Tag: Ashwini Puneeth Raj Kumar

  • ಹೆಣ್ಣಿಗೆ ನೋವು ಕೊಟ್ಟರೆ ಉದ್ಧಾರ ಆಗಲ್ಲ- ಅಶ್ವಿನಿ ಬೆಂಬಲಕ್ಕೆ ನಿಂತ ಜಗ್ಗೇಶ್

    ಹೆಣ್ಣಿಗೆ ನೋವು ಕೊಟ್ಟರೆ ಉದ್ಧಾರ ಆಗಲ್ಲ- ಅಶ್ವಿನಿ ಬೆಂಬಲಕ್ಕೆ ನಿಂತ ಜಗ್ಗೇಶ್

    ದೊಡ್ಮನೆ ಸೊಸೆ ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದವರಿಗೆ ನವರಸನಾಯಕ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ಹೆಣ್ಣುಕುಲ್ಲಕ್ಕೆ ಅಗೌರವ ತೋರಿಸಿದರೆ ಉದ್ಧಾರ ಆಗ್ತಾರಾ ಎಂದು ಜಗ್ಗೇಶ್ (Jaggesh) ಹಿಡಿಶಾಪ ಹಾಕಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ‘ಅಹಂ ಪ್ರೇಮಾಸ್ಮಿ’ ನಟಿ

    ashwini puneethrajkumar

    ಪುನೀತನ ಮಡದಿ ಅಣಕಿಸಿದ ನತದೃಷ್ಟರೆ ನಿಮಗೂ ತಾಯಿ ಇರಬೇಕು. ತಾಯಿ ಬೆಲೆ ಗೊತ್ತಿರಬೇಕು. ಒಂದು ವೇಳೆ, ತಾಯಿ ಮತ್ತು ಹೆಣ್ಣಿಗೆ ಗೌರವ ಕೊಡಲ್ಲ ಎಂದರೆ ಖಂಡಿತಾ ಅಂಥವರು ಮನುಕುಲಕ್ಕೆ ಅನರ್ಹ. ಪುನೀತನ ಮಡದಿ ಅನಾಥಳಲ್ಲ ತನ್ನ ಪ್ರೀತಿಸುತ್ತಿದ್ದ ಕೋಟ್ಯಾಂತರ ಅಭಿಮಾನಿಗಳ ಬಳುವಳಿ ಕೊಟ್ಟು ಹೋಗಿದ್ದಾನೆ ಎಂದು ಜಗ್ಗೇಶ್ ಅಪ್ಪು ಅಭಿಮಾನಿಗಳ ಕಡೆ ತೋರಿಸಿದ್ದಾರೆ. ಹೆಣ್ಣು ಕುಲಕ್ಕೆ ನೋವು ಕೊಟ್ಟವ ಉದ್ಧಾರ ಆದ ಇತಿಹಾಸವಿಲ್ಲ ಎಂದು ಜಗ್ಗೇಶ್ ಅಶ್ವಿನಿ ಪರ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ಜಗ್ಗೇಶ್ ಪ್ರತಿಕ್ರಿಯೆ ಫ್ಯಾನ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ಗಜಪಡೆ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ‘ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

    ಅಶ್ವಿನಿ ಪುನೀತ್ ರಾಜ್‌ಕುಮಾರ್ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಯಶ್‌, ರಿಷಬ್‌, ಅಶ್ವಿನಿ ಭೇಟಿಯಾದ ಪ್ರಧಾನಿ ಮೋದಿ

    ಯಶ್‌, ರಿಷಬ್‌, ಅಶ್ವಿನಿ ಭೇಟಿಯಾದ ಪ್ರಧಾನಿ ಮೋದಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನೆ

    ಪುನೀತ್ ರಾಜ್‌ಕುಮಾರ್ ರಸ್ತೆ ಉದ್ಘಾಟನೆ

    ಪುನೀತ್ ರಾಜ್‌ಕುಮಾರ್ ಅವರ ಹೆಸರನ್ನು ಅಮರವಾಗಿಸುವ ಕೆಲಸ ಅನೇಕ ಕಡೆಗಳಲ್ಲಿ ಕಾರ್ಯರೂಪಕ್ಕೆ ಬಂದಿದೆ. ಬೆಂಗಳೂರಿನಲ್ಲಿ ಮೈಸೂರು ರಸ್ತೆಯಿಂದ ಬನ್ನೇರುಘಟ್ಟದವೆಗಿನ 12 ಕಿಲೋ ಮೀಟರ್ ರಸ್ತೆಗೆ ಪುನೀತ್ ಹೆಸರನ್ನು ಇಡಲಾಗಿದೆ. ಪುನೀತ್‌ ರಾಜ್‌ಕುಮಾರ್‌ ರಸ್ತೆಯನ್ನ ಸಿಎಂ ಬೊಮ್ಮಾಯಿ ಅವರು ಉದ್ಘಾಟನೆ ಮಾಡಿದ್ದಾರೆ.

    appu

    ಅಭಿಮಾನಿಗಳ ಆಸೆಯಂತೆ ನಾಯಂಡಳ್ಳಿ ಜಂಕ್ಷನ್‌ನಿಂದ ಬನ್ನೇರುಘಟ್ಟವರೆಗಿನ ರಸ್ತೆಗೆ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಹೆಸರನ್ನ (ಫೆ.7)ರಂದು ನಾಮಕರಣ ಮಾಡಲಾಯಿತು. ಈ ವೇಳೆ 1800 ಮಕ್ಕಳ ವಿದ್ಯಾಭ್ಯಾಸದ ಜವಬ್ದಾರಿಯನ್ನ ಸಿಎಂ ಬೊಮ್ಮಾಯಿ ಅವರು ವಹಿಸಿಕೊಳ್ಳೋದಾಗಿ ತಿಳಿಸಿದ್ದಾರೆ.

    puneeth

    ಪ್ರತಿಯೊಬ್ಬ ಮನುಷ್ಯನಿಗೂ ಹುಟ್ಡು ಸಾವು ಎರಡು ಬರುತ್ತೆ ಬದುಕಿದ್ದಾಗ ಹೇಗಿರುತ್ತಾರೆ ಅನ್ನೋದು ಇಂಪಾರ್ಟೆಂಟ್ ಅಪ್ಪಾಜಿ ಅವ್ರು ಅಭಿಮಾನಿಗಳನ್ನ ಗಳಿಸಿದರು. ಅಪ್ಪು ಅಭಿಮಾನಿಗಳನ್ನ ಗಳಿಸುತ್ತಿದ್ದಾರೆ. ಅಪ್ಪು ಯಾಕೆ ಬಂದಿದ್ದ ಅಂದರೆ ಏನೋ ಹೇಳಬೇಕು ಅಂತ ಬಂದಿದ್ದ. ಇನ್ನ ಜವಾಬ್ದಾರಿ ನಮಗೆ ಬಿಟ್ಟು ಹೋಗಿದ್ದಾನೆ. ನಾನು ನನ್ನ ಸಿನಿಮಾ ನೋಡಿ ನನ್ನ ಮಗನ್ನ ಬೆಳಸಿ ಅಂತ ಹೇಳೋದಿಲ್ಲ. ಅಪ್ಪು ಪವರ್ ಇಲ್ಲೇ ಬಿಟ್ಟು ಸ್ಟಾರ್ ಆಗಿ ಮೇಲೆ ಹೋಗಿದ್ದಾನೆ. ನನ್ನ ಜೀವನದಲ್ಲಿ ಅಪ್ಪು ಆಗಿ ಇನ್ನೋಬ್ಬರಿಗೋಸ್ಕರ ಬದುಕಬೇಕು. ನಾವು ಅಪ್ಪು ಆಗೋಣ, ಎರಡು ದಿನ ಆದ್ರೂ ಅಪ್ಪು ಆಗಿ ಬದುಕೋಣ. ಅ.29ರಂದು  ಅಪ್ಪು ಸತ್ತಿದ್ದ ದಿನ ಅಲ್ಲ, ಅವನು ಹುಟ್ಟಿದ್ದ ದಿನ ಅವತ್ತು ಒಂದು ಶಕ್ತಿ ಹುಟ್ಟಿದ ದಿನ ಎಂದು ಅಪ್ಪು ಬಗ್ಗೆ ಈ ವೇಳೆ ರಾಘವೇಂದ್ರ ರಾಜ್‌ಕುಮಾರ್ ಅವರು ಮಾತನಾಡಿದ್ದಾರೆ.

    cm 2

    ಪದ್ಮನಾಭನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ ಅವರ ಜೊತೆ ಅಶ್ವಿನಿ ಪುನೀತ್, ಅಭಿಷೇಕ್ ಅಂಬರೀಶ್, ದೊಡ್ಡ ರಂಗೇಗೌಡ, ರಾಕ್‌ಲೈನ್ ವೆಂಕಟೇಶ್, ಆರ್,ಅಶೋಕ್, ತೇಜಸ್ವಿ ಸೂರ್ಯ ಸೇರಿದಂತೆ ಹಲವರು ಸಾಕ್ಷಿಯಾದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕೇಕ್‌ ಕತ್ತರಿಸಿ ಸಕ್ಸಸ್ ಆಚರಿಸಿದ ‌ʻಗಂಧದ ಗುಡಿʼ ಟೀಮ್

    ಕೇಕ್‌ ಕತ್ತರಿಸಿ ಸಕ್ಸಸ್ ಆಚರಿಸಿದ ‌ʻಗಂಧದ ಗುಡಿʼ ಟೀಮ್

    ಪುನೀತ್ ರಾಜ್‌ಕುಮಾರ್(Puneeth Rajkumar) ನಟನೆಯ `ಗಂಧದ ಗುಡಿ’ (Gandadagudi) ಸಿನಿಮಾ ಅಕ್ಟೋಬರ್ 28ಕ್ಕೆ ತೆರೆಗೆ ಅಪ್ಪಳಿಸಿತ್ತು. ಪುನೀತ್ ಅವರಾಗಿಯೇ ಕಾಣಿಸಿಕೊಂಡಿದ್ದ ಈ ಚಿತ್ರಕ್ಕೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಚಿತ್ರತಂಡ ಜೊತೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಸಕ್ಸಸ್ ಸಂಭ್ರಮ ಆಚರಿಸಿದ್ದಾರೆ.

    ASHWINI PUNEETH RAJKUMAR 1 1

    ಅಮೋಘ ವರ್ಷ (Amogha Varsha) ನಿರ್ದೇಶನದ `ಗಂಧದ ಗುಡಿ’ ವನ್ಯಜೀವಿ ಸಂಕುಲದ ಕಾಡು ಮೇಡಿನ ಚಿತ್ರಣವನ್ನ ತೆರೆಯ ಮೇಲೆ ತೋರಿಸಲಾಗಿತ್ತು. ಅಪ್ಪು ನೈಜ ನಟನೆಗೆ ಫ್ಯಾನ್ಸ್ ಫಿದಾ ಆಗಿದ್ದರು. ಅಪ್ಪು ಸಹಜ ನಟನೆ ಜೊತೆ ಸೊಗಸಾದ ಹಸಿರಿನ ಕಥೆಗೆ ಚಿತ್ರಮಂದಿರದಲ್ಲಿ ಸಕ್ಸಸ್‌ಫುಲ್ ಪ್ರದರ್ಶನ ಕಂಡಿತ್ತು. ಇದನ್ನೂ ಓದಿ:`ಜೈಲರ್’ ಚಿತ್ರದ ಸೆಟ್‌ನಲ್ಲಿ ಶಿವಣ್ಣನನ್ನು ಭೇಟಿಯಾದ ಶಿವಕಾರ್ತಿಕೇಯನ್

    ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಿತ್ರತಂಡದ ಜೊತೆಗೆ `ಗಂಧದ ಗುಡಿ’ ಸಕ್ಸಸ್ ಸೆಲೆಬ್ರೇಷನ್ ಮಾಡಿದ್ದಾರೆ. ಕ್ವಿನ್ಸ್ ರೋಡ್‌ನಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ತಂಡ ಕೇಕ್ ಕಟ್ ಮಾಡಿ ಖುಷಿಪಟ್ಟಿದೆ. ನಿರ್ದೇಶಕ ಸಂತೋಷ್ ಆನಂದ್‌ರಾಮ್ ಹಾಗೂ ರಾಘವೇಂದ್ರ ರಾಜ್‌ಕುಮಾರ್ ಪುತ್ರ ಯುವರಾಜ್‌ಕುಮಾರ್ ಸಾಥ್ ಕೊಟ್ಟಿದ್ದಾರೆ. ಸಕ್ಸಸ್ ಸೆಲೆಬ್ರೇಷನ್‌ಗೆ ಸಂಬAಧಿಸಿದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]

  • ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

    ಅಪ್ಪು ಗಂಧದಗುಡಿ ರಿಲೀಸ್‍ಗೆ ಕೌಂಟ್‍ಡೌನ್- ಮೊದಲ ಬಾರಿಗೆ ಅಶ್ವಿನಿ ವಿಶೇಷ ಸಂದರ್ಶನ

    ಬೆಂಗಳೂರು: ಇಡೀ ಕರುನಾಡೇ ಕಾಯುತ್ತಿರೋ ಅಪ್ಪು ಕನಸಿನ ಕೊನೆಯ ಚಿತ್ರ ಗಂಧದಗುಡಿ (Gandhadagudi) ನಾಳೆ ತೆರೆಗೆ ಬರುತ್ತಿದೆ. ಇದರಲ್ಲಿ ಪುನೀತ್ ಅಭಿನಯಿಸಿದ್ದಾರೆ ಅನ್ನೋದಕ್ಕಿಂತ ಅಪ್ಪು ಅಪ್ಪುವಾಗಿಯೇ ಇದ್ರು ಅನ್ನೋದು ಸತ್ಯ.

    ASHWINI PUNEETH RAJKUMAR 5

    ಗಂಧದಗುಡಿ, ಪುನೀತ ಪರ್ವ (Puneetha Parva) ಕಾರ್ಯಕ್ರಮದ ಬಗ್ಗೆ ಇದೀಗ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮಾತನಾಡಿದ್ದಾರೆ. ನಿರ್ದೇಶಕ ಸಂತೋಷ್ ಆನಂದ್‍ರಾಮ್ (Santhosh Ananddram) ಸಂದರ್ಶನದಲ್ಲಿ ಅಶ್ವಿನಿ ಮಾತನಾಡಿದ್ದು, ಶೂಟಿಂಗ್ ಸಂದರ್ಭದ ಕೆಲ ಘಟನೆಗಳನ್ನ ಹಂಚಿಕೊಂಡಿದ್ದಾರೆ. ಇದನ್ನೂ ಓದಿʻಹೆಡ್‌ ಬುಷ್‌ʼ ವಿವಾದ – ಟ್ವಿಟ್ಟರ್‌ನಲ್ಲಿ ಟ್ರೆಂಡ್‌ ಆಯ್ತು #WeStandWithDhananjaya ಹ್ಯಾಷ್‌ ಟ್ಯಾಗ್‌

    ASHWINI PUNEETH RAJKUMAR 4

    ಪುನೀತ್ ಪರ್ವ ಮಾಡಿದ್ದೇ ಅಭಿಮಾನಿಗಳು. ಕಾರ್ಯಕ್ರಮಕ್ಕೆ 1 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಬಂದಿದ್ದರು. ನನಗೆ ತುಂಬಾ ಸಂತೋಷ ಆಯ್ತು, ತೃಪ್ತಿನೂ ಕೊಟ್ಟಿತ್ತು. ಅಭಿಮಾನಿಗಳಿಗೆ ನಮ್ಮ ಕುಟುಂಬ ಚಿರಋಣಿಯಾಗಿರುತ್ತೇವೆ. ಕಳೆದ ಒಂದು ವರ್ಷದಿಂದ ಸರ್ಕಾರ ನಮ್ಮ ಜೊತೆ ಇದೆ. ಎಲ್ಲರ ಬೆಂಬಲದಿಂದ ಕಾರ್ಯಕ್ರಮ ಚೆನ್ನಾಗಿ ಆಯ್ತು ಎಂದು ಅಶ್ವಿನಿ (Ashwini Puneeth Raj kumar) ಹೇಳಿದ್ದಾರೆ.

    ASHWINI PUNEETH RAJKUMAR 3

    ಗಂಧದಗುಡಿ ಅಪ್ಪಾಜಿ, ಶಿವಣ್ಣ (Shivaraj Kumar) ಮಾಡಿದ್ದು, ಅದರಲ್ಲಿ ಕಥೆ ಇತ್ತು, ಆದರೇ ಈ ಚಿತ್ರದಲ್ಲಿ ಜರ್ನಿನೇ ಸಿನಿಮಾ. ಚಿತ್ರದಲ್ಲಿ ಅವರು ಅವರಾಗೆ ಇದ್ದರು. ನನಗೆ ತುಂಬ ಹೆಮ್ಮೆ ಅನ್ನಿಸುತ್ತೆ. ನನ್ನ ಜೊತೆ ಟ್ರಕ್ಕಿಂಗ್ ಮಾಡಬೇಕೆಂದು ಅಪ್ಪು ಕಾಲ್ ಮಾಡಿದ್ರು. ನಾನು ಅವರ ತಂಡದ ಜೊತೆ ಟ್ರಕ್ಕಿಂಗ್ ಮಾಡಿದ್ದೆ. ಬಳಿಕ ಒಂದು ಸಣ್ಣ ಹಳ್ಳಿಯಲ್ಲಿ ಊಟ ಮಾಡಿಕೊಂಡು ಬಂದೆವು ಎಂದು ಗಂಧದಗುಡಿ ಚಿತ್ರದ ಚಿತ್ರೀಕರಣ ನೆನಪು ಮೆಲುಕು ಹಾಕಿಕೊಂಡಿದ್ದಾರೆ.

    ನನಗೆ ಹೆಮ್ಮೆ ಕೊಡುವ ಪ್ರಾಜೆಕ್ಟ್ ಅಂದ್ರೆ ಅದು ಗಂಧದಗುಡಿ. ಎಲ್ಲರೂ ಥಿಯೇಟರ್‍ಗೆ ಬಂದು ಚಿತ್ರ ವೀಕ್ಷಿಸಿ, ಆಶೀರ್ವದಿಸಿ ಎಂದು ಅಭಿಮಾನಿಗಳಲ್ಲಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಮನವಿ ಮಾಡಿಕೊಂಡರು. ಇದನ್ನೂ ಓದಿ: ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

    Live Tv
    [brid partner=56869869 player=32851 video=960834 autoplay=true]

  • ನಿಮ್ಮ ಅಪ್ಪು ಸಿನಿಮಾ ಗಂಧದ ಗುಡಿ ನೋಡಿ ಪ್ರೋತ್ಸಾಹಿಸಿ: ಅಶ್ವಿನಿ ಪುನೀತ್ ರಾಜ್‍ಕುಮಾರ್ ಮನವಿ

    ನಿಮ್ಮ ಅಪ್ಪು ಸಿನಿಮಾ ಗಂಧದ ಗುಡಿ ನೋಡಿ ಪ್ರೋತ್ಸಾಹಿಸಿ: ಅಶ್ವಿನಿ ಪುನೀತ್ ರಾಜ್‍ಕುಮಾರ್ ಮನವಿ

    ಸ್ಯಾಂಡಲ್‍ವುಡ್ ನಟ ದಿ. ಪುನೀತ್ ರಾಜ್ ಕುಮಾರ್ ಕನಸಿನ ಪ್ರಾಜೆಕ್ಟ್ ಗಂಧದಗುಡಿ ಟ್ರೈಲರ್ ರಿಲೀಸ್ ಆಗಿದ್ದು, ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth RajKumar) ಅವರು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

    appu

    ಟ್ರೈಲರ್ ನೋಡಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಅವರು, ನಿಮ್ಮ ಅಪ್ಪು (Appu) ಸಿನಿಮಾ ಗಂಧದ ಗುಡಿ ನೋಡಿ ಪ್ರೋತ್ಸಾಹಿಸಿ ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಗಂಧದ ಗುಡಿಯಲ್ಲಿ ಚಂದದ ನೋಟ: ನೀವು ಇರಬೇಕಿತ್ತು ಎಂದು ಕಣ್ಣೀರಾಕಿದ ಫ್ಯಾನ್ಸ್

    ASHWINI PUNEETH RAJKUMAR

    ಪುನೀತ್ ರಾಜ್ ಕುಮಾರ್ (Dr. Puneeth RajKumar) ಕೊನೆ ಸಾಕ್ಷ್ಯಚಿತ್ರ ಇದಾಗಿದ್ದು, `ಅಪ್ಪು ಅನ್ವೇಷಣೆ’ಯ ಅದ್ಭುತ ಪಯಣ ಸೆರೆಹಿಡಿಯಲಾಗಿದೆ. ಗಂಧದ ಗುಡಿ ಟ್ರೈಲರ್ ನ ಮತ್ತೊಂದು ಸೊಗಸು ಅಂದರೆ, ಅಪ್ಪು ಹಾಗೂ ಅವರ ಅಪ್ಪಾಜಿ ಬಾಳಿ ಬದುಕಿದ ಮನೆಯನ್ನು ತೋರಿಸಿದ್ದಾರೆ. ಸ್ವತಃ ಆ ಮನೆಯ ಬಗ್ಗೆ ಪುನೀತ್ ರಾಜ್‍ಕುಮಾರ್ ಅವರೇ ವಿವರಿಸುತ್ತಾರೆ. ಮನೆಯನ್ನು ಕಣ್ತುಂಬಿಕೊಳ್ಳುವ ಹೊತ್ತಲ್ಲಿ ಡಾ.ರಾಜ್ ಕುಮಾರ್ ಪ್ರವೇಶ. ಥ್ರಿಲ್ ಅನಿಸುವಷ್ಟು ಮಜಾ ಕೊಡುತ್ತದೆ ಟ್ರೈಲರ್.

    GANDHADA GUDI 8

    ಇಂದು ಬೆಂಗಳೂರಿನ ನರ್ತಕಿ ಚಿತ್ರಮಂದಿರ (Narthaki Theatre) ದಲ್ಲಿ ಪುನೀತ್ ರಾಜ್‍ಕುಮಾರ್ ಅಭಿಮಾನಿಗಳಿಗಾಗಿ ಟ್ರೇಲರ್ ಪ್ರದರ್ಶನ ಏರ್ಪಡಿಸಲಾಗಿತ್ತು. ಗಂಧದ ಗುಡಿಯ ಅಂದವನ್ನು ಕಣ್ತುಂಬಿಕೊಂಡ ಕಂಗಳಲ್ಲಿ ಅಪ್ಪು ಇಲ್ಲ ಅನ್ನುವ ಕಂಬನಿ ಸುರಿಯುತ್ತಿತ್ತು. ರಾಘವೇಂದ್ರ ರಾಜ್‍ಕುಮಾರ್‌ (Raghavendra RajKumar) ಸೇರಿದಂತೆ ಅಲ್ಲಿದ್ದವರ ಅಷ್ಟೂ ಕಣ್ಣುಗಳು ಒದ್ದೆ ಆಗಿದ್ದವು. ಟ್ರೈಲರ್ ಇಷ್ಟೊಂದು ಭಾವುಕತೆ ಸೃಷ್ಟಿ ಮಾಡಿದೆ. ಇದೇ ತಿಂಗಳು ಕೊನೆಯಲ್ಲಿ ಪೂರ್ತಿ ಚಿತ್ರವೇ ಬಿಡುಗಡೆ ಆಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಶೀಘ್ರವೇ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ ಪುನೀತ್ ನಿರ್ಮಾಣದ 3 ಸಿನಿಮಾಗಳು

    ಶೀಘ್ರವೇ ಒಟಿಟಿಯಲ್ಲಿ ರಿಲೀಸ್ ಆಗುತ್ತಿದೆ ಪುನೀತ್ ನಿರ್ಮಾಣದ 3 ಸಿನಿಮಾಗಳು

    ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ನಿಧನರಾದ ಬಳಿಕ ಅವರ ಪಿಆರ್ ಕೆ ಸಂಸ್ಥೆಯನ್ನು ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಈ ಮೂಲಕ ಅಶ್ವಿನಿ ಅವರು ಅಪ್ಪು ಅವರ ಕನಸುಗಳನ್ನು ನನಸು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ.

    puneeth rajkumar 3

    ಹೌದು. ಅಶ್ವಿನಿ ಅವರು ಪುನೀತ್ ನಿರ್ಮಾಣದ ಮೂರು ಸಿನಿಮಾಗಳು ಶೀಘ್ರವೇ ನಿಮ್ಮ ಮುಂದೆ ಬರಲಿದೆ ಎಂದು ತಿಳಿಸಿದ್ದಾರೆ. ಈ ವಿಚಾರವನ್ನು ಸ್ವತಃ ಅಶ್ವಿನಿ ಅವರೇ ತಮ್ಮ ಸೋಶಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಳ್ಳುವ ಮೂಲಕ ಅಪ್ಪು ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಇದನ್ನೂ ಓದಿ: ‘ಗರುಡ ಗಮನ ವೃಷಭ ವಾಹನ’ಕ್ಕೆ ನಟ ರಾಣಾ ಫಿದಾ

    ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿಕೊಂಡಿರುವ ಅಶ್ವಿನಿ, ಅಪ್ಪುವಿನ ಕನಸನ್ನು ಮುಂದಿಟ್ಟುಕೊಂಡು ಪ್ರೀತಿ, ಜೀವನ ಮತ್ತು ಸಂತೋಷದಿಂದ ತುಂಬಿರುವ 3 ಕಥೆಗಳನ್ನು ನಿಮ್ಮ ಮುಂದಿಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    PUNEETH RAJKUMAR 2

    ಪವರ್ ಸ್ಟಾರ್ ಅವರು ನಟನೆಯ ಜೊತೆಗೆ ನಿರ್ಮಾಣದಲ್ಲೂ ತೊಡಗಿಕೊಂಡಿದ್ದರು. ಅದಕ್ಕಾಗಿಯೇ ಪಿಆರ್‍ಕೆ ಸಂಸ್ಥೆಯೊಂದನ್ನು ಸ್ಥಾಪಿಸಿ 4 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದರು. ಅದರಲ್ಲಿ ಇದೀಗ ‘ಒನ್ ಕಟ್ ಟೂ ಕಟ್’, ‘ಫ್ಯಾಮಿಲಿ ಪ್ಯಾಕ್’, ‘ಮ್ಯಾನ್ ಆಫ್ ದಿ ಮ್ಯಾಚ್’ ಸಿನಿಮಾಗಳು ಅಮೇಜಾನ್ ಪ್ರೈಮ್ ನಲ್ಲಿ ಶೀಘ್ರವೇ ಬಿಡುಗಡೆಯಾಗಲಿವೆ. ವಾರಕ್ಕೆ ಒಂದರಂತೆ ಮೂರು ಚಿತ್ರಗಳು ಪ್ರೀಮಿಯರ್ ಆಗುತ್ತಿವೆ ಎಂಬುದಾಗಿ ತಿಳಿದುಬಂದಿದೆ.

  • ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

    ಸಿಎಂ ನಿಮಗೆ ನಾವು ಸದಾ ಆಭಾರಿ: ಅಶ್ವಿನಿ ಪುನೀತ್ ರಾಜ್‍ಕುಮಾರ್

    ಬೆಂಗಳೂರು: ಅಪ್ಪು ಕನಸಿನ ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ನಿನ್ನೆ ಬಿಡುಗಡೆಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

    PUNEETH 1

    ಟೀಸರ್ ಬಿಡುಗಡೆ ಕುರಿತು ಸಿಎಂ ನಿನ್ನೆ ಟ್ವೀಟ್ ಮಾಡಿದ್ದರು, ಈ ಟ್ವೀಟ್ ಗೆ ಅಶ್ವಿನಿ ಅವರು ರಿಟ್ವೀಟ್ ಮಾಡಿ, ಈ ‘ಗಂಧದ ಗುಡಿ’ಯನ್ನು ನಾಡಿನ ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ನೀವು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿ ಎಂದು ಹೇಳಿದ್ದಾರೆ.

    ಪ್ರಾಕೃತಿಕ ಸಂಪತ್ತು ರಕ್ಷಿಸುವ ನಿಟ್ಟಿನಲ್ಲಿ ಜನರಿಗೆ ಈ ಚಿತ್ರ ಪ್ರೇರಣೆಯಾಗಲಿ ಎಂದು ಬರೆದುಕೊಳ್ಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಚಿತ್ರಕ್ಕೆ ಶುಭಹಾರೈಸಿದ್ದರು. ಇದನ್ನೂ ಓದಿ: ಟೀಸರ್ ಕೊನೆಯಲ್ಲಿ ಅಪ್ಪು ಸ್ಮೈಲ್ ನೋಡಿ ಕರುಳು ಕಿತ್ತು ಬಂದಂತಾಯ್ತು: ಶಿವಣ್ಣ

    GANDHADA GUDI 8

    ಟ್ವೀಟ್ ನಲ್ಲೇನಿತ್ತು..?
    ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ. ಇದನ್ನೂ ಓದಿ: ಅಪ್ಪುಗೆ ವಿಶೇಷವಾಗಿ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್

    ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದ್ದರು.

    ಸೋಮವಾರ(ಡಿ.6) ಅಪ್ಪು ತಾಯಿ ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬ. ಈ ಹಿನ್ನೆಲೆಯಲ್ಲಿ ಇಂದೇ ಪಿಆರ್‍ಕೆ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಗಂಧದ ಗುಡಿ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ಪ್ರಯಾಣಿಸುವುದನ್ನು ಕಾಣಬಹುದಾಗಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ವಿಶೇಷವೆಂದರೆ ಕೊನೆಯಲ್ಲಿ ಡಾ. ರಾಜ್‍ಕುಮಾರ್ ಧ್ವನಿಯಲ್ಲಿ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ. ಅಮೋಘವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ 2022ರಲ್ಲಿ ತೆರೆಕಾಣಲಿದೆ.

  • ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    ಅಪ್ಪು ಕನಸು ನನಸು- ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಔಟ್

    ಬೆಂಗಳೂರು: ಸ್ಯಾಂಡಲ್ ವುಡ್ ನಟ ದಿ. ಪುನೀತ್ ರಾಜ್‍ಕುಮಾರ್ ಅವರ ಕನಸು ಇಂದು ನನಸಾಗಿದೆ. ಕನ್ನಡ ನಾಡಿನ ಅರಣ್ಯಸಂಪತ್ತು, ವನ್ಯಜೀವಿ ಸಂಪತ್ತಿನ ಬಗ್ಗೆ ಚಿತ್ರಿಸಿರೋ ‘ಗಂಧದ ಗುಡಿ’ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಬಿಡುಗಡೆ ಆಗಿದೆ.

    GANDHADA GUDI

    ಪಾರ್ವತಮ್ಮ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಪಿಆರ್‌ಕೆ ಆಡಿಯೋ ಯೂಟ್ಯೂಬ್ ಚಾನೆಲ್‍ನಲ್ಲಿ ಇಂದು ಬೆಳಗ್ಗೆ ಟೈಟಲ್ ಟೀಸರ್ ಬಿಡುಗಡೆ ಮಾಡಲಾಗಿದೆ. ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ರಾಜ್‍ಕುಮಾರ್ ಪ್ರಯಾಣಿಸುವುದನ್ನು  ಕಾಣಬಹುದಾಗಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ. ವಿಶೇಷವೆಂದರೆ ಕೊನೆಯಲ್ಲಿ ಡಾ. ರಾಜ್‍ಕುಮಾರ್ ಧ್ವನಿಯಲ್ಲಿರುವ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ.

    GANDHADA GUDI 7

    ಟೀಸರ್ ಜೊತೆಗೆ ಅಪ್ಪು ಅವರ ಕನಸಿದು, ಅದ್ಭುತ ಪಯಣ, ನಮ್ಮ ನೆಲದ ಘನತೆಯನ್ನು ಮೆರೆಸುವ ಕಥನ, ಮರುಕಳಿಸಿದ ಚರಿತ್ರೆಯಿದು ‘ಗಂಧದ ಗುಡಿ’ ಎಂದು ಕ್ಯಾಪ್ಷನ್‍ನಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬರೆದುಕೊಂಡಿದ್ದಾರೆ. ಮತ್ತೊಂದೆಡೆ ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಅವರು ಸಹ ಟೀಸರ್ ಅನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಅಮೋಘವರ್ಷ ನಿರ್ದೇಶನದ ಈ ಡಾಕ್ಯುಮೆಂಟರಿ ಸಿನಿಮಾ ಮುಂದಿನ ವರ್ಷ 2022ರಲ್ಲಿ ತೆರೆಕಾಣಲಿದೆ. ನಿನ್ನೆಯಷ್ಟೇ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು `ಹಿಂದೆಂದೂ ಕಾಣದ ಸಿನಿಮಾ ಅನುಭವ. ನಿಮ್ಮ ಮುಂದೆ’ ಅಂತ ಟ್ವೀಟ್ ಮಾಡಿದ್ದರು. ಈ ಮೂಲಕ ಟೀಸರ್ ಬಿಡುಗಡೆ ಬಗ್ಗೆ ಮಾಹಿತಿ ನಿಡಿದ್ದರು.

    PUNEETH

    ನವೆಂಬರ್ 1ರ ಕನ್ನಡ ರಾಜ್ಯೋತ್ಸವದಂದು ಅಪ್ಪು ಈ ಟೀಸರ್ ಬಿಡುಗಡೆಗೆ ಸಿದ್ಧತೆ ನಡೆಸಿದ್ದರು. ಈ ಬಗ್ಗೆ ಪುನೀತ್, ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು. ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು. ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ’ ಎಂದಷ್ಟೇ ನೇತ್ರಾಣಿಯಲ್ಲಿ ಮಾಡಿದ ಸ್ಕೂಬಾ ಡೈವಿಂಗ್‍ನ ಫೋಟೊವೊಂದರ ಜೊತೆ ಅಶ್ವಿನಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಡಾಕ್ಯುಮೆಂಟರಿ ಬಿಡುಗಡೆಯ ಸುಳಿವು ನೀಡಿದ್ದರು.