Wednesday, 16th October 2019

Recent News

11 months ago

ಕಾವೇರಮ್ಮನ ಮಡಿಲಿಗೆ ಅಂಬಿ – ಶ್ರೀರಂಗಪಟ್ಟಣದ ಸಂಗಮದಲ್ಲಿ ಅಭಿಯಿಂದ ಅಸ್ಥಿ ವಿಸರ್ಜನೆ

– ದರ್ಶನ್, ರಾಕ್‍ಲೈನ್, ದೊಡ್ಡಣ್ಣ ಸೇರಿ ಹಲವರು ಭಾಗಿ ಮಂಡ್ಯ: ಮಂಡ್ಯದ ಗಂಡು ಅಂಬರೀಶ್ ಅವರ ಅಸ್ಥಿಯನ್ನು ಶ್ರೀರಂಗಪಟ್ಟಣದಲ್ಲಿರುವ ಸಂಗಮದಲ್ಲಿ ವಿಸರ್ಜನೆ ಮಾಡಲಾಗಿದೆ. ಮೂರು ಮಡಿಕೆಗಳಲ್ಲಿದ್ದ ಅಸ್ಥಿಯನ್ನು ಶಾಸ್ತ್ರೋಕ್ತವಾಗಿ ಪುತ್ರ ಅಭಿಷೇಕ್ ವಿಸರ್ಜನೆ ಮಾಡಿದರು. ಒಟ್ಟು ಆರು ಮಡಿಕೆಗಳಲ್ಲಿ ಅಂಬರೀಶ್ ಅಸ್ಥಿಯನ್ನ ಸಂಚಯನ ಮಾಡಲಾಗಿದೆ. ಇದರಲ್ಲಿ ಮೂರು ಮಡಿಕೆಗಳಲ್ಲಿರುವ ಅಸ್ಥಿಯನ್ನ ಶ್ರೀರಂಗಪಟ್ಟಣದ ಸಂಗಮದಲ್ಲಿ ವಿಸರ್ಜನೆ ಮಾಡಲಾಗಿದೆ. ಇನ್ನೊಂದು ಮಡಿಕೆಯಲ್ಲಿರುವ ಅಸ್ಥಿಯನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಇಡಲಾಗುತ್ತದೆ. ಮತ್ತೊಂದು ಮಡಿಕೆಯಲ್ಲಿರುವ ಅಸ್ಥಿಯನ್ನು ನಿರ್ಮಾಪಕರ ಸಂಘದ ಕಚೇರಿಯಲ್ಲಿ ಇಡಲಾಗುತ್ತದೆ. […]

11 months ago

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು ಜಾಮೀನಿನ ಮೇಲೆ ಹೊರಬಂದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕರ ವಿರುದ್ಧ...

ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿದ ಕಾವೇರಿ ಮಾತೆ

12 months ago

ಮಡಿಕೇರಿ: ನಾಡಿನ ಜೀವನದಿಯಾಗಿರುವ ಕಾವೇರಿ ತಾಯಿಯ ಉಗಮಸ್ಥಾನವಾಗಿರುವ ತಲಕಾವೇರಿಯಲ್ಲಿ ಸಂಜೆ ಸರಿಯಾಗಿ 6.43ರ ಮೇಷ ಲಗ್ನದಲ್ಲಿ ತೀರ್ಥ ರೂಪಿಣಿಯಾಗಿ ಉಕ್ಕಿ ಬಂದಿದ್ದಾಳೆ. ಇಂದು ಸಂಜೆ ಮಹಾಮಂಗಳಾರತಿಯ ನಂತರ ಕಾವೇರಿ ತಾಯಿಯು ತೀರ್ಥ ರೂಪದಲ್ಲಿ ಕಾವೇರಿ ಬ್ರಹ್ಮ ಕುಂಡಿಕೆಯಿಂದ ಹರಿದಿದ್ದಾಳೆ. ಉಗಮದ ನಂತರ...

ಮೇಕೆದಾಟಿಗೂ ತಮಿಳುನಾಡು ಕ್ಯಾತೆ ಯಾಕೆ? ಯೋಜನೆಯಿಂದ ರಾಜ್ಯಕ್ಕಾಗುವ ಲಾಭ ಏನು?

1 year ago

ಕಾವೇರಿ ನೀರಿಗಾಗಿ ಸದಾ ಕ್ಯಾತೆ ತೆಗೆಯುತ್ತಿರುವ ತಮಿಳುನಾಡು ಈಗ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದೆ. ಕರ್ನಾಟಕ ಸರ್ಕಾರ ಕುಡಿಯುವ ನೀರಿಗಾಗಿ ರಾಮನಗರದ ಮೇಕೆದಾಟು ಎಂಬಲ್ಲಿ ಕಿರು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗುತ್ತಿರುವುದು ತಮಿಳುನಾಡು ಸರ್ಕಾರದ ಪಿತ್ತ ನೆತ್ತಿಗೇರಿದೆ. ಸದಾ ಕಾವೇರಿ ವಿವಾದವನ್ನೇ...

ಅಣ್ಣಾವ್ರ ಅಭಿಮಾನಿ, ಕಾವೇರಿ ನನ್ನ ತಾಯಿ ಅಂದಿದ್ದ ಕನ್ನಡ ನಟನನ್ನು ಹೊರದಬ್ಬಿದ ತಮಿಳು ಚಿತ್ರರಂಗ

1 year ago

ಬೆಂಗಳೂರು: ಅಣ್ಣಾವ್ರ ಅಭಿಮಾನಿ ಹಾಗೂ ಕಾವೇರಿ ನನ್ನ ತಾಯಿ ಎಂದಿದ್ದ ಕನ್ನಡ ನಟನನ್ನು ತಮಿಳು ಚಿತ್ರರಂಗ ಹೊರದಬ್ಬಿದೆ. ಕನ್ನಡ ನಟ ಯೋಗಿ ತಮಿಳಿನ ‘ಪಾರ್ತಿಬನ್ ಕಾದಲ್’ ಚಿತ್ರಕ್ಕೆ ನಾಯಕನಾಗಿ ಆಯ್ಕೆಯಾಗಿದ್ದರು. ಈ ಚಿತ್ರದ ಮೋಷನ್ ಪೋಸ್ಟರ್ ಕೂಡ ಚೆನ್ನೈಯಲೇ ಬಿಡುಗಡೆಯಾಗಿತ್ತು. ಆದೆ...

ಕಾವೇರಿ ನದಿ ಪಾತ್ರದಲ್ಲಿ ಭರ್ಜರಿ ಮಳೆ- ದೇವಾಲಯ, ಜಮೀನು ಜಲಾವೃತ

1 year ago

ಮಂಡ್ಯ: ಕಾವೇರಿ ನದಿಪಾತ್ರದಲ್ಲಿ ಭರ್ಜರಿ ಮಳೆಯಾಗುತ್ತಿರುವುದರಿಂದ ಕೆಆರ್‍ಎಸ್ ಅಣೆಕಟ್ಟೆಗೆ ನಿರಂತರವಾಗಿ ಒಂದು ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರು ಹರಿದು ಬರುತ್ತಿದೆ. ಹೀಗಾಗಿ ಕೆಆರ್‍ಎಸ್ ಅಣೆಕಟ್ಟಯಿಂದ ಅನಿವಾರ್ಯವಾಗಿ 1 ಲಕ್ಷದ 30 ಸಾವಿರ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಬೇಕಾದ...

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಕಾವೇರಿಗೆ ಬಾಗಿನ ಅರ್ಪಣೆ

1 year ago

ಮಡಿಕೇರಿ: ತಲಕಾವೇರಿಯಲ್ಲಿ ಹುಟ್ಟಿ ದಕ್ಷಿಣ ಭಾರತದಲ್ಲಿ ಹರಿಯುವ ಕಾವೇರಿ ನದಿಗೆ ಬಾಗಿನ ಅರ್ಪಿಸುವ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನಡೆಯಿತು. ಭಾಗಮಂಡಲದ ಭಗಂಡೇಶ್ವರ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ದೇವಾಲಯದಿಂದ ಉತ್ಸವ ಮಂಟಪವನ್ನು ತ್ರಿವೇಣಿ ಸಂಗಮಕ್ಕೆ ತಂದು ಮಳೆ ಕಡಿಮೆಯಾಗಿ ಕಾವೇರಿ ಮಾತೆ...

ಕಬಿನಿ ಜಲಾಶಯದಿಂದ ದಾಖಲೆ ಪ್ರಮಾಣದಲ್ಲಿ ನೀರು ಹೊರಕ್ಕೆ

1 year ago

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಎಚ್‍ಡಿಕೋಟೆ ಯಲ್ಲಿರುವ ಕಬಿನಿ ಡ್ಯಾಂ ನಿಂದ ದಾಖಲೆ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡಲಾಗಿದೆ. 1992 ರ ನಂತರ ಇದೇ ಮೊದಲ ಬಾರಿಗೆ 70 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗಿದೆ. ಹಾಗೆಯೇ ಕೆಆರ್...