Tag: ಹಣಕಾಸು ಸಚಿವಾಲಯ

  • ತಲಾ ಆದಾಯ ಶೇ.93.6ರಷ್ಟು ಹೆಚ್ಚಳ – ದೇಶದಲ್ಲೇ ಅಗ್ರ ಸ್ಥಾನಕ್ಕೇರಿದ ಕರ್ನಾಟಕ

    ತಲಾ ಆದಾಯ ಶೇ.93.6ರಷ್ಟು ಹೆಚ್ಚಳ – ದೇಶದಲ್ಲೇ ಅಗ್ರ ಸ್ಥಾನಕ್ಕೇರಿದ ಕರ್ನಾಟಕ

    ನವದೆಹಲಿ: ಕರ್ನಾಟಕ (Karnataka) ಇದೀಗ ಭಾರತದಲ್ಲಿಯೇ (India) ಅತೀ ಹೆಚ್ಚು ತಲಾ ಆದಾಯ (Per Capita Income)  ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದ್ದು, ಈ ಮೂಲಕ ಶೇ.93.6ರಷ್ಟು ಬೆಳವಣಿಗೆ ದಾಖಲಿಸಿದೆ.ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಕೇಸ್ – ಬುಧವಾರ SITಯಿಂದ ತನಿಖೆ ಆರಂಭ

    ಹಣಕಾಸು ಸಚಿವಾಲಯ ಲೋಕಸಭೆಯಲ್ಲಿ ಮಂಡಿಸಿದ ಅಂಕಿ-ಅಂಶಗಳ ಪ್ರಕಾರ, 2024-25ನೇ ಸಾಲಿನಲ್ಲಿ ಕರ್ನಾಟಕ ದೇಶದಲ್ಲೇ ಅತೀ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ವಾರ್ಷಿಕ ತಲಾದಾಯ ಪ್ರಮಾಣ 2 ಲಕ್ಷ ರೂ. ದಾಟಿದೆ. ಸ್ಥಿರ ಬೆಲೆಯಲ್ಲಿ ತಲಾ ನಿವ್ವಳ ದೇಶೀಯ ಉತ್ಪನ್ನ 2.04 ಲಕ್ಷ ರೂ. ತಲುಪಿದೆ.

    2014-15ರಲ್ಲಿದ್ದ 1,05,697 ರೂ. ಆದಾಯವೂ ಶೇ.93.6ರಷ್ಟು ಬೆಳವಣಿಗೆ ದಾಖಲಿಸಿದೆ. ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ 1.14 ಲಕ್ಷ ರೂ.ಯಷ್ಟಿದೆ. ದಶಕದ ಹಿಂದೆ 72,805 ರೂ. ಇತ್ತು. ಕರ್ನಾಟಕ ನಂತರ ತಮಿಳುನಾಡು 1.96 ರೂ. ತಲಾದಾಯದೊಂದಿಗೆ 2ನೇ ಸ್ಥಾನದಲ್ಲಿದೆ.ಇದನ್ನೂ ಓದಿ: ಬಿಕ್ಲು ಶಿವ ಮರ್ಡರ್ ಕೇಸ್ – ಕೋಲಾರ ಮೂಲದ ನಾಲ್ವರು ಸುಪಾರಿ ಕಿಲ್ಲರ್ಸ್ ಅರೆಸ್ಟ್

  • ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

    ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆ ಫಲಾನುಭವಿಗಳಲ್ಲಿ ಕರ್ನಾಟಕ ಮುಂಚೂಣಿ

    -ಕೇಂದ್ರದಿಂದ SC-ST, ಮಹಿಳೆಯರಿಗೆ 2,946 ಕೋಟಿ ಸಾಲ: ಎಂಪಿ ಕ್ಯಾ.ಚೌಟ ಶ್ಲಾಘನೆ

    ನವದೆಹಲಿ: ಕೇಂದ್ರದ ಮೋದಿ ಸರ್ಕಾರವು (Modi Govt), ಎಸ್‌ಸಿ-ಎಸ್‌ಟಿ ಹಾಗೂ ಮಹಿಳಾ ಉದ್ದಿಮೆದಾರರನ್ನು ಉತ್ತೇಜಿಸುವ ಸ್ಟ್ಯಾಂಡ್ ಅಪ್ ಇಂಡಿಯಾ (Stand Up India Scheme) ಯೋಜನೆಯಡಿ ಇಡೀ ದೇಶದಲ್ಲೇ ಕರ್ನಾಟಕ (Karnataka) ರಾಜ್ಯಕ್ಕೆ ಅತೀ ಹೆಚ್ಚಿನ ಸಾಲದ ನೆರವು ನೀಡಿದೆ ಎಂದು ದಕ್ಷಿಣ ಕನ್ನಡ (Dakshina Kannada) ಸಂಸದ ಕ್ಯಾ. ಬ್ರಿಜೇಶ್ ಚೌಟ (Capt Brijesh Chowta) ಶ್ಲಾಘಿಸಿದ್ದಾರೆ.

    ಈ ಕುರಿತು ಚೌಟ ಅವರು ಲೋಕಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ, ಹಣಕಾಸು ಖಾತೆಯ ರಾಜ್ಯ ಸಚಿವ ಪಂಕಜ್ ಚೌಧರಿ ನೀಡಿರುವ ಲಿಖಿತ ಉತ್ತರದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಹಣಕಾಸು ಸಚಿವಾಲಯದ (Ministry of Finance) ಈ ಲಿಖಿತ ಪ್ರತಿಕ್ರಿಯೆಯಲ್ಲಿ, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ. ಹಿಂದುಳಿದ ಸಮುದಾಯಗಳನ್ನು ಸ್ವಂತ ಉದ್ಯಮ ಸ್ಥಾಪಿಸಿ, ಸ್ವಾವಲಂಬಿಯಾಗಿಸುವ ಮೂಲಕ ಯುವ ಉದ್ದಿಮೆದಾರರನ್ನು ತಯಾರಿಸುವಲ್ಲಿ ಈ ಯೋಜನೆಯಡಿ ಕರ್ನಾಟಕಕ್ಕೆ ಹೆಚ್ಚಿನ ಸಾಲದ ನೆರವನ್ನು ಕೇಂದ್ರ ಸರ್ಕಾರ (Central Govt) ನೀಡಿದೆ ಎಂದು ಉಲ್ಲೇಖಿಸಿದೆ.ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮಳೆ ಪೀಡಿತ ಪ್ರದೇಶದ 11 ಶಾಲೆಗಳ ದುರಸ್ತಿಗೆ ಕೇಂದ್ರ ಸರ್ಕಾರದ ಅನುಮೋದನೆ

    ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯು 2016ರಲ್ಲಿ ಪ್ರಾರಂಭವಾಗಿದ್ದು, ಇಲ್ಲಿಯವರೆಗೆ 16,846 ಸಾಲದ ಖಾತೆಗಳನ್ನು ತೆರೆದು ಈ ಮೂಲಕ ಒಟ್ಟು 3,750.40 ಕೋಟಿ ರೂ. ಸಾಲವನ್ನು ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯಡಿ ಕರ್ನಾಟಕದ ಅರ್ಹ ಫಲಾನುಭವಿಗಳು ಪಡೆದುಕೊಂಡಿದ್ದಾರೆ. ಈ ಯೋಜನೆಯಡಿ ಮಹಿಳೆಯರು ಒಳಗೊಂಡಂತೆ ಪರಿಶಿಷ್ಟ ಜಾತಿಯ ಫಲಾನುಭವಿಗಳು 3,108 ಖಾತೆಗಳನ್ನು ಹೊಂದಿದ್ದು, 661.10 ಕೋಟಿ ರೂ. ಸಾಲ ನೀಡಲಾಗಿದೆ. ಹಾಗೆಯೇ ಪರಿಶಿಷ್ಟ ಪಂಗಡದವರು 868 ಖಾತೆಗಳನ್ನು ಹೊಂದಿದ್ದು, 166.96 ಕೋಟಿ ರೂ. ಸಾಲ ಒದಗಿಸಲಾಗಿದೆ. ಇನ್ನೂ ಸಾಮಾನ್ಯ ಮಹಿಳಾ ವಿಭಾಗದಡಿ 12,870 ಸಾಲದ ಖಾತೆಯನ್ನು ಹೊಂದಿದ್ದು, 2,922.34 ಕೋಟಿ ರೂ. ಸಾಲ ನೀಡಲಾಗಿದೆ. ಈ ಮೂಲಕ ಮೋದಿ ಸರ್ಕಾರದ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಗೆ ಕರ್ನಾಟಕದ ಫಲಾನುಭವಿಗಳಿಂದ ಅತೀ ಹೆಚ್ಚಿನ ಸ್ಪಂದನೆ ವ್ಯಕ್ತವಾಗಿದೆ.

    ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಈ ಅಭೂತಪೂರ್ವ ಸ್ಪಂದನೆಯನ್ನು ಶ್ಲಾಘಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು, ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯು ಕರ್ನಾಟಕದಲ್ಲಿ ಸಾವಿರಾರು ಮಂದಿಯನ್ನು ಉದ್ದಿಮೆದಾರರನ್ನಾಗಿ ರೂಪಿಸುವಲ್ಲಿ ಬಹುದೊಡ್ಡ ಮಟ್ಟದಲ್ಲಿ ನೆರವಾಗಿದೆ. ಅದರಲ್ಲಿಯೂ ಶೋಷಿತ ಸಮಾಜದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಯುವ ಉದ್ದಿಮೆದಾರರನ್ನು ಕೂಡ ತಮ್ಮ ಕಾಲ ಮೇಲೆ ನಿಲ್ಲುವಂತೆ ಮಾಡಿದೆ. ಜೊತೆಗೆ ಸ್ವಂತ ಉದ್ಯಮವನ್ನು ಕಟ್ಟಿ ಬೆಳೆಸುವುದಕ್ಕೆ ಮೋದಿ ಸರ್ಕಾರದ ಸ್ಟ್ಯಾಂಡ್ ಅಪ್ ಇಂಡಿಯಾ ದೊಡ್ಡ ಪ್ರಮಾಣದಲ್ಲಿ ಬ್ಯಾಂಕ್ ಸಾಲವನ್ನು ನೀಡಿರುವುದು ನಿಜಕ್ಕೂ ಗಮನಾರ್ಹವಾದದ್ದು. ಕೇಂದ್ರ ಸರ್ಕಾರವು ಈ ಯೋಜನೆಯಡಿ ಕರ್ನಾಟಕದ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ದಿಮೆದಾರ ಆಕಾಂಕ್ಷಿಗಳನ್ನು ಆರ್ಥಿಕವಾಗಿ ಸೇರ್ಪಡೆಗೊಳಿಸುವಲ್ಲಿ ಭದ್ರ ಅಡಿಪಾಯವನ್ನು ಹಾಕುತ್ತಿದೆ ಎನ್ನುವುದಕ್ಕೆ ಕಳೆದ ಐದಾರು ವರ್ಷಗಳಲ್ಲಿ ನೀಡಿರುವ ಬ್ಯಾಂಕ್ ಸಾಲದ ಪ್ರಮಾಣವೇ ಸಾಕ್ಷಿ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸ್ಟ್ಯಾಂಡ್ ಅಪ್ ಇಂಡಿಯಾ ಯೋಜನೆಯು ಸ್ವಂತ ಉದ್ದಿಮೆ ಸ್ಥಾಪಿಸುವುದಕ್ಕೆ 10 ಲಕ್ಷ ರೂ.ನಿಂದ 1 ಕೋಟಿ ರೂ.ವರೆಗೆ ವಾಣಿಜ್ಯ ಬ್ಯಾಂಕ್‌ಗಳಿಂದ ಸಾಲ ಸೌಲಭ್ಯವನ್ನು ಒದಗಿಸುತ್ತದೆ. ವಿಶೇಷವಾಗಿ ಉತ್ಪಾದನೆ, ಸೇವಾ ಕ್ಷೇತ್ರ, ವ್ಯಾಪಾರ ಮತ್ತು ಸಂಬಂಧಿತ ಕೃಷಿ ವಲಯಗಳಲ್ಲಿನ ಗ್ರೀನ್‌ಫೀಲ್ಡ್ ಯೋಜನೆಗಳಿಗೆ ಆರ್ಥಿಕ ಸಹಾಯ ನೀಡುತ್ತದೆ.ಇದನ್ನೂ ಓದಿ: ನಾಳೆ ದರ್ಶನ್‌ ಪಾಲಿಗೆ ಬಿಗ್‌ ಡೇ – ಸುಪ್ರೀಂ ಕೋರ್ಟ್‌ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?

  • ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ

    ಭಾರತದಲ್ಲಿ ಮತದಾನಕ್ಕೆ ಅಮೆರಿಕ ದೇಣಿಗೆ ನೀಡಿಲ್ಲ, 7 ಯೋಜನೆಗಳಿಗಷ್ಟೇ ಧನಸಹಾಯ – ಹಣಕಾಸು ಸಚಿವಾಲಯ

    ನವದೆಹಲಿ: ಭಾರತದ ಚುನಾವಣೆ (Indian Election) ಮೇಲೆ ಪ್ರಭಾವ ಬೀರಲು ಅಮೆರಿಕ ʻಯುಎಸ್‌ಏಡ್‌ʼ (USAID ಮೂಲಕ ಹಣ ಪಡೆಯಲಾಗಿದೆ ಎಂಬ ವಿವಾದ ಕೋಲಾಹಲ ಎಬ್ಬಿಸಿದೆ. ಈ ನಡುವೆ 2023-24ನೇ ಸಾಲಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಉದ್ದೇಶಕ್ಕೆ ಅಮೆರಿಕದಿಂದ ಯಾವುದೇ ಹಣಕಾಸು ನೆರವು ಬಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ (Finance Ministry) ಪ್ರಕಟಿಸಿರುವ ವರದಿಯಲ್ಲಿ ಬೆಳಕಿಗೆ ಬಂದಿದೆ.

    ʻಯುಎಸ್‌ಏಡ್‌ʼ ಮೂಲಕ ಭಾರತಕ್ಕೆ ಹರಿದು ಬಂದ ಹಣದ ವಿವರಗಳನ್ನು ಕೇಂದ್ರ ಹಣಕಾಸು ಸಚಿವಾಲಯವನ್ನು ಭಾನುವಾರ ಪ್ರಕಟಿಸಿದೆ. ಇದರಿಂದ ಅಮೆರಿಕದ ವರದಿ ಮಾತ್ರವಲ್ಲ, ಭಾರತದ ಹಣಕಾಸು ಇಲಾಖೆಯ ವರದಿಯಲ್ಲೂ ಚುನಾವಣೆಗಾಗಿ ಅಮೆರಿಕ ಭಾರತಕ್ಕೆ ಯಾವುದೇ ದೇಣಿಗೆ ನೀಡಿಲ್ಲ ಎಂಬುದು ಸ್ಪಷ್ಟವಾಗಿದೆ.

    Donald Trump 1 1

    ಈ ಕುರಿತು ಹೇಳಿಕೆ ನೀಡಿರುವ ಕೇಂದ್ರ ವಿತ್ತ ಸಚಿವಾಲಯವು, ಭಾರತದಲ್ಲಿ 6,498 ಕೋಟಿ ರೂ. (750 ದಶಲಕ್ಷ ಡಾಲರ್) ವೆಚ್ಚದ 7 ಯೋಜನೆಗಳಿಗೆ ಅಮೆರಿಕದ ನೆರವು ಬಳಕೆಯಾಗುತ್ತಿದೆ. ಆದರೆ, ಈ ದೇಣಿಗೆಯಲ್ಲಿ ಯಾವುದೂ, ಚುನಾವಣೆ ಅಥವಾ ಮತದಾನಕ್ಕೆ ಸಂಬಂಧಿಸಿ ಬಳಕೆಯಾಗುತ್ತಿಲ್ಲ ಎಂದು ಹೇಳಿದೆ. ಅಲ್ಲದೇ ಭಾರತ ಸರ್ಕಾರ ಮತ್ತು ಅಮೆರಿಕದ ಅಂತಾರಾಷ್ಟ್ರೀಯ ಅಭಿವೃದ್ಧಿ ಏಜೆನ್ಸಿ (ಯುಎಸ್‌ಏಡ್‌) ಸಹಯೋಗದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಇದಕ್ಕೆ ಸಂಬಂಧಿಸಿದಂತೆ 2023-24ರಲ್ಲಿ 825 ಕೋಟಿ ರೂ. (97 ದಶಲಕ್ಷ ಡಾಲರ್) ಅಮೆರಿಕದ ನೆರವು ಬಂದಿದೆ ಎಂದು ಎತ್ತ ಇಲಾಖೆಯ ವಾರ್ಷಿಕ ವರದಿ ತಿಳಿಸಿದೆ. ಇದು ರಾಜಕೀಯ ಬಿರುಗಾಳಿ ಎಬ್ಬಿಸಿದೆ.

    narendra modi trump

    ಕೃಷಿ, ಆಹಾರ ಭದ್ರತೆ, ನೀರು, ನೈರ್ಮಲ್ಯ ರಕ್ಷಣೆ, ಮರುಬಳಕೆಯ ಇಂಧನ ಅಭಿವೃದ್ಧಿ, ವಿಪತ್ತು ನಿರ್ವಹಣೆ ಯೋಜನೆಗಳಿಗೆ ‘ಯುಎಸ್‌ಏಡ್‌’ ಮೂಲಕ ನೆರವು ಪಡೆಯಲಾಗಿದೆ. ಇದಲ್ಲದೇ ಸುಸ್ಥಿರ ಅರಣ್ಯ ಅಭಿವೃದ್ಧಿ, ಹವಾಮಾನ ಬದಲಾವಣೆ, ಇಂಧನ ದಕ್ಷತೆ, ತಂತ್ರಜ್ಞಾನ ಸೇರಿ ಹಲವು ಯೋಜನೆಗಳಿಗೆ ಹಣಕಾಸು ನೆರವು ಪಡೆಯಲಾಗಿದೆ ಎಂಬ ಮಾಹಿತಿಯನ್ನು ಹಣಕಾಸು ಸಚಿವಾಲಯ ವಾರ್ಷಿಕ ವರದಿಯಲ್ಲಿ ತಿಳಿಸಿದೆ.

    ಭಾರತ-ಅಮೆರಿಕ ದ್ವಿಪಕ್ಷೀಯ ಒಪ್ಪಂದದಂತೆ 1951 ರಿಂದ ʻಯುಎಸ್‌ಏಡ್‌ʼ ಮೂಲಕ ಭಾರತಕ್ಕೆ ಆರ್ಥಿಕ ನೆರವು ನೀಡಲಾಗುತ್ತಿದೆ. ಕಳೆದ 70 ವರ್ಷದಲ್ಲಿ ಸುಮಾರು 555 ಯೋಜನೆಗಳಿಗೆ 17 ಬಿಲಿಯನ್‌ ಡಾಲರ್‌ ಹಣದ ನೆರವು ಬಂದಿದೆ ಎಂದು ವರದಿಯಲ್ಲಿ ತಿಳಿಸಿದೆ.

    https://youtu.be/9aRZwimkiN0?si=1pIJY_bEtIdzMSF8

  • ದಾಖಲೆಯ ಜಿಎಸ್‌ಟಿ ಸಂಗ್ರಹ – ಏಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ಸಂಗ್ರಹ – ಕರ್ನಾಟಕದಲ್ಲಿ ಎಷ್ಟು?

    ದಾಖಲೆಯ ಜಿಎಸ್‌ಟಿ ಸಂಗ್ರಹ – ಏಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ಸಂಗ್ರಹ – ಕರ್ನಾಟಕದಲ್ಲಿ ಎಷ್ಟು?

    ನವದೆಹಲಿ: ಈ ಬಾರಿಯ ಏಪ್ರಿಲ್‌ ತಿಂಗಳಿನಲ್ಲಿ ದಾಖಲೆಯ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ ಇದೇ ಮೊದಲ ಬಾರಿಗೆ ಅತಿಹೆಚ್ಚು ತೆರಿಗೆ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ (Ministry of Finance) ಸೋಮವಾರ ತಿಳಿಸಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ – ಪ್ರಜ್ವಲ್‌ ರೇವಣ್ಣ ಮನವಿ

    GST revenue collection hits record high of Rs 210 lakh cr in April 2

    ಜಿಎಸ್‌ಟಿ ಜಾರಿಯಾದ ನಂತರ ಪ್ರತಿ ಏಪ್ರಿಲ್‌ ತಿಂಗಳಿನಲ್ಲಿ ಹೆಚ್ಚು ತೆರಿಗೆ ಸಂಗ್ರವಾಗುತ್ತಿದೆ. 2022ರ ಏಪ್ರಿಲ್‌ಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾದರೆ ಕಳೆದ ವರ್ಷದ ಏಪ್ರಿಲ್‌ನಲ್ಲಿ 1.87 ಲಕ್ಷ ಕೋಟಿ ರೂ. ಸಂಗ್ರಹವಾಗಿತ್ತು.ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ.

    GST revenue collection hits record high of Rs 210 lakh cr in April 3

    ಕಳೆದ ಏಪ್ರಿಲ್‌ಗೆ ಹೋಲಿಸಿದರೆ ಜಿಎಸ್‌ಟಿ ಸಂಗ್ರಹ 12.4% ಏರಿಕೆಯಾಗಿದೆ. ಕರ್ನಾಟಕದಲ್ಲಿ (Karnataka) ಈ ಬಾರಿ 15,978 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ಏಪ್ರಿಲ್‌ನಲ್ಲಿ 14,593 ಕೋಟಿ ರೂ. ಸಂಗ್ರಹವಾಗಿತ್ತು.

    GST revenue collection hits record high of Rs 210 lakh cr in April 1

    ಯಾವ ರಾಜ್ಯದ್ದು ಎಷ್ಟು?
    ಮಹಾರಾಷ್ಟ್ರ 37,671 ಕೋಟಿ ರೂ., ಗುಜರಾತ್‌ 13,301 ಕೋಟಿ ರೂ., ಉತ್ತರ ಪ್ರದೇಶ 12,290 ಕೋಟಿ ರೂ., ಹರ್ಯಾಣ 12,168 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

  • ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ಹೊಸ ಸಂಸತ್ ಭವನ ಉದ್ಘಾಟನೆ ಸ್ಮರಣಾರ್ಥ 75 ರೂ. ವಿಶೇಷ ನಾಣ್ಯ ಬಿಡುಗಡೆ

    ನವದೆಹಲಿ: ನೂತನ ಸಂಸತ್ ಭವನ (New Parliament Building) ಉದ್ಘಾಟನೆಯ ಸ್ಮರಣಾರ್ಥ 75 ರೂ.ಯ ವಿಶೇಷ ನಾಣ್ಯವನ್ನು (Rs.75 Coin) ಬಿಡುಗಡೆ ಮಾಡಲಾಗುವುದಾಗಿ ಹಣಕಾಸು ಸಚಿವಾಲಯ ಗುರುವಾರ ತಿಳಿಸಿದೆ.

    75 ರೂ.ಯ ವಿಶೇಷ ನಾಣ್ಯದ ಒಂದು ಬದಿಯಲ್ಲಿ ಅಶೋಕ ಸ್ತಂಭದ ಸಿಂಹದ ಲಾಂಛನ ಇರಲಿದ್ದು, ಅದರ ಕೆಳಗಡೆ ‘ಸತ್ಯಮೇವ ಜಯತೆ’ ಎಂದು ಬರೆಯಲಾಗುತ್ತದೆ. ಎಡಭಾಗದಲ್ಲಿ ‘ಭಾರತ್’ ಎಂದು ದೇವನಾಗರಿ ಲಿಪಿ ಹಾಗೂ ಬಲ ಭಾಗದಲ್ಲಿ ‘ಇಂಡಿಯಾ’ ಎಂದು ಇಂಗ್ಲಿಷ್‌ನಲ್ಲಿ ಬರೆಯಲಾಗುತ್ತದೆ. ಸಿಂಹದ ಲಾಂಛನದ ಕೆಳಗಡೆ ಮುಖಬೆಲೆಯನ್ನು ತೋರಿಸುವ ರೂ. ಚಿಹ್ನೆಯೊಂದಿಗೆ 75 ಎಂದು ಇಂಗ್ಲಿಷ್ ಅಂಕೆಯಲ್ಲಿ ಬರೆಯಲಾಗುತ್ತದೆ ಎಂದು ತಿಳಿಸಿದೆ.

    New Parliament Building 1

    ನಾಣ್ಯದ ಇನ್ನೊಂದು ಬದಿಯಲ್ಲಿ ನೂತನ ಸಂಸತ್ತಿನ ಸಂಕೀರ್ಣದ ಚಿತ್ರವನ್ನು ಹೊಂದಿರಲಿದೆ. ‘ಸಂಸದ್ ಸಂಕುಲ್’ ಎಂದು ಅದರ ಮೇಲ್ಭಾಗದಲ್ಲಿ ದೇವನಾಗರಿ ಲಿಪಿಯಲ್ಲಿ ಹಾಗೂ ‘ಪಾರ್ಲಿಮೆಂಟ್ ಕಾಂಪ್ಲೆಕ್ಸ್’ ಎಂದು ಇಂಗ್ಲಿಷ್‌ನಲ್ಲಿ ಅದರ ಕೆಳ ಭಾಗದಲ್ಲಿ ಬರೆಯಲಾಗುತ್ತದೆ.

    New Parliament Building modi 8

    ನಾಣ್ಯವು ವೃತ್ತಾಕಾರದಲ್ಲಿದ್ದು, 44 ಮಿ.ಮೀ. ವ್ಯಾಸವನ್ನು ಹೊಂದಿರಲಿದೆ. ಅದರ ಅಂಚುಗಳ ಉದ್ದಕ್ಕೂ 200 ಸರಣಿಗಳನ್ನು ಹೊಂದಿರುತ್ತದೆ. 50% ಬೆಳ್ಳಿ, 40% ತಾಮ್ರ, 5% ನಿಕಲ್ ಮತ್ತು 5% ಸತುವನ್ನು ಬಳಸಿ ನಾಣ್ಯ ತಯಾರಿಸಲಾಗುತ್ತಿದ್ದು, ಇದು 35 ಗ್ರಾಂ ತೂಗಲಿದೆ. ಇದನ್ನೂ ಓದಿ: ವಿಜಯ್ ಮಲ್ಯಗೆ ಮುಳುವಾಗಿದ್ದ ಟಿಪ್ಪು ಖಡ್ಗ 145 ಕೋಟಿಗೆ ಹರಾಜು

    New Parliament Building modi 9

    ಈ ವಿಶೇಷ ನಾಣ್ಯವನ್ನು ಸಂಸತ್ ಭವನದ ಉದ್ಘಾಟನೆಯ ಸ್ಮರಣಾರ್ಥವಾಗಿ ಬಿಡುಗಡೆಗೊಳಿಸುತ್ತಿರುವುದು ಮಾತ್ರವಲ್ಲದೇ ಇದು 75 ವರ್ಷಗಳ ಸ್ವತಂತ್ರ್ಯವನ್ನು ಆಚರಿಸುತ್ತಿರುವ ಭಾರತಕ್ಕೆ ಗೌರವದ ಸಂಕೇತವೂ ಆಗಿರಲಿದೆ ಎಂದು ಹಣಕಾಸು ಸಚಿವಾಲಯ ಹೇಳಿದೆ.

    ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಸುಮಾರು 25 ಪಕ್ಷಗಳು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಆದರೆ 20ಕ್ಕೂ ಅಧಿಕ ವಿರೋಧ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಲು ನಿರ್ಧರಿಸಿವೆ. ಕಾಂಗ್ರೆಸ್, ಆಮ್ ಆದ್ಮಿ ಪಾರ್ಟಿ, ತೃಣಮೂಲ, ಸಮಾಜವಾದಿ ಪಾರ್ಟಿ ಸೇರಿದಂತೆ ಹಲವು ಪಕ್ಷಗಳು ಉದ್ಘಾಟನೆಯನ್ನು ಬಹಿಷ್ಕರಿಸುವುದಾಗಿ ಘೋಷಿಸಿವೆ. ಇದನ್ನೂ ಓದಿ: New Parliament Building ಉದ್ಘಾಟನೆ ವಿಚಾರದಲ್ಲಿ ರಾಜಕೀಯ ಜೋರು – ವಿಪಕ್ಷಗಳ ಬಹಿಷ್ಕಾರ ಅಸ್ತ್ರಕ್ಕೆ ಪ್ರಧಾನಿ ಮೋದಿ ಕೌಂಟರ್

  • ಈ ಬಾರಿ ದಾಖಲೆಯ GST ಸಂಗ್ರಹ – 1.87 ಲಕ್ಷ ಕೋಟಿಯಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    ಈ ಬಾರಿ ದಾಖಲೆಯ GST ಸಂಗ್ರಹ – 1.87 ಲಕ್ಷ ಕೋಟಿಯಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    ನವದೆಹಲಿ: ಈ ಬಾರಿಯ ಏಪ್ರಿಲ್‌ ತಿಂಗಳಿನಲ್ಲಿ ದಾಖಲೆಯ 1.87 ಲಕ್ಷ ಕೋಟಿ  ರೂ. ಜಿಎಸ್‌ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಾರಿಯಾದ ಬಳಿಕ ಇದೇ ಮೊದಲಬಾರಿಗೆ ಅತಿಹೆಚ್ಚು ಜಿಎಸ್‌ಟಿ ಸಂಗ್ರಹವಾಗಿದೆ ಎಂದು ಕೇಂದ್ರೀಯ ಹಣಕಾಸು ಸಚಿವಾಲಯ (Ministry of Finance) ಸೋಮವಾರ ತಿಳಿಸಿದೆ.

    image0014LQK

    ಕಳೆದ ವರ್ಷ ಏಪ್ರಿಲ್‌ನಲ್ಲಿ 1.68 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದ್ದು ಈವರೆಗಿನ ದಾಖಲೆಯಾಗಿತ್ತು. ಆ ನಂತರ ಕಳೆದ ಅಕ್ಟೋಬರ್‌ನಲ್ಲಿ 1.48 ಲಕ್ಷ ಕೋಟಿ ರೂ. ತೆರಿಗೆ ಸಂಗ್ರಹವಾಗಿದ್ದು, 2ನೇ ಬಾರಿಗೆ ಅತಿಹೆಚ್ಚು ಸಂಗ್ರಹವಾದ ಜಿಎಸ್‌ಟಿ ಪ್ರಮಾಣವಾಗಿತ್ತು. ಆದ್ರೆ 2023ರ ಕಳೆದ ಏಪ್ರಿಲ್‌ ತಿಂಗಳಲ್ಲಿ 1.87 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಇದು ಹಿಂದೆಂಗಿತಲೂ ಅತ್ಯಧಿಕ 19,495 ಕೋಟಿ ರೂ. ಅಂದ್ರೆ ಶೇ.12 ರಷ್ಟು ಹೆಚ್ಚಾಗಿದೆ ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ಅಂತ್ಯಕ್ರಿಯೆಗೆ GST ಸುಳ್ಳೆಂದ ಕೇಂದ್ರ ಸರ್ಕಾರ- ತೆರಿಗೆ ವಾಪಸ್‍ಗೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನೆ

     

    ಕಳೆದ ತಿಂಗಳು ಏಪ್ರಿಲ್‌ 20 ರಂದು ಒಂದೇ ದಿನದಲ್ಲಿ 68,228 ಕೋಟಿ ರೂ. ಸಂಗ್ರಹವಾಗಿದೆ. ಇದು ಈವರೆಗೆ ಒಂದೇ ದಿನದಲ್ಲಿ ಸಂಗ್ರಹವಾದ ಅತಿಹೆಚ್ಚು ಜಿಎಸ್‌ಟಿ ಪ್ರಮಾಣವಾಗಿದೆ. ಇದನ್ನೂ ಓದಿ: 2ನೇ ಬಾರಿಗೆ ದಾಖಲೆ GST ಸಂಗ್ರಹ – 1.52 ಲಕ್ಷ ಕೋಟಿಯಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    gst state collection

     

    ರಾಜ್ಯದ ತೆರಿಗೆ ಶೇ.33 ರಷ್ಟು ಹೆಚ್ಚಳ: ಕರ್ನಾಟಕದಲ್ಲಿ (Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.23 ರಷ್ಟು ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ. 14,593 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷ ಏಪ್ರಿಲ್‌ನಲ್ಲಿ 11,820 ಕೋಟಿ ರೂ. ಸಂಗ್ರಹವಾಗಿತ್ತು. ಇದನ್ನೂ ಓದಿ: ಒಂದೇ ತಿಂಗಳಲ್ಲಿ 6,085 ಕೋಟಿ GST ಸಂಗ್ರಹ – ಸಿಎಂ ಬೊಮ್ಮಾಯಿ

     

    ಇನ್ನೂ ರಾಜ್ಯಗಳ ಪೈಕಿ ಈ ಬಾರಿಯೂ ಮಹಾರಾಷ್ಟ್ರದಲ್ಲಿ (Maharashtra) ಅತ್ಯಂತ ಹೆಚ್ಚಿನ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷ 27,495 ಕೋಟಿ ರೂ. ಸಂಗ್ರಹವಾಗಿದ್ದ ಮಹಾರಾಷ್ಟ್ರಕ್ಕೆ 33,196 ಕೋಟಿ ಜಿಎಸ್‌ಟಿ ಹರಿದುಬಂದಿದ್ದು, ಕಳೆದ ವರ್ಷಕ್ಕಿಂತ ಶೇ.21 ರಷ್ಟು ಹೆಚ್ಚಾಗಿದೆ. ಗುಜರಾತ್ (Gujarat) 11,721 ಕೋಟಿ ರೂ., ತಮಿಳುನಾಡು (Tamil Nadu) 11,559 ಕೋಟಿ ರೂ., ಪಶ್ಚಿಮ ಬಂಗಾಳ (West Bengal) 6,447 ಕೋಟಿ ರೂ., ಹರ್ಯಾಣ 10,035 ಕೋಟಿ ರೂ., ಉತ್ತರಪ್ರದೇಶ 10,320 ಕೋಟಿ ರೂ. ಹಾಗೂ ಹಾಗೂ ತೆಲಂಗಾಣ 5,622 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಿದೆ.

  • ವಿದೇಶಗಳಿಗೆ ಹಣಕಾಸು ಸಚಿವಾಲಯದ ಮಾಹಿತಿ ರವಾನೆ – ಓರ್ವ ಉದ್ಯೋಗಿ ಅರೆಸ್ಟ್‌

    ವಿದೇಶಗಳಿಗೆ ಹಣಕಾಸು ಸಚಿವಾಲಯದ ಮಾಹಿತಿ ರವಾನೆ – ಓರ್ವ ಉದ್ಯೋಗಿ ಅರೆಸ್ಟ್‌

    ನವದೆಹಲಿ: ದೆಹಲಿ ಪೊಲೀಸ್ ಕ್ರೈಂ ಬ್ರ್ಯಾಂಚ್‌ ಬೇಹುಗಾರಿಕೆ ಜಾಲವನ್ನು ಬೇಧಿಸಿದ್ದು, ಕೇಂದ್ರ ಹಣಕಾಸು ಸಚಿವಾಲಯಕ್ಕೆ (Finance Ministry) ಸಂಬಂಧಿಸಿದ ಸೂಕ್ಷ್ಮ ಮಾಹಿತಿ (Sensitive Information) ಸೋರಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆ ಉದ್ಯೋಗಿಯನ್ನು ಬಂಧಿಸಲಾಗಿದೆ.

    ಸುಮಿತ್‌ ಬಂಧನಕ್ಕೆ ಒಳಗಾದ ಆರೋಪಿ. ಈತ ಹಣಕಾಸು ಸಚಿವಾಲಯದ ಡೇಟಾ ಆಪರೇಟರ್‌ ಆಗಿ ಗುತ್ತಿಗೆ ಉದ್ಯೋಗಿಯಾಗಿ ಸೇರಿದ್ದ. ಹಣ ಪಡೆದು ವಿದೇಶಗಳಿಗೆ ವರ್ಗೀಕೃತ ದತ್ತಾಂಶವನ್ನು ಈತ ಒದಗಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಎಂದಿಗೂ ಲಾಡೆನ್ ಭೇಟಿಯಾಗಿಲ್ಲ: ಭಾರತದಿಂದ ತಪ್ಪು ಮಾಹಿತಿ ಎಂದ ಜಾಗತಿಕ ಉಗ್ರ

    ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ (Union Budget) ಮಂಡಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 2ನೇ ಬಾರಿಗೆ ದಾಖಲೆ GST ಸಂಗ್ರಹ – 1.52 ಲಕ್ಷ ಕೋಟಿಯಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    2ನೇ ಬಾರಿಗೆ ದಾಖಲೆ GST ಸಂಗ್ರಹ – 1.52 ಲಕ್ಷ ಕೋಟಿಯಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    ನವದೆಹಲಿ: ಈ ಬಾರಿ ಅಕ್ಟೋಬರ್ ತಿಂಗಳಲ್ಲಿ 1.52 ಲಕ್ಷ ಕೋಟಿ ಜಿಎಸ್‌ಟಿ (GST) ಸಂಗ್ರಹವಾಗಿದ್ದು, ದೇಶದಲ್ಲಿ ಜಿಎಸ್‌ಟಿ ಜಾರಿಯಾದ ಬಳಿಕ 2ನೇ ಬಾರಿಗೆ ಅತಿಹೆಚ್ಚಿನ ಜಿಎಸ್‌ಟಿ (GST) ಸಂಗ್ರವಾಗಿದೆ ಎಂದು ಕೇಂದ್ರಿಯ ಹಣಕಾಸು ಸಚಿವಾಲಯ (Ministry of Finance) ಮಂಗಳವಾರ ತಿಳಿಸಿದೆ.

    ಕಳೆದ ಏಪ್ರಿಲ್ ತಿಂಗಳಲ್ಲಿ 1.68 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹವಾಗಿತ್ತು. ಸೆಪ್ಟಂಬರ್‌ನಲ್ಲಿ 1.48 ಲಕ್ಷ ಕೋಟಿ ತೆರಿಗೆ ಸಂಗ್ರಹವಾಗಿತ್ತು. ಇದೀಗ ಅಕ್ಟೋಬರ್ ತಿಂಗಳಲ್ಲಿ 1.52 ಲಕ್ಷ ಕೋಟಿ ಸಂಗ್ರಹವಾಗಿದ್ದು, ಇದು 2ನೇ ಬಾರಿಗೆ ದಾಖಲೆಯ ಸಂಗ್ರಹವಾಗಿದೆ. ಇದನ್ನೂ ಓದಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಗದ್ದೆಯಲ್ಲಿ ಎಸೆದ – ಆರೋಪಿ ಅರೆಸ್ಟ್

    GST 1

    ಅಕ್ಟೋಬರ್ 2022ರಲ್ಲಿ ಒಟ್ಟು 1,51,718 ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸಲಾಗಿದೆ. ಇದರಲ್ಲಿ ಕೇಂದ್ರ ಜಿಎಸ್‌ಟಿ 26,039 ಕೋಟಿ ರೂ. ಆಗಿದ್ದರೆ, ರಾಜ್ಯ ಜಿಎಸ್‌ಟಿ (GST) 33,396 ಕೋಟಿ ರೂ., ಇಂಟಿಗ್ರೇಟೆಡ್ ಜಿಎಸ್‌ಟಿ 81,778 ಕೋಟಿ ರೂ. (ಸರಕುಗಳ ಆಮದಿನಲ್ಲಿ ಸಂಗ್ರಹಿಸಿದ 37,297 ಕೋಟಿ ರೂ. ಸೇರಿ), ಸೆಸ್ 10,505 ಕೋಟಿ ರೂ. (ಸರಕುಗಳ ಆಮದಿನ ಮೇಲೆ ಸಂಗ್ರಹಿಸಿದ 825 ಕೋಟಿ ರೂ. ಸೇರಿ) ಸೇರಿವೆ. ಇದು ಇಲ್ಲಿಯವರೆಗಿನ 2ನೇ ಅತಿ ಹೆಚ್ಚು ಎಂದು ಹಣಕಾಸು ಸಚಿವಾಲಯ ಅಧಿಕೃತವಾಗಿ ತಿಳಿಸಿದೆ.

    GST 3

    ರಾಜ್ಯದ ತೆರಿಗೆ ಶೇ.33 ರಷ್ಟು ಹೆಚ್ಚಳ: ಕರ್ನಾಟಕದಲ್ಲಿ (Karnataka) ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ.33 ರಷ್ಟು ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ. 10,996 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷ ಅಕ್ಟೋಬರ್‌ನಲ್ಲಿ 8,259 ಕೋಟಿ ರೂ. ಸಂಗ್ರಹವಾಗಿತ್ತು. ಇದನ್ನೂ ಓದಿ: ಆಗಸ್ಟ್‌ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?

    2000

    ಇನ್ನೂ ರಾಜ್ಯಗಳ ಪೈಕಿ ಈ ಬಾರಿಯೂ ಮಹಾರಾಷ್ಟ್ರದಲ್ಲಿ (Maharashtra) ಅತ್ಯಂತ ಹೆಚ್ಚಿನ ಜಿಎಸ್‌ಟಿ ಸಂಗ್ರಹವಾಗಿದೆ. ಕಳೆದ ವರ್ಷ 19,355 ಕೋಟಿ ರೂ. ಸಂಗ್ರಹವಾಗಿದ್ದ ಮಹಾರಾಷ್ಟ್ರಕ್ಕೆ 23,037 ಕೋಟಿ ಜಿಎಸ್‌ಟಿ ಹರಿದುಬಂದಿದ್ದು, ಕಳೆದ ವರ್ಷಕ್ಕಿಂತ ಶೇ.19 ರಷ್ಟು ಹೆಚ್ಚಾಗಿದೆ. ಗುಜರಾತ್ (Gujarat) 9,469 ಕೋಟಿ ರೂ., ತಮಿಳುನಾಡು (Tamil Nadu) 9,540 ಕೋಟಿ ರೂ., ಪಶ್ಚಿಮ ಬಂಗಾಳ (West Bengal) 5,367 ಕೋಟಿ ರೂ., ತೆಲಂಗಾಣಕ್ಕೆ 4,284 ಕೋಟಿ ರೂ., ಒಡಿಶಾಗೆ 3,769 ಕೋಟಿ ರೂ. ಹಾಗೂ ಆಂಧ್ರಪ್ರದೇಶದಲ್ಲಿ 3,579 ಕೋಟಿ ರೂ. ಜಿಎಸ್‌ಟಿ ಸಂಗ್ರಹವಾಗಿದೆ.

    Live Tv
    [brid partner=56869869 player=32851 video=960834 autoplay=true]

  • ತೆರಿಗೆ ವಿನಾಯ್ತಿ ಕೈಬಿಡಲು ಕೇಂದ್ರ ಚಿಂತನೆ – ವಿನಾಯ್ತಿ ಬೇಡ ಎಂದವರಿಗೆ ಮಾತ್ರ ಕಡಿಮೆ ತೆರಿಗೆ

    ತೆರಿಗೆ ವಿನಾಯ್ತಿ ಕೈಬಿಡಲು ಕೇಂದ್ರ ಚಿಂತನೆ – ವಿನಾಯ್ತಿ ಬೇಡ ಎಂದವರಿಗೆ ಮಾತ್ರ ಕಡಿಮೆ ತೆರಿಗೆ

    ನವದೆಹಲಿ: ತೆರಿಗೆ ವಿನಾಯ್ತಿಗಳನ್ನು ಕೈಬಿಟ್ಟು, ವಿನಾಯ್ತಿ ಮುಕ್ತ ತೆರಿಗೆ ಪದ್ಧತಿ ಜಾರಿಗೊಳಿಸಲು ಹಾಗೂ ವಿನಾಯ್ತಿ ಬೇಡ ಎಂದವರಿಗೆ ಆದಾಯ ತೆರಿಗೆ ದರವನ್ನು ಕಡಿಮೆಮಾಡಲು ಕೇಂದ್ರ ವಿತ್ತ ಸಚಿವಾಲಯ ಹೊಸ ಪ್ರಸ್ತಾವ ಇರಿಸಿದೆ. ಈ ಮೂಲಕ ಗೊಂದಲಮುಕ್ತ ಹಾಗೂ ಆಕರ್ಷಕ ಆದಾಯ ತೆರಿಗೆ ಪದ್ಧತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

    income tax depart ment

    2020-21ರಲ್ಲಿ ಈ ನಿಟ್ಟಿನಲ್ಲಿ ಹೊಸ ತೆರಿಗೆ ಪದ್ಧತಿಯೊಂದನ್ನು ಕೇಂದ್ರ ಜಾರಿಗೆ ತಂದಿತ್ತು. ಅದರಲ್ಲಿ ಮೊದಲ ವಿಧಾನದಲ್ಲಿ ಹಲವಾರು ತೆರಿಗೆ ವಿನಾಯ್ತಿ ಇರುತ್ತಿದ್ದವು. 2ನೇ ವಿಧಾನದಲ್ಲಿ ಯಾವುದೇ ತೆರಿಗೆ ವಿನಾಯ್ತಿ ಇರುತ್ತಿರಲಿಲ್ಲ. ಆದರೆ ಮೊದಲನೆಯ ವಿಧಕ್ಕೆ ಹೋಲಿಸಿದರೆ ಈ ವಿಧದಲ್ಲಿ ಕಡಿಮೆ ಪ್ರಮಾಣದ ತೆರಿಗೆ ಇತ್ತು. ತೆರಿಗೆದಾರರು ತಮಗೆ ಇಷ್ಟವಾದ ವಿಧಗಳನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶವಿತ್ತು. ಆದರೆ ಈಗ ಗೊಂದಲ ತೊಡೆದುಹಾಕುವ ನಿಟ್ಟಿನಲ್ಲಿ ವಿನಾಯ್ತಿ ಮುಕ್ತ ತೆರಿಗೆ ಪದ್ಧತಿಗೆ ಸರ್ಕಾರ ಮುಂದಾಗಿದೆ. ಇದನ್ನೂ ಓದಿ: ಪ್ರೀತಿಯ ಸುಳಿಗೆ ಸಿಕ್ಕಿಬಿದ್ದ ಬಾಲೆ – ಮದುವೆಯಾಗಲು ಪ್ರಿಯಕರ ಒಪ್ಪದ್ದಕ್ಕೆ ಆತ್ಮಹತ್ಯೆ

    income tax 1

    ಈಗಾಗಲೇ ಗೃಹ, ಶೈಕ್ಷಣಿಕ ಸಾಲ ಮುಗಿಸಿದವರಿಗೆ ಈ ಎರಡೂ ಕಾರಣ ಮುಂದಿಟ್ಟು ತೆರಿಗೆ ವಿನಾಯ್ತಿ ಕೇಳಲು ಆಗದು. ಇಂಥವರೆಲ್ಲ ವಿನಾಯ್ತಿ ಮುಕ್ತ ತೆರಿಗೆ ಪದ್ಧತಿಯ ಮೊರೆ ಹೋಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೇ ವಿನಾಯ್ತಿ ಮುಕ್ತ ತೆರಿಗೆಯಲ್ಲಿ ತೆರಿಗೆ ದರ ಕಡಿಮೆಯಿರುವ ಕಾರಣ ಜನರು ಇದರತ್ತ ಆಕರ್ಷಿತರಾಗುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.

    Live Tv

  • ಕೇಂದ್ರದಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ – ಕರ್ನಾಟಕದ ಪಾಲು ಎಷ್ಟು?

    ಕೇಂದ್ರದಿಂದ ರಾಜ್ಯಗಳ ಪಾಲಿನ ತೆರಿಗೆ ಹಣ ಬಿಡುಗಡೆ – ಕರ್ನಾಟಕದ ಪಾಲು ಎಷ್ಟು?

    ನವದೆಹಲಿ: ಕೇಂದ್ರದ ತೆರಿಗೆಗಳು ಮತ್ತು ಸುಂಕಗಳ ನಿವ್ವಳ ಆದಾಯದಲ್ಲಿ ಆಗಸ್ಟ್​ ತಿಂಗಳ ಬಾಬತ್ತಿನಲ್ಲಿ ರಾಜ್ಯಗಳ ಪಾಲಿನ ಹಣ ಬಿಡುಗಡೆ ಮಾಡಲಾಗಿದೆ.

    15 ನೇ ಹಣಕಾಸು ಆಯೋಗದ ಶಿಫಾರಸಿನಂತೆ ಈ ಹಣ ಬಿಡುಗಡೆ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಕರ್ನಾಟಕ ರಾಜ್ಯಕ್ಕೆ ‌ಎರಡು ಕಂತುಗಳಲ್ಲಿ 4,254 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ಎಲ್ಲ ರಾಜ್ಯಗಳಿಗೂ ಇಂದು ಒಟ್ಟಾರೆ 1,16,665 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಇದನ್ನೂ ಓದಿ: ಆಗಸ್ಟ್ 12 ರಿಂದ ಕೋವಿಡ್ ಬೂಸ್ಟರ್ ಆಗಿ ವಯಸ್ಕರಿಗೆ ಸಿಗಲಿದೆ ಕಾರ್ಬೆವಾಕ್ಸ್

    rupee24 kw8B

    ಬಿಹಾರ ರಾಜ್ಯಕ್ಕೆ 11,734 ಕೋಟಿ ರೂಪಾಯಿ ಹಣ ಬಿಡುಗಡೆಯಾಗಿದ್ದರೆ ಉತ್ತರ ಪ್ರದೇಶಕ್ಕೆ 20,928 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಇದು ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸುವ ನಿಟ್ಟಿನಲ್ಲಿ ರಾಜ್ಯಗಳನ್ನು ಬಲಪಡಿಸುವ ಕೇಂದ್ರ ಸರ್ಕಾರದ ಆಶಯ, ಬದ್ಧತೆಗೆ ಅನುಗುಣವಾಗಿದೆ. ಇದನ್ನೂ ಓದಿ: ಸಿ.ಟಿ.ರವಿ ಸ್ವಗ್ರಾಮದ ಯುವಕರಿಂದ ಸಿದ್ದರಾಮಯ್ಯ ವಿರುದ್ಧ ದೂರು

    58,332.86 ಕೋಟಿ ಸಾಮಾನ್ಯ ಮಾಸಿಕ ವಿಕೇಂದ್ರೀಕರಣಕ್ಕೆ ವಿರುದ್ಧವಾಗಿ 1,16,665.75 ಕೋಟಿ ರೂಪಾಯಿ ಮೊತ್ತದ ತೆರಿಗೆ ಹಂಚಿಕೆಯ ಎರಡು ಕಂತುಗಳನ್ನು ಕೇಂದ್ರವು ರಾಜ್ಯ ಸರ್ಕಾರಗಳಿಗೆ ಬಿಡುಗಡೆ ಮಾಡಿದೆ. ಇದು ರಾಜ್ಯಗಳ ಬಂಡವಾಳ ಮತ್ತು ಅಭಿವೃದ್ಧಿ ವೆಚ್ಚವನ್ನು ವೇಗಗೊಳಿಸಲು ರಾಜ್ಯಗಳ ಕೈಗಳನ್ನು ಬಲಪಡಿಸುವ ಭಾರತ ಸರ್ಕಾರದ ಬದ್ಧತೆಗೆ ಅನುಗುಣವಾಗಿದೆ ಎಂದು ಹಣಕಾಸು ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]