Thursday, 21st November 2019

2 weeks ago

ಅಣ್ಣ ತಮ್ಮನ ಜಗಳ, ಪೊಲೀಸರಿಗೆ ಲಾಭ – ಖಾಕಿ ಪಾಲಾದ ಅಡಿಕೆ ಬೆಳೆ

– ಆತ್ಮಹತ್ಯೆಯೊಂದೇ ದಾರಿ ಎನ್ನುತ್ತಿರುವ ರೈತ ಬೆಂಗಳೂರು: ಅಣ್ಣ ತಮ್ಮನ ಜಗಳದಿಂದ ಪೊಲೀಸರು ಲಾಭ ಪಡೆದಿದ್ದು, ಖಾಕಿ ದರ್ಪದಿಂದ ರೈತರೊಬ್ಬರು ಕಂಗಾಲಾಗಿರುವ ಘಟನೆ ನೆಲಮಂಗಲ ತಾಲೂಕಿನ ಹಲ್ಕೂರು ಗ್ರಾಮದಲ್ಲಿ ನಡೆದಿದೆ. ಅನ್ನದಾತನ ಮೇಲೆ ಪೊಲೀಸರು ದರ್ಪ ಮೆರೆದಿರುವ ಆರೋಪ ಕೇಳಿಬರುತ್ತಿದೆ. ಗ್ರಾಮದ ಹನುಮಂತರಾಯಪ್ಪ ಮತ್ತು ಸಿದ್ದಗಂಗಯ್ಯ ಇಬ್ಬರು ಅಣ್ಣ ತಮ್ಮಂದಿರು. ಈ ಇಬ್ಬರು ಸಹೋದರರ ಜಗಳ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ನ್ಯಾಯ ತೀರ್ಮಾನಕ್ಕೆಂದು ಬಂದಿದ್ದ ನೆಲಮಂಗಲ ಗ್ರಾಮಾಂತರ ಪೊಲೀಸರು ಕೈಗೆ ಬಂದಿದ್ದ ಅಡಿಕೆ ಫಸಲನ್ನು ಠಾಣೆಗೆ […]

3 weeks ago

ಮಲೆನಾಡಿನಲ್ಲಿ ಹೆಚ್ಚುತ್ತಿದೆ ಮಂಗಗಳ ಹಾವಳಿ – ತೋಟ ಆಯ್ತು, ಈಗ ಮನೆಗೆ ಪ್ರವೇಶ

– ಮಂಕಿ ಪಾರ್ಕ್ ಸ್ಥಾಪನೆಗೆ ಆಗ್ರಹ ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗಗಳ ಕಾಟ ವಿಪರೀತವಾಗುತ್ತಿದ್ದು, ಬೆಳೆಗಳನ್ನು ರಕ್ಷಿಸಿಕೊಳ್ಳುವುದು ರೈತರಿಗೆ ಸವಾಲಾಗಿ ಪರಿಣಮಿಸಿದೆ. ಅತೀವೃಷ್ಟಿಯಿಂದ ಕಂಗೆಟ್ಟ ರೈತರಿಗೆ ಮಂಗಗಳ ಕಾಟ ಇನ್ನೊಂದು ರೀತಿಯ ಸವಾಲಾಗಿದ್ದು, ಬೆಳೆಗಳನ್ನು ರಕ್ಷಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ದಶಕದಿಂದಲೂ ಮಂಗಗಳ ಕಾಟವಿದ್ದು, ಕಳೆದೆರಡು ವರ್ಷಗಳಿಂದ ಮಿತಿಮೀರಿದೆ. ಮಂಗಗಳು ತೋಟ, ಗದ್ದೆಗಳಿಗೆ ಲಗ್ಗೆ ಇಡುತ್ತಿದ್ದು, ಮನುಷ್ಯರ...

ರಸಗೊಬ್ಬರಕ್ಕಾಗಿ ಹಗಲು ರಾತ್ರಿ ಕ್ಯೂನಲ್ಲಿ ನಿಲ್ಲುತ್ತಿರುವ ರೈತರು

2 months ago

-ಗೊಬ್ಬರದ ಅಭಾವದಿಂದ ರೈತರ ಸುಲಿಗೆಗೆ ನಿಂತ ವಿತರಕರು ಚಿಕ್ಕಬಳ್ಳಾಪುರ: ಇತ್ತೀಚೆಗೆ ಮಳೆಯಾದ ಪರಿಣಾಮ ಬಯಲು ಸೀಮೆ ಭಾಗದ ಕೆಲವು ಜಿಲ್ಲೆಗಳಲ್ಲಿ ಒಣಗಿ ಹೋಗುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ಇರೋ ಬೆಳೆಯ ಉತ್ತಮ ಫಸಲು ಪಡೆಯಲು ಮುಂದಾಗಿರುವ ರೈತರು, ಮಳೆ ನಿಂತ ಮೇಲೆ ಗೊಬ್ಬರ...

ಭಾರೀ ಮಳೆಗೆ ಒಂದೇ ದಿನಕ್ಕೆ ತುಂಬಿ ಕೋಡಿ ಬಿದ್ದ ಕೆರೆ – ಬೆಳೆ ನಾಶ

2 months ago

ಹಾಸನ: ತಡರಾತ್ರಿ ಸುರಿದ ಭಾರೀ ಮಳೆಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕರೆಕೋಡಿಹಳ್ಳಿ ಗ್ರಾಮದ ಕೆರೆ ಒಂದೇ ರಾತ್ರಿಗೆ ತುಂಬಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಳೆದ ಕೆಲ ವರ್ಷದಿಂದ ಕೆರೆ ತುಂಬದೆ ಕೆರೆಕೋಡಿಹಳ್ಳಿ ಗ್ರಾಮಸ್ಥರು ಬಹಳ ತೊಂದರೆ ಅನುಭವಿಸುತ್ತಿದ್ದರು....

ಅಧಿಕಾರಿಗಳ ನಿರ್ಲಕ್ಷ್ಯ – ರೈತರ ನೂರಾರು ಎಕರೆ ಬೆಳೆ ನಾಶ

2 months ago

ರಾಯಚೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ...

ತುಂಗಭದ್ರಾ ನದಿ ಮೈದುಂಬಿ ಹರಿದರೂ ಕಾಲುವೆಗೆ ನೀರಿಲ್ಲ

3 months ago

ರಾಯಚೂರು: ಜಿಲ್ಲೆಯಲ್ಲಿ ಪ್ರವಾಹ ಸೃಷ್ಟಿಸಿದ ನದಿಗಳಲ್ಲಿ ತುಂಗಭದ್ರಾ ನದಿ ಕೂಡ ಒಂದು. ಆದರೆ ನದಿ ಮೈತುಂಬಿ ಹರಿಯುತ್ತಿದ್ದರೂ ಕಾಲುವೆಗೆ ಮಾತ್ರ ನೀರಿಲ್ಲ. ಜಲಾಶಯದಿಂದ ಟಿಎಲ್‍ಬಿಸಿ ಕೆಳಭಾಗದ ಕಾಲುವೆಗೆ ಸಮರ್ಪಕ ನೀರು ದೊರೆಯುತ್ತಿಲ್ಲ. ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನೀರಿಲ್ಲದೆ ಭತ್ತದ ಬೆಳೆ ಒಣಗುತ್ತಿದೆ....

ಕೊಡಗಿನಲ್ಲಿ ಕೊಂಚ ಕಡಿಮೆಯಾದ ವರುಣನ ಅರ್ಭಟ- ನಿಲ್ಲದ ಭೂಕುಸಿತ

3 months ago

– ನೆರವಿನ ನಿರೀಕ್ಷೆಯಲ್ಲಿ ಜನ ಕೊಡಗು: ಜಿಲ್ಲೆಯನಲ್ಲಿ ಮಳೆ ಕೊಂಚ ತಗ್ಗಿದ್ದರೂ ಮಳೆಯ ಅವಾಂತರ ಮಾತ್ರ ನಿಂತಿಲ್ಲ. ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಭೂಕುಸಿತ, ಮರಗಳು, ವಿದ್ಯುತ್ ಕಂಬಗಳು ಧರೆಗುರುಳುತ್ತಿದೆ. ಪರಿಣಾಮ ಜಿಲ್ಲೆಯ ಜನತೆ ಮಾತ್ರ ಆತಂಕದಲ್ಲಿಯೇ ದಿನದೂಡುತ್ತಿದ್ದಾರೆ. ನಿನ್ನೆಯವರೆಗೆ ಸುರಿದ ಮಳೆಯಿಂದಾಗಿ...

ಹಾವೇರಿಯಲ್ಲಿ ವರುಣನ ಆರ್ಭಟ – ಹಲವು ಕಡೆ ರಸ್ತೆ ಸಂಚಾರ ಸ್ಥಗಿತ

3 months ago

ಹಾವೇರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿನ ವರದಾ, ಧರ್ಮಾ ಮತ್ತು ಕುಮುದ್ವತಿ ನದಿಗಳು ತುಂಬಿ ಹರಿಯುತ್ತಿವೆ. ನದಿಗಳು ತುಂಬಿ ಹರಿಯುತ್ತಿದ್ದರಿಂದ ಕರ್ಜಗಿ-ಕಲಕೋಟಿ, ದೇವಗಿರಿ-ಕಳಸೂರು, ನಾಗನೂರು-ಕೂಡಲ, ಮಾಸೂರು-ಶಿಕಾರಿಪುರ, ಹಾನಗಲ್-ಬಂಕಾಪುರ ಸೇರಿದಂತೆ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ಶಿಗ್ಗಾಂವಿ ತಾಲೂಕಿನ ನಾಗನೂರು ಕೆರೆ...