Recent News

3 weeks ago

ಬಿಬಿಎಂಪಿ ಮೇಯರ್ ಚುನಾವಣೆ – ತಡರಾತ್ರಿಯವರೆಗೂ ಬಿಜೆಪಿ ಸಭೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದ್ದೂ, ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಸೋಮವಾರ ತಡರಾತ್ರಿಯವರೆಗೆ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಯರ್ ಸ್ಥಾನಕ್ಕೆ ಸರ್ವಜ್ಞನಗರದ ಪದ್ಮನಾಭರೆಡ್ಡಿ, ಶಾಂತಿನಗರ ಗೌತಮ್ ಹೆಸರು ಕೇಳಿ ಬಂದಿದ್ದರೆ ಉಪಮೇಯರ್ ಸ್ಥಾನಕ್ಕೆ ವಿಜಯನಗರದ ಮಹಾಲಕ್ಷ್ಮಿ, ಬೊಮ್ಮನಹಳ್ಳಿಯ ಗುರುಮೂರ್ತಿ ಹೆಸರು ಕೇಳಿಬಂದಿದೆ. ಒಟ್ಟು ನಾಲ್ಕು ಮಂದಿಯಲ್ಲಿ ಅಂತಿಮವಾಗಿ ಯಾರು ಆಯ್ಕೆ ಆಗಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ. ಮೋದಿ, ಅಮಿತ್ ಶಾ ಅಧಿಕಾರದ […]

3 weeks ago

ಬಿಬಿಎಂಪಿ ಮೇಯರ್ ಚುನಾವಣೆ – ಕೈ, ತೆನೆ ಮೈತ್ರಿ ಅಭ್ಯರ್ಥಿ ಫೈನಲ್

ಬೆಂಗಳೂರು: ಬಿಬಿಎಂಪಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮಂಗಳವಾರ ನಡೆಯಲಿದ್ದು, ಈ ಬಾರಿಯೂ ಬಿಬಿಎಂಪಿಯಲ್ಲಿ ಮೈತ್ರಿಯನ್ನು ಮುಂದುವರಿಸಿಕೊಂಡು ಹೋಗಲು ಕಾಂಗ್ರೆಸ್ ಹಾಗೂ ಜೆಡಿಎಸ್ ನಿರ್ಧರಿಸಿದೆ. ಮೈತ್ರಿ ಅನ್ವಯ ಕಾಂಗ್ರೆಸ್‍ಗೆ ಮೇಯರ್ ಸ್ಥಾನ ಹಾಗೂ ಜೆಡಿಎಸ್‍ಗೆ ಉಪ ಮೇಯರ್ ಸ್ಥಾನ ಹಂಚಿಕೆ ಮಾಡಿಕೊಳ್ಳಲಾಗಿದೆ. ಮೈತ್ರಿ ಅನ್ವಯ ಕಾಂಗ್ರೆಸ್, ಜೆಡಿಎಸ್‍ನಿಂದ ಮೇಯರ್ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಲು ದತ್ತಾತ್ರೇಯ...

ಬಿಬಿಎಂಪಿ ಮೇಯರ್ ಚುನಾವಣೆ ಮುಂದೂಡಿಕೆ

3 weeks ago

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ಮುಂದೂಡಿಕೆಯಾಗಿದೆ. ಪ್ರಾದೇಶಿಕ ಆಯುಕ್ತರಿಗೆ ನಗರಾಭಿವೃದ್ಧಿ ಇಲಾಖೆಯಿಂದ ಅಧಿಕೃತವಾಗಿ ಸೂಚನೆ ರವಾನೆಯಾಗಿದ್ದು ಚುನಾವಣೆ ಮುಂದೂಡಿಕೆಯಾಗಿದೆ. ನಗರಾಭಿವೃದ್ಧಿ ಇಲಾಖೆಯ ಅಪರ ಕಾರ್ಯದರ್ಶಿ ವಿಜಯ್‍ಕುಮಾರ್ ಅವರು ಪ್ರಾದೇಶಿಕ ಆಯುಕ್ತರಿಗೆ ಚುನಾವಣೆ ಮುಂದೂಡುವಂತೆ ಸೂಚಿಸಿದ್ದಾರೆ. ಬಿಬಿಎಂಪಿ ಮೇಯರ್/...

ಕಂಡ ಕಂಡಲ್ಲಿ ದಾಳಿ ನಡೆಸಿ ದಂಡ ಹಾಕೋ ಬಿಬಿಎಂಪಿಯಲ್ಲೇ ಹೆಚ್ಚಿದೆ ಪ್ಲಾಸ್ಟಿಕ್ ಬಳಕೆ

3 weeks ago

ಬೆಂಗಳೂರು: ನಿಯಮ ರೂಪಿಸಿದವರೇ ನಿಯಮವನ್ನು ಗಾಳಿಗೆ ತೂರಿದ್ದು, ಊರಿಗೇ ನ್ಯಾಯ ಹೇಳುವ ಹಾಗೂ ಪ್ಲಾಸ್ಟಿಕ್ ಬಳಕೆಗೆ ದಂಡ ವಿಧಿಸುವ ಬಿಬಿಎಂಪಿಯಲ್ಲೇ ಪ್ಲಾಸ್ಟಿಕ್ ಬಳಕೆ ಹೆಚ್ಚಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ. ಸಿಲಿಕಾನ್ ಸಿಟಿಯಾದ್ಯಂತ ಒಂದು ಬಾರಿ ಬಳಸುವ ಪ್ಲಾಸ್ಟಿಕ್‍ನ್ನು ಬಿಬಿಎಂಪಿ ನಿಷೇಧ...

ಗೊರಗುಂಟೆಪಾಳ್ಯ ಮೇಲ್ಸೇತುವೆಗೆ ಸಿದ್ದಗಂಗಾ ಶ್ರೀಗಳ ಹೆಸರು ನಾಮಕರಣ

3 weeks ago

ಬೆಂಗಳೂರು: ತುಮಕೂರು ರಸ್ತೆಯ ಗೊರಗುಂಟೆಪಾಳ್ಯದ ಮೇಲ್ಸೇತುವೆಗೆ ಸಿದ್ದಗಂಗಾ ಮಠದ ದಿ.ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರ ಹೆಸರನ್ನು ನಾಮಕರಣ ಮಾಡಲಾಗಿದೆ. ಇಂದು ಗೊರಗುಂಟೆ ಪಾಳ್ಯದ ಮೇಲ್ಸೇತುವೆ ಬಳಿ ನಡೆದ ಕಾರ್ಯಕ್ರಮದಲ್ಲಿ ಸಿದ್ಧಗಂಗಾ ಮಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧಮಹಾಲಿಂಗ ಸ್ವಾಮೀಜಿಯವರೇ ಮೇಲ್ಸೇತುವೆಗೆ ಶ್ರೀ ಶಿವಕುಮಾರ ಸ್ವಾಮೀಜಿಗಳ...

ಕಸಕ್ಕೂ ಬಂತು ಬಾರ್ ಕೋಡ್

4 weeks ago

ಬೆಂಗಳೂರು: ಕಸದ ಆಟೋ, ಟಿಪ್ಪರ್‌ಗಳ ತಪ್ಪು ಲೆಕ್ಕದ ತಲೆನೋವಿನಿಂದ ಪಾರಾಗಲು ಪಾಲಿಕೆ ಹೊಸ ಐಡಿಯಾ ಮಾಡಿದೆ. ಇನ್ನು ರೀಡ್ ಟ್ಯಾಗ್ ಇನ್ ಮಿನಿಟ್ಸ್ ಬಾರ್ ಕೋಡ್‍ಗಳನ್ನ ಆಟೋಗಳಿಗೆ ಅಳವಡಿಸಲು ಪಾಲಿಕೆಯಿಂದ ಸೂಚಿಸಲಾಗಿದೆ. ಈ ಪ್ರಕಾರ ಜಿಯೋ ಟ್ಯಾಗಿಂಗ್ ವ್ಯವಸ್ಥೆ ಮತ್ತಷ್ಟು ಕಾರ್ಯೋನ್ಮುಖವಾಗಲಿದೆ....

ಅ.2ರಂದು ಬೆಂಗಳೂರಿನಲ್ಲಿ ಓಡುತ್ತಾ ಪ್ಲಾಸ್ಟಿಕ್ ಸಂಗ್ರಹಿಸಿ

4 weeks ago

ಬೆಂಗಳೂರು: ಗಾಂಧಿ ಜಯಂತಿಯಂದು ಬೆಂಗಳೂರಿನ 50 ಕಡೆ ಓಡುವ ಜತೆಗೆ ಪ್ಲಾಸ್ಟಿಕ್ ತೆಗೆಯುವ ಕಾರ್ಯಕ್ರಮವನ್ನು ಬಿಬಿಎಪಿ ಆಯೋಜಿಸಿದೆ. ಪ್ಲಾಸ್ಟಿಕ್ ವಿರುದ್ಧ ಜಾಗೃತಿ ಮೂಡಿಸಲು ಬಿಬಿಎಂಪಿ ಯುನೈಟೆಡ್ ವೇ ಇಂಡಿಯಾ ಮತ್ತು ಗೋ ನೇಟಿವ್ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಿದೆ. ಗಾಂಧಿ ಜಯಂತಿಯಂದು...

ಮತ್ತೆ ಬೀದಿಗಿಳಿದ ಪೌರಕಾರ್ಮಿಕರು – ನೇಮಕಾತಿ ಷರತ್ತುಗಳ ಸಡಿಲಿಕೆಗೆ ಒತ್ತಾಯ

4 weeks ago

ಬೆಂಗಳೂರು: ಪೌರಕಾರ್ಮಿಕರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಬಿಬಿಎಂಪಿ ಪೌರಕಾರ್ಮಿಕರ ಸಂಘದ ವತಿಯಿಂದ ಧರಣಿ ನಡೆಯಿತು. ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ 18 ಸಾವಿರ ಪೌರಕಾರ್ಮಿಕರನ್ನು ಖಾಯಂಗೊಳಿಸಿ ಎಂದು ಧರಣಿ ನಡೆಸಿದರು. ಸದ್ಯ ಪಾಲಿಕೆಯಲ್ಲಿ 4 ಸಾವಿರ ಪೌರಕಾರ್ಮಿಕರ ನೇಮಕಾತಿಗೆ ನೋಟಿಫಿಕೇಶನ್ ಹೊರಡಿಸಲಾಗಿದೆ....