Monday, 26th August 2019

Recent News

2 years ago

ಗೆದ್ದದ್ದು ಕಾಂಗ್ರೆಸ್ಸಲ್ಲ, ಹಣದ ಹೊಳೆ: ಜಗದೀಶ್ ಶೆಟ್ಟರ್ ವಿಶ್ಲೇಷಣೆ

ಉಡುಪಿ: ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಹಣದ ಹೊಳೆ ಗೆದ್ದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಇಂದು ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿಕೊಟ್ಟ ಅವರು ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ ಶ್ರೀಕೃಷ್ಣನ ದರ್ಶನ ಪಡೆದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಹೇಗಾದ್ರು ಮಾಡಿ ಗೆಲ್ಲಲೇ ಬೇಕು ಎಂದು ಅಂತ ಮುಖ್ಯಮಂತ್ರಿಗಳು ನಿರ್ಧಾರ ಮಾಡಿದ್ದರು. ಅದರಂತೆ ಹಣದ ಹೊಳೆಯನ್ನು ಹರಿಸಿ ಗೆದ್ದಿದ್ದಾರೆ ಎಂದು […]

2 years ago

ಗುಂಡ್ಲುಪೇಟೆ, ನಂಜನಗೂಡು ಉಪಚುನಾವಣಾ ಪ್ರಚಾರಕ್ಕಾಗಿ ದೂರದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಕಾರ್ಯಕರ್ತರು

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಿಂದ ಕಾಂಗ್ರೆಸ್ ಕಾರ್ಯಕರ್ತರನ್ನು ಗುಂಡ್ಲುಪೇಟೆ ಮತ್ತು ನಂಜನಗೂಡು ಉಪಚುನಾವಣೆ ಪ್ರಚಾರಕ್ಕಾಗಿ ಕರೆಸುತ್ತಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ 500 ಕ್ಕೂ ಹೆಚ್ಚು ಕಾರ್ಯಕರ್ತರು ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯ ಪ್ರಚಾರಕ್ಕೆ ಮೈಸೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಕ್ಷೇತ್ರದ ಶಾಸಕ ಡಾ ಕೆ.ಸುಧಾಕರ್ ಕಾಂಗ್ರೆಸ್ ಕಾರ್ಯಕರ್ತರಿಗೆ 10 ವೋಲ್ವೋ ಬಸ್ ವ್ಯವಸ್ಥೆ ಮಾಡಿದ್ದಾರೆ. ಶಾಸಕರ ತಂದೆ...

ಕಾಂಗ್ರೆಸ್ ಸಹವಾಸ ಮಾಡಿದವ್ರು ಧೂಳಿಪಟ ಆಗ್ತಾರೆ: ಅನಂತ್‍ಕುಮಾರ್

2 years ago

ಬೆಂಗಳೂರು: ಅಖಿಲೇಶರಿಗೆ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಕಾಂಗ್ರೆಸ್ ಜೊತೆ ಹೋಗಬೇಡ ಅಂದ್ರು ಕೇಳಲಿಲ್ಲ. ಈಗ ಯಾರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಸಹವಾಸ ಮಾಡುತ್ತಾರೋ ಅವರು ಧೂಳಿಪಟ ಆಗ್ತಾರೆ ಎಂದು ಅಖಿಲೇಶ್ ಯಾದವ್‍ರ ವಿಚಾರದಲ್ಲಿ ಸಾಬೀತಾಗಿದೆ ಎಂದು ಕೇಂದ್ರ...

ಪಂಚ ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಹಣ, ಮದ್ಯ, ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ?

2 years ago

ಐದು ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ಮಾರ್ಚ್ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇಲ್ಲಿ ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣ, ಮದ್ಯ, ಡ್ರಗ್ಸ್ ಪ್ರಮಾಣದ ಮಾಹಿತಿಯನ್ನು ನೀಡಲಾಗಿದೆ. ಹಣ: 2017ರ ಚುನಾವಣೆ ಸಂದರ್ಭದಲ್ಲಿ ದಾಖಲೆ ಇಲ್ಲದ ಒಟ್ಟು 184.85 ಕೋಟಿ ರೂಪಾಯಿ ನಗದು...

ನಾಲ್ಕು ರಾಜ್ಯಗಳಲ್ಲಿ ಮೋದಿ ಭರ್ಜರಿ ಕಮಾಲ್

2 years ago

– ಚುನಾವಣೋತ್ತರ ಸಮೀಕ್ಷೆಯಲ್ಲಿ ಕಮಲ ಕಿಲಕಿಲ – ಆನೆ ಜೊತೆ ಸೈಕಲ್ ತುಳಿಯಲು ಅಖಿಲೇಶ್ ಸಿದ್ದ ನವದೆಹಲಿ: ದೇಶವೇ ಕುತೂಹಲದಿಂದ ಕಾಯುತ್ತಿದ್ದ ಪಂಚರಾಜ್ಯಗಳ ಚುನಾವಣೋತ್ತರ ಸಮೀಕ್ಷೆಯ ಅಂಕಿ-ಅಂಶಗಳು ಬಹಿರಂಗವಾಗಿವೆ. ಉತ್ತರ ಪ್ರದೇಶದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಪಂಜಾಬ್‍ನಲ್ಲಿ ಆಪ್, ಗೋವಾ...

ಉತ್ತರಪ್ರದೇಶದ ಗದ್ದುಗೆ ಯಾರಿಗೆ: ಸಮೀಕ್ಷೆಗಳ ಫಲಿತಾಂಶ ಇಲ್ಲಿದೆ

2 years ago

ನವದೆಹಲಿ: ಉತ್ತರಪ್ರದೇಶದಲ್ಲಿ ಈ ಬಾರಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆಯಿದೆ. ಟೈಮ್ಸ್ ನೌ ಹೊರತು ಪಡಿಸಿ ಉಳಿದ ಚುನಾವಣೋತ್ತರ ಸಮೀಕ್ಷೆಗಳು ಬಿಜೆಪಿ 190 ಅಸುಪಾಸಿನಲ್ಲಿ ಸ್ಥಾನಗಳನ್ನು ಗೆಲ್ಲಲ್ಲಿದೆ ಎಂದು ಭವಿಷ್ಯ ನುಡಿದಿದೆ. ಹೀಗಾಗಿ ಇಲ್ಲಿ ಎಲ್ಲ ಸಮೀಕ್ಷೆಗಳ ವಿವರವನ್ನು ನೀಡಲಾಗಿದೆ. ಈ...

ಲೋಕಸಭಾ ವೋಟ್ ನೋಡಿದ್ರೆ ಉತ್ತರ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಬಹುದು?

2 years ago

ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಗದ್ದುಗೆಯನ್ನು ಯಾರು ಏರಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ. 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ...

ನಾನು ಕಾಂಗ್ರೆಸ್‍ಗೆ ಸೇರುತ್ತಿರುವುದು ಯಾಕೆ: ಕೇಶವಮೂರ್ತಿ ಉತ್ತರಿಸಿದ್ದು ಹೀಗೆ

3 years ago

ಮೈಸೂರು: ನಾನು ಜನರ ಮತ್ತು ಅಭಿಮಾನಿಗಳ ಆಸೆಯಂತೆ ಕಾಂಗ್ರೆಸ್‍ಗೆ ಸೇರ್ಪಡೆ ಆಗುತ್ತಿದ್ದೇನೆ ಎಂದು ಜೆಡಿಎಸ್ ಪಕ್ಷದ ಮುಖಂಡ ಕಳಲೆ ಕೇಶವಮೂರ್ತಿ ಹೇಳಿದ್ದಾರೆ. ಇಂದು ಕೇಶವಮೂರ್ತಿ ಆಪ್ತರು ಮತ್ತು ಬೆಂಬಲಿಗರ ಸಭೆ ಕರೆದಿದ್ದರು. ಈ ಸಭೆಯ ನಂತರ ಜೆಡಿಎಸ್ ನಿಂದ ಹೊರ ಬರುತ್ತಿರುವುದಾಗಿ...