Tag: H.Prasanna

  • CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

    CET: ಎಂಜಿನಿಯರಿಂಗ್ ಆಪ್ಷನ್ಸ್ ದಾಖಲು ಆರಂಭ- ಕೆಇಎ

    ಬೆಂಗಳೂರು: ವೈದ್ಯಕೀಯ ಕೋರ್ಸ್ ಹೊರತುಪಡಿಸಿ, ಎಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಹೆಚ್‌ಎಸ್ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಲಿಂಕ್ ಬಿಟ್ಟಿದ್ದು, ಜುಲೈ 15ರವರೆಗೆ ಅವಕಾಶ ನೀಡಿದೆ.

    ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಹೋಮಿಯೋಪತಿ ಮತ್ತು ಯುನಾನಿ, ಬಿಎಸ್‌ಸಿ ನರ್ಸಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ ಕೋರ್ಸ್‌ಗಳಿಗೆ ಸಂಬಂಧಿಸಿದ ಸೀಟ್ ಮ್ಯಾಟ್ರಿಕ್ಸ್ ಸಂಬಂಧಪಟ್ಟ ಇಲಾಖೆಗಳಿಂದ ಇನ್ನೂ ಬಂದಿಲ್ಲ. ಹೀಗಾಗಿ ಮ್ಯಾಟ್ರಿಕ್ಸ್ ಬಂದ ನಂತರ ಈ ಕೋರ್ಸ್‌ಗಳ ಪ್ರವೇಶಕ್ಕೂ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸೂಪರ್ ಮಾರ್ಟ್‌ನಲ್ಲಿ ಖರೀದಿಸಿ, ಬಳಿಕ ಬಿಲ್ ಕಟ್ಟು ಅಂದ್ರೆ ಚಾಕು ತೋರಿಸಿ ಎಸ್ಕೇಪ್

    ಅಣಕು ಫಲಿತಾಂಶವನ್ನು ಜುಲೈ 19ರಂದು ಪ್ರಕಟಿಸಲಾಗುವುದು. ಅದರ ಬಳಿಕ ಆದ್ಯತೆಗಳನ್ನು ಅದಲು- ಬದಲು ಮಾಡಿಕೊಳ್ಳಲು ಜು.22ರವರೆಗೆ ಅವಕಾಶ ಇರುತ್ತದೆ. ಜುಲೈ 25ರಂದು ಅಂತಿಮ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಖಾಸಗಿ ಮೆಡಿಕಲ್ ಲಾಬಿಗೆ ಮಣಿದ ಸರ್ಕಾರ, ಹೈಕೋರ್ಟ್ ಆದೇಶ ಸ್ವಾಗತಾರ್ಹ: ಆರ್ ಅಶೋಕ್

    ಅಭ್ಯರ್ಥಿಗಳು ಸೀಟ್ ಮ್ಯಾಟ್ರಿಕ್ಸ್ ನೋಡಿಕೊಂಡು ಇಚ್ಛೆ/ಆಯ್ಕೆಗಳನ್ನು ದಾಖಲಿಸುವಾಗ ಆದ್ಯತಾ ಕ್ರಮಗಳನ್ನು ಅನುಸರಿಸಬೇಕು. ಈ ಕುರಿತ ಹೆಚ್ಚಿನ ಮಾಹಿತಿಯನ್ನು ಯುಜಿಸಿಇಟಿ-25 ಸೀಟು ಹಂಚಿಕೆಯ ಮಾಹಿತಿ ಪುಸ್ತಕದಲ್ಲಿ ನೀಡಿರುವ ಸೂಚನೆಗಳನ್ನು ಓದಿಕೊಳ್ಳಬೇಕು. ಅಲ್ಲದೆ, ಕೆಇಎ ವಿಕಸನ ಯೂಟ್ಯೂಬ್ ಚಾನಲ್‌ನಲ್ಲಿ ಇರುವ ವೀಡಿಯೊ ಕೂಡ ನೋಡಬಹುದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರದಲ್ಲಿ ಗೊಂದಲ ಏಕೆ? ಹೈಕಮಾಂಡ್ ಏನೂ ಇಲ್ಲ ಅಂದಿದೆ: ಸತೀಶ್ ಜಾರಕಿಹೊಳಿ

    ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಕೃಷಿ ವಿಜ್ಞಾನ ಕೋರ್ಸ್‌ಗಳಿಗೆ ಪ್ರಾಕ್ಟಿಕಲ್ ರಾಂಕ್ ಪಡೆದಿರುವ ಅಭ್ಯರ್ಥಿಗಳು, ಪ್ರಾಕ್ಟಿಕಲ್ ಮತ್ತು ರೆಗ್ಯುಲರ್ ಸೀಟುಗಳಿಗೆ ಪ್ರತ್ಯೇಕವಾಗಿಯೇ ಆಪ್ಷನ್ಸ್ ದಾಖಲಿಸಬೇಕು ಎಂದು ತಿಳಿಸಿದರು. ಇದನ್ನೂ ಓದಿ: ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಕಾಡಾನೆ; 2 ಗಂಟೆ ನಿಂತ ರೈಲು – Video ನೋಡಿ..

    ರಾಷ್ಟ್ರೀಯ ವೈದ್ಯಕೀಯ ಮಂಡಳಿ ಮತ್ತು ಮೆಡಿಕಲ್ ಕೌನ್ಸೆಲಿಂಗ್ ಕಮಿಟಿ ಹಾಗೂ ರಾಜ್ಯದ ವೈದ್ಯಕೀಯ ಶಿಕ್ಷಣ ಇಲಾಖೆ ಕಾಲಕಾಲಕ್ಕೆ ಹೊರಡಿಸುವ ಸೂಚನೆಗಳ ಪ್ರಕಾರ ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ನವದೆಹಲಿಯಲ್ಲಿ MSTC ಕಾರ್ಪೊರೇಟ್ ಕಚೇರಿ ಉದ್ಘಾಟಿಸಿದ ಹೆಚ್‌ಡಿ ಕುಮಾರಸ್ವಾಮಿ

  • ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

    ನೀಟ್ ರೋಲ್ ನಂಬರ್ ದಾಖಲಿಸಲು ಜುಲೈ 8ರವರೆಗೆ ಅವಕಾಶ: ಕೆಇಎ

    ಬೆಂಗಳೂರು‌: ಈಗಾಗಲೇ ಯುಜಿಸಿಇಟಿಗೆ (UGCET) ಅರ್ಜಿ ಸಲ್ಲಿಸಿರುವ ಹಾಗೂ ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ತಮ್ಮ ನೀಟ್ ರೋಲ್ ನಂಬರನ್ನು ದಾಖಲಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶನಿವಾರ ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಿದೆ.

    ಜು.8ರಂದು ಬೆಳಗ್ಗೆ 11ರವರೆಗೆ ರೋಲ್ ನಂಬರ್ ದಾಖಲಿಸಲು ಅವಕಾಶ ಇರುತ್ತದೆ. ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸ್‌ಗಳಿಗೆ ಪ್ರವೇಶ ಪಡೆಯಬೇಕೆನ್ನುವ ಅಭ್ಯರ್ಥಿಗಳು ಕಡ್ಡಾಯವಾಗಿ ತಮ್ಮ ನೀಟ್ (NEET) ರೋಲ್ ನಂಬರ್ ದಾಖಲಿಸಬೇಕು. ಅಭ್ಯರ್ಥಿಗಳು ದಾಖಲಿಸುವ ರೋಲ್ ನಂಬರನ್ನು ಎನ್‌ಟಿಎ ಡಾಟಾದೊಂದಿಗೆ ತಾಳೆ ಮಾಡಿ, ಯುಜಿನೀಟ್ ಅರ್ಹತೆ ಪಡೆದಿದ್ದಲ್ಲಿ ಅರ್ಜಿ ನಮೂನೆ ಪ್ರತಿ ತೆಗೆದುಕೊಳ್ಳಲು ಅವಕಾಶ ನೀಡಲಾಗುತ್ತದೆ. ನಂತರ ವೆರಿಫಿಕೇಷನ್ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದುಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ. ಇದನ್ನೂ ಓದಿ: 101.4 ಕೋಟಿ ಸಾಲ ಪಡೆದು ವಂಚನೆ ಕೇಸ್‌ – ಅಲ್ಲು ಅರ್ಜುನ್‌ ತಂದೆಗೆ 3 ಗಂಟೆ ಇಡಿ ಡ್ರಿಲ್‌

    ಜುಲೈ 7ರಿಂದ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
    ನೀಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಹಾಗೂ ಇದುವರೆಗೂ ಕೆಇಎಯಲ್ಲಿ ಅರ್ಜಿ ಸಲ್ಲಿಸದೇ ಇರುವವರು ಜು.7ರಿಂದ 10ರವರೆಗೆ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಲು ಮತ್ತೊಂದು ಅವಕಾಶ ನೀಡಲಾಗಿದೆ. ಹೊಸದಾಗಿ ಅರ್ಜಿ ಸಲ್ಲಿಸಿದವರ ದಾಖಲೆ ಪರಿಶೀಲನೆಗೆ ನಂತರದ ದಿನಗಳಲ್ಲಿ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಗಿಲ್‌ ಗಿಲ್‌ ಗಿಲಕ್‌ – ಮತ್ತೊಂದು ʻಶುಭʼ ಶತಕ, ಕೊಹ್ಲಿ ದಾಖಲೆ ಸರಿಗಟ್ಟಿದ ಯುವ ನಾಯಕ

    ಜು.8ರಿಂದ ಎನ್‌ಆರ್‌ಐ ವಾರ್ಡ್ ದಾಖಲೆ ಪರಿಶೀಲನೆ
    ಅರ್ಜಿಯಲ್ಲಿ ಎನ್‌ಆರ್‌ಐ ವಾರ್ಡ್ ಕ್ಲೇಮ್ ಮಾಡಿರುವ ಎಲ್ಲಾ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳ ಸಮೇತ ಜುಲೈ 8ರಿಂದ 10ರವರೆಗೆ ಕೆಇಎ ಕಚೇರಿಗೆ ಖುದ್ದು ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳಬೇಕು. ಮೊದಲ ದಿನ, ನೀಟ್‌ನಲ್ಲಿ ನಾಲ್ಕು ಲಕ್ಷದವರೆಗೆ ರ‍್ಯಾಂಕ್ ಪಡೆದವರು ಹಾಗೂ ಎರಡನೇ ದಿನ 8 ಲಕ್ಷ ಮತ್ತು ಮೂರನೇ ದಿನ 12 ಲಕ್ಷದವರೆಗೆ ರ‍್ಯಾಂಕ್ ಪಡೆದವರು ದಾಖಲೆ ಪರಿಶೀಲನೆಗೆ ಬರಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಖಚಿತ: ಮತ್ತೆ ಭವಿಷ್ಯ ನುಡಿದ ಆರ್.ಅಶೋಕ್

    ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು: ದಾಖಲೆ ಪರಿಶೀಲನೆ
    ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಪ್ರವೇಶಕ್ಕೆ ಅಪೇಕ್ಷೆ ಪಟ್ಟಿರುವ ಕ್ಯಾಟಗರಿ-2ರಿಂದ 8ರವರೆಗಿನ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಜುಲೈ 9 ಮತ್ತು 10ರಂದು ಕಾಲೇಜಿನಲ್ಲೇ ನಡೆಯಲಿದೆ. ಕೋರಮಂಗಲದ ಮೆಡಿಕಲ್ ಕಾಲೇಜಿನ ಕೌನ್ಸಿಲ್ ಕೊಠಡಿಯಲ್ಲಿ ಪರಿಶೀಲನೆ ನಡೆಯಲಿದ್ದು, ಮೂಲ ದಾಖಲೆಗಳ ಸಮೇತ ಎರಡೂ ದಿನ ಖುದ್ದು ಹಾಜರಾಗಬೇಕು. ಹೆಚ್ಚಿನ ವಿವರಗಳಿಗೆ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬೇಕು ಎಂದು ಮಾಹಿತಿ ನೀಡಿದ್ದಾರೆ.

  • ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

    ಮೇ 31ಕ್ಕೆ ಪಿಜಿಸಿಇಟಿ, ಡಿಸಿಇಟಿ ಪರೀಕ್ಷೆ – ಕೆಇಎ

    ಬೆಂಗಳೂರು: ಎಂ.ಟೆಕ್, ಡಿಸಿಇಟಿ (DCET) ಪ್ರವೇಶ ಮತ್ತು ಐಎಎಸ್, ಕೆಎಎಸ್ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಶನಿವಾರ (ಮೇ 31) ರಾಜ್ಯದ 113 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಕಲ ಸಿದ್ಧತೆ ಮಾಡಿಕೊಂಡಿದೆ.

    ಈ ಪರೀಕ್ಷೆಗಳಿಗೂ ಅಭ್ಯರ್ಥಿಗಳನ್ನು ತೀವ್ರ ತಪಾಸಣೆ ಮಾಡುವುದರ ಜೊತೆಗೆ ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕವೇ ಅಭ್ಯರ್ಥಿಗಳ ಗುರುತು ಪತ್ತೆ ಹಚ್ಚಲಾಗುತ್ತದೆ. ನಕಲಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶವೇ ಇರುವುದಿಲ್ಲ. 52,352 ಮಂದಿ ಈ ಪರೀಕ್ಷೆಗಳನ್ನು ಬರೆಯಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲ ಗ್ಯಾರಂಟಿ ಕೊಟ್ಟರು, ಪ್ರಾಣದ ಗ್ಯಾರಂಟಿ ಕೊಡ್ತಿಲ್ಲ: ಶೋಭಾ ಕರಂದ್ಲಾಜೆ ಕೆಂಡಾಮಂಡಲ

    ಡಿಪ್ಲೊಮಾ ಮುಗಿಸಿ ಎಂಜಿನಿಯರಿಂಗ್ ಪದವಿಯ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸುವುದಕ್ಕೆ ರಾಜ್ಯದ 46 ಕೇಂದ್ರಗಳಲ್ಲಿ ಡಿಸಿಇಟಿ ನಡೆಸುತ್ತಿದ್ದು, 21,201 ಮಂದಿ ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದಾರೆ. ಎಂ.ಟೆಕ್‌ನ ಮೆಕಾನಿಕಲ್, ಸಿವಿಲ್ ಮತ್ತು ಎಲೆಕ್ಟ್ರಿಕಲ್ ಸೈನ್ಸ್ ಕೋರ್ಸ್‌ಗಳ ಪ್ರವೇಶಕ್ಕೆ 13 ಕೇಂದ್ರಗಳಲ್ಲಿ ಪಿಜಿಸಿಇಟಿ ನಡೆಯುತ್ತಿದ್ದು, 3,756 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಧ್ರುವ ಸರ್ಜಾ ನಟನೆಯ ‘ಕೆಡಿ’ ಸಿನಿಮಾದಲ್ಲಿ ಸುದೀಪ್?

    ಸಮಾಜ ಕಲ್ಯಾಣ ಇಲಾಖೆಯು ಕೆಎಎಸ್ ಪರೀಕ್ಷೆಯ ತರಬೇತಿಗೆ ನಡೆಸುವ ಪರೀಕ್ಷೆಯನ್ನು 19,992 ಮಂದಿ ಬರೆಯಲಿದ್ದು, 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳ ಸಲುವಾಗಿ ಐಎಎಸ್ ಮತ್ತು ಕೆಎಎಸ್ ತರಬೇತಿಗಾಗಿ ಪರೀಕ್ಷೆ ನಡೆಯಲಿದ್ದು, ಅದನ್ನು 7,403 ಮಂದಿ ಬರೆಯಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ಚಾಲ್ತಿಯಲ್ಲಿಲ್ಲದ ನಾಣ್ಯ, ವ್ಯಾಲ್ಯೂ ಇಲ್ಲ: ಶೋಭಾ ಕರಂದ್ಲಾಜೆ ವ್ಯಂಗ್ಯ

    ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ
    ಯುಜಿಸಿಇಟಿ ಬರೆದ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂನ್ 3ರಿಂದ 6ರವರೆಗೆ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಇಚ್ಛಿಸುವ ಅಭ್ಯರ್ಥಿಗಳು ಮುಂಗಡವಾಗಿ ದಿನಾಂಕವನ್ನು ಕಾಯ್ದಿರಿಸಿಕೊಳ್ಳಲು ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮಲೆನಾಡು ಭಾಗದಲ್ಲಿ ಭಾರೀ ಮಳೆ – ಶಿರಾಡಿಘಾಟ್‌ನಲ್ಲಿ ಮತ್ತೆ ಭೂಕುಸಿತ

    ಪಿಜಿಸಿಇಟಿ-25 (ಎಂಇ, ಎಂಟೆಕ್) ಆಯ್ಕೆ ಮಾಡಿರುವ ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂನ್ 9ರಂದು ಕೆಇಎ ಕಚೇರಿಯಲ್ಲಿ ನಡೆಯಲಿದೆ. ಎಂಬಿಎ, ಎಂಸಿಎ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.

  • CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ

    CET: ನೋಂದಣಿ ಸಂಖ್ಯೆ ನಮೂದಿಸುವಲ್ಲಿ ದೋಷ – ಕೆಇಎ

    – ಅಂಕ ದಾಖಲಿಸಲು ಮೇ 26ರಿಂದ ಅವಕಾಶ

    ಬೆಂಗಳೂರು: ಸರಿಯಾಗಿ ನೋಂದಣಿ ಸಂಖ್ಯೆಯನ್ನು ನಮೂದಿಸದ ಕಾರಣದಿಂದ ಸಿಇಟಿ-2025ರ ಫಲಿತಾಂಶ (CET 2025 Result) ಪ್ರಕಟವಾಗದೇ ಇರುವ ಅಭ್ಯರ್ಥಿಗಳಿಗೆ ತಮ್ಮ ಅಂಕಗಳನ್ನು ದಾಖಲಿಸಲು ಅವಕಾಶ ನೀಡುವ ಸಲುವಾಗಿ ಮೇ 26ರಿಂದ ಆನ್‌ಲೈನ್ ಲಿಂಕ್ ತೆರೆಯಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

    ಸಿಇಟಿ-2025ರ ಫಲಿತಾಂಶವನ್ನು ಕೆಇಎ ಶನಿವಾರ ಪ್ರಕಟಿಸಿದ್ದು, ಕೆಲವು ಅಭ್ಯರ್ಥಿಗಳು ಹಿಂದಿನ ವರ್ಷದಲ್ಲಿ 2ನೇ ಪಿಯು/12ನೇ ತರಗತಿ ಪರೀಕ್ಷೆಗಳಲ್ಲಿ ತಾವು ತೇರ್ಗಡೆಯಾಗಿದ್ದರೂ ಫಲಿತಾಂಶ ಪ್ರಕಟವಾಗಿಲ್ಲ ಎಂದು ಮನವಿಗಳನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಅವರು ಶನಿವಾರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ 35 ಕೋವಿಡ್ ಸಕ್ರಿಯ ಕೇಸ್, ಆತಂಕಪಡಬೇಕಿಲ್ಲ: ದಿನೇಶ್ ಗುಂಡೂರಾವ್

    ಸಿಇಟಿ-2025ರ ಫಲಿತಾಂಶವನ್ನು ಪ್ರಕಟಿಸುವ ಮೊದಲು 2ನೇ ಪಿಯು/12ನೇ ತರಗತಿ ಅಂಕಗಳನ್ನು ಆಯಾ ಮಂಡಳಿಗಳಿಂದಲೇ ಪಡೆಯಲಾಗುವುದು ಎಂದು ಸೂಚಿಸಲಾಗಿತ್ತು ಮತ್ತು ಅಭ್ಯರ್ಥಿಗಳು ಸರಿಯಾದ ನೋಂದಣಿ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯ ಎಂದು ಸೂಚಿಸಲಾಗಿತ್ತು. ಆದರೂ ಕೆಲವು ಅಭ್ಯರ್ಥಿಗಳು ನೋಂದಣಿ ಸಂಖ್ಯೆಯನ್ನು ಸರಿಯಾಗಿ ನಮೂದಿಸಿರಲಿಲ್ಲ. ಹೀಗಾಗಿ ಅಂತಹ ಅಭ್ಯರ್ಥಿಗಳ ಫಲಿತಾಂಶ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದು ಪ್ರಸನ್ನ ವಿವರಿಸಿದ್ದಾರೆ. ಇದನ್ನೂ ಓದಿ: ಪ್ರತಿ ರಾಜ್ಯದಲ್ಲಿ ಒಂದು ವಿಶ್ವದರ್ಜೆಯ ಪ್ರವಾಸಿ ತಾಣ ಅಭಿವೃದ್ಧಿಪಡಿಸಿ: ಮೋದಿ ಕರೆ

    ಮೇ 26ರಿಂದ ತೆರೆಯಲಾಗುವ ಲಿಂಕ್‌ನಲ್ಲಿ ಅಭ್ಯರ್ಥಿಗಳು 2ನೇ ಪಿಯು/12ನೇ ತರಗತಿ ಅಂಕಗಳನ್ನು ನೋಂದಣಿ ಸಂಖ್ಯೆಯೊಂದಿಗೆ ದಾಖಲಿಸಬೇಕು ಮತ್ತು ಅಂಕಪಟ್ಟಿಯನ್ನು ಅಪ್‌ಲೋಡ್ ಮಾಡಬೇಕು. ಅಭ್ಯರ್ಥಿಗಳು ದಾಖಲಿಸುವ ಅಂಕಗಳನ್ನು ಆಯಾ ಪರೀಕ್ಷಾ ಮಂಡಳಿಯಿಂದ ಪರಿಶೀಲಿಸಿ ಧೃಡೀಕರಿಸಿದ ನಂತರವೇ ಸ್ಪಾಟ್ ರಾಂಕ್ (Rank) ಅನ್ನು ಮೇ 29ರಿಂದ ನೀಡಲು ಕ್ರಮವಹಿಸಲಾಗುವುದು. ಸ್ಪಾಟ್ ರಾಂಕ್ ಪಡೆಯಲು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಬರುವ ಅವಶ್ಯಕತೆ ಇರುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: `ಪಬ್ಲಿಕ್ ಟಿವಿ’ಯ ಒಂದು ಕರೆಯಿಂದ ಸರ್ಕಾರಿ ಶಾಲೆಗೆ ಮರುಜೀವ ನೀಡಿದ ಪ್ರಣವ್ ಫೌಂಡೇಶನ್..!

  • ಡಿಸಿಇಟಿ: ಅರ್ಜಿ ಸಲ್ಲಿಸಲು ಮೇ 13ರವರೆಗೆ ದಿನಾಂಕ ವಿಸ್ತರಣೆ: ಕೆಇಎ

    ಡಿಸಿಇಟಿ: ಅರ್ಜಿ ಸಲ್ಲಿಸಲು ಮೇ 13ರವರೆಗೆ ದಿನಾಂಕ ವಿಸ್ತರಣೆ: ಕೆಇಎ

    ಬೆಂಗಳೂರು: ಡಿಸಿಇಟಿ-25ಗೆ (DCET) ಅರ್ಜಿ ಸಲ್ಲಿಸಲು ಇದ್ದ ಕೊನೆ ದಿನಾಂಕವನ್ನು ಮೇ 13ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    ಅಂದು ಬೆಳಿಗ್ಗೆ 11ರವರೆಗೆ ಅರ್ಜಿ ಸಲ್ಲಿಸಿ, ಅಂದೇ ಸಂಜೆ 6 ಗಂಟೆ ಒಳಗೆ ಶುಲ್ಕ ಪಾವತಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ಕದನ ವಿರಾಮ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

    ಡಿಪ್ಲೊಮಾ ಮಾಡಿದವರಿಗೆ ಎಂಜಿನಿಯರಿಂಗ್ ಕೋರ್ಸ್‌ಗೆ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಡಿಸಿಇಟಿ ನಡೆಸಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: ಭೂ, ಜಲ, ವಾಯು ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಿ ಕದನ ವಿರಾಮಕ್ಕೆ ಭಾರತ-ಪಾಕ್‌ ಒಪ್ಪಿಗೆ

  • CET ದಾಖಲೆ ಪರಿಶೀಲನೆ – ಜಮ್ಮು ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ, ಆತಂಕ ಬೇಡ: ಕೆಇಎ

    CET ದಾಖಲೆ ಪರಿಶೀಲನೆ – ಜಮ್ಮು ವಿದ್ಯಾರ್ಥಿಗಳಿಗೆ ವಿಶೇಷ ಅವಕಾಶ, ಆತಂಕ ಬೇಡ: ಕೆಇಎ

    ಬೆಂಗಳೂರು: ಗಡಿ ಭಾಗದಲ್ಲಿನ ಸೇನಾ ಉದ್ವಿಗ್ನತೆಯಿಂದ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳಿಗೆ (Jammu And Kashmir Students) ಯುಜಿಸಿಇಟಿ-25 ಪ್ರವೇಶ ಸಲುವಾಗಿ ನಡೆಸುವ ಮೂಲ ದಾಖಲೆಗಳ ಪರಿಶೀಲನೆಗೆ ಮತ್ತೊಮ್ಮೆ ಅವಕಾಶ ನೀಡಲಾಗುವುದು. ಈ ವಿಷಯದಲ್ಲಿ ಆತಂಕ ಬೇಡ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ.

    KEA H Prasanna

    ಪ್ರಸಕ್ತ ಸಾಲಿನ ಸಿಇಟಿ ಸಲುವಾಗಿ ಜಮ್ಮು ಕಾಶ್ಮೀರದ ಒಟ್ಟು 204 ಮಂದಿ ಪರೀಕ್ಷೆ (CET Exam) ಬರೆದಿದ್ದು, ಅವರಲ್ಲಿ ಇದುವರೆಗೂ ಕೇವಲ 52 ಮಂದಿ ಮಾತ್ರ ದಾಖಲೆ ಪರಿಶೀಲನೆ ಮಾಡಿಸಿಕೊಂಡಿದ್ದಾರೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಶಕ್ತಿಶಾಲಿ ಅಸ್ತ್ರಗಳಿಂದಲೇ ಪಾಕ್‌ಗೆ ಶತಕೋಟಿ ಲಾಸ್‌ – ದಿವಾಳಿಯತ್ತ ʻಭಿಕಾರಿಸ್ತಾನʼ

    ಗಡಿ ಭಾಗದಲ್ಲಿ ಪರಿಸ್ಥಿತಿಯ ಅರಿವು ಇರುವ ಕಾರಣಕ್ಕೆ ಅವರಿಗೆ ಮತ್ತೊಂದು ಅವಕಾಶ ನೀಡಲಾಗುವುದು. ಒಂದು ವೇಳೆ 10- 15 ದಿನಗಳ‌ ನಂತರವೂ ಪರಿಸ್ಥಿತಿ ಸುಧಾರಿಸದೇ ಇದ್ದರೆ ವಿಡಿಯೋ ಸಂವಾದದ ಮೂಲಕವೇ ದಾಖಲೆಗಳ ಪರಿಶೀಲನೆ ಮಾಡಲಾಗುವುದು. ಒಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಾಯುನೆಲೆಯ ಮೇಲೆ ಭಾರತ ದಾಳಿ – ಇಸ್ಲಾಮಾಬಾದ್‌, ರಾವಲ್ಪಿಂಡಿಯಲ್ಲಿ ಅಲ್ಲೋಲ ಕಲ್ಲೋಲ

    ಈ ಕುರಿತು ಈ ಎಲ್ಲ ಅಭ್ಯರ್ಥಿಗಳಿಗೆ ಪ್ರತ್ಯೇಕ ಸಂದೇಶ ಕಳುಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ತತ್ತರ – ಇಸ್ಲಾಮಾಬಾದ್‌ನಲ್ಲಿ 48 ಗಂಟೆಗಳವರೆಗೆ ಪೆಟ್ರೋಲ್ ಪಂಪ್‌ಗಳು ಬಂದ್‌

  • PG/DCET: ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ – ಕೆಇಎ

    PG/DCET: ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನ – ಕೆಇಎ

    ಬೆಂಗಳೂರು: 2025-26ನೇ ಸಾಲಿನ ಸ್ನಾತಕೋತ್ತರ ಕೋರ್ಸುಗಳ (ಎಂಬಿಎ, ಎಂಸಿಎ, ಎಂಟೆಕ್, ಎಂಇ) ಪ್ರವೇಶದ ಪಿಜಿಸಿಇಟಿ (PGCET) ಹಾಗೂ ಲ್ಯಾಟರಲ್ ಎಂಟ್ರಿ ಮೂಲಕ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ನಡೆಸುವ ಡಿಸಿಇಟಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ.

    ಈ ಎರಡೂ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ 10 ಕೊನೆ ದಿನವಾಗಿದೆ. ಮೇ 12 ರಂದು ಶುಲ್ಕ ಪಾವತಿಗೆ ಕೊನೆಯ ದಿನ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ-ರಾಜನಾಥ್ ಸಿಂಗ್ ಮಹತ್ವದ ಚರ್ಚೆ; ಉಗ್ರರ ವಿರುದ್ಧ ಮುಂದಿನ ಕ್ರಮಕ್ಕೆ ಮಾಸ್ಟರ್ ಪ್ಲ್ಯಾನ್

    ಪಿಜಿಸಿಇಟಿಯನ್ನು ಮೇ ಕೊನೆಯ ಅಥವಾ ಜೂನ್ ಮೊದಲ ವಾರದಲ್ಲಿ ನಡೆಸಲಾಗುತ್ತದೆ. ಡಿಸಿಇಟಿಯನ್ನು ಮೇ 31ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: 26 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಸಹಿ; ಭಾರತ-ಫ್ರಾನ್ಸ್ ಮಧ್ಯೆ 63,000 ಕೋಟಿ ಮೆಗಾ ಡೀಲ್‌

    ಪಿಜಿ- ಆರ್ಕಿಟೆಕ್ಚರ್ ಕೋರ್ಸ್ ಪ್ರವೇಶಕ್ಕೆ ಕೆಇಎ ಪ್ರವೇಶ ಪರೀಕ್ಷೆ ನಡೆಸುವುದಿಲ್ಲ. ಬದಲಿಗೆ ಆರ್ಕಿಟೆಕ್ಚರ್ ಕೌನ್ಸಿಲ್ ನಡೆಸುವ ರಾಷ್ಟ್ರ ಮಟ್ಟದ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನೇ ಇಲ್ಲಿ ಸೀಟು ಹಂಚಿಕೆಗೆ ಪರಿಗಣಿಸಲಾಗುತ್ತದೆ. ಆದರೆ ಅವರು ಕೂಡ ಈಗ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

  • ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR

    ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣ – ಶಿವಮೊಗ್ಗದ ದೊಡ್ಡಪೇಟೆ ಠಾಣೆಯಲ್ಲಿ FIR

    ಶಿವಮೊಗ್ಗ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ಕೂರಿಸದ ಪ್ರಕರಣದಲ್ಲಿ ಸಿಇಟಿ ಪರೀಕ್ಷೆಯ (CET Exam) ಅಧಿಕಾರಿ ಮೇಲೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

    Janivara 2

    ಏಪ್ರಿಲ್ 16 ರಂದು ನಡೆದಿದ್ದ ಸಿಇಟಿ ಪರೀಕ್ಷೆಯಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳ (Brahmins Students) ಜನಿವಾರವನ್ನು ಕತ್ತರಿಸಿದ್ದಾರೆ. ಆದರೆ ಪರೀಕ್ಷಾ ವಿಚಾರದಲ್ಲಿ ಜನಿವಾರ ಕತ್ತರಿಸಬೇಕೆಂಬ ನಿಯಮವಿಲ್ಲ. ಕಾಲೇಜಿನ ಭದ್ರತಾ ಸಿಬ್ಬಂದಿ ಜನಿವಾರ ಕತ್ತರಿಸಿ ಬ್ರಾಹ್ಮಣ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

    Janivara 3

    ಜನಿವಾರ ತೆಗೆಸಿದ್ದರಿಂದ ಬ್ರಾಹ್ಮಣ ಸಮುದಾಯಕ್ಕೆ ಅಪಮಾನವಾಗಿದೆ. ಇದರಿಂದ ಸಿಇಟಿ ಪರೀಕ್ಷೆಯ ಭದ್ರತೆ ನೋಡಿಕೊಳ್ಳುತ್ತಿರುವ ಅಧಿಕಾರಿ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಕಳೆದ ರಾತ್ರಿ ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ

  • ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ

    ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂದಿದ್ದು ತಪ್ಪು, ಅಂತಹ ಯಾವುದೇ ಮಾರ್ಗಸೂಚಿ ಇಲ್ಲ: ಕೆಇಎ

    – ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕ್ಷಮೆಯಾಚನೆ

    ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಅಲ್ಲಿನ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಕೆಇಎ (KEA) ಅಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ತಿಳಿಸಿದರು.

    ಜನಿವಾರ ಧರಿಸಿದ್ದಕ್ಕೆ CET ಪರೀಕ್ಷೆ ಬರೆಯಲು ಅವಕಾಶ ಕೊಡದ ಪ್ರಕರಣಕ್ಕೆ ಸಂಬಂಧಿಸಿದಂತೆ ʻಪಬ್ಲಿಕ್‌ ಟಿವಿʼ (PUBLiC TV) ಜೊತೆಗೆ ಮಾತನಾಡಿದರು. ಇದನ್ನೂ ಓದಿ: ಜನಿವಾರದಲ್ಲಿ ಬ್ಲೂಟೂತ್ ಹಾಕ್ಕೊಂಡು ಎಕ್ಸಾಂ ಬರೆಯೋಕೆ ಆಗುತ್ತಾ? – ಚಕ್ರವರ್ತಿ ಸೂಲಿಬೆಲೆ

    ಪರೀಕ್ಷಾ ಸಿಬ್ಬಂದಿ ಜನಿವಾರ ತೆಗೆಯಬೇಕು ಅಂತ ಹೇಳಿದ್ದು ತಪ್ಪು, ಇದನ್ನ ಕೆಇಎ ಒಪ್ಪೋದಿಲ್ಲ. ಕೆಇಎ ಇಂತಹ ಯಾವುದೇ ಮಾರ್ಗಸೂಚಿ ಕೊಟ್ಟಿಲ್ಲ. ತಪ್ಪು ಆಗಿರೋದಕ್ಕೆ ಕೆಇಎ ವಿಷಾದ ವ್ಯಕ್ತಪಡಿಸಿಸುತ್ತದೆ. ನಾನೇ ಅದಕ್ಕೆ ಕ್ಷಮೆ ಕೇಳ್ತೀನಿ. ಮುಂದೆ ಇಂತಹ ಘಟನೆ ಆಗದಂತೆ ಕಠಿಣ ಮಾರ್ಗಸೂಚಿ (Guidelines) ಪ್ರಕಟ ಮಾಡ್ತೀವಿ ಎಂದು ಹೇಳಿದರು.

    ಯಾವುದೇ ಜಾತಿ, ಧರ್ಮದ ವಿರುದ್ಧ ನಾವು ಮಾರ್ಗಸೂಚಿ ಸಿದ್ಧ ಮಾಡೋದಿಲ್ಲ, ಈಗ ತಪ್ಪು ಆಗಿದೆ. ಇಂತಹ ತಪ್ಪು ಮುಂದೆ ಆಗದಂತೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ವಿಷಯಗವನ್ನ ಮತ್ತಷ್ಟು ದೊಡ್ಡದು ಮಾಡೋದು ಬೇಡ. ಯಾರೂ ಇಂತಹ ಕೆಲಸ ಮಾಡಿದ್ದಾರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಡಿಸಿಗಳಿಗೆ ಈಗಾಗಲೇ ತನಿಖೆಗೆ ಆದೇಶ ಮಾಡಿದ್ದೇನೆ. ವರದಿ ಅನ್ವಯ ಕ್ರಮ ಖಂಡಿತವಾಗಿ ತೆಗೆದುಕೊಳ್ತೀವಿ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಜನಿವಾರ ಕತ್ತರಿಸಿ ಪರೀಕ್ಷೆ ಬರೆಸಿದ ಪ್ರಕರಣ; ಬ್ರಾಹ್ಮಣ ಸಮುದಾಯದ ಆಕ್ರೋಶದಲ್ಲಿ ತಪ್ಪಿಲ್ಲ: ಎಂ.ಸಿ ಸುಧಾಕರ್

    ಬೀದರ್‌ ವಿದ್ಯಾರ್ಥಿಗಳಿಗೆ ರ‍್ಯಾಂಕ್‌ ಕೊಡ್ತೀವಿ:
    ಬೀದರ್‌ನಲ್ಲಿ ಗಣಿತ ಪರೀಕ್ಷೆ ಸಂದರ್ಭದಲ್ಲಿ ಘಟನೆ ನಡೆದಿದೆ. ಗಣಿತ ವಿಷಯ ಬರೆಯದೇ ಹೋದ್ರೂ ಎಂಜಿನಿಯರ್ ರ‍್ಯಾಂಕ್ ಕೊಡಲು ನಿಯಮ ಇದೆ. ಅದರಂತೆ ವಿದ್ಯಾರ್ಥಿಗೆ ನ್ಯಾಯ ಕೊಡಿಸ್ತೀವಿ. ನಮ್ಮಿಂದ ಆಗಿರೋ ತಪ್ಪು ಇದು. ಹೀಗಾಗಿ ಬೀದರ್ ವಿದ್ಯಾರ್ಥಿಗೆ ರ‍್ಯಾಂಕ್ ಕೊಡ್ತೀವಿ. ಡಿಸಿಯಿಂದ ವರದಿ ತೆಗೆದುಕೊಂಡು ಉನ್ನತ ಶಿಕ್ಷಣ ಸಚಿವರ ಜೊತೆ ಚರ್ಚೆ ಮಾಡಿ ಆ ವಿದ್ಯಾರ್ಥಿಗೆ ನ್ಯಾಯ ಕೊಡ್ತೀವಿ. ಇಂತಹ ತಪ್ಪು ಮುಂದೆ ಆಗದಂತೆ ನೋಡಿಕೊಳ್ತೀವಿ ʻಪಬ್ಲಿಕ್ ಟಿವಿʼ ಮೂಲಕ ತಿಳಿಸಿದರು.

    ಇನ್ನೂ ಶಿವಮೊಗ್ಗದಲ್ಲಿ ಜನಿವಾರ ತೆಗೆದು ಸಿಇಟಿ ಪರೀಕ್ಷೆ ಬರಿಬೇಕು ಅಂತಾ ಹೇಳಿರುವುದು ತಪ್ಪು. ಘಟನೆ ಕುರಿತು ಶಿವಮೊಗ್ಗ, ಬೀದರ್ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕಠಿಣ ಮಾರ್ಗಸೂಚಿಗಳನ್ನ ತರುತ್ತೇವೆ, ಸ್ಪಷ್ಟನೆ ಇರುವ ಮಾರ್ಗಸೂಚಿಗಳನ್ನ ತರುತ್ತೇವೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗದೆ ಇರೋ ರೀತಿ ತರಬೇತಿ ನೀಡುತ್ತೇವೆ ಎಂದು ಹೇಳಿದರು.  ಇದನ್ನೂ ಓದಿ: ಹಿಂದೂಗಳ ಮೇಲಿನ ದಾಳಿಯಂತೆ ಪ್ರತಿಬಿಂಬಿಸುವ ಪ್ರಯತ್ನ – ಬಾಂಗ್ಲಾದೇಶಕ್ಕೆ ವಿದೇಶಾಂಗ ಸಚಿವಾಲಯ ತಿರುಗೇಟು

  • ಟಾಯ್ಲೆಟ್‌ಗೆ ಹೋಗಿದ್ದವಳು ಕೊನೆ ಕ್ಷಣದಲ್ಲಿ ಹಾಜರ್ – ಸಿಇಟಿಯಲ್ಲಿ ನಕಲಿ ವಿದ್ಯಾರ್ಥಿ, ತನಿಖೆಗೆ ಆದೇಶ

    ಟಾಯ್ಲೆಟ್‌ಗೆ ಹೋಗಿದ್ದವಳು ಕೊನೆ ಕ್ಷಣದಲ್ಲಿ ಹಾಜರ್ – ಸಿಇಟಿಯಲ್ಲಿ ನಕಲಿ ವಿದ್ಯಾರ್ಥಿ, ತನಿಖೆಗೆ ಆದೇಶ

    ಬೆಂಗಳೂರು: ಕೊನೆ ಕ್ಷಣದಲ್ಲಿ ಬಂದು ಸಿಇಟಿ ಪರೀಕ್ಷೆ (CET Exam) ಬರೆಯಲು ಪ್ರಯತ್ನಿಸಿದ ಅಭ್ಯರ್ಥಿಯೊಬ್ಬರು ನಕಲಿ ಎಂಬುದನ್ನು ಕ್ಯೂಆರ್ ಕೋಡ್ (QR Code) ಆಧಾರಿತ ಮುಖ ಚಹರೆ ಪತ್ತೆಹಚ್ಚುವ ಆಪ್ ಗುರುತಿಸಿದ್ದು, ಈ ಕುರಿತು ತನಿಖೆಗೆ ಆದೇಶಿಸಲಾಗಿದೆ.

    ಮಲ್ಲೇಶ್ವರಂನ (Malleshwaram) 7ನೇ ಅಡ್ಡರಸ್ತೆಯ ಸಿಲ್ವರ್ ವ್ಯಾಲಿ ಪಬ್ಲಿಕ್ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ತುಬಾ ಫಾತೀಮಾ ಜಮೀಲ್ ಎಂಬಾಕೆ ಇಂದು ಬೆಳಗ್ಗೆ ಗಣಿತ ವಿಷಯದ ಪರೀಕ್ಷೆ ಬರೆಯಲು ಬಂದು, ನೇರವಾಗಿ ಶೌಚಗೃಹಕ್ಕೆ ಹೋಗಿ ಗಂಟೆಯಾದರೂ ಹೊರ ಬಂದಿರಲಿಲ್ಲ. ಇದನ್ನೂ ಓದಿ: ಸಿಇಟಿ ಎಕ್ಸಾಂ QR ಕೋಡ್ ಸ್ಕ್ಯಾನ್ ಯಶಸ್ವಿ – ಹೆಚ್.ಪ್ರಸನ್ನ

    ಇನ್ನೇನು ಪರೀಕ್ಷೆ ಆರಂಭವಾಗಬೇಕು ಎನ್ನುವಷ್ಟರಲ್ಲಿ ಹೊರಬಂದು ಕ್ಯೂಆರ್ ಕೋಡ್ ಇರುವ ಪ್ರವೇಶ ಪತ್ರ ತೋರಿಸಿ, ಒಳ ಹೋಗಲು ಪ್ರಯತ್ನಿಸಿದರು. ಆ ಸಂದರ್ಭದಲ್ಲಿ ಮುಖ ಚಹರೆ ಪತ್ತೆ ಆಪ್ ಮೂಲಕ ಅವರ ಭಾವಚಿತ್ರ ತೆಗೆದಾಗ ಅವರು ನಕಲಿ ಎಂಬುದು ಗೊತ್ತಾಗಿದೆ. ಇದನ್ನೂ ಓದಿ: Waqf Act| ಹಿಂದೂಗಳು ಸಲ್ಲಿಸಿದಾಗ ಹೈಕೋರ್ಟ್‌ಗೆ ಹೋಗಿ ಎಂದಿತ್ತು – ಸುಪ್ರೀಂ ವಿಚಾರಣೆಗೆ ಮಾನದಂಡ ಏನು?- ವಕೀಲ ವಿಷ್ಣು ಶಂಕರ್‌ ಜೈನ್‌

    ತಕ್ಷಣ ಈ ವಿಷಯವನ್ನು ಪ್ರಾಂಶುಪಾಲರ ಗಮನಕ್ಕೆ ತರಬೇಕೆನ್ನುವಷ್ಟರಲ್ಲಿ ಅಲ್ಲಿಂದ ಅವರು ಕಾಲ್ಕಿತ್ತಿದ್ದಾಳೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

    ಇವರು ಟಬು ನಾಝ್ ಎಂಬ ನೈಜ ಅಭ್ಯರ್ಥಿಯ ಪ್ರವೇಶ ಪತ್ರಕ್ಕೆ ತನ್ನ ಚಿತ್ರ ಅಂಟಿಸಿಕೊಂಡಿದ್ದಳು. ಅಲ್ಲದೆ, ಪರೀಕ್ಷಾ ದಿನಾಂಕಗಳನ್ನೂ ತಪ್ಪಾಗಿ ನಮೂದಿಸಿದ್ದಳು ಎಂಬುದು ಗೊತ್ತಾಗಿದೆ. ಈ ಬಗ್ಗೆ ವೀಡಿಯೋ ದೃಶ್ಯ ಸಮೇತ ವರದಿ ನೀಡಲು ಕಾಲೇಜಿನ ಪ್ರಾಂಶುಪಾಲರಿಗೆ ಸೂಚಿಸಲಾಗಿದೆ. ನಂತರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ವಿವರಿಸಿದರು. ಇದನ್ನೂ ಓದಿ: ವಕ್ಫ್ ಮಂಡಳಿಗೆ ಸದಸ್ಯರ ನೇಮಕ ಮಾಡುವಂತಿಲ್ಲ, ಆಸ್ತಿಗಳ ವಿಚಾರದಲ್ಲೂ ಯಥಾಸ್ಥಿತಿ ಕಾಪಾಡಿ: ಸುಪ್ರೀಂ

    ನಕಲಿ ಅಭ್ಯರ್ಥಿಗಳ ಪತ್ತೆ ಸಲುವಾಗಿ ಕೆಇಎ ಆರಂಭಿಸಿರುವ ಈ ಹೊಸ ವ್ಯವಸ್ಥೆ ನಿಜಕ್ಕೂ ಅನುಕೂಲಕರವಾಗಿದ್ದು, ಎರಡನೇ ದಿನ ಕೂಡ ಸಂಪೂರ್ಣವಾಗಿ ಇದರ ಮೂಲಕವೇ ತಪಾಸಣೆ ಮಾಡಲಾಗಿದೆ. ಎಲ್ಲಿಯೂ ಯಾವ ರೀತಿಯ ತಾಂತ್ರಿಕ ದೋಷಗಳು ಕಂಡುಬಂದಿಲ್ಲ ಎಂದು ತಿಳಿಸಿದರು.

    ಮಲ್ಲೇಶ್ವರಂನ 18ನೇ ಅಡ್ಡರಸ್ತೆಯ ಸರ್ಕಾರಿ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಮತ್ತು ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ಅವರು ಗುರುವಾರ ಭೇಟಿ ನೀಡಿ ಖುದ್ದು ಅಭ್ಯರ್ಥಿಗಳನ್ನು ಕ್ಯೂಆರ್ ಕೋಡ್ ಆಧಾರಿತ ಮುಖ ಚಹರೆ ಪತ್ತೆ ಆಪ್ ಮೂಲಕ ತಪಾಸಣೆ ಮಾಡಿದರು. ಇದನ್ನೂ ಓದಿ: ಜಾತಿಗಣತಿ ‘ಪಬ್ಲಿಕ್ ಟಿವಿ’ ರಿಯಾಲಿಟಿ ಚೆಕ್ – ಮನೆ ಮನೆಗೆ ಹೋಗಿ ಸರ್ವೆ ಮಾಡಿದ್ರಾ?- ಜನರು ಹೇಳಿದ್ದೇನು?

    ಕೆಇಎ (Karnataka Examination Authority) ಅಭಿವೃದ್ಧಿಪಡಿಸಿರುವ ಹಾಗೂ ಇದೇ ಮೊದಲ ಬಾರಿಗೆ ಜಾರಿಗೆ ತಂದಿರುವ ಈ ವ್ಯವಸ್ಥೆಯ ಕಾರ್ಯನಿರ್ವಹಣೆ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಸ್ವತಃ ಇಬ್ಬರೂ ಅಧಿಕಾರಿಗಳು, ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ವಿದ್ಯಾರ್ಥಿಗಳ ಭಾವಚಿತ್ರ ತೆಗೆದು ನೈಜತೆ ಪರಿಶೀಲಿಸಿದರು.ಸ