Wednesday, 19th February 2020

Recent News

5 months ago

ಭಾರೀ ಮಳೆಗೆ ಒಂದೇ ದಿನಕ್ಕೆ ತುಂಬಿ ಕೋಡಿ ಬಿದ್ದ ಕೆರೆ – ಬೆಳೆ ನಾಶ

ಹಾಸನ: ತಡರಾತ್ರಿ ಸುರಿದ ಭಾರೀ ಮಳೆಗೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಕರೆಕೋಡಿಹಳ್ಳಿ ಗ್ರಾಮದ ಕೆರೆ ಒಂದೇ ರಾತ್ರಿಗೆ ತುಂಬಿ ಕೋಡಿ ಬಿದ್ದಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಳೆದ ಕೆಲ ವರ್ಷದಿಂದ ಕೆರೆ ತುಂಬದೆ ಕೆರೆಕೋಡಿಹಳ್ಳಿ ಗ್ರಾಮಸ್ಥರು ಬಹಳ ತೊಂದರೆ ಅನುಭವಿಸುತ್ತಿದ್ದರು. ಆದರೆ ತಡರಾತ್ರಿ ಬಂದ ಭಾರೀ ಮಳೆಗೆ ಒಂದೇ ದಿನದಲ್ಲಿ ಕೆರೆ ಸಂಪೂರ್ಣ ತುಂಬಿದ್ದು, ಕೋಡಿ ಬಿದ್ದ ಕೆರೆಯ ನೀರು ಗದ್ದೆಗೆ ನುಗ್ಗಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಭತ್ತದ ಬೆಳೆ ನಾಶವಾಗಿದೆ. ಅಚ್ಚರಿಯ ಸಂಗತಿ […]

5 months ago

ಅಧಿಕಾರಿಗಳ ನಿರ್ಲಕ್ಷ್ಯ – ರೈತರ ನೂರಾರು ಎಕರೆ ಬೆಳೆ ನಾಶ

ರಾಯಚೂರು: ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಂತದ ಕಾಲುವೆಗೆ ನೀರು ಬಿಟ್ಟ ಹಿನ್ನೆಲೆ ಕಾಲುವೆ ಒಡೆದು ನೂರಾರು ಎಕರೆ ಬೆಳೆ ಹಾಳಾಗಿದೆ. ರಾಯಚೂರಿನ ಗೋನಾಳ ಬಳಿ ನಿರ್ಮಾಣ ಹಂತದಲ್ಲಿರುವ ನಾರಾಯಣಪುರ ಬಲದಂಡೆ ಕಾಲುವೆಗೆ ನೀರನ್ನು ಹರಿಸಿರುವುದರಿಂದ ಹತ್ತಿ, ತೊಗರಿ ಸೇರಿ ಲಕ್ಷಾಂತರ ರೂಪಾಯಿ ಬೆಳೆ ಹಾಳಾಗಿದೆ. ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿ 126 ಕಿ.ಮೀ...

ಹಾವೇರಿಯಲ್ಲಿ ವರುಣನ ಆರ್ಭಟ – ಹಲವು ಕಡೆ ರಸ್ತೆ ಸಂಚಾರ ಸ್ಥಗಿತ

7 months ago

ಹಾವೇರಿ: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ಜಿಲ್ಲೆಯಲ್ಲಿನ ವರದಾ, ಧರ್ಮಾ ಮತ್ತು ಕುಮುದ್ವತಿ ನದಿಗಳು ತುಂಬಿ ಹರಿಯುತ್ತಿವೆ. ನದಿಗಳು ತುಂಬಿ ಹರಿಯುತ್ತಿದ್ದರಿಂದ ಕರ್ಜಗಿ-ಕಲಕೋಟಿ, ದೇವಗಿರಿ-ಕಳಸೂರು, ನಾಗನೂರು-ಕೂಡಲ, ಮಾಸೂರು-ಶಿಕಾರಿಪುರ, ಹಾನಗಲ್-ಬಂಕಾಪುರ ಸೇರಿದಂತೆ ಹಲವು ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ಶಿಗ್ಗಾಂವಿ ತಾಲೂಕಿನ ನಾಗನೂರು ಕೆರೆ...

ಜಮೀನಿಗೆ ನುಗ್ಗಿದ ಡ್ಯಾಂ ಹಿನ್ನೀರು- ರೈತರ ಬೆಳೆ ನೀರು ಪಾಲು

7 months ago

ವಿಜಯಪುರ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ವಿಜಯಪುರದ ಆಲಮಟ್ಟಿ ಲಾಲಬಾಹ್ದೂರ ಶಾಸ್ತ್ರಿ ಜಲಾಶಯಕ್ಕೆ 2 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಧಿಕ ನೀರು ಹರಿದು ಬಂದ ಕಾರಣ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, 2 ಲಕ್ಷ ಕ್ಯೂಸೆಕ್ ನೀರನ್ನು ನಾರಾಯಣಪುರ...

ಸಾಲಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ

7 months ago

ಕೋಲಾರ: ಸಾಲ ಬಾಧೆ ತಾಳಲಾರದೆ ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅರಿಕೆರೆ ಗ್ರಾಮದಲ್ಲಿ ನಡೆದಿದೆ. ಅರಿಕೆರೆ ಗ್ರಾಮದ ನಿವಾಸಿ 26 ವರ್ಷದ ರಾಜೇಶ್ ಆತ್ಮಹತ್ಯೆ ಮಾಡಿಕೊಂಡ ಯುವ ರೈತ. ಟೊಮೆಟೋ ಬೆಳೆ ಕೈಕೊಟ್ಟ ಕಾರಣ...

ಕೊನೆಗೂ ಮಂಡ್ಯ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ

7 months ago

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆ ಮೂಲಕ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಈ ಮೂಲಕ ನೀರು ಹರಿಸುವಂತೆ ನಿರಂತರವಾಗಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಜಯಸಿಕ್ಕಿದೆ. ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ...

ಹಾಸನದಲ್ಲಿ ಮೌನಿಯಾದ ವರುಣ- ಹಾವೇರಿಯಲಿ ಉತ್ತಮ ಮಳೆ

8 months ago

ಹಾಸನ: ಕಳೆದ ವರ್ಷ ಭಾರೀ ಮಳೆಯಾಗಿದ್ದ ಹಾಸನದಲ್ಲಿ ಈ ಬಾರಿ ಮಳೆರಾಯ ಮೌನಿ ಆಗಿದ್ದು, ರೈತರು ಕಂಗಾಲಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಇಲ್ಲಿವರೆಗೆ ವಾಡಿಕೆಗಿಂತ ಶೇ.20ರಷ್ಟು ಮಳೆ ಕಡಿಮೆ ಆಗಿದೆ. ಜೂನ್ 2ನೇ ವಾರದಿಂದ ಮಳೆ ಕೈಕೊಟ್ಟಿದ್ದು, ಬಿತ್ತನೆಗೂ ಹಿನ್ನಡೆ ಆಗಿದೆ. ಸರಿಯಾದ...

ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ಮೊರೆ ಹೋದ ರೈತರು

8 months ago

ಧಾರವಾಡ: ಜಿಲ್ಲೆಯ ನವಲಗುಂದದಲ್ಲಿ ಮುಂಗಾರು ಮಳೆ ನಂಬಿ ಬಿತ್ತನೆ ಮಾಡಿದ್ದ ರೈತರು ಈಗ ತಮ್ಮ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ಗಳು ಮೊರೆ ಹೋಗಿದ್ದಾರೆ. ಹೌದು. ಸಾವಿರಾರು ರೂಪಾಯಿ ಖರ್ಚು ಮಾಡಿ ರೈತರು ಬಾಡಿಗೆ ನೀರು ತರಿಸಿ ತಮ್ಮ ಬೆಳೆಗಳು ಉಸಿರಾಡುವಂತೆ ಮಾಡುತ್ತಿದ್ದಾರೆ. ಕಳೆದ...