Friday, 23rd August 2019

22 hours ago

ರಾಯಚೂರಿನಿಂದ ಕಾಣೆಯಾಗಿದ್ದ ವಿದ್ಯಾರ್ಥಿನಿ ಆಂಧ್ರದಲ್ಲಿ ಶವವಾಗಿ ಪತ್ತೆ -ಆಟೋ ಚಾಲಕ ಬಂಧನ

ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿ ಮಧುಪತ್ತಾರ್ ಸಾವಿನ ಪ್ರಕರಣ ಮಾಸುವ ಮುನ್ನವೇ, ನಗರದ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದ ಅಪ್ರಾಪ್ತೆ ಆಂಧ್ರ ಪ್ರದೇಶದ ಕರ್ನೂಲ್ ಬಳಿ ತುಂಗಭದ್ರಾ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದ ಐದು ದಿನಗಳ ನಂತರ ಶವವಾಗಿ ಪತ್ತೆಯಾಗಿದ್ದಾಳೆ. ಕಾಲೇಜು ತರಗತಿಗಳು ಆರಂಭವಾಗದಿದ್ದರೂ ಪ್ಯಾರಾ ಮಡಿಕಲ್ ವಿದ್ಯಾರ್ಥಿನಿ ಆಗಸ್ಟ್ 16 ರಂದು ಗಣಮೂರು ಗ್ರಾಮದಿಂದ ಕಾಲೇಜಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದಳು. ಆದರೆ ಸಂಜೆಯಾದರೂ ಮನೆಗೆ ವಾಪಸ್ ಬಂದಿರಲಿಲ್ಲ. ರಾಯಚೂರು ಬಸ್ ನಿಲ್ದಾಣದಿಂದ […]

2 weeks ago

ಭಾರೀ ಮಳೆ – 7 ಜಿಲ್ಲೆಗಳ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಬೆಳಗಾವಿ, ಉತ್ತರ ಕನ್ನಡ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಬಾಗಲಕೋಟೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸಂಪೂರ್ಣ ರಜೆ ಘೋಷಿಸಲಾಗಿದ್ದು, ಚಿಕ್ಕಮಗಳೂರಿನ 5 ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಒಂದೆಡೆ ಪ್ರವಾಹ, ಇನ್ನೊಂದೆಡೆ ಮಳೆ ಹೆಚ್ಚುತ್ತಲೇ ಇದ್ದು, ಪರಿಹಾರ ಕಾರ್ಯ ಸವಾಲಾಗಿ ಪರಿಣಮಿಸಿದೆ. ಕೆಲವೆಡೆ ಗಂಜಿ ಕೇಂದ್ರಗಳಿಗೇ ನೀರು ನುಗ್ಗಿದ್ದು,...

3ನೇ ಮಹಡಿಯಿಂದ ಪಠ್ಯ ಪುಸಕ್ತಗಳಿರುವ ಬ್ಯಾಗ್ ಎಸೆದ ವಿದ್ಯಾರ್ಥಿನಿಯರು

4 weeks ago

ರಾಯಚೂರು: ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರು ಮಹಡಿ ಮೇಲಿನಿಂದ ಪಠ್ಯ, ಪುಸಕ್ತಗಳಿರುವ ಬ್ಯಾಗ್ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಜಸ್ಟಿಸ್ ಶಿವರಾಜ್ ಪಾಟೀಲ್ ಕಾಲೇಜಿನ ವಿದ್ಯಾರ್ಥಿನಿಯರು ಮಹಡಿ ಮೇಲಿನಿಂದ ಸಾಲು ಸಾಲಾಗಿ ಪಠ್ಯ ಪುಸಕ್ತಗಳು ಇರುವ ಬ್ಯಾಗ್...

ಮಳೆಯಬ್ಬರಕ್ಕೆ ಕರಾವಳಿ, ಮಲೆನಾಡಿನ ಜನ ತತ್ತರ – ಉಡುಪಿಯಲ್ಲಿ ಶಾಲಾ, ಕಾಲೇಜಿಗೆ ರಜೆ

1 month ago

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಿಲ್ಲೆಯ ಕರಾವಳಿ ಭಾಗದ ಕುಮಟ ತಾಲೂಕಿನ ಕೂಜಳ್ಳಿ, ಕೋನಳ್ಳಿ ಗ್ರಾಮ...

ಭಾರೀ ಮಳೆ- ಮಂಗಳವಾರ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ

1 month ago

-ಉಡುಪಿ ಜಿಲ್ಲಾ ಶಾಲೆಗಳಿಗೆ ರಜೆ ಮಂಗಳೂರು/ಉಡುಪಿ: ಮಂಗಳವಾರ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದರಿಂದ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ. ಇತ್ತ ಉಡುಪಿಯಲ್ಲಿ ಮಂಗಳವಾರ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಮುನ್ನೇಚ್ಚರಿಕೆ...

ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

1 month ago

ಮಂಗಳೂರು: ಕರಾವಳಿಯಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಶನಿವಾರ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 20ರಿಂದ 22ರವರೆಗೆ 200 ಮಿಮೀ ಮಳೆ ಆಗುತ್ತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ...

ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ – ಆರೋಪಿಗಳಿಗೆ ನ್ಯಾಯಾಂಗ ಬಂಧನ

2 months ago

– ಮತ್ತೆ 8 ಮಂದಿ ಆರೋಪಿಗಳ ಬಂಧನ ಮಂಗಳೂರು: ಸಹಪಾಠಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಸಿದ್ದ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೇ ಹಾಜರು ಪಡಿಸಲಾಗಿತ್ತು. ಆರೋಪಿಗಳನ್ನು ಜು.18 ರ ವರೆಗು ನ್ಯಾಯಾಂಗ ಬಂಧನಕ್ಕೆ ನೀಡಿ ಪುತ್ತೂರು...

ಮಾನ ಮರ್ಯಾದೆ ಇಲ್ವ ನಿಮಗೆ, ನಿಮ್ಮ ಹುದ್ದೆಗಾದರೂ ಗೌರವ ಬೇಡವೇ – ಶಾಸಕ ಸುರೇಶ್‍ಗೌಡ ಗರಂ

2 months ago

ಮಂಡ್ಯ: ಮಾನ ಮರ್ಯಾದೆ ಇಲ್ವ ನಿಮಗೆ? ನಿಮ್ಮ ಹುದ್ದೆಗಾದರೂ ಗೌರವ ಬೇಡವೇ? ಕಾಲೇಜಿನಲ್ಲಿ ರಾಜಕೀಯ ಮಾಡುತ್ತಿದ್ದೀರಾ? ಎಂದು ರಿಸಲ್ಟ್ ಕಡಿಮೆ ಬಂದ ಶಾಲಾ, ಕಾಲೇಜು ಪ್ರಿನ್ಸಿಪಾಲರ ವಿರುದ್ಧ ಶಾಸಕ ಸುರೇಶ್‍ಗೌಡ ಆಕ್ರೋಶಗೊಂಡಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲದ ಪ್ರವಾಸಿ ಮಂದಿರದಲ್ಲಿ ಶೈಕ್ಷಣಿಕ ಉನ್ನತಿ...