Tag: AI Technology

  • 2024ರಲ್ಲಿ 50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ – ರಿಯಲ್ ಎಸ್ಟೇಟ್‌ಗೆ ಹೊಡೆತ

    2024ರಲ್ಲಿ 50 ಸಾವಿರಕ್ಕೂ ಹೆಚ್ಚು ಐಟಿ ಉದ್ಯೋಗಿಗಳ ವಜಾ – ರಿಯಲ್ ಎಸ್ಟೇಟ್‌ಗೆ ಹೊಡೆತ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳೆದ ವರ್ಷ ಸುಮಾರು 50,000ಕ್ಕೂ ಅಧಿಕ ಐಟಿ ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಇದೀಗ ರಿಯಲ್ ಎಸ್ಟೇಟ್ ಉದ್ಯಮಕ್ಕೆ ತೀವ್ರ ಹೊಡೆತ ಬಿದ್ದಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಬೆಂಗಳೂರು ತಂತ್ರಜ್ಞಾನ ಕೇಂದ್ರವಾಗಿದ್ದು, ಐಟಿ ವೃತ್ತಿಪರರಿಗೆ ಆಶ್ರಯ ತಾಣವಾಗಿದೆ. ಲಕ್ಷಾಂತರ ಜನರು ಉದ್ಯೋಗ ಅರಸಿಕೊಂಡು ಬಂದು ಪೇಯಿಂಗ್ ಗೆಸ್ಟ್ ಹಾಗೂ ಇನ್ನಿತರ ಬಜೆಟ್ ಸ್ನೇಹಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೃತಕ ಬುದ್ಧಿಮತ್ತೆಯ ತ್ವರಿತ ಅಭಿವೃದ್ಧಿಯಿಂದಾಗಿ ಐಟಿ ವಲಯದಲ್ಲಿ ಸಾಮೂಹಿಕವಾಗಿ ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ. ಹೀಗಾಗಿ ನಗರವು ಉದ್ಯೋಗ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ಹೇಳಿದೆ.ಇದನ್ನೂ ಓದಿ:ಮಗನ ಮುದ್ದಾದ ಫೋಟೋ ಹಂಚಿಕೊಂಡ ‘ಬಿಗ್‌ ಬಾಸ್‌’ ಖ್ಯಾತಿಯ ಕವಿತಾ ದಂಪತಿ

    ಈ ಉದ್ಯೋಗ ಬಿಕ್ಕಟ್ಟು ಐಟಿ ವಲಯಕ್ಕೆ ಮಾತ್ರ ಸೀಮಿತವಾಗಿರದೇ ನಗರದ ರಿಯಲ್ ಎಸ್ಟೇಟ್ ಹೂಡಿಕೆ, ಸ್ಥಳೀಯ ವ್ಯವಹಾರಗಳ ಪರಿಣಾಮ ಬೀರಲಿದೆ. ಜೊತೆಗೆ ನಗರದ ಆರ್ಥಿಕ ಸ್ಥಿರತೆಯ ಮೇಲೆಯೂ ಗಂಭೀರ ಪರಿಣಾಮ ಬೀರಲಿದೆ.

    ಮುಂಬರುವ ದಿನಗಳಲ್ಲಿ ಐಟಿ ವಲಯದಲ್ಲಿ ಮತ್ತಷ್ಟು ಉದ್ಯೋಗಿಗಳನ್ನು ವಜಾಗೊಳಿಸುವ ಸಾಧ್ಯತೆಯಿದ್ದು, ಕಂಪನಿಗಳು ಎಐ ತಂತ್ರಜ್ಞಾನಕ್ಕೆ ಬದಲಾದಾಗ ಉದ್ಯೋಗಿಗಳು ಕೆಲಸ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚು. ಈ ಮೂಲಕ ಕಡಿಮೆ ವೇತನ ಪಡೆಯುವ ಉದ್ಯೋಗಿಗಳು ದುರ್ಬಲರಾಗುತ್ತಿದ್ದಾರೆ.

    ರಿಯಲ್ ಎಸ್ಟೇಟ್‌ಗೆ ತೀವ್ರ ಹೊಡೆತ:
    ಉದ್ಯೋಗಿಗಳನ್ನು ವಜಾಗೊಳಿಸುವದರಿಂದ ರಿಯಲ್ ಎಸ್ಟೇಟ್ ಉದ್ಯಮದ ಮೇಲೆ ತ್ರೀವ ಪರಿಣಾಮ ಬೀರಲಿದೆ. ಸಾಮಾನ್ಯವಾಗಿ ಕಡಿಮೆ ವೇತನ ಪಡೆಯುವ ಉದ್ಯೋಗಿಗಳು ಕೈಗೆಟುಕುವ ದರದಲ್ಲಿ ದೊರಕುವ ಪಿಜಿ ಹಾಗೂ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಾರೆ. ಉದ್ಯೋಗಿಗಳನ್ನು ವಜಾಗೊಳಿಸುವುದರಿಂದ ಪಿಜಿ ಹಾಗೂ ಬಾಡಿಗೆ ಮನೆಗಳ ಬೇಡಿಕೆಯಲ್ಲಿ ತೀವ್ರ ಕುಸಿತ ಉಂಟಾಗುತ್ತದೆ. ಇದರಿಂದ ರಿಯಲ್ ಎಸ್ಟೇಟ್ ಉದ್ಯಮಿಗಳು ಕೂಡ ಆರ್ಥಿಕ ಒತ್ತಡಕ್ಕೆ ಸಿಲುಕಿಕೊಳ್ಳುತ್ತಾರೆ.

    ಜೊತೆಗೆ ರಿಯಲ್ ಎಸ್ಟೇಟ್ ಹೂಡಿಕೆದಾರರಿಗೆ, ವಿಶೇಷವಾಗಿ ಟೆಕ್ ಪಾರ್ಕ್‌ಗಳು ಮತ್ತು ಕಾರ್ಪೊರೇಟ್ ಕಚೇರಿಗಳಿಗೆ ತಾಣವಾದ ಔಟರ್ ರಿಂಗ್ ರಸ್ತೆ ಬಳಿ ಇರುವವರ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯಿದೆ.ಇದನ್ನೂ ಓದಿ: ಗ್ಯಾರಂಟಿ ಯೋಜನೆಗಳಿಗೆ 56,984 ಕೋಟಿ ರೂ. ಮೀಸಲಿಟ್ಟ ತೆಲಂಗಾಣ ಸರ್ಕಾರ

  • ಏರೋಸ್ಪೇಸ್ ಕ್ಷೇತ್ರದಲ್ಲಿ ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ – ಪ್ರಿಯಾಂಕ್ ಖರ್ಗೆ

    ಏರೋಸ್ಪೇಸ್ ಕ್ಷೇತ್ರದಲ್ಲಿ ಲಕ್ಷ ಮಂದಿಗೆ ತರಬೇತಿ, 60,000 ಕೋಟಿ ಹೂಡಿಕೆಯ ಗುರಿ – ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ ಇಲಾಖೆಯ ಏರೋಸ್ಪೇಸ್ ಮತ್ತು ರಕ್ಷಣಾ ನೀತಿ 2022-27ರಂತೆ ಪರೀಕ್ಷಾ ಸೌಲಭ್ಯಗಳನ್ನು ಒದಗಿಸುವುದರೊಂದಿಗೆ 1 ಲಕ್ಷ ಮಂದಿಗೆ ತರಬೇತಿ ನೀಡುವ ವ್ಯಾಪಕ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗುವುದು ಹಾಗೂ 60,000 ಕೋಟಿ ರೂ. ಹೂಡಿಕೆಯ ಮೂಲಕ ಏರೋಸ್ಪೇಸ್ ಮತ್ತು ರಕ್ಷಣಾ ಕ್ಷೇತ್ರಗಳಲ್ಲಿ 70,000 ಉದ್ಯೋಗ ಸೃಷ್ಟಿ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

    ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆಯುತ್ತಿರುವ 2 ದಿನಗಳ ರಕ್ಷಣಾ ಮತ್ತು ಏರೋಸ್ಪೇಸ್‌ಗೆ ಸಂಬಂಧಿಸಿದ 13ನೇ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಶೃಂಗಸಭೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು. ಇದನ್ನೂ ಓದಿ: ಅಗ್ನಿವೀರರಿಗೆ 10% ಮೀಸಲಾತಿ – ಸ್ವಂತ ಉದ್ಯಮ ಆರಂಭಿಸುವವರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ: ಸಿಎಂ ಘೋಷಣೆ

    ಮೂಲಸೌಕರ್ಯದಲ್ಲಿ ಕೃತಕ ಬುದ್ಧಿಮತ್ತೆ (AI), ಯಂತ್ರ ಕಲಿಕೆ ಮತ್ತು ಸುಧಾರಿತ ಸಾಮಗ್ರಿಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡುತ್ತದೆ, ಜೊತೆಗೆ ವ್ಯವಹಾರವನ್ನು ಸುಲಭಗೊಳಿಸಲು 500 ಕೋಟಿ ಪ್ರೋತ್ಸಾಹಕಗಳೊಂದಿಗೆ ನಿಯಮಾವಳಿಗಳನ್ನು ಸರಳೀಕರಿಸುತ್ತದೆ. 200ಕ್ಕೂ ಹೆಚ್ಚು ಪಾಲುದಾರಿಕೆಗಳು ಸಹಯೋಗವನ್ನು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದೂ ಸಚಿವರು ತಿಳಿಸಿದರು.

    ಸುಸ್ಥಿರತೆ ಉತ್ತೇಜಿಸುವ ಮೂಲಕ 2027ರ ವೇಳೆಗೆ ಸ್ಥಳೀಯ ತಂತ್ರಜ್ಞಾನಗಳು ಮತ್ತು ಹಸಿರು ಅಭ್ಯಾಸಗಳ ಮೂಲಕ ಶೇ.30ರಷ್ಟು ಇಂಗಾಲದ ಕಡಿತವನ್ನು ಗುರಿಯಾಗಿರಿಸಿಕೊಳ್ಳಲಾಗಿದೆ, ಹೆಚ್ಚುವರಿಯಾಗಿ, ಏರೋಸ್ಪೇಸ್ ಮತ್ತು ಡಿಫೆನ್ಸ್ ಇಕೋಸಿಸ್ಟಮ್‌ನ ಜಾಗದಲ್ಲಿ ವೇಗವರ್ಧಕ ಬೆಂಬಲವನ್ನು ಹೆಚ್ಚಿಸಲು ಕರ್ನಾಟಕ ಸರ್ಕಾರ ರಾಜ್ಯದಾದ್ಯಂತ ಶ್ರೇಷ್ಠತಾ ಕೇಂದ್ರಗಳನ್ನು ಸ್ಥಾಪಿಸಿದೆ ಎಂದೂ ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. ಇದನ್ನೂ ಓದಿ: ಉಡುಪಿಯ ಹಲವೆಡೆ ನೆರೆ ಪರಿಸ್ಥಿತಿ; ಹಾಸನ, ಕೊಡಗಿನನಲ್ಲಿ ಭೂಕುಸಿತದ ಅವಾಂತರ; ಕಪಿಲಾ ನದಿ ತೀರದಲ್ಲೂ ಪ್ರವಾಹ ಭೀತಿ!

    ಸೈನ್ಯ, ವಾಯುಪಡೆ, ಭದ್ರತೆ ಮತ್ತು ಕಣ್ಗಾವಲು, ನೌಕಾಪಡೆ ಮತ್ತು ಬಾಹ್ಯಾಕಾಶ ಕ್ಷೇತ್ರಗಳಿಗೆ ಉಪಕರಣಗಳು ಮತ್ತು ತಂತ್ರಜ್ಞಾನವನ್ನು ಒದಗಿಸಲು ಉಪಗ್ರಹ ಇಂಟರ್ನೆಟ್ ಸೇವೆ (SIS) ಮೌಲ್ಯಯುತವಾದ ವೇದಿಕೆಯಾಗಿದೆ, ಶೃಂಗಸಭೆಯು ಅತ್ಯಾಧುನಿಕ ತಂತ್ರಜ್ಞಾನಗಳು, ನಾವೀನ್ಯತೆ ಮತ್ತು ರೋಮಾಂಚಕ ಭಾರತೀಯ ಸ್ಟ್ರಾಟೆಜಿಕ್ ಎಲೆಕ್ಟ್ರಾನಿಕ್ಸ್ ಉದ್ಯಮದ ಪ್ರಪಂಚದ ಪ್ರದರ್ಶನವನ್ನು ಹೊಂದಿದೆ ಎಂದೂ ಸಚಿವರು ತಮ್ಮ ಉದ್ಘಾಟನಾ ಭಾಷಣದಲ್ಲಿ ಹೇಳಿದರು.

    ಮುಂದುವರೆದು ಕರ್ನಾಟಕವು ಮಾಹಿತಿ ತಂತ್ರಜ್ಞಾನ (IT) ಮಾತ್ರವಲ್ಲದೇ ಡೀಪ್ ಟೆಕ್, ನ್ಯಾನೋ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನದಲ್ಲಿಯೂ ಮುಂಚೂಣಿಯಲ್ಲಿದೆ. ಎಲೆಕ್ಟ್ರಾನಿಕ್ಸ್ ವಲಯದಲ್ಲಿ, ಕರ್ನಾಟಕವು ಸಂಶೋಧನೆ ಮತ್ತು ಅಭಿವೃದ್ಧಿ ಮತ್ತು ಉತ್ಪಾದನೆಯಲ್ಲಿ, ನಿರ್ದಿಷ್ಟವಾಗಿ ಏರೋಸ್ಪೇಸ್ ಮತ್ತು ರಕ್ಷಣಾ ವಲಯದಲ್ಲಿ ಭಾರತದ ಪ್ರಮುಖ ಶಕ್ತಿಗೆ ಹಾದಿಯನ್ನು ಸುಗಮಗೊಳಿಸಿದೆ ಎಂದು ಹೇಳಿದರು. ಇದನ್ನೂ ಓದಿ: Valmiki Corporation Scam | ನಿಗಮದ ಹಣವನ್ನ ಚುನಾವಣೆಯಲ್ಲಿ ಮದ್ಯ ಖರೀದಿಗೆ ಬಳಸಿದ್ದಾರೆ – ಇಡಿ ಸ್ಫೋಟಕ ಹೇಳಿಕೆ!

    ಎಲೆಕ್ಟ್ರಾನಿಕ್ ಇಂಡಸ್ಟ್ರೀಸ್ ಅಸೋಸಿಯೇಷನ್ ಆಫ್ ಇಂಡಿಯಾ (ELCINA) 1967ರಿಂದ ಎಲೆಕ್ಟ್ರಾನಿಕ್ ಹಾರ್ಡ್‌ವೇರ್ ಉದ್ಯಮಕ್ಕೆ ಸೇವೆ ಸಲ್ಲಿಸುತ್ತಿರುವ ಅತಿದೊಡ್ಡ ಮತ್ತು ಹಳೆಯ ಸಂಸ್ಥೆಯಾಗಿದೆ, ಎಲೆಕ್ಟ್ರಾನಿಕ್ ಸಿಸ್ಟಮ್ ಡಿಸೈನ್ ಮತ್ತು ಮ್ಯಾನುಫ್ಯಾಕ್ಚರಿಂಗ್ (ESDM) ವಲಯದಲ್ಲಿ ಉತ್ಪಾದನೆ ಮತ್ತು ವ್ಯಾಪಾರ ವಿಸ್ತರಣೆಯನ್ನು ಉತ್ತೇಜಿಸುವುದು ಈ ಸಂಸ್ಥೆಯ ಉದ್ದೇಶವಾಗಿದೆ ವಿವರಿಸಿದರು.