Thursday, 19th July 2018

Recent News

4 days ago

ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಪಟ್ಟು!

ಬೆಂಗಳೂರು: ತಮ್ಮ ಸ್ವ-ಕ್ಷೇತ್ರ ಚಾಮುಂಡೇಶ್ವರಿಯಲ್ಲಿ ಸೋತಿದ್ರೂ ಸಿದ್ದರಾಮಯ್ಯ ಇದೀಗ ಮಾಸ್ಟರ್ ಪ್ಲಾನ್ ಮಾಡಿದ್ದಾರಂತೆ. ಕಾಂಗ್ರೆಸ್ ಹೈಕಮಾಂಡ್ ಮುಂದೆ ಮಾಜಿ ಸಿಎಂ ಸಿದ್ದರಾಮಯ್ಯ ಹಠ ಹಿಡಿದಿದ್ದಾರೆ. ಯಾವುದೇ ಕಾರಣಕ್ಕೂ ಮೈಸೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್‍ಗೆ ಬಿಟ್ಟು ಕೊಡಬಾರದು. ಬೇರೆ ಯಾವ ಕ್ಷೇತ್ರದಲ್ಲಾದರೂ ಮೈತ್ರಿ ಮಾಡಿಕೊಳ್ಳಿ. ಆದ್ರೆ ಮೈಸೂರನ್ನು ಮಾತ್ರ ಬಿಡಕ್ಕಾಗಲ್ಲ ಅಂತ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಅಂತ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಮೈಸೂರು ಲೋಕಸಭಾ ಕ್ಷೇತ್ರದಲ್ಲೇ ಕಾಂಗ್ರೆಸ್ ಅಭ್ಯರ್ಥಿಯೇ ಸ್ಪರ್ಧೆ ಮಾಡಬೇಕು. ಸಮನ್ವಯ ಸಮಿತಿ ಮುಖ್ಯಸ್ಥ ಸಿದ್ದು ಪಟ್ಟು […]

1 month ago

ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು: ಯತೀಂದ್ರ ಸಿದ್ದರಾಮಯ್ಯ

ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಆಡಳಿತ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕೊಡುವಂತಹ ಕೆಲಸ ಮಾಡಲಾಗಿತ್ತು. ಇಡೀ ದೇಶದಲ್ಲಿ ನಮ್ಮದು ಮಾದರಿ ಸರ್ಕಾರವಾಗಿತ್ತು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಚುನಾವಣೆಯ ಬಳಿಕ ಬಾದಾಮಿ ಕ್ಷೇತ್ರದಲ್ಲಿ 5 ದಿನಗಳ ಪ್ರವಾಸ ಕೈಗೊಂಡಿರುವ ತಂದೆ ಸಿದ್ದರಾಮಯ್ಯ ಅವರ ಕಾರ್ಯಕ್ರಮದಲ್ಲಿ ಇಂದು ಯತೀಂದ್ರ ಸಿದ್ದರಾಮಯ್ಯ ಅವರು ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು....

ನಾಳೆ ಸಿಎಂ ಸಿದ್ದರಾಮಯ್ಯ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬ್ಯಾಟಿಂಗ್

3 months ago

ಮೈಸೂರು: ಈ ಬಾರಿಯ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪರ ಪ್ರಚಾರಕ್ಕೆ ಧುಮುಕುತ್ತಿರುವ ನಟ, ನಟಿಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ವೇಳೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಹ ಶನಿವಾರ ಪ್ರಚಾರ ಮಾಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ಅವರ ಪರ ನಟಿ ಜಯಮಾಲಾ,...

ಚಾಮುಂಡೇಶ್ವರಿಯಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಸೋಲಿಸಲು ಒಂದಾದ ಪಕ್ಷೇತರರು

3 months ago

ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದ ಎಲ್ಲಾ ಪಕ್ಷೇತರ ಅಭ್ಯರ್ಥಿಗಳು ಒಂದಾಗಿ ಮೂರು ಪಕ್ಷಗಳ ವಿರುದ್ಧ ಸಮರ ಸಾರಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ವಿರುದ್ಧ ಗೆಲುವು ಸಾಧಿಸಲು ಪಕ್ಷೇತರ ಅಭ್ಯರ್ಥಿಗಳು ಖಾಸಗಿ ಹೋಟೆಲ್‍ನಲ್ಲಿ ಸಭೆ ನಡೆಸಿ ಒಟ್ಟಾಗಿ ಹೋರಾಟ ಮಾಡಲು ತೀರ್ಮಾನಿಸಿದ್ದಾರೆ. 12...

ಮಾವನ ಪರ ಪ್ರಚಾರಕ್ಕಿಳಿದ ಸ್ಮಿತಾ ರಾಕೇಶ್ ಸಿದ್ದರಾಮಯ್ಯ

3 months ago

ಮೈಸೂರು: ಸಿಎಂ ಸಿದ್ದರಾಮಯ್ಯ ಅವರ ಸೊಸೆ ಸ್ಮಿತಾ ರಾಕೇಶ್ ಸಿದ್ದರಾಮಯ್ಯ ದಿಢೀರನೆ ಸಾರ್ವಜನಿಕವಾಗಿ ಕಾಣಿಸಿಕೊಂಡು ಮಾವನ ಪರ ಪ್ರಚಾರ ಮಾಡಲು ಶುರುಮಾಡಿದ್ದಾರೆ. ರಾಕೇಶ್ ಸಿದ್ದರಾಮಯ್ಯ ಅವರ ಪತ್ನಿ ಸ್ಮಿತಾ ಎಂದಿಗೂ ಸಾರ್ವಜನಿಕವಾಗಿ ಕಾಣಿಸಿಕೊಂಡವರಲ್ಲ. ರಾಕೇಶ್ ನಿಧನರಾದಗಲೂ ಸಾರ್ವಜನಿಕವಾಗಿ ಅವರು ಕಾಣಿಸಿಕೊಳ್ಳಲಿಲ್ಲ. ಈಗ...

ಮೋದಿಯ 1+1 ಸೂತ್ರಕ್ಕೆ ಬಿಜೆಪಿಯ ಉದಾಹರಣೆ ಕೊಟ್ಟು ತಿರುಗೇಟು ಕೊಟ್ಟ ಸಿಎಂ

3 months ago

ಹುಬ್ಬಳ್ಳಿ: ಮೋದಿಯವರು ನಮಗೆ 2+1, 1+1 ಸೂತ್ರ ಅನ್ನುತ್ತಾರೆ. ಆದರೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅವರು ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿರಲಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯನವರು ಪ್ರಶ್ನೆ ಮಾಡಿದ್ದಾರೆ. ಗೋವಿಂದ ಕಾರಜೋಳ ಅವರ ಮಗ, ಉದಾಸಿಯವರ ಮಗ, ಶಶಿಕಲಾ ಜೊಲ್ಲೆ ಅವರ ಗಂಡ,...

ಸಿದ್ದರಾಮಯ್ಯರಿಗೆ ಬನಶಂಕರಿ ಆಶೀರ್ವಾದ ದಕ್ಕಲ್ಲ ಅಂದ್ರು ಹೆಚ್‍ಡಿಕೆ

3 months ago

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಚಾಮುಂಡೇಶ್ವರಿ ಆಶೀರ್ವಾದ ಸಿಕ್ಕಿಲ್ಲ. ಆದ್ದರಿಂದ ಬನಶಂಕರಿ ದೇವಿಯ ಆಶೀರ್ವಾದ ಪಡೆಯಲು ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ಬಾಗಲಕೋಟೆ ಜಿಲ್ಲೆ ಬಾದಾಮಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಬನಶಂಕರಿ ಆಶೀರ್ವಾದ...

ಪ್ರಚಾರದ ವೇಳೆ ಮಗನನ್ನು ನೆನೆದು ಭಾವುಕರಾದ ಸಿಎಂ

3 months ago

ಮೈಸೂರು: ವರುಣಾದಲ್ಲಿ ತಮ್ಮ ಮಗ ಡಾ. ಯತೀಂದ್ರ ಪರ ಪ್ರಚಾರ ಮಾಡ್ತಿರೋ ಸಿಎಂ ಸಿದ್ದರಾಮಯ್ಯ ಇಂದು ಭಾವುಕರಾದ್ರು. ನನ್ನ ಮಗ ರಾಕೇಶ್ ನೆನೆಪಾಗ್ತಿದ್ದಾನೆ. ಅವನಿದ್ದಿದ್ರೆ ಪ್ರಚಾರಕ್ಕೆ ಬರ್ತಿರಲಿಲ್ಲ. ಚಾಮುಂಡೇಶ್ವರಿ ಕ್ಷೇತ್ರವನ್ನು ಅವನೇ ನೋಡಿಕೊಳ್ಳುತ್ತಿದ್ದ. ಆದ್ರೆ ಮನುಷ್ಯ ಹುಟ್ಟಿದ ಮೇಲೆ ಸಾಯಲೇಬೇಕು. ಅವನು...