀಡಲಾಗಿದೆ. ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ವೈ.ಎ.ನಾರಾಯಣಸ್ವಾಮಿ ಟಿಕೆಟ್‌ ಗಿಟ್ಟಿಸಿದ್ದಾರೆ. ಇದನ್ನೂ ಓದಿ: ನಿಮ್ಮ ನಾಚಿಕೆಗೇಡಿನ ನಡವಳಿಕೆ ತೋರಿಸುವ ವೀಡಿಯೋ ನನ್ನ ಬಳಿ ಇದೆ – ರಾಜ್ಯಪಾಲರ ವಿರುದ್ಧ ದೀದಿ ಗುಡುಗು

    bjp flag 3

    ಈಶಾನ್ಯ ಪದವೀಧರ ಕ್ಷೇತ್ರದಿಂದ ಅಮರನಾಥ ಪಾಟೀಲ್‌, ನೈರುತ್ಯ ಪದವೀಧರ ಕ್ಷೇತ್ರದಿಂದ ಡಾ. ಧನಂಜಯ್‌ ಸರ್ಜಿ, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಇ.ಸಿ.ನಿಂಗರಾಜುಗೆ ಟಿಕೆಟ್‌ ನೀಡಲಾಗಿದೆ.

    ಬಿಜೆಪಿ ಉಳಿದ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಈ ಕ್ಷೇತ್ರದಿಂದ ಮೇಲ್ಮನೆ ಹಾಲಿ ಸದಸ್ಯ ಎಸ್‌.ಎಲ್.ಭೋಜೇಗೌಡ ಅವರಿಗೆ ಟಿಕೆಟ್‌ ನೀಡುವುದು ಖಚಿತವಾಗಿದೆ. ಆದರೆ ಈವರೆಗೆ ಅಧಿಕೃತ ಘೋಷಣೆಯಾಗಿಲ್ಲ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ: ಮೋದಿ ಭವಿಷ್ಯ

    ಜೂ.3 ರಂದು ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಮೇ 16 ರಂದು ಉಮೇದುವಾರಿಕೆ ಸಲ್ಲಿಕೆಗೆ ಕೊನೆ ದಿನವಾಗಿದೆ. ಮೇ 17 ನಾಮಪತ್ರ ಪರಿಶೀಲನೆ, ಮೇ 20 ರಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದೆ. ಜೂ.6 ರಂದು ಮತ ಎಣಿಕೆ ನಡೆಯಲಿದೆ.

  • ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

    ಬೆಂಗಳೂರು: ರಾಜ್ಯದ 5 ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ (Parishad Election) ಕಾಂಗ್ರೆಸ್ (Congress) ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

    ಒಟ್ಟು 5 ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಿಸಿದೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿರಿಯೂರಿನ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮ ತಮ್ಮ ಪತಿ ಶ್ರೀನಿವಾಸ್ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೂರ್ಣಿಮ ವಾರದ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಪೂರ್ಣಿಮ ಕಾಂಗ್ರೆಸ್ ಸೇರ್ಪಡೆ ಆದ ಒಂದೇ ವಾರದಲ್ಲಿ ಪೂರ್ಣಿಮ ಪತಿ ಶ್ರೀನಿವಾಸ್‌ಗೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಟಿಕೆಟ್ ಘೋಷಿಸಲಾಗಿದೆ. ಇದನ್ನೂ ಓದಿ: ಬಿಜೆಪಿಯವರಿಗೆ ಬೇರೆಯವರ ಕೆರೆಯಲ್ಲಿ ಮೀನು ಹಿಡಿಯುವುದೇ ಕೆಲಸ: ವೀರಪ್ಪ ಮೊಯ್ಲಿ

    ಬೆಂಗಳೂರು ಪದವೀಧರರ ಕ್ಷೇತ್ರ – ರಾಮೋಜಿ ಗೌಡ
    ಬೆಂಗಳೂರು ಶಿಕ್ಷಕರ ಕ್ಷೇತ್ರ – ಪುಟ್ಟಣ್ಣ
    ನೈಋತ್ಯ ಶಿಕ್ಷಕರ ಕ್ಷೇತ್ರ – ಕೆಕೆ ಮಂಜುನಾಥ್
    ಆಗ್ನೇಯ ಶಿಕ್ಷಕರ ಕ್ಷೇತ್ರ – ಡಿಟಿ ಶ್ರೀನಿವಾಸ್
    ಈಶಾನ್ಯ ಪದವೀಧರರು ಕ್ಷೇತ್ರ – ಡಾ. ಚಂದ್ರಶೇಖರ ಬಿ. ಪಾಟೀಲ್ ಹೆಸರನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಜನವರಿಯಲ್ಲಿ ಜಾತಿಗಣತಿ ವರದಿ ಸ್ವೀಕಾರ: ಸಿದ್ದರಾಮಯ್ಯ

    Web Stories 
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 2 ದಿನದ ಇಡಿ ವಿಚಾರಣೆ ಅಂತ್ಯ- ಕೆಜಿಎಫ್ ಬಾಬುಗೆ ಪರಿಷತ್ ಚುನಾವಣೆಯೇ ಕಂಟಕ?

    2 ದಿನದ ಇಡಿ ವಿಚಾರಣೆ ಅಂತ್ಯ- ಕೆಜಿಎಫ್ ಬಾಬುಗೆ ಪರಿಷತ್ ಚುನಾವಣೆಯೇ ಕಂಟಕ?

    ನವದೆಹಲಿ: ಇಡಿ ವಿಚಾರಣೆಗೆ ಒಳಪಟ್ಟಿದ್ದ ಕಾಂಗ್ರೆಸ್ ನಾಯಕ ಯೂಸುಫ್ ಷರಿಫ್ ಅಲಿಯಾಸ್ ಕೆಜಿಎಫ್ ಬಾಬು ಅವರಿಗೆ ಪರಿಷತ್ ಚುನಾವಣೆಯೇ ಕಂಟಕವಾಗುವ ಸಾಧ್ಯತೆಗಳಿದೆ. ಇಡಿ ವಿಚಾರಣೆ ವೇಳೆ ಪರಿಷತ್ ಚುನಾವಣೆ ಬಗ್ಗೆ ಹತ್ತಾರು ಪ್ರಶ್ನೆಗಳನ್ನು ಇಡಿ ಅಧಿಕಾರಿಗಳು ಕೇಳಿದ್ದಾರೆ ಎಂದು ಮೂಲಗಳು ಹೇಳಿವೆ.

    kgf babu1

    ಮೇ 28 ರಂದು ನಡೆದ ಇಡಿ ದಾಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಕೆಜಿಎಫ್ ಬಾಬುಗೆ ಸಮನ್ಸ್ ನೀಡಲಾಗಿತ್ತು. ಸಮನ್ಸ್ ಹಿನ್ನೆಲೆಯಲ್ಲಿ ನಿನ್ನೆ ಮತ್ತು ಇಂದು ಅವರು ದೆಹಲಿಯ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು. ನಿನ್ನೆ ಸುಮಾರು ಎಂಟು ಗಂಟೆ ಮತ್ತು ಇಂದು ಒಂದು ಗಂಟೆಗಳ ಕಾಲ ವಿಚಾರಣೆ ನಡೆಸಿದ ಇಡಿ ಅಧಿಕಾರಿಗಳು 14 ಪುಟಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ. ಇದನ್ನೂ ಓದಿ: ಹೊಟ್ಟೆಪಾಡಿಗಾಗಿ ಬೀದಿ ವ್ಯಾಪಾರಿಯಾದ ಅಫ್ಘಾನಿಸ್ತಾನದ ಫೇಮಸ್ ಟಿವಿ ಆ್ಯಂಕರ್

    it raid kgf babu home 1

    ವಿಚಾರಣೆ ವೇಳೆ ಕೆಜಿಎಫ್ ಬಾಬು ಹಣಕಾಸು ವ್ಯವಹಾರ ಬಗ್ಗೆ ಇಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ವಿಶೇಷವಾಗಿ ಪರಿಷತ್ ಚುನಾವಣೆ ಬಗ್ಗೆ ಹತ್ತಾರು ಪ್ರಶ್ನೆಗಳನ್ನು ಕೇಳಿದ್ದಾರೆ. ಮೂಲ ವ್ಯವಹಾರಗಳನ್ನು ಬಿಟ್ಟು ರಾಜಕೀಯಕ್ಕೆ ಬಂದಿದ್ದೇಗೆ, ಚುನಾವಣೆಗೆ ಮಾಡಿದ ಖರ್ಚು – ವೆಚ್ಚಗಳ ಬಗ್ಗೆಯೂ ವರದಿ ಕೇಳಿದ್ದಾರೆ ಎಂದು ಮೂಲಗಳು ಹೇಳಿವೆ.

    it raid kgf babu home 2

    ಇದರ ಜೊತೆಗೆ ಬಾಬು ಅವರ ಆಸ್ತಿ ಮತ್ತು ಹೂಡಿಕೆ ಮೇಲೆ ನಿಗಾ ಇಟ್ಟಿರುವ ಇಡಿ ಈ ಸಂಬಂಧ ಹಲವು ಪ್ರಶ್ನೆಗಳನ್ನು ಕೇಳಿದೆ. ಎರಡು ದಿನಗಳ ವಿಚಾರಣೆ ಬಳಿಕ ಶೀಘ್ರದಲ್ಲಿ ಮತ್ತೊಂದು ಸಮನ್ಸ್ ನೀಡಲಿದ್ದು ಅಂದು ದಾಖಲೆಗಳ ಸಹಿತ ವಿಚಾರಣೆಗೆ ಬರಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ. ರಾಹುಲ್ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತಿರುವ ಅಧಿಕಾರಿಗಳೇ ಕೆಜಿಎಫ್ ಬಾಬು ಅವರನ್ನು ವಿಚಾರಣೆ ನಡೆಸುತ್ತಿರುವುದು ಗಮನಾರ್ಹ ಸಂಗತಿ.

    Live Tv