Tuesday, 20th August 2019

1 year ago

ಸಿಎಂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೆಡಿಎಸ್ ಕಾರ್ಯಕರ್ತನಿಗೆ ಥಳಿತ!

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಜೆಡಿಎಸ್ ಕಾರ್ಯಕರ್ತನಿಗೆ ಥಳಿಸಿರುವ ಘಟನೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಜಕ್ಕನಹಳ್ಳಿಯಲ್ಲಿ ನಡೆದಿದೆ. ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ದರ್ಶನ್ ಪರ ಸಿಎಂ ಸಿದ್ದರಾಮಯ್ಯ ಮತಯಾಚನೆ ಮಾಡುತ್ತಿದ್ರು. ಈ ವೇಳೆ ಜೆಡಿಎಸ್ ಬಾವುಟ ಹಾರಿಸಿ ಕಾರ್ಯಕರ್ತರೊಬ್ಬರು ಘೋಷಣೆ ಕೂಗಿದ್ದರು. ಇದರಿಂದ ಆಕ್ರೋಶಗೊಂದ ರೈತ ಸಂಘದ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿದತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟಿದ್ದಾರೆ […]

1 year ago

ಊರಿನ ಅಭಿವೃದ್ಧಿಗೆ ಏನ್ ಮಾಡಿದ್ದೀರಾ.. ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಗ್ರಾಮಸ್ಥರ ಮೇಲೆ ಹಲ್ಲೆ!

ಚಾಮರಾಜನಗರ: ಮತ ಕೇಳಲು ಬಂದ ಕಾಂಗ್ರೆಸ್ ಅಭ್ಯರ್ಥಿಯನ್ನು ತರಾಟೆಗೆ ತೆಗೆದುಕೊಂಡಿದ್ದಕ್ಕೆ ಕುಪಿತಗೊಂಡ ಕಾಂಗ್ರೆಸ್ ಕಾರ್ಯಕರ್ತರು ಗ್ರಾಮಸ್ಥರ ಮೇಲೆಯೇ ಹಲ್ಲೆ ನಡೆಸಿದ ಘಟನೆ ಚಾಮರಾಜನಗರದ ಜಿಲ್ಲೆಯ ಹನೂರು ಕ್ಷೇತ್ರದ ಕೌದಳ್ಳಿಯಲ್ಲಿ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಹಾಗೂ ಶಾಸಕ ನರೇಂದ್ರ ಬೆಂಬಲಿಗರು ಗ್ರಾಮಕ್ಕೆ ಮತ ಕೇಳಲು ಬಂದಿದ್ದರು. ಈ ವೇಳೆ ಗ್ರಾಮಸ್ಥರು, ಅಭಿವೃದ್ಧಿ ಮಾಡದೇ ಮತ ಕೇಳಲು ಬಂದಿದ್ದೀರಾ...