Monday, 17th June 2019

6 hours ago

‘ಕೈ’ ಕೊಟ್ಟು ಕಮಲ ಸೇರ್ತಾರಾ ಸುಧಾಕರ್? ಶಾಸಕರ ತಂದೆ ಸ್ಪಷ್ಟನೆ

ಚಿಕ್ಕಬಳ್ಳಾಪುರ: ಸಿಎಂ ವಿರುದ್ಧ ಮುನಿಸಿಕೊಂಡಿರುವ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅತೃಪ್ತ ಶಾಸಕ ಡಾ ಕೆ. ಸುಧಾಕರ್ ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟು ಬಿಜೆಪಿ ಸೇರೋದು ಪಕ್ಕನಾ ಅನ್ನೋ ಅನುಮಾನ ಮತ್ತಷ್ಟು ಬಲವಾಗ್ತಿದೆ. ಈ ಅನುಮಾನಗಳಿಗೆ ಪುಷ್ಠಿ ಕೊಡುವಂತೆ, ಸದ್ದಿಲ್ಲದೇ ಶಾಸಕ ಸುಧಾಕರ್ ತಂದೆ ಪಿ.ಎನ್ ಕೇಶವರೆಡ್ಡಿ ಕೆಲ ರಹಸ್ಯ ಸಭೆಗಳನ್ನು ನಡೆಸುತ್ತಿದ್ದು, ಸಮ್ಮಿಶ್ರ ಸರ್ಕಾರದ ವಿರುದ್ಧವೇ ಸಿಡಿದೆದ್ದಿದ್ದಾರೆ. ಸತತ ಎರಡನೇ ಬಾರಿಗೆ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾದ ಸುಧಾಕರ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದರು. ಆದರೆ […]

13 hours ago

ಆಧಾರ್‌ಕಾರ್ಡ್‌ ಮಾಡಿಸಲು ಹೋಗುವಾಗ ಅಪಘಾತ- ನಾಲ್ವರ ದುರ್ಮರಣ

– ಆಟೋ ಚಕ್ರ ಕಳಚಿ ಬಸ್ ಗೆ ಡಿಕ್ಕಿ – 7 ಮಂದಿಗೆ ಗಂಭೀರ ಗಾಯ ಚಿಕ್ಕಬಳ್ಳಾಪುರ: ಆಟೋ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮದ ಬಳಿ ನಡೆದಿದೆ. ಹಸೀನಾ(30), ಸಾನಿಯಾ(17), ಮಕ್ಕಳಾದ ಶಾಜಿಯಾ(8) ಹಾಗೂ...

ರಾಹುಲ್ ಮಾತಿಗೆ ಬೆಲೆ ಇಲ್ಲ, ಇದ್ದಿದ್ದರೆ ಮಂತ್ರಿಯಾಗ್ತಿದ್ದೆ- ಶಾಸಕ ಸುಧಾಕರ್

4 days ago

– ಈಗ ಎಲೆಕ್ಷನ್ ನಡೆದ್ರೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ ಚಿಕ್ಕಬಳ್ಳಾಪುರ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರ ಮಾತಿಗೆ ಇಲ್ಲಿ ಬೆಲೆ ಇಲ್ಲ. ರಾಹುಲ್ ಗಾಂಧಿಗೆ ಬೆಲೆ ಇದ್ದಿದ್ದರೆ ನನಗೆ ಸಚಿವ ಸ್ಥಾನ ಸಿಗಬೇಕಾಗಿತ್ತು ಎಂದು ಶಾಸಕ ಡಾ. ಸುಧಾಕರ್ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ....

ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್!

6 days ago

-ಮಾರುಕಟ್ಟೆಯಲ್ಲಿ ನೇರಳೆ ಹಣ್ಣಿನ ಕಾರುಬಾರು! ಚಿಕ್ಕಬಳ್ಳಾಪುರ: ಇಲ್ಲಿಯ ಗಲ್ಲಿ ಗಲ್ಲಿಗಳಲ್ಲಿ ನೇರಳೆ ಹಣ್ಣಿನದ್ದೆ ಕಮಾಲ್. ಮಧುಮೇಹಿಗಳಿಗೆ ರಾಮಬಾಣವಾಗಿರುವ ಜಂಬುನೇರಳೆ ಹಣ್ಣಿಗೆ ಭಾರೀ ಡಿಮ್ಯಾಂಡ್ ಇದೆ. ಇದರಿಂದ ಬೆಳೆದ ರೈತರಿಗೂ ಲಾಭ ಸೇವಿಸಿದ ಗ್ರಾಹಕರಿಗೂ ಭಾರೀ ಲಾಭವಾಗಿದೆ. ನೇರಳೆ ಹಣ್ಣಿನಲ್ಲಿ ವಿವಿಧ ಔಷಧೀಯ...

ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸೇರಿ ಮೂವರು ಸಾವು

1 week ago

ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಹೋದ ತಾಯಿ ಸೇರಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಮನಕಲಕುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತಿಪ್ಪೇನಹಳ್ಳಿ ಗ್ರಾಮದಲ್ಲಿ ನಡೆದಿದೆ. 30 ವರ್ಷದ ತಾಯಿ ವಿಜಯಲಕ್ಷ್ಮೀ ಹಾಗೂ ಮಕ್ಕಳಾದ 10 ವರ್ಷದ ಅಜಯ್ ಹಾಗೂ 8 ವರ್ಷದ...

ಕ್ಯಾಂಟರ್‌ಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಹೋಗಿ ಡಿವೈಡರ್‌ಗೆ ಬೈಕ್ ಡಿಕ್ಕಿ

1 week ago

ಚಿಕ್ಕಬಳ್ಳಾಪುರ: ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ರಾಣಿ ಕ್ರಾಸ್ ಬಳಿ ನಡೆದಿದೆ. 24 ವರ್ಷದ ಅನಂತ್ ಮೃತ ಬೈಕ್ ಸವಾರ. ಚಿಕ್ಕಬಳ್ಳಾಪುರ ನಗರದ ಪ್ರಖ್ಯಾತ...

ಅಪ್ರಾಪ್ತ ವಿದ್ಯಾರ್ಥಿನಿಗೆ ಪ್ರೇಮ ಪಾಠ – ಶಿಕ್ಷಕನಿಗೆ ಬಿತ್ತು ಗೂಸಾ

2 weeks ago

ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿಗೆ ಪ್ರೇಮ ಪಾಠ ಮಾಡಿದ ಕಾಮುಕ ಶಿಕ್ಷಕನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬಾಗೇಪಲ್ಲಿ ತಾಲೂಕಿನ ಶ್ರೀನಿವಾಸಪುರ ಗ್ರಾಮದಲ್ಲಿ ನಡೆದಿದೆ. ಪರಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಬಾಬು ಗೂಸ ತಿಂದ ಶಿಕ್ಷಕ. ಕಳೆದ ವರ್ಷ ಎಸ್‍ಎಸ್‍ಎಲ್‍ಸಿ ವ್ಯಾಸಂಗ ಮಾಡುತ್ತಿದ್ದ...

ಪ್ರಾಣವನ್ನೇ ಪಣಕ್ಕಿಟ್ಟು ತೆಪ್ಪದಲ್ಲಿ ಬದುಕು ಕಟ್ಟಿಕೊಂಡಿದ್ದಾರೆ ಮಹಿಳೆಯರು

2 weeks ago

ಚಿಕ್ಕಬಳ್ಳಾಪುರ: ಬಡತನ ಎಂಬುದು ಮನುಷ್ಯನ ಕೈಯಲ್ಲಿ ಏನ್ ಬೇಕಾದರೂ ಮಾಡಿಸುತ್ತದೆ ಎಂಬುವುದಕ್ಕೆ ಈ ಮಹಿಳೆಯರೇ ಸಾಕ್ಷಿ. ಮೂರು ಹೊತ್ತು ನೆಮ್ಮದಿಯಾಗಿ ಊಟ ಮಾಡಲು ಮೂವರು ಮಹಿಳೆಯರು ತೆಪ್ಪದಲ್ಲಿ ಕೆರೆಗೆ ಸಾಗಿ ಮೀನು ಹಿಡಿಯುತ್ತಿದ್ದಾರೆ. ಈ ಸಾಹಸಿ ಮಹಿಳೆಯರು ಕಂಡು ಬಂದಿದ್ದು ಚಿಕ್ಕಬಳ್ಳಾಪುರ...