Saturday, 20th July 2019

Recent News

5 days ago

ಪೈಸೆ ಲೆಕ್ಕದಲ್ಲಿ ಶಾಸಕರನ್ನು ಹರಾಜು ಹಾಕಿದ ರೈತರು

ಚಾಮರಾಜನಗರ: ರೆಸಾರ್ಟ್ ರಾಜಕಾರಣ ಮಾಡುತ್ತಿರುವ ಶಾಸಕರನ್ನು ಪೈಸೆ ಲೆಕ್ಕದಲ್ಲಿ ಹರಾಜು ಹಾಕಲಾಗಿದೆ. ಜನರ ಹಿತಾಸಕ್ತಿ ಮರೆತು ರಾಜಕೀಯ ದೊಂಬರಾಟದಲ್ಲಿ ಮುಳುಗಿರುವ ರಾಜಕೀಯ ಪಕ್ಷಗಳ ನಾಯಕರಿಗೆ ಜನ ಥೂ ಎಂದು ಕ್ಯಾಕರಿಸಿ ಉಗಿಯುತ್ತಿದ್ದಾರೆ. ಅವರ ಭಾವಚಿತ್ರಗಳಿಗೆ ಚಪ್ಪಲಿ, ಪೊರಕೆಗಳಿಂದ ಹೊಡೆದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಅಸಹ್ಯ ರಾಜಕೀಯ ಬೆಳವಣಿಗೆಯ ಬಗ್ಗೆ ಚಾಮರಾಜನಗರದಲ್ಲಿ ರೈತರು ವಿಶಿಷ್ಟ ರೀತಿಯಲ್ಲಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಭೀಕರ ಬರ ಇದ್ದರೂ ಆ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅಧಿಕಾರಕ್ಕಾಗಿ ರೆಸಾರ್ಟ್ […]

6 days ago

ಇದು ದೋಸ್ತಿ ಅಲ್ಲ, ದುಷ್ಮನ್ ಸರ್ಕಾರ- ಶ್ರೀನಿವಾಸ್ ಪ್ರಸಾದ್

ಚಾಮರಾಜನಗರ: ಕಳೆದ ಒಂದು ವರ್ಷದಿಂದ ಮೈತ್ರಿ ಸರ್ಕಾರದಲ್ಲಿ ಹೊಂದಾಣಿಕೆ ಇಲ್ಲ. ಇದು ದೋಸ್ತಿ ಸರ್ಕಾರ ಅಲ್ಲ, ಇದು ದುಷ್ಮನ್ ಸರ್ಕಾರ ಎಂದು ಸಂಸದ ಶ್ರೀನಿವಾಸ್‍ಪ್ರಸಾದ್ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದಲ್ಲಿ ಒಳಗೊಳಗೆ ಅಸಮಾಧಾನವಿದೆ. ಎಚ್ ವಿಶ್ವನಾಥ್ ಅವರಿಗೆ ಸಮ್ಮಿಶ್ರ ಸರ್ಕಾರದ ಬಗ್ಗೆ ಅಸಮಾಧಾನವಿತ್ತು. ಈ ಹಿಂದೆ...

ಮಧ್ಯ ರಾತ್ರಿಯಾದ್ರೂ ಬ್ಯಾಂಕ್‍ಗಳ ಮುಂದೆ ಕ್ಯೂ ನಿಂತ ಜನ

2 weeks ago

ಚಾಮರಾಜನಗರ: ದೇಶದಲ್ಲಿ ನೋಟ್ ಬ್ಯಾನ್ ಆದ ಸಂದರ್ಭದಲ್ಲಿ ಜನ ತಮ್ಮ ಹಳೆ ನೋಟುಗಳನ್ನು ಕೊಟ್ಟು ಹೊಸ ನೋಟ್ ಪಡೆಯಲು ರಾತ್ರಿ ಇಡೀ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದರು. ಆದರೆ ಇದೀಗ ಚಾಮರಾಜನಗರದಲ್ಲಿ ಮಧ್ಯ ರಾತ್ರಿಯಾದರೂ ಬ್ಯಾಂಕ್‍ಗಳ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ದೇಶದ...

ಅನಸ್ತೇಶಿಯಾ ಡೋಸ್ ಹೆಚ್ಚಳ, ರೋಗಿ ಸಾವು – ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

3 weeks ago

ಚಾಮರಾಜನಗರ: ವೈದ್ಯರ ನಿರ್ಲಕ್ಷ್ಯದಿಂದ ಅರಿವಳಿಕೆ(ಅನಸ್ತೇಶಿಯಾ) ಡೋಸ್ ಹೆಚ್ಚಾದ ಪರಿಣಾಮ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಉದ್ದನೂರು ಗ್ರಾಮದ ನಿವಾಸಿ ಸುರೇಶ್(42) ಮೂಳೆ ಶಸ್ತ್ರ ಚಿಕಿತ್ಸೆಗೆಂದು ಸೋಮವಾರ ಕೊಳ್ಳೇಗಾಲ ವಿಭಾಗೀಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಗೂ ಮುನ್ನ ನೋವು ನಿವಾರಣೆಗೆ...

ಬೈಕ್ ಸವಾರರನ್ನು ಅಟ್ಟಿಸಿಕೊಂಡು ಬಂದ ಹುಲಿ

3 weeks ago

ಚಾಮರಾಜನಗರ: ಬಂಡೀಪುರ ರಾಷ್ಟ್ರೀಯ ಹುಲಿ ರಕ್ಷಿತಾರಣ್ಯದಲ್ಲಿ ಹೋಗುತ್ತಿದ್ದ ಬೈಕ್ ಸವಾರರನ್ನು ಹುಲಿಯೊಂದು ಅಟ್ಟಿಸಿಕೊಂಡು ಬಂದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಲ್ಲಿ ಇರುವ ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವೈನಾಡಿನ ಮಧ್ಯೆ ಈ ಘಟನೆ ನಡೆದಿದೆ. ಈ ಮೂಲಕ ಬಂಡೀಪುರ...

ಮಲೆಮಹದೇಶ್ವರ ದೇವಾಲಯದ ಹುಂಡಿ ಏಣಿಕೆ – 28 ದಿನಗಳಲ್ಲಿ 1.25 ಕೋಟಿ ನಗದು ಸಂಗ್ರಹ

3 weeks ago

ಚಾಮರಾಜನಗರ: ಕರ್ನಾಟಕದಲ್ಲಿ ಅತೀ ಹೆಚ್ಚು ಆದಾಯ ತಂದುಕೊಡುವ ಸಾಲಿನಲ್ಲಿ ಎರಡನೇ ಸ್ಥಾನದಲ್ಲಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಮಲೆ ಮಹೇಶ್ವರ ದೇವಾಲಯದಲ್ಲಿ ಈ ಬಾರಿ ದಾಖಲೆಯ ಪ್ರಮಾಣದಲ್ಲಿ ಹುಂಡಿ ಹಣ ಸಂಗ್ರಹವಾಗಿದೆ. ಮೇ ತಿಂಗಳ ಹುಂಡಿ ಎಣಿಕೆ ಕಾರ್ಯ...

ಬಂಡೀಪುರದಲ್ಲಿ ಶೀಘ್ರವೇ ಚಾಲ್ತಿಗೆ ಬರಲಿದೆ ಗ್ರೀನ್ ಟ್ಯಾಕ್ಸ್

3 weeks ago

ಚಾಮರಾಜನಗರ: ರಾಜ್ಯದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ವಾಹನ ಸವಾರರಿಗೆ ಗ್ರೀನ್ ಟ್ಯಾಕ್ಸ್‌ನ್ನು ನಿಗದಿ ಮಾಡಲಾಗುತ್ತದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ತದೇಶದ ಅರಣ್ಯ ಪ್ರದೇಶದಲ್ಲಿ ಸಂಚಾರ ಮಾಡುವ ವಾಹನಗಳಿಗೆ ಇನ್ನು ಮುಂದೆ ಗ್ರೀನ್ ಟ್ಯಾಕ್ಸ್ ವಿಧಿಸಲಾಗುತ್ತದೆ....

ಡ್ರೈವರ್ ಸಮಯ ಪ್ರಜ್ಞೆಯಿಂದ 50 ಮಂದಿ ಪಾರು

3 weeks ago

ಚಾಮರಾಜನಗರ: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ಕೂದಲೆಳೆಯ ಅಂತರದಲ್ಲಿ ತಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಜರುಗಿದೆ. ಮಲೆಮಹದೇಶ್ವರ ಬೆಟ್ಟದ ತಾಳುಬೆಟ್ಟ- ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಸಂಜೆ ಕೆ.ಎಸ್.ಆರ್.ಟಿ.ಸಿ ಬಸ್ ಚಲಿಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ...