Tag: ಶಕುಂತಲಾ ಶೆಟ್ಟಿ

  • ಸಾನ್ಯಾ ಅಯ್ಯರ್ ವಿವಾದ : ಕಂಬಳ ಸಮಿತಿಯಿಂದ ದೇವರ ಬಳಿ ದೂರು

    ಸಾನ್ಯಾ ಅಯ್ಯರ್ ವಿವಾದ : ಕಂಬಳ ಸಮಿತಿಯಿಂದ ದೇವರ ಬಳಿ ದೂರು

    ಕಿರುತೆರೆ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ (Sanya Iyer) ಇತ್ತೀಚೆಗಷ್ಟೇ ಪುತ್ತೂರಿನಲ್ಲಿ (Puttur) ನಡೆದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ (Kambala) ಅತಿಥಿಯಾಗಿ ಭಾಗಿಯಾಗಿದ್ದರು. ಈ ವೇಳೆ ಕುಡಿದ ಮತ್ತಿನಲ್ಲಿದ್ದ ಯುವಕನೊಬ್ಬ ತಮಗೆ ತೊಂದರೆ ನೀಡಿದ ಎನ್ನುವ ಕಾರಣಕ್ಕಾಗಿ ಆಯೋಜಕರ ಮೇಲೆ ಗರಂ ಆಗಿದ್ದರು. ಸಾನ್ಯಾ ಮತ್ತು ಸ್ನೇಹಿತರು ಆಯೋಜಕರನ್ನು ತರಾಟೆಗೆ ತಗೆದುಕೊಂಡ ವಿಡಿಯೋ ಸಖತ್ ವೈರಲ್ ಕೂಡ ಆಗಿತ್ತು. ಇದೊಂದು ದೊಡ್ಡ ವಿವಾದವಾಗಿಯೇ ಮಾರ್ಪಟ್ಟಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಕಂಬಳ ಸಮಿತಿ ದೇವರ ಬಳಿ ದೂರು ನೀಡಿದೆ.

    SANYA IYER 6

    ಪುತ್ತೂರಿನ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳಕ್ಕೆ ಸಾನ್ಯಾ ಅತಿಥಿಯಾಗಿ ಬಂದು, ತುಳು ನಾಡಿನ ಬಗ್ಗೆ ಮೆಚ್ಚಿ ಮಾತನಾಡಿದ್ದರು. ಐ ಲವ್ ಯೂ ಪುತ್ತೂರು ಎಂದು ಹೇಳುವ ಮೂಲಕ ಅಲ್ಲಿನ ಜನರ ಪ್ರೀತಿಗೆ ಪಾತ್ರರಾಗಿದ್ದರು. ಕಾರ್ಯಕ್ರಮ ಮುಗಿಸಿಕೊಂಡು ಹೊರಟು ಹೋಗಿದ್ದರು. ಆದರೆ, ಮತ್ತೆ ಅವರು ಕಂಬಳ ನೋಡುವುದಕ್ಕಾಗಿ ಸ್ನೇಹಿತೆಯರ ಜೊತೆ ವಾಪಸ್ಸಾಗಿದ್ದಾರೆ. ಆ ವೇಳೆಯಲ್ಲಿ ಹುಡುಗನೊಬ್ಬ ಸಾನ್ಯಾ ಅಯ್ಯರ್ ಜೊತೆ ಸೆಲ್ಫಿ ತಗೆದುಕೊಳ್ಳುವ ನೆಪದಲ್ಲಿ ಕೈ ಹಿಡಿದು ಎಳೆದ ಎಂದು ಹೇಳಲಾಗುತ್ತಿದೆ. ಈ ವಿಚಾರ ಕಂಬಳ ಸಮಿತಿಯ ಗಮನಕ್ಕೆ ಬಂದಿಲ್ಲ ಎನ್ನುತ್ತಾರೆ ಕಂಬಳ ಸಮಿತಿ ಗೌರವಾಧ್ಯಕ್ಷೆ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ (Shakuntala Shetty). ಇದನ್ನೂ ಓದಿ: ಅಪಘಾತವಾಗಿ ಎರಡು ವರ್ಷ: ನಟಿ ರಿಷಿಕಾ ಸಿಂಗ್ ಬದುಕುಳಿದಿದ್ದೇ ಪವಾಡ

     sanya iyer 5

    ಸುಖಾಸುಮ್ಮನೆ ಕಂಬಳ ಸಮಿತಿಯನ್ನು ಗುರಿ ಮಾಡುತ್ತಿರುವುದು ತಮಗೆ ಬೇಸರ ತಂದಿದೆ ಎನ್ನುವ ಶೆಟ್ಟಿ, ಕಂಬಳ ಸಮಿತಿಯನ್ನು ಕೆಟ್ಟ ಶಬ್ದಗಳಿಂದ ನಿಂದಿಸಲಾಗುತ್ತಿದೆ. ಹಾಗಾಗಿ ನಿಂದಿಸಿದವರನ್ನು ನೀನೇ ನೋಡಿಕೋ ದೇವಾ ಎಂದು ಮಹಾಲಿಂಗೇಶ್ವರನ ಬಳಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಅವರು ಹೇಳಿದ್ದಾರೆ. ಯಾರೋ ಅಸಭ್ಯವಾಗಿ ವರ್ತಿಸಿದ್ದಾರೆಂದು ಇನ್ನ್ಯಾರನ್ನೋ ಗುರಿ ಮಾಡುವುದು ತಪ್ಪು. ಈ ಕಾರಣಕ್ಕಾಗಿಯೇ ತಾವು ದೇವರ ಬಳಿ ನ್ಯಾಯ ಕೇಳಲು ಬಂದಿದ್ದೇವೆ ಎಂದಿದ್ದಾರೆ.

    sanya iyer 1 3

    ಈ ವಿಷಯದಲ್ಲಿ ತಾವು ಸಾನ್ಯಾ ಪರವಾಗಿ ನಿಲ್ಲುತ್ತೇವೆ ಎನ್ನುವ ಕಂಬಳ ಸಮಿತಿ, ಆ ನಟಿ ಪೊಲೀಸರಿಗೆ ದೂರು ನೀಡಲಿ. ಆಕೆಗೆ ಬೇಕಿರುವ ಎಲ್ಲಾ ಸಹಾಯವನ್ನು ಸಮಿತಿ ಮಾಡುತ್ತದೆ ಎಂದೂ ಅವರು ಹೇಳಿದ್ದಾರೆ. ಕೆಲವು ಶಕ್ತಿಗಳು ಈ ಪ್ರಕರಣಕ್ಕೆ ಹಿಂದೂ, ಮುಸ್ಲಿಂ ರೂಪವನ್ನು ನೀಡಲಾಗುತ್ತಿರುವುದಕ್ಕೆ ಬೇಸರವನ್ನೂ ಅವರು ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ತುಳುನಾಡಿನ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ತೆರವು ಹೋರಾಟ ಪರಿವರ್ತನೆಗೊಂಡಿದೆ: ಶಕುಂತಲಾ ಶೆಟ್ಟಿ

    ತುಳುನಾಡಿನ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ತೆರವು ಹೋರಾಟ ಪರಿವರ್ತನೆಗೊಂಡಿದೆ: ಶಕುಂತಲಾ ಶೆಟ್ಟಿ

    ಮಂಗಳೂರು: ಸುರತ್ಕಲ್ ಅಕ್ರಮ ಟೋಲ್ ಗೇಟ್ (Surathkal Toll Gate) ತೆರವಿನ ವಿಚಾರದಲ್ಲಿ ಬಿಜೆಪಿ (BJP) ಸರ್ಕಾರದ ಭಂಡತನ ಅಚ್ಚರಿ ಮೂಡಿಸುತ್ತಿದೆ. ತುಳುನಾಡಿನ ಘಟ್ಟದ ತಪ್ಪಲು ಹಾಗೂ ಸಮುದ್ರ ದಂಡೆಯ ಜನರನ್ನು ಬೆಸೆಯುವ ಸಾಧನವಾಗಿ ಟೋಲ್ ಗೇಟ್ ವಿರೋಧಿ ಹೋರಾಟ ಪರಿವರ್ತನೆಗೊಂಡಿದೆ. ಬಿಜೆಪಿ ಸಂಸದ, ಶಾಸಕರುಗಳು ಇದನ್ನು ಅರ್ಥಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ (Shakunthala Shetty) ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

    SHAKUNTHALA SHETTY 1

    ಸುರತ್ಕಲ್ ಟೋಲ್ ಗೇಟ್ ಸಮೀಪ ನಡೆಯುತ್ತಿರುವ ಅನಿರ್ದಿಷ್ಟಾವಧಿ ಹಗಲು ರಾತ್ರಿ ಧರಣಿಯ ನಾಲ್ಕನೇ ದಿನದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕರಾವಳಿಯ (Karavalli) ಜನ ಸರ್ಕಾರದ ಟೋಲ್ ಸುಲಿಗೆ ನೀತಿಯ ವಿರುದ್ಧ ಆಕ್ರೋಶ ಭರಿತರಾಗಿದ್ದು, ಘಟ್ಟದ ಬದಿಯ ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಜನರೂ ಸಮುದ್ರ ದಂಡೆಯ ಸುರತ್ಕಲ್‌ನಲ್ಲಿರುವ ಟೋಲ್ ಗೇಟ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸತೊಡಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ರಾಜ್ಯದ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆ

    SHAKUNTHALA SHETTY 2

    ಪ್ರತಿಭಟನೆಯಲ್ಲಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ, ಮಾಜಿ ಶಾಸಕರುಗಳಾದ ಅಭಯಚಂದ್ರ ಜೈನ್, ಮೊಯ್ದಿನ್ ಬಾವಾ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ.ಎಸ್ ಮಹಮ್ಮದ್, ಶಾಲೆಟ್ ಪಿಂಟೊ, ಬಿ.ಕೆ ಇಮ್ತಿಯಾಜ್, ಪುರುಷೋತ್ತಮ ಚಿತ್ರಾಪುರ, ಪ್ರಮೀಳಾ ಶಕ್ತಿನಗರ, ಆಶಾ ಬೋಳೂರು, ಶ್ರೀನಾಥ್ ಕುಲಾಲ್, ರಮೇಶ್ ಟಿ ಎನ್, ರಾಜೇಶ್ ಪೂಜಾರಿ, ಡಾ ರಾಜಾರಾಮ್ ಉಪ್ಪಿನಂಗಡಿ, ಮುಹಮ್ಮದ್ ಕುಂಜತ್ತಬೈಲ್, ಆನಂದ ಅಮೀನ್, ಅಕ್ಬರ್ ಅಲಿ ಮುಕ್ಕ, ಹರೀಶ್ ಪೇಜಾವರ, ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಕೋಲ್ಕತ್ತಾ ಫ್ಲೈಓವರ್ ಕುಸಿದಾಗ ಬ್ಯಾನರ್ಜಿಯನ್ನು ನಿಂದಿಸಿದ್ದ ನೀವು ಇದಕ್ಕೆ ಏನ್ ಹೇಳ್ತೀರಿ: ಮೋದಿ ವಿರುದ್ಧ ವಿಪಕ್ಷಗಳು ಕಿಡಿ

    Live Tv
    [brid partner=56869869 player=32851 video=960834 autoplay=true]

  • ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕ್ವಾರಂಟೈನ್

    ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಕ್ವಾರಂಟೈನ್

    ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಮಾಜಿ ಸಚಿವ ಬಿ. ರಮಾನಾಥ ರೈ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

    CORONA VIRUS 1 2

    ನಾನು ಎರಡು ದಿನಗಳಿಂದ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

    CORONA VIRUS 2 1

    ಇದೇ ವೇಳೆ ಐವನ್ ಡಿಸೋಜಾ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವಾನ್ ಡಿಸೋಜಾ ಹಾಗೂ ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

    CORONA VIRUS 1

    ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಕುಂತಲಾ ಟಿ. ಶೆಟ್ಟಿಯವರು ಕೂಡ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

  • ಲಾಕ್‍ಡೌನ್ ಎಫೆಕ್ಟ್- ರಾಜಕೀಯದಿಂದ ಗದ್ದೆ ಬೇಸಾಯಕ್ಕಿಳಿದ ಶಕುಂತಲಾ ಶೆಟ್ಟಿ

    ಲಾಕ್‍ಡೌನ್ ಎಫೆಕ್ಟ್- ರಾಜಕೀಯದಿಂದ ಗದ್ದೆ ಬೇಸಾಯಕ್ಕಿಳಿದ ಶಕುಂತಲಾ ಶೆಟ್ಟಿ

    – ಗದ್ದೆ ಕೆಲಸದ ಖುಷಿ ಹಂಚಿಕೊಂಡ ಮಾಜಿ ಶಾಸಕಿ

    ಮಂಗಳೂರು: ವಿಶ್ವದಾದ್ಯಂತ ಹಬ್ಬಿರುವ ಕೊರೊನಾ ಮಹಾಮಾರಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲೆಡೆ ಲಾಕ್‍ಡೌನ್ ಜಾರಿಯಲ್ಲಿದೆ. ಲಾಕ್‍ಡೌನ್ ಕೆಲವರ ಜೀವನ ವಿಧಾನದಲ್ಲೂ ಕೊಂಚ ಬದಲಾವಣೆ ತಂದಿದೆ. ಹಾಗೆಯೇ ಸದಾ ಸಭೆ-ಸಮಾರಂಭಗಳಲ್ಲಿ ಬ್ಯುಸಿಯಾಗುತ್ತಿದ್ದ ರಾಜಕಾರಣಿಗಳನ್ನೂ ಮನೆಯಿಂದ ಹೊರ ನಡೆಯದಂತೆ ಪರಿಸ್ಥಿತಿಗೆ ಕೊರೊನಾ ತಂದಿದೆ. ಇದೇ ಪರಿಸ್ಥಿತಿಯನ್ನು ಸದುಪಯೋಗಪಡಿಸಿಕೊಳ್ಳಲು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ರಾಜಕೀಯ ಫೀಲ್ಡ್ ಬಿಟ್ಟು ಭತ್ತದ ಫೀಲ್ಡ್‍ಗೆ ಇಳಿದಿದ್ದಾರೆ.

    MNG 2

    ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ, ಕಾಂಗ್ರೆಸ್ ಮುಖಂಡೆ ಶಕುಂತಲಾ ಶೆಟ್ಟಿಯವರಿಗೆ ಕೂಡ ಲಾಕ್‍ಡೌನ್ ಘೋಷಣೆಯಾದ ಬಳಿಕ ಮನೆಯಿಂದಲೇ ಫೋನ್ ಮೂಲಕ ರಾಜಕೀಯದಲ್ಲಿ ತೊಡಗಿಕೊಳ್ಳಬೇಕಾದ ಅನಿವಾರ್ಯತೆ ಬಂದಿದೆ. ಮನೆಯಲ್ಲೇ ಇದ್ದು ಬೇಸರವಾದಾಗ ತನ್ನ ತವರು ಮನೆಯಲ್ಲಿ ಗದ್ದೆಯ ಬೇಸಾಯಕ್ಕೆ ಅಣಿಯಾಗುತ್ತಿರುವ ವಿಚಾರ ಶಕುಂತಲಾ ಅವರಿಗೆ ತಿಳಿಯಿತು. ತಕ್ಷಣ ತವರು ಮನೆಯಲ್ಲಿನ ಗದ್ದೆ ಬೇಸಾಯದಲ್ಲಿ ತನ್ನನ್ನು ತೊಡಗಿಸಿಕೊಳ್ಳುವ ಮೂಲಕ ಲಾಕ್‍ಡೌನ್ ಸಮಯವನ್ನು ಭರಪೂರವಾಗಿ ಉಪಯೋಗಿಸಿಕೊಂಡಿದ್ದಾರೆ.

    MNG 1 2

    ನಾಟಿ ಮಾಡುವುದರಿಂದ ಹಿಡಿದು, ನಾಟಿ ಸಂಗ್ರಹಿಸುವ ಕಾರ್ಯದಲ್ಲೂ ತೊಡಗಿಸಿಕೊಂಡ ಶಕುಂತಲಾ ಶೆಟ್ಟಿ, ಗದ್ದೆಯ ಕೆಲಸ ಖುಷಿ ತರುತ್ತದೆ ಎಂದು ಸಂತಸವನ್ನೂ ಕೂಡ ಹಂಚಿಕೊಂಡಿದ್ದಾರೆ. ಎಲ್ಲಾ ಕೆಲಸಗಳಿಗಿಂತಲೂ ಶ್ರೇಷ್ಠವಾದುದು ಕೃಷಿ ಕೆಲಸ. ಭತ್ತ ಬೆಳೆದರೆ ಮಾತ್ರ ದೇಶದ ಪ್ರಧಾನಿಯಾದಿಯಾಗಿ ಎಲ್ಲಾ ಜನರಿಗೂ ಆಹಾರ ಪೂರೈಕೆಯಾಗುತ್ತದೆ. ಇದರಿಂದಾಗಿ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಾ, ಉಳಿದವರನ್ನೂ ಪ್ರೋತ್ಸಾಹಿಸುವ ಕಾರ್ಯದಲ್ಲೂ ಶಕುಂತಲಾ ಶೆಟ್ಟಿ ನಿರತರಾಗಿದ್ದಾರೆ.

    MNG 3 final

    ಮಂಗಳೂರು ಹೊರವಲಯದ ಕುತ್ತಾರಿನ ಬೋಳ್ಯಗುತ್ತು ಮಾಜಿ ಶಾಸಕಿಯ ತವರು ಮನೆ. ಈ ಗುತ್ತಿನ ಮನೆಗೆ ಸೇರಿದ 15 ವರ್ಷ ಬೇಸಾಯ ಮಾಡದೇ ಉಳಿದಿದ್ದ ಗದ್ದೆಯಲ್ಲಿ ಈ ವರ್ಷ ಭತ್ತದ ನಾಟಿ ಮಾಡಲಾಗುತ್ತಿದೆ. ಲಾಕ್‍ಡೌನ್ ಘೋಷಣೆಯಾಗುವುದಕ್ಕೂ ಮೊದಲು ಮುಂಬಯಿಯಿಂದ ಊರಿಗೆ ಬಂದಿದ್ದ ಶಕುಂತಲಾ ಶೆಟ್ಟಿಯವರ ತವರು ಮನೆಯ ಹಲವು ಸದಸ್ಯರೂ ಇದೀಗ ಊರಲ್ಲೇ ಉಳಿಯುವಂತಾಗಿದೆ. ಇದರಿಂದಾಗಿ ಅವರು ಕೂಡ ಬೇಸಾಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

    MNG 4 final

    ಜೀವಮಾನದಲ್ಲಿ ಗದ್ದೆಗೆ ಇಳಿಯದಿದ್ದ ಜನ ಇದೀಗ ಗದ್ದೆಯಲ್ಲಿ ಮಣ್ಣು ಮೆತ್ತಿಸಿಕೊಂಡು ನಾಟಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಭತ್ತದ ನಾಟಿಯ ಅನುಭವವನ್ನು ಕೊರೊನಾ ಲಾಕ್‍ಡೌನ್ ಕಲ್ಪಿಸಿದೆ ಎಂದು ಮುಂಬಯಿಯಿಂದ ಊರಿಗೆ ಬಂದು ಲಾಕ್‍ಡೌನ್‍ನಲ್ಲಿ ಸಿಲುಕಿಕೊಂಡ ಮಹಿಳೆ ಗುಣವತಿ ಹೇಳುತ್ತಾರೆ.

    ಒಟ್ಟಿನಲ್ಲಿ ಸದಾ ಅಲ್ಲೊಂದು ಇಲ್ಲೊಂದು ರಾಜಕೀಯ ಸಭೆ, ಹೇಳಿಕೆ ನೀಡುತ್ತಾ ಸುದ್ದಿಯಲ್ಲಿದ್ದ ಶಕುಂತಲಾ ಶೆಟ್ಟಿ ಇದೀಗ ಗದ್ದೆ ಬೇಸಾಯದಲ್ಲಿ ತೊಡಗಿಕೊಂಡು ಮತ್ತೆ ಸುದ್ದಿಯಾಗಿದ್ದಾರೆ. ಲಾಕ್‍ಡೌನ್ ಸಮಯವನ್ನು ಈ ರೀತಿಯ ಒಳ್ಳೆಯ ಕೆಲಸಗಳಲ್ಲಿ ತೊಡಗಿಕೊಂಡ ತೃಪ್ತಿ ಶಕುಂತಲಾ ಶೆಟ್ಟಿಯವರಲ್ಲಿದೆ.

    MNG 6