Thursday, 5th December 2019

Recent News

2 years ago

ಈ ಬಾರಿ ನನ್ನ ನೇತೃತ್ವದಲ್ಲೇ ನಡೆಯಲಿದೆ ಚುನಾವಣೆ: ಸಿದ್ದರಾಮಯ್ಯ

ಮೈಸೂರು: ಈ ಬಾರಿ ನನ್ನ ನೇತೃತ್ವದಲ್ಲೇ 2018ರ ವಿಧಾನಸಭಾ ಚುನಾವಣೆ ನಡೆಯುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನ ಹುಣಸೂರು ಕ್ಷೇತ್ರದಲ್ಲಿ ಚುನಾವಣೆಯ ಕಾರ್ಯಕರ್ತರ ಸಭೆಯಲ್ಲಿ ಮಾತಾನಡಿದ ಅವರು, ಸಾಮಾನ್ಯವಾಗಿ ಕೆಪಿಸಿಸಿ ಅಧ್ಯಕ್ಷರ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಆದರೆ ಈ ಬಾರಿ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ. ಇದನ್ನು ಹೈಕಮಾಂಡ್ ಲಿಖಿತ ರೂಪದಲ್ಲಿ ಹೇಳಿದೆ. ಈ ರೀತಿ ಹೇಳಿದೆ ಅಂದರೆ ನನ್ನ ಮೇಲೆ ಅವರಿಗೆ ಒಲವು ಹೆಚ್ಚಿದೆ ಅನ್ನುವುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಕಾರ್ಯಾಕ್ರಮದಲ್ಲಿ ಎಲ್ಲರ […]

2 years ago

ಇಂದು ಬಿಬಿಎಂಪಿ ಮೇಯರ್, ಉಪಮೇಯರ್ ಚುನಾವಣೆ: ಕಚೇರಿ ಸುತ್ತ ಪೊಲೀಸ್ ಭದ್ರತೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್, ಉಪಮೇಯರ್ ಯಾರು ಎಂಬ ಪ್ರಶ್ನೆಗೆ ಇವತ್ತು ಉತ್ತರ ಸಿಗಲಿದೆ. ಇಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಮೇಯರ್ ಅಭ್ಯರ್ಥಿ ಸಂಪತ್ ರಾಜು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಮೇಯರ್ ಅಭ್ಯರ್ಥಿ ಮುನಿಸ್ವಾಮಿ, ಉಪ ಮೇಯರ್ ಅಭ್ಯರ್ಥಿಯಾಗಿ ಮಮತ ವಾಸುದೇವ್ ನಾಮ ಪತ್ರ ಸಲ್ಲಿಸಿದ್ದಾರೆ. ಪದ್ಮಾವತಿ ಅವ್ರನ್ನ ಉಪ...

ಎಲೆಕ್ಷನ್ ಬಂದ್ರೆ ಗೂಬೆ, ಆಮೆಗಳಿಗೆ ಕಂಟಕ – ಮಾಟಕ್ಕೆ ಮೊರೆ ಹೋಗ್ತಾರಂತೆ ರಾಜಕಾರಣಿಗಳು!

2 years ago

ಬೆಂಗಳೂರು: ಎಲೆಕ್ಷನ್ ಬಂದ್ರೆ ಗೂಬೆಗಳಿಗೆ ಕಂಟಕವಾದ್ರೆ, ಕಾಡುಪಾಪ-ಆಮೆಗಳ ಪ್ರಾಣಹರಣವಾಗುತ್ತೆ. ಅಚ್ಚರಿಯಾದ್ರೂ ಇದು ಘೋರ ಸತ್ಯ. ರಾಜಕೀಯ ಚದುರಂಗದಾಟಕ್ಕೆ ಆಮೆ, ಗೂಬೆ, ಕಾಡುಪಾಪ ವಿಲವಿಲನೆ ಒದ್ದಾಡಿ ಕೊನೆಯುಸಿರೆಳೆಯುತ್ತವಂತೆ. ಇದು ಖುದ್ದು ವೈಲ್ಡ್ ಲೈಫ್ ಕ್ರೈಂ ಕಂಟ್ರೋಲ್ ಬ್ಯೂರೋದವರು ಪಬ್ಲಿಕ್ ಟಿವಿಗೆ ಕೊಟ್ಟ ಶಾಕಿಂಗ್...

ಯಡಿಯೂರಪ್ಪ, ಅಮಿತ್ ಶಾ ಜೈಲಿಗೆ ಹೋಗಿ ಬಂದವರು: ಸಿದ್ದರಾಮಯ್ಯ

2 years ago

ಬೆಳಗಾವಿ: 2018ರ ವಿಧಾನಸಭೆ ಚುನಾವಣೆಯಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುತ್ತೇವೆ. ಬಿಜೆಪಿಯವರು ಎಷ್ಟೆ ತಿಪ್ಪರಲಾಗ ಹಾಕಿದರೂ ಅಧಿಕಾರಕ್ಕೆ ಬರುವುದಿಲ್ಲ. ಅಮಿತ್ ಶಾ ಹಾಗೂ ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿ...

2018ಕ್ಕೂ ನಾನೇ ಸಿಎಂ ಅಂತಿದ್ದ ಸಿದ್ದರಾಮಯ್ಯ ಉಲ್ಟಾ-ಸಿಎಂ ಕನಸಿಗೆ ಬ್ರೇಕ್ ಹಾಕ್ತಾ ಹೈಕಮಾಂಡ್?

2 years ago

ಮೈಸೂರು: ಹೋದಲ್ಲಿ ಬಂದಲ್ಲಿ, ಈ ಬಾರಿಯೂ ಕಾಂಗ್ರೆಸ್ ಗೆಲ್ಲುತ್ತೆ, ಮತ್ತೆ ನಾನೇ ಸಿಎಂ ಆಗುತ್ತೇನೆ ಎಂದು ಹೇಳುತ್ತಿದ್ದ ಸಿಎಂ ಸಿದ್ದರಾಮಯ್ಯ ಬುಧವಾರ ಉಲ್ಟಾ ಹೊಡೆದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಆದ್ರೆ ನಾನೇ ಮುಖ್ಯಮಂತ್ರಿ ಆಗ್ತೀನಿ...

ಡಿಸೆಂಬರ್‍ ನಲ್ಲಿ ರೆಬೆಲ್ ಶಾಸಕರು ಕಾಂಗ್ರೆಸ್‍ಗೆ ಎಂದ ಸಿಎಂ-ದೆಹಲಿಯಲ್ಲಿಂದು ಕೇಂದ್ರ ಸಚಿವರ ಜೊತೆ ಚರ್ಚೆ

2 years ago

ಬೆಂಗಳೂರು: ಜೆಡಿಎಸ್ ರೆಬಲ್ ಶಾಸಕರು ಕಾಂಗ್ರೆಸ್ ಸೇರುವುದು ಪಕ್ಕಾ ಆಗಿದೆ. ಬುಧವಾರ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಜೊತೆ ನಡೆದ ಸಭೆಯಲ್ಲಿ ಅಂತಿಮ ಹಂತದ ಮಾತುಕತೆಯಾಗಿದ್ದು ಡಿಸೆಂಬರ್ ಅಥವಾ ಜನವರಿ ಮೊದಲ ವಾರದಲ್ಲಿ ಕಾಂಗ್ರೆಸ್ ಸೇರಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ....

ನಾನು ಯುದ್ಧಕ್ಕೆ ನಿಲ್ಲೋ ಕಾಲ ಬಂದಿದೆ: ಹೆಚ್.ಡಿ.ದೇವೇಗೌಡ

2 years ago

ಹಾಸನ: ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಈಗಿನಿಂದಲೇ ಚುನಾವಣಾ ರಣತಂತ್ರ ರೂಪಿಸುತ್ತಿರುವುದರಿಂದ ನಾನು ಯುದ್ಧಕ್ಕೆ ಇಳಿಯುವ ಕಾಲ ಸನ್ನಿಹಿತವಾಗಿದೆ ಎಂದು ಜೆಡಿಎಸ್ ವರಿಷ್ಠ ನಾಯಕ ಹೆಚ್.ಡಿ.ದೇವೇಗೌಡರು ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಹಾಸನ ಜಿಲ್ಲೆಯ ಬೂಕನಬೆಟ್ಟದಲ್ಲಿ ಮಾತನಾಡಿದ ಅವರು, ನಾನು ಮೊನ್ನೆ...

ಎಲೆಕ್ಷನ್ ಸಮೀಪಿಸುತ್ತಿದ್ದಂತೆ ಹುತ್ತದಿಂದ ಹಾವುಗಳು ಹೊರಬರುತ್ತವೆ: ವಿನಯ್ ಕುಲಕರ್ಣಿ

2 years ago

ಧಾರವಾಡ: ಚುನಾವಣೆ ಸಮೀಪಿಸುತ್ತಿದ್ದಂತೆ ಹುತ್ತದಿಂದ ಅನೇಕ ಹಾವುಗಳು ಹೊರ ಬರುತ್ತವೆ. ನೋಡೋಣ ಇನ್ನೂ ಯಾವ ಯಾವ ಹಾವುಗಳು ಬರುತ್ತವೆ ಎಂದು ಸಚಿವ ವಿನಯ್ ಕುಲಕರ್ಣಿ ನಟ ಉಪೇಂದ್ರ ಅವರ ರಾಜಕೀಯ ಪ್ರವೇಶಕ್ಕೆ ಟಾಂಗ್ ನೀಡಿದ್ದಾರೆ. ರಾಜಕೀಯಕ್ಕೆ ಬರೋದು ಅವರವರ ಆಸಕ್ತಿ ಅವರಿಗೆ...