Tuesday, 19th November 2019

5 months ago

ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಏರಿಕೆಯನ್ನ ಸಮರ್ಥಿಸಿಕೊಂಡ ಸಚಿವ ತುಕಾರಂ

ಬಳ್ಳಾರಿ: ವೈದ್ಯಕೀಯ ವಿದ್ಯಾರ್ಥಿಗಳ ಶುಲ್ಕ ಏರಿಕೆ ಇಂದಿನ ವ್ಯವಸ್ಥೆಗೆ ಅನುಗುಣವಾಗಿದೆ ಎಂದು ಶುಲ್ಕ ಏರಿಕೆ ಕ್ರಮವನ್ನು ವೈದ್ಯಕೀಯ ಶಿಕ್ಷಣ ಸಚಿವ ಈ. ತುಕಾರಾಂ ಸಮರ್ಥಿಸಿಕೊಂಡಿದ್ದಾರೆ. ಜಿಲ್ಲೆಯ ಜಿಂದಾಲ್‍ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಕೊಡುವ ನಿಟ್ಟಿನಲ್ಲಿ ಎಲ್ಲಾ ಸೌಕರ್ಯಗಳನ್ನು ಒದಗಿಸಬೇಕಾದಾಗ ಹಣಕಾಸಿನ ಅವಶ್ಯಕತೆ ಇರುತ್ತದೆ. ಹಾಗಾಗಿ ಶುಲ್ಕ ಏರಿಕೆ ಅನಿವಾರ್ಯವಾಗಿದೆ ಎಂದು ಹೇಳಿದರು. ಇದೇ ವೇಳೆ ಚುನಾವಣೆ ನಂತರ ಜಿಲ್ಲೆಯ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ಬಳ್ಳಾರಿಗೆ […]

5 months ago

ಬ್ರಿಮ್ಸ್​ನಲ್ಲಿ ಕೊಳಕು ಬೆಡ್, ಕೋಣೆಗಳು- ಅವ್ಯವಸ್ಥೆ ಕಂಡು ಸಚಿವರು ಕೆಂಡಾಮಂಡಲ

ಬೀದರ್: ಬ್ರಿಮ್ಸ್ ಆಸ್ಪತ್ರೆಯಲ್ಲಿದ್ದ ಕೊಳಕು ಬೆಡ್, ಕೊಠಡಿಗಳು ಹಾಗೂ ಅವ್ಯವಸ್ಥೆಯನ್ನು ಕಂಡು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಹಾಗೂ ವೈದ್ಯಕೀಯ ಸಚಿವ ಇ. ತುಕಾರಾಂ ಅವರು ಸಿಟ್ಟಿಗೆದ್ದು ಆಸ್ಪತ್ರೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು. ಇಂದು ಬ್ರಿಮ್ಸ್ ಆಸ್ಪತ್ರೆಯನ್ನು ಪರಿಶೀಲಿಸಲು ಮೂವರು ಸಚಿವರು ಹಾಗೂ ಎಂಪಿ ಭೇಟಿ ಕೊಟ್ಟಿದ್ದರು. ಆರೋಗ್ಯ ಸಚಿವ ಶಿವಾನಂದ ಪಾಟೀಲ್, ವೈದ್ಯಕೀಯ ಸಚಿವ...