Tag: ಶ್ರೀನಿವಾಸರಾಜು

  • ಎಂಟು ನಟಿಯರ ಜೊತೆ ಕಾಣಿಸಿಕೊಂಡ ನಟ ಗಣೇಶ್: ಕೃಷ್ಣಂ ಪ್ರಣಯ ಸಖಿ ಗೀತ

    ಎಂಟು ನಟಿಯರ ಜೊತೆ ಕಾಣಿಸಿಕೊಂಡ ನಟ ಗಣೇಶ್: ಕೃಷ್ಣಂ ಪ್ರಣಯ ಸಖಿ ಗೀತ

    ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಾಗಿ ನಿಶಾನ್ ರಾಯ್ ಅವರು ಬರೆದು ಚಂದನ್ ಶೆಟ್ಟಿ ಹಾಡಿರುವ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಎಂಬ ಸುಂದರ ಗೀತೆ ಇತ್ತೀಚೆಗೆ ಸಾಂಸ್ಕೃತಿಕ ನಗರಿ ಮೈಸೂರಿನ ಮಾಲ್ ಆಫ್ ಮೈಸೂರಿನಲ್ಲಿ  ಅದ್ದೂರಿಯಾಗಿ ಬಿಡುಗಡೆಯಾಯಿತು. ಸಾವಿರಾರು ಅಭಿಮಾನಿಗಳು ಈ ಸುಂದರ ಸಮಾರಂಭಕ್ಕೆ ಸಾಕ್ಷಿಯಾದರು.   ಇದು ಚಿತ್ರದ ಮೊದಲ ಹಾಡು ಕೂಡ. ಅರ್ಜುನ್ ಜನ್ಯ ಈ ಚಿತ್ರದ ಸಂಗೀತ ನಿರ್ದೇಶಕರು. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

    Krishnam Pranaya Sakhi 1

    ಶ್ರೀನಿವಾಸರಾಜು ಅವರು ಫೋನ್ ಮಾಡಿ ಕಥೆ ಹೇಳಬೇಕೆಂದಾಗ ನನಗೆ ಆಶ್ಚರ್ಯವಾಯಿತು. ಅವರು “ದಂಡುಪಾಳ್ಯ” ದಂತಹ ಥ್ರಿಲ್ಲರ್ ಚಿತ್ರ ಮಾಡಿರುವ ನಿರ್ದೇಶಕರು. ನಾನು ನೋಡಿದರೆ ಪ್ರೇಮಕಥೆಗಳ ನಾಯಕ. ನನಗೆ ಇವರು ಯಾವ ತರಹ ಕಥೆ ಮಾಡಿರಬಹುದು ಅಂದುಕೊಂಡು ಕಥೆ ಕೇಳಿದೆ. ಅವರು ಕಥೆ ಶುರು ಮಾಡಿದ ಕೂಡಲೆ ನೀವು ಮದುವೆ ಗಂಡಿನ ತರಹ ಬರುತ್ತೀರಾ. ಎಂಟು ಜನ ನಾಯಕಿಯರು ಮದುವೆ ಹೆಣ್ಣಿನ ತರಹ ಸಿದ್ದವಾಗಿರುತ್ತಾರೆ ಎಂದರು. ಆಗ ಇದು ನನ್ನ ಜಾನರ್ ನ ಚಿತ್ರ ಅಂದು ಕೊಂಡೆ. ಆದರೆ ಚಿತ್ರದಲ್ಲಿ ಬರೀ ಇಷ್ಟೇ ಇಲ್ಲ. ಒಳ್ಳೆಯ ಟ್ವಿಸ್ಟ್ ಇಟ್ಟಿದ್ದಾರೆ. ಇಂದು ಬಿಡುಗಡೆಯಾಗಿರುವ ಹಾಡು ಚೆನ್ನಾಗಿದೆ. ಸಿನಿಮಾ ಕೂಡ ಉತ್ತಮವಾಗಿ ಮೂಡಿಬಂದಿದೆ ಎಂದರು ಗೋಲ್ಡನ್ ಸ್ಟಾರ್ ಗಣೇಶ್.

    Krishnam Pranaya Sakhi 3

    ಇದು ಗಣೇಶ್ ಅವರಿಗಾಗಿಯೇ ಮಾಡಿರುವ ಕಥೆ. ಫ್ಯಾಮಿಲಿ ಎಂಟರ್ ಟೈನರ್. ಎಲ್ಲಾ ಜನರೇಶನ್ ಅವರಿಗೂ ಹಿಡಿಸುವ ಕಥೆಯೂ ಹೌದು. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಸುಮಧುರವಾಗಿದೆ. ಆ ಪೈಕಿ ಮೊದಲ ಹಾಡು ಈಗ ಬಿಡುಗಡೆಯಾಗಿದೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ಹಾಗೂ ಕಿರಿಯ ಕಲಾವಿದರು ಸೇರಿದಂತೆ 64 ಜನ ಕಲಾವಿದರು ಅಭಿನಯಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಚಿತ್ರದ ಚೊಚ್ಚಲ ಹಾಡಿಗೆ ಎಲ್ಲಾ ಕಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ ಎಂದು ನಿರ್ದೇಶಕ ಶ್ರೀನಿವಾಸ್ ರಾಜು ತಿಳಿಸಿದರು.

    Krishnam Pranaya Sakhi 2

    ಇದೊಂದು ಪರಿಶುದ್ಧ ಕೌಟುಂಬಿಕ ಕಥಾ ಹಂದರ ಹೊಂದಿರುವ ಚಿತ್ರ. ಹಾಡುಗಳು ಚೆನ್ನಾಗಿದೆ. ನಮ್ಮ ಚಿತ್ರಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ. ಗಾಯಕ ಚಂದನ್ ಶೆಟ್ಟಿ, ಹಾಡಿನಲ್ಲಿ ಅಭಿನಯಿಸಿರುವ ವಿನುತ, ಚಂದನ, ಸುಶ್ಮಿತ ಹಾಗೂ ಚಂದನ ಗೌಡ ಮುಂತಾದವರು ಈ ಹಾಡಿನ ಬಗ್ಗೆ ಮಾತನಾಡಿದರು.

    ಬಹು ನಿರೀಕ್ಷಿತ “ಕೃಷ್ಣಂ ಪ್ರಣಯ ಸಖಿ”  ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದವರು ತಾರಾಬಳಗದಲ್ಲಿದ್ದಾರೆ.

  • ಕನ್ನಡದಲ್ಲೂ ಅಯೋಧ್ಯೆಯ ಶ್ರೀರಾಮಮಂದಿರದ ಬಯೋಪಿಕ್

    ಕನ್ನಡದಲ್ಲೂ ಅಯೋಧ್ಯೆಯ ಶ್ರೀರಾಮಮಂದಿರದ ಬಯೋಪಿಕ್

    ಯೋಧ್ಯೆಯಲ್ಲಿ (Ayodhya) ಶ್ರೀರಾಮನ ಪ್ರಾಣಪ್ರತಿಷ್ಠಾಪನೆಯಾದ ಮಹಾಪರ್ವ ಕಾಲವಿದು. ಆದರೆ ಶ್ರೀರಾಮ ತನ್ನ ಜನ್ಮಭೂಮಿಯಲ್ಲಿ ಪ್ರತಿಷ್ಠಾಪನೆಯಾಗಲು 500 ವರ್ಷಗಳು ಕಾಯಬೇಕಾಯಿತು. 1528 ರಲ್ಲಿ ಅಯೋಧ್ಯೆಯಲ್ಲಿ ಬಾಬರಿ ಮಸೀದಿ ನಿರ್ಮಾಣವಾಯಿತು. ಆನಂತರ  ಆ ಜಾಗದಲ್ಲಿ ಶ್ರೀರಾಮನ ಮಂದಿರ (Sri Ram Mandir) ನಿರ್ಮಾಣವಾಗಬೇಕೆಂದು ಸಾಕಷ್ಟು ಹೋರಾಟಗಳು‌ ನಡೆದವು. ಈ ವಿವಾದ ಕೋರ್ಟ್ ಮೆಟ್ಟಿಲು ಏರಿತ್ತು. ನೂರಕ್ಕೂ ಹೆಚ್ಚು ವರ್ಷಗಳ ಕಾಲ ಯಾವುದಾದರೂ ಒಂದು ಕೇಸ್ ಕೋರ್ಟ್ ನಲ್ಲಿ ನಡೆದಿದ್ದರೆ ಅದು ಶ್ರೀರಾಮ ಜನ್ಮಭೂಮಿಯದೆ ಇರಬಹುದು. ಕೊನೆಗೂ 2019 ರಲ್ಲಿ ನ್ಯಾಯಾಲಯ ಅಯೋಧ್ಯೆಯಲ್ಲಿ ಶ್ರೀರಾಮನ ದೇವಾಲಯ ನಿರ್ಮಾಣಕ್ಕೆ ಅನುಮತಿ ನೀಡಿತ್ತು. 2024 ರ ಜನವರಿಯಲ್ಲಿ ಅದ್ದೂರಿಯಾಗಿ ಶ್ರೀರಾಮನ ಪ್ರತಿಷ್ಠಾಪನೆಯಾಯಿತು. ಕೋಟ್ಯಾಂತರ ಜನರ ಕನಸು ನನಸ್ಸಾಯಿತು.

    Srinivasaraju 1

    ಈ ಅಯೋಧ್ಯೆಯ ಶ್ರೀರಾಮನ ಮಂದಿರದ ಬಯೋಪಿಕ್ ಅನ್ನು ಸಿನಿಮಾ ರೂಪದಲ್ಲಿ ತರಲು ನಿರ್ದೇಶಕ ಶ್ರೀನಿವಾಸರಾಜು (Srinivasaraju) ಮುಂದಾಗಿದ್ದಾರೆ. ಈ ಚಿತ್ರದ ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಆದರೆ “ಸತ್ಯಂ ಶಿವಂ ಸುಂದರಂ” ಎಂಬ ಟ್ಯಾಗ್ ಲೈನ್ ಇದೆ. “ಕೃಷ್ಣಂ ಪ್ರಣಯ ಸಖಿ” ಚಿತ್ರವನ್ನು ನಿರ್ಮಿಸಿರುವ ಪ್ರಶಾಂತ್ ಜಿ ರುದ್ರಪ್ಪ ತ್ರಿಶೂಲ್ ಎಂಟರ್ಟೈನ್ಮೆಂಟ್ ಸಂಸ್ಥೆ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ..

    ಸಾಮಾನ್ಯವಾಗಿ ಮನುಷ್ಯರ ಬಯೋಪಿಕ್ ಇರುತ್ತದೆ. ಆದರೆ, ದೇವಸ್ಥಾನವೊಂದರ ಬಯೋಪಿಕ್ ಇರುವುದು ಅಯೋಧ್ಯೆಯ ಶ್ರೀರಾಮಮಂದಿರಕ್ಕೆ ಮಾತ್ರ ಎನ್ನುವುದು ನನ್ನ ಅಭಿಪ್ರಾಯ.‌ ಸುಮಾರು 500 ವರ್ಷಗಳ ಇತಿಹಾಸವನ್ನು ತೆರೆಯ ಮೇಲೆ ತರುವ ಪ್ರಯತ್ನ ಮಾಡುತ್ತಿದ್ದೇನೆ. ಕನ್ನಡದಲ್ಲಿ ಈ ಚಿತ್ರ ನಿರ್ಮಾಣವಾಗಲಿದೆ. ಬಾಬರಿ ಮಸೀದಿ ಗೂ ಮೊದಲು ರಾಜಾ ವಿಕ್ರಮಾದಿತ್ಯ ಪ್ರತಿಷ್ಠಾಪಿಸಿದ  ಶ್ರೀರಾಮ ಮಂದಿರದಿಂದ ಈ ಚಿತ್ರದ ಕಥೆ ತೆರೆದುಕೊಳ್ಳುತ್ತದೆ. ಇದರ ಜೊತೆಗೆ ರಾಮಾಯಣದ ಕೆಲವು ಅಂಶಗಳನ್ನು ತೆಗೆದುಕೊಳ್ಳುತ್ತಿದ್ದೇನೆ‌. ಹಾಗಂತ ಇದು ಸಂಪೂರ್ಣ ರಾಮಾಯಣದ ಕಥೆಯಲ್ಲ.   ದಶರಥ, ರಾಮ, ಸೀತಾ, ಹನುಮಂತ, ವಾಲಿ ಹಾಗೂ ವಾಲ್ಮೀಕಿ ಈ ಆರು ಪಾತ್ರಗಳು ಮಾತ್ರ ಇರುತ್ತದೆ. ತುಳಿಸಿದಾಸರ ಪಾತ್ರ ಕೂಡ ಈ ಚಿತ್ರದಲ್ಲಿರಲಿದೆ. ಶ್ರೀರಾಮನ ಆದರ್ಶದ ಗುಣಗಳನ್ನು ಈ ಚಿತ್ರದಲ್ಲಿ ತೋರಿಸಲಾಗುತ್ತದೆ.  “ಸತ್ಯಂ ಶಿವಂ ಸುಂದರಂ” ಎಂಬ ಟ್ಯಾಗ್ ಲೈನ್ ಈ ಚಿತ್ರಕ್ಕಿದ್ದು, ಮೂರು ಭಾಗಗಳಲ್ಲಿ ಚಿತ್ರ ಬರಲಿದೆ. ಶೀರ್ಷಿಕೆ ಇನ್ನು ನಿಗದಿಯಾಗಿಲ್ಲ. ಚಿತ್ರ ಬಹಳ ಅದ್ದೂರಿಯಾಗಿ ನಿರ್ಮಾಣವಾಗಲಿದ್ದು, ಭಾರತದ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಈ ಚಿತ್ರದಲ್ಲಿ ಭಾಗಿಯಾಗಲಿದ್ದಾರೆ. ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಶ್ರೀರಾಮನವಮಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಕುರಿತು ಇಷ್ಟು ಹೇಳಲು ಬಯಸುತ್ತೇನೆ. ಮುಂದಿನ ದಿನಗಳಲ್ಲಿ  ಚಿತ್ರದ ಶೀರ್ಷಿಕೆ ಸೇರಿದಂತೆ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕ ಶ್ರೀನಿವಾಸರಾಜು ತಿಳಿಸಿದ್ದಾರೆ.

  • ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಶೂಟಿಂಗ್ ಮುಗಿಸಿದ ನಟ ಗಣೇಶ್

    ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಶೂಟಿಂಗ್ ಮುಗಿಸಿದ ನಟ ಗಣೇಶ್

    ನ್ನಡದ ಹಲವು ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು (Srinivasaraj) ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’ (Krishnam Pranaya Sakhi) ಚಿತ್ರದ ಚಿತ್ರೀಕರಣ ವಿಯೆಟ್ನಾಂ ನಲ್ಲಿ ಮುಕ್ತಾಯವಾಗಿದೆ. ಅಲ್ಲಿ ಚಿತ್ರದ ಎರಡು ಹಾಡುಗಳು ಹಾಗೂ ಕೆಲವು ಮಾತಿನ ಭಾಗದ ಚಿತ್ರೀಕರಣ ನಡೆದಿದೆ.  ಇದರೊಂದಿಗೆ ಚಿತ್ರದ ಚಿತ್ರೀಕರಣ ಸಂಪೂರ್ಣವಾಗಿ ಮುಕ್ತಾಯವಾಗಿದೆ. ಗಣೇಶ್, ಮಾಳವಿಕ ನಾಯರ್, ಶರಣ್ಯ ಶೆಟ್ಟಿ ಮುಂತಾದವರು ಈ ಭಾಗದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಪ್ರಸ್ತುತ ರೀರೆಕಾರ್ಡಿಂಗ್ ನಡೆಯುತ್ತಿದ್ದು, ಸದ್ಯದಲ್ಲೇ ಚಿತ್ರ ತೆರೆಗೆ ಬರಲು ಸಿದ್ದವಾಗಲಿದೆ.

    Krishnam Pranaya Sakhi

    ಚಿತ್ರದಲ್ಲಿ ಐದು ಸುಮಧುರ ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು.

    ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಶೂಟಿಂಗ್ ಗಾಗಿ ಇಟಲಿಗೆ ಹಾರಲಿದ್ದಾರೆ ಗಣೇಶ್

    ಶೂಟಿಂಗ್ ಗಾಗಿ ಇಟಲಿಗೆ ಹಾರಲಿದ್ದಾರೆ ಗಣೇಶ್

    ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ.

    ganesh

    ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷ ಆರಂಭದ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ.

    golden star ganesh

    ಯಶಸ್ವಿ ಚಿತ್ರಗಳ ನಿರ್ದೇಶಕ  ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ  ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ ಕೃಷ್ಣಂ ಪ್ರಣಯ ಸಖಿ ಚಿತ್ರಕ್ಕಿದೆ.

    ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,  ಶ್ರೀನಿವಾಸಮೂರ್ತಿ,  ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಶೂಟಿಂಗ್ ಮುಕ್ತಾಯ

    ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಶೂಟಿಂಗ್ ಮುಕ್ತಾಯ

    ಶ್ರೀನಿವಾಸರಾಜು (Srinivasaraju) ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ (Ganesh) ನಾಯಕರಾಗಿ ನಟಿಸಿರುವ ಕೃಷ್ಣಂ ಪ್ರಣಯ ಸಖಿ (Krishnam Pranaya Sakhi) ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಡಬ್ಬಿಂಗ್ ನಡೆಯುತ್ತಿದ್ದು, ಡಬ್ಬಿಂಗ್ ಕೂಡ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಲಿದೆ.

    Krishnam Pranaya Sa 2

    ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ  ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ.

    Krishnam Pranaya Sa 1

    ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ  ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು.

    ಕೃಷ್ಣಂ ಪ್ರಣಯ ಸಖಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,   ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನ, ಅಶೋಕ್, ರಾಮಕೃಷ್ಣ, ಶಿವಧ್ವಜ್,  ರಘುರಾಮ್, ಮಾನಸಿ ಸುಧೀರ್, ಅಂಬುಜ, ಗಿರಿ ಶಿವಣ್ಣ ಮುಂತಾದ ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

  • ನೋಡೋಕ್ ಮರೆಯಬೇಡಿ ‘ದಂಡುಪಾಳ್ಯ’ ಕೊನೇ ಕಂತು!

    ನೋಡೋಕ್ ಮರೆಯಬೇಡಿ ‘ದಂಡುಪಾಳ್ಯ’ ಕೊನೇ ಕಂತು!

    ಬೆಂಗಳೂರು: ಶ್ರೀನಿವಾಸ ರಾಜು ನಿರ್ದೇಶನದ `ದಂಡುಪಾಳ್ಯ-3′ ಚಿತ್ರ ತೆರೆಕಾಣಲು ಇನ್ನು ಮೂರು ದಿನವಷ್ಟೇ ಬಾಕಿ. ಈ ಹಿಂದಿನ ಸರಣಿಯ ಎರಡು ಚಿತ್ರಗಳಿಗಿಂತಲೂ ಈ ಚಿತ್ರದ ಬಗ್ಗೆ ಹುಟ್ಟಿಕೊಂಡಿರುವ ಕುತೂಹಲ ತುಸು ಹೆಚ್ಚೇ ಇದೆ. ಯಾಕೆಂದರೆ ಸ್ವತಃ ನಿರ್ದೇಶಕರೇ ಇದು ಕಡೆಯ ಕಂತೆಂದು ಹೇಳಿಕೊಂಡಿದ್ದಾರೆ.

    ದಂಡುಪಾಳ್ಯವೆಂಬುದು ಹಿಂಸೆ ಮತ್ತು ರಕ್ತದಿಂದ ಬೇರ್ಪಡಿಸಿ ನೋಡಲಾರದಂತಹ ಕಥೆ. ಇದನ್ನು ನೀವ್ಯಾಕೆ ನೋಡ್ಬೇಕು ಎಂದು ಕೇಳಿದರೆ ನಿರ್ದೇಶಕ ಶ್ರೀನಿವಾಸ ರಾಜು ಹೀಗಂತಾರೆ – ಈ ಹಿಂದಿನ ಎರಡು ಕಂತುಗಳನ್ನು ನೋಡಿದವರು, ಒಟ್ಟಾರೆ ಚಿತ್ರದ ಅಸಲಿ ಕತೆ ಏನೆಂದು ತಿಳಿಯಲು ದಂಡುಪಾಳ್ಯ-3ನ್ನು ನೋಡಲೇ ಬೇಕು ಎಂದು ಹೇಳುತ್ತಾರೆ.

    Dandupalya 2

    ದಂಡುಪಾಳ್ಯ ಹೆಸರಿನಲ್ಲಿ ಈ ಹಿಂದೆ ಬಂದ ಎರಡು ಭಾಗಗಳೂ ಯಶಸ್ವಿಯಾಗಿತ್ತು. ಚಿತ್ರದಲ್ಲಿ ಹಿಂಸೆ ಮಾತ್ರ ಕೊಟ್ಟಿದ್ದರೆ ಜನರಿಗೆ ಇದರ ಬಗ್ಗೆ ಕುತೂಹಲವಿರುತ್ತಿರಲಿಲ್ಲ. ಹಾಗಾಗಿದ್ದರೆ ಎರಡನೇ ಭಾಗವನ್ನು ಮಾಡುವುದಕ್ಕೂ ಚಿತ್ರತಂಡ ಮುಂದಾಗುತ್ತಿರಲಿಲ್ಲ. ಆದರೆ ಎಲ್ಲವನ್ನೂ ಹದವರಿತು ಭಿನ್ನವಾದ ನಿರೂಪಣೆಯೊಂದಿಗೆ ಅದ್ಭುತವಾದ ದೃಶ್ಯ ಕಟ್ಟಿಕೊಟ್ಟಿದ್ದರು ನಿರ್ದೇಶಕ ಶ್ರೀನಿವಾಸ ರಾಜು.

    ಚಿತ್ರದ ಕೊನೆಯ ಭಾಗದಲ್ಲಿ ಏನಿರಬಹುದು ಅಂತಾ ನಿಮ್ಮ ಯೋಚನೆಯಾಗಿದ್ದರೆ ಚಿತ್ರದಲ್ಲಿ ಪ್ರೇಕ್ಷಕರಿಗೆ ಅಚ್ಚರಿಯಾಗುವ ಅಂಶವೇ ಇದೆಯಂತೆ. ಅದೇನಂತ ಗೊತ್ತಾಗ್ಬೇಕಾದರೆ ದಂಡುಪಾಳ್ಯ-3ನ್ನು ತಪ್ಪದೇ ನೋಡಿ.

    Dandupalya 3