Tag: basaraj bommai

  • ಆನಂದ್ ಸಿಂಗ್‍ರನ್ನು ಉಡಕ್ಕೆ ಹೋಲಿಸಿದ ಬೊಮ್ಮಾಯಿ

    ಆನಂದ್ ಸಿಂಗ್‍ರನ್ನು ಉಡಕ್ಕೆ ಹೋಲಿಸಿದ ಬೊಮ್ಮಾಯಿ

    ವಿಜಯನಗರ: ರಾಜ್ಯದ ನೂತನ ಜಿಲ್ಲೆಯಾಗಿ ವಿಜಯನಗರ ಅಧಿಕೃತವಾಗಿ ಇಂದು ಉದ್ಘಾಟನೆಯಾಗಿದೆ. ಜಿಲ್ಲಾ ಕೇಂದ್ರ ಹೊಸಪೇಟೆಯ ಮುನಿಸಿಪಲ್ ಕ್ರೀಡಾಂಗಣದಲ್ಲಿ ರಚಿಸಿದ್ದ  ಭವ್ಯ ವೇದಿಕೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್‍ವೈ ಅಧಿಕೃತವಾಗಿ ಜಿಲ್ಲೆಯ ಉದ್ಘಾಟನೆಯನ್ನು ಮಾಡಿದ್ದಾರೆ.

    bommai

    ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಆನಂದ್ ಸಿಂಗ್ ಹಠವಾದಿ. ಅವರು ಒಂದು ಕೆಲಸ ಹಿಡಿದರೆ ಮಾಡದೇ ಬಿಡಲ್ಲ. ಅವರು ಉಡದ ಹಾಗೆ ಕೆಲಸ ಮುಗಿಯುವವರೆಗೂ ಬಿಡಲ್ಲ. ನೂತನ ಜಿಲ್ಲೆಯ ಅಭಿವೃದ್ಧಿಗೆ ಇಡೀ ಸರ್ಕಾರವೇ ಸಹಕಾರ ನೀಡಲಿದೆ. ಯಾವುದೇ ಬಗೆಯ ಸಹಕಾರಕ್ಕೂ ಸಚಿವ ಸಂಪುಟ ಸಜ್ಜಾಗಿದೆ. ಮೊದಲ ಅಂಗಾವಾಗಿ ಇಂದು 367 ಕೋಟಿಗೂ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ:  ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಉದ್ಘಾಟನೆ

    vijayanagara bommai

    ಇದೇ ವೇಳೆ ಮಾತನಾಡಿದ ಸಚಿವ ಆನಂದ್ ಸಿಂಗ್, ಜಿಲ್ಲಾ ರಚನೆಗೆ ಕಾರಣೀಭೂತರು ಬಿಎಸ್‍ವೈ ಅವರಾಗಿದ್ದು, ಅವರ ಆಶೀರ್ವಾದಿದಂಲೇ ಜಿಲ್ಲೆಯಾಗಿದೆ. ಜಿಲ್ಲಾ ರಚನೆಗೆ ಎಲ್ಲಾ ಬಗೆಯ ಸಹಕಾರ ನೀಡಿದ ಸಿಎಂ ಹಾಗೂ ಸಚಿವ ಸಂಪುಟದ ಎಲ್ಲಾ ಸಹೋದ್ಯೋಗಿಗಳಿಗೂ ಸಹ ಧನ್ಯವಾದ ಅರ್ಪಿಸಿದರು.

    vijayanagara bommai

    ವಿಜಯನಗರ ಶೈಲಿಯಲ್ಲಿ ವೈಭವವಾಗಿ ನಿರ್ಮಿಸಿದ್ದ ವೇದಿಕೆಯಲ್ಲಿ ವಿಜಯನಗರ ಜಿಲ್ಲೆಗೆ ಚಾಲನೆ ನೀಡಾಲಾಯಿತು. ಈ ವೇಳೆ ನೆರೆದಿದ್ದ ಜನರು ಜೋರಾಗಿ ಕೂಗುವ ಮೂಲಕ ತಮ್ಮ ಹರ್ಷ ವ್ಯಕ್ತಪಡಿಸಿದರು.

  • ಸಂಪುಟ ರಚನೆಯಾದಾಗ ಅಸಮಾಧಾನ ಸಹಜ: ಬೊಮ್ಮಾಯಿ

    ಸಂಪುಟ ರಚನೆಯಾದಾಗ ಅಸಮಾಧಾನ ಸಹಜ: ಬೊಮ್ಮಾಯಿ

    ಹುಬ್ಬಳ್ಳಿ: ಯಾವುದೇ ಸರ್ಕಾರದಲ್ಲಿ ಸಂಪುಟ ರಚನೆ ಆದಾಗ ಅಸಮಾಧಾನ ಸಹಜ. ನಮ್ಮ ಪಕ್ಷ ಸಾಕಷ್ಟು ಬೆಳೆದಿದೆ, ಸಂಪುಟದಲ್ಲೂ ಕೆಲವರು ಹಿರಿಯರು ಇದ್ದಾರೆ. ಅಸಮಾಧಾನ ಸಹಜ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

    ಅಕಾಲಿಕವಾಗಿ ಮೃತಪಟ್ಟ ಹಾವೇರಿ ಜಿಲ್ಲೆಯ ಶಿಗ್ಗಾಂವ ಸವಣೂರ ಕ್ಷೇತ್ರದ ಮಾಜಿ ಶಾಸಕ ರಾಜಶೇಖರ ಸಿಂಧೂರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವ ಮುನ್ನ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಸಂಪುಟ ರಚನೆ ಆದಾಗ ಸಮಧಾನ ಸಹಜವಾಗಿರುತ್ತದೆ. ನಾನು ಎಲ್ಲರನ್ನೂ ಕರೆದು ಮಾತನಾಡುತ್ತೇನೆ. ಆನಂದ್ ಸಿಂಗ್ ನನ್ನ ಹಳೆಯ ಸ್ನೇಹಿತ. ಅವರನ್ನು ಭೇಟಿ ಮಾಡಿ ಮಾತನಾಡುತ್ತೇನೆ. ಅವರು ಯಾವ ಖಾತೆ ಕೇಳಿದ್ದರು ಎನ್ನುವುದು ಬಹಿರಂಗ ಪಡಿಸೋಕೆ ಆಗಲ್ಲವೆಂದು ಹೇಳಿದ್ದಾರೆ.

    bommai cabinet ministrs

    ದೇವೇಗೌಡರನ್ನು ಭೇಟಿ ಮಾಡಿದ್ದು ರಾಜಕೀಯ ಕಾರಣಗಳಿಗೆ ಅಲ್ಲ. ಅವರ ಭೇಟಿ ವೇಳೆ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ. ನನ್ನ ಯಂಗ್ ಶಾಸಕ ಪ್ರೀತಂಗೌಡ ಏನೋ ಉತ್ಸಾಹದಲ್ಲಿ ಮಾತನಾಡಿದ್ದಾರೆ. ನಾನು ಅವರ ಜೊತೆ ಮಾತನಾಡುವೆ ಎಂದಿದ್ದಾರೆ.

    BOMMAI 2

    ಬೊಮ್ಮಾಯಿ ಸರ್ಕಾರ ಜನತಾ ಪರಿವಾರದ ಸರ್ಕಾರ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಕಳೆದ 15 ವರ್ಷದಿಂದ ನಾನು ಬಿಜೆಪಿಯಲ್ಲಿದ್ದೆನೆ. ನಾನು ಬಿಜೆಪಿಯ ಅಪ್ಪಟ ಕಾರ್ಯಕರ್ತನೂ ಬಿಜೆಪಿಯ ಮುಖ್ಯಮಂತ್ರಿಯೂ ಹೌದು. ಹೆಚ್‍ಡಿಕೆ ಆ ರೀತಿ ಅಸಂಬದ್ಧ ಹೇಳಿಕೆ ನೀಡಬಾರದು. ನಾನು ಯಾಕೆ ಜನತಾ ಪರಿವಾರ ತೊರೆದೆ ಅನ್ನೋದು ಅವರಿಗೆ ತಿಳಿದಿದೆ ಎಂದು ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.

    HDK 1 medium

    ರಾಜಶೇಖರ ಸಿಂಧೂರ ಸಾವಿನಿಂದ ಬಹಳ ದುಖಃವಾಗಿದೆ. ನಾನು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ವೈಯಕ್ತಿವಾಗಿಯೂ ನನಗೆ ಬಹಳ ನಷ್ಟವಾಗಿದೆ. ಶಿಗ್ಗಾಂವಿ-ಸವಣೂರು ಕ್ಷೇತ್ರದ ಅಭಿವೃದ್ದಿ ಅವರು ಬಗ್ಗೆ ಕನಸು ಕಂಡಿದ್ದರು. ಅವರ ಅಂತ್ಯಕ್ರಿಯೆಗೆ ಹೋಗುತ್ತಿದ್ದೆನೆ. ಅವರ ಸಾವಿನಿಂದ ನನಗೆ ದುಃಖವಾಗಿದೆ ಎಂದು ಬೊಮ್ಮಾಯಿ ಸಿಂಧೂರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

  • ಅಯೋಧ್ಯೆ ಶಿಲಾನ್ಯಾಸ- ರಾಜ್ಯದಲ್ಲಿ ಕಟ್ಟೆಚ್ಚರ, ಪೊಲೀಸರ ಜೊತೆ ಬೊಮ್ಮಾಯಿ ಸಭೆ

    ಅಯೋಧ್ಯೆ ಶಿಲಾನ್ಯಾಸ- ರಾಜ್ಯದಲ್ಲಿ ಕಟ್ಟೆಚ್ಚರ, ಪೊಲೀಸರ ಜೊತೆ ಬೊಮ್ಮಾಯಿ ಸಭೆ

    ಬೆಂಗಳೂರು: ಬುಧವಾರ ಅಯೊಧ್ಯೆ ರಾಮ ಜನ್ಮಭೂಮಿಯಲ್ಲಿ ಭವ್ಯ ಮಂದಿರದ ಶಿಲಾನ್ಯಾಸ ಕಾರ್ಯಕ್ರಮವು ನಡೆಯಲಿದೆ. ಈ ಪ್ರಯುಕ್ತ ನಾಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಹಿರಿಯ ಅಧಿಕಾರಿಗಳಿಗೆ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

    AYODHYA 2

    ಇಂದು ರಾಜ್ಯದ ಎಲ್ಲ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಸಚಿವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳವಂತೆ ತಿಳಿಸಿದರು.

    ayodhya 1 1

    ಈಗಾಗಲೇ ದೇಶದ ಪ್ರಮುಖ ನಗರಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, 144 ಸೆಕ್ಷನ್ ಜಾರಿ ಮಾಡಲಾಗಿದೆ. ಆಗಸ್ಟ್ 5ರಂದು ಬೆಂಗಳೂರಿನಲ್ಲಿ ಕಟ್ಟೆಚ್ಚರವಹಿಸಲಾಗಿದ್ದು, ಇಂದು ರಾತ್ರಿಯಿಂದಲೇ 144 ಸೆಕ್ಷನ್ ಜಾರಿಯಲ್ಲಿರಲಿದೆ. ಅಲ್ಲದೆ ಕೆಲ ಸಂಘಟನೆ, ಹೋರಾಟಗಾರರ ಮೇಲೆ ನಿಗಾ ವಹಿಸಲಾಗಿದೆ.

    BNG BOMMAI 1

    ಮೆರವಣಿಗೆ, ವಿಜಯೋತ್ಸವ, ಪ್ರತಿಭಟನೆಗೆ ಅನುಮತಿ ಇಲ್ಲ. ಕೋಮು ಸೌಹಾರ್ಧತೆಗೆ ಧಕ್ಕೆ ತರುವವರು ಕಂಡುಬಂದರೆ ಪೊಲೀಸರು ವಶಕ್ಕೆ ಪಡೆಯಲಿದ್ದಾರೆ. ಯಾವುದೇ ದೇವಸ್ಥಾನ, ಮಸೀದಿಗಳಲ್ಲಿ ಬಾವುಟ ಕಟ್ಟುವಂತಿಲ್ಲ. ಅಲ್ಲದೆ ಜನನಿಬಿಡ ಪ್ರದೇಶ, ಮಾಲ್, ದೇವಸ್ಥಾನ, ಮೆಜೆಸ್ಟಿಕ್, ಮಾರ್ಕೆಟ್ ಬಸ್ ನಿಲ್ದಾಣಗಳಲ್ಲಿ ಹೆಚ್ಚಿನ ಭದ್ರತೆ ವಹಿಸಲಾಗಿದೆ. ಹಿಂದೂಪರ ಸಂಘಟನೆ, ಹಿಂದೂಯೇತರ ಸಂಘಟನೆಗಳ ಮೇಲೆ ನಿಗಾ ವಹಿಸಲಾಗಿದೆ. ಸಿಎಆರ್ ಮತ್ತು ಕೆಎಸ್‍ಆರ್ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

    ayodhya