Monday, 27th May 2019

2 days ago

ನನ್ನ ಗೆಲುವಿಗೆ ದೇವೇಗೌಡರು ವರವಾದ್ರು: ಜಿ.ಎಸ್ ಬಸವರಾಜು

ತುಮಕೂರು: ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡರು ವರವಾಗಿ ಬಂದಿದ್ದೇ ನನ್ನ ಗೆಲುವಿಗೆ ಕಾರಣವಾಯ್ತು ಎಂದು ತುಮಕೂರು ಲೋಕಸಭಾ ಬಿಜೆಪಿ ವಿಜೇತ ಅಭ್ಯರ್ಥಿ ಜಿ.ಎಸ್ ಬಸವರಾಜು ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುದ್ದಹನುಮೇಗೌಡರು ಏನಾದರೂ ಸ್ಪರ್ಧೆ ಮಾಡಿದಿದ್ದರೆ ನನಗೆ ಕಷ್ಟವಾಗುತ್ತಿತ್ತು. ದೇವೇಗೌಡರು ಬಂದು ನನ್ನ ಗೆಲುವಿನ ಹಾದಿಯನ್ನು ಸುಲಭಗೊಳಿಸಿದರು ಎಂದು ತಮ್ಮ ವಿಜಯದ ವಿಮರ್ಶೆ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‍ನ ಮಾಜಿ ಶಾಸಕ ಕೆ.ಎನ್ ರಾಜಣ್ಣ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ ಎನ್ನುವುದು ಸರಿಯಲ್ಲ. ಎಲ್ಲಾ ಪಕ್ಷದವರು ನನಗೆ ಮತ ಹಾಕಿದ್ದಾರೆ. […]

2 days ago

ನಿಖಿಲ್ ಸೋತಿದ್ದಕ್ಕೆ ಬೆರಳನ್ನೇ ಕತ್ತರಿಸಿಕೊಂಡ ಅಭಿಮಾನಿ?

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಸೋತಿದ್ದಕ್ಕೆ ಅಭಿಮಾನಿಯೊಬ್ಬ ತನ್ನ ಬೆರಳನ್ನು ಕತ್ತರಿಸಿಕೊಂಡಿದ್ದಾನೆ. ಜಿಲ್ಲೆಯ ಮದ್ದೂರು ತಾಲೂಕಿನ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಿಖಿಲ್ ಸೋತಿದ್ದಕ್ಕೆ ಅಭಿಮಾನಿ ಮತದಾನ ಮಾಡಿದ ನಂತರ ಕೈಗೆ ಶಾಯಿ ಹಾಕಿಸಿಕೊಂಡಿದ್ದ ಬೆರಳನ್ನೇ ಕತ್ತರಿಸಿಕೊಂಡಿದ್ದಾನೆ ಎಂದು ಹೇಳಲಾಗುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಬೆರಳು ಕತ್ತರಿಸಿಕೊಂಡಿದ್ದ ಫೋಟೋ ಹರಿದಾಡುತ್ತಿದೆ. ನಿಖಿಲ್ ಸೋತ ಮೇಲೆ ಅವರಿಗೆ...

ಎಚ್‍ಡಿಡಿ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು: ಪ್ರಜ್ವಲ್

3 days ago

ಹಾಸನ: ದೇವೇಗೌಡರ ಕೊನೆಯ ಹೋರಾಟವನ್ನು ವಿಜಯೋತ್ಸವದಲ್ಲೇ ನಾಂದಿ ಹಾಡಬೇಕು ಎಂಬ ಆಸೆಯಿಂದ ರಾಜೀನಾಮೆ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ನೂತನ ಸಂಸದರಾಗಿ ಆಯ್ಕೆಯಾಗಿರುವ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಪ್ರಜ್ವಲ್ ಅವರು, ನಮ್ಮ ಜಿಲ್ಲೆ ಹಾಗೂ ಇಡೀ ರಾಜ್ಯದ...

ನಾನು ಎಷ್ಟು ಮತಗಳಿಂದ ಮುನ್ನಡೆಯಲ್ಲಿದ್ದೇನೆ: ಸನ್ನಿ ಲಿಯೋನ್

3 days ago

ಮುಂಬೈ: ಬಾಲಿವುಡ್ ಬೆಡಗಿ ಸನ್ನಿ ಲಿಯೋನ್ ನಾನು ಎಷ್ಟು ಮತಗಳಿಂದ ಮುನ್ನಡೆಯಲ್ಲಿ ಇದ್ದೇನೆ ಎಂದು ಟ್ವೀಟ್ ಮಾಡುವುದರ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಯಲ್ಲಿ ನಿರೂಪಕರೊಬ್ಬರು ತಮ್ಮ ಡಿಬೇಟ್ ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸನ್ನಿ ಡಿಯೋಲ್ ಹೆಸರು ಹೇಳುವ...

ಅಂಬಿ ಪುಣ್ಯತಿಥಿಗೆ ಸುಮಲತಾರಿಂದ ಜಯದ ಉಡುಗೊರೆ

3 days ago

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರು ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಮಂಡ್ಯದಲ್ಲಿ ಜಯಭೇರಿ ಹಿನ್ನೆಲೆ ಅಂಬರೀಶ್ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಅಂಬರೀಶ್ ಅವರು ನಮ್ಮನ್ನ ಅಗಲಿ ಇಂದಿಗೆ 6 ತಿಂಗಳುಗಳೇ ಕಳೆದಿದೆ. ಈ ಹಿನ್ನೆಲೆಯಲ್ಲಿ 6 ನೇ ತಿಂಗಳ...

ನಾಲ್ಕನೇ ಬಾರಿ ಲೋಕ ಗದ್ದುಗೆ ಏರಿದ ಗದ್ದಿಗೌಡರ್

3 days ago

ಬಾಗಲಕೋಟೆ: ಜಿಲ್ಲೆಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ ಗದ್ದೀಗೌಡರ್ 1,63,054 ಅಂತರ ಮತದಿಂದ ಗೆಲುವು ಸಾಧಿಸಿ ನಾಲ್ಕನೇಯ ಬಾರಿ ಲೋಕಸಭೆ ಪ್ರವೇಶಿಸಿದ್ದಾರೆ. ಗದ್ದೀಗೌಡರ್ ಕಾಂಗ್ರೆಸ್ ಅಭ್ಯರ್ಥಿಯಾದ ವೀಣಾ ಕಾಶಪ್ಪನವರ ವಿರುದ್ಧ 1,63,054 ಅಂತರ ಮತ ಪಡೆದಿದ್ದಾರೆ. ಗದ್ದೀಗೌಡರ್ 6,36,953 ಮತ...

ಮಂಡ್ಯದಲ್ಲಿ ಇಂದು ಕೂಡ ಕೇಬಲ್ ಕಟ್

4 days ago

ಮಂಡ್ಯ: ಲೋಕಸಭಾ ಚುನಾವಣೆಯ ಫಲಿತಾಂಶ ದಿನವೂ ಹಲವೆಡೆ ಕೇಬಲ್ ಕಟ್ ಮಾಡಲಾಗಿದೆ. ದುಷ್ಕರ್ಮಿಗಳು ರಾತ್ರೋರಾತ್ರಿ ಕೇಬಲ್ ವಯರ್ ಗಳನ್ನು ಕಟ್ ಮಾಡಿದ್ದಾರೆ. ಆದರೆ ಯಾವ ಉದ್ದೇಶಕ್ಕೆ ದುಷ್ಕರ್ಮಿಗಳು ಕೇಬಲ್ ಕಟ್ ಮಾಡಿದ್ದಾರೆ ಎಂಬುದು ತಿಳಿದು ಬಂದಿಲ್ಲ. ಸದ್ಯ ಕೇಬಲ್ ನೆಟ್‍ವರ್ಕ್ ಸಿಬ್ಬಂದಿ...

ಗುರುವಾರ ‘ಮಹಾಭಾರತ’ದ ಮಹಾ ತೀರ್ಪು

4 days ago

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಗುರುವಾರ ಅಂತ್ಯವಾಗಲಿದೆ. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಮತ ಎಣಿಕೆಗೆ ರಾಜ್ಯಗಳ ಜಿಲ್ಲಾ ಕೇಂದ್ರಗಳು ಸಜ್ಜಾಗಿವೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್...