Tuesday, 25th June 2019

1 hour ago

ಸಚಿವ ಡಿಕೆಶಿಗೆ ಸಂಕಷ್ಟ – ಜನಪ್ರತಿನಿಧಿಗಳ ನ್ಯಾಯಾಲಯದಿಂದ ಅರ್ಜಿ ವಜಾ

ಬೆಂಗಳೂರು: ದೆಹಲಿಯ ಫ್ಲಾಟ್‍ನಲ್ಲಿ ಹಣ ಸಿಕ್ಕಿದ ಪ್ರಕರಣದಲ್ಲಿ ಆರೋಪ ಮುಕ್ತರನ್ನಾಗಿ ಮಾಡುವಂತೆ ಸಚಿವ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. 2017ರ ಆಗಸ್ಟ್ ನಲ್ಲಿ ಡಿ.ಕೆ. ಶಿವಕುಮಾರ್ ಮನೆಯ ಮೇಲೆ ಐಟಿ ದಾಳಿ ಮಾಡಿತ್ತು. 2018 ರಲ್ಲಿ ಆಗಸ್ಟ್ ನಲ್ಲಿ ಐಟಿ ಇಲಾಖೆ ಡಿಕೆ ಶಿವಕುಮಾರ್ ಮೇಲೆ ನಾಲ್ಕನೇ ಪ್ರಕರಣ ದಾಖಲಿಸಿತ್ತು. 2018ರ ಸೆಪ್ಟೆಂಬರ್ 15ಕ್ಕೆ ಈ ಪ್ರಕರಣದಲ್ಲಿ ಡಿಕೆಶಿಗೆ ಜಾಮೀನು ಸಿಕ್ಕಿತ್ತು. ನಂತರ ವಿಶೇಷ ನ್ಯಾಯಾಲಯಕ್ಕೆ ಈ ಪ್ರಕರಣವನ್ನು ವರ್ಗಾವಣೆ ಮಾಡಲಾಗಿತ್ತು. […]

2 hours ago

ಬೆಂಗ್ಳೂರಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ 5ರ ಬಾಲಕ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ಅಟ್ಟಹಾಸಕ್ಕೆ 5 ವರ್ಷದ ಪುಟ್ಟ ಬಾಲಕ ಬಲಿಯಾಗಿರುವ ಘಟನೆ ಸೋಲದೇವನಹಳ್ಳಿಯ ಸಾಸ್ವೆಘಟ್ಟ ಗ್ರಾಮದಲ್ಲಿ ನಡೆದಿದೆ. ದುರ್ಗೇಶ್(5) ನಾಯಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾನೆ. ಮೂಲತಃ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನವರಾಗಿರುವ ಮಲ್ಲಪ್ಪ ಹಾಗೂ ಅನಿತಾ ದಂಪತಿಯ ಮೂರನೇ ಮಗ ದುರ್ಗೇಶ್ ನಾಯಿಗಳ ದಾಳಿಯಿಂದ ಮೃತಪಟ್ಟಿದ್ದಾನೆ. ಕೆಲಸ ಅರಸಿ ಬೆಂಗಳೂರಿಗೆ ಬಂದ ದಂಪತಿ...

ಶರಾವತಿ ಆಯ್ತು, ಈಗ ಬೆಂಗಳೂರಿಗೆ ಅಘನಾಶಿನಿ ನೀರು – ಸರ್ಕಾರಕ್ಕೆ ಜಯಚಂದ್ರ ಪ್ರಸ್ತಾಪ

5 hours ago

ತುಮಕೂರು: ಶರಾವತಿ ನದಿ ನೀರು ಬೆಂಗಳೂರಿಗೆ ಹರಿಸುವ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಅದೇ ಪಶ್ಚಿಮಘಟ್ಟಕ್ಕೆ ಸೇರಿದ ಅಘನಾಶಿನಿ ನದಿ ನೀರಿನ ಯೋಜನೆಯ ಪ್ರಸ್ತಾವನೆಯನ್ನು ಮಾಜಿ ಸಚಿವ ಟಿ.ಬಿ.ಜಯಚಂದ್ರ ಸರ್ಕಾರದ ಮುಂದಿಟ್ಟಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಉತ್ತರ ಕನ್ನಡದಲ್ಲಿ ಹರಿಯುವ...

ವಾಲ್ಮೀಕಿ ಸಮುದಾಯದ ಪ್ರತಿಭಟನೆಗೆ ನಟ ಸುದೀಪ್ ಬೆಂಬಲ

5 hours ago

ಬೆಂಗಳೂರು: ನಗರದ ಫ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ವಾಲ್ಮೀಕಿ ಸಮುದಾಯದ ಪ್ರತಿಭಟನೆಗೆ ನಟ ಕಿಚ್ಚ ಸುದೀಪ್ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿರುವ ನಟ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾರೆ. ಪರಿಶಿಷ್ಠ ಪಂಗಡದವರಿಗೆ ಶೇ.7.5ರಷ್ಟು ಮಿಸಲಾತಿಗೆ ಒತ್ತಾಯಿಸಿ ಧರಣಿ...

ಕರ್ನಾಟಕ ವಾದಕ್ಕೆ ಮನ್ನಣೆ – ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಏನಾಯ್ತು?

6 hours ago

ನವದೆಹಲಿ: ಕಾವೇರಿ ಜಲನಯನ ಪ್ರದೇಶದಲ್ಲಿ ಉತ್ತಮ ಮಳೆಯಯಾಗಿ ಜಲಾಶಯದ ಒಳ ಹರಿವು ಹೆಚ್ಚಾದರೆ ಮಾತ್ರ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಸೂಚಿಸಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಇಂದು ದೆಹಲಿಯಲ್ಲಿ ನಡೆದಿದ್ದ ಕಾವೇರಿ...

ಸ್ವಾಮೀಜಿ ಒಪ್ಪಿದ್ರೆ ಈಗಲೇ ರಾಜೀನಾಮೆ ಕೊಡುತ್ತೇನೆ- ಶ್ರೀರಾಮುಲು

7 hours ago

ಬೆಂಗಳೂರು: ಸರ್ಕಾರ ಮೀಸಲಾತಿ ನೀಡುವವರೆಗೆ ನಾನು ಬಿಡಲ್ಲ. ಒಂದು ಅದೇಶ ಕೊಡಿ ಸ್ವಾಮೀಜಿ.  ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಶ್ರೀರಾಮುಲು ಬಹಿರಂಗವಾಗಿಯೇ ಹೇಳಿದ್ದಾರೆ. ಇಂದು ಫ್ರೀಡಂ ಪಾರ್ಕ್ ನಲ್ಲಿ ವಾಲ್ಮಿಕಿ ಸಮುದಾಯದಿಂದ ಪರಿಶಿಷ್ಟ ಪಂಗಡದವರಿಗೆ ಶೇ.7.5ರಷ್ಟು ಮಿಸಲಾತಿಗೆ ಒತ್ತಾಯಿಸಿ ನಡೆಯುತ್ತಿರುವ...

ಪ್ರತಿಭಟನೆ ಬಿಸಿ – ಮೆಟ್ರೋದಲ್ಲಿ ಡಿಕೆಶಿ ಪ್ರಯಾಣ

7 hours ago

ಬೆಂಗಳೂರು: ನ್ಯಾಯಾಲಯಕ್ಕೆ ಹೋಗುತ್ತಿದ್ದ ಸಚಿವ ಡಿ.ಕೆ.ಶಿವಕುಮಾರ್ ಅವರಿಗೂ ಮೀಸಲಾತಿ ಹೋರಾಟದ ಬಿಸಿ ತಟ್ಟಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಮೆಟ್ರೋ ರೈಲಿನಲ್ಲಿ ಪ್ರಯಾಣ ಮಾಡಿದ್ದಾರೆ. ವಿಧಾನಸೌಧದಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಡಿ.ಕೆ.ಶಿವಕುಮಾರ್ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ಪರಿಶಿಷ್ಟ ಪಂಗಡವರ ಪ್ರತಿಭಟನೆಯ ಬಿಸಿ...

ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿಗೆ ಒತ್ತಾಯ – ರಾಜಧಾನಿ ತಲುಪಿದ ಬೃಹತ್ ಪಾದಯಾತ್ರೆ

9 hours ago

ಬೆಂಗಳೂರು: ಪರಿಶಿಷ್ಟ ಪಂಗಡದವರಿಗೆ ಶೇಕಡಾ 7.5ರಷ್ಟು ಮೀಸಲಾತಿಗೆ ಆಗ್ರಹಿಸಿ ವಾಲ್ಮೀಕಿ ಸಮುದಾಯ ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಿಂದ ಕೈಗೊಂಡಿದ್ದ ಪಾದಯಾತ್ರೆ ಬೆಂಗಳೂರು ತಲುಪಿದ್ದು, ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದಾರೆ. ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಪುರಿ ಸ್ವಾಮಿಜಿಯಿಂದ ಪಾದಯಾತ್ರೆ ನೇತೃತ್ವ ವಹಿಸಿದ್ದು, ಧರಣಿಯಲ್ಲಿ...